Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂಧನ ಉಳಿತಾಯಕ್ಕಾಗಿ ‘ವರ್ಕ್ ಫ್ರಮ್ ಹೋಮ್’ ಮಾಡುವಂತೆ ಸಲಹೆ ನೀಡಿದ್ದೇ ತಡ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಗುರುವಾರ ಸರ್ಕಾರಿ ನೌಕರರಿಗೆ ವಾರಕ್ಕೆ ಎರಡು ದಿನ ಮನೆಯಿಂದಲೇ ಕೆಲಸ ಮತ್ತು ವಾಹನಗಳ ಕನಿಷ್ಠ ಬಳಕೆ ಘೋಷಿಸಿದ್ದಾರೆ. ದೆಹಲಿ ಸರ್ಕಾರದ ಈ ನಿರ್ಧಾರ ನಾಳೆಯಿಂದಲೇ ಜಾರಿಗೆ ಬರಲಿದ್ದು, ಇಂಧನ ಉಳಿತಾಯ ಮತ್ತು ದಕ್ಷ ಆಡಳಿತವನ್ನು ಉತ್ತೇಜಿಸಲು ಬಿಜೆಪಿ ನೇತೃತ್ವದ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ “ಮೇರಾ ಭಾರತ್ ಮೇರಾ ಯೋಗದಾನ್”(ನನ್ನ ಭಾರತ, ನನ್ನ ಕೊಡುಗೆ) ಅಭಿಯಾನವನ್ನು ಪ್ರಾರಂಭಿಸುತ್ತಿದೆ. ಪ್ರತಿ ಸೋಮವಾರ “ಮೆಟ್ರೋ ಸೋಮವಾರ” ಎಂದು ಆಚರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಈ ದಿನ ಎಲ್ಲಾ ಸಚಿವರು, ಅಧಿಕಾರಿಗಳು ಮತ್ತು ಉದ್ಯೋಗಿಗಳು ಮೆಟ್ರೋದಲ್ಲಿ ಪ್ರಯಾಣಿಸಬೇಕು ಎಂದು ಸರ್ಕಾರ ಸೂಚಿಸಿದೆ. ವಾರದಲ್ಲಿ ಒಂದು ದಿನ “ವಾಹನ ರಹಿತ ದಿನ”ವನ್ನು ಆಚರಿಸಲು ಸರ್ಕಾರ ಸಾರ್ವಜನಿಕರಿಗೆ ಮನವಿ ಮಾಡಿದೆ. ದೆಹಲಿಯಲ್ಲಿ ಮುಂದಿನ ಆರು ತಿಂಗಳವರೆಗೆ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಲಾಯರ್ ಕೋಟ್ ಧರಿಸಿ ಕಲ್ಕತ್ತಾ ಹೈಕೋರ್ಟ್ಗೆ ಹಾಜರಾದ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದ್ದು, ಟಿಎಂಸಿ ನಾಯಕಿ ವಕೀಲೆಯಾಗಿ ನೋಂದಾಸಿಕೊಂಡ ದಾಖಲಾತಿ ಮತ್ತು ವೃತ್ತಿಪರ ಅಭ್ಯಾಸದ ಬಗ್ಗೆ 48 ಗಂಟೆಗಳ ಒಳಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ(ಬಿಸಿಐ) ಗುರುವಾರ ಪಶ್ಚಿಮ ಬಂಗಾಳ ಬಾರ್ ಕೌನ್ಸಿಲ್ಗೆ ಸೂಚಿಸಿದೆ. ಚುನಾವಣಾ ನಂತರದ ಹಿಂಸಾಚಾರ ಮತ್ತು ಪಕ್ಷದ ಕಚೇರಿಗಳ ಮೇಲಿನ ದಾಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಾದ ಮಂಡಿಸಲು ಮಮತಾ ಬ್ಯಾನರ್ಜಿ ಅವರು ಇಂದು ಕಲ್ಕತ್ತಾ ಹೈಕೋರ್ಟ್ ಗೆ ಕರಿ ಕೋಟ್ ಧರಿಸಿ ಆಗಮಿಸಿ ಗಮನ ಸೆಳೆದಿದ್ದರು. 2011 ರಿಂದ 2026 ರವರೆಗೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮತ್ತು ನಂತರ ಮಮತಾ ಅವರು ವಕೀಲರಾಗಿ ನೋಂದಾಸಿಕೊಂಡಿದ್ದಕ್ಕೆ ಸಂಬಂಧಿಸಿದ ಸಂಪೂರ್ಣ ದಾಖಲೆಗಳು, ಯಾವುದಾದರೂ ಇದ್ದರೆ ಮತ್ತು ಅವರ ಅಭ್ಯಾಸದ ಸ್ಥಿತಿಗತಿಗೆ ಸಂಬಂಧಿಸಿದ ಸಂಪೂರ್ಣ ದಾಖಲೆಗಳನ್ನು ಎರಡು ದಿನಗಳಲ್ಲಿ ಸಲ್ಲಿಸುವಂತೆ ಬಾರ್ ಕೌನ್ಸಿಲ್ ಆಫ್…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 11 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮೇ 7 ರಂದು ಮಂಗಳೂರು ಬಳಿಯ ಉಳ್ಳಾಲ ಪ್ರದೇಶದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಖಾದರ್ ಅವರು ಬೆಂಗಾವಲು ಪಡೆಯಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರತಿಭಟನಾಕಾರರ ಗುಂಪೊಂದು ಬೆಂಗಾವಲು ಪಡೆಯನ್ನು ತಡೆಯಲು ಪ್ರಯತ್ನಿಸಿತು ಮತ್ತು ಅವರ ವಿರುದ್ಧ ಘೋಷಣೆಗಳನ್ನು ಕೂಗಿತು ಎಂದು ಪೊಲೀಸರು ತಿಳಿಸಿದ್ದಾರೆ. ಸಭಾಪತಿಯ ಗನ್ ಮ್ಯಾನ್ ಮೊಹಮ್ಮದ್ ಯಾಸೀನ್ ನೀಡಿದ ದೂರಿನ ಪ್ರಕಾರ, ಕುತ್ತಾರ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಬಾಪುನಿ ಸರ್ಕಾರಿ ಅತಿಥಿ ಗೃಹದ ಮುಂದೆ ಜನರ ಗುಂಪೊಂದು ಸ್ಪೀಕರ್ ಅವರ ಬೆಂಗಾವಲು ಪಡೆಯನ್ನು ತಡೆದು, ಭದ್ರತಾ ಅಧಿಕಾರಿಗಳನ್ನು ಕೈಗಳಿಂದ ತಳ್ಳಿತು.
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: 2022ರಲ್ಲಿ ಉಡುಪಿಯಲ್ಲಿ ಶುರುವಾಗಿದ್ದ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ವಿಚಾರವಾಗಿ ಈಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಸರ್ಕಾರ ಮತ್ತೆ ಅವಕಾಶ ನೀಡಿದ್ದು, ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿದೆ. ಉಡುಪಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಕ್ಕೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಇದು ತೀವ್ರ ಸ್ವರೂಪ ಪಡೆದುಕೊಂಡಿದ್ದು ಕಾನೂನು ಸಮರಕ್ಕೂ ಕಾರಣವಾಗಿತ್ತು. ಇದೀಗ ರಾಜ್ಯ ಸರ್ಕಾರ ಹಿಜಾಬ್ ವಿಚಾರದಲ್ಲಿ ತನ್ನ ನಿಲುವನ್ನು ಬದಲಿಸಿದ್ದು, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅನುಮತಿ ನೀಡಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ.
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ನಿನ್ನೆ ಬುಧವಾರ ಪ್ರಕಟವಾದ 2026ರ ಸಿಬಿಎಸ್ ಇ 12ನೇ ತರಗತಿ ಫಲಿತಾಂಶದಲ್ಲಿ, ಉತ್ತೀರ್ಣ ಪ್ರಮಾಣದ ಆಧಾರದ ಮೇಲೆ ಕರ್ನಾಟಕವು ದೇಶದಲ್ಲಿ ಮೂರನೇ ಸ್ಥಾನ ಪಡೆದಿದೆ. ಸಿಬಿಎಸ್ಇ ಮಾಹಿತಿಯ ಪ್ರಕಾರ, ಬೆಂಗಳೂರು ಪ್ರದೇಶದ ಅಡಿಯಲ್ಲಿ ವರ್ಗೀಕರಿಸಲ್ಪಟ್ಟಿರುವ ರಾಜ್ಯವು 93.19 ಶೇಕಡಾ ಉತ್ತೀರ್ಣ ಪ್ರಮಾಣ ದಾಖಲಿಸಿದ್ದು, ಕೇರಳ (95.62%) ಮತ್ತು ತಮಿಳುನಾಡು (93.84%) ನಂತರ ಸ್ಥಾನ ಪಡೆದಿದೆ. ಕಳೆದ ವರ್ಷದ 95.95 ಶೇಕಡಾ ಉತ್ತೀರ್ಣ ಪ್ರಮಾಣದೊಂದಿಗೆ ಹೋಲಿಸಿದರೆ, ಈ ಬಾರಿ ರಾಜ್ಯದ ಫಲಿತಾಂಶವು 2.76 ಶೇಕಡಾ ಅಂಕಗಳಷ್ಟು ಕುಸಿತ ಕಂಡಿದೆ. ಕರ್ನಾಟಕದಿಂದ ಒಟ್ಟು 22,459 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಅವರಲ್ಲಿ 22,386 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟು 20,861 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇವರಲ್ಲಿ 10,924 ಗಂಡು ಮಕ್ಕಳು ಹಾಗೂ 9,937 ಹೆಣ್ಣು ಮಕ್ಕಳು ಸೇರಿದ್ದಾರೆ.
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ನೀಟ್ ಪರೀಕ್ಷೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸಂತೋಷ್ ಲಾಡ್, ವ್ಯಾಪಂ ಹಗರಣದ ಬಗ್ಗೆ ಸಿನಿಮಾ ಮಾಡುವಂತೆ ಖ್ಯಾತ ಚಿತ್ರ ನಿರ್ದೇಶಕ ಆದಿತ್ಯ ಧರ್ ಅವರಿಗೆ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂತೋಷ್ ಲಾಡ್, ನಿರ್ದೇಶಕ ಆದಿತ್ಯ ಧರ್ ಅವರು ಈಗಾಗಲೇ ‘ಧುರಂಧರ್’ ಸರಣಿಯ ಸಿನಿಮಾಗಳನ್ನು ಮಾಡಿದ್ದಾರೆ. ನಾನು ಅವರಿಗೆ ಒಂದು ವಿಶೇಷ ಮನವಿ ಮಾಡುತ್ತಿದ್ದೇನೆ. ಅವರು ದಯವಿಟ್ಟು ‘ವ್ಯಾಪಂ’ ಹಗರಣದ ಕುರಿತೂ ಒಂದು ಚಿತ್ರ ನಿರ್ಮಿಸಲಿ. ಅದೊಂದು ಅತ್ಯಂತ ರೋಚಕವಾದ ಹಗರಣವಾಗಿದ್ದು, ಸಿನಿಮಾ ಮಾಡಲು ಸೂಕ್ತವಾದ ಕಥಾವಸ್ತುವನ್ನು ಹೊಂದಿದೆ ಎಂದು ಚಾಟಿ ಬೀಸಿದದ್ದಾರೆ. ಪರೀಕ್ಷಾ ಅಕ್ರಮಗಳ ವಿಚಾರದಲ್ಲಿ ಕೇಂದ್ರದ ವೈಫಲ್ಯಗಳನ್ನು ಟೀಕಿಸುವ ಭರದಲ್ಲಿ ಸಚಿವರು ಈ ರೀತಿಯಾಗಿ ಸಿನಿಮಾ ವಿಚಾರವನ್ನು ಎಳೆದು ತಂದು ಟಾಂಗ್ ನೀಡಿದ್ದಾರೆ. ಇನ್ನೂ ಮೋದಿ ರೋಡ್ ಶೋ ಸಂಬಂಧ ವ್ಯಂಗ್ಯವಾಡಿದ ಸಂತೋಷ್ ಲಾಡ್, ಮೋದಿ ಸಾಹೇಬರು ಎಲ್ಲಿ ರೋಡ್ ಶೋ ಮಾಡಿದರೂ ಅಲ್ಲಿ ಆ್ಯಂಬುಲೆನ್ಸ್…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ತಿರುವನಂತಪುರ: ಕೇರಳ ಮುಖ್ಯಮಂತ್ರಿ ಆಯ್ಕೆ ಸಂಬಂಧ ಹಲವು ದಿನಗಳಿಂದ ನಡೆಯುತ್ತಿರುವ ಆಂತರಿಕ ಹೋರಾಟಕ್ಕೆ ಅಂತ್ಯ ಹಾಡಿರುವ ಕಾಂಗ್ರೆಸ್, ಗುರುವಾರ ತಿರುವನಂತಪುರಂನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಲಿದೆ. ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ದೀಪಾ ದಾಸ್ ಮುನ್ಷಿ, ವೀಕ್ಷಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ಇತರರು ಭಾಗವಹಿಸಲಿದ್ದಾರೆ. ಹಿರಿಯ ನಾಯಕರಾದ ವಿ.ಡಿ. ಸತೀಶನ್, ರಮೇಶ್ ಚೆನ್ನಿತ್ತಲ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರ ನಡುವಿನ ತೀವ್ರ ತ್ರಿಕೋನ ಸ್ಪರ್ಧೆಗೆ ಒಂಬತ್ತು ದಿನಗಳ ನಂತರ ಅಂತಿಮ ತೀರ್ಮಾನ ಹೊರಬೀಳಲಿದೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ನಿರ್ಣಾಯಕ ಸಭೆಯ ನಂತರ ಮುಖ್ಯಮಂತ್ರಿ ಅಭ್ಯರ್ಥಿಯ ಘೋಷಣೆ ವ್ಯಾಪಕವಾಗಿ ನಿರೀಕ್ಷಿಸಲಾಗಿತ್ತು, 40 ನಿಮಿಷಗಳಿಗೂ ಹೆಚ್ಚು ಕಾಲ ನಡೆದ ಸಭೆಯ ನಂತರ ಮಾತನಾಡಿದ, ಪಕ್ಷದ ಪ್ರಧಾನ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಕನ್ನಡ ಚಿತ್ರರಂಗಕ್ಕೆ ಇಂದು ಬೆಳಗ್ಗೆಯೇ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ನಸುಕಿನ ಜಾವ ಮನೆಯಲ್ಲಿದ್ದಾಗಲೇ ದಿಲೀಪ್ ರಾಜ್ ಅವರಿಗೆ ತೀವ್ರ ಹಾರ್ಟ್ ಅಟ್ಯಾಕ್ (Heart Attack) ಆಗಿತ್ತು. ಅವರಿಗೆ 47 ವರ್ಷ ವಯಸ್ಸಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಷ್ಟು ಹೊತ್ತಿಗೆ ಪ್ರಾಣಪಕ್ಷಿ ಹಾರಿಹೋಗಿತ್ತು. ದಿಲೀಪ್ ರಾಜ್ ನಿಧನಕ್ಕೆ (Dileep Raj Death) ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ದಿಲೀಪ್ ರಾಜ್ ಸಿನಿಪಯಣ ದಿಲೀಪ್ ರಾಜ್ ಅವರ ಕನ್ನಡ ಚಿತ್ರರಂಗದ ಪಯಣ 2005ರಲ್ಲಿ ಬಿಡುಗಡೆಯಾದ ಬಾಯ್ ಫ್ರೆಂಡ್ ಚಿತ್ರದ ಮೂಲಕ ನಾಯಕ ನಟನಾಗಿ ಆರಂಭವಾಯಿತು. 2007ರಲ್ಲಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಅಭಿನಯಿಸಿದ ಮಿಲನ ಚಿತ್ರದ ನಂತರ ಅವರಿಗೆ ಹೆಚ್ಚಿನ ಗುರುತು ಸಿಕ್ಕಿತು. ನಂತರ ದಿಲೀಪ್ ರಾಜ್ ಸುಮಾರು 20ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದರು. ಅವರ ಇತ್ತೀಚಿನ ಚಿತ್ರವಾಗಿ ಲವ್…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಳಗಾವಿ: ಗೃಹ ಲಕ್ಷ್ಮಿ ಯೋಜನೆಯ ಮಾರ್ಚ್ ತಿಂಗಳ ಬಾಕಿ ಉಳಿದಿರುವ ಕಂತು ಇನ್ನು ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಏಪ್ರಿಲ್ ತಿಂಗಳ ಕಂತು ಕೂಡ ಇನ್ನು ಹತ್ತು ದಿನಗಳೊಳಗೆ ಫಲಾನುಭವಿಗಳಿಗೆ ತಲುಪಲಿದೆ ಎಂದು ತಿಳಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಕನೂರ ಗ್ರಾಮದಲ್ಲಿ ನಡೆದ ಶ್ರೀ ಮಹಾಲಕ್ಷ್ಮೀ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯಾರ ಹೆಸರನ್ನೂ ಉಲ್ಲೇಖಿಸದೆ, ಕ್ಷೇತ್ರದ ಹಿಂದಿನ ಪ್ರತಿನಿಧಿಗಳ ವಿರುದ್ಧ ಸಚಿವೆ ಟೀಕಿಸಿ, ಅವರು ಅಭಿವೃದ್ಧಿ ಕೆಲಸಗಳನ್ನು ಮಾಡದೇ ಕೇವಲ “ಹಿಂದುತ್ವ ರಾಜಕಾರಣ”ಕ್ಕೆ ಮಾತ್ರ ಒತ್ತು ನೀಡಿದರು ಎಂದು ಆರೋಪಿಸಿದರು. ಎಲ್ಲಾ ಕ್ಷೇತ್ರಗಳಲ್ಲೂ ಉನ್ನತ ಮಟ್ಟದ ಅಭಿವೃದ್ಧಿ ಸಾಧಿಸುವ ಮೂಲಕ ಈ ಕ್ಷೇತ್ರವನ್ನು ಬಾರಾಮತಿ ಮಾದರಿಯಲ್ಲಿ ಮಾದರಿ ಕ್ಷೇತ್ರವನ್ನಾಗಿ ರೂಪಿಸುವ ಕನಸು ಹೊಂದಿದ್ದೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಪಶ್ಚಿಮ ಏಷ್ಯಾದಲ್ಲಿ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಸಂಕಷ್ಟ ಮತ್ತು ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯ ನಡುವೆಯೇ ಇಂಧನ ಉಳಿತಾಯ ಹಾಗೂ ಮಿತವ್ಯಯ ಕ್ರಮಗಳ ಭಾಗವಾಗಿ ತಮ್ಮ ಎಸ್ಪಿಜಿ ಭದ್ರತಾ ಪಡೆಗೆ ನಿಯೋಜನೆಗೊಳ್ಳುವ ವಾಹನಗಳ ಸಂಖ್ಯೆಯಲ್ಲಿ (official convoy vehicle) ಶೇಕಡಾ 50ರಷ್ಟು ಕಡಿತಗೊಳಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆದೇಶ ನೀಡಿದ್ದಾರೆ. ಇತ್ತೀಚೆಗೆ ವಡೋದರಾ ಮತ್ತು ಗುವಾಹಟಿ ಭೇಟಿಗಳ ವೇಳೆ ಪ್ರಧಾನಿಯವರ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಕಡಿತಗೊಳಿಸಲಾಗಿತ್ತು. ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೂ, ಅಮೆರಿಕಾ-ಇರಾನ್ ಸಂಘರ್ಷದಿಂದ ಉಂಟಾದ ಆರ್ಥಿಕ ಅನಿಶ್ಚಿತತೆಯ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ಕಡಿಮೆ ಇಂಧನ ಬಳಕೆಗೆ ಪ್ರೋತ್ಸಾಹ ನೀಡುವುದು ಮತ್ತು ತಾವು ನುಡಿದಂತೆ ದೇಶದ ನಾಗರಿಕರ ಮುಂದೆ ಮಾದರಿಯಾಗಿ ನಡೆದುಕೊಳ್ಳುವುದು ಪ್ರಧಾನಿ ಮೋದಿಯವರ ಉದ್ದೇಶವಾಗಿದೆ. ಪ್ರಧಾನಿಯವರ ಭದ್ರತೆಯನ್ನು ನೋಡಿಕೊಳ್ಳುವ ವಿಶೇಷ ಭದ್ರತಾ ಗುಂಪು (SPG) ಗೆ ಬೆಂಗಾವಲು ವಾಹನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೂಡ ಕೇಂದ್ರ ಸರ್ಕಾರ ಸೂಚಿಸಿದೆ.…
Subscribe to Updates
Get the latest creative news from FooBar about art, design and business.