Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ತಿರುಮಲ ವೈಕುಂಠ ದ್ವಾರ ದರ್ಶನ ಕುರಿತು TTD ಮಹತ್ವದ ಮಾಹಿತಿ
Nation News Latest News

ತಿರುಮಲ ವೈಕುಂಠ ದ್ವಾರ ದರ್ಶನ ಕುರಿತು TTD ಮಹತ್ವದ ಮಾಹಿತಿ

Sambrama Prabha NewsBy Sambrama Prabha NewsNovember 20, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ತಿರುಮಲ: ಹಿಂದೂಗಳ ಪವಿತ್ರ ಧಾರ್ಮಿಕ ಯಾತ್ರಾತಾಣ ವಿಶ್ವ ವಿಖ್ಯಾತ ತಿರುಪತಿ ತಿರುಮಲದಲ್ಲಿ ವೈಕುಂಠ ಏಕಾದಶಿ ವಿಶೇಷ ದರ್ಷಶನಕ್ಕೆ ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿ ಆನ್ ಲೈನ್ ಟಿಕೆಟ್ ವಿತರಣೆ ಆರಂಭಿಸಿದೆ.

ಹೌದು.. ತಿರುಮಲ ತಿರುಪತಿ ದೇವಸ್ಥಾನಗಳು ವೈಕುಂಠ ಏಕಾದಶಿ ದರ್ಶನದ ವೇಳಾಪಟ್ಟಿಯನ್ನು ದೃಢಪಡಿಸಿದ್ದು, ವರ್ಷಾಂತ್ಯದ ಭಾರೀ ಜನದಟ್ಟಣೆಯನ್ನು ನಿರ್ವಹಿಸಲು ಸ್ಪಷ್ಟ ವ್ಯವಸ್ಥೆಗಳನ್ನು ಮಾಡಿದೆ.

ಮೊದಲ 3 ದಿನಗಳಲ್ಲಿ ಆನ್‌ಲೈನ್ ಇ-ಡಿಪ್ ಟೋಕನ್ ಹೊಂದಿರುವವರಿಗೆ ಮಾತ್ರ ವೈಕುಂಠ ದ್ವಾರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಟಿಟಿಡಿ ಘೋಷಿಸಿದೆ.

ಸಾಮಾನ್ಯ ಭಕ್ತರಿಗೆ ಆದ್ಯತೆ ನೀಡಲು ಈ ಕ್ರಮ ಕೈಗೊಳ್ಳಲಾಗಿದೆ. ಡಿಸೆಂಬರ್ 30ರಿಂದ ಜನವರಿ 8ರವರೆಗೆ 10 ದಿನಗಳ ಕಾಲ ವೈಕುಂಠ ದ್ವಾರ ದರ್ಶನವನ್ನು ಮುಂದುವರಿಸಲು ಆಡಳಿತ ಮಂಡಳಿ ನಿರ್ಧರಿಸಿದೆ.

ಸಿಎಂ ನೇತೃತ್ವದಲ್ಲಿ ಮಹತ್ವ ನಿರ್ಣಯಗಳು

ಇನ್ನು ವೈಕುಂಠ ಏಕಾದಶಿ ನಿಮಿತ್ತ ತಿರುಮಲದಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಟಿಟಿಡಿ ಮತ್ತು ಸಿಎಂ ಚಂದ್ರಬಾಬು ನಾಯ್ಡು ಅವರು ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಪ್ರಮುಖವಾಗಿ ತಿರುಮಲ ತಿರುಪತಿ ದೇವಸ್ಥಾನಗಳ (TTD) ಆಡಳಿತ ಮಂಡಳಿಯು ವೈಕುಂಠ ದ್ವಾರ ದರ್ಶನಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಸೂಚನೆಯಂತೆ, ಈ ವರ್ಷ ಸಾಮಾನ್ಯ ಭಕ್ತರಿಗೆ ಆದ್ಯತೆ ನೀಡಲು ದರ್ಶನದ ಸಮಯವನ್ನು ನಿಗದಿಪಡಿಸಲಾಗಿದೆ.

ಡಿಸೆಂಬರ್ 30ರಿಂದ ಜನವರಿ 8ರವರೆಗೆ 10 ದಿನಗಳ ಕಾಲ ವೈಕುಂಠ ದ್ವಾರ ದರ್ಶನವನ್ನು ಮುಂದುವರಿಸಲು ಆಡಳಿತ ಮಂಡಳಿ ನಿರ್ಧರಿಸಿದೆ.

ನೂಕು ನುಗ್ಗಲು ತಪ್ಪಿಸಲು ಕ್ರಮ

ಒಟ್ಟು 182 ಗಂಟೆಗಳ ದರ್ಶನದಲ್ಲಿ 164 ಗಂಟೆಗಳ ಕಾಲ ಸಾಮಾನ್ಯ ಭಕ್ತರಿಗೆ ಸರ್ವ ದರ್ಶನ ನೀಡಲು ಟಿಟಿಡಿ ನಿರ್ಧರಿಸಿದೆ. ಮುಖ್ಯಮಂತ್ರಿಯ ಆದೇಶದಂತೆ ಸಾಮಾನ್ಯ ಭಕ್ತರಿಗೆ ಆದ್ಯತೆ ನೀಡುವ ಭಾಗ ಇದಾಗಿದೆ.

ತಿರುಪತಿಯ ಕೌಂಟರ್‌ಗಳಲ್ಲಿ ವೈಕುಂಠ ದ್ವಾರ ದರ್ಶನ ಟೋಕನ್‌ಗಳನ್ನು ಆಫ್‌ಲೈನ್‌ನಲ್ಲಿ ನೀಡುವ ಪದ್ಧತಿಯನ್ನು ಈ ಬಾರಿ ರದ್ದುಗೊಳಿಸಲಾಗಿದೆ. ಕಳೆದ ವರ್ಷ ತಿರುಪತಿಯ ಕೌಂಟರ್‌ಗಳಲ್ಲಿ ನಡೆದ ಕಾಲ್ತುಳಿತದ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಭಕ್ತರಿಗೆ ಆಗುವ ಅನಾನುಕೂಲತೆಯನ್ನು ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಹೊಸ ನೀತಿ ಜಾರಿಗೆ

ಸಾಮಾನ್ಯ ಭಕ್ತರಿಗೆ ಸರ್ವ ದರ್ಶನ ಟೋಕನ್‌ಗಳ ಹಂಚಿಕೆಯಲ್ಲಿ ಟಿಟಿಡಿ ಹೊಸ ನೀತಿಯನ್ನು ಜಾರಿಗೆ ತರುತ್ತಿದೆ. ಡಿಸೆಂಬರ್ 30, 31 ಮತ್ತು ಜನವರಿ 1ರಂದು ದರ್ಶನದ ಮೊದಲ ಮೂರು ದಿನಗಳವರೆಗೆ ಇ-ಡಿಐಪಿ ಮೂಲಕ ಟಿಕೆಟ್‌ಗಳನ್ನು ಹಂಚಲಾಗುತ್ತದೆ.

ಇದಕ್ಕೆ ನವೆಂಬರ್ 27ರಿಂದ ಡಿಸೆಂಬರ್ 1ರವರೆಗೆ ಆನ್‌ಲೈನ್‌ನಲ್ಲಿ ನೋಂದಣಿ ಮಾಡಬೇಕು. ಡಿಸೆಂಬರ್ 2ರಂದು ಆನ್‌ಲೈನ್ ಡಿಐಪಿ ಮೂಲಕ ಟೋಕನ್‌ಗಳನ್ನು ಹಂಚಲಾಗುತ್ತದೆ. ಟಿಟಿಡಿ ವೆಬ್‌ಸೈಟ್, ಅಪ್ಲಿಕೇಶನ್ ಮತ್ತು ವಾಟ್ಸಾಪ್ ಮೂಲಕ ಮಾತ್ರ ಟೋಕನ್‌ಗಳನ್ನು ನೀಡಲಾಗುತ್ತದೆ. ಆಫ್‌ಲೈನ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

ಜನವರಿ 2ರಿಂದ ಜನವರಿ 8ರವರೆಗೆ, ಟೋಕನ್ ಇಲ್ಲದ ಭಕ್ತರಿಗೆ ಎಂದಿನಂತೆ ಸರ್ವ ದರ್ಶನಕ್ಕೆ ಅವಕಾಶ ನೀಡಲಾಗುವುದು. ಟಿಟಿಡಿ ಪ್ರತಿದಿನ 15,000 ವಿಶೇಷ ಪ್ರವೇಶ ದರ್ಶನ (ರೂ. 300) ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡುತ್ತದೆ.

ಜೊತೆಗೆ 1,000 ಶ್ರೀವಾನಿ ಟ್ರಸ್ಟ್ ಬ್ರೇಕ್ ದರ್ಶನ ಟಿಕೆಟ್‌ಗಳನ್ನು ಬಿಡುಗಡೆ ಮಾಡುತ್ತದೆ. ವೈಯಕ್ತಿಕವಾಗಿ ಭೇಟಿ ನೀಡುವ ಪ್ರೋಟೋಕಾಲ್ ಇರುವ ಗಣ್ಯರಿಗೆ ಮಾತ್ರ ಶಿಫಾರಸು ದರ್ಶನಕ್ಕೆ ಅವಕಾಶವಿರುತ್ತದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
TTD ಮಹತ್ವದ ಮಾಹಿತಿ ತಿರುಮಲ ವೈಕುಂಠ ದ್ವಾರ
Add as Preferred on Google Follow on Google News
Share. WhatsApp Facebook Twitter Telegram
Previous Articleವಾಯು ಗುಣಮಟ್ಟ ಸೂಚ್ಯಂಕ ಪ್ರಕಟ: ರಾಜ್ಯದಲ್ಲೇ ಮೈಸೂರಿಗೆ ಮೊದಲ ಸ್ಥಾನ, ದೇಶದಲ್ಲಿ 3ನೇ ಪಟ್ಟ
Next Article ರೋಚಕ ಘಟ್ಟ ತಲುಪಿದ ‘ಸಿಎಂ ಬದಲಾವಣೆ’ ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.