Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
ಬೆಂಗಳೂರು: “ರಾಜ್ಯದ ಹಣಕಾಸು ಇಲಾಖೆಯ ಆಂತರಿಕ ಪತ್ರಗಳು ಬೀದಿಯಲ್ಲಿ ಹರಿದಾಡುತ್ತಿವೆ. ನಿಮ್ಮದೇ ಇಲಾಖೆಯನ್ನು ನಿಯಂತ್ರಿಸಲು ನಿಮ್ಮಿಂದ ಆಗುತ್ತಿಲ್ಲ ಎಂದ ಮೇಲೆ ನೀವು ಮುಖ್ಯಮಂತ್ರಿಯಾಗಿ ಮುಂದುವರಿಯಲು ನಾಲಾಯಕ್. ಕೂಡಲೇ ರಾಜೀನಾಮೆ ಕೊಟ್ಟು ತೊಲಗಿ,” ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಯಾರ ಷಡ್ಯಂತ್ರ? ಹಣಕಾಸು ಇಲಾಖೆಯ ಪತ್ರ ಲೀಕ್ ಆಗಿರುವ ಹಿಂದೆ ಯಾರ ಷಡ್ಯಂತ್ರ ಅಡಗಿದೆ? ಇದು ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯನವರ ಷಡ್ಯಂತ್ರವೋ ಅಥವಾ ಜಾರಕಿಹೊಳಿ ಅವರ ಷಡ್ಯಂತ್ರವೋ? ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಹಣಕಾಸು ಇಲಾಖೆಯ ದಾಖಲೆಗಳು ಲೀಕ್ ಆಗಬೇಕಾದರೆ ಅದರ ಹಿಂದೆ ಖಂಡಿತಾ ಷಡ್ಯಂತ್ರವಿದ್ದೇ ಇರುತ್ತದೆ. ಇದು ಆಡಳಿತರೂಢ ಕಾಂಗ್ರೆಸ್ ಪಕ್ಷದೊಳಗಿನ ಒಳಜಗಳವನ್ನು ಸ್ಪಷ್ಟವಾಗಿ ಎತ್ತಿತೋರಿಸುತ್ತಿದೆ ಎಂದು ಟೀಕಿಸಿದ್ದಾರೆ. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳುಗಳಲ್ಲಿ ಇಂತಹ ಆಂತರಿಕ ಭಿನ್ನಮತ ಸ್ಫೋಟಗೊಂಡಿರುವುದು ಸರ್ಕಾರದ ಸ್ಥಿರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು…
ಧಾರವಾಡ: ಇತ್ತೀಚೆಗೆ ಧಾರವಾಡದಲ್ಲಿ 50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದು ತಹಶೀಲ್ದಾರ್ ಸಚ್ಚಿದಾನಂದ್ ಜೈಲು ಸೇರಿರುವ ಪ್ರಕರಣ ಇದೀಗ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. ತಹಶೀಲ್ದಾರ್‌ಗೆ ಲಂಚ ನೀಡುತ್ತಿದ್ದ ಮಂಜುನಾಥ್ ಅರಳಿಕಟ್ಟೆ ಅವರೇ ಬೃಹತ್ ಭೂ ಅಕ್ರಮ ಎಸಗಿದ್ದಾರೆ ಎಂದು ಮೂಲ ಜಮೀನು ಮಾಲೀಕರಾದ ಅಂಗಡಿ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ. ಅಂಗಡಿ ಕುಟುಂಬದ ಆರೋಪವೇನು? ತಹಶೀಲ್ದಾರ್ ಲಂಚ ಪಡೆದಿದ್ದಷ್ಟೇ ಅಲ್ಲ, ಲಂಚ ನೀಡುತ್ತಿದ್ದ ಮಂಜುನಾಥ್ ಕೂಡ ಭಾರಿ ಅಕ್ರಮಗಳನ್ನು ಮಾಡಿದ್ದಾರೆ ಎಂದು ಶಿವಪುತ್ರಪ್ಪ ಅಂಗಡಿ ಅವರ ಪುತ್ರ ಬಸವರಾಜ್ ಅಂಗಡಿ ಆರೋಪಿಸಿದ್ದಾರೆ. “ನಮ್ಮ ಕುಟುಂಬಕ್ಕೆ ಸೇರಿದ ಒಟ್ಟು 33 ಎಕರೆ ಜಮೀನಿನ ಪೈಕಿ ಕೇವಲ 6 ಎಕರೆಯನ್ನು ನಮ್ಮ ಸಂಬಂಧಿಕರಿಂದ ಮಂಜುನಾಥ್ ಹಾಗೂ ಇತರರು ಖರೀದಿಸಿದ್ದರು. ಆದರೆ ಕಂದಾಯ ಇಲಾಖೆ ಅಧಿಕಾರಿಗಳ ಜೊತೆ ಶಾಮೀಲಾಗಿ, ದಾಖಲೆಗಳನ್ನು ತಿದ್ದಿ ಇಡೀ 33 ಎಕರೆ ಜಮೀನನ್ನೇ ಖರೀದಿಸಿದ್ದಾಗಿ ತೋರಿಸಿಕೊಳ್ಳುತ್ತಿದ್ದಾರೆ” ಎಂದು ಅವರು ದೂರಿದ್ದಾರೆ. 33 ಎಕರೆಯಲ್ಲಿ 20 ಎಕರೆ…
ಬೆಂಗಳೂರು: ರಾಜ್ಯದಲ್ಲಿ ಆವರಿಸಿರುವ ಭೀಕರ ಬರಗಾಲ ಹಾಗೂ ಮಲೆನಾಡಿಗರ ನಿದ್ದೆಗೆಡಿಸಿರುವ ಕಸ್ತೂರಿರಂಗನ್ ವರದಿ ವಿಚಾರವಾಗಿ ಚರ್ಚಿಸಲು ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನ ನಡೆಯಲಿದೆ. ಆದರೆ, ಕಲಾಪ ಆರಂಭಕ್ಕೂ ಮುನ್ನವೇ ‘ವಂದೇ ಮಾತರಂ’ ಗೀತೆಯ ವಿಚಾರವಾಗಿ ಸದನದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆಯುವ ಲಕ್ಷಣಗಳು ದಟ್ಟವಾಗಿವೆ. ಬರಗಾಲ ಹಾಗೂ ಕಸ್ತೂರಿರಂಗನ್ ವರದಿಯೇ ಪ್ರಮುಖ ಅಜೆಂಡಾ ಕಳೆದ ಮುಂಗಾರು ಅಧಿವೇಶನವು ಗೊಂದಲ-ಗದ್ದಲಗಳ ನಡುವೆ ಮೊಟುಕುಗೊಂಡಿದ್ದರಿಂದ, ಈ ಬಾರಿ ಕೇವಲ ಎರಡು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಈ ವಿಶೇಷ ಅಧಿವೇಶನ ಕರೆಯಲಾಗಿದೆ. ಹೀಗಾಗಿ ಈ ಬಾರಿ ಯಾವುದೇ ‘ಪ್ರಶ್ನೋತ್ತರ ಕಲಾಪ’ಗಳು ಇರುವುದಿಲ್ಲ. ಬದಲಾಗಿ, ರಾಜ್ಯದಲ್ಲಿನ ತೀವ್ರ ಬರ ಪರಿಸ್ಥಿತಿ, ಬೆಳೆಹಾನಿ ಕುರಿತು ಸಮಗ್ರ ಚರ್ಚೆ ನಡೆಯಲಿದ್ದು, ಮತ್ತಷ್ಟು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವ ಸಾಧ್ಯತೆಯಿದೆ. ಇದರ ಜೊತೆಗೆ, ಕಸ್ತೂರಿರಂಗನ್ ವರದಿ ಜಾರಿಯಿಂದ ಆಗುವ ಸಾಧಕ-ಬಾಧಕಗಳ ಬಗ್ಗೆಯೂ ಚರ್ಚೆ ನಡೆಯಲಿದೆ. ಕೇಂದ್ರ ಸರ್ಕಾರ ಈಗಾಗಲೇ 7ನೇ ಕರಡು…
ತುಮಕೂರು (ಸಂಭ್ರಮ ಪ್ರಭ ನ್ಯೂಸ್ ಡೆಸ್ಕ್): ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರ ನಡೆಗಳು ತೀವ್ರ ಕುತೂಹಲ ಕೆರಳಿಸುತ್ತಿವೆ. ಒಂದು ಕಡೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಚಿವರ ಪಡೆಯೊಂದಿಗೆ ಮಂಗಳೂರಿನಲ್ಲಿ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಬ್ಯುಸಿಯಾಗಿದ್ದರೆ, ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತುಮಕೂರಿನಲ್ಲಿ ತಮ್ಮ ಆಪ್ತ ಹಾಗೂ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸಕ್ಕೆ ಭೇಟಿ ನೀಡಿರುವುದು ರಾಜ್ಯ ಕಾಂಗ್ರೆಸ್ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಕಾಂಗ್ರೆಸ್ ನಾಯಕತ್ವ ಹಾಗೂ ಡಿ.ಕೆ. ಶಿವಕುಮಾರ್ ಅವರ ಸಿಎಂ ಸ್ಥಾನದ ಕುರಿತು ನಡೆಯುತ್ತಿರುವ ವಾಕ್ಸಮರದ ನಡುವೆಯೇ ಸಿದ್ದರಾಮಯ್ಯ ಮತ್ತು ರಾಜಣ್ಣ ಅವರ ಈ ಭೇಟಿ ತೀವ್ರ ಮಹತ್ವ ಪಡೆದುಕೊಂಡಿದೆ. Read this: ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ ತುಮಕೂರಿನಲ್ಲಿ ಸಿದ್ದರಾಮಯ್ಯ: ಕುರುಬ ಸಮುದಾಯದ ಕಾರ್ಯಕ್ರಮಗಳಲ್ಲಿ ಭಾಗಿ ಸಿದ್ದರಾಮಯ್ಯ ಅವರು ಖ್ಯಾತ ಕಲಾವಿದ ದಿವಂಗತ ಪಿ.ಆರ್. ತಿಪ್ಪೇಸ್ವಾಮಿ ಅವರ ಸಾಹಿತ್ಯ ಕೃತಿಗಳ ಕುರಿತ…
ಮಂಡ್ಯ: ಗಣೇಶೋತ್ಸವದ ಸಂಭ್ರಮದ ನಡುವೆ ನಡೆದ ಬೃಹತ್ ಗಣಪತಿ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಅವರ ತಲೆಗೆ ಪೆಟ್ಟು ಬಿದ್ದಿರುವ ಅವಘಡ ಮಂಡ್ಯ ನಗರದ ಮರಿಗೌಡ ಬಡಾವಣಿಯಲ್ಲಿ ನಡೆದಿದೆ. ನಿನ್ನೆ ಮರಿಗೌಡ ಬಡಾವಣಿಯಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಬೃಹತ್ ಗಣಪತಿ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅತಿಥಿಯಾಗಿ ಆಗಮಿಸಿದ್ದ ಶಾಸಕ ಗಣಿಗ ರವಿಕುಮಾರ್ ಅವರು ಗಣಪತಿ ಮೂರ್ತಿಯನ್ನು ಮುಚ್ಚಿದ್ದ ಪರದೆಯನ್ನು ತೆರೆದು ಅನಾವರಣ ಮಾಡಲು ಮುಂದಾಗಿದ್ದಾರೆ. ಪರದೆಯನ್ನು ಎಳೆಯುತ್ತಿದ್ದಂತೆಯೇ ಮೇಲಿದ್ದ ಕೊಂಡಿ ಕಳಚಿ ನೇರವಾಗಿ ಶಾಸಕರ ತಲೆಯ ಮೇಲೆ ಬಿದ್ದಿದೆ. ಘಟನೆಯಿಂದಾಗಿ ಶಾಸಕರ ತಲೆಗೆ ಗಾಯವಾಗಿದ್ದು, ತಕ್ಷಣವೇ ಎಚ್ಚೆತ್ತ ಬೆಂಬಲಿಗರು ಹಾಗೂ ಸ್ಥಳೀಯ ಮುಖಂಡರು ಅವರನ್ನು ಮಂಡ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಶಾಸಕರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ. ಹಬ್ಬದ ಸಂಭ್ರಮದಲ್ಲಿದ್ದ ಕಾರ್ಯಕರ್ತರು ಹಾಗೂ ಜನರಿಗೆ ಈ ದಿಢೀರ್ ಘಟನೆ ಕೆಲಕಾಲ ಆತಂಕ ತಂದೊಡ್ಡಿತ್ತು.
ಸಂಭ್ರಮಪ್ರಭ ನ್ಯೂಸ್, ಬೆಂಗಳೂರು: ರಾಜ್ಯ ಸಹಕಾರ ಕ್ಷೇತ್ರದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಡಿಸಿಸಿ ಅಪೆಕ್ಸ್ ಬ್ಯಾಂಕ್ ಚುನಾವಣೆಯಲ್ಲಿ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಅಧ್ಯಕ್ಷ ಸ್ಥಾನ ಕೈತಪ್ಪಿದೆ. ರವಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಈ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಬಾಲಕೃಷ್ಣ, ಹಿರಿಯ ನಾಯಕರಾಗಿರುವ ರಾಜಣ್ಣ ಅವರಿಗೆ ಪಕ್ಷದಲ್ಲಿ ಸೂಕ್ತ ಗೌರವ ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ನಾವೆಲ್ಲರೂ ಕುಳಿತು ಚರ್ಚೆ ಮಾಡಿಯೇ ತೀರ್ಮಾನ ಕೈಗೊಂಡಿದ್ದೇವೆ. ಕೆ.ಎನ್. ರಾಜಣ್ಣ ಅವರು ಈ ಹಿಂದೆ ಐದು ವರ್ಷಗಳ ಕಾಲ ಇದೇ ಬ್ಯಾಂಕ್‌ಗೆ ಅಧ್ಯಕ್ಷರಾಗಿ ಯಶಸ್ವಿಯಾಗಿ ಕೆಲಸ ಮಾಡಿದ್ದರು. ಅವರು ಪಕ್ಷದ ಹಿರಿಯ ಮುಖಂಡರು ಹಾಗೂ ಮಂತ್ರಿಯಾಗಿದ್ದವರು. ಈ ಬಾರಿ ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂಬ ಕಾರಣಕ್ಕೆ ರವಿ ಅವರಿಗೆ ಮಣೆ ಹಾಕಲಾಗಿದೆ. ರಾಜಣ್ಣ ಅವರಿಗೆ ತಕ್ಕುದಾದ ಸ್ಥಾನಮಾನ ಮತ್ತು ಗೌರವವನ್ನು ಪಕ್ಷ ಖಂಡಿತ ನೀಡಲಿದೆ” ಎಂದರು. ನಮ್ಮ ಮನೆ ಮೇಲೆ…
ಬೆಂಗಳೂರು (ಸಂಭ್ರಮಪ್ರಭ ನ್ಯೂಸ್): ರಾಜ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಶತದಿನೋತ್ಸವ ಸಂಭ್ರಮದಲ್ಲಿ ನಾಡಿನ ಜನತೆಗೆ ಹಲವು ಬಂಪರ್ ಕೊಡುಗೆಗಳನ್ನು ಘೋಷಿಸಲಾಗಿದೆ. ‘ದೃಢ ಕರ್ನಾಟಕದ ಸಂಕಲ್ಪ, ಶತಕದ ಪಥ, ಪ್ರಗತಿ ರಥ’ ಎಂಬ ಧ್ಯೇಯವಾಕ್ಯದಡಿ ನಡೆದ ಈ ವಿಶೇಷ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಜಿ. ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಈ ವೇಳೆ ರಾಜ್ಯದ ಬಡವರು, ರೈತರು, ಮಹಿಳೆಯರು ಹಾಗೂ ಯುವಜನತೆಯನ್ನು ಗುರಿಯಾಗಿಸಿಕೊಂಡು ಹಲವು ಮಹತ್ವದ ಯೋಜನೆಗಳಿಗೆ ಸರ್ಕಾರ ಚಾಲನೆ ನೀಡಿದೆ. ಬಡವರಿಗೆ 15 ಲಕ್ಷ ಉಚಿತ ಸೈಟ್ ವಿತರಣೆ (ಸೈಟ್ ಗ್ಯಾರಂಟಿ) ಸ್ವಂತ ಮನೆ ಇಲ್ಲದ ಬಡವರಿಗೆ ನೆರವಾಗಲು ಸರ್ಕಾರ ‘ಸೈಟ್ ಗ್ಯಾರಂಟಿ’ ಯೋಜನೆಯನ್ನು ಘೋಷಿಸಿದೆ. ಇದರ ಅನ್ವಯ ರಾಜ್ಯಾದ್ಯಂತ ಒಟ್ಟು 15 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST),…
ಬೆಂಗಳೂರು (ಸಂಭ್ರಮಪ್ರಭ ನ್ಯೂಸ್): ಕಾಂಗ್ರೆಸ್‌ನ ಎಸ್‌ಟಿ ವರ್ಗದ ಪ್ರಬಲ ನಾಯಕ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಸೇರಿ ಸುಮಾರು 15ಕ್ಕೂ ಹೆಚ್ಚು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದೆ. ಈ ದಾಳಿಯನ್ನು ಕೇವಲ ತಾಂತ್ರಿಕವಾಗಿ ನೋಡುವುದಕ್ಕಿಂತ, ರಾಜಕೀಯವಾಗಿ ಬಹಳ ಮಹತ್ವ ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ಸತೀಶ್ ಜಾರಕಿಹೊಳಿ ಅವರು ಬಿಜೆಪಿ ಪಾಲಿಗೆ ದೊಡ್ಡ ಆತಂಕವಾಗಲಿದ್ದಾರೆಯೇ ಎಂಬ ಪ್ರಶ್ನೆಗಳು ಇದೀಗ ಮೂಡುತ್ತಿವೆ. ಬಿಜೆಪಿಗೆ 14 ಎಸ್‌ಟಿ ಕ್ಷೇತ್ರಗಳ ಸೋಲಿನ ಭೀತಿ ಸತೀಶ್ ಜಾರಕಿಹೊಳಿ ಅವರು ಎಸ್‌ಟಿ ವರ್ಗದ ಪ್ರಬಲ ನಾಯಕರಾಗಿದ್ದು, ಕಾಂಗ್ರೆಸ್‌ನ ಎಸ್‌ಟಿ ಶಾಸಕರ ಮೇಲೆ ಸಾಕಷ್ಟು ಹಿಡಿತ ಹೊಂದಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಟಿ ವರ್ಗದ 14 ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿರಲಿಲ್ಲ; 14ಕ್ಕೆ 14 ಅಭ್ಯರ್ಥಿಗಳು ಸೋಲು ಕಂಡಿದ್ದರು. ಈ ಎಸ್‌ಟಿ ಕ್ಷೇತ್ರಗಳ ಮೇಲೆ ಕಾಂಗ್ರೆಸ್ ಹಿಡಿತ ಸಾಧಿಸಲು ಮತ್ತು ಹೆಚ್ಚು ಸ್ಥಾನ ಗೆಲ್ಲಲು ಸತೀಶ್ ಜಾರಕಿಹೊಳಿ ಅವರೇ ಪ್ರಮುಖ ಕಾರಣ.…
ಬೆಂಗಳೂರು (ಸಂಭ್ರಮಪ್ರಭ ನ್ಯೂಸ್): ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತರು ಹಾಗೂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸಿರುವ ದಾಳಿ ಸಂಪೂರ್ಣ ರಾಜಕೀಯ ಪ್ರೇರಿತವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ಸತೀಶ್ ಜಾರಕಿಹೊಳಿ ಅವರು ಕಾನೂನು ಚೌಕಟ್ಟಿನಲ್ಲಿಯೇ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಇದರಲ್ಲಿ ಮುಚ್ಚಿಡುವಂತಹದ್ದು ಯಾವುದೂ ಇಲ್ಲ. ಇ.ಡಿ ಅಧಿಕಾರಿಗಳು ಮಾಡುವ ತನಿಖೆಗೆ ಮತ್ತು ಅವರು ಕೇಳುವ ಎಲ್ಲಾ ಪ್ರಶ್ನೆಗಳಿಗೂ ಸತೀಶ್ ಅವರು ಖಂಡಿತ ಸೂಕ್ತ ಉತ್ತರ ನೀಡಲಿದ್ದಾರೆ. ಇದರಿಂದ ಯಾರು ಗಾಬರಿಯಾಗುವ ಅಗತ್ಯವಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ. ದಲಿತ ನಾಯಕನ ಬೆಳವಣಿಗೆ ಸಹಿಸುತ್ತಿಲ್ಲ “ಸತೀಶ್ ಜಾರಕಿಹೊಳಿ ಒಬ್ಬ ದಲಿತ ನಾಯಕರಾಗಿ ಎತ್ತರಕ್ಕೆ ಬೆಳೆಯುತ್ತಿರುವುದನ್ನು ಸಹಿಸಲು ಅವರಿಂದ (ಬಿಜೆಪಿ) ಆಗುತ್ತಿಲ್ಲ. ದಲಿತರನ್ನು ತುಳಿಯುವ ಉದ್ದೇಶದಿಂದಲೇ ಈ ರೀತಿ ಮಾಡಲಾಗುತ್ತಿದೆ. ಆದರೆ ಇದು ಅವರಿಗೇ ತಿರುಗೇಟು ನೀಡಲಿದೆ. ನಾಳೆ ನಮ್ಮ ಸರ್ಕಾರಕ್ಕೆ 100 ದಿನ ತುಂಬುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ಸರ್ಕಾರದ…
ಬೆಂಗಳೂರು: 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 319 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಕೆಪಿಎಸ್‌ಸಿ ಇದೇ 7ರವರೆಗೆ ವಿಸ್ತರಿಸಿದೆ. ಈ ಹುದ್ದೆಗಳಿಗೆ ನೇಮಕಾತಿಗೆ ಕೆಪಿಎಸ್‌ಸಿ ಜುಲೈ 31ರಂದು ಅಧಿಸೂಚನೆ ಹೊರಡಿಸಿ, ಆ. 1ರಿಂದ 31ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಆದರೆ, ಜಾತಿ, ಆದಾಯ ಮತ್ತು ಒಳ ಮೀಸಲಾತಿ ಪ್ರಮಾಣ ಪತ್ರಗಳ ವಿತರಣೆಗೆ ಸಂಬಂಧಿಸಿದಂತೆ ನಾಡಕಚೇರಿ ಮತ್ತು ಸೇವಾ ಸಿಂಧು ಪೋರ್ಟಲ್ ಸರ್ವರ್ ಸಮಸ್ಯೆಯಿಂದ ನಿಗದಿತ ಸಮಯಕ್ಕೆ ಪ್ರಮಾಣಪತ್ರಗಳು ಸಿಗದೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಇಂಟರ್‌ನೆಟ್ ಸಂಪರ್ಕ ಸಿಗದೆ ಶುಲ್ಕ ಪಾವತಿ ವೈಫಲ್ಯದ ಕಾರಣಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ, ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನವನ್ನು ವಿಸ್ತರಿಸುವಂತೆ ಅಭ್ಯರ್ಥಿಗಳು ಕೆಪಿಎಸ್‌ಸಿಗೆ ಮನವಿ ಸಲ್ಲಿಸಿದ್ದರು.
Subscribe to Updates
Get the latest creative news from FooBar about art, design and business.