Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಆಪರೇಷನ್ ಸಿಂಧೂರ್ ನಡೆದ ಆರು ತಿಂಗಳ ನಂತರ, ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳು, ವಿಶೇಷವಾಗಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಾರತದ ಮೇಲೆ ಸಂಘಟಿತ ದಾಳಿಗಳ ಹೊಸ ದಾಳಿಗೆ ಸಜ್ಜುಗೊಳ್ಳುತ್ತಿರುವ ಮಾಹಿತಿ ಎಂದು ಗುಪ್ತಚರ ಇಲಾಖೆ ವರದಿಯಿಂದ ಬಹಿರಂಗಗೊಂಡಿದೆ. NDTV ವರದಿಯ ಪ್ರಕಾರ, ಹೊಸ ಗುಪ್ತಚರ ಮಾಹಿತಿಗಳು, ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರವನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಚಟುವಟಿಕೆಯಲ್ಲಿ ಆತಂಕಕಾರಿ ಏರಿಕೆಯನ್ನು ಬಹಿರಂಗಪಡಿಸಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಪ್ರಾರಂಭಿಸಿದ ನಿಖರವಾದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಆಪರೇಷನ್ ಸಿಂಧೂರ್ ನಡೆದ 6 ತಿಂಗಳ ನಂತರ, ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳು, ವಿಶೇಷವಾಗಿ ಲಷ್ಕರ್-ಎ-ತೈಬಾ (LeT) ಮತ್ತು ಜೈಶ್-ಎ-ಮೊಹಮ್ಮದ್ (JeM) ಸಂಘಟಿತ ದಾಳಿಗಳ ಹೊಸ ಯೋಜನೆಗಳಿಗೆ ಸಜ್ಜುಗೊಳ್ಳುತ್ತಿವೆ ಎಂದು ವರದಿ ಸೂಚಿಸಿದೆ. ಗುಪ್ತಚರ ದಾಖಲೆಯ ಪ್ರಕಾರ, ಸೆಪ್ಟೆಂಬರ್‌ನಿಂದ ಭಯೋತ್ಪಾದಕ ಗುಂಪುಗಳು ಒಳನುಸುಳುವಿಕೆ, ವಿಚಕ್ಷಣೆ ಮತ್ತು ಗಡಿಯಾಚೆಗಿನ ಲಾಜಿಸ್ಟಿಕ್ಸ್ ನ್ನು ಹೆಚ್ಚಿಸಿವೆ. ಪಾಕಿಸ್ತಾನದ ವಿಶೇಷ…
Updated By: Priyalachhi ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ಕುರಿತು ಜೋರಾಗಿ ಚರ್ಚೆ ನಡೆಯುತ್ತಿರುವಂತೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ದೆಹಲಿಗೆ ಆಗಮಿಸಿದ್ದು, ರಾಜ್ಯದ ಜಲವಿವಾದಗಳ ಕುರಿತು ವಕೀಲರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಕೆ ಶಿವಕುಮಾರ್, ಮೇಕೆದಾಟು ಸೇರಿದಂತೆ ಸುಪ್ರೀಂಕೋರ್ಟ್ ಅಲ್ಲಿ ಬಾಕಿಯಿರುವ ಕರ್ನಾಟಕದ ಜಲ ವಿವಾದಗಳ ಕುರಿತು ಕರ್ನಾಟಕದ ಪರ ವಾದಿಸುತ್ತಿರುವ ಹಿರಿಯ ವಕೀಲರಾದ ಮೋಹನ್ ವಿ ಕಾತರಾಕಿ, ನಿಶಾಂತ್ ಪಾಟೀಲ್, ರಾಜ್ಯದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ನನ್ನ ತಾಂತ್ರಿಕ ಸಲಹೆಗಾರರಾದ ಜೈಪ್ರಕಾಶ್ ಜೊತೆಗೆ ದೆಹಲಿಯ ಕರ್ನಾಟಕ ಭವನದಲ್ಲಿ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡುವ ಯಾವುದೇ ಯೋಜನೆ ಇಲ್ಲ. ಏಕೆಂದರೆ ಅವರೆಲ್ಲರೂ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯನಿರತರಾಗಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ…
Updated By: Priyalachhi ಬೆಂಗಳೂರು: ಮದ್ಯದ ಮತ್ತಿನಲ್ಲಿ ಕೆಲಸಕ್ಕೆ ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್ಗಳ ಬಳಿ ಲಂಚ ಪಡೆದು ಕರ್ತವ್ಯಕ್ಕೆ ನಿಯೋಜನೆ ಮಾಡುತ್ತಿದ್ದ ಡಿಪೋ ಮ್ಯಾನೇಜರ್ ಸೇರಿದಂತೆ 9 ಮಂದಿಯನ್ನು BMTC ಅಮಾನತುಗೊಳಿಸಿದೆ. ಅಕ್ಟೋಬರ್ 13ರಂದು ಖಾಸಗಿ ಸುದ್ದಿವಾಹಿತಿಯೊಂದು ಈ ಬಗ್ಗೆ ವರದಿ ಪ್ರಕಟಿಸಿತ್ತು. ವರದಿ ಬಂದ ಬೆನ್ನಲ್ಲೇ ಬಿಎಂಟಿಸಿ, ಕಠಿಣ ಕ್ರಮವನ್ನು ತೆಗೆದುಕೊಂಡಿದೆ. ಡಿಪೋ- 35ರ ಎಲೆಕ್ಟ್ರಿಕ್ ಬಸ್ಗಳ ಕೆಲವು ಚಾಲಕರು ಮದ್ಯ ಸೇವಿಸಿ ಕರ್ತವ್ಯಕ್ಕೆ ಬರುತ್ತಿದ್ದರು. ಹೀಗಿದ್ದರೂ ಅಧಿಕಾರಿಗಳು ಚಾಲಕರಿಂದ ಸಾವಿರಾರು ರೂ. ಲಂಚ ಪಡೆದು ಕರ್ತವ್ಯಕ್ಕೆ ಹಾಜರಾಗಲು ಅವಕಾಶ ನೀಡುತ್ತಿದ್ದರು. ನಿಯಮಗಳ ಪ್ರಕಾರ ಬಸ್ ಚಾಲನೆ ಮಾಡಲು ಡಿಪೋಗೆ ಬರುವ ಪ್ರತಿ ಚಾಲಕನನ್ನು ಮದ್ಯ ಸೇವನೆ ಸಂಬಂಧ ತಪಾಸಣೆ ನಡೆಸುವುದು ಕಡ್ಡಾಯವಾಗಿದೆ. ಮದ್ಯ ಸೇವನೆ ಮಾಡಿ ಬಂದಿದ್ದರೆ, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹೀಗಿದ್ದರೂ ಮದ್ಯ ಸೇವನೆ ಮಾಡಿದ ಚಾಲಕರಿಂದ ಲಂಚದ ಹಣ ಪಡೆದು ಕರ್ತವ್ಯಕ್ಕೆ ಹಾಜರಾಗಲು ಅನುಮತಿ ನೀಡುವ ಮೂಲಕ ಬಿಎಂಟಿಸಿ ಅಧಿಕಾರಿಗಳೇ ಜನರ ಜೀವಗಳ ಜೊತೆ…
Updated By: Priyalachhi ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದ್ದು ಈ ಬಗ್ಗೆ ಸ್ವತಃ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಬುಧವಾರ ಮಾಹಿತಿ ನೀಡಿದ್ದಾರೆ. ಹಾಲಿನ ದರ ಹೆಚ್ಚಳ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪರೋಕ್ಷವಾಗಿ ಸುಳಿವು ನೀಡಿದ್ದು, ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ನಾವು ಮಂಡಳಿಗೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ. ನಮ್ಮ ರಾಜ್ಯದಲ್ಲಿ ಮಾತ್ರ ಕಡಿಮೆ ಬೆಲೆ ಇದೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ ಹೆಚ್ಚಿದೆ. ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ನಾವು ಮಂಡಳಿಗೆ ಮನವಿ ಸಲ್ಲಿಸಿದ್ದೇವೆ ಇಷ್ಟು ಅಂತ ದರದ ಬಗ್ಗೆ ಹೇಳಿಲ್ಲ. ಅರ್ಧ ಲೀಟರ್ ಮಾರಿದರೆ ನಷ್ಟವಾಗುತ್ತದೆ. ಒಂದು ಲೀಟರ್ ಹಾಲು ಮಾರಿದರೆ ಲಾಭ ಆಗುತ್ತದೆ. ತುಪ್ಪ ಇವತ್ತು ದರ ಏರಿಕೆ ಮಾಡಲಾಗಿದ್ದು, ಬೇರೆ ಕಂಪನಿಯ ಹಾಲು ಆನ್‌ಲೈನ್ ಮಾರ್ಕೆಟಿಂಗ್ ಜಾಸ್ತಿ ಆಗಿದ್ದು, ನಾವು ರೈತರಿಗೆ ಹಾಲು ಕೂಡಲೇ ಹಣ ಕೊಡಬೇಕು. ಬೇರೆ ರಾಜ್ಯಗಳು ಹೆಚ್ಚು ಹಣ ಬಾಕಿ…
Updated By: Priyalachhi ನವೆಂಬರ್ 21 ರಿಂದ ಜಾರಿಗೆ ಬರುವಂತೆ ರೋಸ್ನೆಫ್ಟ್ ಮತ್ತು ಲುಕೋಯಿಲ್ ಮೇಲೆ ಅಮೆರಿಕ ವಿಧಿಸಿರುವ ಹೊಸ ನಿರ್ಬಂಧಗಳ ನಂತರ, ಭಾರತ ನವೆಂಬರ್ ಅಂತ್ಯದಿಂದ ರಷ್ಯಾದ ಕಚ್ಚಾ ತೈಲದ ನೇರ ಆಮದನ್ನು ಕಡಿಮೆ ಮಾಡಲು ಸಜ್ಜಾಗಿದೆ. ಸಂಸ್ಕರಣಾಗಾರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನಂತಹ ಇಂಧನಗಳಾಗಿ ಪರಿವರ್ತಿಸಲಾಗುವ, ರಷ್ಯಾದ ಕಚ್ಚಾ ತೈಲದ ಆಮದಿನ ಅರ್ಧಕ್ಕಿಂತ ಹೆಚ್ಚಿನದನ್ನು ಹೊಂದಿರುವ ಭಾರತೀಯ ಸಂಸ್ಕರಣಾಗಾರಗಳು ಮಾಸ್ಕೋದ ಎರಡು ದೊಡ್ಡ ತೈಲ ರಫ್ತುದಾರರ ಮೇಲಿನ ಇತ್ತೀಚಿನ ನಿರ್ಬಂಧಗಳನ್ನು ಅನುಸರಿಸುವ ನಿರೀಕ್ಷೆಯಿದೆ ಎಂದು ವಿಶ್ಲೇಷಕರು ತಿಳಿಸಿದ್ದಾರೆ. ಕಡಲ ಗುಪ್ತಚರ ಸಂಸ್ಥೆ ಕೆಪ್ಲರ್ ಪ್ರಕಾರ, ಡಿಸೆಂಬರ್‌ನಲ್ಲಿ ಭಾರತಕ್ಕೆ ರಷ್ಯಾದ ಆಮದು ತೀವ್ರ ಕುಸಿತಕ್ಕೆ ಕಾರಣವಾಗುತ್ತದೆ. ಮಧ್ಯವರ್ತಿಗಳು ಮತ್ತು ಪರ್ಯಾಯ ವ್ಯಾಪಾರ ಮಾರ್ಗಗಳ ಮೂಲಕ 2026 ರ ಆರಂಭದ ವೇಳೆಗೆಇದು ಕ್ರಮೇಣ ಚೇತರಿಕೆ ಕಾಣಲಿದೆ ಎಂದು ನಿರೀಕ್ಷಿಸಲಾಗಿದೆ. ರೋಸ್ನೆಫ್ಟ್‌ನೊಂದಿಗೆ ದೀರ್ಘಾವಧಿಯ ಪೂರೈಕೆ ಒಪ್ಪಂದವನ್ನು ಹೊಂದಿರುವ ಪ್ರಮುಖ ಆಮದುದಾರ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ರಷ್ಯಾದ ತೈಲವನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸುತ್ತದೆ. ಇತರ ಎರಡು ಸರ್ಕಾರಿ…
Updated By: Priyalachhi ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮತಗಳ್ಳತನ ಆರೋಪವು “ಆಧಾರರಹಿತ”. ಏಕೆಂದರೆ ಹರಿಯಾಣದಲ್ಲಿ ಮತದಾರರ ಪಟ್ಟಿಯ ವಿರುದ್ಧ ಯಾವುದೇ ಮೇಲ್ಮನವಿಗಳು ದಾಖಲಾಗಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ ಕರ್ನಾಟಕದಂತೆ ಹರಿಯಾಣ ಚುನಾವಣೆಯಲ್ಲೂ ಮತಕಳ್ಳತನ ನಡೆದಿದೆ. 25 ಲಕ್ಷ ಮತದಾರರು “ನಕಲಿ” ಮತ್ತು ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ “ಮತಗಳ್ಳತನ” ನಡೆದಿದೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಚುನಾವಣಾ ಆಯೋಗದ ಅಧಿಕಾರಿಗಳು ಪ್ರತಿಕ್ರಿಯಿಸುತ್ತಿದ್ದಾರೆ. 2024ರ ಅಕ್ಟೋಬರ್‌ನಲ್ಲಿ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹಲವಾರು ಬಾರಿ ಮತ ಚಲಾಯಿಸಿದ ಮತದಾರರನ್ನು ಕಾಂಗ್ರೆಸ್‌ನ ಬೂತ್ ಏಜೆಂಟ್‌ಗಳು ಏಕೆ ಗುರುತಿಸಲಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಶ್ನಿಸಿದ್ದಾರೆ. “ಪರಿಷ್ಕರಣೆಯ ಸಮಯದಲ್ಲಿ ಕಾಂಗ್ರೆಸ್ ನ ಬೂತ್ ಮಟ್ಟದ ಏಜೆಂಟ್‌ಗಳು ಯಾವುದೇ ಅರ್ಜಿ ಮತ್ತು ಆಕ್ಷೇಪಣೆಗಳನ್ನು ಏಕೆ ಎತ್ತಲಿಲ್ಲ?” ಎಂದು ರಾಹುಲ್ ಗಾಂಧಿಯವರ ಆರೋಪಕ್ಕೆ ಚುನಾವಣಾ ಅಧಿಕಾರಿ ತಿರುಗೇಟು ನೀಡಿದ್ದಾರೆ. ಮತದಾರರ ಪಟ್ಟಿಯಲ್ಲಿ ಅಕ್ರಮಗಳನ್ನು ಗುರುತಿಸಲು ರಾಜಕೀಯ ಪಕ್ಷಗಳು ಬೂತ್…
Updated By: Priyalachhi ಫೈಸಲಾಬಾದ್ನ ಇಕ್ಬಾಲ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡ 2 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಶಾಹೀನ್ ಅಫ್ರಿದಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ 63 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 49.1 ಓವರ್ಗಳಲ್ಲಿ 263 ರನ್ಗಳಿಸಿ ಆಲೌಟ್ ಆಯಿತು. 264 ರನ್ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಸೈಮ್ ಅಯ್ಯೂಬ್ (39) ಹಾಗೂ ಫಖರ್ ಝಮಾನ್ (45) ಉತ್ತಮ ಆರಂಭ ಒದಗಿಸಿದ್ದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ 55 ರನ್ಗಳ ಕೊಡುಗೆ ನೀಡಿದರು. ಆ ಬಳಿಕ ಬಂದ ಸಲ್ಮಾನ್ ಅಲಿ ಅಘಾ 62 ರನ್ ಬಾರಿಸಿದರು. ಇದಾಗ್ಯೂ ಪಾಕಿಸ್ತಾನ್ ತಂಡ 257 ರನ್ಗಳಿಗೆ 7 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ…
Updated By: Priyalachhi ಪಂಚಾಂಗ: 05-11-2025, ಬುಧವಾರ ಸಂವತ್ಸರ : ವಿಶ್ವವಸು ಆಯನ: ದಕ್ಷಿಣಾಯಣ ಮಾಸ : ಕಾರ್ತಿಕ ಪಕ್ಷ : ಪೂರ್ಣಿಮಾ ತಿಥಿ : ಪೂರ್ಣಿಮಾ ನಕ್ಷತ್ರ : ಅಶ್ವಿನಿ ಸೂರ್ಯೋದಯ : ಮುಂಜಾನೆ 06:13 ಗಂಟೆಗೆ ಅಮೃತಕಾಲ : ಮಧ್ಯಾಹ್ನ 01:28 ರಿಂದ 02:55 ಗಂಟೆವರೆಗೆ ದುರ್ಮುಹೂರ್ತ : ಮಧ್ಯಾಹ್ನ 11:49 ರಿಂದ 12:37 ಗಂಟೆತನಕ ರಾಹುಕಾಲ : ಮಧ್ಯಾಹ್ನ 12:01 ರಿಂದ 01:28 ಗಂಟೆವರೆಗೆ ಸೂರ್ಯಾಸ್ತ : ಸಂಜೆ 05:49 ಗಂಟೆಗೆ ರಾಶಿ ಭವಿಷ್ಯ: ಮೇಷ : ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಕಷ್ಟ, ಆದರೆ ಕಠಿಣ ನಿರ್ಧಾರ ನಿಮಗೆ ಬದ್ಧರಾಗಿರಲು ನೆರವಾಗುತ್ತದೆ. ಭಾವನಾತ್ಮಕತೆ ನಿಮ್ಮ ಉದ್ದೇಶವನ್ನು ಅಲ್ಲಾಡಿಸುತ್ತದೆ, ಆದರೆ ಒಮ್ಮೆ ನಿರ್ಧರಿಸಿದ ನಂತರ ನೀವು ಅದಕ್ಕೆ ಅಂಟಿಕೊಳ್ಳುವುದು ಅಗತ್ಯ. ಅಲ್ಲದೆ, ನಿಮ್ಮ ದಾಪುಗಾಲು ಇಡುವಲ್ಲಿ ಆಘಾತವನ್ನು ತಡೆದುಕೊಳ್ಳಲು ಕಲಿಯಿರಿ. ವೃಷಭ : ಇಂದು ಖಂಡಿತವಾಗಿಯೂ ನಿಮ್ಮ ಕಾಲು ಕೊಳೆ ಮಾಡಿಕೊಳ್ಳುವ ಯೋಜನೆಗೆ ದಿನವಲ್ಲ(ಪೆಡಿಕ್ಯೂರ್ ಆಗಬಹುದು). ನೀವು ಹೊಸ ಯೋಜನೆ ಪ್ರಾರಂಭಿಸುವುದನ್ನು…
Updated By: Priyalachhi ಬೆಂಗಳೂರು: ಕಿರ್ಲೋಸ್ಕರ್ ಫೆರೋಸ್ ಇಂಡಸ್ಟ್ರೀಸ್ ಕರ್ನಾಟಕದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕೋಟಿ ರೂ. ಬಂಡವಾಳ ಹೂಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ತಿಳಿಸಿದರು. ರಾಜ್ಯದ ಕೈಗಾರಿಕೆ ಮತ್ತು ವಾಣಿಜ್ಯ ಉನ್ನತ ಮಟ್ಟದ ನಿಯೋಗದೊಂದಿಗೆ ರೋಡ್ ಶೋ ನಡೆಸಿದ ಅವರು, ಹೂಡಿಕೆ ಕುರಿತು ಹತ್ತಕ್ಕೂ ಹೆಚ್ಚು ಉದ್ಯಮಿಗಳನ್ನು ಭೇಟಿಯಾಗಿ, ಮಾತುಕತೆ ನಡೆಸಿದರು. ಜೊತೆಗೆ ವಿಪ್ರೋ ಪ್ಯಾರಿ, ಅಟ್ಲಾಸ್ ಕಾಪ್ಕೋ, ಬೆಲ್ ರೈಸ್ ಇಂಡಸ್ಟ್ರೀಸ್, ಫಿನೋಲೆಕ್ಸ್ ಮತ್ತು ಫ್ಲೂಯಿಡ್ ಕಂಟ್ರೋಲ್ಸ್ ಲಿಮಿಟೆಡ್ ಉದ್ಯಮಗಳು ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ತೋರಿಸಿವೆ. ಬಂಡವಾಳ ತೊಡಗಿಸಲು ಮುಂದಾಗಿರುವ ಈ ಕಂಪನಿಗಳಿಗೆ ಭೂಮಿ, ಮೂಲಸೌಕರ್ಯ ಮುಂತಾದ ಅನುಕೂಲಗಳ ಜೊತೆಗೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದು ಹೇಳಿದ್ದಾರೆ. ಈಗಾಗಲೇ ಹಿರಿಯೂರಿನಲ್ಲಿ ತನ್ನ ಘಟಕ ಹೊಂದಿರುವ ಕಿರ್ಲೋಸ್ಕರ್ ಫೆರೋಸ್, ಅದನ್ನು ಮೇಲ್ದರ್ಜೆಗೇರಿಸಲು ಮುಂದಾಗಿದ್ದು, ಇಲ್ಲಿ ಸ್ಪಾಂಜ್ ಪೈಪ್ ಉತ್ಪಾದನೆ ಆರಂಭಿಸಲಿದೆ. ಜೊತೆಗೆ ತನ್ನ ಉಕ್ಕು ಉತ್ಪಾದನೆ ಘಟಕದ ಸಾಮರ್ಥ್ಯ ಹೆಚ್ಚಳ,…
Updated By: Priyalachhi ಚಿಕ್ಕೋಡಿ(ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ರೈತರು ಚಳಿ, ಗಾಳಿಯೆನ್ನದೆ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯು 7ನೇ ದಿನಕ್ಕೆ ಕಾಲಿಟ್ಟಿದೆ. ವಿಜಯೇಂದ್ರಗೆ ಹುಟ್ಟಹಬ್ಬದ ಶುಭಾಶಯ ಕೋರಿದ ರೈತರು: ರೈತರ ಅಹೋರಾತ್ರಿ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರೂ ಭಾಗವಹಿಸಿದರು. ಪ್ರತಿಭಟನೆಯ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು, ತಮ್ಮ ಹುಟ್ಟುಹಬ್ಬದ ನಡುವೆಯೂ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಅನ್ನದಾತರ ಪರ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಪ್ರತಿಭಟನಾ ಸ್ಥಳದಲ್ಲೇ ರೈತರು ವಿಜಯೇಂದ್ರಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ರೈತರ ಪ್ರತಿಭಟನೆ ಸ್ಟೇಜ್ ಮೇಲೆಯೇ ವಿಜಯೇಂದ್ರ ಮಲಗಿದ್ದರು. ಮಧ್ಯರಾತ್ರಿ ವೇಳೆಗೆ ಅವರನ್ನು ಎಬ್ಬಿಸಿದ ರೈತರು ಜನ್ಮದಿನದ ಶುಭಾಶಯ ತಿಳಿಸಿದರು. ಹೋರಾಟವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ: ಪ್ರತಿಭಟನೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ, ”ಕಳೆದ 6 ದಿನಗಳಿಂದ ಕಬ್ಬು ಬೆಳೆಗಾರರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರ ಇದಕ್ಕೆ ಕವಡೆಕಾಸಿನ…
Subscribe to Updates
Get the latest creative news from FooBar about art, design and business.