Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಧ್ವಜಾರೋಹಣ ಮಾಡಿದರು. ತುಮಕೂರು: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಧ್ವಜಾರೋಹಣ ಮಾಡಿದರು. ಬೆಳಗಾವಿಯಲ್ಲಿ ಎಂಇಎಸ್ ಸೇರಿ ಯಾವುದೇ ಸಂಘಟನೆಗಳ ಜೊತೆಗೆ ಕಾಂಪ್ರಮೈಸ್ ಮಾಡಿಕೊಳ್ಳದೆ, ನಾಡಿನ ನೆಲ-ಜಲ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜ ಹಾಗೂ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಅಧಿಕಾರಿಯೊಬ್ಬರು ಎಂಇಎಸ್ ನಾಯಕನೊಂದಿಗೆ ನಿಂತು ಫೋಟೋ ತೆಗೆಸಿಕೊಂಡಿರುವ ಬಗ್ಗೆ ನಮ್ಮ ಇಲಾಖೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಾರೆ. ಯಾರು ನಮ್ಮ ಕನ್ನಡ ಭಾಷೆ ನೆಲದ ಬಗ್ಗೆ ಬದ್ಧತೆಗೆ ವಿರುದ್ಧವಾಗಿ ಹೋಗುತ್ತಾರೆಯೋ, ಅಧಿಕಾರಿ ಇರಬಹುದು ಅಥವಾ ಸಾಮಾನ್ಯ ವ್ಯಕ್ತಿಯೇ ಆಗಿರಬಹುದು. ಅವರ…

Read More

Updated By: Priyalachhi ಅವರ ಆರೋಗ್ಯದ ಬಗ್ಗೆ ಯಾವುದೇ ವದಂತಿಗಳನ್ನು ನಂಬಬೇಡಿ ಎಂದೂ ಕೂಡಾ ಸಾರ್ವಜನಿಕರಲ್ಲಿ ಕುಟುಂಬ ಮನವಿ ಮಾಡಿಕೊಂಡಿದೆ. 89 ವರ್ಷದ ನಟ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂಬಯಿ: ಹಿಂದಿ ಚಿತ್ರರಂಗದ ಹಿರಿಯ ನಟ, ಸೂಪರ್ ಸ್ಟಾರ್ ಧರ್ಮೇಂದ್ರ ಅವರು ಮುಂಬೈನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಆಸ್ಪತ್ರೆಯಲ್ಲಿದ್ದು, ವೈದ್ಯರ ನಿಗಾದಲ್ಲಿ ಇದ್ದಾರೆ. ವರದಿಗಳ ಪ್ರಕಾರ, ಅವರು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಹೆಚ್ಚಿನ ಪರೀಕ್ಷೆಗಳಿಗಾಗಿ ಅಲ್ಲಿಯೇ ಉಳಿದುಕೊಂಡಿದ್ದಾರೆ. ಅವರ ಆರೋಗ್ಯದ ಬಗ್ಗೆ ಯಾವುದೇ ವದಂತಿಗಳನ್ನು ನಂಬಬೇಡಿ ಎಂದೂ ಕೂಡಾ ಸಾರ್ವಜನಿಕರಲ್ಲಿ ಕುಟುಂಬ ಮನವಿ ಮಾಡಿಕೊಂಡಿದೆ. 89 ವರ್ಷದ ನಟ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು ಮತ್ತು ಹೆಚ್ಚುವರಿ ಟೆಸ್ಟ್​ ಹಿನ್ನೆಲೆ ಅಲ್ಲೇ ಇದ್ದಾರೆ. ಅವರ ಡಿಸ್ಚಾರ್ಜ್ ದಿನಾಂಕದ ಕುರಿತು ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಿಲ್ಲ. ಪುತ್ರರಾದ…

Read More

Updated By: Priyalachhi ಇಬ್ಬರೂ ವೈಯಕ್ತಿಕ ವಾಗ್ದಾಳಿಗಳನ್ನು ನಿಲ್ಲಿಸಬೇಕೆಂದು ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಇಬ್ಬರೂ ಯುವ ಸಮೂಹಕ್ಕೆ ಮಾದರಿಯಾಗಬೇಕು ಎಂದು ಅಕ್ಕನಾಗಿ ಕಿವಿಮಾತು ಹೇಳುತ್ತಿದ್ದೇನೆ ಎಂದು ಸಚಿವೆ ಹೇಳಿದ್ದಾರೆ. ಉಡುಪಿ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ನಾಯಕ ಪ್ರತಾಪ್ ಸಿಂಹ ಅವರ ನಡುವಿನ ವೈಯಕ್ತಿಕ ವಾಗ್ದಾಳಿಯ ವಿಷಯವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಇಬ್ಬರೂ ವೈಯಕ್ತಿಕ ವಾಗ್ದಾಳಿಗಳನ್ನು ನಿಲ್ಲಿಸಬೇಕೆಂದು ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಇಬ್ಬರೂ ಯುವ ಸಮೂಹಕ್ಕೆ ಮಾದರಿಯಾಗಬೇಕು ಎಂದು ಅಕ್ಕನಾಗಿ ಕಿವಿಮಾತು ಹೇಳುತ್ತಿದ್ದೇನೆ ಎಂದು ಸಚಿವೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಪರಸ್ಪರ ಈ ಕೆಟ್ಟ ವಾಗ್ದಾಳಿಯನ್ನು ನಿಲ್ಲಿಸಿ ಯುವ ಸಮೂಹಕ್ಕೆ ಮಾದರಿಯಾಗಬೇಕು ಎಂದು ನಾಯಕರಿಗೆ ಕರೆ ನೀಡಿದ್ದಾರೆ. ಈ ನಾಯಕರು ಬಹಳ ಕೀಳು ಮಟ್ಟದ ಹೇಳಿಕೆಗಳನ್ನು ನೀಡಿದ್ದಾರೆ.…

Read More

Updated By: Priyalachhi ಕಲಬುರಗಿ: ಕಲಬುರಗಿ ಜಲ್ಲೆಯ ಸಮಸ್ತ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಾಗಿದ್ದು ಅದರ ಅಡಿಯಲ್ಲಿ ಮುಂದಿನ ವರ್ಷದೊಳಗೆ ಜಿಲ್ಲೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ನಗರದ ಗಂಜ್‌ ಪ್ರದೇಶದಲ್ಲಿರುವ ನಗರೇಶ್ವರ ಪ್ರೌಢಶಾಲೆಯಲ್ಲಿ ನಡೆದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕಲಬುರಗಿ ಜಿಲ್ಲೆಯಲ್ಲಿ ನವೋದ್ಯಮಕ್ಕೆ ಉತ್ತೇಜನ, ಪ್ರವಾಸೋದ್ಯಮ ಅಭಿವೃದ್ದಿ, ಯುವ ಸಬಲೀಕರಣ, ಶೈಕ್ಷಣಿಕ ಹಾಗೂ ಆರ್ಥಿಕ ಸಬಲತೆ ಹೊಂದುವ ಸಮಗ್ರ ಅಭಿವೃದ್ದಿಗಾಗಿ ನವ ಕಲಬುರಗಿ ನಿರ್ಮಾಣದ ನೀಲಿನಕ್ಷೆ ತಯಾರಾಗಿದ್ದು ಮುಂದಿನ ಎರಡು ವಾರದಲ್ಲಿ ಸಾರ್ವಜನಿಕರ ಮುಂದೆ ಇಡಲಿದ್ದೇವೆ ಎಂದು ಅವರು ಹೇಳಿದರು. ಕಲಬುರಗಿ ಜಿಲ್ಲೆಯನ್ನು ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ ಅಡಿಯಲ್ಲಿ ಪ್ರವಾಸೋದ್ಯಮ, ಕೃಷಿ, ಕೈಗಾರಿಕೆ, ತಂತ್ರಜ್ಞಾನ, ಎಲೆಕ್ಟ್ರಾನಿಕ್‌, ಉದ್ಯಮಶೀಲತೆ ಕ್ಷೇತ್ರಗಳ ಅಭಿವೃದ್ದಿ ಪಡಿಸಲಾಗುವುದು ಎಂದರು.ಕನ್ನಡಿಗರು ಕನ್ನಡವನ್ನು ಪ್ರೀತಿಸುತ್ತಾರೆ ಹಾಗೂ ಗೌರವಿಸುತ್ತಾರೆ. ಕನ್ನಡವನ್ನು ಯಾವುದೇ ಕಾರಣಕ್ಕೆ ಬಿಟ್ಟುಕೊಡುವುದಿಲ್ಲ. ಕನ್ನಡಿಗರ ಸೌಹಾರ್ದತೆಯೇ ಕರ್ನಾಟಕದ ಮಾನವ ಸಂಪನೂಲದ ಬಗ್ಗೆ…

Read More

Updated By: Priyalachhi ಬೆಂಗಳೂರು: ನಗರದಲ್ಲಿ ಪ್ರತಿ ದಿನ ಒಂದಲ್ಲಾ ಒಂದು ಕಡೆ ರೋಡ್‌ ರೇಜ್‌ ಪ್ರಕರಣಗಳು ನಡೆಯುತ್ತಿವೆ. ನಗರದ ಟಿನ್‌ ಫ್ಯಾಕ್ಟರಿ ಬಳಿ ಇಂತಹದೊಂದು ಘಟನೆ ನಡೆದಿದ್ದು, ದಾರಿಯಲ್ಲಿ ಸೈಡ್‌ ಕೊಡುವ ವಿಚಾರಕ್ಕೆ ಕ್ಯಾಬ್‌ ಚಾಲಕ ಹಾಗೂ ಬೈಕ್‌ ಸವಾರನ ನಡುವೆ ಗಲಾಟೆಯಾಗಿದೆ. ಬೈಕ್‌ ಸವಾರ ಸ್ವಲ್ಪ ಮುಂದೆ ಹೋಗಿ ಕ್ಯಾಬ್‌ ಚಾಲಕನಿಗೆ ಪ್ರಶ್ನೆ ಮಾಡಿದಾಗ ಕೋಪಗೊಂಡ ಕ್ಯಾಬ್‌ಚಾಲಕ ಕಾರಿನಿಂದ ಬೈಕ್‌ಗೆ ಗುದ್ದಿಸಿ ಸವಾರನನ್ನು ಬೀಳಿಸಿ ಹೋಗಿರುವುದು ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಕಾರೊಂದರ ಡ್ಯಾಶ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದ್ದು, ಕ್ಯಾಬ್‌ ಚಾಲಕನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ಆತನ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಹಿಂದೆ ಬೆಂಗಳೂರು ದಕ್ಷಿಣ ವಿಭಾಗದ ಪುಟ್ಟೇನಹಳ್ಳಿ ಸೇರಿದಂತೆ ನಗರದ ಮತ್ತಿತರ ಪ್ರದೇಶಗಳಲ್ಲೂ ರೋಡ್‌ರೇಜ್‌ ಪ್ರಕರಣಗಳು ನಡೆದಿದ್ದವು. ಅ.27ರಂದು ರಾತ್ರಿ ವೇಳೆ ಕಾರಿನ ಸೈಡ್‌ ಮಿರರ್‌ಗೆ ಬೈಕ್‌ ಡಿಕ್ಕಿ ಹೊಡೆದ ಘಟನೆ ನಂತರ ಕಾರಿನಲ್ಲಿದ್ದವರು ಬೈಕ್‌ ಸವಾರರನ್ನು ಬೆನ್ನತ್ತಿ…

Read More

Updated By: Priyalachhi ಬೆಳಗಾವಿ: ಕರ್ನಾಟಕ ರಾಜ್ಯ ವಿರೋಧಿ ಎಂಇಎಸ್‌‍ ನಾಯಕನೊಂದಿಗೆ ಪೊಲೀಸ್‌‍ ಅಧಿಕಾರಿ ತನ್ನಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಘಟನೆ ನಗರದಲ್ಲಿ ನಡೆದಿದೆ. ರಾಜ್ಯೋತ್ಸವ ಸಂಭ್ರಮಕ್ಕೆ ವಿರೋಧಿಸಿರುವ ಪುಂಡ ಎಂಇಎಸ್‌‍ ಕರಾಳ ಹೆಸರಿನ ರ್ಯಾಲಿಯಲ್ಲಿ ಬಂದೋಬಸ್ತ್‌ಗೆ ನಿಯೋಜಿತಗೊಂಡಿದ್ದ ಪೊಲೀಸ್‌‍ ಅಧಿಕಾರಿ ಜೆ.ಎಂ. ಕಾಲಿಮಿರ್ಚಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸಿಪಿಐ ದುರ್ವರ್ತನೆ ಜಿಲ್ಲಾಡಳಿತ ಹಾಗೂ ಪೊಲೀಸ್‌‍ ಕಮಿಷ್ನರ್‌ ಗಂಭೀರವಾಗಿ ಪರಿಗಣಿಸಿದ್ದಾರೆ. ಸತತ ರಾಜ್ಯ ಸರಕಾರ ಹಾಗೂ ಕನ್ನಡಿಗರ ವಿರುದ್ಧ ಕತ್ತಿ ಮಸೆಯುವ ಎಂ ಎಂಎಸ್‌‍ ಮುಖಂಡ ಶುಭಂ ಸೆಳಕೆ ಜೊತೆಗೆ ಪೊಲೀಸ್‌‍ ಅಧಿಕಾರಿಯ ಅತಿ ಸಲುಗೆಯಿಂದ ವರ್ತಿಸಿರುವ ವಿಡಿಯೋ ವೈರಲ್‌ ಆಗಿದೆ.

Read More

Updated By: Priyalachhi ರಾಮನಗರ: ರಾಮನಗರದ ಅಯಾನಾ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ರೇವ್ ಪಾರ್ಟಿ ಮೇಲೆ ಬೆಂಗಳೂರ ದಕ್ಷಿಣ ಎಸ್‌ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. 35 ಯುವತಿಯರು ಸೇರಿದಂತೆ ಒಟ್ಟು 115 ಮಂದಿಯನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ದಾಳಿಯಿಂದ ಪ್ರದೇಶದಲ್ಲಿ ಸಂಚಲನ ಮೂಡಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ನಗರದ ಹೊರವಲಯದ ಅಯಾನಾ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ರೇವ್ ಪಾರ್ಟಿ ಮೇಲೆ ಬೆಂಗಳೂರಿನ (Bengaluru) ದಕ್ಷಿಣ ಎಸ್‌ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಿ, 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದೇವಿಗೆರೆ ಕ್ರಾಸ್ ಸಮೀಪದಲ್ಲಿರುವ ಅಯಾನಾ ಖಾಸಗಿ ರೆಸಾರ್ಟ್‌ನಲ್ಲಿ ರಾತ್ರಿ ವೇಳೆ ರೇವ್ ಪಾರ್ಟಿ ನಡೆಯುತ್ತಿದೆ ಎನ್ನುವ ಮಾಹಿತಿ ಮೇರೆಗೆ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ, 35 ಯುವತಿಯರು ಸೇರಿದಂತೆ ಒಟ್ಟು 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ರೇವ್ ಪಾರ್ಟಿಯಲ್ಲಿ ಬಹುತೇಕ ಕಾಲೇಜು ಯುವಕ ಯುವತಿಯರು ಭಾಗಿಯಾಗಿರುವುದಾಗಿ ತಿಳಿದು ಬಂದಿದೆ. ಎಲ್ಲರನ್ನೂ ಬಂಧಿಸಿ ರಾಮನಗರ ಜಿಲ್ಲಾ…

Read More

Updated By: Priyalachhi ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ದಂಪತಿಯ ಮನೆಯಲ್ಲಿ ನಿಗೂಢ ರಕ್ತದ ಕಲೆಗಳು (Blood Stains) ಕಾಣಿಸಿಕೊಂಡಿರುವುದು ಗ್ರಾಮದೆಲ್ಲೆಡೆ ಆತಂಕ ಮೂಡಿಸಿತ್ತು. ರಕ್ತದ ಸ್ಯಾಂಪಲ್​ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಲ್ಯಾಬ್ ರಿಪೋರ್ಟ್​ ಬಂದಿದ್ದು, ಮನೆಯ ತುಂಬಾ ಚೆಲ್ಲಾಡಿದ್ದು ಮನುಷ್ಯನ ರಕ್ತವೆಂದು ದೃಢಪಟ್ಟಿದೆ. ಪ್ರಯೋಗಾಲಯದಿಂದ ಆಘಾತಕಾರಿ ಮಾಹಿತಿ ದಂಪತಿ ಮನೆಯ ಹಾಲ್, ಬಾತ್‌ರೂಂ, ಟಿವಿ, ಫ್ಯಾನ್ ಎಲ್ಲೆಡೆ ರಕ್ತದ ಕಲೆಗಳು ಕಂಡುಬಂದಿದ್ದು, ಪೊಲೀಸರು ಮತ್ತು ಎಫ್‌ಎಸ್‌ಎಲ್ ಶ್ವಾನದಳ ಸ್ಥಳ ಪರಿಶೀಲನೆ ನಡೆಸಿದ್ದರು. ರಕ್ತದ ಮಾದರಿಯನ್ನು ಲ್ಯಾಬ್‌ಗೆ ಕಳುಹಿಸಲಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಅದು ಮನುಷ್ಯನ ರಕ್ತವಾಗಿರುವುದು ದೃಢಪಟ್ಟಿದೆ. ಅಂತಿಮ ದೃಢೀಕರಣಕ್ಕಾಗಿ ಎಫ್‌ಎಸ್ಎಲ್ ವರದಿ ನಿರೀಕ್ಷಿಸಲಾಗುತ್ತಿದೆ. ಈ ವರದಿಯೀಗ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ರಕ್ತ ಮನೆಯಲ್ಲಿ ಹೇಗೆ ಹರಿಯಿತು, ಅದು ಯಾರ ರಕ್ತ ಎಂಬೆಲ್ಲಾ ಪ್ರಶ್ನೆಗಳು ಪೊಲೀಸರಿಗೆ ಕಾಡಿದ್ದು, ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಗ್ರಾಮಸ್ಥರಲ್ಲಿ ಭಯ ಮತ್ತು ಕುತೂಹಲ ಮೂಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ನಿಜವಾದ ಸಂಗತಿ ಹೊರಬರುವುದು ಇನ್ನೂ…

Read More

Updated By: Priyalachhi ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ದೇಗುಲದಲ್ಲಿ ಶನಿವಾರ ಘೋರ ದುರಂತ ಸಂಭವಿಸಿದೆ. ಶ್ರೀಕಾಕುಳಂನ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಕಾದಶಿ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾಗ ಕಾಲ್ತುಳಿತ ಸಂಭವಿಸಿ ಕನಿಷ್ಠ 9 ಮಂದಿ ಸಾವಿಗೀಡಾಗಿದ್ದಾರೆ. ಹತ್ತಾರು ಮಂದಿ ಭಕ್ತರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ. ಹೈದರಾಬಾದ್, ನವೆಂಬರ್ 1: ಕರ್ನೂಲ್ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಆಂಧ್ರ ಪ್ರದೇಶದಲ್ಲಿ (Andhra Pradesh) ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ (Stampede) ಕನಿಷ್ಠ ಒಂಬತ್ತು ಭಕ್ತರು ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಏಕಾದಶಿ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಸಮಯದಲ್ಲಿ ದುರಂತ ಸಂಭವಿಸಿದೆ ಎಂದು ಆಂಧ್ರ ಪ್ರದೇಶ ಸಿಎಂ ಕಚೇರಿಯ ಪ್ರಕಟಣೆ ತಿಳಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಪರಿಸ್ಥಿತಿ…

Read More