Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಸತತ ಮಳೆ ಮತ್ತು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಪಾಲಿಕೆ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜನೆಗೊಳಿಸಿದ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ತುಂಬುವ ಕೆಲಸವನ್ನು ಗಡುವಿನ ಮೊದಲು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಬೆಂಗಳೂರು: ಅಕ್ಟೋಬರ್ 31 ರೊಳಗೆ ನಗರದಾದ್ಯಂತ ಇರುವ ರಸ್ತೆ ಗುಂಡಿಗಳನ್ನು ಮುಚ್ಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಗಡುವನ್ನು ಪೂರೈಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಧಿಕಾರಿಗಳು ವಿಫಲರಾಗಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಈ ಕುರಿತು ಮಾತನಾಡಿದ್ದು, ಕಳೆದ ತಿಂಗಳ ಮಳೆಯಿಂದಾಗಿ ಗುಂಡಿಗಳನ್ನು ತುಂಬುವ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಸತತ ಮಳೆ ಮತ್ತು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಪಾಲಿಕೆ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜನೆಗೊಳಿಸಿದ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ತುಂಬುವ ಕೆಲಸವನ್ನು ಗಡುವಿನ ಮೊದಲು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಮುಂದಿನ ನಾಲ್ಕು ದಿನಗಳಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ನವೆಂಬರ್ ವೇಳೆಗೆ ಗುಂಡಿಗಳನ್ನು…
Updated By: Priyalachhi ನಗರದ ರಸ್ತೆ ಗುಂಡಿಗಳ ಬಗ್ಗೆ ಕೇಳಿದ್ದಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ಬೇಜವಾಬ್ದಾರಿಯ ಪರಮಾವಧಿ. ಬೆಂಗಳೂರು: ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆಯನ್ನು ಗಮನಿಸಿದ್ದೇನೆ. ಅವರ ಹೇಳಿಕೆ ಬೇಜವಾಬ್ದಾರಿತನವಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾ? ಅಥವಾ ಡಿ.ಕೆ. ಶಿವಕುಮಾರ್ ಅವರಾ? ಎನ್ನುವ ಪ್ರಶ್ನೆ ಮೂಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ರಸ್ತೆ ಗುಂಡಿಗಳ ಬಗ್ಗೆ ಕೇಳಿದ್ದಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕಿಡಿಕಾರಿದರು. ಸಿಎಂ ಹೇಳಿಕೆ ನೋಡಿದರೆ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಅಸಮರ್ಥನಾಗಿದ್ದೇನೆಂದು ಹೇಳಿದ ರೀತಿ ಇದೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಅವರಾ ಅಥವಾ ಡಿಕೆ.ಶಿವಕುಮಾರ್ ಅವರಾ ಎನ್ನುವ ಪ್ರಶ್ನೆ ಮೂಡುತ್ತಿದೆ. ಸಿಎಂ ಸಭೆ ಮಾಡಿ ರಸ್ತೆ ಗುಂಡಿ ಮುಚ್ಚಲು ಡೆಡ್ ಲೈನ್ ಕೊಟ್ಟಿದ್ದರು. ಆದರೆ, ರಸ್ತೆಗಳಲ್ಲಿ…
ಲೇಖನ: ಪ್ರಿಯಲಚ್ಚಿ ಗಂಧನಹಳ್ಳಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಸಾಕಷ್ಟು ಜನರು ವಿವಿಧ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಆರೋಗ್ಯ ಸಮಸ್ಯೆಗಳಿಗೆ ಮೂಲ ಕಾರಣವೇನು? ಈ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ. ಅನಾರೋಗ್ಯಕ್ಕೆ ಸರಿಯಾದ ಕಾರಣವನ್ನು ಸರಿಯಾದ ಸಮಯದಲ್ಲಿ ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ವಿಶೇಷವಾಗಿ ದೇಹದಲ್ಲಿನ ವಿಟಮಿನ್ನಂತಹ ಕೊರತೆಯು ವಿವಿಧ ರೋಗಗಳಿಗೆ ಕಾರಣವಾಗುತ್ತದೆ. ಅದೇ ರೀತಿ ನಮ್ಮ ದೇಹವು ಕಾರ್ಯ ನಿರ್ವಹಿಸಲು ಮತ್ತು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮೆಗ್ನೀಸಿಯಮ್ ಅತ್ಯಂತ ಅಗತ್ಯವಿರುವ 7 ಮುಖ್ಯ ಖನಿಜಗಳಲ್ಲಿ ಒಂದಾಗಿದೆ. ಹೆಚ್ಚಿನ ಜನರು ಕೆಲವು ವಿಟಮಿನ್ಗಳು ಮತ್ತು ಇತರ ಪೂರಕಗಳ ಮೌಲ್ಯವನ್ನು ಅರ್ಥಮಾಡಿಕೊಂಡಿದ್ದರೂ ಮೆಗ್ನೀಸಿಯಮ್ ಅನ್ನು ಕಡೆಗಣಿಸುತ್ತಾರೆ. ಮೆಗ್ನೀಸಿಯಮ್ ಕೊರತೆಯು ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುವುದರಿಂದ ಇದನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಮೆಗ್ನೀಸಿಯಮ್ ಅನೇಕ ಅಗತ್ಯ ದೈಹಿಕ ಕಾರ್ಯಗಳನ್ನು ನಿಯಂತ್ರಿಸಲು ಮತ್ತು ಸುಗಮಗೊಳಿಸಲು ಸಹಾಯ ಮಾಡುತ್ತದೆ. ಮೆಗ್ನೀಸಿಯಮ್ ನಮ್ಮ ದೇಹದಲ್ಲಿನ ಜೀವರಾಸಾಯನಿಕ ಕ್ರಿಯೆಗಳನ್ನು ನಿಯಂತ್ರಿಸಲು ಸಹಾಯ ಮಾಡುವ 300ಕ್ಕೂ ಹೆಚ್ಚು ವಿಭಿನ್ನ ಕಿಣ್ವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ.…
Updated By: Priyalachhi ಬೆಂಗಳೂರು: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದ್ದು, ಮಹಾರಾಷ್ಟ್ರದೊಂದಿಗೆ ವಿಲೀನಗೊಳ್ಳಲು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಪ್ರತಿಪಾದಿಸಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ನಡೆದ ಭುವನೇಶ್ವರಿ ಮತ್ತು ಅಣ್ಣಮ್ಮ ದೇವಿಯ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಮಹಾಜನ ಸಮಿತಿ ವರದಿಯೇ ಅಂತಿಮ ಎಂದರು. “ಬೆಳಗಾವಿ ವಿಷಯದಲ್ಲಿ ಬಗ್ಗೆ ಯಾವುದೇ ರಾಜಿ ಇಲ್ಲ. ಮಹಾರಾಷ್ಟ್ರ ಸರ್ಕಾರ ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆದರೆ ಮಹಾಜನ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ ಮತ್ತು ಕರ್ನಾಟಕದ ಭಾಗವಾಗಿರುವುದರಿಂದ ನಾವು ಅದನ್ನು ಬಿಡುವುದಿಲ್ಲ” ಎಂದರು. ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಯಿಂದ ಐದು ಶಾಸಕರು ಆಯ್ಕೆಯಾಗಿದ್ದರು. ಆದರೆ ಈಗ ಅವರ ಸಂಖ್ಯೆ ಶೂನ್ಯಕ್ಕೆ ಇಳಿದಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. “ಎಂಇಎಸ್ ಜನರು ಸಹ ಕನ್ನಡಿಗರು. ಅವರಲ್ಲಿ ಯಾರಾದರೂ ರೌಡಿಸಂನಲ್ಲಿ ತೊಡಗಿದರೆ, ನಾವು ಅವರ ವಿರುದ್ಧ ಕಠಿಣ ಕ್ರಮ…
Updated By: Priyalachhi ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “೭೦ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟಿಸಿ, ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ನಾಡಿನ 70 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಬೆಂಗಳೂರು: ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “೭೦ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ೭೦ ಮಂದಿ ಸಾಧಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯೋತ್ಸವ ಪ್ರಶಸ್ತಿ ನೀಡಿ, ಸನ್ಮಾನಿಸಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ, ಯಾರು ಯಾವ ಭಾಷೆಯಲ್ಲಿ ಮಾತನಾಡಿಸಿದರೂ ಕನ್ನಡದಲ್ಲೇ ಉತ್ತರ ಕೊಡುತ್ತೀವಿ ಎಂಬ ಸಂಕಲ್ಪ ಮಾಡೋಣ ಎಂದರು. ಕರ್ನಾಟಕ…
70 ನೇ ಕನ್ನಡ ರಾಜ್ಯೋತ್ಸವದ ಈ ಶುಭ ದಿನದಂದು ಕರ್ನಾಟಕದ ಧ್ವಜದ ಹಳದಿ ಮತ್ತು ಕೆಂಪು ಬಣ್ಣದ ದೀಪಾಲಂಕಾರದೊಂದಿಗೆ ಕಂಗೊಳಿಸುತ್ತಿರುವ ವಿಧಾನ ಸೌಧ.
Updated By: Priyalachhi ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಧ್ವಜಾರೋಹಣ ಮಾಡಿದರು. ತುಮಕೂರು: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಧ್ವಜಾರೋಹಣ ಮಾಡಿದರು. ಬೆಳಗಾವಿಯಲ್ಲಿ ಎಂಇಎಸ್ ಸೇರಿ ಯಾವುದೇ ಸಂಘಟನೆಗಳ ಜೊತೆಗೆ ಕಾಂಪ್ರಮೈಸ್ ಮಾಡಿಕೊಳ್ಳದೆ, ನಾಡಿನ ನೆಲ-ಜಲ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜ ಹಾಗೂ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಅಧಿಕಾರಿಯೊಬ್ಬರು ಎಂಇಎಸ್ ನಾಯಕನೊಂದಿಗೆ ನಿಂತು ಫೋಟೋ ತೆಗೆಸಿಕೊಂಡಿರುವ ಬಗ್ಗೆ ನಮ್ಮ ಇಲಾಖೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಾರೆ. ಯಾರು ನಮ್ಮ ಕನ್ನಡ ಭಾಷೆ ನೆಲದ ಬಗ್ಗೆ ಬದ್ಧತೆಗೆ ವಿರುದ್ಧವಾಗಿ ಹೋಗುತ್ತಾರೆಯೋ, ಅಧಿಕಾರಿ ಇರಬಹುದು ಅಥವಾ ಸಾಮಾನ್ಯ ವ್ಯಕ್ತಿಯೇ ಆಗಿರಬಹುದು. ಅವರ…
Updated By: Priyalachhi ಅವರ ಆರೋಗ್ಯದ ಬಗ್ಗೆ ಯಾವುದೇ ವದಂತಿಗಳನ್ನು ನಂಬಬೇಡಿ ಎಂದೂ ಕೂಡಾ ಸಾರ್ವಜನಿಕರಲ್ಲಿ ಕುಟುಂಬ ಮನವಿ ಮಾಡಿಕೊಂಡಿದೆ. 89 ವರ್ಷದ ನಟ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂಬಯಿ: ಹಿಂದಿ ಚಿತ್ರರಂಗದ ಹಿರಿಯ ನಟ, ಸೂಪರ್ ಸ್ಟಾರ್ ಧರ್ಮೇಂದ್ರ ಅವರು ಮುಂಬೈನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಆಸ್ಪತ್ರೆಯಲ್ಲಿದ್ದು, ವೈದ್ಯರ ನಿಗಾದಲ್ಲಿ ಇದ್ದಾರೆ. ವರದಿಗಳ ಪ್ರಕಾರ, ಅವರು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಹೆಚ್ಚಿನ ಪರೀಕ್ಷೆಗಳಿಗಾಗಿ ಅಲ್ಲಿಯೇ ಉಳಿದುಕೊಂಡಿದ್ದಾರೆ. ಅವರ ಆರೋಗ್ಯದ ಬಗ್ಗೆ ಯಾವುದೇ ವದಂತಿಗಳನ್ನು ನಂಬಬೇಡಿ ಎಂದೂ ಕೂಡಾ ಸಾರ್ವಜನಿಕರಲ್ಲಿ ಕುಟುಂಬ ಮನವಿ ಮಾಡಿಕೊಂಡಿದೆ. 89 ವರ್ಷದ ನಟ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು ಮತ್ತು ಹೆಚ್ಚುವರಿ ಟೆಸ್ಟ್ ಹಿನ್ನೆಲೆ ಅಲ್ಲೇ ಇದ್ದಾರೆ. ಅವರ ಡಿಸ್ಚಾರ್ಜ್ ದಿನಾಂಕದ ಕುರಿತು ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಿಲ್ಲ. ಪುತ್ರರಾದ…
Updated By: Priyalachhi ಇಬ್ಬರೂ ವೈಯಕ್ತಿಕ ವಾಗ್ದಾಳಿಗಳನ್ನು ನಿಲ್ಲಿಸಬೇಕೆಂದು ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಇಬ್ಬರೂ ಯುವ ಸಮೂಹಕ್ಕೆ ಮಾದರಿಯಾಗಬೇಕು ಎಂದು ಅಕ್ಕನಾಗಿ ಕಿವಿಮಾತು ಹೇಳುತ್ತಿದ್ದೇನೆ ಎಂದು ಸಚಿವೆ ಹೇಳಿದ್ದಾರೆ. ಉಡುಪಿ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ನಾಯಕ ಪ್ರತಾಪ್ ಸಿಂಹ ಅವರ ನಡುವಿನ ವೈಯಕ್ತಿಕ ವಾಗ್ದಾಳಿಯ ವಿಷಯವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಇಬ್ಬರೂ ವೈಯಕ್ತಿಕ ವಾಗ್ದಾಳಿಗಳನ್ನು ನಿಲ್ಲಿಸಬೇಕೆಂದು ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಇಬ್ಬರೂ ಯುವ ಸಮೂಹಕ್ಕೆ ಮಾದರಿಯಾಗಬೇಕು ಎಂದು ಅಕ್ಕನಾಗಿ ಕಿವಿಮಾತು ಹೇಳುತ್ತಿದ್ದೇನೆ ಎಂದು ಸಚಿವೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಪರಸ್ಪರ ಈ ಕೆಟ್ಟ ವಾಗ್ದಾಳಿಯನ್ನು ನಿಲ್ಲಿಸಿ ಯುವ ಸಮೂಹಕ್ಕೆ ಮಾದರಿಯಾಗಬೇಕು ಎಂದು ನಾಯಕರಿಗೆ ಕರೆ ನೀಡಿದ್ದಾರೆ. ಈ ನಾಯಕರು ಬಹಳ ಕೀಳು ಮಟ್ಟದ ಹೇಳಿಕೆಗಳನ್ನು ನೀಡಿದ್ದಾರೆ.…
Updated By: Priyalachhi ಕಲಬುರಗಿ: ಕಲಬುರಗಿ ಜಲ್ಲೆಯ ಸಮಸ್ತ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಾಗಿದ್ದು ಅದರ ಅಡಿಯಲ್ಲಿ ಮುಂದಿನ ವರ್ಷದೊಳಗೆ ಜಿಲ್ಲೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ ಪ್ರೌಢಶಾಲೆಯಲ್ಲಿ ನಡೆದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕಲಬುರಗಿ ಜಿಲ್ಲೆಯಲ್ಲಿ ನವೋದ್ಯಮಕ್ಕೆ ಉತ್ತೇಜನ, ಪ್ರವಾಸೋದ್ಯಮ ಅಭಿವೃದ್ದಿ, ಯುವ ಸಬಲೀಕರಣ, ಶೈಕ್ಷಣಿಕ ಹಾಗೂ ಆರ್ಥಿಕ ಸಬಲತೆ ಹೊಂದುವ ಸಮಗ್ರ ಅಭಿವೃದ್ದಿಗಾಗಿ ನವ ಕಲಬುರಗಿ ನಿರ್ಮಾಣದ ನೀಲಿನಕ್ಷೆ ತಯಾರಾಗಿದ್ದು ಮುಂದಿನ ಎರಡು ವಾರದಲ್ಲಿ ಸಾರ್ವಜನಿಕರ ಮುಂದೆ ಇಡಲಿದ್ದೇವೆ ಎಂದು ಅವರು ಹೇಳಿದರು. ಕಲಬುರಗಿ ಜಿಲ್ಲೆಯನ್ನು ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ ಅಡಿಯಲ್ಲಿ ಪ್ರವಾಸೋದ್ಯಮ, ಕೃಷಿ, ಕೈಗಾರಿಕೆ, ತಂತ್ರಜ್ಞಾನ, ಎಲೆಕ್ಟ್ರಾನಿಕ್, ಉದ್ಯಮಶೀಲತೆ ಕ್ಷೇತ್ರಗಳ ಅಭಿವೃದ್ದಿ ಪಡಿಸಲಾಗುವುದು ಎಂದರು.ಕನ್ನಡಿಗರು ಕನ್ನಡವನ್ನು ಪ್ರೀತಿಸುತ್ತಾರೆ ಹಾಗೂ ಗೌರವಿಸುತ್ತಾರೆ. ಕನ್ನಡವನ್ನು ಯಾವುದೇ ಕಾರಣಕ್ಕೆ ಬಿಟ್ಟುಕೊಡುವುದಿಲ್ಲ. ಕನ್ನಡಿಗರ ಸೌಹಾರ್ದತೆಯೇ ಕರ್ನಾಟಕದ ಮಾನವ ಸಂಪನೂಲದ ಬಗ್ಗೆ…
Subscribe to Updates
Get the latest creative news from FooBar about art, design and business.