Updated By: Priyalachhi

ಸಮಸ್ತಿಪುರ: ಬಿಹಾರದ ಸಮಸ್ತಿಪುರ ಜಿಲ್ಲೆಯ ರಸ್ತೆ ಬದಿಯಲ್ಲಿ ರಾಶಿ ರಾಶಿಯಲ್ಲಿ VVPAT ಚೀಟಿಗಳು ಪತ್ತೆಯಾದ ನಂತರ ಸಹಾಯಕ ಚುನಾವಣಾ ಅಧಿಕಾರಿಯನ್ನು ಶನಿವಾರ ಅಮಾನತುಗೊಳಿಸಲಾಗಿದ್ದು, ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜಿಲ್ಲೆಯ ಸರಾಯ್ ರಂಜನ್ ವಿಧಾನಸಭಾ ಕ್ಷೇತ್ರದ ಕಾಲೇಜು ಬಳಿಯ ರಸ್ತೆ ಬದಿಯಲ್ಲಿ VVPAT ಚೀಟಿಗಳು ಬಿದ್ದಿರುವುದು ಕಂಡುಬಂದಿದೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ಥಳಕ್ಕೆ ಭೇಟಿ ನೀಡಿ ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

“ಇವು ಅಣಕು ಮತದಾನ VVPAT ಚೀಟಿಗಳಾಗಿರುವುದರಿಂದ, ಮತದಾನ ಪ್ರಕ್ರಿಯೆಯ ವಿಶ್ವಾಸಾರ್ಹತೆಗೆ ಯಾವುದೇ ಧಕ್ಕೆ ಉಂಟಾಗಿಲ್ಲ. ಕಣದಲ್ಲಿರುವ ಅಭ್ಯರ್ಥಿಗಳಿಗೆ ಜಿಲ್ಲಾಧಿಕಾರಿ ಮೂಲಕ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅದರೂ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದ ಬಗ್ಗೆ ತನಿಖೆ ಆರಂಭವಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿಯ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version