Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಬೆಂಗಳೂರು, ನವೆಂಬರ್​ 03: ರೇಸ್​ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾ ಭವನದಲ್ಲಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಪಕ್ಷದ ನಿಲುವು ಮಂಡನೆ ವಿಧಾನದ ಕುರಿತು ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಕಾರ್ಯಾಗಾರ ನಡಯಿತು. ಈ ವೇಳೆ RSS ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಲು ಮುಂದಾಗಿರುವ ವಿಷಯವೂ ಚರ್ಚೆಯಾಗಿದ್ದು, ಈ ರೀತಿಯ ಸಂದರ್ಭ ಸೃಷ್ಟಿಯಾಗದಾಗ ಯಾವ ರೀತಿ ಕೌಂಟರ್ ಮಾಡಬೇಕು ಎಂಬುದನ್ನು RSS ಮುಖಂಡರು ಬಿಜೆಪಿ ಜನಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಏನೆಲ್ಲ ಸಲಹೆ? ಕಾಂಗ್ರೆಸ್ ಸೇರಿ ಬೇರೆ ಸರ್ಕಾರಗಳು ಬಂದಾಗ ನರೇಟಿವ್ ಸೆಟ್ ಆಗುತ್ತಲೇ ಇರುತ್ತೆ. ಆರ್‌ಎಸ್‌ಎಸ್‌ ನಿಷೇಧ ಮಾಡಿದಾಗಲೂ ಇಂತಹದ್ದೇ ಸನ್ನಿವೇಶ ಸೃಷ್ಟಿಯಾಗಿತ್ತು. ಆ ಕಾಲದಲ್ಲಿ ಸಾಮಾಜಿಕ ಮಾಧ್ಯಮಗಳು ಇರಲಿಲ್ಲ. ಈಗ ಸಾಮಾಜಿಕ ಮಾಧ್ಯಮಗಳು ಮುಂಚೂಣಿಯಲ್ಲಿದ್ದು, ಅಲ್ಲೇ ಡ್ರಾ ಅಲ್ಲೇ ಬಹುಮಾನ ಎಂಬ ಪರಿಸ್ಥಿತಿ ಇದೆ. ಕೆಲವೊಂದಕ್ಕೆ ಮೌನವೇ ಉತ್ತರವಾಗಿರಬೇಕು. ಪಕ್ಷದಲ್ಲಿ ಒಂದು ರಿಸರ್ಚ್ ವಿಂಗ್ ಇಟ್ಟುಕೊಳ್ಳಿ.  ಈ ರೀತಿಯ ಸಂದರ್ಭ ಬಂದಾಗ ಏನು ಮಾಡಬೇಕೆಂದು ಯೋಚಿಸಿ ಎಂದು RSS ಮುಖಂಡರು ಬಿಜೆಪಿ ನಾಯಕರಿಗೆ ತಿಳಿಸಿದ್ದಾರೆ.…

Read More

Updated By: Priyalachhi ಮೈಸೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೈಸೂರಿನ ಘಟಿಕೋತ್ಸವ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2018 ಮತ್ತು 19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿ, ಪ್ರಶಸ್ತಿ ವಿಜೇತರಿಗೆ ಅಭಿನಂದಿಸಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ, ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ.ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜವನ್ನು ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿದರೆ ಅದರಿಂದ ಬದಲಾವಣೆ ಸಾಧ್ಯ ಎಂದರು. ಶೀಘ್ರದಲ್ಲೇ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭ: ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ…

Read More

Updated By: Priyalachhi ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳು ಸಾವಿಗೀಡಾಗಿರುವ ಘಟನೆಯ ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೋಮವಾರ ಆದೇಶಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿಯ ಸುಲೈಗಲಿ ಗ್ರಾಮದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ. ಈ ಘಟನೆಯನ್ನು ‘ದುರದೃಷ್ಟಕರ’ ಎಂದು ಬಣ್ಣಿಸಿದ ಸಚಿವರು, ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಆನೆಗಳು ಇದ್ದರೂ, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದೆ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪಗಳನ್ನು ಉಲ್ಲೇಖಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಐದು ದಿನಗಳಲ್ಲಿ ವಿವರವಾದ ವರದಿಯನ್ನು ಸಲ್ಲಿಸುವಂತೆ ಮತ್ತು ಯಾವುದೇ ಲೋಪಗಳು ಕಂಡುಬಂದರೆ ಶಿಸ್ತು ಕ್ರಮಕ್ಕೆ ಶಿಫಾರಸುಗಳನ್ನು ಸಲ್ಲಿಸುವಂತೆ ಸಚಿವರು ಮುಖ್ಯ ವನ್ಯಜೀವಿ ವಾರ್ಡನ್‌ಗೆ ನಿರ್ದೇಶಿಸಿದ್ದಾರೆ. ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಖಂಡ್ರೆ ಎಚ್ಚರಿಸಿದ್ದು, ವಿದ್ಯುತ್ ಸಂಪರ್ಕ ನೀಡಿದ್ದರಿಂದಾಗಿಯೇ ಆನೆಗಳ ಸಾವು ಸಂಭವಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Read More

Updated By: Priyalachhi ಬೆಂಗಳೂರು: ನಮ್ಮ ಮೆಟ್ರೋದ ಪಿಂಕ್ ಲೈನ್ 2026ರ ಮೇನಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಘೋಷಿಸಿದ್ದಾರೆ. ‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ, ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಗುಲಾಬಿ ಮಾರ್ಗದ ಸಂಚಾರ ಮುಂದಿನ ವರ್ಷ ಮೇ ತಿಂಗಳಲ್ಲಿ ಆರಂಭವಾಗಲಿದೆ. ಈ ಮಾರ್ಗವು 13.76 ಕಿ.ಮೀ. ಭೂಗತ ಮಾರ್ಗವನ್ನು ಹೊಂದಿದ್ದು, ಸಂಚಾರ ಸುಗಮವಾಗಲಿದೆ’ ಎಂದಿದ್ದಾರೆ. ‘ಉತ್ತಮ ಸಂಪರ್ಕಕ್ಕೆ ನಮ್ಮ ಬದ್ಧತೆ ಮುಂದುವರಿಯುತ್ತದೆ! ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ 13.76 ಕಿಮೀ ಉದ್ದದ ಮಾರ್ಗವು ಬೆಂಗಳೂರಿನಾದ್ಯಂತ ಸಂಚಾರವನ್ನು ಸುಗಮಗೊಳಿಸುತ್ತದೆ ಮತ್ತು ಬೆಂಗಳೂರು ದಕ್ಷಿಣದಿಂದ ಉತ್ತರಕ್ಕೆ ಸಂಪರ್ಕ ಕಲ್ಪಿಸುತ್ತದೆ’ ಎಂದು ಅವರು ಹೇಳಿದರು. ಕಾಳೇನ ಅಗ್ರಹಾರ- ನಾಗವಾರ ನಡುವಿನ ಗುಲಾಬಿ ಮಾರ್ಗವು 21 ಕಿಮೀ ಉದ್ದ ಹೊಂದಿದ್ದು, ಇದರಲ್ಲಿ 13.76 ಕಿಮೀ ಸುರಂಗ ಮಾರ್ಗವಾಗಿದೆ. ಇದು ಅತಿ ಉದ್ದದ ಭೂಗತ ಮಾರ್ಗವಾಗಿದೆ. ಈ ಸುರಂಗದಲ್ಲಿ 12 ನಿಲ್ದಾಣಗಳು ಇವೆ. ಇನ್ನುಳಿದ ಆರು ನಿಲ್ದಾಣಗಳು ಎಲ್ಲರಿಸಿದ ಮಾರ್ಗದಲ್ಲಿ ಇವೆ.

Read More

Updated By: Priyalachhi ಮೈಸೂರು: ಅಕ್ಟೋಬರ್‌ನಲ್ಲಿ ಎರಡು ವಾರಗಳ ಅವಧಿಯಲ್ಲಿ ಮೂವರು ರೈತರು ಸಾವಿಗೀಡಾದ ನಂತರ, ಮೈಸೂರಿನ ಅರಣ್ಯ ಪ್ರದೇಶಗಳಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಿಳಿಸಿದ್ದಾರೆ. ಅರಣ್ಯ ವಲಯಗಳಲ್ಲಿ ಹೆಚ್ಚುತ್ತಿರುವ ಮಾನವ ಚಟುವಟಿಕೆಯಿಂದಾಗಿ ನೀರು ಮತ್ತು ಆಹಾರವನ್ನು ಅರಸಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿವೆ ಎಂದು ಅವರು ಹೇಳಿದರು. ‘ಇದೇನು ಸಂಭವಿಸಿದೆ ಎಂದರೆ ಅರಣ್ಯ ಪ್ರದೇಶದಲ್ಲಿ ಜನರ ಓಡಾಟ ಹೆಚ್ಚಾಗಿದೆ ಮತ್ತು ರೆಸಾರ್ಟ್‌ಗಳು ಬರುತ್ತಿವೆ. ಇದಲ್ಲದೆ, ಸಫಾರಿ ಚಟುವಟಿಕೆಗಳು ಹೆಚ್ಚಿವೆ- ಅದು ಒಂದು ಕಾರಣ. ಹೀಗಾಗಿ, ಕಾಡು ಪ್ರಾಣಿಗಳು ನೀರು ಮತ್ತು ಆಹಾರವನ್ನು ಅರಸಿ ಹಳ್ಳಿಗಳಿಗೆ ಬರುತ್ತಿವೆ ಎಂದು ಸಿದ್ದರಾಮಯ್ಯ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ‘ನಿನ್ನೆ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆದಿತ್ತು. ಶೀಘ್ರದಲ್ಲೇ ಮತ್ತೊಮ್ಮೆ ಸಭೆ ನಡೆಸುತ್ತೇನೆ. ಅಕ್ರಮ ರೆಸಾರ್ಟ್‌ಗಳ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಮತ್ತು ಕಾಡಿನಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದು ಹೇಳಿದರು.

Read More

​Updated By: Priyalachhi ಹಾವೇರಿ: ನನ್ನ ಡಿಸಿಎಂ ಮಾಡುವಂತೆ ಜನ ಒತ್ತಾಯ ಮಾಡುತ್ತಿದ್ದಾರೆ. ಹೈಕಮಾಂಡ್ ನನ್ನ ಡಿಸಿಎಂ ಮಾಡಿದ್ರೆ ನಿಭಾಯಿಸುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್​ ಖಾನ್​​ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಚಿವರು, ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ನಾನು ಎರಡೂವರೆ ವರ್ಷ ಮಂತ್ರಿ ಆಗಿದ್ದು, ಸಚಿವ ಸ್ಥಾನ ಬಿಟ್ಟು ಪಕ್ಷದ ಕೆಲಸ ಮಾಡು ಅಂದ್ರೂ ನಾನು ಸಿದ್ಧ. ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ಸಿಎಂ ಬದಲಾವಣೆ ಸಂಬಂಧ ಯಾವ ಒಪ್ಪಂದವೂ ಆಗಿಲ್ಲ. 2028ರವರೆಗೂ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ನಮ್ಮದು ಹೈಕಮಾಂಡ್ ಪಕ್ಷ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ಹಾಕಿದ ಗೆರೆಯನ್ನು ನಾವು ದಾಟುವುದಿಲ್ಲ ಎಂದಿದ್ದಾರೆ. ಸಚಿವ ಸಂಪುಟ ಪುನಾರನೆ ಬಗ್ಗೆ ರಾಜ್ಯ ಕಾಂಗ್ರೆಸ್​ನಲ್ಲಿ ಚರ್ಚೆ ಶುರುವಾಗಿರುವ ಹೊತ್ತಲ್ಲಿ, ಸಚಿವ ಜಮೀರ್​ ಹೇಳಿಕೆ ತೀವ್ರ ಕುತೂಹಲ ಕೆರಳಿಸಿದೆ.

Read More

Updated By: Priyalachhi ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರಿಗೆ ಇಂದು (ನವೆಂಬರ್ 3) ಮಹತ್ವದ ದಿನ. ದರ್ಶನ್ ಸೇರಿ ಎಲ್ಲಾ ಆರೋಪಿಗಳು ಇಂದು (ನವೆಂಬರ್ 3) ಕೋರ್ಟ್​ಗೆ ಹಾಜರಿ ಹಾಕುವ ಸಾಧ್ಯತೆ ಇದೆ. ಬೆಳಿಗ್ಗೆ 10 ಗಂಟೆಯ ಬಳಿಕ ದರ್ಶನ್ ಹಾಗೂ ಗ್ಯಾಂಗ್​ನ ಕರೆದುಕೊಂಡು ಹೋಗುವ ಸಾಧ್ಯತೆ ಇದೆ. ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ದೋಷಾರೋಪ ನಿಗದಿ ಆಗಲಿದೆ. ಆರೋಪಿಗಳ ಮೇಲೆ ಪೊಲೀಸರು ಹೇರಿರುವ ಆರೋಪಗಳನ್ನು ಓದಿ ಹೇಳಲಾಗುತ್ತದೆ. ಆರೋಪಗಳನ್ನು ಒಪ್ಪಿಕೊಳ್ಳುತ್ತೀರೆಯೇ ಎಂದು ಆರೋಪಿಗಳಿಗೆ ಕೇಳಲಾಗುತ್ತದೆ. ಆರೋಪಿಗಳು ತಮ್ಮ ಮೇಲಿರುವ ಆರೋಪಗಳನ್ನು ಒಪ್ಪಿಕೊಂಡರೆ ಶಿಕ್ಷೆ ಪ್ರಕಟ ಆಗುತ್ತದೆ. ಆರೋಪಗಳನ್ನು ನಿರಾಕರಿಸಿದರೆ ಸಾಕ್ಷ್ಯಗಳ ವಿಚಾರಣೆ ನಡೆಯಲಿದೆ.

Read More

Updated By: Priyalachhi ಬೆಂಗಳೂರು: ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧೆಡೆ ಇಂದು ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ರಾಜ್ಯದ ಇನ್ನೂ ಕೆಲವೆಡೆ ಒಣ ಹವೆಯಿರಲಿದೆ. ಮತ್ತು ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಜಿಲ್ಲೆಗಳಲ್ಲಿ ಮಳೆ : ಕರಾವಳಿ ಜಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಕೆಲವೆಡೆ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ ಮತ್ತು ರಾಮನಗರದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಾದ ರಾಯಚೂರು, ಬೀದರ್, ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ. ಇಲ್ಲೆಲ್ಲ ಒಣ ಹವೆ : ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು…

Read More

Updated By: Priyalachhi ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿಯಲ್ಲಿ ಪ್ರಯಾಣಿಕರ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 18 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ರಂಗಾರೆಡ್ಡಿ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸುಮಾರು 70 ಪ್ರಯಾಣಿಕರಿದ್ದ ಪ್ರಯಾಣಿಕರ ಬಸ್‌ಗೆ ಸರಕು ಸಾಗಾಣಿಕಾ ಟ್ರಕ್ ಢಿಕ್ಕಿಯಾಗಿದೆ. ಪರಿಣಾಮ ಬಸ್ ನಲ್ಲಿದ್ದವರ ಪೈಕಿ 18 ಮಂದಿ ಸಾವನಮ್ನಪ್ಪಿದ್ದ ಹಲವರು ಗಾಯಗೊಂಡಿದ್ದಾರೆ. ಜಲ್ಲಿಕಲ್ಲು ಸಾಗಿಸುತ್ತಿದ್ದ ಬೃಹತ್ ಟ್ರಕ್ ಬಸ್ ಗೆ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಟ್ರಕ್ ಗುದ್ದಿದ ರಭಸದಿಂದಾಗಿ ಟ್ರಕ್ ನಲ್ಲಿದ್ದ ಜಲ್ಲಿಕಲ್ಲುಗಳು ಬಸ್ ನೊಳಗೆ ಬಿದ್ದಿವೆ. ಜಲ್ಲಿಕಲ್ಲುಗಳಲ್ಲಿ ಕೆಲವು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಚೆವೆಲ್ಲಾ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಪಘಾತದ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆಘಾತ ವ್ಯಕ್ತಪಡಿಸಿದ ಸಿಎಂ…

Read More

Updated By: Priyalachhi ಕಲರ್ಸ್ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಮನೆಯಿಂದ ಮಲ್ಲಮ್ಮ ಹೊರಗೆ ಬಂದಿದ್ದಾರೆ. ಕೆಲ ದಿನಗಳ ಹಿಂದೆ ವೈಯಕ್ತಿಕ ಕಾರಣದಿಂದ ಮಲ್ಲಮ್ಮ ಬಿಗ್‌ ಬಾಸ್‌ ಮನೆಯನ್ನು ತೊರೆದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈಗ ಕಡಿಮೆ ವೋಟ್‌ ಪಡೆದು ಡೊಡ್ಮನೆಯಿಂದ ಔಟ್ ಆಗಿದ್ದಾರೆ. ಯಾದಗಿರಿ ಜಿಲ್ಲೆಯವರಾದ ಮಲ್ಲಮ್ಮ, ಮನೆ ಪ್ರವೇಶಿಸುವ ಮುನ್ನ ತಮ್ಮ ಉತ್ಸಾಹ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಹೆಸರು ಮಾಡಿರುವ ಬಲವಿತ್ತು. ಆದರೆ ಮನೆಗೆ ಹೋದ ಮಲ್ಲಮ್ಮ ಅವರಿಗೆ ಆರಂಭದಲ್ಲಿ ಅವರಿಗೆ ಟಾಸ್ಕ್‌ ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತಿತ್ತು. ಅಷ್ಟೇ ಅಲ್ಲದೇ ಟಾಸ್ಕ್‌ ಸಮಯದಲ್ಲಿ ಮನೆಯ ಸದಸ್ಯರು ಅವರನ್ನು ಅಷ್ಟಾಗಿ ಪರಿಗಣಿಸುತ್ತಿರಲಿಲ್ಲ. ಈ ವಿಚಾರದ ಬಗ್ಗೆ ಸುದೀಪ್‌ ಅವರು ಮನೆ ಮಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಮಲ್ಲಮ್ಮ ಹೆಚ್ಚಾಗಿ ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್‌ ಜೊತೆ ಗುರುತಿಸಿಕೊಳ್ಳುತ್ತಿದ್ದರು. ಈ ವಾರದ ಟಾಸ್ಕ್‌ನಲ್ಲೂ ಅವರು ಉತ್ತಮ ಪ್ರದರ್ಶನ ನೀಡಿರಲಿಲ್ಲ. ಶನಿವಾರ ಸುದೀಪ್‌ ಜೊತೆ ಮಾತನಾಡುತ್ತಿದ್ದಾಗ ನಾನು ಕಾಲೇಜಿಗೆ ಹೋಗಿರಲಿಲ್ಲ ಎಂದು…

Read More