ರಾಜಕೀಯರಾಜ್ಯ

ಮತೀಯ ದ್ವೇಷ ಹರಡುವ ಯತ್ನ: ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಎಫ್‌ಐಆರ್ ದಾಖಲು

Attempt to spread communal hatred: FIR filed against BJP's official X account

  • ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಬೆಂಗಳೂರು: ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ(ಇಸಿ)ದ ಅಧಿಕಾರಿಗಳು ತಿಳಿಸಿದ್ದಾರೆ.

ಏಪ್ರಿಲ್ 23 ರಂದು ಕಾಂಗ್ರೆಸ್ ಪ್ರಣಾಳಿಕೆಯೋ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆ ಎಂದು ಬಿಜೆಪಿ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿತ್ತು. ಈ ಸಂಬಂಧ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್ಸ್ ತಂಡವು ಎಫ್‌ಐಆರ್ ದಾಖಲಿಸಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಜನತಾ ಪ್ರಾತಿನಿಧ್ಯ ಕಾಯಿದೆಯ ಸೆಕ್ಷನ್ 125 ಮತ್ತು ಭಾರತೀಯ ದಂಡ ಸಂಹಿತೆಯ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ) ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಏಪ್ರಿಲ್ 26 ಮತ್ತು ಮೇ 7 ರಂದು ನಡೆಯಲಿದೆ.

ಇದನ್ನೂ ಓದಿ...

Back to top button
>