Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ
Politics Latest News

ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ

Sambrama Prabha NewsBy Sambrama Prabha NewsNovember 18, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು : ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣವು ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28ನೇ ಆವೃತ್ತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಶೃಂಗಸಭೆಯಲ್ಲಿ ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ 2025–2030, ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-2030, ಮತ್ತು ಸ್ಟಾರ್ಟ್ಅಪ್ ನೀತಿ 2025-2030 ಗಳಂತಹ ಮೂರು ಪ್ರಮುಖ ನೀತಿಗಳನ್ನು ರಚಿಸುವ ಮೂಲಕ ಐತಿಹಾಸಿಕ ಹೆಜ್ಜೆಯನ್ನು ಇಡಲಾಗಿದೆ. ದತ್ತಾಂಶ ಚಾಲಿತ ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾದ ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿಯಿಂದ, ರಾಜ್ಯವನ್ನು ನಾವೀನ್ಯತೆ ಮತ್ತು ಡೀಪ್ ಟೆಕ್​​ಗಳಿಗೆ ಜಾಗತಿಕ ತಾಣವಾಗಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದರು.

2034ರ ವೇಳೆಗೆ ಕರ್ನಾಟಕವನ್ನು ಭಾರತದ ಪ್ರಮುಖ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರವಾಗಿ ಪರಿವರ್ತಿಸುವ ನಮ್ಮ ಗುರಿಗೆ ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-30 ಸಹಕಾರಿಯಾಗಲಿದೆ. ಹೊಸ ಸ್ಟಾರ್ಟ್ಅಪ್ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ ಬಂಡವಾಳ ನೆರವು, ಮಾರುಕಟ್ಟೆ ಅವಕಾಶ, ಮೂಲಸೌಲಭ್ಯ, ಕೌಶಲ್ಯಾಭಿವೃದ್ಧಿಯಂತಹ ಕ್ರಮಗಳ ಮೂಲಕ 25,000 ಸ್ಟಾರ್ಟ್ಅಪ್​ಗಳ ಸ್ಥಾಪನೆಗೆ ನೆರವಾಗುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಸಿಎಂ ತಿಳಿಸಿದರು.

ಪರಿವರ್ತನೆಯ ಮನ್ವಂತರಕ್ಕೆ ವೇದಿಕೆ: ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು ಒಂದು ಸಮಾವೇಶಕ್ಕಿಂತಲೂ ಹೆಚ್ಚಾಗಿ ಹೊಸ ಹೊಸ ವಿಚಾರಗಳು, ಸಂವಾದಗಳು, ಬಂಡವಾಳ ಹೂಡಿಕೆ ಆವಿಷ್ಕಾರ ಮತ್ತು ಪರಿವರ್ತನೆಯ ಮನ್ವಂತರಕ್ಕೆ ವೇದಿಕೆಯಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನ ಹಲವು ಉತ್ತಮ ಅವಕಾಶಗಳಿಗೆ ಜಾಗತಿಕ ವೇದಿಕೆಯಾಗಿ ಹೊಸ ಮುನ್ನುಡಿ ಬರೆಯಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

ಬೆಂಗಳೂರು ತಂತ್ರಜ್ಞಾನ ಶೃಂಗಸಭೆ-2025 ಪರಿವರ್ತನೆಯ ಹರಿಕಾರ ಎಂಬುದನ್ನು ಈಗಾಗಲೇ ಹೇಳಿದ್ದೇನೆ. ಇದು ಶೈಕ್ಷಣಿಕ ವಲಯವನ್ನು ಉದ್ಯಮಕ್ಕೆ ಬೆಸೆಯುತ್ತದೆ. ನವೋದ್ಯಮಗಳನ್ನು ಹೂಡಿಕೆದಾರರಿಗೆ ಪರಿಚಯಿಸುತ್ತದೆ. ಅನ್ಯ ದೇಶಗಳ ಪರಿಣಿತರನ್ನು, ಸಂಶೋಧಕರನ್ನು, ನೀತಿ ನಿರೂಪಕರನ್ನು ಪರಸ್ಪರ ಬೆಸೆಯುವುದಲ್ಲದೇ, ಜಾಗತಿಕ ಮಾರುಕಟ್ಟೆಗಳನ್ನು ಸಂಪರ್ಕಿಸಲು ಬೃಹತ್ ವೇದಿಕೆಯಾಗಿದೆ ಎಂಬುದನ್ನು ಹೆಮ್ಮೆಯಿಂದ ಹೇಳುತ್ತೇನೆ ಎಂದರು.

ಭವಿಷ್ಯೀಕರಣಗೊಳ್ಳಿ ಎನ್ನುವ ಆಶಯದ ನುಡಿಯಂತೆ ತಂತ್ರಜ್ಞಾನವು ಸಾಮಾಜಿಕ ಒಳಿತನ್ನು, ಆರ್ಥಿಕ ನ್ಯಾಯವನ್ನು, ಸುಸ್ಥಿರ ಅಭಿವೃದ್ಧಿಯನ್ನು ಮತ್ತು ಸಮಾಜದ ಎಲ್ಲರಿಗೂ ಸಮೃದ್ಧಿಯನ್ನು ಒದಗಿಸಬೇಕು ಎಂಬ ನಮ್ಮ ನಂಬಿಕೆಯನ್ನು ನಾವು ಪುನರುಚ್ಚರಿಸುತ್ತೇವೆ. ಕೃತಕ ಬುದ್ಧಿಮತ್ತೆ, ಕ್ವಾಂಟಮ್, ಬಯೋಟೆಕ್, ಬಾಹ್ಯಾಕಾಶ ಮತ್ತು ಹಸಿರು ತಂತ್ರಜ್ಞಾನಗಳಿಂದ ಕೂಡಿರುವ ಡಿಜಿಟಲ್ ಯುಗದಲ್ಲಿ ನಾವು ನಿಂತಿದ್ದೇವೆ. ಬೆಂಗಳೂರು ತಂತ್ರಜ್ಞಾನ ಶೃಂಗಸಭೆ-2025 ದಿಟ್ಟ, ಮಾನವೀಯ ಮತ್ತು ಪರಿವರ್ತನಾತ್ಮಕ ಭವಿಷ್ಯವನ್ನು ಸಹ ಸೃಷ್ಟಿಸಲು ಇಡೀ ಜಗತ್ತಿಗೆ ಕರ್ನಾಟಕದ ಆಹ್ವಾನವಾಗಿದೆ ಎಂದು ತಿಳಿಸಿದರು.

ದಶಕಗಳಿಂದ, ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುತ್ತಿದೆ. ಆದರೆ, ಇಂದು ಅದು ಇನ್ನೂ ದೊಡ್ಡದಾಗಿ, ನಾವೀನ್ಯತೆ, ಪ್ರತಿಭೆ, ಸಂಶೋಧನೆ ಮತ್ತು ತಾಂತ್ರಿಕ ನಾಯಕತ್ವದ ಮುಂಚೂಣಿಯಲ್ಲಿ ಜಾಗತಿಕ ಕೇಂದ್ರವಾಗಿ ಬೆಳೆದು ನಿಂತಿದೆ ಎಂಬುದನ್ನು ಹೇಳಲು ಹೆಮ್ಮೆಯಾಗುತ್ತದೆ. ತಂತ್ರಜ್ಞಾನ ಶಕ್ತಿ ಕೇಂದ್ರವಾಗಿ ಕರ್ನಾಟಕದ ಬೆಳವಣಿಗೆ ಆಕಸ್ಮಿಕವಲ್ಲ, ಇದು ದೂರದೃಷ್ಟಿಯ ನೀತಿಗಳು, ಆಳವಾದ ಸಾಂಸ್ಥಿಕ ಶಕ್ತಿ ಮತ್ತು ಪ್ರತಿ ಹಂತದಲ್ಲೂ ಸೃಜನಶೀಲತೆ ಮತ್ತು ಶ್ರೇಷ್ಠತೆಯನ್ನು ಪೋಷಿಸುವ ಪರಿಸರ ವ್ಯವಸ್ಥೆಯ ಪರಿಣಾಮವಾಗಿದೆ ಎಂದು ಸಿಎಂ ಹೇಳಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸಾರ್ಹ ಹೂಡಿಕೆ
Add as Preferred on Google Follow on Google News
Share. WhatsApp Facebook Twitter Telegram
Previous Article‘ವಾರಕ್ಕೆ 72 ಗಂಟೆ ಕೆಲಸ, ಮನಸ್ಥಿತಿ ಬದಲಾಗಬೇಕು, ಪ್ರಧಾನಿ ಮೋದಿ ಆದರ್ಶ’
Next Article ತುಮಕೂರಿಗೆ ಮೆಟ್ರೋ ಯೋಜನೆಯಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆ: ಸಚಿವ ಜಿ. ಪರಮೇಶ್ವರ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

October 1, 2026

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.