Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ನನ್ನ ಸ್ಥಾನ ಈಗಲೂ ಗಟ್ಟಿ, ಮುಂದೆಯೂ ಗಟ್ಟಿ
Politics Latest News

ನನ್ನ ಸ್ಥಾನ ಈಗಲೂ ಗಟ್ಟಿ, ಮುಂದೆಯೂ ಗಟ್ಟಿ

Sambrama Prabha NewsBy Sambrama Prabha NewsNovember 20, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಚಾಮರಾಜನಗರ: ನಾನು ಮೌಢ್ಯಗಳಲ್ಲಿ ನಂಬಿಕೆ ಇಟ್ಟಿಲ್ಲ. ನನಗೆ ಚಾಮರಾಜನಗರ, ಮೈಸೂರು ಎಲ್ಲವೂ ಒಂದೇ, ಇಲ್ಲಿಗೆ ಬಂದಾಗ ನನಗೆ ಅಧಿಕಾರ ಗಟ್ಟಿಯಾಗಿದೆ. ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸ್ಥಾನ ಈಗಲೂ ಗಟ್ಟಿಯಾಗಿದೆ. ಮುಂದೆಯೂ ಗಟ್ಟಿಯಾಗಿರುತ್ತೆ‌ ಎಂದು ಚಾಮರಾಜನಗರದ ಭೇಟಿ ಕುರಿತು ಹೇಳಿಕೆ ನೀಡಿದರು.

ಜನರ ಆಶೀರ್ವಾದ ಇರುವ ತನಕ ನಾನೇ ಸಿಎಂ: ಎರಡೂವರೆ ವರ್ಷ ಆದಮೇಲೆ ಸಂಪುಟ ಪುನಾರಚನೆ ಮಾಡೋಣ ಅಂದಿದ್ದೆ, ಆ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದಕ್ಕೆ ಎಲ್ಲರೂ ಕ್ರಾಂತಿ ಅಂತ ತಿಳಿದುಕೊಂಡಿದ್ದರು. ಆದರೆ, ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಮತ್ತೆ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ, ಎಲ್ಲಿಯತನಕ ಜನರ ಆಶೀರ್ವಾದ ಇರುತ್ತೆ, ಅಲ್ಲಿ ತನಕ ನಾನೇ ಸಿಎಂ ಆಗಿರುತ್ತೇನೆ. 2028ರ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ವಿಚಾರವನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡೋಣ ಎಂದು ತಿಳಿಸಿದರು.

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಕುರಿತು ಮಾತನಾಡಿ, ರಾಜ್ಯದಿಂದ ಕೇಂದ್ರಕ್ಕೆ ಹೆಚ್ಚಿನ ಜಿಎಸ್​​ಟಿ ನೀಡುತ್ತೇವೆ. ಆದರೆ ಅನುದಾನ ಕೊಡುವ ವಿಚಾರದಲ್ಲಿ ಮಾತ್ರ ಸರಿಯಾಗಿ ಕೊಡುತ್ತಿಲ್ಲ. ಹೆಚ್ಚಿನ ಅನುದಾನ ಕೊಡಿ ಎಂದು ನಾನು ಕೇಳುತ್ತೇನೆ ಎಂದರು.

ಮೊಸರು ಕಡೆಯುವ ಮೂಲಕ ಕಾರ್ಯಕ್ರಮ ಉದ್ಘಾಟನೆ: ಬಳಿಕ ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭವನ್ನು ಸಿಎಂ ಸಿದ್ದರಾಮಯ್ಯ ಮೊಸರು ಕಡೆಯುವ ಮೂಲಕ ವಿಶೇಷವಾಗಿ ಉದ್ಘಾಟಿಸಿದರು. ಈ ವೇಳೆ, ಪಕ್ಕದಲ್ಲೇ ಇದ್ದ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ, ತಾವು ಮೊಸರನ್ನು ಕಡೆದು ಬೆಣ್ಣೆ ತಿನ್ನುವ ಮೂಲಕ ಎಲ್ಲರ ಮೊಗದಲ್ಲೂ ನಗು ತರಿಸಿದರು.

ಸಿದ್ದರಾಮಯ್ಯರನ್ನು ಹಾಡಿಹೊಗಳಿದ ರಾಜಣ್ಣ: ಕಾರ್ಯಕ್ರಮದಲ್ಲಿ ಭಾಷಣದ ಆರಂ‌ಭದಲ್ಲೆ ನಾಡ ದೊರೆ ಸಿಎಂ ಸಿದ್ದರಾಮಯ್ಯನವರೇ ಎಂದು ಭಾಷಣ ಆರಂಭಿಸಿದ ಮಾಜಿ ಸಚಿವ ಕೆ.ಎನ್.ರಾಜಣ್ಣ, ಅನ್ನಭಾಗ್ಯ ಯೋಜನೆ ಮೂಲಕ ಬಡವರು ಹಸಿದಿರದಂತೆ ಸಿದ್ದರಾಮಯ್ಯ ಕ್ರಾಂತಿ ತಂದಿದ್ದಾರೆ‌. ಈ ಹಿಂದೆ ಸಾಕಷ್ಟು ಜನ ಭಿಕ್ಷುಕರು ಗ್ರಾಮಾಂತರ ಪ್ರದೇಶದಲ್ಲಿ ಕಂಡುಬರುತ್ತಿದ್ದರು. ಈಗ ಅವರು ಕಾಣುವುದು ಅಪರೂಪವಾಗಿದೆ, ಇದಕ್ಕೆ ಅನ್ನಭಾಗ್ಯ ಯೋಜನೆಯೂ ಕಾರಣ, ಎಲ್ಲರಿಗೂ ಹೊಟ್ಟೆತುಂಬಾ ಅನ್ನ ಸಿಗುತ್ತಿದೆ ಎಂದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಮುಖ್ಯಮಂತ್ರಿ ಸಿದ್ದರಾಮಯ್ಯ
Add as Preferred on Google Follow on Google News
Share. WhatsApp Facebook Twitter Telegram
Previous Article‘ಭಾರತದಲ್ಲಿ ಎಂದಿಗೂ ಬೆನ್ನಿಗೆ ಚೂರಿ ಹಾಕುವುದನ್ನು ಕಂಡಿಲ್ಲ’: ಇಂಗ್ಲೆಂಡ್ ಆಟಗಾರ ಕೆವಿನ್ ಪೀಟರ್ಸನ್ ಹೀಗೆ ಹೇಳಿದ್ಯಾಕೆ?
Next Article ಬೆಂಗಳೂರು ಎಟಿಎಂ ದರೋಡೆ ಪ್ರಕರಣ: ತಿರುಪತಿಯಲ್ಲಿ ಇಬ್ಬರ ಬಂಧನ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.