BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

‘ನಾನು ಈಗಲೂ ಮಾತಿಗೆ ತಪ್ಪಿಲ್ಲ’: ಡಿ.ಕೆ.ಸುರೇಶ್‌ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

Author Picture
Published On: November 21, 2025

—Advertisement—

Updated By: Priyalachhi

ಮೈಸೂರು: ನಾನು ಈಗಲೂ ಸಹ ಮಾತಿಗೆ ತಪ್ಪಿಲ್ಲ, ಎಲ್ಲ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

“ಸಿದ್ದರಾಮಯ್ಯನವರು ಕೊಟ್ಟ ಮಾತಿಗೆ ತಪ್ಪಲ್ಲ” ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.

ಇದೇ ಸಂದರ್ಭದಲ್ಲಿ, ರಾಜ್ಯದ ಮುಂದಿನ ಬಜೆಟ್ ಅನ್ನು ನಾನೇ ಮಂಡಿಸುತ್ತೇನೆ ಹಾಗೂ ಸಿಎಂ ಆಗಿಯೂ ನಾನೇ ಮುಂದುವರೆಯುತ್ತೇನೆ ಎಂದು ಪುನರುಚ್ಚರಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮಗಳ ಜೊತೆ ಸಿಎಂ ಮಾತನಾಡಿದರು.

ನಾಯಕತ್ವ ಬದಲಾವಣೆ, ಸಂಪುಟ ಪುನರ್‌ರಚನೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಹೇಳಿದಂತೆ ನಾನೂ ಕೇಳಬೇಕು ಹಾಗೂ ಡಿ.ಕೆ.ಶಿವಕುಮಾರ್ ಮತ್ತು ಎಲ್ಲ ಶಾಸಕರು, ಸಚಿವರೂ ಕೇಳಬೇಕು ಎಂದರು.

ನಾಳೆ ಬೆಂಗಳೂರಿಗೆ ಬರುತ್ತಿರುವ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡುತ್ತೇನೆ. ಹೈಕಮಾಂಡ್ ಹೇಳಿದಂತೆ ನಾವೆಲ್ಲ ಕೇಳಬೇಕು. ಹೈಕಮಾಂಡ್​ ತೀರ್ಮಾನವೇ ಅಂತಿಮ ಎಂದರು.

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಎಥನಾಲ್ ಉತ್ಪಾದನೆ, ಕಬ್ಬಿಗೆ ಎಂಎಸ್​ಪಿ ದರ ನಿಗದಿ ಹಾಗೂ ರಾಜ್ಯಕ್ಕೆ ಬರಬೇಕಾದ ಪರಿಹಾರ ಹಣದ ಕುರಿತು ಚರ್ಚಿಸಿದ್ದೇನೆ ಎಂದು ಹೇಳಿದರು.

ಮೆಕ್ಕೆ ಜೋಳಕ್ಕೆ ಬೆಂಬಲ ಬೆಲೆ ಘೋಷಣೆ: ರಾಜ್ಯದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಾಗಿದೆ. ಈ ವರ್ಷ 55 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಉತ್ಪಾದನೆಯಾಗುವ ಅಂದಾಜಿದೆ. ಇದರಿಂದ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ದರ ಇಳಿಕೆಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ರೈತರಿಗೆ 1 ಕ್ವಿಂಟಲ್ ಮೆಕ್ಕೆಜೋಳಕ್ಕೆ 2,400 ರೂ ಬೆಲೆ ನಿಗದಿ ಮಾಡಿದ್ದೇವೆ ಎಂದು ತಿಳಿಸಿದರು.

ಕೇಂದ್ರದಿಂದ 70 ಲಕ್ಷ ಮೆ.ಟನ್ ಮೆಕ್ಕೆಜೋಳ ಆಮದು: ರಾಜ್ಯದಲ್ಲಷ್ಟೇ ಅಲ್ಲ, ದೇಶದಲ್ಲೂ ಮೆಕ್ಕೆಜೋಳ ಉತ್ಪಾದನೆ ಹೆಚ್ಚಾಗಿದೆ. ಆದರೂ ಕೂಡ ಕೇಂದ್ರ ಸರ್ಕಾರವು ಸುಮಾರು 70 ಲಕ್ಷ ಮೆ.ಟನ್ ನಷ್ಟು ಮೆಕ್ಕೆಜೋಳ ಆಮದು ಮಾಡಿಕೊಳ್ಳುತ್ತಿದೆ. ಆದ್ದರಿಂದ ಕೇಂದ್ರವು ಮೆಕ್ಕೆಜೋಳ ಆಮದು ನಿಲ್ಲಿಸಬೇಕೆಂದು ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ತಿಳಿಸಿದರು.

ಮೆಕ್ಕೆಜೋಳ ಖರೀದಿಗೆ ಡಿಸ್ಟಿಲರಿಗಳೊಂದಿಗೆ ಚರ್ಚೆ: ಡಿಸ್ಟಿಲರಿಗಳು ಮೆಕ್ಕೆಜೋಳ ಬೆಲೆ ಕಡಿಮೆ ಇದ್ದಾಗಲೇ ಖರೀದಿಸಿ ಶೇಖರಣೆ ಮಾಡಿಕೊಂಡಿವೆ. ಮೆಕ್ಕೆಜೋಳವನ್ನು ನಿಯಮಾನುಸಾರ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸಲು ಡಿಸ್ಟಿಲರಿ ಮಾಲೀಕರೊಂದಿಗೆ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸರ್ಕಾರದಿಂದ 10 ಲಕ್ಷ ಮೆ.ಟನ್ ಖರೀದಿ: ಮೆಕ್ಕೆಜೋಳದ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಎಲ್ಲ ರೀತಿಯ ಸಹಾಯವನ್ನು ಸರ್ಕಾರ ಮಾಡಲಿದೆ. ರಾಜ್ಯ ಸರ್ಕಾರ, ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ: ಮೆಕ್ಕೆಜೋಳದ ಜೊತೆಗೆ ಹೆಸರು ಕಾಳು ಬೆಳೆ ಸಮಸ್ಯೆ ಬಗ್ಗೆ ಚರ್ಚಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಎಫ್‌ಎಕ್ಯು ಬದಲಾವಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವ ಜೊತೆಗೆ ಸಂಬಂಧಪಟ್ಟ ತಂಡ ಈ ಬಗ್ಗೆ ದೆಹಲಿಗೂ ಭೇಟಿ ನೀಡಬೇಕೆಂದು ಸೂಚನೆ ನೀಡಲಾಗಿದೆ. ಇತ್ತೀಚೆಗೆ ಪ್ರಧಾನಿಯವರನ್ನು ಭೇಟಿಯಾಗಿ ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ ಕೋರಲಾಗಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 15.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ರಾಜ್ಯದ ಮನವಿಗೆ ಕೇಂದ್ರ ಪೂರಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp