Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಮಾಸ್ಕೋ (ರಷ್ಯಾ): ಅಮೆರಿಕ ಪರಮಾಣು ಪರೀಕ್ಷೆಗಳನ್ನು ಪ್ರಾರಂಭಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿರುವ ಬೆನ್ನಲ್ಲೇ ಇದೀಗ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಪರಮಾಣು ಪರೀಕ್ಷೆಗಳನ್ನು ಪುನಾರಂಭಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತಮ್ಮ ಭದ್ರತಾ ಮಂಡಳಿಯೊಂದಿಗಿನ ಸಭೆಯಲ್ಲಿ ಮಾತನಾಡಿದ ಪುಟಿನ್, ಅಮೆರಿಕ ಮೊದಲು ಪರಮಾಣು ಪರೀಕ್ಷೆಗಳನ್ನು ಆರಂಭಿಸಿದರೆ ಮಾತ್ರ ಮಾಸ್ಕೋ ಪರಮಾಣು ಪರೀಕ್ಷೆಗಳನ್ನು ಪುನಾರಂಭಿಸುತ್ತದೆ ಎಂದು ಹೇಳಿದರು. ಆದರೆ, ವಾಷಿಂಗ್ಟನ್‌ನ ಉದ್ದೇಶಗಳನ್ನು ವಿಶ್ಲೇಷಿಸಲು, ರಕ್ಷಣಾ ಮತ್ತು ವಿದೇಶಾಂಗ ಸಚಿವಾಲಯಗಳು ಮತ್ತು ಇತರ ಸರ್ಕಾರಿ ಸಂಸ್ಥೆಗಳಿಗೆ ಮತ್ತು ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆಗಳನ್ನು ಪುನಾರಂಭಿಸುವ ಪ್ರಸ್ತಾಪಗಳನ್ನು ರೂಪಿಸಲು ನಿರ್ದೇಶಿಸಿದ್ದಾರೆ. ಇತ್ತೀಚಿಗೆ ರಷ್ಯಾ ಪರಮಾಣು ಚಾಲಿತ ಮತ್ತು ಪರಮಾಣು ಸಾಮರ್ಥ್ಯದ ಕ್ರೂಸ್ ಕ್ಷಿಪಣಿ ಮತ್ತು ನೀರೊಳಗಿನ ಡ್ರೋನ್‌ನ ಯಶಸ್ವಿ ಪರೀಕ್ಷೆ ನಡೆಸಿತ್ತು. ಇದರ ಬೆನ್ನಲ್ಲೇ ಟ್ರಂಪ್ ಸಾಮಾಜಿಕ ಮಾಧ್ಯಮದ ಮೂಲಕ ಅಮೆರಿಕ ಕೂಡ ಪರಮಾಣು ಪರೀಕ್ಷೆಗೆ ಮುಂದಾಗುವುದಾಗಿ ತಿಳಿಸಿದ್ದರು. ಜೊತೆಗೆ ಉಕ್ರೇನ್‌ನಲ್ಲಿನ ಸಂಘರ್ಷವನ್ನು ಅಂತಿಮಗೊಳಿಸುವ ಬಗ್ಗೆ ಟ್ರಂಪ್‌ಗೆ…
Updated By: Priyalachhi ಕನ್ನಡ ಚಿತ್ರರಂಗದ ಬ್ಲಾಕ್ಬಸ್ಟರ್ ‘ಕೆಜಿಎಫ್’ ಮೂಲಕ ‘ಕೆಜಿಎಫ್ ಚಾಚಾ’ ಎಂದೇ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದ ನಟ ಹರೀಶ್ ರಾಯ್ (Harish Rai) ಕೊನೆಯುಸಿರೆಳೆದಿದ್ದಾರೆ. 2022ರಲ್ಲಿ ತಗುಲಿದ್ದ ಕ್ಯಾನ್ಸರ್ ಇತ್ತೀಚೆಗೆ ಉಲ್ಭಣಗೊಂಡಿತ್ತು. ನೆರವಿಗೆ ಕೋರಿದ್ದ ನಟನಿಗೆ ಸಹಾಯ ಹಸ್ತವೂ ಸಿಕ್ಕಿತ್ತು. ಆದ್ರಿಂದು ಬೆಳಗ್ಗೆ ಸುಮಾರು 11 ಗಂಟೆ ಹೊತ್ತಿಗೆ ಕೊನೆಯುಸಿರೆಳೆದಿದ್ದು, ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಸಂಭವಿಸಿದೆ. ಸ್ಯಾಂಡಲ್ವುಡ್ನ ಸೂಪರ್ ಹಿಟ್ ‘ಓಂ’ ಸಿನಿಮಾದಿಂದ ಲೈಮ್ಲೈಟ್ಗೆ ಬಂದ ನಟರುಗಳಲ್ಲಿ ಹರೀಶ್ ರಾಯ್ ಕೂಡಾ ಓರ್ವರು. ಈ ಸಿನಿಮಾ ಸಕ್ಸಸ್ ಬಳಿಕ ಹರೀಶ್ ರಾಯ್ ಕನ್ನಡದ ಅನೇಕ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಖಳ ನಟ, ಪೋಷಕ ಪಾತ್ರಗಳಿಂದಲೇ ಅವರು ಚಂದನವನದಲ್ಲಿ ಹೆಚ್ಚು ಬೇಡಿಕೆ ಹೊಂದಿದ್ದರು. ಕನ್ನಡ ಚಿತ್ರರಂಗದ ಕೀರ್ತಿ ಹೆಚ್ಚಿಸಿದ ‘ಕೆಜಿಎಫ್’ ಸಿನಿಮಾದಲ್ಲಿ ಚಾಚಾ ಪಾತ್ರದ ಮೂಲಕ ಮತ್ತಷ್ಟು ಖ್ಯಾತಿ ಗಳಿಸಿದ್ದ ಹರೀಶ್ ರಾಯ್, ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರಿಂದು, ಇಹಲೋಹ ತ್ಯಜಿಸಿದ್ದಾರೆ. 2022ರಲ್ಲಿ ತಗುಲಿದ್ದ ಕ್ಯಾನ್ಸರ್ ಕಳೆದ ಕೆಲ…
Updated By: Priyalachhi ಶಿವಮೊಗ್ಗ: ಸಾಗರದ ಕೆಎಸ್ಆರ್‌ಟಿಸಿ ಡಿಪೋದ ಭದ್ರತಾ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಂದೀಪ್ (41) ಮೃತ ಕೆ ಎಸ್ ಆರ್ ಟಿ ಸಿ ಸಿಬ್ಬಂದಿ. ಸಂದೀಪ್ ಸಾಗರದ ಮಾರಿಕಾಂಬ ದೇವಾಲಯದ ಹಿಂಭಾಗದ ರಸ್ತೆಯ ನಿವಾಸಿಯಾಗಿದ್ದಾರೆ. ಸಂದೀಪ್ ಬುಧವಾರ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸಂದೀಪ್ರನ್ನು ಸಹೋದ್ಯೋಗಿಗಳು ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಷ್ಟರಲ್ಲೇ ಸಂದೀಪ್ ಸಾವನ್ನಪ್ಪಿದ್ದಾರೆ. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸಂದೀಪ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಬಂದ ಸಿಬ್ಬಂದಿ ಚಂದ್ರು ಮಾತನಾಡಿ, ”ನಾನು ಬಸ್ನಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದೇನೆ. ರಾತ್ರಿ ನಾನು ಬಸ್ ಅನ್ನು ಡಿಪೋಗೆ ಬಿಡಲು ಬಂದಾಗ ಗೇಟ್ ಬಳಿ ಹಾರನ್ ಮಾಡಿದ್ರು ಸಹ ಸಂದೀಪ್ ಅವರು ಹೊರಗೆ ಬರಲಿಲ್ಲ. ಇವರು ಬಂದು ಬಸ್ ಚೆಕ್ ಮಾಡಿದ ಮೇಲೆಯೇ ಬಸ್ ಅನ್ನು…
Updated By: Priyalachhi ಬೆಂಗಳೂರು: ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡುವ ಸಲುವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ಆರಂಭಿಸಲಾಗುತ್ತಿದೆ. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಸೊಸೈಟಿ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದ ಕಂಠೀರವ ಸ್ಟೇಡಿಯಂನಲ್ಲಿ ನ.19ರಂದು ನಡೆಯಲಿರುವ ಐಸಿಡಿಎಸ್ ಯೋಜನೆಯ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತು ಡಾ.ಬಾಬು ಜಗಜೀವನರಾಮ್ ಆಡಿಟೋರಿಯಂ ಮತ್ತು ತರಬೇತಿ ಕೇಂದ್ರದಲ್ಲಿ ಬುಧವಾರ ರಾಜ್ಯಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಚಿವೆ ಮಾತನಾಡಿದರು. ವಿಶ್ವದಲ್ಲೇ ದೊಡ್ಡದಾದ ಗೃಹ ಲಕ್ಷ್ಮಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. 2 ಸಾವಿರ ಫಲಾನುಭವಿಗಳ ಹಣ ಸಂಗ್ರಹಿಸಲಾಗಿದ್ದು, ಇದು ಬಹಳ ದೊಡ್ಡ ಜವಾಬ್ದಾರಿಯಾಗಿದೆ. ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲೇ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಜನಮನ್ನಣೆ ಗಳಿಸಲು ಅಧಿಕಾರಿಗಳು ಶ್ರಮ ಹಾಕಬೇಕು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಿಸಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದರು. ಗೃಹಲಕ್ಷ್ಮಿ ಸೊಸೈಟಿ…
Updated By: Priyalachhi ನವದೆಹಲಿ: ಇದೇ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಕ್ರಿಕೆಟ್ ಟ್ರೋಫಿ ಜಯಿಸಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಇಂದು ನವದೆಹಲಿಯ ತಮ್ಮ ನಿವಾಸದಲ್ಲಿ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ, ಐತಿಹಾಸಿಕ ಸಾಧನೆಯನ್ನು ಕೊಂಡಾಡಿದರು. ಟೂರ್ನಿಯಲ್ಲಿ ಆರಂಭಿಕ ಹಿನ್ನಡೆಗಳ ಬಳಿಕ ಪುಟಿದೆದ್ದ ಬಗೆಯನ್ನು ಪ್ರಧಾನಿ ಶ್ಲಾಘಿಸಿದರು. ಇದೇ ವೇಳೆ ತಂಡ ಸೋತ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಆಟಗಾರ್ತಿಯರ ವಿರುದ್ಧ ಬಂದಿದ್ದ ಟ್ರೋಲ್‌ಗಳನ್ನು ಉಲ್ಲೇಖಿಸಿದರು. ಇದನ್ನೆಲ್ಲ ಧೈರ್ಯದಿಂದ ಎದುರಿಸಿ, ಹೊಸ ಇತಿಹಾಸ ಬರೆಯಲು ದೃಢವಾದ ಮಾನಸಿಕ ಶಕ್ತಿಯನ್ನು ತೋರಿದ್ದಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. 2017ರ ವಿಶ್ವಕಪ್ ನಂತರ ಮೋದಿ ಅವರೊಂದಿಗಿನ ತಮ್ಮ ಹಿಂದಿನ ಭೇಟಿಯನ್ನು ನೆನಪಿಸಿಕೊಂಡ ನಾಯಕಿ ಹರ್ಮನ್‌ಪ್ರೀತ್ ಕೌರ್, ಆಗ ನಮ್ಮ ತಂಡ ಟ್ರೋಫಿ ಇಲ್ಲದೆ ಬಂದಿತ್ತು. ಆದರೆ ಮುಂದೊಂದಿನ ಯಶಸ್ಸು ಸಾಧಿಸಿ ಭೇಟಿ ಮಾಡುವ ಬಯಕೆ ತಂಡದಲ್ಲಿತ್ತು ಎಂದು ಹೇಳಿದರು. ಉಪನಾಯಕಿ ಸ್ಮೃತಿ ಮಂಧಾನಾ ಅವರು ಪ್ರಧಾನಿಯ ಮಾತುಗಳು ಪ್ರೇರಣೆಯ ದೊಡ್ಡ ಮೂಲ ಎಂದರು. ಧಾನಿ ಜೊತೆಗಿನ ಸಂವಾದದ ಸಂದರ್ಭದಲ್ಲಿ…
Updated By: Priyalachhi ಪಟ್ನಾ: ಬಿಹಾರದಲ್ಲಿ ಮೊದಲ ಹಂತದ ಚುನಾವಣೆಯ ಮತದಾನ ಆರಂಭವಾಗಿದೆ. ಇಂದು 18 ಜಿಲ್ಲೆಗಳ 121 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 3.75 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮಹಾಘಟಬಂಧನ್ ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್, ತೇಜ್ ಪ್ರತಾಪ್ ಯಾದವ್, ಡಿಸಿಎಂ ಸಾಮ್ರಾಟ್ ಚೌಧರಿ ಸೇರಿದಂತೆ ಇತರರ ರಾಜಕೀಯ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ನಡೆಯಲಿದೆ. ಸಿಮ್ರಿ ಭಕ್ತಿಯಾರ್ಪುರ್, ಮಹಿಷಿ, ತಾರಾಪುರ್, ಮುಂಗೇರ್, ಜಮಾಲ್ಪುರ್ ಮತ್ತು ಸೂರ್ಯಗಢದ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ, ಭದ್ರತಾ ಕಾರಣಗಳಿಂದಾಗಿ ಮತದಾನ ಬೇಗ ಮುಗಿಯುವ ಸಾಧ್ಯತೆ ಇದೆ. 45,324 ಬೂತ್‌ಗಳಲ್ಲಿ ಮತದಾನ ನಡೆಯುತ್ತಿದ್ದು, ಎಲ್ಲವನ್ನೂ ನೈಜ-ಸಮಯದ ಮೇಲ್ವಿಚಾರಣೆಗಾಗಿ 100 ಪ್ರತಿಶತ ವೆಬ್‌ಕಾಸ್ಟ್ ಮಾಡಲಾಗುತ್ತಿದೆ. ಚುನಾವಣಾ ಆಯೋಗವು ಮುಕ್ತ, ನ್ಯಾಯಯುತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸಲು 121 ಸಾಮಾನ್ಯ ವೀಕ್ಷಕರು, 18 ಪೊಲೀಸ್ ವೀಕ್ಷಕರು ಮತ್ತು 33 ವೆಚ್ಚ ವೀಕ್ಷಕರನ್ನು ನಿಯೋಜಿಸಿದೆ. ಪಟ್ನಾದಲ್ಲಿರುವ ಮುಖ್ಯ…
Updated By: Priyalachhi ಕಾರವಾರ: ಜನಗಣಮನ ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ರಚಿಸಿದ್ದ ಗೀತೆಯಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದು, ಈ ಹೇಳಿಕೆ ವಿವಾದ ಸೃಷ್ಟಿಸಿದೆ. ಹೊನ್ನಾವರದಲ್ಲಿ ಬುಧವಾರ ಸರ್ದಾರ್ ವಲ್ಲಭಬಾಯಿ ಪಟೇಲ್ 150ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಏಕತೆಗಾಗಿ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಗೇರಿಯವರು ಮಾತನಾಡಿದ್ದಾರೆ. ಬಂಕಿಮ್ ಚಂದ್ರ ಚಟರ್ಜಿ ಬರೆದ ವಂದೇ ಮಾತರಂ ಜನ ಗಣ ಮನಕ್ಕೆ ಸಮನಾಗಿದೆ. ವಂದೇ ಮಾತರಂ ಅನ್ನು ರಾಷ್ಟ್ರಗೀತೆಯನ್ನಾಗಿ ಮಾಡಲು ಸಾಕಷ್ಟು ಒತ್ತಡವಿತ್ತು. ಆದರೆ, ನಮ್ಮ ಪೂರ್ವಜರು ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ಜನ ಗಣ ಮನವನ್ನು ಹಾಗೂ ರಾಷ್ಟ್ರೀಯ ಗೀತೆಯಾಗಿ ವಂದೇ ಮಾತರಂ ಅನ್ನು ರಚಿಸಿದ್ದರು. ಆದ್ದರಿಂದ ನಾವು ಎರಡೂ ರಾಷ್ಟ್ರಗೀತೆಗಳನ್ನು ಹೊಂದಿದ್ದೇವೆಂದು ಹೇಳಿದರು. ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಗೀತೆ ಪ್ರೇರಣೆ ನೀಡಿತ್ತು. ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆಗಳಿಂದಾಗಿ ವಂದೇ ಮಾತರಂ ಯಾವಾಗಲೂ ನಮಗೆ ಸ್ಫೂರ್ತಿ ನೀಡಿದೆ. ಈ ಗೀತೆ 150 ವರ್ಷ ಹಳೆಯದು. ವಂದೇ…
Updated By: Priyalachhi ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಮತ್ತೊಮ್ಮೆ ದರ ಏರಿಕೆಯ ಬಿಸಿ ತಟ್ಟಲಿದೆ. ಹೌದು…ಇನ್ನೂ ಮೂರೇ ತಿಂಗಳಲ್ಲೇ ಮತ್ತೆ ಮೆಟ್ರೋ ದರ ಮತ್ತಷ್ಟು ಏರಿಕೆ ಆಗಲಿದೆ. ಪ್ರತಿ ವರ್ಷ ಫೆಬ್ರವರಿಯಲ್ಲಿ 5% ರಷ್ಟು ಟಿಕೆಟ್ ದರ ಏರಿಕೆ ಮಾಡಲು ಬಿಎಂಆರ್ಸಿಎಲ್ (BMRCL) ಮುಂದಾಗಿದೆ. ಈಗಾಗಲೇ ಬಿಎಂಆರ್ಸಿಎಲ್ ಅಧಿಕಾರಿಗಳ ತಪ್ಪು ಲೆಕ್ಕದಿಂದ ದೇಶದಲ್ಲೇ ನಮ್ಮ ಮೆಟ್ರೋ ದುಬಾರಿ ಮೆಟ್ರೋ ಅನ್ನಿಸಿಕೊಂಡಿದೆ. ಇಂತಹ ಸಂದರ್ಭದಲ್ಲಿ ಪ್ರತಿವರ್ಷ 5% ರಷ್ಟು ಏರಿಕೆ ಮಾಡಿದ್ರೆ, ಮೆಟ್ರೋ ರೈಲಿನಲ್ಲಿ ಪ್ರಯಾಣಿಕರು ಪ್ರಯಾಣ ಮಾಡಲು ಸಾಧ್ಯವಾ ಎನ್ನುವ ಪ್ರಶ್ನೆ ಹುಟ್ಟು ಹಾಕಿದೆ. ಇಡೀ ದೇಶದಲ್ಲೇ ದುಬಾರಿ ಟಿಕೆಟ್ ದರ ಇರೋ ಮೆಟ್ರೋ ಎಂಬ ಕುಖ್ಯಾತಿ ಸಹ ನಮ್ಮ ಮೆಟ್ರೋದ ಮೇಲಿದೆ. ಇನ್ಮುಂದೆ ಪ್ರತಿ ವರ್ಷ ಫೆಬ್ರವರಿಯಲ್ಲಿ ಶೇಕಡಾ 5ರಷ್ಟು ಬೆಲೆ ಏರಿಕೆಗೆ ಬಿಎಂಆರ್‌ಸಿಎಲ್ ನ ದರ ನಿಗದಿ ಸಮಿತಿ ಶಿಫಾರಸ್ಸು ಮಾಡಿದೆ.ಇದರ ಪ್ರಕಾರ 2026ರ ಫೆಬ್ರವರಿಯಲ್ಲಿ ಮತ್ತೊಮ್ಮೆ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಆಗೋದು ಗ್ಯಾರಂಟಿ ಎನ್ನಲಾಗಿದೆ. ಇನ್ನೂ ಮೂರೇ…
Updated By: Priyalachhi ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿಯನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. 2026ರ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ 1ರ ಪರೀಕ್ಷೆಗಳು ನಡೆಯಲಿವೆ. ಪಿಯುಸಿ ಪರೀಕ್ಷೆ 1ರ ಪರೀಕ್ಷೆ 2026ರ ಮಾರ್ಚ್ 28ರಿಂದ ಮಾರ್ಚ್ 17ರ ವರೆಗೆ ನಡೆಯಲಿದೆ. ಪರೀಕ್ಷೆ 2ರ ಪರೀಕ್ಷೆ ಏಪ್ರಿಲ್ 25ರಿಂದ ಮೇ 9ರ ವರೆಗೆ ನಡೆಯಲಿದೆ. ಎಸ್ಎಸ್ಎಲ್ಸಿ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ: ಮಾರ್ಚ್ 18: ಪ್ರಥಮ ಭಾಷೆ ಮಾರ್ಚ್ 23: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ ಮಾರ್ಚ್ 25: ದ್ವಿತೀಯ ಭಾಷೆ ಮಾರ್ಚ್ 28: ಗಣಿತ ಮಾರ್ಚ್ 30: ತೃತೀಯ ಭಾಷೆ/ಎನ್‌ಎಸ್‌ಕ್ಯೂಎಫ್ ವಿಷಯಗಳು ಏಪ್ರಿಲ್ 1: ಜಿಟಿಎಸ್ ವಿಷಯಗಳು ಏಪ್ರಿಲ್ 2: ಸಮಾಜ ವಿಜ್ಞಾನ ದ್ವಿತೀಯ ಪಿಯುಸಿ ಪರೀಕ್ಷೆ 1ರ ವೇಳಾಪಟ್ಟಿ…
Updated By: Priyalachhi ಚಿಕ್ಕೋಡಿ, ಬೆಳಗಾವಿ: ಕಳೆದ ಏಳು ದಿನಗಳಿಂದ ನಡೆದಿರುವ ಕಬ್ಬು ಬೆಳೆಗಾರರ ಹೋರಾಟ ಕೊನೆಗೊಳಿಸಲು ಸರ್ಕಾರದ ಪರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಬೆಳಗಾವಿಗೆ ಆಗಮಿಸಿ ಸಂಧಾನ ಮಾತುಕತೆ ನಡೆಸಿದರು. ನಾಳೆಯೇ ಸರ್ಕಾರ ಒಂದು ನಿರ್ಧಾರ ಪ್ರಕಟಿಸಬೇಕು ಎಂದು ರೈತರು ಪಟ್ಟು ಹಿಡಿದರು. ಆದರೆ, ಸಚಿವರು ಏಳನೇ ತಾರೀಖಿನವರೆಗೂ ಕಾಲಾವಕಾಶ ಕೇಳಿದರು. ಇದಕ್ಕೆ ಕಬ್ಬು ಬೆಳೆಗಾರರು ಒಪ್ಪದೇ ಇದ್ದಾಗ ಮಾತುಕತೆ ಮುರಿದು ಬಿತ್ತು. ಇದರಿಂದ ಆಕ್ರೋಶಗೊಂಡ ರೈತರು ಸಚಿವರ ಕಾರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ನಡೆಯುತ್ತಿರುವ ಹೋರಾಟಗಾರರನ್ನು ಭೇಟಿ ಮಾಡಿ, ಸರ್ಕಾರ ಪರವಾಗಿ ಮಾತನಾಡಿದ ಸಚಿವ ಎಚ್ ಕೆ ಪಾಟೀಲ್, ನೀವು ಅನೇಕ ವಿಚಾರಗಳನ್ನು ಸರ್ಕಾರದ ಮುಂದೆ ಇಟ್ಟಿದ್ದೀರಿ. ಇದರಿಂದ ನಾಳೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ರೈತ ಮುಖಂಡರ ಜೊತೆ ಮಾತುಕತೆ ನಡೆಸಲಾಗುತ್ತದೆ, ಆ ಬಳಿಕ ಏಳನೇ ತಾರೀಖು ಸಕ್ಕರೆ ಕಾರ್ಖಾನೆ ಮಾಲಿಕರ ಸಭೆ ಕರೆಯಲಾಗುವುದು ಎಂದು…
Subscribe to Updates
Get the latest creative news from FooBar about art, design and business.