Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ತೆಲುಗು ಚಿತ್ರರಂಗದ ಸ್ಟಾರ್ ನಟ ಅಲ್ಲು ಅರ್ಜುನ್ ಅವರು ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಯಶಸ್ಸಿನ ನಂತರ ʻರಾಕಾʼ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. 600 ಕೋಟಿ ರೂ.ಗಳಿಗೂ ಅಧಿಕ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ʻರಾಕಾʼ ಸಿನಿಮಾದ ಬಹುತೇಕ ಕೆಲಸಗಳು ಮುಂಬೈನಲ್ಲೇ ನಡೆಯುತ್ತಿವೆ. ಹೀಗಾಗಿ ಅಲ್ಲು ಅರ್ಜುನ್ ಅವರು ಈಗ ಮಾಯಾನಗರಿ ಮುಂಬೈಗೆ ಶಿಫ್ಟ್ ಆಗುತ್ತಿದ್ದಾರೆ. ಮುಂಬೈನಲ್ಲಿ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ವಾಸಿಸುವ ಐಶಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಮನೆಯೊಂದನ್ನು ಅಲ್ಲು ಅರ್ಜುನ್ ಅವರು ಬಾಡಿಗೆ ಪಡೆದಿದ್ದಾರೆ. ಅಲ್ಲು ಅರ್ಜುನ್ ಮುಂಬೈನ ಪ್ರತಿಷ್ಠಿತ ಏರಿಯಾನಲ್ಲಿ ಸೀ ಫೇಸ್ ಅಪಾರ್ಟ್​​ಮೆಂಟ್​​ನಲ್ಲಿ ಫ್ಲ್ಯಾಟ್ ಒಂದನ್ನು ಬಾಡಿಗೆಗೆ ಪಡೆದಿದ್ದಾರೆ. ಈ ಹೈ-ಎಂಡ್ ಅಪಾರ್ಟ್‌ಮೆಂಟ್‌ಗಾಗಿ ಪ್ರತಿ ತಿಂಗಳು ಬರೋಬ್ಬರಿ 16 ಲಕ್ಷ ರೂಪಾಯಿ ಬಾಡಿಗೆ ಪಾವತಿಸಲಿದ್ದಾರೆ. ಅಲ್ಲು ಅರ್ಜುನ್ ಅವರು ಪ್ರೈವೇಟ್ ಜೆಟ್‌ನಲ್ಲಿ ಓಡಾಡುತ್ತಾರೆ. ಅಷ್ಟೆಲ್ಲಾ ವೆಚ್ಚ ಭರಿಸಲು ‘ರಾಕಾ’ ಸಿನಿಮಾ ನಿರ್ಮಾಣ ಮಾಡುತ್ತಿರುವ ಸನ್…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಹೈದರಾಬಾದ್‌ ನಲ್ಲಿ ಬಿರಿಯಾನಿ ಆಡಿಟ್ ನಲ್ಲಿ 70,000 ಕೋಟಿ ರೂಪಾಯಿ ತೆರಿಗೆ ವಂಚನೆ ದಂಧೆ ಬಯಲಾದ ಬಳಿಕ ಬೆಂಗಳೂರಿನಲ್ಲಿ ಬರೊಬ್ಬರಿ 410 ಕೋಟಿ ಜಿಎಸ್ ಟಿ ಹಗರಣ ಬಯಲಾಗಿದೆ. ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಸುಮಾರು 410 ಕೋಟಿ ರೂಪಾಯಿ ಮೊತ್ತದ ಈ ವ್ಯವಹಾರದಲ್ಲಿ 102.5 ಕೋಟಿ ರೂಪಾಯಿ ತೆರಿಗೆ ಹಣವನ್ನು ಲೂಟಿ ಮಾಡಲಾಗಿದೆ. ಈ ವಂಚನೆಯ ಜಾಲದ ರೂವಾರಿ ಆಂಧ್ರಪ್ರದೇಶದ ಚಿತ್ತೂರಿನ ತೌಕೀರ್ ಮೊಹಮ್ಮದ್ (42) ಆಗಿದ್ದು, ಆತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ಈತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿದೇಶಕ್ಕೆ ಪರಾರಿಯಾಗಿರುವ ಈತನ ಸಹಚರ ಶೇಕ್ ಜಾಕೀರ್ ಹುಸೇನ್ ಅಲಿಯಾಸ್ ಬಾಷಾ ಎಂಬಾತನಿಗೆ ತೀವ್ರ ಹುಡುಕಾಟ ನಡೆಯುತ್ತಿದೆ. ಈ ಜಾಲದಲ್ಲಿರುವವರು ಅಮಾಯಕ ಜನರ ಪಾನ್ (PAN) ಮತ್ತು ಆಧಾರ್ ಕಾರ್ಡ್‌ಗಳನ್ನು ಅಕ್ರಮವಾಗಿ ಬಳಸಿ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ (SSLC Result 2026) ಇಂದು ಗುರುವಾರ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯದಲ್ಲಿ 7 ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್​, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಕ್ಕಳು ತೇರ್ಗಡೆಯಾಗಿದ್ದಾರೆ. ಶೇ 96.18ರಷ್ಟು ಬಾಲಕಿಯರು, ಶೇ 91.94ರಷ್ಟು ಬಾಲಕರು ಪಾಸಾಗಿದ್ದಾರೆ. 3,92,922 ಬಾಲಕಿಯರ ಪೈಕಿ 3,77,922 ಬಾಲಕಿಯರು ತೇರ್ಗಡೆಯಾಗಿದ್ದಾರೆ. 3,77,287 ಬಾಲಕರ ಪೈಕಿ 3,46,872 ಬಾಲಕರು ತೇರ್ಗಡೆ ಹೊಂದಿದ್ದಾರೆ. ಈ ಬಾರಿ ಎರಡೇ ಪರೀಕ್ಷೆ ಈ ಬಾರಿ ದ್ವಿತೀಯ ಪಿಯುಸಿಯಂತೆ ಉತ್ತಮ ಫಲಿತಾಂಶ ಬಂದಿರುವುದರಿಂದ ಮೂರನೇ ಪರೀಕ್ಷೆ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಉಪಸಮಿತಿ ಕರ್ನಾಟಕದಲ್ಲಿ ಭಾರಿ ಹೂಡಿಕೆ ಮಾಡಲು ಯೋಜಿಸಿರುವ 13 ಕಂಪನಿಗಳಿಗೆ ಹೆಚ್ಚುವರಿ ಪ್ರೋತ್ಸಾಹಕಗಳನ್ನು ನೀಡುವ ಬಗ್ಗೆ ಚರ್ಚಿಸಿದೆ. ಕಂಪನಿಗಳ ಬೇಡಿಕೆ ಆಧರಿಸಿ ಪ್ರೋತ್ಸಾಹಕಗಳನ್ನು ನೀಡುವ ಕೆಲಸವನ್ನು ಈ ಉಪಸಮಿತಿ ನೋಡಿಕೊಳ್ಳುತ್ತದೆ. ಮೂಲಗಳ ಪ್ರಕಾರ, ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕಂಪೆನಿ ಮತ್ತು ಸರ್ಕಾರಕ್ಕೆ ಲಾಭವಾಗುವ (win-win) ಪರಿಹಾರ ಕಂಡುಹಿಡಿಯಲು ಪ್ರತಿಯೊಂದು ಕಂಪನಿಯೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸಬೇಕು ಎಂದು ಉಪಸಮಿತಿ ಸೂಚಿಸಿದೆ. ಕೆಲವು ಕಂಪನಿಗಳು 40 ಶೇಕಡದವರೆಗೆ ಹೆಚ್ಚುವರಿ ಪ್ರೋತ್ಸಾಹಕಗಳನ್ನು ಕೇಳಿವೆ. ಇದನ್ನು 35 ಶೇಕಡಾ ಅಥವಾ ಕೆಲ ಸಂದರ್ಭಗಳಲ್ಲಿ 20-25 ಶೇಕಡಾಕ್ಕೆ ಇಳಿಸಬಹುದೇ ಎಂಬುದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಈ ಹೂಡಿಕೆಗಳು ರಾಜ್ಯಕ್ಕೆ ತರುವ ಲಾಭವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಯೋಜನೆಗಳನ್ನು ತಿರಸ್ಕರಿಸಲಾಗಿಲ್ಲ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಕಂಪನಿಗಳು ಕನ್ನಡಿಗರಿಗೆ ಉದ್ಯೋಗಗಳಿಗೆ ಆದ್ಯತೆ ನೀಡುವಂತೆ ಖಚಿತಪಡಿಸಿಕೊಳ್ಳಬೇಕೆಂದು ಒತ್ತಿ ಹೇಳಿದ್ದಾರೆ.

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಕೃಷ್ಣನಗರ: ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ TMC ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಪಕ್ಷ ಹಲವು ಜಿಲ್ಲೆಗಳಲ್ಲಿ ತನ್ನ ಖಾತೆ ತೆರೆಯಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೂ ಮುನ್ನ ಕೃಷ್ಣನಗರದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣವನ್ನು ಗುರಿಯಾಗಿಟ್ಟುಕೊಂಡು 10 ಅಂಶಗಳ ಗ್ಯಾರಂಟಿ ನೀಡಿದರು. ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗುವವರಿಗೆ ಶಿಕ್ಷೆಯಾಗುತ್ತದೆ” ಎಂದು ಅವರು ಪ್ರತಿಜ್ಞೆ ಮಾಡಿದರು. ಪ್ರತಿ ಬ್ಲಾಕ್‌ನಲ್ಲಿ ಮಹಿಳಾ ಠಾಣೆ ಇರುತ್ತದೆ. ಮಹಿಳೆಯರನ್ನು ದೊಡ್ಡ ಪ್ರಮಾಣದಲ್ಲಿ ಪೊಲೀಸ್ ಪಡೆಗೆ ನೇಮಿಸಿಕೊಳ್ಳಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಒಂದು ವರ್ಷದೊಳಗೆ, 36,000 ರೂ.ಗಳನ್ನು ಮಹಿಳೆಯರ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ ಎಂದು ಅವರು ಭರವಸೆ ನೀಡಿದರು. ಬಿಜೆಪಿ ಸರ್ಕಾರ ರಚನೆಯಾದರೆ ಪದವೀಧರ ವಿದ್ಯಾರ್ಥಿನಿಯರಿಗೆ 50,000 ರೂ. ಹಾಗೂ ಗರ್ಭಿಣಿ ಮಹಿಳೆಯರಿಗೆ 21,000 ರೂ.ಗಳ ಆರ್ಥಿಕ ನೆರವು…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಾಗಿದ್ದಾರೆ. ಜಮೀರ್ ಅಹ್ಮದ್ ಜೆಡಿಎಸ್‌ಗೆ ಬರುವ ಅವಶ್ಯಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೋ ಬರುತ್ತಾರೆಂದು ಜೆಡಿಎಸ್‌ ಪಕ್ಷ ಉಳಿದಿಲ್ಲ. ಮುಂದೆಯೂ ಅಂತಹ ಸನ್ನಿವೇಶ ಸೃಷ್ಟಿಯಾಗುವುದಿಲ್ಲ ಎಂದು ಕಿಡಿಕಾರಿದ್ದಾರೆ. ಸಚಿವ ಜಮೀರ್‌ ಅಹಮ್ಮದ್ ಖಾನ್‌ ಅವರು ಜೆಡಿಎಸ್‌ ಸೇರ್ಪಡೆಯಾಗುವ ಕುರಿತ ವದಂತಿ ಬಗ್ಗೆ ಉತ್ತರಿಸಿದ ಅವರು, ಈ ಬಗ್ಗೆ ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಅವರೇ ಸ್ಟಷ್ಟೀಕರಣ ಕೊಟ್ಟಿದ್ದಾರೆ. ಕಾಂಗ್ರೆಸ್‌ ಪಕ್ಷ ಸ್ಥಾನಮಾನ ಕೊಟ್ಟು ಬೆಳೆಸಿದೆ ಎಂದು ಹೇಳಿದ್ದಾರೆ. ಹೀಗಾಗಿ ಅವರ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ ಎಂದರು. ನಮ್ಮ ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ. ನಾವು ಹೋರಾಡಲು ಸಿದ್ಧರಿದ್ದೇವೆ. ಯಾರೋ ಪಕ್ಷಕ್ಕೆ ಬರುತ್ತಾರೆ ಎಂದು ನೆಚ್ಚಿಕೊಂಡು ಪಕ್ಷ ಉಳಿದಿಲ್ಲ. ಇನ್ನು ಮುಂದೆಯೂ ಅದು ಆಗಲ್ಲ. ಪಕ್ಷದಲ್ಲಿ ಅಂತಹ ಸನ್ನಿವೇಶ ಸೃಷ್ಟಿ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ಕರೆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ, ಕರ್ನಾಟಕ ಬಿಜೆಪಿ ಗುರುವಾರ ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿತು ಮತ್ತು ಅವರು ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನಸಭೆ ಮತ್ತು ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಪಕ್ಷದ ಹಲವಾರು ಶಾಸಕರು ಹಾಗೂ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಬಿಜೆಪಿ ನಾಯಕರು ಫಲಕಗಳನ್ನು ಹಿಡಿದು ಖರ್ಗೆ ವಿರುದ್ಧ ಘೋಷಣೆಗಳನ್ನು ಕೂಗಿದರು. “ನಮ್ಮ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಲವಾರು ದೇಶಗಳು ತಮ್ಮ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಭಾರತದ ಬೇರೆ ಯಾವುದೇ ಪ್ರಧಾನಿ ಇಷ್ಟೊಂದು ಪ್ರಮಾಣದಲ್ಲಿ ಪ್ರಶಸ್ತಿಗಳನ್ನು ಪಡೆದಿಲ್ಲ. ಇಡೀ ಜಗತ್ತು ನರೇಂದ್ರ ಮೋದಿಯವರ ನಾಯಕತ್ವವನ್ನು ಗುರುತಿಸಿರುವ ಸಮಯದಲ್ಲಿ,…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ ಕಲಬುರಗಿ ಕೊನೆಯ ಸ್ಥಾನ ಪಡೆದಿದೆ. ಈ ಬಾರಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ ಪಡೆದ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊಂದಿಗೆ ಕಲಬುರಗಿಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಕಲಬುರಗಿ ಜಿಲ್ಲೆಗೆ ಕೊನೆಯ ಸ್ಥಾನ ಬಂದಿರುವುದಕ್ಕೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿವೆ. ಸ್ವಂತ ಜಿಲ್ಲೆಯ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಖರ್ಗೆ ಕುಟುಂಬ ವಿಫಲವಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ವಾಗ್ದಾಳಿ ನಡೆಸಿವೆ. ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, “S.S.L.C ಫಲಿತಾಂಶ ಬಂದಿದೆ ಟ್ವೀಟ್ ಮಾಡಿ, ಎಲ್ಲಿದ್ದೀರಿ ಮಹಾಜ್ಞಾನಿ ಪ್ರಿಯಾಂಕ್‌ ಖರ್ಗೆ ಅವರೇ?” ಎಂದು ಪ್ರಶ್ನಿಸಿದೆ.…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಇಂದಿನ ಪಂಚಾಂಗ ದಿನಾಂಕ : 21-04-2026 ವಾರ : ಮಂಗಳವಾರ ಸಂವತ್ಸರ : ಶ್ರೀ ಪರಾಭವ ನಾಮ ಆಯನ : ಉತ್ತರಾಯಣ ಪಕ್ಷ : ಶುಕ್ಲ ತಿಥಿ : ಪಂಚಮಿ ನಕ್ಷತ್ರ : ಮೃಗಶಿರ ಸೂರ್ಯೋದಯ : ಮುಂಜಾನೆ 6:01 ಗಂಟೆಗೆ ದುರ್ಮುಹೂರ್ತ : ಬೆಳಗ್ಗೆ 8:25 ರಿಂದ 9:13 ಗಂಟೆವರೆಗೆ ಹಾಗೂ 11:37 ರಿಂದ 12:25 ರತನಕ ಅಮೃತ ಕಾಲ : ಮಧ್ಯಾಹ್ನ 12:16 ರಿಂದ 01:50 ರವರೆಗೆ ರಾಹುಕಾಲ : ಸಂಜೆ 03:24 ರಿಂದ 04:58 ರವರೆಗೆ ಸೂರ್ಯಾಸ್ತ : ಸಂಜೆ 06:32 ಗಂಟೆಗೆ ಇಂದಿನ ರಾಶಿ ಭವಿಷ್ಯ ಮೇಷ : ಇಂದು ನಿಮ್ಮ ಬಾಗಿಲನ್ನು ಸುವರ್ಣಾವಕಾಶವು ಬಡಿಯುತ್ತದೆ. ನೀವು ಉತ್ತಮ ಅದೃಷ್ಟವನ್ನು ಭವಿಷ್ಯಕ್ಕೆ ಉಳಿಸುವಲ್ಲಿ ಯಶಸ್ವಿಯಾಗಲೂಬಹುದು. ಸದ್ಯದಲ್ಲೇ, ನೀವು ನಿಮ್ಮ ದಾರಿಯಲ್ಲಿ ಬರುವ ಹೆಚ್ಚು ಒಪ್ಪಂದಗಳ ಮೂಲಕ ನಿಮ್ಮ ವ್ಯಾಪಾರದ ಮೈಲಿಗಲ್ಲುಗಳನ್ನು ರೂಪಿಸಿಕೊಳ್ಳಲು ಶಕ್ತರಾಗುತ್ತೀರಿ. ನೀವು ಹಾಕುವ ಪ್ರಯತ್ನಗಳಿಗೆ ಅನುಗುಣವಾಗಿ ನೀವು ಪ್ರತಿಫಲವನ್ನು ಪಡೆಯುತ್ತೀರಿ. ವೃಷಭ : ಇಂದು ನೀವು ಕೆಲ ಲೆಕ್ಕಾಚಾರದ ನಿರ್ಧಾರಗಳನ್ನು ಕೈಗೊಳ್ಳಲು ನಿಮ್ಮ ವಿಶ್ಲೇಷಣಾತ್ಮಕ ಕೌಶಲ್ಯಗಳು…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಹುಬ್ಬಳ್ಳಿ: ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಮೈಸೂರು-ಅಲಿಪುರದ್ವಾರ್ ಜಂಕ್ಷನ್-ಮೈಸೂರು ನಡುವೆ ತಲಾ ಒಂದು ಟ್ರಿಪ್ ಬೇಸಿಗೆ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲಿದೆ. ರೈಲು ಸೇವೆಗಳ ವಿವರಗಳು ಕೆಳಕಂಡಂತಿವೆ: ರೈಲು ಸಂಖ್ಯೆ 06289 ಮೈಸೂರಿನಿಂದ ಇಂದು (ಎಪ್ರಿಲ್ 20) ರಾತ್ರಿ 08:15 ಗಂಟೆಗೆ ಹೊರಟು, ಗುರುವಾರ ಬೆಳಗ್ಗೆ 05:30 ಗಂಟೆಗೆ ಅಲಿಪುರದ್ವಾರ್ ಜಂಕ್ಷನ್ ತಲುಪಲಿದೆ. ಮರಳಿ ದಿಕ್ಕಿನಲ್ಲಿ, ರೈಲು ಸಂಖ್ಯೆ 06290 ಅಲಿಪುರದ್ವಾರ್ ಜಂಕ್ಷನ್​ನಿಂದ ಎಪ್ರಿಲ್ 24(ಶುಕ್ರವಾರ)ರಂದು ಬೆಳಗ್ಗೆ 04:45 ಗಂಟೆಗೆ ಹೊರಟು, ಭಾನುವಾರ ಮಧ್ಯಾಹ್ನ 01:15 ಗಂಟೆಗೆ ಮೈಸೂರಿಗೆ ಆಗಮಿಸಲಿದೆ. ಮಾರ್ಗ ಮಧ್ಯದಲ್ಲಿ ಈ ರೈಲು ಮಂಡ್ಯ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಬಂಗಾರಪೇಟೆ, ಕುಪ್ಪಂ, ಜೋಲಾರಪೇಟೆ, ಕಟ್ಪಾಡಿ, ರೇಣಿಗುಂಟಾ, ಗುಡೂರು, ಒಂಗೋಲ್, ವಿಜಯವಾಡ, ರಾಜಮಂಡ್ರಿ, ಕೊತ್ತವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಾಲಾಸಾ, ಬ್ರಹ್ಮಪುರ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಭದ್ರಕ್, ಖರಗ್ಪುರ್, ಅಂಡುಲ್, ಧನಕುಣಿ, ಬರ್ಧಮಾನ, ಬಾಲ್ಫೂರ್ ಎಸ್.ನಿಕ್ಟಿನ್, ರಾಮ್ಪುರ ಹಾಟ್, ನ್ಯೂ…

Read More