Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಳಗಾವಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ಬರೋಬ್ಬರಿ 4500 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಶಿವಂ ಅಸೋಸಿಯೇಟ್ ಸಂಸ್ಥೆ ಮಾಲೀಕ ಶಿವಾನಂದ ನೀಲಣ್ಣನವರ್ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದು, ಆಸ್ತಿ ಜಪ್ತಿ ಪ್ರಕ್ರಿಯೆ ಆರಂಭಿಸಿದ್ದಾರೆ. ಶಿವಂ ಅಸೋಸಿಯೇಟ್ಸ್‌ನ ಮಾಲೀಕ ಶಿವಾನಂದ್ ನೀಲಣ್ಣನವರ್ ಅವರನ್ನು ಹೆಚ್ಚಿನ ತನಿಖೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಶಿವಾನಂದ್ ನೀಲಣ್ಣನವರ್, ಆರ್‌ಬಿಐ ಅಥವಾ ಸೆಬಿಯಿಂದ ಯಾವುದೇ ಅನುಮೋದನೆಗಳಿಲ್ಲದೆ, ಹೆಚ್ಚಿನ ಬಡ್ಡಿದರದ ಭರವಸೆ ನೀಡಿ ಸಾವಿರಾರು ಕೋಟಿ ರೂ. ಹಣವನ್ನು ಹೂಡಿಕೆದಾರರಿಂದ ಸಂಗ್ರಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಪೊಲೀಸ್ ಆಯುಕ್ತ ಬೊರಸೆ ಭೂಷಣ್ ಗುಲಾಬ್ರಾವ್ ಅವರು, ಶಿವಂ ಅಸೋಸಿಯೇಟ್ಸ್ ಬಗ್ಗೆ ವಿಚಾರಣೆ ನಡೆಸಲಾಗಿದೆ ಎಂದು ಹೇಳಿದರು. ವಿಚಾರಣೆಯ ಆಧಾರದ ಮೇಲೆ, ಶುಕ್ರವಾರ ಸಂಜೆ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಸಂಬಂಧ ಕೆಪಿಐಡಿ (ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ) ಕಾಯ್ದೆ ಮತ್ತು ಬಡ್ಸ್…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1,122 ಸೀಟುಗಳು ದೊರೆಯಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಶನಿವಾರ ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ನಮ್ಮ ರಾಜ್ಯ ವೈದ್ಯಕೀಯ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ. ರಾಜ್ಯಕ್ಕೆ ದೊರೆತಿರುವ ಹೆಚ್ಚುವರಿ ಸೀಟುಗಳು ಕೊಪ್ಪಳ, ಗದಗ, ಚಾಮರಾಜನಗರ, ಕಾರವಾರ, ಹಾವೇರಿ ಸೇರಿ ಇತರೆ ಜಿಲ್ಲೆಗಳಿಗೆ ದೊರೆಯಲಿದೆ ಎಂದು ತಿಳಿಸಿದರು. ಪದವಿಪೂರ್ವ ಸೀಟುಗಳಿಗೆ ಕೇಂದ್ರ ಸರ್ಕಾರದಿಂದ 495 ಕೋಟಿ ರೂ. ಅನುದಾನ ಸಿಗಲಿದೆ. ಅದೇ ರೀತಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ 541 ಕೋಟಿ ರೂಪಾಯಿ ಅನುದಾನ ಸಿಗಲಿದೆ ಎಂದರು. ಕೇಂದ್ರ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಮೇ 15ರಂದು ಅಂತಿಮ ಮುದ್ರೆ ಹಾಕಿದೆ. ಒಟ್ಟಾರೆಯಾಗಿ ರಾಜ್ಯಕ್ಕೆ 1,090 ಕೋಟಿ ರೂ. ದೊರೆಯಲಿದೆ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಸಿದೆ. ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಜೋರು ಮಳೆಯಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಮಧ್ಯ ಪ್ರಾಚ್ಯ ಸಂಘರ್ಷ ಜಗತ್ತಿನಾದ್ಯಂತ ವ್ಯಾಪಕ ಆತಂಕಕ್ಕೆ ಕಾರಣವಾಗಿದ್ದು, ಜಾಗತಿಕ ಇಂಧನ ಸಂಕಷ್ಟ ತೀವ್ರಗೊಳ್ಳುತ್ತಿರುವಂತೆಯೇ ಪರಿಸ್ಥಿತಿ ಬದಲಾಗದಿದ್ದರೆ ಭಾರತಕ್ಕೆ ಮತ್ತೆ ಭಾರಿ ಬಡತನ ಮರಳಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಜಾಗತಿಕ ನಾಯಕರು, ಕೈಗಾರಿಕಾ ತಜ್ಞರು ಭಾಗವಹಿಸಿದ್ದ ಅಂತರರಾಷ್ಟ್ರೀಯ ಇಂಧನ ಮತ್ತು ಆರ್ಥಿಕ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಜಾಗತಿಕ ಇಂಧನ ಸಂಕಷ್ಟ ತೀವ್ರಗೊಳ್ಳುತ್ತಿರುವ ಬಗ್ಗೆ ಗಂಭೀರ ಆತಂಕ ವ್ಯಕ್ತಪಡಿಸಿದರು. ‘ಜಾಗತಿಕ ರಾಜಕೀಯ ಉದ್ವಿಗ್ನತೆಗಳು ಮತ್ತು ಇಂಧನ ಸರಬರಾಜು ಸರಪಳಿಯ ವ್ಯತ್ಯಯಗಳು ವಿಶ್ವದ ಆರ್ಥಿಕತೆಗಳ ಮೇಲೆ, ವಿಶೇಷವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ, ದೊಡ್ಡ ಪರಿಣಾಮ ಬೀರುತ್ತವೆ ಎಂದು ಅವರು ಎಚ್ಚರಿಸಿದರು. ಅಂತೆಯೇ ಎಲ್ಲರಿಗೂ ಸ್ಥಿರ, ಕೈಗೆಟುಕುವ ಮತ್ತು ಶಾಶ್ವತ ಇಂಧನ ಲಭ್ಯತೆ ಖಚಿತಪಡಿಸಲು ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕೆಂದು ಒತ್ತಿಹೇಳಿದರು. ದಶಕಗಳ ಪರಿಶ್ರಮ ವ್ಯರ್ಥ, ಬಡತನ ಮರಳಿಬಹುದು ‘ಸಂಘರ್ಷಗಳು, ಕಚ್ಚಾ ತೈಲದ ಬೆಲೆ ಏರಿಕೆ, ಸರಬರಾಜಿನ ವ್ಯತ್ಯಯಗಳು ಮತ್ತು ಹೆಚ್ಚುತ್ತಿರುವ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಳಗಾವಿ: ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು “ಮುಂದಿನ ಸಿಎಂ” ಎಂದು ಬಿಂಬಿಸುವ ಹೋರ್ಡಿಂಗ್ ಬೆಳಗಾವಿ ನಗರದ ಹೃದಯಭಾಗದಲ್ಲಿರುವ ಚೆನ್ನಮ್ಮ ವೃತ್ತದಲ್ಲಿ ಕಾಣಿಸಿಕೊಂಡಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮತ್ತೆ ಆರಂಭವಾಗುವಂತೆ ಮಾಡಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರು ಡಿಕೆ ಶಿವಕುಮಾರ್ ಜನ್ಮದಿನದ ಶುಭಾಶಯದ ಹೆಸರಿನಲ್ಲಿ ಈ ಬೃಹತ್ ಬ್ಯಾನರ್’ವೊಂದನ್ನು ಹಾಕಿಸಿದ್ದಾರೆ. ಆದರೆ ಬ್ಯಾನರ್‌ನಲ್ಲಿ “Next Chief Minister” ಎಂಬ ಪದ ಬಳಕೆಯಾಗಿರುವುದು ಕಾಂಗ್ರೆಸ್ ವಲಯದಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಂದುವರಿಸಬೇಕು ಎಂಬ ಒತ್ತಾಯ ಹಲವು ಕಾಂಗ್ರೆಸ್ ಶಾಸಕರಿಂದ ಕೇಳಿಬರುತ್ತಿರುವ ಸಮಯದಲ್ಲೇ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತು ಹಲವು ಬಾರಿ ಊಹಾಪೋಹಗಳು ಕೇಳಿಬಂದಿದ್ದವು. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಬಿಜೆಪಿ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ವಿದೇಶ ಪ್ರಯಾಣ ವೆಚ್ಚವನ್ನು ಪ್ರಶ್ನಿಸಿದ ನಂತರ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಸರಿ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಮೊದಲು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಫಂಡಿಂಗ್ ಬಗ್ಗೆ ಆಡಿಟ್ ಮಾಡಿಸಬೇಕು ಎಂದು ಆಗ್ರಹಿಸಿದ್ದಾರೆ. ಆರ್ ಎಸ್ಎಸ್ ಮುಖಂಡರ ದಿನನಿತ್ಯದ ದೇಶೀಯ ಹಾಗೂ ಅಂತರರಾಷ್ಟ್ರೀಯ ಪ್ರಯಾಣದ ಹಣಕಾಸಿನ ಮೂಲ ಯಾವುದು ಎಂದು ಬಹಿರಂಗಪಡಿಸಬೇಕು. ಆರ್‌ಎಸ್‌ಎಸ್ ಮತ್ತು ಅದರ 2,500 ಕ್ಕೂ ಹೆಚ್ಚು ಅಂಗಸಂಸ್ಥೆಗಳ “ಸಾರ್ವಜನಿಕ ಲೆಕ್ಕಪರಿಶೋಧನೆ” ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಪ್ರವೇಶಿಸುವ ಮೊದಲು ಅವರ ಸ್ವಂತ ಪ್ರಯಾಣದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. IT, ED ರಾಹುಲ್ ಗಾಂಧಿ ಮೇಲೆ ಬಿಟ್ಟಿದ್ದೀರಾ. ಮಾಹಿತಿ ತಗೊಳ್ಳಿ. ರಾಹುಲ್ ಗಾಂಧಿ ಕಾನೂನು ಉಲ್ಲಂಘನೆ ಮಾಡಿದ್ರೆ ಯಾಕೆ ಬಿಟ್ಟಿದ್ದೀರಾ? ಒಳಗೆ ಹಾಕಿಬಿಡಿ. 13 ವರ್ಷದಿಂದ ಅದೇ ಹಾಡು, ಅದೇ ಟೋಪಿ ಹಾಕ್ತೀರಾ.…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಕೇರಳದಲ್ಲಿ ತೀವ್ರ ಲಾಬಿ ಮತ್ತು ಆಂತರಿಕ ಒತ್ತಡದ ನಡುವೆ ಸಿಎಂ ಆಯ್ಕೆ ಕಗ್ಗಂಟನ್ನು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಈಗ ನೆರೆಯ ಕರ್ನಾಟಕ ಮುಂದಿನ ಸವಾಲು ಆಗಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವಾದ ಮೇ 15 ರಂದು ಮುಖ್ಯಮಂತ್ರಿ ಪಟ್ಟ ಸಿಗುವ ವಿಶ್ವಾಸದಲ್ಲಿ ಅವರ ಅಭಿಮಾನಿಗಳಿದ್ದರು. ಆದರೆ, ಈ ನಿರೀಕ್ಷೆಯೂ ಹುಸಿಯಾಗಿದ್ದು, ಯಾವಾಗ ಸಿಡಿದ್ದೇಳುತ್ತಾರೋ ಗೊತ್ತಿಲ್ಲ. ನವೆಂಬರ್‌ನಲ್ಲಿ ಪ್ರಮುಖ ಚರ್ಚೆಯೊಂದು ನಡೆದಿತ್ತು. ಸಂಭಾವ್ಯ ನಾಯಕತ್ವ ಬದಲಾವಣೆ ಬಗ್ಗೆಗಿನ ಊಹಾಪೋಹಗಳು ರಾಜ್ಯ ಘಟಕದಲ್ಲಿ ಅನಿಶ್ಚಿತತೆಗೆ ಕಾರಣವಾಗಿತ್ತು. ಆ ಸಮಯದಲ್ಲಿ, ಕಾಂಗ್ರೆಸ್ ಹೈಕಮಾಂಡ್ ನಿರ್ಣಾಯಕ ಪರಿಹಾರಕ್ಕೆ ಬರದೆ ಬಿಕ್ಕಟ್ಟನ್ನು ತಡೆಯುವಲ್ಲಿ ಯಶಸ್ವಿಯಾಗಿತ್ತು. ಈಗ ಕೇರಳದ ಸಮಸ್ಯೆ ಹೆಚ್ಚಾಗಿ ಇತ್ಯರ್ಥವಾಗಿರುವುದರಿಂದ ಪಕ್ಷದೊಳಗಿನ ಗಮನವು ಕರ್ನಾಟಕದತ್ತ ತಿರುಗಿದೆ. ಇಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಗದ್ದುಗೆ ಗುದ್ದಾಟ ಮತ್ತೊಮ್ಮೆ ತೀವ್ರಗೊಳ್ಳುವ ನಿರೀಕ್ಷೆಯಿದೆ.
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಹಠಾತ್ ಮರಣದ ಬಳಿಕ ಮತ್ತೆ ಹೃದಯಾಘಾತದ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಿದ್ದು, ಇದೇ ಸಂದರ್ಭದಲ್ಲೇ ವಾಟ್ಸಪ್ ಮತ್ತು ರೀಲ್ಸ್ ಗಳಲ್ಲಿ ಈ ಬಗ್ಗೆ ಸಾಕಷ್ಟು ವೈರಲ್ ಮಾಹಿತಿಗಳು ಹರಿದಾಡುತ್ತಿವೆ. ಆನ್‌ಲೈನ್‌ನಲ್ಲಿ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಗಳು ಹರಿದಾಡುತ್ತಿದ್ದು, ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಕೆಲ ಸಲಹೆಗಳನ್ನೂ ನೀಡಲಾಗುತ್ತಿದೆ. ಈ ಪಟ್ಟಿಗೆ “ಬನಕೋಮಾ ಓನಾಕೋ” ಎಂಬ ಜಪಾನೀಸ್ ಹೃದಯ ತಜ್ಞರ ಸಲಹೆ ಕೂಡ ಸೇರಿದ್ದು, ಹೀಗೆ ಆನ್ಲೈನ್ ನಲ್ಲಿ ಹರಿದಾಡುತ್ತಿರುವ ಈ ಸಂದೇಶಗಳು ತಪ್ಪು ದಾರಿ ಹಿಡಿಸುವಂತಿದ್ದು, ವೈದ್ಯಕೀಯವಾಗಿ ದೃಢೀಕರಿಸಲ್ಪಟ್ಟಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. “ಬನಕೋಮಾ ಓನಾಕೋ” ಎಂಬ ಜಪಾನೀಸ್ ಹೃದಯ ತಜ್ಞರು ನೀಡಿದ್ದಾರೆ ಎಂದು ಹೇಳಲಾದ ಹೇಳಿಕೆಗಳು ಇದೀಗ ಆನ್ಲೈನ್ ನಲ್ಲಿ ವ್ಯಾಪಕ ವೈರಲ್ ಆಗುತ್ತಿದ್ದು, ಅವರೇ ಈ ಹೇಳಿಕೆಗಳನ್ನು ನೀಡಿದ್ದಾರೆ ಎಂಬುದಕ್ಕೆ ವಿಶ್ವಾಸಾರ್ಹ ಸಾಕ್ಷ್ಯಗಳಿಲ್ಲ. ಏನದು ಬನಕೋಮಾ ಓನಾಕೋ ಅವರ ಸಲಹೆಗಳು? ಪ್ರಸ್ತುತ ವೈರಲ್ ಆಗಿರುವ ಸಂದೇಶಗಳಲ್ಲಿ ಬೆಳಗ್ಗೆ ಎದ್ದ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಪರಿಣಾಮ ಜಾಗತಿಕ ಕಚ್ಚಾ ತೈಲದ ಬೆಲೆ ಏರಿಕೆ ಮತ್ತು ಪೂರೈಕೆ ಸಂಕಷ್ಟದ ನಡುವೆಯೇ ಕೇಂದ್ರ ಸರ್ಕಾರ ಇಂದು ಶುಕ್ರವಾರ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಹೆಚ್ಚಿಸಿದೆ. ಈ ದರ ಏರಿಕೆಯಿಂದ ಕೆಲವು ನಗರಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 3 ರೂಪಾಯಿಯಿಂದ 3 ರೂಪಾಯಿ 46ರವರೆಗೆ ಏರಿಕೆಯಾದರೆ, ಡೀಸೆಲ್ ದರವು ಪ್ರದೇಶಾನುಸಾರ 3 ರೂಪಾಯಿಯಿಂದ 3 ರೂಪಾಯಿ 56 ಪೈಸೆಯವರೆಗೆ ಹೆಚ್ಚಾಗಿದೆ. ಉತ್ಪಾದನಾ ವೆಚ್ಚ ಏರಿಕೆಯಿಂದ ಸರ್ಕಾರಿ ತೈಲ ಕಂಪನಿಗಳು ಭಾರೀ ನಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಈ ದರ ಪರಿಷ್ಕರಣೆ ಮಾಡಲಾಗಿದೆ. 2022ರ ಮೇ ತಿಂಗಳಿನಿಂದ ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಬಹುತೇಕ ಸ್ಥಿರವಾಗಿದ್ದವು. ಇದೀಗ ಇದೇ ಮೊದಲ ದೊಡ್ಡ ಮಟ್ಟದ ದರ ಏರಿಕೆಯಾಗಿದೆ. ಕರ್ನಾಟಕ ರಾಜಧಾನಿ ಬೆಂಗಳೂರು ನಿವಾಸಿಗಳು ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ 21 ಪೈಸೆ ಹೆಚ್ಚುವರಿ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ವಾಷಿಂಗ್ಟನ್: ಇರಾನ್ ವಿರುದ್ಧ ಕೆಂಡಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ರಕ್ಷಣಾ ಪಡೆಗಳ ಜಂಟಿ ಮುಖ್ಯಸ್ಥ ಡಾನ್ ಕೇನ್ ಅವರಿಗೆ ಟೆಹ್ರಾನ್ ಮೇಲೆ ಪರಮಾಣು ಬಾಂಬ್ ಹಾಕಬಹುದೇ ಎಂದು ಕೇಳಿದ್ದರು. ಆದರೆ ಡಾನ್ ಕೇನ್ ಇದಕ್ಕೆ ನಿರಾಕರಿಸಿದರು ಎಂದು ಶುಕ್ರವಾರ ಸಿಐಎ ಮಾಜಿ ವಿಶ್ಲೇಷಕ ಲ್ಯಾರಿ ಜಾನ್ಸನ್ ಅವರು ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಇರಾನ್ ವಿರುದ್ಧದ ಯುದ್ಧದ ಕುರಿತು ANI ಜತೆ ಮಾತನಾಡಿದ ಲ್ಯಾರಿ ಜಾನ್ಸನ್ ಅವರು, ಟ್ರಂಪ್ ಪರಮಾಣು ಬಾಂಬ್ ಬಳಸಲು ಮುಂದಾಗಿದ್ದರು ಎಂದು ಹೇಳಿದ್ದಾರೆ. “ಅಪಾಯಕಾರಿ ಅಸ್ತ್ರ ಬಳಸಲು ನಿರಾಕರಿಸಲಾಗಿದೆ ಮತ್ತು ಅದು ಉತ್ತಮ ನಿರ್ಧಾರ. ಆದರೆ ನಾನು ಮತ್ತಷ್ಟು ಪರಿಶೀಲಿಸಿದಾಗ, ಅಧ್ಯಕ್ಷರು ಸಂಕೇತಗಳನ್ನು ಹೊಂದಿರುವುದರಿಂದ ಅದು ಸಂಕೇತಗಳ ಬಗ್ಗೆ ಅಷ್ಟೊಂದು ಹೋರಾಟ ನಡೆಯಲಿಲ್ಲ. ಟ್ರಂಪ್ ಗಂಭೀರವಾಗಿ ಮನರಂಜನೆ ನೀಡುತ್ತಿದ್ದರು ಮತ್ತು ಪರಮಾಣು ಶಸ್ತ್ರಾಸ್ತ್ರದ ಬಳಕೆಯ ಬಗ್ಗೆ ಕೇಳುತ್ತಿದ್ದರು. ಆದರೆ ಜನರಲ್ ಕೇನ್, “ಖಂಡಿತ ಇಲ್ಲ ಎಂದು ತುಂಬಾ ದೃಢವಾಗಿ ಹೇಳಿದ್ದರು.…
Subscribe to Updates
Get the latest creative news from FooBar about art, design and business.