ರಾಜಕೀಯರಾಜ್ಯ

ರಾಜ್ಯ ಘಟನಾವಳಿಗಳ ಕ್ರೋಢಿಕರಿಸಿ ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸಿ: ರಾಜ್ಯಪಾಲರಿಗೆ ಯತ್ನಾಳ್ ಆಗ್ರಹ

Compile state incidents and submit report to President: Yatnal demands Governor

  • ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಬೆಂಗಳೂರು: ರಾಜ್ಯದಲ್ಲಿ ಸೃಷ್ಟಿಯಾಗುತ್ತಿರುವ ತಾಲಿಬಾನ್ ಮಾದರಿಯ ಸಂಸ್ಕೃತಿಯನ್ನು ರಾಜ್ಯಪಾಲರು ಗಮನಿಸುತ್ತಿದ್ದು, ಎಲ್ಲಾ ಘಟನಾವಳಿಗಳನ್ನು ಕ್ರೋಢಿಕರಿಸಿ ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ನಂತರ ರಾಜ್ಯದಲ್ಲಿ ನಿರಂತರವಾಗಿ ಹಲ್ಲೆ, ಕೊಲೆಗಳು ನಡೆದಿವೆ. ರಾಜ್ಯದಲ್ಲಿ ಹಿಂದೂ‌ಗಳಿಗೆ ಹಾಗೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಭಯದ ವಾತಾವರಣ ನಿರ್ಮಾಣವಾಗಿದೆಯ ಈ ಪರಿಸ್ಥಿತಿ ಬಗ್ಗೆ ರಾಜ್ಯಪಾಲರು ರಾಷ್ಟ್ರಪತಿ ಅವರಿಗೆ ವರದಿ ನೀಡಬೇಕು. ಜೊತೆಗೆ ಇಲ್ಲಿನ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿದ್ದು, ಹಗಲು ಹೊತ್ತಿನಲ್ಲಿ ಜನರ ಹತ್ಯೆಯಾಗುತ್ತಿದೆ. ರಾಷ್ಟ್ರವಿರೋಧಿ ಅಂಶಗಳ ಬಗ್ಗೆ ಕಾಂಗ್ರೆಸ್ ಸರ್ಕಾರದ ಮೃದು ಧೋರಣೆಯಿಂದಾಗಿ ಹಿಂದೂ ವಿರೋಧಿ ಚಟುವಟಿಕೆಗಳ ಹೆಚ್ಚಳಕ್ಕೆ ಕಾರಣವಾಗಿದ. ಈ ಅಪರಾಧ ಘಟನೆಗಳ ಬಗ್ಗೆ ಮಾಹಿತಿ ಕಲೆಹಾಕಿ ರಾಜ್ಯಪಾಲರನ್ನು ಭೇಟಿ ಮಾಡಲು ಪಕ್ಷ ಚಿಂತನೆ ನಡೆಸಿದೆ ಎಂದರು.

ಇದೇ ವೇಳೆ ಡಿಕೆಶಿ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್ ಮತದಾರರನ್ನು ಬೆದರಿಸುತ್ತಿದ್ದಾರೆ. ಇಂತಹ ವಿಚಾರಗಳನ್ನು ಚುನಾವಣಾ ಆಯೋಗ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದರು.

‘ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ದಿಂಗಾಲೇಶ್ವರ ಸ್ವಾಮೀಜಿ ಕುರಿತು ಮಾತನಾಡಿ, ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ, ಅದಕ್ಕೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇವರು ಹಿಂದೆ ಯಾರಿಂದ ಪೇಮೆಂಟ್​ ತೆಗೆದುಕೊಂಡು ಎಲ್ಲೆಲ್ಲಿ ಪ್ರತಿಭಟನೆ, ಹೋರಾಟ ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ. ಇವರು ದಿಂಗಾಲೇಶ್ವರ ಅಲ್ಲ, ದಂಗಾಲೇಶ್ವರ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ.7ರ ನಂತರ ಬಹಿರಂಗಪಡಿಸುವೆ ಎಂದು ವಾಗ್ದಾಳಿ ನಡೆಸಿದರು.

ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು ಬಿಜೆಪಿ ಜೊತೆಗೆ ನಿಲ್ಲುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿಯಿಂದ ಬಿಜೆಪಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಹಿಂದೆ ಮಾತೆ ಮಹಾದೇವಿ ಚುನಾವಣೆಗೆ ಸ್ಪರ್ಧಿಸಿ 10 ಸಾವಿರ ಮತ ಪಡೆದಿದ್ದರು, ಅದೇ ರೀತಿ ಇವರು ಐದು ಸಾವಿರ ಮತ ಪಡೆಯುತ್ತಾರೆ. ಈ ಹಿಂದೆ ಮಾಜಿ ಸಚಿವ ವಿನಯ್ ಕುಲಕರ್ಣಿ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ತೆಗಳುತ್ತಿದ್ದರು. ಇದೀಗ ಒಳ್ಳೆಯ ಸ್ವಾಮೀಜಿ ಎಂದು ಹೇಳುತ್ತಿರುವುದನ್ನು ಗಮನಿಸಿದರೆ ಸ್ವಾಮೀಜಿಗೆ ಪೇಮೆಂಟ್ ಆಗಿದೆ ಎಂಬುದು ಖಚಿತ ಎಂದರು.

ಇದನ್ನೂ ಓದಿ...

Back to top button
>