Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಬೆಂಗಳೂರು: ಇದೇ ನವೆಂಬರ್ 6 ಹಾಗೂ 11ರಂದು ಎರಡು ಹಂತದಲ್ಲಿ ಬಿಹಾರ ವಿಧಾನಸಭೆ ಚುನಾವಣೆ (Bihar Assembly Election 2025) ನಡೆಯಲಿದ್ದು, ಈಗಾಗಲೇ ಗೆಲುವಿಗಾಗಿ ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಿಗಿದ್ದಾರೆ. ಇನ್ನು ಇತ್ತ ಬೆಂಗಳೂರಿನಲ್ಲಿರುವ ಕೆಲಸ ಮಾಡಿಕೊಂಡಿರುವ ಬಿಹಾರಿಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಮತಯಾಚನೆ ಮಾಡಿದ್ದಾರೆ. ಅಲ್ಲದೇ ಬಿಹಾರಿಗಳು ತಮ್ಮ ರಾಜ್ಯಕ್ಕೆ ಹೋಗಿ ಮತದಾನ ಮಾಡಿಬರಲು ಮೂರು ದಿನ ರಜೆ ನೀಡಬೇಕೆಂದು ಆಯಾ ಸಂಸ್ಥೆ, ಕಂಪನಿಗಳಿಗೆ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, 2025ರ ನವೆಂಬರ್ 6 ಮತ್ತು 11 ರಂದು ನಡೆಯಲಿರುವ ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ, ಬೆಂಗಳೂರು ಮತ್ತು ಕರ್ನಾಟಕದಾದ್ಯಂತ ಕೆಲಸ ಮಾಡುತ್ತಿರುವ ಬಿಹಾರದ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಂಪನಿಗಳು, ಉದ್ಯಮಿದಾರರು, ಹೋಟೆಲ್‌ಗಳು ಮತ್ತು ಗುತ್ತಿಗೆದಾರರು ಕನಿಷ್ಠ ಮೂರು ದಿನಗಳ ವೇತನ ಸಹಿತ ರಜೆ ನೀಡಬೇಕು. ಈ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ…
Updated By: Priyalachhi ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಭಾರತ ಅಂಡರ್-19 ಚಾಲೆಂಜರ್ ಟ್ರೋಫಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಅವರು ಸಿ ತಂಡದ ಪರ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಹಾಗೂ ವಿಕೆಟ್‌ಕೀಪರ್ ಆಗಿ ಆಡಲಿದ್ದಾರೆ. ಇತ್ತೀಚೆಗೆ ಕರ್ನಾಟಕ ತಂಡದ ನಾಯಕರಾಗಿದ್ದ ಅನ್ವಯ್, ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ನಿಂದ ಹೆಸರುವಾಸಿಯಾಗಿದ್ದಾರೆ. ಯುವ ಆಟಗಾರರ ಪ್ರತಿಭೆಗೆ ವೇದಿಕೆಯಾಗಿರುವ ಈ ಟೂರ್ನಿಯಲ್ಲಿ ಅನ್ವಯ್ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರ ಕಿರಿಯ ಮಗ ಅನ್ವಯ್ ದ್ರಾವಿಡ್ಗೆ (Anvay Dravid) ಭಾರತ ಅಂಡರ್ 19 ತಂಡದಲ್ಲಿ ಸ್ಥಾನ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿರುವ ಅನ್ವಯ್ ಅವರನ್ನು ಇತ್ತೀಚೆಗಷ್ಟೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ತನ್ನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸನ್ಮಾನಿಸಿತ್ತು. ಹಾಗೆಯೇ ಕಳೆದ ತಿಂಗಳು ನಡೆದಿದ್ದ ವಿನೂ ಮಂಕಡ್ ಟ್ರೋಫಿಯಲ್ಲಿ ಕರ್ನಾಟಕ ತಂಡದ ನಾಯಕರಾಗಿದ್ದ…
Updated By: Priyalachhi ಬೆಂಗಳೂರು: ಸರ್ಕಾರಿ ಸ್ವಾಮ್ಯದ ಬೆಸ್ಕಾಂ ಮೂಲಕ ಕರ್ನಾಟಕದ ಇಂಧನ ಇಲಾಖೆಯು, ಚಾರ್ಜಿಂಗ್ ಪಾಯಿಂಟ್‌ಗಳ ಪ್ರಸ್ತಾವಿತ ಸ್ಥಾಪನೆಯೊಂದಿಗೆ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ದೀರ್ಘ ಹೆದ್ದಾರಿ ಚಾಲನೆಯನ್ನು ತೊಂದರೆ-ಮುಕ್ತವಾಗಿಸುವ ಗುರಿಯನ್ನು ಹೊಂದಿದೆ. ಬೆಂಗಳೂರು-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ (NH-48) ಮತ್ತು ರಾಜ್ಯಾದ್ಯಂತ 40 ಇತರ ಟೋಲ್ ಪಾಯಿಂಟ್‌ಗಳಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುತ್ತಿದೆ ಎಂದು ಇಂಧನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಗುರಿಯು ವ್ಯಾಪಕವಾದ EV ಕಾರಿಡಾರ್ ಜಾಲವನ್ನು ನಿರ್ಮಿಸುವತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಎನ್, ವಿದ್ಯುತ್ ಕಂಪನಿಯು ಕರ್ನಾಟಕದ ಪ್ರತಿಯೊಬ್ಬ ಪ್ರಯಾಣಿಕರಿಗೂ ವಿದ್ಯುತ್ ಚಲನಶೀಲತೆಯನ್ನು ತಡೆರಹಿತ ಅನುಭವವನ್ನಾಗಿ ಮಾಡಲು ಬದ್ಧವಾಗಿದೆ ಎಂದು ಹೇಳಿದರು. ಹೆದ್ದಾರಿಗಳಲ್ಲಿ, ಪ್ರವಾಸಿ ತಾಣಗಳಲ್ಲಿ ಮತ್ತು ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವುದರೊಂದಿಗೆ, ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಕ್ರಮ ಕೈಗೊಳ್ಳಲಾಗುವುದು. ಈ ಉಪಕ್ರಮವು ಕೇವಲ ಅನುಕೂಲತೆಯ ಬಗ್ಗೆ ಅಲ್ಲ. ಇದು ರಾಜ್ಯದ…
Updated By: Priyalachhi ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ನಿರ್ಣಾಯಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಡಳಿತಾರೂಢ ಎನ್ ಡಿಎ ಮೈತ್ರಿಕೂಟವು “160 ಕ್ಕೂ ಹೆಚ್ಚು ಸ್ಥಾನಗಳನ್ನು” ಗೆಲ್ಲುತ್ತದೆ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಬಿಹಾರದಲ್ಲಿ ಮತ್ತೆ ಸರ್ಕಾರ ರಚಿಸುತ್ತದೆ ಎಂದು ಟೈಮ್ಸ್ ನೌಗೆ ನೀಡಿದ ಸಂದರ್ಶನದಲ್ಲಿ ಅಮಿತ್ ಶಾ ಹೇಳಿದ್ದಾರೆ. “ನಾವು 160 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಮತ್ತು ಬಿಹಾರದಲ್ಲಿ ಸರ್ಕಾರ ರಚಿಸುತ್ತೇವೆ. ನಿತೀಶ್ ಕುಮಾರ್ ಇಲ್ಲಿ ಸಿಎಂ ಮತ್ತು ನರೇಂದ್ರ ಮೋದಿ ಅಲ್ಲಿ ಪ್ರಧಾನಿ. ಸಿಎಂ ಸ್ಥಾನ ಮತ್ತು ಪ್ರಧಾನಿ ಸ್ಥಾನ ಎರಡೂ ಖಾಲಿ ಇಲ್ಲ” ಎಂದರು. ಬಿಹಾರ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವೈಯಕ್ತಿಕ ದಾಳಿ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಮಿತ್…
Updated By: Priyalachhi ಪಾಟ್ನಾ (ಬಿಹಾರ): ವಿಧಾನಸಭಾ ಚುನಾವಣೆಗೂ ಮುನ್ನ ಪ್ರತಿಪಕ್ಷ ನಾಯಕ, ಮಹಾಘಟಬಂಧನ್ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಅವರು ದೊಡ್ಡ ದೊಡ್ಡ ಭರವಸೆಗಳನ್ನು ಪ್ರಕಟಿಸುತ್ತಿದ್ದಾರೆ. ಇಂದು (ಮಂಗಳವಾರ) ಚುನಾವಣಾ ಪ್ರಚಾರಕ್ಕೆ ಹೊರಡುವ ಮೊದಲು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ನಮ್ಮ ಸರ್ಕಾರ ರಚನೆಯಾದ ನಂತರ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು” ಎಂದು ತಿಳಿಸಿದರು. “ಬಿಹಾರದ ಜನರು ಬದಲಾವಣೆಯ ಮನಸ್ಥಿತಿಯಲ್ಲಿದ್ದಾರೆ. ಚುನಾವಣೆಯ ಉತ್ಸಾಹ ಜನರಲ್ಲಿ ಕಾಣುತ್ತಿದೆ. ಈ ಬಾರಿ ಮಹಘಟಬಂಧನ್ ಸರ್ಕಾರ ರಚನೆ ಮಾಡಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಹಿಳೆಯರಿಗೆ ಸಂಕ್ರಾಂತಿ ಉಡುಗೊರೆ: ಜನವರಿ 14 ರಂದು ಹೊಸ ವರ್ಷ ಎಂದು ಪರಿಗಣಿಸಲಾಗುವ ಮಕರ ಸಂಕ್ರಾಂತಿಯಂದು (ದಹಿ ಚುಡಾ) ‘ಮೈ ಬೆಹೆನ್ ಮಾನ್’ ಯೋಜನೆ ಜಾರಿ ಮಾಡಲಾಗುವುದು. ತಿಂಗಳಿಗೆ 2,500 ರೂಪಾಯಿಯಂತೆ ವರ್ಷಕ್ಕೆ 30 ಸಾವಿರ ರೂಪಾಯಿ ಪ್ರತಿ ಮಹಿಳೆಗೆ ನೀಡಲಾಗುವುದು. ಐದು ವರ್ಷಗಳಲ್ಲಿ ₹1.5 ಲಕ್ಷ ರೂಪಾಯಿ ಅನ್ನು ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ಹೇಳಿದರು.…
Updated By: Priyalachhi ಬಾಗಲಕೋಟೆ/ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ. ಮೇಟಿ (79) ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಆಸ್ಪತ್ರೆಯಲ್ಲೇ ಅಸುನೀಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೇಟಿ ಕಳೆದ ಒಂದು ವಾರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಹೆಚ್.ವೈ. ಮೇಟಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಮೇಟಿ ಅವರನ್ನು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಇದೀಗ ಮೇಟಿ ಕೊನೆಯುಸಿರೆಳೆದಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್ ಪೋಸ್ಟ್ ಮೂಲಕ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ. ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ.…
Updated By: Priyalachhi ಪ್ಯಾನ್ ಕಾರ್ಡ್: (ಪ್ಯಾನ್-ಆಧಾರ್ ಲಿಂಕ್) ಇಂದು ಆಧಾರ್ ಕಾರ್ಡ್‌ನಷ್ಟೇ ಅತ್ಯಗತ್ಯವಾಗಿದೆ. ಪ್ಯಾನ್ ಕಾರ್ಡ್ ಇಲ್ಲದೆ ನೀವು ಯಾವುದೇ ಹಣಕಾಸಿನ ವಹಿವಾಟುಗಳನ್ನು ನಡೆಸಲು ಸಾಧ್ಯವಿಲ್ಲ. KYC ಅಡಿಯಲ್ಲಿ ಸರ್ಕಾರವು ಪ್ರತಿಯೊಂದು ಯೋಜನೆ ಮತ್ತು ಸೇವೆಯೊಂದಿಗೆ ಆಧಾರ್ ಅನ್ನು ಲಿಂಕ್ ಮಾಡುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರವು ಆಧಾರ್‌ನೊಂದಿಗೆ ಪ್ಯಾನ್ ಅನ್ನು ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಡಿಸೆಂಬರ್ 31, 2025 ರೊಳಗೆ ಲಿಂಕ್ ಮಾಡುವಿಕೆಯನ್ನು ಪೂರ್ಣಗೊಳಿಸದಿದ್ದರೆ ಜನವರಿ 1, 2026 ರಿಂದ ನಿಮ್ಮ ಪ್ಯಾನ್ ಕಾರ್ಡ್ ಅನ್ನು ನಿಷ್ಕ್ರಿಯಗೊಳಿಸಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇದು ತೆರಿಗೆ ರಿಟರ್ನ್ಸ್ ಸಲ್ಲಿಸುವುದು, ಬ್ಯಾಂಕ್ ಖಾತೆ ತೆರೆಯುವುದು ಅಥವಾ ಹಣಕಾಸಿನ ವಹಿವಾಟುಗಳನ್ನು ನಡೆಸುವುದು ಗಮನಾರ್ಹವಾಗಿ ಕಷ್ಟಕರವಾಗಿಸಬಹುದು. ಗುರುತಿನ ವಂಚನೆ, ನಕಲಿ ಪ್ಯಾನ್‌ಗಳನ್ನು ರಚಿಸುವುದು ಮತ್ತು ಆರ್ಥಿಕ ವಂಚನೆಯಂತಹ ಘಟನೆಗಳನ್ನು ನಿಯಂತ್ರಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ಡಿಜಿಟಲ್ ಯುಗದಲ್ಲಿ ನೀವು ನಿಮ್ಮ ಮನೆಯಿಂದಲೇ ನಿಮ್ಮ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಬಹುದು. ಲಿಂಕ್ ಮಾಡುವುದು ಹೇಗೆ? ನೀವು…
Updated By: Priyalachhi ವಿಜಯಪುರ: ಉತ್ತರ ಕರ್ನಾಟಕದ ವಿಜಯಪುರ (Vijayapura) ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕಂಪನ (Earthquake) ಸಂಭವಿಸಿದೆ. ಬೆಳಿಗ್ಗೆ 7:49ರ ಸುಮಾರಿಗೆ ಭಾರೀ ಸ್ಪೋಟದ ಸದ್ದಿನೊಂದಿಗೆ ಭೂಮಿ (Earth) ನಡುಗಿದೆ. ಜನರು ಬೆಳಗ್ಗೆಯೇ ಭೂಮಿ ನಡುಗುತ್ತಿರುವ ಅನುಭವ ಪಡೆದಿದ್ದಾರೆ. ಭಾರೀ ಸ್ಫೋಟದಂತಹ ಜೋರಾದ ಧ್ವನಿಯೊಂದಿಗೆ ಭೂಮಿ ಕಂಪಿಸಿದ್ದು, ಸ್ಥಳೀಯರು ಭಯಭೀತರಾಗಿ ಮನೆಗಳಿಂದ ಹೊರಬಂದಿದ್ದಾರೆ. ಇದು ಕಳೆದ ಎರಡು ತಿಂಗಳಲ್ಲಿ 13ನೇ ಬಾರಿಗೆ ಭೂಕಂಪನ ಸಂಭವಿಸಿದ್ದು, ಜನರು ಕಂಗಾಲಾಗಿದ್ದಾರೆ. ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ಪದೇ ಪದೇ ಇಂತಹ ಭೂಕಂಪನಗಳು ಸಂಭವಿಸುತ್ತಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಸರಣಿ ಭೂಕಂಪನದಿಂದ ಕಂಗೆಟ್ಟ ಜನ ಭಯದಲ್ಲಿದ್ದಾರೆ, ಭೂಮಿ ನಡುಗಿದ ಶಬ್ಧದಿಂದ ಬೆಚ್ಚಿಬಿದ್ದಿದ್ದಾರೆ. ವಿಜಯಪುರದಲ್ಲಿ ಬೆಳಗ್ಗೆಯೇ ಭೂಕಂಪನ! ಇಂದು ಸುಮಾರು ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯ ಕಂಪನ ಸಂಭವಿಸಿರುವ ಸಾಧ್ಯತೆ ಇದೆ. ಈ ಕಂಪನವು ವಿಜಯಪುರ ನಗರ, ತಿಕೋಟ, ಕಳ್ಳಕವಟಗಿ, ತೊರವಿ, ಶಿವಗಿರಿ, ಹೊನ್ನೂಟಗಿ ಸೇರಿದಂತೆ ತಾಲೂಕುಗಳಲ್ಲಿ ಅನುಭವವಾಗಿದೆ. ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ವೀಡಿಯೋಗಳು ಭೂಕಂಪನದ ತೀವ್ರತೆಯನ್ನು ತೋರಿಸುತ್ತಿವೆ. ಭಾರೀ ಸ್ಪೋಟದ ಸದ್ದಿನೊಂದಿಗೆ ಭೂಮಿ ನಡುಗಿದ ದೃಶ್ಯ ಮತ್ತು ಶಬ್ಧ ಎರಡು ಸಿಸಿಟಿವಿ ಕ್ಯಾಮೆರಾದಲ್ಲಿ ಸರೆಯಾಗಿದ್ದು ಜನರಲ್ಲಿ ಆತಂಕ ಹೆಚ್ಚಿಸದೆ. ಭಾರೀ ಸ್ಫೋಟದ ಶಬ್ಧದೊಂದಿಗೆ ನಡುಗಿದ ಭೂಮಿ! ಭೂಕಂಪನದ ಸಮಯದಲ್ಲಿ ಜನರು…
Updated By: Priyalachhi ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಇತ್ತ ದರ್ಶನ್ ಅಭಿಮಾನಿಗಳ ಅತಿರೇಕವೂ ದರ್ಶನ್ ಆಪ್ತರಿಗೆ ಇರಿಸು ಮುರಿಸು ತರುತ್ತಿದೆ. ಪ್ರಕರಣ ಸಂಬಂಧ ದರ್ಶನ್ ಮೊದಲ ಬಾರಿಗೆ ಜೈಲಿಗೆ ಹೋಗಿದ್ದಾಗ ರಚಿತಾ ರಾಮ್ ಸೇರಿದಂತೆ ಹಲವು ನಟ-ನಟಿಯರು ದರ್ಶನ್ ಪರ ಮಾತನಾಡಿದ್ದರೇ ಕೆಲವು ಮೌನವಾಗಿದ್ದರು. ರಚಿತಾ ರಾಮ್ ಜೈಲಿಗೆ ಹೋಗಿ ದರ್ಶನ್ ಗೆ ಸಾಂತ್ವನ ಹೇಳಿ ಬಂದಿದ್ದರು. ಆ ಬಳಿಕ ತಮ್ಮ ಕೆಲಸಗಳಲ್ಲಿ ಅವರು ಮಗ್ನರಾದರು. ಇದೀಗ ರಚಿತ ರಾಮ್ ದುನಿಯಾ ವಿಜಯ್ ನಟನೆಯ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಡೆಸುತ್ತಿದ್ದಾರೆ. ಇದೇ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ನವರಂಗ್ ಥಿಯೇಟರ್ ನಲ್ಲಿ ನಡೆದಿತ್ತು. ಅಂದು ವೇದಿಕೆ ಮೇಲೆ ನಟಿ ರಚಿತಾರಾಮ್ ಮಾತನಾಡುತ್ತಿದ್ದಾಗ ‘ಜೈ ಡಿ ಬಾಸ್’ ಎಂದು ದರ್ಶನ್ ಅಭಿಮಾನಿಗಳು ಘೋಷಣೆ ಕೂಗಿದ್ದರು. ಇದಕ್ಕೆ ನಟಿ ರಚಿತರಾಮ್ ಬೇಸರ ವ್ಯಕ್ತಪಡಿಸಿದ್ದು ಅರ್ಧದಲ್ಲಿಯೇ ಮಾತು ನಿಲ್ಲಿಸಿದ್ದರು. ನಾನು ನನ್ನ ಚಿತ್ರದ…
Updated By: Priyalachhi ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪಾಳಯಗಳು ಸಂಪುಟ ಪುನಾರಚನೆ ಮತ್ತು ನಾಯಕತ್ವದಲ್ಲಿ ಸಂಭವನೀಯ ಬದಲಾವಣೆಯನ್ನು ನಿರೀಕ್ಷಿಸುತ್ತಿದ್ದು, ಈ ನಡುವಲ್ಲೇ ಕಾಂಗ್ರೆಸ್ ಹೈಕಮಾಂಡ್ ಯಾವುದೇ ಆತುರದ ನಿರ್ಧಾರವನ್ನು ತೆಗೆದುಕೊಳ್ಳದೆ ಕಾದು ನೋಡುವ ತಂತ್ರ ಅವಳಡಿಸಿಕೊಂಡಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಬಿಹಾರ ವಿಧಾನಸಭಾ ಚುನಾವಣೆ ಹಾಗೂ ಸ್ಥಳೀಯ ಚುನಾವಣೆಗಳು ಹತ್ತಿರ ಬರುತ್ತಿದ್ದು, ಈ ನಡುವೆ ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಕೈ ಹಾಕಿ ಹೊಸ ಬಿಕ್ಕಟ್ಟನ್ನು ಸೃಷ್ಟಿಸುವುದನ್ನು ಕಾಂಗ್ರೆಸ್ ಹೈಕಮಾಂಡ್ ಬಯಸುತ್ತಿಲ್ಲ. ಹೀಗಾಗಿ, ಯಾವುದೇ ಬದಲಾವಣೆಗಳನ್ನು ಮಾಡುವ ಮನಸ್ಥಿತಿಯಲ್ಲಿ ಇಲ್ಲ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಕರ್ನಾಟಕ ರಾಜಕೀಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಬಿಹಾರದಲ್ಲಿ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಹುದ್ದೆಗೆ ಹಕ್ಕು ಮಂಡಿಸುತ್ತೇನೆಂಬ ಎಂಬ ಬಲವಾದ ಸಂದೇಶವನ್ನು ಡಿಕೆ.ಶಿವಕುಮಾರ್ ಪರೋಕ್ಷವಾಗಿ ಹೈಕಮಾಂಡ್’ಗೆ ರವಾನಿಸಿದ್ದಾರೆ. ಬಿಹಾರ ಚುನಾವಣಾ ಪ್ರಚಾರದಲ್ಲಿ ಕೈಜೋಡಿಸುವ ಮೊದಲು ಭಾನುವಾರ…
Subscribe to Updates
Get the latest creative news from FooBar about art, design and business.