ಸಿನಿಮಾಸಿನಿಮಾ ಸುದ್ದಿ

ಸಹೋದರಿ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ: ಅಪರಾಧಿಗೆ ಅತ್ಯುಗ್ರ ಶಿಕ್ಷೆಯಾಗಲಿ; ಧ್ರುವ ಸರ್ಜಾ

Sister Neha Hiremath's murder is a very heinous act: let the culprit be severely punished; Dhruva Sarja

  • ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಬೆಂಗಳೂರು: ಹುಬ್ಬಳ್ಳಿಯಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಘಟನೆಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಧ್ರುವ ಸರ್ಜಾ ಖಂಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ. ಸಹೋದರಿ ನೇಹಾ ಹಿರೇಮಠ್ ಅವರ ಹತ್ಯೆ ಅತ್ಯಂತ ಹೀನ ಕೃತ್ಯ. ಕಾಲೇಜು ಕ್ಯಾಂಪಸ್​ನಲ್ಲೇ ಹತ್ಯೆಯಾಗಿರುವುದು ನಿಜಕ್ಕೂ ಆತಂಕ ಮೂಡಿಸುತ್ತದೆ.

ಸರ್ಕಾರ ಶೀಘ್ರವೇ ಈ ಪ್ರಕರಣವನ್ನು ತ್ವರಿತಗತಿ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕು ಹಾಗೂ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ’ ಎಂದು ಧ್ರುವ ಸರ್ಜಾ ತಮ್ಮ ‘ಎಕ್ಸ್​’ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ. ಈ ಮೂಲಕ ಧ್ರುವ ಸರ್ಜಾ ಅವರು ನೇಹಾ ಹಿರೇಮಠ್​ ಸಾವಿಗೆ ನ್ಯಾಯ ಸಿಗಬೇಕು ಎಂದು ಧ್ವನಿ ಎತ್ತಿದ್ದಾರೆ.

 

ಇದನ್ನೂ ಓದಿ...

Back to top button
>