Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ತುಮಕೂರಿಗೆ ಮೆಟ್ರೋ ಯೋಜನೆಯಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆ: ಸಚಿವ ಜಿ. ಪರಮೇಶ್ವರ್
Politics Latest News

ತುಮಕೂರಿಗೆ ಮೆಟ್ರೋ ಯೋಜನೆಯಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆ: ಸಚಿವ ಜಿ. ಪರಮೇಶ್ವರ್

Sambrama Prabha NewsBy Sambrama Prabha NewsNovember 18, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿ ಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಗೃಹ ಸಚಿವ ಡಾ‌. ಜಿ. ಪರಮೇಶ್ವರ್ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿನಿತ್ಯ ತುಮಕೂರಿನಿಂದ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ನೆಲಮಂಗಲ, ದಾಬಸ್‌ಪೇಟೆ, ಕ್ಯಾತ್ಸಂದ್ರ ವೇಗವಾಗಿ ಬೆಳೆಯುತ್ತಿವೆ. ಕೈಗಾರಿಕೆ ಉದ್ದೇಶದಿಂದ ಜನರ ಸಂಚಾರ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಒತ್ತಡ ಜಾಸ್ತಿ ಇದೆ. ನೀರಿಗೆ ಕಷ್ಟ, ಓಡಾಡೋಕೆ ಟ್ರಾಫಿಕ್ ಸಮಸ್ಯೆ ಇದೆಲ್ಲ ನೋಡಿಕೊಂಡು ಆ ಕಡೆ ಜೀವನ ನಡೆಸುತ್ತಿದ್ದಾರೆ ಎಂದರು.

ತುಮಕೂರಿನಲ್ಲಿ 20 ಸಾವಿರ ಎಕರೆಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಿಸಲಾಗಿದೆ. ಈಗಾಗಲೇ 200 ಕೈಗಾರಿಕೆಗಳು ಬಂದಿವೆ. ಫುಡ್‌ಪಾರ್ಕ್, ಟೈಮೆಕ್ ಜಪಾನೀಸ್ ಫ್ಯಾಕ್ಟರಿ, ಜಪಾನೀಸ್ ಟೌನ್‌ಶಿಪ್‌ಗೆ ಜಾಗ ಕೊಟ್ಟಿದ್ದೇವೆ. ಇಷ್ಟು ವೇಗವಾಗಿ ಬೆಳೆಯುತ್ತಿರುವಾಗ ಸಂಪರ್ಕ (ಕನೆಕ್ಟಿವಿಟಿ) ವ್ಯವಸ್ಥೆ ಬೇಕಲ್ಲವೇ ಎಂದು ಪ್ರಶ್ನಿಸಿದ ಅವರು, ರಸ್ತೆ, ಮೆಟ್ರೋ, ರೈಲು ಸಂಪರ್ಕ ಇದ್ದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂಬುದು ಉದ್ದೇಶ. ರಾಮನಗರ, ಕೋಲಾರ, ತುಮಕೂರು ನಗರಗಳನ್ನು ಬೆಳೆಸಿದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಎರಡು ವರ್ಷದ ಹಿಂದೆಯೇ ತುಮಕೂರಿಗೆ ಮೆಟ್ರೋ ಯೋಜನೆ ತೆಗೆದುಕೊಂಡು ಹೋಗಬೇಕು ಎಂದು ಪ್ರಸ್ತಾಪ ಮಾಡಿದ್ದೆ. ಮುಖ್ಯಮಂತ್ರಿಗಳು ಫಿಸಿಬಲಿಟಿ ಸ್ಟಡಿ ಮಾಡುವುದಾಗಿ 2024ರ ಬಜೆಟ್‌ನಲ್ಲಿ ಘೋಷಿಸಿದ್ದರು. ಫಿಸಿಬಲಿಟಿ ವರದಿಯಲ್ಲಿ ತುಮಕೂರು ಮೆಟ್ರೋ ಯೋಜನೆ ಬಗ್ಗೆ ಪಾಸಿಟಿವ್ ಆಗಿ ಕೊಟ್ಟಿದ್ದಾರೆ. ಎಲ್ಲರೊಂದಿಗೆ ಚರ್ಚೆ ಮಾಡಿ ಡಿಪಿಆರ್ ಮಾಡಲು ಅನುಮತಿ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಎರಡು-ಮೂರು ಕಂಪನಿಗಳು ಪಿಪಿಪಿ ಮಾದರಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿವೆ. ಹೂಡಿಕೆ ಮಾಡಲು ಸಿದ್ಧರಿದ್ದೇವೆ ಎಂಬುದಾಗಿ ಕತಾರ್ ಮೂಲದ ಕಂಪನಿಯವರು ಮುಖ್ಯಮಂತ್ರಿಯವರಿಗೆ ಅಧಿಕೃತವಾಗಿ ಪತ್ರ ನೀಡಿದ್ದಾರೆ. ಇಷ್ಟೆಲ್ಲ ಆಗಿರುವಾಗ, ಸಂಸದ ತೇಜಸ್ವಿ ಸೂರ್ಯ ಏನೂ ಅರಿಯದೆ, ಯಾವ ಉದ್ದೇಶಕ್ಕಾಗಿ ಆ ರೀತಿಯಾಗಿ ಮಾತಾಡಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ‌. ಈ ಬಗ್ಗೆ ನಾನು ಅವರೊಂದಿಗೆ ಮಾತಾಡುತ್ತೇನೆ‌. ಇದು ಸಂಘರ್ಷದ ಪ್ರಶ್ನೆಯಲ್ಲ. ‘ನಮಗೆ ಬೇಕು, ನಿಮಗೆ ಬೇಡ. ನಮಗೆ ಬೇಡ, ನಿಮಗೆ ಬೇಕು’ ಎಂಬ ಪ್ರಶ್ನೆಯೂ ಅಲ್ಲ. ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ನಾವು ಯೋಚನೆ ಮಾಡಬೇಕು‌ ಎಂದು ಪರಮೇಶ್ವರ್​ ಹೇಳಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ತುಮಕೂರಿಗೆ ಮೆಟ್ರೋ ಯೋಜನೆ ಸಚಿವ ಜಿ. ಪರಮೇಶ್ವರ್
Add as Preferred on Google Follow on Google News
Share. WhatsApp Facebook Twitter Telegram
Previous Articleಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ
Next Article ನಾಲೆಯಲ್ಲಿ ಸಿಲುಕಿದ್ದ ಕಾಡಾನೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.