Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಜೀವಭಯ… ಪಾಕಿಸ್ತಾನದಿಂದ ತವರಿಗೆ ಮರಳಲಿರುವ ಶ್ರೀಲಂಕಾ ಆಟಗಾರರು..!
Sports News Latest News

ಜೀವಭಯ… ಪಾಕಿಸ್ತಾನದಿಂದ ತವರಿಗೆ ಮರಳಲಿರುವ ಶ್ರೀಲಂಕಾ ಆಟಗಾರರು..!

Sambrama Prabha NewsBy Sambrama Prabha NewsNovember 13, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಮಂಗಳವಾರ ಇಸ್ಲಾಮಾಬಾದ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯ ನಂತರ ಪ್ರವಾಸಿ ಶ್ರೀಲಂಕಾ ತಂಡದ 8 ಆಟಗಾರರು ತವರಿಗೆ ಮರಳಲು ಮುಂದಾಗಿದ್ದಾರೆ. ಪಾಕಿಸ್ತಾನ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಕೆಲ ಆಟಗಾರರು ತಮ್ಮ  ಸುರಕ್ಷತಾ ಕಾಳಜಿಯನ್ನು ಉಲ್ಲೇಖಿಸಿ ತವರಿಗೆ ಮರಳಲು ವಿನಂತಿಸಿದ್ದಾರೆ. ಹೀಗಾಗಿ ಈ ಆಟಗಾರರನ್ನು ತವರಿಗೆ ಕರೆಸಿಕೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಶ್ರೀಲಂಕಾ ತಂಡದ ಕೆಲ ಸದಸ್ಯರು ಸ್ವದೇಶಕ್ಕೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದರೂ, ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಉಳಿದ ಆಟಗಾರರಿಗೆ ಮತ್ತು ಸಹಾಯಕ ಸಿಬ್ಬಂದಿಗೆ ಪಾಕಿಸ್ತಾನದಲ್ಲಿ ತಮ್ಮ ಪಂದ್ಯಗಳನ್ನು ಮುಂದುವರಿಸಲು ಸೂಚನೆ ನೀಡಿದೆ.

ಪ್ರವಾಸಿ ತಂಡದ ಪ್ರತಿಯೊಬ್ಬ ಸದಸ್ಯರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಅಲ್ಲದೆ ಎಲ್ಲಾ ಕಳವಳಗಳನ್ನು ಸರಿಯಾಗಿ ಪರಿಹರಿಸಲಾಗುತ್ತಿದೆ ಎಂದು ಶ್ರೀಲಂಕಾ ಕ್ರಿಕೆಟ್ ಬೋರ್ಡ್ ತನ್ನ ಆಟಗಾರರಿಗೆ ಆಶ್ವಾಸನೆ ನೀಡಿದೆ.

ಇನ್ನು ತವರಿಗೆ ಮರಳಲಿರುವ ಆಟಗಾರರಿಗೆ ಬದಲಿಯಾಗಿ ಶ್ರೀಲಂಕಾದಿಂದ ಕೆಲ ಆಟಗಾರರು ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಈ ಮೂಲಕ ಸರಣಿಯನ್ನು ಪೂರ್ಣಗೊಳಿಸಲು ಲಂಕಾ ಕ್ರಿಕೆಟ್ ಮಂಡಳಿ ಯೋಜನೆ ರೂಪಿಸಿದೆ. ಇದಾಗ್ಯೂ ಗುರುವಾರಕ್ಕೆ ನಿಗದಿಯಾಗಿರುವ 2ನೇ ಏಕದಿನ ಪಂದ್ಯ ನಡೆಯಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಶ್ರೀಲಂಕಾ ಮತ್ತು ಪಾಕಿಸ್ತಾನ್ ನಡುವಣ 2ನೇ ಏಕದಿನ ಪಂದ್ಯ ಗುರುವಾರ ನಡೆಯಬೇಕಿದ್ದು, ಅದಕ್ಕೂ ಮುನ್ನ ಲಂಕಾ ಆಟಗಾರರು ಪಾಕಿಸ್ತಾನದಿಂದ ಹಿಂತಿರುಗಲು ನಿರ್ಧರಿಸಿದ್ದಾರೆ. ಹೀಗಾಗಿ ಈ ಪಂದ್ಯಕ್ಕೆ ಶ್ರೀಲಂಕಾ ತಂಡದ 8 ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಇತ್ತ ಲಂಕಾ ತಂಡದ ಪ್ರಮುಖ ಆಟಗಾರರು ಅಲಭ್ಯರಾದರೆ ಇಂದಿನ ಪಂದ್ಯ ನಡೆಯುವುದು ಅನುಮಾನ.

ಹೀಗಾಗಿ ಪಾಕಿಸ್ತಾನ್ ಹಾಗೂ ಶ್ರೀಲಂಕಾ ನಡುವಣ 2ನೇ ಏಕದಿನ ಪಂದ್ಯವನ್ನು ಮರು ನಿಗದಿ ಮಾಡುವ ಸಾಧ್ಯತೆಯನ್ನು ಸಹ ತಳ್ಳಿ ಹಾಕುವಂತಿಲ್ಲ.

ಶ್ರೀಲಂಕಾ ಆಟಗಾರರಿಗೆ ಜೀವಭಯ:

ಇಸ್ಲಾಮಾಬಾದ್‌ನ ನ್ಯಾಯಾಲಯದ ಹೊರಗೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದರು. ಅಲ್ಲದೆ 27 ಜನರು ಗಾಯಗೊಂಡಿದ್ದಾರೆ. ಈ ದಾಳಿಯು ಶ್ರೀಲಂಕಾ ಆಟಗಾರರಿಗೆ 2009ರ ಕಹಿ ಘಟನೆಯನ್ನು ನೆನಪಿಸಿದೆ.

2009 ರಲ್ಲಿ ಶ್ರೀಲಂಕಾ ತಂಡವು ಪಾಕ್ ಪ್ರವಾಸ ಕೈಗೊಂಡಿದ್ದಾಗ ಲಂಕಾ ತಂಡದ ಬಸ್ ಮೇಲೆ ಭಯೋತ್ಪಾದಕ ಬಂದೂಕುಧಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಶ್ರೀಲಂಕಾ ತಂಡದ ಆರು ಆಟಗಾರರು ಗಾಯಗೊಂಡಿದ್ದರು. ಈ ಅಹಿತಕರ ಘಟನೆಯಿಂದ ಸುಮಾರು ಒಂದು ದಶಕದ ಕಾಲ ಪಾಕಿಸ್ತಾನದಿಂದ ಅಂತರರಾಷ್ಟ್ರೀಯ ಕ್ರಿಕೆಟ್ ಅನ್ನು ದೂರವಿಡಲಾಗಿತ್ತು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಪಾಕಿಸ್ತಾನ ಶ್ರೀಲಂಕಾ ಆಟಗಾರರು
Add as Preferred on Google Follow on Google News
Share. WhatsApp Facebook Twitter Telegram
Previous Articleಮಹಿಳಾ ನೌಕರರಿಗೆ ತಿಂಗಳಿಗೆ 1 ದಿನ ಋತುಚಕ್ರದ ರಜೆ, ಆದ್ರೆ ಕಂಡೀಷನ್ ಅಪ್ಲೈ?
Next Article 2 ತಿಂಗಳಲ್ಲಿ 5 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ಪತ್ತೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

August 31, 2026

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

August 29, 2026

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

August 27, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.