Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಪೊಲೀಸ್ ಇಲಾಖೆಯಲ್ಲಿ ಬದಲಾವಣೆ: ಸೀಮಂತ್ ಕುಮಾರ್ ಸಿಂಗ್ ವರ್ಗಾವಣೆ, ನೂತನ ಮುಖ್ಯ ಆಯುಕ್ತರಾಗಿ ಆರ್. ಹಿತೇಂದ್ರ ನೇಮಕ!

ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಸಮರ: ಬೀದರ್ ಬ್ರಿಮ್ಸ್ ನರ್ಸಿಂಗ್ ಕಾಲೇಜು ಪ್ರಾಂಶುಪಾಲರ ಮನೆ ಸೇರಿ 5 ಕಡೆ ಏಕಕಾಲದಲ್ಲಿ ದಾಳಿ!

ಕಾರ್ಯಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಸಿಹಿಸುದ್ದಿ: ಒಂದೆರಡು ದಿನಗಳಲ್ಲಿ ನಿಗಮ-ಮಂಡಳಿ ನೇಮಕಾತಿ 2ನೇ ಪಟ್ಟಿ ಬಿಡುಗಡೆ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಬುಡಕಟ್ಟು ಜನರಿಗೆ 8ಸಾವಿರ ಮನೆ ಕಟ್ಟಲು ಸಿಎಂ ಅನುಮೋದನೆ: ಟಿ.ಯೋಗೀಶ್
Latest News Home

ಬುಡಕಟ್ಟು ಜನರಿಗೆ 8ಸಾವಿರ ಮನೆ ಕಟ್ಟಲು ಸಿಎಂ ಅನುಮೋದನೆ: ಟಿ.ಯೋಗೀಶ್

Sambrama Prabha NewsBy Sambrama Prabha NewsNovember 12, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನಲ್ಲಿ ಅರಣ್ಯ ಆಧಾರಿತ ಬುಡಕಟ್ಟು ಜನರ ಅಭಿವೃದ್ಧಿಗಾಗಿ 200 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು , ಅದರಲ್ಲಿ 160 ಕೋಟಿ ರೂ.ಗಳಲ್ಲಿ 8 ಸಾವಿರ ಮನೆ ಕಟ್ಟಲು ಅನುಮೋದನೆ ನೀಡಿದ್ದಾರೆ ಎಂದು ಕರ್ನಾಟಕ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕ ಟಿ. ಯೋಗೀಶ್ ಹೇಳಿದರು. ನಗರದ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ನಡೆದ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

ಚಾಮರಾಜನಗರ ಜಿಲ್ಲೆಯೊಂದರಿಂದಲೇ 32 ಸಾವಿರ ಮನೆಗಳ ಬೇಡಿಕೆ; ಚಾಮರಾಜನಗರ ಜಿಲ್ಲೆಯೊಂದರಲ್ಲೇ 3 ಸಾವಿರ ಮನೆಗಳ ಬೇಡಿಕೆ ಬಂದಿದೆ. ರಾಜೀವ್‌ಗಾಂಧಿ ಹೌಸಿಂಗ್ ಕಾರ್ಪೋರೇಷನ್‌ನಲ್ಲಿ ಒಂದು ಮನೆ ಕಟ್ಟಲು 2.39 ಲಕ್ಷ ಕೊಡುತ್ತಾರೆ. ಆದರೆ, ಮುಖ್ಯಮಂತ್ರಿಗಳು ಬುಡಕಟ್ಟು ಜನರ ಮನೆ ಕಟ್ಟಲು 1 ಮನೆಗೆ 4 ಲಕ್ಷದ 50 ಸಾವಿರ ನಿಗದಿ ಮಾಡಿದ್ದಾರೆ. ಇದು ಸರಕಾರದ ಆದೇಶವು ಆಗಿದೆ ಎಂದರು.

ಆಶ್ರಮ ಶಾಲೆಗಳಿಗೆ 200 ಶಿಕ್ಷಕರ ನೇಮಕ: ಮೊದಲ ಹಂತದಲ್ಲಿ ಆಶ್ರಮ ಶಾಲೆಗಳಿಗೆ 200 ಶಿಕ್ಷಕರನ್ನು ನೇಮಕ ಮಾಡಲು ತೀರ್ಮಾನಿಸಿದ್ದೇವೆ. ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಬುಡಕಟ್ಟು ಜನರ ವಿಚಾರ, ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಒಂದು ವೇದಿಕೆಯಾಗಿದೆ. ಬುಡಕಟ್ಟು ಸಮುದಾಯದ ಜನರು ಮದ್ಯಪಾನದ ಚಟಕ್ಕೆ ದಾಸರಾಗದೇ ತಮ್ಮ ಅಭಿವೃದ್ಧಿಯ ಜೊತೆಗೆ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬುಡಕಟ್ಟು ಜನರಿಗೆ ಗಟ್ಟಿನೆಲೆಯಾಗುವಂತಹ ಯೋಜನೆ ರೂಪಿಸಬೇಕು: ಪ್ರೊ. ಡಿ. ಆನಂದ್ ಮಾತನಾಡಿ, ಬುಡಕಟ್ಟು ಜನರಿಗೆ ಆಧುನಿಕ ಶಿಕ್ಷಣದ ಅವಶ್ಯಕತೆ ಇದ್ದು, ಸರಕಾರ ಬುಡಕಟ್ಟು ಜನರಿಗೆ ಗಟ್ಟಿನೆಲೆಯಾಗುವಂತಹ ಯೋಜನೆಗಳನ್ನು ರೂಪಿಸಬೇಕು ಎಂದರು. ಈಗ ಆಗಬೇಕಾಗಿರುವ ಅಧ್ಯಯನಗಳು ಎಂದರೆ ಬುಡಕಟ್ಟು ಜನಾಂಗದ ಒಳಿತಿಗಾಗಿ ಅಧ್ಯಯನ ಮಾಡಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ಶಾಲಾ ಮಟ್ಟದಿಂದ ವಿ.ವಿ. ವರೆಗೆ ಪಠ್ಯಕ್ರಮದಲ್ಲಿ ಬುಡಕಟ್ಟು ಜನಾಂಗದ ವಿಷಯವನ್ನು ಸೇರಿಸಿ ಅದನ್ನು ಪಾಠ ಮಾಡಲು ಬುಡಕಟ್ಟು ಜನಾಂಗದವರಿಗೆ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೈಸೂರು ವಿ.ವಿ. ಸಮಾಜ ಕಾರ್ಯ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಎಚ್.ಪಿ. ಜ್ಯೋತಿ, ಉಪನಿರ್ದೇಶಕಿ ಎಚ್.ಸಿ. ಗಿರಿಜಾಂಬ, ಡಾ. ಕಲಾವತಿ, ಡಾ. ಟಿ.ಎಸ್. ವೆಂಕಟೇಶ್, ಲೆಕ್ಕಾಧಿಕಾರಿ ಬಿ.ಎಸ್. ಭವ್ಯ, ಕಚೇರಿ ಅಧೀಕ್ಷಕಿ ಎಂ.ವಿ. ನಾಗರತ್ನ, ಸಿಬ್ಬಂದಿ ಇದ್ದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಬುಡಕಟ್ಟು ಜನ ಮೈಸೂರು
Add as Preferred on Google Follow on Google News
Share. WhatsApp Facebook Twitter Telegram
Previous Articleಗ್ರಾಪಂಗಳಿಗೆ ಸಕಾಲದಲ್ಲಿ ಚುನಾವಣೆಗೆ ನಡೆಸಲು ಕೋರಿ ಚುನಾವಣಾ ಆಯೋಗದಿಂದ ಅರ್ಜಿ
Next Article ‘ತಿಥಿ’ ಖ್ಯಾತಿಯ ಹಿರಿಯ ನಟ ಗಡ್ಡಪ್ಪ ನಿಧನ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಪೊಲೀಸ್ ಇಲಾಖೆಯಲ್ಲಿ ಬದಲಾವಣೆ: ಸೀಮಂತ್ ಕುಮಾರ್ ಸಿಂಗ್ ವರ್ಗಾವಣೆ, ನೂತನ ಮುಖ್ಯ ಆಯುಕ್ತರಾಗಿ ಆರ್. ಹಿತೇಂದ್ರ ನೇಮಕ!

November 18, 2026

ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಸಮರ: ಬೀದರ್ ಬ್ರಿಮ್ಸ್ ನರ್ಸಿಂಗ್ ಕಾಲೇಜು ಪ್ರಾಂಶುಪಾಲರ ಮನೆ ಸೇರಿ 5 ಕಡೆ ಏಕಕಾಲದಲ್ಲಿ ದಾಳಿ!

November 18, 2026

ಕಾರ್ಯಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಸಿಹಿಸುದ್ದಿ: ಒಂದೆರಡು ದಿನಗಳಲ್ಲಿ ನಿಗಮ-ಮಂಡಳಿ ನೇಮಕಾತಿ 2ನೇ ಪಟ್ಟಿ ಬಿಡುಗಡೆ!

November 14, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಪೊಲೀಸ್ ಇಲಾಖೆಯಲ್ಲಿ ಬದಲಾವಣೆ: ಸೀಮಂತ್ ಕುಮಾರ್ ಸಿಂಗ್ ವರ್ಗಾವಣೆ, ನೂತನ ಮುಖ್ಯ ಆಯುಕ್ತರಾಗಿ ಆರ್. ಹಿತೇಂದ್ರ ನೇಮಕ!

ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಸಮರ: ಬೀದರ್ ಬ್ರಿಮ್ಸ್ ನರ್ಸಿಂಗ್ ಕಾಲೇಜು ಪ್ರಾಂಶುಪಾಲರ ಮನೆ ಸೇರಿ 5 ಕಡೆ ಏಕಕಾಲದಲ್ಲಿ ದಾಳಿ!

ಕಾರ್ಯಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಸಿಹಿಸುದ್ದಿ: ಒಂದೆರಡು ದಿನಗಳಲ್ಲಿ ನಿಗಮ-ಮಂಡಳಿ ನೇಮಕಾತಿ 2ನೇ ಪಟ್ಟಿ ಬಿಡುಗಡೆ!

“ತುರ್ತು ಪರಿಸ್ಥಿತಿಯ ಅತಿರೇಕಗಳಿಗೆ ಸಂಜಯ್ ಗಾಂಧಿ ಮಾತ್ರ ಕಾರಣರಲ್ಲ!”: ಅತ್ತೆ ಇಂದಿರಾ ಮೇಲಿದ್ದ ಒತ್ತಡ ಬಿಚ್ಚಿಟ್ಟ ಸೋನಿಯಾ ಗಾಂಧಿ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.