Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ನಾಲೆಯಲ್ಲಿ ಸಿಲುಕಿದ್ದ ಕಾಡಾನೆ
Latest News

ನಾಲೆಯಲ್ಲಿ ಸಿಲುಕಿದ್ದ ಕಾಡಾನೆ

Sambrama Prabha NewsBy Sambrama Prabha NewsNovember 18, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಐತಿಹಾಸಿಕ ಶಿವನಸಮುದ್ರದ (ಬ್ಲಫ್) ಬಳಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರದ ಕಾಲುವೆಗೆ ಇಳಿದಿದ್ದ ಕಾಡಾನೆಯನ್ನು ಅರಣ್ಯ ಇಲಾಖೆಯು ಎರಡು ದಿನಗಳ ಮಹತ್ವದ ಕಾರ್ಯಾಚರಣೆಯ ನಂತರ ಯಶಸ್ವಿಯಾಗಿ ಮೇಲೆತ್ತಿದೆ.

ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ನೀರು ಪೂರೈಕೆ ಮಾಡುವ ಸುಮಾರು 50 ಅಡಿ ಅಳದ ಕೆನಾಲ್‌ ಗೇಟ್ ಮೂಲಕ ಶನಿವಾರ ರಾತ್ರಿ ಕಾಡಾನೆ ನೀರು ಕುಡಿಯಲು ಇಳಿದಿತ್ತು. ಆದರೆ, ನೀರಿನ ಹರಿವಿನ ರಭಸಕ್ಕೆ ವಾಪಸ್‌ ಕಾಲುವೆಯಿಂದ ಮೇಲೆ ಬರಲು ಸಾಧ್ಯವಾಗದೆ ಅದರೊಳಗೆ ಓಡಾಡುತ್ತಿತ್ತು. ಭಾನುವಾರ ಬೆಳಗ್ಗೆ ಆನೆಯ ಓಡಾಟವನ್ನು ಗಮನಿಸಿದ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರದ ಸಿಬ್ಬಂದಿ, ಆನೆ ವಾಪಸ್ ಹೋಗಬಹುದು ಎಂದು ಕಾದಿದ್ದರು. ಆದರೆ, ಭಾನುವಾರ ಸಂಜೆವರೆಗೂ ಕಾಡಾನೆ ಮೇಲಕ್ಕೆ ಬರಲಿಲ್ಲ. ಆಗ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದರು. ಭಾನುವಾರವೂ ಸಹ ಕಾದ ಅಧಿಕಾರಿಗಳು, ಮೇಲೆ ಬರದಿರುವುದನ್ನು ಕಂಡು ಅದಕ್ಕೆ ಬೇಕಾದ ಆಹಾರವನ್ನು ಇಲ್ಲಿಂದಲೇ ಹಾಕಿದ್ದರು.

ಸೋಮವಾರ ಬೆಳಗ್ಗೆ ಕಾಲುವೆಯಿಂದ ಮೇಲೆತ್ತುವ ಕಾರ್ಯಾಚರಣೆ ಆರಂಭಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳು, ಎಲ್ಲ ಪ್ರಯತ್ನದ ಬಳಿಕ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದರು. ನಿನ್ನೆ ಸಂಜೆಯಾದರೂ ಆನೆಯು ಗೇಟ್‌ನಿಂದ ಹೊರಬರದ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯದಿಂದ ನೀರಿನ ಹರಿವಿನ ಪ್ರಮಾಣವನ್ನು ಕಡಿಮೆ ಮಾಡಲು ಜಿಲ್ಲಾಧಿಕಾರಿ ಕುಮಾರ ಅವರೊಂದಿಗೆ ಮಾತುಕತೆ ಸಹ ನಡೆಸಲಾಗಿತ್ತು. ಆನೆಯು ಆಹಾರವಿಲ್ಲದೇ ಆತಂಕದಲ್ಲಿರುವುದನ್ನು ಗಮನಿಸಿದ ಅಧಿಕಾರಿಗಳು, ಕಬ್ಬು ತರಿಸಿ ಕಾಲುವೆಗೆ ಹಾಕಿದ್ದರು. ಇಂದು ಆನೆಯ ಪ್ರಜ್ಞೆ ತಪ್ಪಿಸಿ ಕ್ರೇನ್ ಮೂಲಕ ಮೇಲೆತ್ತುವ ಪ್ರಯತ್ನಕ್ಕೆ ಮುಂದಾದರು. ಅದರಂತೆ ಎರಡು ಕ್ರೇನ್​ಗಳನ್ನು ತರಿಸಿ ಆನೆಯನ್ನು ಕಾಲುವೆಯಿಂದ ಯಶಸ್ವಿಯಾಗಿ ಮೇಲೆತ್ತಿದ್ದಾರೆ.

ಅರವಳಿಕೆ ಮದ್ದು ನೀಡಿ ಕಾರ್ಯಾಚರಣೆ: ಆನೆಯನ್ನು ಕಾಲುವೆಯಿಂದ ಮೇಲೆತ್ತಲು ಅರಣ್ಯಾಧಿಕಾರಿಗಳು ಸಾಕಷ್ಟು ಹರಸಾಹಸ ಪಡಬೇಕಾಯಿತು. ಮೊದಲು ಅದಕ್ಕೆ ಬೇಕಾದ ಆಹಾರ ನೀಡಲಾಯಿತು. ಬಳಿಕ ಎರಡು ಅರವಳಿಕೆ ಮದ್ದು ನೀಡಿ ಪ್ರಜ್ಞೆ ತಪ್ಪಿಸಿ ಕೊನೆಗೂ ಆನೆಯನ್ನು ಕ್ರೇನ್ ಮೂಲಕ ಮೇಲೆತ್ತುವ ಕಾರ್ಯಾಚರಣೆ ನಡೆಯಿತು. ಈ ವೇಳೆ ಸ್ಥಳೀಯರು ಅರಣ್ಯಾಧಿಕಾರಿಗಳ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

12 ವರ್ಷದ ಗಂಡು ಆನೆಯು, ಸುಮಾರು 50 ಅಡಿ ಆಳದ ಕಾಲುವೆಯಲ್ಲಿ ಬಿದ್ದಿತ್ತು. ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಪಶು ವೈದ್ಯರ ತಂಡದ ವತಿಯಿಂದ ಸದರಿ ಆನೆಯನ್ನು ಸಂರಕ್ಷಿಸಲಾಗಿದೆ. ಆನೆಗೆ ಪ್ರಥಮ ಚಿಕಿತ್ಸೆ ನೀಡಿದ ನಂತರ ಕಾಡಿಗೆ ಬಿಡಲಾಗುವುದು ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಡಿಸಿಎಫ್ ರಘು, ವನ್ಯಜೀವಿ ವಲಯ ಮೈಸೂರು ವಿಭಾಗದ ಡಿಸಿಎಫ್ ಪ್ರಭು, ಸ್ಥಳೀಯ ತಹಶೀಲ್ದಾರ್ ಲೋಕೇಶ್ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿಯ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಕಾಡಾನೆ
Add as Preferred on Google Follow on Google News
Share. WhatsApp Facebook Twitter Telegram
Previous Articleತುಮಕೂರಿಗೆ ಮೆಟ್ರೋ ಯೋಜನೆಯಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆ: ಸಚಿವ ಜಿ. ಪರಮೇಶ್ವರ್
Next Article ಬಿಹಾರ ಚುನಾವಣೆಯ ಸೋಲಿಗೆ ಇವಿಎಂ ದುರ್ಬಳಕೆ, ಹಣ ಬಲ ಕಾರಣ: ಆರ್​ಜೆಡಿ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.