Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಮುಂಬೈ: ಅಮೆರಿಕ-ಚೀನಾ ವ್ಯಾಪಾರ ಉದ್ವಿಗ್ನತೆ ಕಡಿಮೆಯಾದ ಕಾರಣ ಮಂಗಳವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಿನ್ನದ ಬೆಲೆ ಭಾರಿ ಇಳಿಕೆ ಕಂಡಿದೆ. ಹೌದು.. ಇತ್ತೀಚಿನ ದಿನಗಳಲ್ಲಿ ಗಗನಕ್ಕೇರಿದ್ದ ಮಹಿಳೆಯರ ಅಚ್ಚುಮೆಚ್ಚಿನ ಹಳದಿ ಲೋಹದ ದರದಲ್ಲಿ ಇದೀಗ ಭಾರಿ ಇಳಿಕೆ ಕಂಡುಬಂದಿದ್ದು, ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನ ಔನ್ಸ್‌ಗೆ $4,000 ಕ್ಕಿಂತ ಕಡಿಮೆಯಾಗಿದೆ ಎಂದು ಹೇಳಲಾಗಿದೆ. ಚಿನ್ನದ ದರ ಇಳಿಕೆಗೆ ಅಮೆರಿಕ-ಚೀನಾ ವ್ಯಾಪಾರ ಉದ್ವಿಗ್ನತೆಗಳು ಕಡಿಮೆಯಾಗಿರುವುದು ಕಾರಣ ಎಂದು ಹೇಳಲಾಗಿದೆ. ಮಂಗಳವಾರ ಚಿನ್ನ ಮತ್ತಷ್ಟು ಕುಸಿದಿದ್ದು, ಸುರಕ್ಷಿತ ತಾಣದ ಬೇಡಿಕೆ ಕಡಿಮೆಯಾಗಿದ್ದರಿಂದ ನಷ್ಟ ಹೆಚ್ಚಾಗಿದೆ. ಮಾರಾಟ ಚುರುಕುಗೊಂಡು ಹಳದಿ ಲೋಹದ ಬೆಲೆಗಳು ಮೂರು ವಾರಗಳ ಕನಿಷ್ಠ ಮಟ್ಟಕ್ಕೆ ಇಳಿದವು ಎನ್ನಲಾಗಿದೆ. ಬರೊಬ್ಬರಿ 4100 ರೂ ಇಳಿಕೆ ಅಖಿಲ ಭಾರತ ಸರಾಫಾ ಅಸೋಸಿಯೇಷನ್ ​​ಪ್ರಕಾರ, ಇಂದು ಚಿನ್ನದ ದರದಲ್ಲಿ ಬರೊಬ್ಬರಿ 4100 ರೂ ಇಳಿಕೆಯಾಗಿದೆ. ಅಂದರೆ ಪ್ರತೀ 10 ಗ್ರಾಂ ಚಿನ್ನದ ದರಲ್ಲಿ 4100 ರೂ ಇಳಿಕೆಯಾಗಿ 1,21,800 ರೂ.ಗಳಿಗೆ ತಲುಪಿದೆ. ಸೋಮವಾರ ಈ ದರವು…

Read More

Updated By: Priyalachhi ಮುಂಬೈ: ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. 2025ರ ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಆತಿಥೇಯ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದು ಇತಿಹಾಸ ಬರೆದಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಅಂತರದಲ್ಲಿ ಮಣಿಸಿ ಭರ್ಜರಿ ಜಯ ದಾಖಲಿಸಿತು. ಭಾರತ ನೀಡಿದ್ದ 299 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್ ನಲ್ಲಿ 246 ರನ್ ಗಳಿಗೇ ತನ್ನೆಲ್ಲಾ ವಿಕೆಟ್ ಕಳೆದು ಕೊಂಡು 52 ರನ್ ಗಳ ಅಂತರದಲ್ಲಿ ಭಾರತದ ಎದುರು ಮಂಡಿಯೂರಿತು. ಲಾರಾ ವೋಲ್ವಾರ್ಡ್ತ್ ಹೋರಾಟ ವ್ಯರ್ಥ ಬೃಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ ಭರ್ಜರಿ ಆರಂಭ ಪಡೆಯಿತು.…

Read More

Updated By: Priyalachhi ಬೆಂಗಳೂರು: ಆಂಬ್ಯುಲೆನ್ಸ್ ಅಪಘಾತದಿಂದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ತಡರಾತ್ರಿ ಶಾಂತಿನಗರದ ಕೆ. ಹೆಚ್. ರಸ್ತೆಯ ಸಂಗೀತಾ ಸಿಗ್ನಲ್ ಬಳಿ ಸಂಭವಿಸಿದೆ. ಖಾಸಗಿ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕನ ನಿರ್ಲಕ್ಷ್ಯದಿಂದ‌ ಅಪಘಾತ ಸಂಭವಿಸಿರುವ ಆರೋಪ ಕೇಳಿಬಂದಿದ್ದು, ದ್ವಿಚಕ್ರ ವಾಹನದಲ್ಲಿದ್ದ ಇಸ್ಮಾಯಿಲ್ (40) ಹಾಗೂ ಸಮೀನ್ ಬಾನು (33) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಸೋಮೇಶ್ವರ ನಗರದ ನಿವಾಸಿಗಳಾಗಿದ್ದಾರೆ. ರಿಚ್ಮಂಡ್ ರಸ್ತೆಯ ಕಡೆಯಿಂದ ವೇಗವಾಗಿ ಬಂದ ಆಂಬ್ಯುಲೆನ್ಸ್ ಚಾಲಕ, ಊರ್ವಶಿ ಚಿತ್ರಮಂದಿರ ಕಡೆಯಿಂದ ವಿಲ್ಸನ್ ಗಾರ್ಡನ್ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪಘಾತವೆಸಗಿದ್ದಾನೆ. ಅಲ್ಲದೆ ಆಂಬ್ಯುಲೆನ್ಸ್ ಕೆಳಗೆ ಸಿಲುಕಿದ್ದ ದ್ವಿಚಕ್ರ ವಾಹನವನ್ನು 20- 30 ಮೀಟರ್ ಎಳೆದುಕೊಂಡು ಚಲಾಯಿಸಿದ್ದಾನೆ. ಬಳಿಕ ಟ್ರಾಫಿಕ್ ಪೊಲೀಸ್ ಚೌಕಿಗೆ ಗುದ್ದಿ ಆಂಬ್ಯುಲೆನ್ಸ್ ನಿಲ್ಲಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಸ್ಥಳೀಯರು ಬಂದು ಆಂಬ್ಯುಲೆನ್ಸ್ ಪಲ್ಟಿ ಮಾಡಿ ಪರಿಶೀಲಿಸಿದಾಗ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಆಂಬ್ಯುಲೆನ್ಸ್​ ಅಡಿ ಸಾವನ್ನಪ್ಪಿರುವುದು ಪತ್ತೆಯಾಗಿದೆ. ಟ್ರಾಫಿಕ್ ಪೊಲೀಸ್​ ಚೌಕಿಗೆ ಗುದ್ದುವ ಮುನ್ನ ಆಂಬ್ಯುಲೆನ್ಸ್​ ಇನ್ನೊಂದು ದ್ವಿಚಕ್ರ…

Read More

Updated By: Priyalachhi ಮಂಡ್ಯ: ಆಟವಾಡಲು ಹೋಗಿ ಕಾಲು ಜಾರಿ ಬಿದ್ದ ಬಾಲಕಿ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲಾದ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿ ಮುಳುಗಿದ್ದ ಓರ್ವ ಬಾಲಕಿಯನ್ನು ನಿನ್ನೆಯೇ ರಕ್ಷಣೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಬಾಲಕಿ ಆಯಿಷಾ (14) ಮೃತಪಟ್ಟಿದ್ದಾಳೆ. ಇಂದು ಆಫ್ರಿನ್ (13) ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾಗಿರುವ ಹನಿ (14), ಥರ್ಬಿಮ್ (13)ಗಾಗಿ ಹುಡುಕಾಟ ನಡೆದಿದೆ. ಮಕ್ಕಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಶಾಂತಿನಗರದ ಮದರಸದ ಮಕ್ಕಳನ್ನು ಪಿಕ್‌ನಿಕ್‌ಗೆ ಎಂದು ಕರೆದುಕೊಂಡು ಬರಲಾಗಿತ್ತು. ನಿನ್ನೆ ಸಂಜೆ 5.30ರ ಸಮಯಕ್ಕೆ ನಾಲೆ ಬಳಿ ಆಟವಾಡುವಾಗ ಮಕ್ಕಳು ನಾಲೆಗೆ ಇಳಿದಿದ್ದರು. ಆದರೆ ನೋಡು ನೋಡುತ್ತಿದ್ದಂತೆ ನಾಲ್ವರು ಮಕ್ಕಳು ಕೊಚ್ಚಿ ಹೋಗಿದ್ದರು. ಇದರಲ್ಲಿ ಬಾಲಕಿ ಆಯಿಷಾಳನ್ನ ಕಾಪಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾಳೆ. ಇನ್ನು ಹನಿ, ಅಫ್ರಿನ್ ಹಾಗೂ ತರ್ವೀನ್ ನಾಪತ್ತೆ ಆಗಿದ್ದರು. ಈ…

Read More

Updated By: Priyalachhi ಬೆಂಗಳೂರು: ನಗರದ ಶ್ವಾಸಕೋಶದಂತಿರುವ ಲಾಲ್​ಬಾಗ್​ಗೆ ಹಾನಿ ಮಾಡಿ ಟನಲ್ ರಸ್ತೆ ಮಾಡುವ ಮೊದಲು ಇರುವ ರಸ್ತೆಗಳ ಗುಂಡಿಗಳನ್ನು ಮುಚ್ಚಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ರಾಜ್ಯ ಸರ್ಕಾರದ ಟನಲ್ ಯೋಜನೆ ವಿರೋಧಿಸಿ ರಾಜ್ಯ ಬಿಜೆಪಿ ನಾಯಕರು ಇಂದು ಲಾಲ್​ಬಾಗ್​ನಲ್ಲಿ ಜನಜಾಗೃತಿ ಅಭಿಯಾನ ನಡೆಸಿದರು. ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ಅಶ್ವತ್ಥ ನಾರಾಯಣ ಅವರು ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿ, ಸಹಿ ಸಂಗ್ರಹಿಸಿದರು. ಇದೇ ವೇಳೆ, ಜಿಬಿಎ ಮುಖ್ಯ ಇಂಜಿನಿಯರ್ ಹಾಗೂ ಲಾಲ್​ಬಾಗ್​ ಜಂಟಿ ನಿರ್ದೇಶಕರಿಂದ ಮಾಹಿತಿ ಪಡೆದ ಅಶೋಕ್, ಆರು ಎಕರೆ ಬಳಸಿಕೊಂಡರೆ ಇದು ಮಾರ್ಕೆಟ್ ಆಗುವುದಿಲ್ಲವೇ?. ಮುಂದೆ ನಾವೂ ಇರಲ್ಲ, ನೀವೂ ಇರಲ್ಲ. ಆದ್ರೆ ನಾವು ಮಾಡುವ ಆದೇಶ ಉಳಿದುಕೊಳ್ಳುತ್ತದೆ. ಬೆಂಗಳೂರಿಗೆ ಯಾರು ಬಂದರೂ ಮೊದಲು ನೋಡುವುದೇ ಲಾಲ್‌ಬಾಗ್, ವಿಧಾನಸೌಧ ಎಂದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಶೋಕ್, ಬೆಂಗಳೂರಿನ ಪರಿಸರಪ್ರೇಮಿಗಳ ಇತಿಹಾಸ ಹೊಂದಿರುವ ಸಸ್ಯಕಾಶಿಗೆ ರಾಜ್ಯ ಸರ್ಕಾರ ಗುಂಡಿ ತೋಡುವ ಕೆಲಸ ಮಾಡುತ್ತಿದೆ. ಟನಲ್ ರಸ್ತೆಯ ಯೋಜನೆಯಿಂದ…

Read More

Updated By: Priyalachhi ಬೆಂಗಳೂರು: ಸಾಮಾನ್ಯ ಜನರು ಮುಖ್ಯಮಂತ್ರಿಗಳು, ಸಚಿವರು ಹಾಗೂ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಕೆಲಸ ಮಾಡುವ ಇತರೆ ಅಧಿಕಾರಿಗಳನ್ನು ಭೇಟಿ ಮಾಡಬೇಕೆಂದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪ್ರತೀ ನಿತ್ಯ ಕ್ಯೂನಲ್ಲಿ ನಿಂತರೂ, ಕಚೇರಿಗಳಿಗೆ ಭೇಟಿ ನೀಡಿದರೂ ಭೇಟಿ ಕಷ್ಟಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಜನರ ಸಂಕಷ್ಟವನ್ನು ಅರಿತ ಸರ್ಕಾರ ಸಿಎಂ, ಸಚಿವರು ಹಾಗೂ ಅಧಿಕಾರಿಗಳ ಲಭ್ಯತೆ ಪರಿಶೀಲಿಸಲು, ಅಪಾಯಿಂಟ್ಮೆಂಟ್ ಪಡೆಯಲು ಮೊಬೈಲ್ ಅಪ್ಲಿಕೇಶನ್ ವೊಂದನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ. ವಿಧಾನಸೌಧ ಹಾಗೂ ವಿಕಾಸ ಸೌಧತದಲ್ಲಿ ಅನೇಕ ಸರ್ಕಾರಿ ಇಲಾಖೆಗಳು ಹಾಗೂ ಸರ್ಕಾರಿ ಕಚೇರಿಗಳಿದ್ದು, 600 ಕೊಠಡಿಗಳನ್ನು ಹೊಂದಿವೆ. ಸಂದರ್ಶಕರಿಗೆ ಸಹಾಯ ಮಾಡಲು ಎರಡೂ ಸೌಧಗಳ ಕಚೇರಿಗಳ ವಿವರಗಳನ್ನು ಹೊಂದಿರುವ ಮೀಸಲಾದ ಮೊಬೈಲ್ ಅಪ್ಲಿಕೇಶನ್’ನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ.ಖಾದರ್ ಅವರು ಹೇಳಿದ್ದಾರೆ. ಜನರು ತಾವು ಭೇಟಿ ಮಾಡಲು ಬಯಸುವ ಯಾವುದೇ ಸಚಿವರು ಅಥವಾ ಅಧಿಕಾರಿಗಳ ಕೊಠಡಿ ಸಂಖ್ಯೆಗಳು ಅಥವಾ ಮಹಡಿಗಳನ್ನು ಆ್ಯಪ್ ಮೂಲಕ ಪರಿಶೀಲಿಸಬಹುದು. ಸೌಧಗಳು ವಿಶಾಲವಾಗಿದ್ದು, ಅವು ಗೊಂದಲಮಯವಾಗಿರಬಹುದು. ಅಪ್ಲಿಕೇಶನ್…

Read More

Updated By: Priyalachhi ಪಾಟ್ನಾ (ಬಿಹಾರ): ದುಲಾರ್​ ಚಂದ್​ ಯಾದವ್​ ಹತ್ಯೆಗೆ ಸಂಬಂಧಿಸಿದಂತೆ, ಬಿಹಾರ ಪೊಲೀಸರು ಶನಿವಾರ ತಡರಾತ್ರಿ ಮೋಕಾಮಾದ ರಾಜಕಾರಣಿ ಹಾಗೂ ಜನತಾ ದಳ ಯುನೈಟೆಡ್ (ಜೆಡಿಯು) ಅಭ್ಯರ್ಥಿ ಹಾಗೂ ಮಾಜಿ ಶಾಸಕ ಅನಂತ್ ಸಿಂಗ್ ಮತ್ತು ಅವರ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ. ಅವರು ಬೆಡ್ನಾ ಗ್ರಾಮದಲ್ಲಿರುವುದನ್ನು ಪತ್ತೆ ಹಚ್ಚಿದ ಪೊಲೀಸರ ತಂಡ, ಗ್ರಾಮವನ್ನು ಸುತ್ತುವರಿದು, ಶನಿವಾರ ತಡರಾತ್ರಿ ಸುಮಾರು 1 ಗಂಟೆ ರಾತ್ರಿಗೆ ಅನಂತ್​ ಸಿಂಗ್​ ಹಾಗೂ ಇಬ್ಬರು ಸಹಚರರನ್ನು ಬಂಧಿಸಿದೆ. ಬಂಧನದ ಬಳಿಕ ಮೋಕಾಮದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ತಡೆಯಲು ಬಂಧಿಸಿದ ಕೂಡಲೇ ಅವರನ್ನು ಅಲ್ಲಿಂದ ಬೇರೆಡೆಗೆ ಕರೆದೊಯ್ಯಲಾಯಿತು. ಅನಂತ್​ ಅವರ ಪತ್ನಿ ಮೋಕಾಮಾ ಶಾಸಕಿಯಾಗಿದ್ದಾರೆ. ಅನಂತ್​ ಅವರ ಇಬ್ಬರು ಸೋದರಳಿಯಂದಿರು ಹಾಗೂ ಇಬ್ಬರು ಸಹಚರರು ಯಾದವ್​ ಹತ್ಯೆಯಲ್ಲಿ ಆರೋಪಿಗಳಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪಾಟ್ನಾದ ಹಿರಿಯ ಪೊಲೀಸ್​ ವರಿಷ್ಠಾಧಿಕಾರಿ (ಎಸ್​ಎಸ್​ಪಿ) ಕಾರ್ತಿಕೇಯ ಆರ್​. ಶರ್ಮಾ, “ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಅನಂತ್​ ಅವರನ್ನು ಬೆಡ್ನಾ ಗ್ರಾಮದಲ್ಲಿ ಬಂಧಿಸಲಾಗಿದೆ. ಯಾದವ್…

Read More

Updated By: Priyalachhi ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025ರ ಫೈನಲ್ ಪಂದ್ಯ ಭಾನುವಾರ ನಡೆಯಲಿದ್ದು ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿ ಆಗುತ್ತಿವೆ. ಉಭಯ ತಂಡಗಳ ನಡುವಿನ ಫೈನಲ್​ ಸಮರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತವು ಸೆಮಿಫೈನಲ್ನಲ್ಲಿ 7 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಮಣಿಸಿ ಫೈನಲ್​ಗೆ ತಲುಪಿದರೆ, ದಕ್ಷಿಣ ಆಫ್ರಿಕಾ ಇಂಗ್ಲೆಂಡ್ ಅನ್ನು ಸೋಣಿಸಿ ಅಂತಿಮ ಸುತ್ತಿಗೆ ತಲುಪಿದೆ. ಇಂದು ಯಾರೇ ಗೆದ್ದರು ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಹೊಸ ವಿಜೇತ ತಂಡವಾಗಲಿದೆ. 2005 ಮತ್ತು 2017ರ ನಂತರ ಭಾರತ ತಂಡ ಮೂರನೇ ಬಾರಿಗೆ ಇದದೀಗ ಏಕದಿನ ವಿಶ್ವಕಪ್ ಫೈನಲ್‌ಗೆ ತಲುಪಿದೆ. ಭಾರತ ತಂಡವನ್ನು ತವರು ನೆಲದಲ್ಲಿ ಪ್ರಶಸ್ತಿ ಗೆಲ್ಲುವ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಈ ವಿಶ್ವಕಪ್‌ನಲ್ಲಿ ಭಾರತ ತಂಡ ಏಳು ಪಂದ್ಯಗಳಲ್ಲಿ ಮೂರನ್ನು ಗೆಲ್ಲುವ ಮೂಲಕ ಸೆಮಿಫೈನಲ್ ತಲುಪಿತು. ಸೆಮಿಫೈನಲ್ ಪಂದ್ಯದಲ್ಲಿ, ಟೀಮ್ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್‌ಗಳಿಂದ ಮಣಿಸಿತು. ಏತನ್ಮಧ್ಯೆ,…

Read More

Updated By: Priyalachhi ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕನ್ನಡ ರಾಜ್ಯೋತ್ಸವಕ್ಕೆ ವಿಶೇಷ ಮೆರಗು ನೀಡಿದೆ. ಕನ್ನಡ ನಾಡಿನ ಪರಂಪರೆ, ಸಂಸ್ಕೃತಿ ಬಿಂಬಿಸುವ ಸ್ತಬ್ದ ಚಿತ್ರಗಳನ್ನು ಸಿದ್ಧಪಡಿಸುವ ಮೂಲಕ ವಾಣಿಜ್ಯ ನಗರಿ ಜನರಲ್ಲಿ ಕನ್ನಡಾಭಿಮಾನ ಮೂಡುವಂತೆ ಮಾಡಿದೆ. ನಗರ ಹಾಗೂ ಗ್ರಾಮೀಣ ಸಾರಿಗೆ ವಿಭಾಗದಿಂದ ಚಿತ್ರದುರ್ಗದ ಕಲ್ಲಿನಕೋಟೆಯನ್ನು ಹಾಗೂ ಕಾರ್ಯಾಗಾರದ ಸಿಬ್ಬಂದಿ ಹಂಪಿಯ ತೇರಿನ ಮಾದರಿ ತಯಾರಿಸಿರುವುದು ಗಮನ ಸೆಳೆಯಿತು. ಚಿತ್ರದುರ್ಗದ ಕೋಟೆಯ ಸ್ತಬ್ದಚಿತ್ರದಲ್ಲಿ ಸರ್ಕಾರದ ಶಕ್ತಿ ಯೋಜನೆ, ಅತಿ ಹೆಚ್ಚು ಮಹಿಳೆಯರ ಪ್ರಯಾಣಕ್ಕೆ ದೊರೆತ ಲಿಮ್ಕಾ ಅವಾರ್ಡ್ ಸಂಸ್ಥೆಯ ವಿವಿಧ ಬಸ್​ಗಳ ಮಾಹಿತಿ, ಚಿಗರಿ ಬಸ್ ಸೇವೆಯ ಮಾಹಿತಿ ನೀಡಲಾಗಿದೆ. ಹಂಪಿ ತೇರಿನ ಚಿತ್ರದಲ್ಲಿ ಅಲ್ಲಿನ ಪ್ರಮುಖ ಪ್ರೇಕ್ಷಣೀಯ ಸ್ಥಳಗಳ ಪರಿಚಯ ಮಾಡಿದ್ದಾರೆ. ಅಲ್ಲದೇ, ಕಾರ್ಯಾಗಾರದಲ್ಲಿ ಹಳೆಯ ಬಸ್ ಗಳನ್ನು ಪುನಶ್ಚೇತನಗೊಳಿಸಿದ ಚಿತ್ರಗಳನ್ನು ತೋರಿಸಲಾಗುತ್ತಿದೆ. ದುಡಿಮೆಯ ಹಣದಲ್ಲಿ 1 ಲಕ್ಷ ರೂ.ಗೂ ಹೆಚ್ಚು ಖರ್ಚು: ವಾಯುವ್ಯ ಸಾರಿಗೆ ಸಂಸ್ಥೆಯ ಚಾಲಕರೊಬ್ಬರು ಬಸ್ಸನ್ನೇ ಕನ್ನಡದ ರಥವನ್ನಾಗಿ ಶೃಂಗರಿಸಿದ್ದಾರೆ. ಇಡೀ ಬಸ್​ನಲ್ಲಿ ಕನ್ನಡದ ಕಂಪನ್ನು…

Read More

Updated By: Priyalachhi ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳಲ್ಲಿ ಕಡಿತದ ಹೊರತಾಗಿಯೂ ಹಬ್ಬಗಳಲ್ಲಿ ಖರೀದಿ ಭರಾಟೆಯಿಂದಾಗಿ ಜಿಎಸ್​ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ. ಅಕ್ಟೋಬರ್‌ ತಿಂಗಳಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹ ಶೇ. 4.6 ರಷ್ಟು ಹೆಚ್ಚಾಗಿ ಸುಮಾರು 1.96 ಲಕ್ಷ ಕೋಟಿ ರೂ.ಗಳಿಗೆ ತಲುಪಿದೆ. ಇದು ಹಬ್ಬದ ಋತುವಿನ ಮಾರಾಟದ ಪರಿಣಾಮ ಮತ್ತು ಹೆಚ್ಚಿನ ಬೇಡಿಕೆಯನ್ನು ಪ್ರತಿಬಿಂಬಿಸುತ್ತದೆ. ಅಡುಗೆ ಸಾಮಗ್ರಿಗಳಿಂದ ಎಲೆಕ್ಟ್ರಾನಿಕ್ಸ್ ಮತ್ತು ಆಟೋಮೊಬೈಲ್​​ಗಳವರೆಗೆ ಸುಮಾರು 375 ವಸ್ತುಗಳ ಮೇಲಿನ ಜಿಎಸ್​ಟಿ ದರವನ್ನು ಕಡಿತಗೊಳಿಸಿ ಕೇಂದ್ರ ಸರ್ಕಾರವು ಗ್ರಾಹಕರಿಗೆ ನವರಾತ್ರಿ ಉಡುಗೊರೆ ನೀಡಿತ್ತು. ನೂತನ ಜಿಎಸ್​ಟಿ ದರವು ನವರಾತ್ರಿಯ ಮೊದಲ ದಿನ ಸೆ.22 ರಂದು ಜಾರಿಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ದೀಪಾವಳಿಗೆ ಮುಂಚಿತವಾಗಿ ಜಿಎಸ್‌ಟಿ ದರಗಳನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಇದರಿಂದ ಗ್ರಾಹಕರು ಖರೀದಿ ಮಾಡದೇ ಜಿಎಸ್​ಟಿ ಕಡಿತ ಜಾರಿಗಾಗಿ ಕಾಯುತ್ತಿದ್ದರು. ನವರಾತ್ರಿ ದಿನ ಪರಿಷ್ಕೃತ ದರ ಜಾರಿಯಾದ ಬಳಿಕ ಖರೀದಿಗೆ ಮುಂದಾದರು. ಶನಿವಾರ ಬಿಡುಗಡೆಯಾದ…

Read More