ರಾಜಕೀಯರಾಜ್ಯ

ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ, ನಾಳೆ ಮನೆ ಮನೆ ಪ್ರಚಾರ

Lok Sabha election 2nd phase of open campaigning is over, door to door campaigning tomorrow

  • ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಬೆಂಗಳೂರು: ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರ ಬುಧವಾರ ಸಂಜೆ ಅಂತ್ಯಗೊಂಡಿದ್ದು, ನಾಳೆ ಮನೆ ಮನೆ ಪ್ರಚಾರ ನಡೆಯಲಿದೆ. ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌, ಬಿಜೆಪಿ ಸೇರಿ ವಿವಿಧ ಪಕ್ಷಗಳಿಂದ ಮತದಾರರನ್ನು ಸೆಳೆಯಲು ಅಂತಿಮ ಹಂತದ ಕಸರತ್ತು ನಡೆಯಿತು.

ಏಪ್ರಿಲ್ 26 ರಂದು 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಅಸ್ಸಾಂ 5, ಬಿಹಾರದ 4, ಛತ್ತೀಸ್‌ಗಢದ 3, ಕರ್ನಾಟಕ 14, ಕೇರಳ 20, ಮಧ್ಯಪ್ರದೇಶ 7, ಮಹಾರಾಷ್ಟ್ರ 8, ಮಣಿಪುರದ 1, ರಾಜಸ್ಥಾನದ 13 ತ್ರಿಪುರ 1, ಉತ್ತರ ಪ್ರದೇಶದ 8, ಪಶ್ಚಿಮ ಬಂಗಾಳದ 3, ಜಮ್ಮುಕಾಶ್ಮೀರ 1 ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಕೇರಳದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

 

ಇದನ್ನೂ ಓದಿ...

Back to top button
>