• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ

Sambrama Prabha News by Sambrama Prabha News
November 11, 2025
in Latest News, Politics
0
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ

Updated By: Priyalachhi

ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಕೋಲಾರ ಹೊರವಲಯದ ತೋಟಗಾರಿಕಾ ವಿವಿ ಕ್ಯಾಂಪಸ್​​ನಲ್ಲಿ‌ ಮತ ಎಣಿಕೆ ಕಾರ್ಯ ನಡೆಯುತ್ತಿದೆ.

ಏಜೆಂಟ್​ಗಳನ್ನು‌ ಪೊಲೀಸರು ತಪಾಸಣೆ ಮಾಡಿ ಒಳಗೆ ಬಿಟ್ಟಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಮತ ಎಣಿಕೆ ಕೇಂದ್ರಕ್ಕೆ ಏಜೆಂಟ್​ಗಳು ಪ್ರವೇಶ ಪಡೆದರು. ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್ ಫೋನ್​ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆ ನಿಷೇಧ ಮಾಡಲಾಗಿದೆ. ಮಾಧ್ಯಮದವರಿಗೂ ಚುನಾವಣಾಧಿಕಾರಿಗಳು ನಿಷೇಧ ಹೇರಿದ್ದಾರೆ.

ಮತ ಎಣಿಕೆ ಕೇಂದ್ರ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಈಗಾಗಲೇ ಎರಡು ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ.

ಮಾಲೂರು ಶಾಸಕ ನಂಜೇಗೌಡ ಆಯ್ಕೆ ರದ್ದುಪಡಿಸಿದ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ತಡೆ: ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ಆಯ್ಕೆ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಅಕ್ಟೋಬರ್​ 14 ರಂದು ತಡೆ ನೀಡಿತ್ತು.

ತಮ್ಮ ಶಾಸಕ ಸ್ಥಾನವನ್ನು ರದ್ದು ಮಾಡಿದ್ದ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್​​ಮಲ್ಯ ಬಾಗ್ಚಿ ಅವರಿದ್ದ ಪೀಠ, ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿತ್ತು.

ಮರು ಮತ ಎಣಿಕೆಗೆ ಸೂಚನೆ: ಶಾಸಕ ಸ್ಥಾನ ರದ್ದತಿಗೆ ತಡೆ ನೀಡಿದ್ದರೂ, ಮರು ಮತ ಎಣಿಕೆ ನಡೆಸುವಂತೆ ನ್ಯಾಯಪೀಠ ಸೂಚಿಸಿದೆ. ಹೈಕೋರ್ಟ್​ ಆದೇಶದಂತೆ 2023ರ ಫಲಿತಾಂಶವನ್ನು ಮರು ಎಣಿಕೆ ಮಾಡಬೇಕು. ಅದನ್ನು ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಬೇಕು. ಕೋರ್ಟ್​ ಅನುಮತಿಯ ಹೊರತಾಗಿ ಫಲಿತಾಂಶವನ್ನು ಪ್ರಕಟಿಸುವಂತಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಆದೇಶದಲ್ಲಿ ತಿಳಿಸಿತ್ತು.

Tags: ವಿಧಾನಸಭಾ ಕ್ಷೇತ್ರ
Previous Post

ಮತ್ತೆ ಪ್ರತಿಧ್ವನಿಸಿದ ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು

Next Post

ಕೆಇಎ ನೇಮಕಾತಿ: ಕೆಎಸ್​ಎಸ್​ಐಡಿಸಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ನ.14 ಕಡೇಯ ದಿನಾಂಕ

Next Post
ಕೆಇಎ ನೇಮಕಾತಿ: ಕೆಎಸ್​ಎಸ್​ಐಡಿಸಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ನ.14 ಕಡೇಯ ದಿನಾಂಕ

ಕೆಇಎ ನೇಮಕಾತಿ: ಕೆಎಸ್​ಎಸ್​ಐಡಿಸಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ನ.14 ಕಡೇಯ ದಿನಾಂಕ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.