• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

AC ನ್ಯಾಯಾಲಯಗಳಲ್ಲಿ 13 ಸಾವಿರ ಪ್ರಕರಣ ದಾಖಲು: ಸಚಿವ ಕೃಷ್ಣ ಬೈರೇಗೌಡ

Sambrama Prabha News by Sambrama Prabha News
January 7, 2026
in Latest News, Politics
0
AC ನ್ಯಾಯಾಲಯಗಳಲ್ಲಿ 13 ಸಾವಿರ ಪ್ರಕರಣ ದಾಖಲು: ಸಚಿವ ಕೃಷ್ಣ ಬೈರೇಗೌಡ

Updated By: Priyalachhi 

ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯ ನ್ಯಾಯಾಲಯಗಳಲ್ಲಿ ಪ್ರಕರಣಗಳು ಅತಿ ಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ನಡೆದ ಉಪ ವಿಭಾಗಾಧಿಕಾರಿಗಳ ಕೋರ್ಟ್​ ಕೇಸ್ ಸಂಬಂಧಿಸಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಅವರು, “ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ರಾಜ್ಯಾದ್ಯಂತ ಒಟ್ಟು 19 ಸಾವಿರ ಪ್ರಕರಣಗಳು ಬಾಕಿಯಿವೆ. ಈ ಪೈಕಿ ಸುಮಾರು 13 ಸಾವಿರ ಪ್ರಕರಣಗಳು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲೇ ಬಾಕಿ ಇವೆ” ಎಂದು ಬೇಸರ ವ್ಯಕ್ತಪಡಿಸಿದರು.

“ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲೇ ಹೆಚ್ಚು ಸಂಖ್ಯೆಯಲ್ಲಿ ನ್ಯಾಯಾಲಯ ಪ್ರಕರಣಗಳು ಬಾಕಿಯಿದ್ದರೆ ರಾಜ್ಯದ ಇತರ ಭಾಗಗಳ ಅಧಿಕಾರಿಗಳೊಂದಿಗೆ ಏನೆಂದು ಸಭೆ ನಡೆಸಲಿ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕೇವಲ 6 ಸಾವಿರ ಪ್ರಕರಣಗಳು ಮಾತ್ರ ಬಾಕಿ ಇದ್ದು, ಈ ನಾಲ್ಕು ಜಿಲ್ಲೆಗಳ ಅಧಿಕಾರಿಗಳು ತಮ್ಮ ಕೆಲಸಕ್ಕೆ ವೇಗ ನೀಡಿದರೆ ಮಾತ್ರ ರಾಜ್ಯಮಟ್ಟದಲ್ಲಿ ಪ್ರಶ್ನಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

“ಸಭೆಯಲ್ಲಿ ನಾಲ್ಕೂ ಜಿಲ್ಲೆಗಳ ಪ್ರಗತಿಯ ವಿವರಗಳನ್ನು ಪರಿಶೀಲಿಸಿದ ಸಚಿವರು, ಕಳೆದ ಅಕ್ಟೋಬರ್​ನಲ್ಲಿ ಈ ನಾಲ್ಕು ಜಿಲ್ಲೆಗಳಲ್ಲಿ 15,364 ಪ್ರಕರಣಗಳು ಬಾಕಿ ಇದ್ದದ್ದು ಈಗ 13,610ಕ್ಕೆ ಇಳಿದಿರುವುದು ಉತ್ತಮ ಬೆಳವಣಿಗೆ. ಆದರೂ, ಮಿಸ್ಸಿಂಗ್​ ರೆಕಾರ್ಡ್​ಗಳು, ಆರ್ ಸಿಸಿಎಂಎಸ್ ನಲ್ಲಿ ವಿಲೇವಾರಿ ಆಗದ ಪ್ರಕರಣಗಳು ಹಾಗೂ ಅನರ್ಹ ಪ್ರಕರಣಗಳು ಹಾಗೂ ಆದೇಶಕ್ಕಾಗಿ ಕಾಯ್ದಿರಿಸಿದ ಪ್ರಕರಣಗಳನ್ನು ಜನವರಿ ಅಂತ್ಯದೊಳಗೆ ಮುಗಿಸಿದರೆ ಈ ಸಂಖ್ಯೆ ಮತ್ತಷ್ಟು ಸುಧಾರಿಸುತ್ತದೆ” ಎಂದು ಸಲಹೆ ನೀಡಿದರು.
Tags: ಸಚಿವ ಕೃಷ್ಣ ಬೈರೇಗೌಡ
Previous Post

ಏಕನಾಥ್ ಶಿಂಧೆ ದೂರವಿಡಲು ಬದ್ಧವೈರಿ ಕಾಂಗ್ರೆಸ್ ಜತೆ ಬಿಜೆಪಿ ಮೈತ್ರಿ

Next Post

ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಗೆ ಚುನಾವಣಾ ಆಯೋಗದಿಂದ ನೋಟಿಸ್

Next Post
ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಗೆ ಚುನಾವಣಾ ಆಯೋಗದಿಂದ ನೋಟಿಸ್

ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಗೆ ಚುನಾವಣಾ ಆಯೋಗದಿಂದ ನೋಟಿಸ್

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.