Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ ಮಾಡುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿಗೆ ಆಗ್ರಹಿಸಿ ರೈತರು ರಾಷ್ಟ್ರೀಯ‌ ಹೆದ್ದಾರಿ ತಡೆದು ಪ್ರತಿಭಟಿಸುವಾಗ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಈ ವೇಳೆ ರೈತರನ್ನು ಹೊರತು ಪಡಿಸಿ ಕೆಲ ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು. ವಾಗ್ವಾದ, ನೂಕಾಟ, ತಳ್ಳಾಟ ಶುರುವಾಗಿದ್ದು ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗುತ್ತಿದ್ದಂತೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ, ಹಲವು ಪೊಲೀಸರಿಗೆ ಕಲ್ಲು ತಾಗಿ ಗಾಯವಾಗಿದೆ. ಸಾರಿಗೆ ಬಸ್, ಲಾರಿ ಸೇರಿ ಐದಕ್ಕೂ ಅಧಿಕ ವಾಹನಗಳಿಗೆ ಕಲ್ಲು ತೂರಿದ ಪರಿಣಾಮ ಆ ವಾಹನಗಳ ಗಾಜು ಪುಡಿ ಪುಡಿ ಆಗಿವೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಭೇಟಿ ನೀಡಿದ್ದು, ರೈತ ಮುಖಂಡರೊಂದಿಗೆ ಮಾತನಾಡಿ ಅವರನ್ನು ಮನವಲಿಸಲು…

Read More

Updated By: Priyalachhi ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 3,500 ದರ ನಿಗದಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಸಚಿವ ಶಿವಾನಂದ್ ಪಾಟೀಲ್ ಸ್ಥಳಕ್ಕೆ ಭೇಟಿ, ಮಾತುಕತೆ ನಡೆಸಿದರೂ ರೈತರು ಪ್ರತಿಭಟನೆಯಿಂದ ಹಿಂದಕ್ಕೆ ಸರಿದಿಲ್ಲ. ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಗುರುವಾರ ತಡರಾತ್ರಿ ಗುರ್ಲಾಪುರದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಉದ್ದೇಶಿತ ರಸ್ತೆ ತಡೆಯನ್ನು (ಶುಕ್ರವಾರ) ಹಿಂತೆಗೆದುಕೊಳ್ಳುವಂತೆ ರೈತರಿಗೆ ಮನವಿ ಮಾಡಿದರು. ಶುಕ್ರವಾರ ಸಂಜೆಯೊಳಗೆ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲಾಗುವುದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭರವಸೆಯನ್ನು ಸಚಿವರು ರೈತರಿಗೆ ತಿಳಿಸಿದರು. ಆದರೂ ರೈತರು ಪ್ರತಿಭಟನೆಯಿಂದ ಹಿಂದಕ್ಕೆ ಸರಿಯಲು ಒಪ್ಪಿಗೆ ನೀಡಿಲ್ಲ. ನಾಳೆ ರಸ್ತೆಗಳನ್ನು ತಡೆಯಬೇಡಿ ಎಂದು ನಾನು ನಿಮ್ಮನ್ನು ವಿನಂತಿಸುತ್ತೇನೆ. ಶಾಶ್ವತ ಪರಿಹಾರವನ್ನು ತರಲು ಸಿಎಂ ಕೇವಲ ಒಂದು ದಿನದ ಸಮಯವನ್ನು ಕೇಳಿದ್ದಾರೆ” ಎಂದು ಪಾಟೀಲ್ ಅವರು ಪ್ರತಿಭಟನಾಕಾರರನ್ನು ಒತ್ತಾಯಿಸಿದರು. ಆದರೆ, ಸಚಿವರ ಮನವಿಗೆ ರೈತರು ಕಿವಿಗೊಡದ ರೈತರು, ಪ್ರತಿ ಟನ್ ಕಬ್ಬಿಗೆ 3,500 ದರ ನಿಗದಿ ಮಾಡದ…

Read More

Updated By: Priyalachhi ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಅನ್ನಭಾಗ್ಯ’ ಯೋಜನೆಯಡಿ ನೀಡಲಾಗುವ ‘ಇಂದಿರಾ ಆಹಾರ ಕಿಟ್’ನಲ್ಲಿ (ಪೌಷ್ಟಿಕ ಆಹಾರ ಕಿಟ್) ಹೆಸರುಕಾಳು ಬದಲು ತೊಗರಿಬೇಳೆ ಹೆಚ್ಚುವರಿಯಾಗಿ ಕೊಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕಿಟ್‌ನಲ್ಲಿದ್ದ 1 ಕೆ.ಜಿ. ಹೆಸರುಕಾಳನ್ನು ಕೈಬಿಟ್ಟು, ಅದರ ಬದಲಿಗೆ ತೊಗರಿಬೇಳೆಯನ್ನು ಹೆಚ್ಚುವರಿಯಾಗಿ ವಿತರಿಸಲು ತೀರ್ಮಾನಿಸಲಾಗಿದೆ. ರಾಜ್ಯದ ತೊಗರಿಬೇಳೆ ಬೆಳೆಗಾರರ ಹಿತಾಸಕ್ತಿ ಕಾಪಾಡುವ ಮತ್ತು ಪಡಿತರದಾರರಿಗೆ ಮತ್ತಷ್ಟು ಪ್ರೋಟೀನ್‌ಯುಕ್ತ ಪೌಷ್ಟಿಕಾಂಶ ಒದಗಿಸುವ ಉದ್ದೇಶದೊಂದಿಗೆ ಈ ಬದಲಾವಣೆ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ಈ ಹಿಂದೆ ‘ಇಂದಿರಾ ಆಹಾರ ಕಿಟ್’ ನಲ್ಲಿ ತಲಾ 1 ಕೆ.ಜಿ. ತೊಗರಿಬೇಳೆ, ಹೆಸರುಕಾಳು, ಸಕ್ಕರೆ, ಉಪ್ಪು ಹಾಗೂ 1 ಲೀಟರ್ ಅಡುಗೆ ಎಣ್ಣೆಯನ್ನು ಸೇರಿಸಲಾಗಿತ್ತು. ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್, ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಸೇರಿದಂತೆ ಇತರೆ ಸಚಿವರು ಉತ್ತರ ಕರ್ನಾಟಕ ಭಾಗದಲ್ಲಿ ತೊಗರಿ ಪ್ರಮುಖ ಬೆಳೆಯಾಗಿರುವುದರಿಂದ ರೈತರ ಹಿತ ಕಾಪಾಡಲು ಹೆಸರುಕಾಳಿನ…

Read More

Updated By: Priyalachhi ಬೆಂಗಳೂರು, ನವೆಂಬರ್ 7: ಅಕ್ಟೋಬರ್ 24 ರಂದು ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಕಂಪನಿಯ ಎಸಿ ಸ್ಲೀಪರ್ ಬಸ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡು 19 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದರು. ಈ ಹಿನ್ನೆಲೆ ಎಚ್ಚೆತ್ತುಕೊಂಡ ಸಾರಿಗೆ ಸಚಿವರು, ಸುರಕ್ಷತಾ ಕ್ರಮಗಳನ್ನು ಪಾಲಿಸದ ಎಲ್ಲಾ ಖಾಸಗಿ ಬಸ್ಸುಗಳನ್ನು (Private Buses) ತಪಾಸಣೆ ನಡೆಸಿ ವರದಿ ನೀಡುವಂತೆ ಸಾರಿಗೆ ಇಲಾಖೆಯ (Transport Department) ಆಯುಕ್ತರಿಗೆ ಖಡಕ್ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಅಪರ ಸಾರಿಗೆ ಆಯುಕ್ತ (ಪ್ರವರ್ತನ ದಕ್ಷಿಣ) ನೇತೃತ್ವದಲ್ಲಿ ಒಟ್ಟು 12 ತಂಡಗಳನ್ನು ರಚಿಸಿ ಬಸ್​​ಗಳ ತಪಾಸಣೆ ಕಾರ್ಯಚರಣೆ ನಡೆಸಲಾಗಿದೆ. ಪ್ರಯಾಣಿಕರ ಸುರಕ್ಷತಾ ಅಂಶಗಳಾದ ತುರ್ತು ನಿರ್ಗಮನ ವ್ಯವಸ್ಥೆ, ಬೆಂಕಿ ನಂದಿಸುವ ಸಾಧನ, ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಪ್ರಯಾಣಿಕರ ವಾಹನಗಳಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಸರಕುಗಳನ್ನು ಗುರಿಯಾಗಿಸಿ ತಪಾಸಣೆ ನಡೆಸಲಾಗಿದೆ. ಅಕ್ಟೋಬರ್ 24 ರಿಂದ ನವೆಂಬರ್ 5 ರ ವರೆಗೆ, ಅಂದರೆ 13 ದಿನಗಳಿಂದ ಸಾರಿಗೆ ಇಲಾಖೆಯ ಅಧಿಕಾರಿಗಳು…

Read More

Updated By: Priyalachhi ಬೆಂಗಳೂರು, ನವೆಂಬರ್​ 06: ಕಬ್ಬು ಬೆಳೆಗಾರರ ಪ್ರತಿಭಟನೆ ಶುರುವಾಗಿ ಒಂದು ವಾರ ಉರುಳಿ, ಎರಡನೇ ವಾರಕ್ಕೆ ಕಾಲಿಟ್ಟಿದೆ. ಇಷ್ಟಾದರೂ ರೈತರ ಹೋರಾಟ ಮಾತ್ರ ತಣ್ಣಗಾಗುತ್ತಿಲ್ಲ. ಕಬ್ಬಿನ ಬೆಲೆಗಾಗಿ ರೈತರು ಪಟ್ಟು ಹಿಡಿದರೆ, ಇತ್ತ ಸರ್ಕಾರ ಸಭೆ ಮೇಲೆ ಸಭೆ ಮಾಡುತ್ತಿದೆ. ಅದರಲ್ಲೂ ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದಿದ್ದು, ಆ ಸಭೆ ಮೇಲೆಯೇ ಎಲ್ಲರ ಚಿತ್ತ ನೆಟ್ಟಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ (Siddaramaiah) ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಲು ತುರ್ತು ಅವಕಾಶ ಕೋರಿ ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಪತ್ರ ಬರೆದಿದ್ದಾರೆ. ಪ್ರತೀ ಟನ್ ಕಬ್ಬಿಗೆ 3500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ದಿನಕ್ಕೊಬ್ಬರು ಸಚಿವರು ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ. ಹೀಗಾಗಿ ಈ ಕಬ್ಬಿನ ಕಿಚ್ಚು ಆರಿಸಲು ಸ್ವತಃ ಸಿಎಂ ಸಿದ್ದರಾಮಯ್ಯ ಪ್ರವೇಶಿಸಿದ್ದಾರೆ. ತುರ್ತು ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆಯುವುದಾಗಿ…

Read More

Updated By: Priyalachhi ಪಂಚಾಂಗ ದಿನಾಂಕ : 07-11-2025 ವಾರ : ಶುಕ್ರವಾರ ಸಂವತ್ಸರ : ವಿಶ್ವವಸು ಆಯನ: ದಕ್ಷಿಣಾಯಣ ಮಾಸ : ಅಶ್ವಿನ್ ಪಕ್ಷ : ಕೃಷ್ಣ ತಿಥಿ : ದ್ವಿತೀಯಾ ನಕ್ಷತ್ರ : ರೋಹಿಣಿ ಸೂರ್ಯೋದಯ : ಬೆಳಿಗ್ಗೆ 06:14ಕ್ಕೆ ಅಮೃತಕಾಲ : ಬೆಳಿಗ್ಗೆ 07:41 ರಿಂದ 09:07ರ ವರೆಗೆ ರಾಹುಕಾಲ : ಬೆಳಿಗ್ಗೆ 10:34 ರಿಂದ 12:01ರ ವರೆಗೆ ದುರ್ಮುಹೂರ್ತ : ಬೆಳಿಗ್ಗೆ 08:38 ರಿಂದ 09:26 ಹಾಗೂ 03:02 ರಿಂದ 03:50ರ ವರೆಗೆ ಸೂರ್ಯಾಸ್ತ : ಸಂಜೆ 05:49ಕ್ಕೆ ರಾಶಿ ಭವಿಷ್ಯ ಮೇಷ: ಇಂದು ನಿಮ್ಮ ಸ್ವತ್ತುಗಳ ಕುರಿತು ಅತ್ಯಂತ ಆತಂಕ ಹೊಂದಿರುತ್ತೀರಿ ಮತ್ತು ಅವುಗಳನ್ನು ಹಂಚಿಕೊಳ್ಳಲು ಬಯಸುವುದಿಲ್ಲ. ಈ ಮನಸ್ಥಿತಿ ಯಾರೋ ಒಬ್ಬರಿಂದ ಉಂಟಾಗಿರಬಹುದು. ಪ್ರೀತಿಗೆ ಸಂಬಂಧಿಸಿದ ವ್ಯವಹಾರಗಳು ಉತ್ತಮ ಪ್ರಗತಿ ಕಾಣುತ್ತವೆ ಮತ್ತು ನಿಮ್ಮ ವೈವಾಹಿಕ ಜೀವನ ಅರಳುತ್ತದೆ. ವೃಷಭ: ಒಂದು ಕಿರುಪ್ರವಾಸದ ಸಾಧ್ಯತೆ ಇಂದು ನಿಮಗಿದೆ. ಅದಕ್ಕೆ ಹೊರಡುವ ಮುನ್ನ, ನೀವು ನಿಮ್ಮ ಯೋಜನೆಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುವುದು ಅಗತ್ಯ. ನೀವು ಹೊಸ ವೇಳಾಪಟ್ಟಿ ಕುರಿತು ಸಂತೋಷವಾಗಿಲ್ಲ ಮತ್ತು ನಿಮ್ಮ ಮೊದಲ ಯೋಜನೆಗೆ ಬದ್ಧರಾಗಲು ನಿರ್ಧರಿಸುತ್ತೀರಿ, ದಿನದ ಅಂತ್ಯಕ್ಕೆ ನೀವು…

Read More

Updated By: Priyalachhi ಬೆಂಗಳೂರು/ನವದೆಹಲಿ: ರಾಜ್ಯ ರಾಜಕೀಯದಲ್ಲಿ “ನವೆಂಬರ್ ಕ್ರಾಂತಿ” ಭಾರಿ ಸದ್ದು ಮಾಡುತ್ತಿದೆ. ಆದರೆ ನಾಯಕತ್ವ ಬದಲಾವಣೆಯ ಈ ಕ್ರಾಂತಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, 2028 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದಾಗ ಮಾತ್ರ ಕ್ರಾಂತಿ ಎಂದು ಗುರುವಾರ ಹೇಳಿದ್ದಾರೆ. ತಾವು ಪಕ್ಷದ “ಶಿಸ್ತಿನ ಸಿಪಾಯಿ” ಎಂದು ಹೇಳಿಕೊಂಡಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್, ತಾವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದರು. ಈ ತಿಂಗಳು ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಲಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಊಹಾಪೋಹಗಳಿವೆ. ಇದನ್ನೇ “ನವೆಂಬರ್ ಕ್ರಾಂತಿ” ಎಂದು ಕರೆಯಲಾಗುತ್ತಿದೆ. ನಾನು (ಹೈಕಮಾಂಡ್‌) ಯಾರನ್ನೂ ಭೇಟಿಯಾಗುತ್ತಿಲ್ಲ. ಸಚಿವ ಸಂಪುಟ ಪುನರ್ರಚನೆ ಬಗ್ಗೆ ನನ್ನೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ಅದು ಸಿಎಂ ಅವರ ವಿಶೇಷ ಹಕ್ಕು. ಅವರು ಅದನ್ನು ಮಾಡಲಿ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನನಗೆ ಯಾವುದೇ ನಾಯಕರನ್ನು ಭೇಟಿ…

Read More

Updated By: Priyalachhi ಬೆಂಗಳೂರು: ಅತ್ತ ಹಾವು ಸಾಯಲಿಲ್ಲ, ಇತ್ತ ಕೋಲು ಮುರಿಯಲಿಲ್ಲ ಎಂಬಂತಾಗಿದೆ ಕಬ್ಬುಬೆಳೆಗಾರರ ಹೋರಾಟ. ಸರ್ಕಾರ ತಮ ಬೆಳೆಗೆ ಸೂಕ್ತವಾದ ಬೆಲೆ ನಿಗಧಿ ಮಾಡುವಂತೆ ನಡೆಸುತ್ತಿರುವ ರೈತರ ಹೋರಾಟ 8ನೇ ದಿನಕ್ಕೆ ಕಾಲಿಟ್ಟಿದ್ದರೂ, ಸರ್ಕಾರ ಮಾತ್ರ ಕೇಂದ್ರದ ಕಡೆ ಕೈ ತೋರಿಸಿ ತನ್ನ ಜವಬ್ದಾರಿಯಿಂದ ನುಣಿಚಿಕೊಳ್ಳುವ ಚಾಣಕ್ಷತನ ಮೆರದಿದೆ. ಪ್ರತಿ ಟನ್‌ ಕಬ್ಬಿಗೆ 3,500 ರೂ. ನಿಗಧಿ ಮಾಡಬೇಕೆಂದು ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದು, 8ನೇ ದಿನಕ್ಕೆ ಕಾಲಿಟ್ಟಿದೆ. ಇದರ ನಡುವೆಯೇ ಸಚಿವ ಸಂಪುಟ ಸಭೆ ಇಂದು ನಡೆಯಲಿದ್ದು, ಸರ್ಕಾರ ಬೆಲೆ ನಿಗಧಿ ಮಾಡುವ ಸಾಧ್ಯತೆ ಇದೆ. ಸಂಜೆಯೊಳಗೆ ರೈತರ ಬೇಡಿಕೆಗೆ ಸರ್ಕಾರ ಒಪ್ಪಿಕೊಳ್ಳದಿದ್ದರೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ. ರೈತರ ಕಿಚ್ಚು ಹೆಚ್ಚಾಗುತ್ತಿದ್ದಂತೆಯೇ ಸರ್ಕಾರ ಹಿರಿಯ ಸಚಿವ ಹೆಚ್‌.ಕೆ.ಪಾಟೀಲ್‌ರನ್ನು ಸಂಧಾನಕ್ಕೆ ಕಳುಹಿಸಿದ್ದು ಮಾತುಕತೆ ವಿಫಲವಾಗಿದೆ. ಹಲವು ಸಂಘಟನೆಗಳು ರೈತರ ಹೋರಾಟಕ್ಕೆ ಬೆಂಬಲ…

Read More

Updated By: Priyalachhi ಬೆಂಗಳೂರು: ಕಬ್ಬಿನ ಬಾಕಿ ಪಾವತಿ (Payment of cane dues) ಮತ್ತು ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಿಕ್ಕೋಡಿಯ (Chikkodi) ಗುರ್ಲಾಪುರ ಕ್ರಾಸ್‌ನಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ವಿಪಕ್ಷಗಳು ಸಹ ಸರ್ಕಾರದ ವಿರುದ್ಧ ಈ ಕುರಿತು ಸಮರ ಸಾರಿವೆ; ಇದ್ರ ನಡುವೆ, ನಿನ್ನೆ ಸಚಿವ ಹೆಚ್​​ ಕೆ ಪಾಟಿಲ್ ನಡೆಸಿದ ಸಂಧಾನ ಸಭೆಯೂ ವಿಫಲವಾಗಿದ್ದು, ಇದ್ರ ನಡುವೆ ವಿಜಯೇಂದ್ರ (Vijayendra) ಮೇಲೆ ಸಿಎಂ ಗರಂ ಆಗಿದ್ದಾರೆ ಎನ್ನಲಾಗಿದೆ. ಸಿಎಂಗೆ ಪರಮಾಧಿಕಾರ ನೀಡಿದ ಕ್ಯಾಬಿನೆಟ್ ರೈತರ ಸಮಸ್ಯೆಗಳಿಗೆ ಪರಿಹಾರ ಘೋಷಣೆ ಮಾಡುವ ಅಥವಾ ಇನ್ಯಾವುದೇ ರೀತಿಯ ಕ್ರಮ ಕೈಗೊಳ್ಳುವ ಪರಮಾಧಿಕಾರವನ್ನ ಇಂದು ನಡೆಸ ಸಚಿವ ಸಂಪುಟ ಸಭೆಯು ಸಹಕಾರಿ ಸಚಿವರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದೆ. ಹಾಗಾಗಿ, ಇನ್ನೇನು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿಗಳು ಸುದ್ದಿಗೋಷ್ಟಿ ನಡೆಸಿ, ಬೆಲೆ ನಿಗಧಿ ಬಗ್ಗೆ ಘೋಷಣೆ ಸಾಧ್ಯತೆಯಿದೆ. ಚಿಕ್ಕೋಡಿಗೆ ಸಕ್ಕರೆ ಸಚಿವ…

Read More

Updated By: Priyalachhi ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸುಳ್ಯದ ಕುರುಂಜಿ ಡಾ.ರೇಣುಕಾ ಪ್ರಸಾದ್ ಮನೆಯವರು ಕೊಡುಗೆಯಾಗಿ ನೀಡಿದ ಎರಡು ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ರಥ ಬುಧವಾರ ಸಂಜೆ ಕ್ಷೇತ್ರ ತಲುಪಿತು. ರಾಜಗೋಪಾಲ ಆಚಾರ್ಯ ಮತ್ತು ಲಕ್ಷ್ಮೀನಾರಾಯಣ ಆಚಾರ್ಯ ಅವರ ಮಾರ್ಗದರ್ಶನದಲ್ಲಿ ಭವ್ಯ ರಥವನ್ನು ಸಿದ್ಧಪಡಿಸಲಾಗಿದೆ. ಸುಮಾರು 18 ಅಡಿ ಉದ್ದವಿದ್ದು, ಮೇಲ್ಭಾಗದಲ್ಲಿ ಸುವರ್ಣ ಕಲಶವಿದೆ. ನವೆಂಬರ್ 4ರಂದು ಆರಂಭಗೊಂಡ ಬೆಳ್ಳಿರಥದ ಯಾತ್ರೆ ಹಲವು ಹಳ್ಳಿಗಳು, ಪಟ್ಟಣಗಳ ಮೂಲಕ ಸಂಭ್ರಮದಿಂದ ಸಾಗಿ ಮಂಗಳವಾರ ಸುಳ್ಯ ತಲುಪಿತ್ತು. ಬೆಳಗ್ಗೆ ಅಲ್ಲಿಂದ ಹೊರಟ ಬೆಳ್ಳಿರಥ ನವೆಂಬರ್ 5ರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ತಲುಪಿದೆ. ಆಗಮನದ ವೇಳೆ ಪುರೋಹಿತರ ನೇತೃತ್ವದಲ್ಲಿ ವಿಶೇಷ ಪೂಜೆ-ಹೋಮಗಳನ್ನು ನೆರವೇರಿಸಲಾಯಿತು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರು, ತಂತ್ರಿಧಾರಿ ಪಂಡಿತರು ಹಾಗೂ ಮುಜರಾಯಿ ಇಲಾಖೆಯ ಅಧಿಕಾರಿಗಳು ಆಗಮಿಸಿದ ರಥದ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿದ್ದರು. ಅಧಿಕೃತವಾಗಿ ರಥ ಸಮರ್ಪಣೆ (ಹಸ್ತಾಂತರ) ಸಮಾರಂಭವು ನ.10ರಂದು ನಡೆಯಲಿದೆ. ಈ ಸಂದರ್ಭದಲ್ಲಿ ವಿಶೇಷ ಪೂಜಾ…

Read More