Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಬೆಂಗಳೂರು: ಮೂರನೇ ಮಹಾಯುದ್ಧದ(3rd World War) ಸಾಧ್ಯತೆ ಇನ್ನು ಮುಂದೆ ದೂರವಿಲ್ಲ. ಹೆಚ್ಚು ಸಂಭವನೀಯವಾಗಿದೆ ಎಂದು ಬೆಂಗಳೂರು ಮೂಲದ ಸಿನರ್ಜಿಯಾ ಫೌಂಡೇಶನ್ ತನ್ನ ‘ಗ್ಲೋಬಲ್ ಫ್ಯೂಚರ್ಸ್ 2035’ ವರದಿಯನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ ನಡೆದ ದುಂಡು ಮೇಜಿನ ಚರ್ಚೆಯಲ್ಲಿ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಎಂ.ಕೆ. ನಾರಾಯಣನ್ ಹೇಳಿದ್ದಾರೆ. ತಾಂತ್ರಿಕ ಮಿಲಿಟರೀಕರಣ, ಸೈಬರ್ ವಾರ್ ಮತ್ತು ಪ್ರಮುಖ ಶಕ್ತಿಗಳ ನಡುವಿನ ಹೊಂದಾಣಿಕೆ, ಸಂಯಮದ ಕೊರತೆ ಇದಕ್ಕೆ ಕಾರಣ ಎಂದು ನಾರಾಯಣನ್ ಹೇಳಿದ್ದಾರೆ. ಜಾಗತಿಕ ಕ್ರಮಗಳು ಪ್ರಕ್ಷುಬ್ಧವಾಗುತ್ತಿರುವ ಇತ್ತೀಚಿನ ದಿನಗಳಲ್ಲಿ, ವಿಶ್ವ ಕ್ರಮದಲ್ಲಿ ವಿಶ್ವಾಸಾರ್ಹ ಚೌಕಟ್ಟಿನಂತೆ ಅಲಿಪ್ತತೆಯ ಪುನರುಜ್ಜೀವನವನ್ನು ನಾರಾಯಣನ್ ಪ್ರತಿಪಾದಿಸಿದ್ದಾರೆ. 1965 ಮತ್ತು 1971 ರ ಯುದ್ಧಗಳ ನಂತರ ಭಾರತವು ಪಶ್ಚಿಮ ಪಾಕಿಸ್ತಾನವನ್ನು ವಿಭಜಿಸುವ ಅವಕಾಶವನ್ನು ಕಳೆದುಕೊಂಡಿತು. ಪಾಕಿಸ್ತಾನದೊಂದಿಗೆ ವ್ಯವಹರಿಸದೆ ಭಯೋತ್ಪಾದನೆಯನ್ನು ನಿಭಾಯಿಸುವುದು ಕಷ್ಟಕರವಾಗಿರುತ್ತದೆ ಎಂದು ಅವರು ಈ ಹಿಂದೆ ಹೇಳಿದ್ದರು. ದುಂಡು ಮೇಜಿನ ಸಭೆಯು ಹಿರಿಯ ರಾಜತಾಂತ್ರಿಕರು, ನೀತಿ ನಿರೂಪಕರು, ಹಿರಿಯ ಭಾರತೀಯ ಸೇನಾ ಅಧಿಕಾರಿಗಳು, ಕಾರ್ಯತಂತ್ರದ…
Updated By: Priyalachhi ನವದೆಹಲಿ: ಭಾರತೀಯ ಸೇನೆಯ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸೇನೆಯನ್ನು ರಾಜಕೀಯಕ್ಕೆ ಎಳೆಯಬೇಡಿ ಎಂದು ಎಚ್ಚರಿಸಿದ್ದಾರೆ. ಖಾಸಗಿ ಸುದ್ದಿವಾಹಿನಿಯೊಂದರ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ʻಶೇ. 10 ಇರುವ ಜನರು ಸೇನೆಯನ್ನ ನಿಯಂತ್ರಿಸುತ್ತಿದ್ದಾರೆʼ ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನ ತೀವ್ರವಾಗಿ ಖಂಡಿಸಿದರು. ಇದು ರಾಹುಲ್ ಗಾಂಧಿ ಅವರ ಬೇಜವಾಬ್ದಾರಿ ತನದ ಹೇಳಿಕೆ. ಜಾತಿ ರಾಜಕೀಯಕ್ಕೆ ಸೇನೆಯನ್ನು ಎಳೆದು ತರುತ್ತಿರುವುದು ವಿಭಜಿಸುವ ರಾಜಕೀಯ ಕುತಂತ್ರ ಎಂದು ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಅಭಿವೃದ್ಧಿ ಮೂಲಕ ಮತ್ತು ತಮ್ಮ ಕೆಲಸಗಳ ಮೂಲಕ ಸಾರ್ವಜನಿಕರ ನಂಬಿಕೆಯನ್ನು ಗಳಿಸಲು ಸಾಧ್ಯವಿಲ್ಲ. ಅದಕ್ಕಾಗಿ ಜನರ ದಾರಿ ತಪ್ಪಿಸುವ, ಆಧಾರ ರಹಿತ ಹೇಳಿಕೆಗಳನ್ನ ನೀಡುವುದು ಅಭ್ಯಾಸ ಆಗಿಬಿಟ್ಟಿದೆ. ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಆದ್ರೆ ಆರೋಗ್ಯಕರ ರಾಜಕೀಯ ಎಂದಿಗೂ ದಾರಿ ತಪ್ಪಲ್ಲ ಎಂದು ಕುಟುಕಿದರು. ಸಶಸ್ತ್ರ ಪಡೆಗಳಲ್ಲಿ ಎಲ್ಲಾ, ಜಾತಿ, ಧರ್ಮ, ಪಂಗಡಗಳ…
Updated By: Priyalachhi ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿರುವ ಸರ್ಕಾರದ ತೀರ್ಮಾನವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಕಬ್ಬು ಬೆಳೆಗಾರರು ನಡೆಸಿದ ಸಂಘಟಿತ ಹೋರಾಟಕ್ಕೆ ಮಣಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಪಡಿಸಿ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದಿದ್ದಾರೆ. ಆದರೆ ನೆರೆ-ಬರ ಪರಿಹಾರ ಇರಲಿ, ಗೊಬ್ಬರ ವಿತರಣೆ ಇರಲಿ, ಖರೀದಿ ಕೇಂದ್ರಗಳ ತೆರೆಯುವಿಕೆ ಇರಲಿ, ಈ ಸರ್ಕಾರ ಬಂದಾಗಿನಿಂದ ಕಳೆದ ಎರಡೂವರೆ ವರ್ಷಗಳಲ್ಲಿ ರೈತರಿಗೆ ಸಂಬಂಧಪಟ್ಟ ಬಹುತೇಕ ನಿರ್ಧಾರಗಳು ಘೋಷಣೆ, ಭರವಸೆಗಳಿಗೆ ಮಾತ್ರ ಸೀಮಿತವಾಗಿರುವುದರಿಂದ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನೂ ಪ್ರಾಮಾಣಿಕವಾಗಿ ಜಾರಿ ಮಾಡುವ ಬಗ್ಗೆ ನಮಗೆ ಅನುಮಾನಗಳಿವೆ. ಕಬ್ಬು ಕಟಾವು, ಲೋಡಿಂಗ್, ಸಾಗಣೆ ಮತ್ತು ಅನ್‌ಲೋಡಿಂಗ್ ಸಂದರ್ಭದಲ್ಲಿ ರೈತರಿಗೆ ಆಗುವ ಸುಲಿಗೆ ಮತ್ತು ವಂಚನೆ, ಸಕ್ಕರೆ ಕಾರ್ಖಾನೆಗಳಲ್ಲಿ ತೂಕ ಹಾಕುವ ಸಂದರ್ಭದಲ್ಲಿ…
Updated By: Priyalachhi ಪಂಚಾಂಗ: 08-11-2025, ಶನಿವಾರ ಸಂವತ್ಸರ : ವಿಶ್ವವಸು ಆಯನ: ದಕ್ಷಿಣಾಯಣ ಮಾಸ : ಕಾರ್ತಿಕ ಪಕ್ಷ : ಕೃಷ್ಣ ತಿಥಿ : ತೃತೀಯಾ ನಕ್ಷತ್ರ : ಮೃಗಶಿರ ಸೂರ್ಯೋದಯ : ಮುಂಜಾನೆ 06:14 ಗಂಟೆಗೆ ಅಮೃತ ಕಾಲ : ಬೆಳಗ್ಗೆ 06:14 ರಿಂದ 07:41 ಗಂಟೆವರೆಗೆ ದುರ್ಮುಹೂರ್ತ : ಬೆಳಗ್ಗೆ 07:50 ರಿಂದ 08:38 ಗಂಟೆತನಕ ರಾಹುಕಾಲ : ಬೆಳಗ್ಗೆ 09:08 ರಿಂದ 10:34 ಗಂಟೆವರೆಗೆ ಸೂರ್ಯಾಸ್ತ : ಸಂಜೆ 05:48 ಗಂಟೆಗೆ ರಾಶಿ ಭವಿಷ್ಯ: ಮೇಷ : ನಿಮ್ಮ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನೀವು ಸಂಪತ್ತು ಮತ್ತು ಆನಂದ ತಂದುಕೊಡುತ್ತೀರಿ. ಯಾವುದೂ ಉಚಿತವಾಗಿ ದೊರೆಯುವುದಿಲ್ಲ ಮತ್ತು ನೀವು ಸಣ್ಣದಾದ ಅದೃಷ್ಟಕ್ಕಾಗಿ ಹೋಗಬೇಕಾಗುತ್ತದೆ, ಆದರೆ ಅದು ಒಳ್ಳೆಯದೇ. ಈಗಾಗಲೇ ಕಮಿಟ್ ಆಗಿರುವವರು ತಮ್ಮ ಪ್ರೀತಿಪಾತ್ರರೊಂದಿಗೆ ಉತ್ಸಾಹದ ಕ್ಷಣಗಳನ್ನು ಹಂಚಿಕೊಳ್ಳುತ್ತಾರೆ. ಇನ್ನೂ ಕಮಿಟ್ ಆಗದೇ ಇರುವವರು ಯಾರೋ ಒಬ್ಬರ ಪ್ರೀತಿಯಲ್ಲಿ ಬೀಳುತ್ತಾರೆ. ವೃಷಭ : ಈ ದಿನ ಸಂಪತ್ತಿನ ವಿಷಯದಲ್ಲಿ ಸುವರ್ಣಾವಕಾಶ…
Updated By: Priyalachhi ಬೆಂಗಳೂರು: ರೈತರ ಬೇಡಿಕೆಗೆ ತಕ್ಕಂತೆ ಹಣ ಕೊಡುವುದು ನಮಗೆ ಕಷ್ಟ ಆಗುತ್ತದೆ. ರಾಜ್ಯ ಸರ್ಕಾರ ನೆರವು ನೀಡಲಿ ಎಂದು ಸಕ್ಕರೆ ಕಾರ್ಖಾನೆ ಮಾಲೀಕರು ತಮ್ಮ ಕಷ್ಟ ಹೇಳಿಕೊಂಡಿದ್ದಾರೆ. ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮೊದಲ ಸುತ್ತಿನ ಸಭೆ ನಡೆಸಿದರು. ಈ ವೇಳೆ ಕಾರ್ಖಾನೆ ಮಾಲೀಕರು ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದಾರೆ. “ಸಕ್ಕರೆ ಕಾರ್ಖಾನೆ ನಡೆಸುವುದು ಬಹಳ ಕ್ಲಿಷ್ಟಕರವಾಗಿದೆ. ಸಕ್ಕರೆ, ಎಥೆನಾಲ್, ವಿದ್ಯುತ್ ಉತ್ಪಾದನೆ ಮಾಡಿದರೂ ನಾವು ಸಂಕಷ್ಟದಲ್ಲಿದ್ದೇವೆ. ಜೊತೆಗೆ ರೈತರಿಂದ ಕೆಟ್ಟ ಬೈಗುಳ ತಿನ್ನುತ್ತಿದ್ದೇವೆ. ನಾವು ಉದ್ಯೋಗ ಸೃಷ್ಟಿಸಿ ಗ್ರಾಮೀಣ ಆರ್ಥಿಕತೆಗೆ ಅಪಾರ ಕೊಡುಗೆ ನೀಡುತ್ತಿದ್ದೇವೆ. ಆದರೂ ಕೇಂದ್ರದ ನೀತಿಗಳಿಂದಲೂ ನಮಗೆ ನಷ್ಟ ಆಗುತ್ತಿದೆ. ರೈತರಿಂದಲೂ ಒತ್ತಡ ಇದೆ. ಹೀಗಾದಾಗ ನಾವು ಕಾರ್ಖಾನೆ ನಡೆಸುವುದೇ ಕಷ್ಟ ಆಗ್ತಿದೆ. ಬೇಕಿದ್ದರೆ ಸರ್ಕಾರವೇ ನಮ್ಮ ಕಾರ್ಖಾನೆಗಳನ್ನು ನಡೆಸಲಿ ಎಂದು ಕಾರ್ಖಾನೆ ಮಾಲೀಕರು ಹೇಳಿದರು. ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ: ಸಿಎಂ ಸಿದ್ದರಾಮಯ್ಯ ಮಾತನಾಡಿ,…
Updated By: Priyalachhi ಮೈಸೂರು: ಕಾಡು ಹಂದಿ ದಾಳಿಗೆ ರೈತನೊಬ್ಬ ಬಲಿಯಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದಲ್ಲಿ ನಡೆದಿದೆ. ಹುಲ್ಲಹಳ್ಳಿ ಹೋಬಳಿಯ ಹಾಡ್ಯ ಗ್ರಾಮದ ರೈತ ರಂಗಸ್ವಾಮಿ (35) ಕಾಡು ಹಂದಿ ದಾಳಿಗೆ ಬಲಿಯಾಗಿರುವ ಮೃತ ದುರ್ದೈವಿ. ಆನೆ, ಚಿರತೆ, ಹುಲಿ ಕಾಟದ ಬಳಿಕ ಈಗ ಹಂದಿ ಕಾಟ ಹೆಚ್ಚಾಗಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಹಾಡ್ಯ ಗ್ರಾಮದಿಂದ ಬೈಕಿನಲ್ಲಿ ಹುರ ಎಂಬ ಗ್ರಾಮಕ್ಕೆ ಹೋಗಿ, ವಾಪಸ್ ಸ್ವಗ್ರಾಮಕ್ಕೆ ಬರುತ್ತಿರುವ ಸಂದರ್ಭದಲ್ಲಿ ರಸ್ತೆ ಬದಿಯ ಪೊದೆಯಲ್ಲಿ ಅಡಗಿದ್ದ ಕಾಡುಹಂದಿ ಬೈಕ್ನಲ್ಲಿ ಬರುತ್ತಿದ್ದ ರಂಗಸ್ವಾಮಿ ಮೇಲೆ ಏಕಾಏಕಿ ದಾಳಿ ಮಾಡಿದೆ. ಕಿರುಚಾಟದ ಶಬ್ದ ಕೇಳಿ ಅಕ್ಕಪಕ್ಕದವರು ಸ್ಥಳಕ್ಕೆ ಆಗಮಿಸಿ ನೋಡಿದಾಗ, ಕಾಡು ಹಂದಿ ಅರೆಬರೆ ತಿವಿದು, ಗಂಭೀರ ಗಾಯಗೊಳಿಸುತ್ತಿದ್ದು, ಸಾರ್ವಜನಿಕರನ್ನು ಕಂಡು ಪರಾರಿಯಾಗಿದೆ. ತಕ್ಷಣವೇ ರಂಗಸ್ವಾಮಿಯನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು…
Updated By: Priyalachhi ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಬಿಡದಿಯಲ್ಲಿ ಸ್ಥಾಪಿಸಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕವು ಮಾಲಿನ್ಯ ನಿಯಂತ್ರಣ ಮಂಡಳಿಯ ಎಲ್ಲ ನಿಯಮಗಳನ್ನು ಪಾಲಿಸುತ್ತಿದ್ದು, ಘಟಕದಿಂದ ಪರಿಸರಕ್ಕೆ ಯಾವುದೇ ಹಾನಿ ಇಲ್ಲ ಎಂದು ನಿಗಮ ಸ್ಪಷ್ಟಪಡಿಸಿದೆ. ಪರಿಸರ ಮಾಲಿನ್ಯಕಾರಕಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ಸ್ಥಾವರ ವಿಫಲವಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣಕ್ಕೆ ಸಲ್ಲಿಸಿದೆ ಎನ್ನಲಾದ ವರದಿಗೆ ಸಂಬಂಧಿಸಿದಂತೆ, ‘ದಿ ಫ್ರೈಡೇಸ್‌ಫಾರ್‌ಫ್ಯೂಚರ್ – ಕರ್ನಾಟಕ’ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಗೆ ಸ್ಪಷ್ಟೀಕರಣ ನೀಡಿರುವ ಕೆಪಿಸಿಎಲ್, ಘಟಕದಲ್ಲಿ ಪರಿಸರ ನಿಯಮಗಳನ್ನು ಪಾಲಿಸುವ ಜೊತೆಗೆ ಸಮರ್ಪಕವಾಗಿ ಮೇಲ್ವಿಚಾರಣೆ ಮಾಡುತ್ತಿರುವುದಾಗಿ ತಿಳಿಸಿದೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಬಿಡದಿಯ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಸ್ಥಾವರದ ಕಾರ್ಯಾರಂಭಕ್ಕೆ 2024ರ ಜುಲೈ 20ರಂದು ಅನುಮತಿ ನೀಡಿದ್ದು, ಅದಾದ ಬಳಿಕವೇ ಘಟಕದ ಕಾರ್ಯಾಚರಣೆ ಆರಂಭಿಸಲಾಗಿದೆ. ಘನತ್ಯಾಜ್ಯ ನಿರ್ವಹಣಾ ನಿಯಮಗಳು-2016ರ ಅಡಿಯಲ್ಲಿ ಘಟಕಕ್ಕೆ ಅನುಮತಿ ಪಡೆಯುವ ಬಗ್ಗೆ ಎಲ್ಲ ಅಗತ್ಯ ದಾಖಲೆಗಳೊಂದಿಗೆ ಮಾಲಿನ್ಯ ನಿಯಂತ್ರಣ ಮಂಡಳಿಗೆ…
Updated By: Priyalachhi ಭಟಿಂಡಾ (ಪಂಜಾಬ್): ವೇಗವಾಗಿ ಹವಾಮಾನ ಬದಲಾಗುತ್ತಿರುವ ಹಿನ್ನೆಲೆ ಜನರು ವಿವಿಧ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಲು ಕಾರಣವಾಗುತ್ತಿದೆ. ಅದರಲ್ಲೂ ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾ ಪ್ರಕರಣಗಳು ವೇಗವಾಗಿ ಹರಡುತ್ತಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾದಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆ ನಿರಂತರವಾಗಿ ಹೆಚ್ಚಾಗುತ್ತಿವೆ. ಡಾ. ಉಷಾ ಗೋಯಲ್ ಪ್ರತಿಕ್ರಿಯಿಸಿ, ”ಡೆಂಗ್ಯೂ ಇನ್ನು ಮುಂದೆ ಸಾಮಾನ್ಯ ರೋಗವಲ್ಲ, ಆರೋಗ್ಯ ಇಲಾಖೆಯು ಡೆಂಗ್ಯೂ ತಡೆಗಟ್ಟುವಿಕೆಯ ಬಗ್ಗೆ ಜನರಿಗೆ ಅರಿವು ಮೂಡಿಸುತ್ತಿದೆ. ಇದರೊಂದಿಗೆ ಮನೆಯ ಒಳಗೆ ಅಥವಾ ಹೊರಗೆ ಎಲ್ಲಿಯೂ ನೀರು ನಿಲ್ಲಲು ಬಿಡಬೇಡಿ ಎಂದು ಜನರಿಗೆ ಮನವಿ ಮಾಡಲಾಗುತ್ತಿದೆ. ಯಾವುದೇ ಪಾತ್ರೆಯಲ್ಲಿ ನೀರು ಇದ್ದರೆ ಆ ಪಾತ್ರೆಯನ್ನು ತೊಳೆದು ಚೆನ್ನಾಗಿ ಸ್ವಚ್ಛಗೊಳಿಸಿ. ಡೆಂಗ್ಯೂ ತಡೆಗಟ್ಟಲು ಆರೋಗ್ಯ ಇಲಾಖೆಯು ಸರ್ಕಾರಿ ಹಾಗೂ ಸರ್ಕಾರೇತರ ಕಟ್ಟಡಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದೆ. ಜೊತೆಗೆ ಕೊಳಗಳಲ್ಲಿ ಸೊಳ್ಳೆ ನಿವಾರಕ ಪೌಡರ್ ಸಿಂಪಡಣೆ ಮಾಡಲಾಗುತ್ತಿದೆ. ಡೆಂಗ್ಯೂ ತಡೆಗಟ್ಟುವಿಕೆಯ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುತ್ತಿದೆ.” ಡೆಂಗ್ಯೂ, ಚಿಕೂನ್‌ಗುನ್ಯಾ ತಡೆಗಟ್ಟಲು ಟಿಪ್ಸ್: ಡೆಂಗ್ಯೂ ಹಾಗೂ ಚಿಕೂನ್‌ಗುನ್ಯಾ ತಪ್ಪಿಸಲು, ಸೊಳ್ಳೆಗಳ…
Updated By: Priyalachhi Indian Hockey History: ಇಂದು ದೇಶದೆಲ್ಲೆಡೆ ಹಾಕಿ ಶತಮಾನೋತ್ಸವ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. 100 ವರ್ಷಗಳ ಹಿಂದೆ ಅಂದರೆ 1925ರಲ್ಲಿ ಇದೇ ದಿನದಂದು ಭಾರತ ಅಂತಾರಾಷ್ಟ್ರೀಯ ಹಾಕಿಗೆ ಪ್ರವೇಶ ಮಾಡಿತ್ತು. ಇದೀಗ ಯಶಸ್ವಿಯಾಗಿ ನೂರು ವರ್ಷಗಳನ್ನು ಪೂರೈಸುತ್ತದೆ. ಈ ಕ್ರೀಡೆ ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತನ್ನು ತಂದುಕೊಟ್ಟಿದೆ. ಇದು ಅನೇಕ ಸಿಹಿ ನೆನಪುಗಳನ್ನು ನೀಡಿದೆ. ಒಲಿಂಪಿಕ್ಸ್‌ನಲ್ಲಿ ದೇಶವನ್ನು ಹೆಮ್ಮೆಪಡುವಂತೆ ಮಾಡಿದೆ. ಅಲ್ಲದೇ ಭಾರತ ಹಾಕಿ ವಿಶ್ವಕ್ಕೆ ಅನೇಕ ದಂತಕಥೆ ಆಟಗಾರರನ್ನು ನೀಡಿದೆ. ಆದರೇ ಇತ್ತೀಚೆನ ದಿನಗಳಲ್ಲಿ ಕ್ರಿಕೆಟ್ ಪ್ರಭಾವದಿಂದಾಗಿ ಇದರ ಕ್ರೇಜ್ ಕಡಿಮೆ ಆಗಿದೆ. ಒಂದು ಕಾಲದಲ್ಲಿ ಹಾಕಿ ಈ ದೇಶದ ಹೃದಯಬಡಿತವಾಗಿತ್ತು. ಇಂದಿಗೂ ಹಾಕಿಯನ್ನು ಪ್ರೀತಿಸುವ ಅದೇಷ್ಟೊ ಅಭಿಮಾನಿಗಳು ದೇಶದಲ್ಲಿದ್ದಾರೆ. ಹಾಗಾದರೆ ಹಾಕಿ ಕುರಿತಾದ ಕೆಲ ಆಸಕ್ತಿಕರ ವಿಷಯಗಳನ್ನು ಈ ಲೇಖನದಲ್ಲಿ ತಿಳಿಯೋಣ. ಐಎಚ್‌ಎಫ್ ಸ್ಥಾಪನೆ: ಅದು ನವೆಂಬರ್ 1925. ಭಾರತೀಯ ಹಾಕಿಗಾಗಿ ಆಡಳಿತ ಮಂಡಳಿಯನ್ನು ರಚಿಸಲು ಕೆಲವರು ಗ್ವಾಲಿಯರ್‌ನಲ್ಲಿ ಸಭೆ ಸೇರಿದ್ದರು. ಹಾಗೆ ಐಎಚ್‌ಎಫ್ (ಈಗಿನ ಹಾಕಿ ಇಂಡಿಯಾ)…
Updated By: Priyalachhi ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಇಂದು ಮಧ್ಯಾಹ್ನದ ನಂತರ ಅವಳಿ ಜಿಲ್ಲೆಯಲ್ಲಿ ಬಂದ್ ಅಥವಾ ಹೆದ್ದಾರಿ ತಡೆ ನಡೆಸುವುದಾಗಿ ರೈತರು ಷರತ್ತು ವಿಧಿಸಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಬಂದ್ ನಡೆಸಿದ್ದರೆ ಬಾಗಲಕೋಟೆ ಜಿಲ್ಲೆಯ ರೈತರು ಜಿಲ್ಲೆಯ ಮೂರು ಸ್ಥಳಗಳಲ್ಲಿ ಹೆದ್ದಾರಿ ತಡೆ ನಡೆಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಹೆದ್ದಾರಿ ಬಂದ್ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಲಾಠಿ ಚಾರ್ಜ್ಗೆ ಪ್ರತಿಯಾಗಿ ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಹತ್ತರಗಿ ರಾಷ್ಟ್ರೀಯ ಹೆದ್ದಾರಿ ಟೋಲ್ ಬಳಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬಾಗಲಕೋಟೆಯ ರೈತರು ಹುಬ್ಬಳ್ಳಿ ಮತ್ತು ಸೋಲಾಪುರಕ್ಕೆ ಸಂಪರ್ಕಿಸುವ ಗಡ್ಡಕೇರಿ ಹೆದ್ದಾರಿ 218, ವಿಜಯಪುರ ಮತ್ತು ಧಾರವಾಡಕ್ಕೆ…
Subscribe to Updates
Get the latest creative news from FooBar about art, design and business.