Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪದಲ್ಲಿ ಆನೆ ಸೆರೆ ತಂಡ ಸ್ಥಾಪನೆ ಕಾರ್ಯ ಸಾಧ್ಯ ವರದಿ ಕೇಳಿದ ಸಚಿವ ಈಶ್ವರ ಖಂಡ್ರೆ, ವನ್ಯ ಜೀವಿಗಳಿಂದ ಬೆಳೆ ಹಾನಿ, ಶೀಘ್ರ ಪರಿಹಾರ ನೀಡಲು ಸೂಚಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ವನ್ಯ ಜೀವಿಗಳಿಂದ ಬೆಳೆ ಹಾನಿಯ ದೂರು ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಜಿಪಿಎಸ್​​ ಚಿತ್ರ ಸಹಿತ ಹಾನಿಯ ನಿರ್ಧರಣೆ ಮಾಡಿ, ತ್ವರಿತವಾಗಿ ಪರಿಹಾರ ಒದಗಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಭಾನುವಾರ ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಆನೆ, ಕಾಡೆಮ್ಮೆ, ಕಾಡುಕೋಣ, ಹಂದಿಗಳಿಂದ ತೀವ್ರ ಬೆಳೆ ಹಾನಿ ಆಗುತ್ತಿದ್ದು, ಅಧಿಕಾರಿಗಳು ವಿಳಂಬ ಮಾಡದೆ ರೈತರಿಗೆ ಪರಿಹಾರ ನೀಡಬೇಕು. ಪ್ರಾಮಾಣಿಕವಾಗಿ ಬೆಳೆ ಹಾನಿಯ ನಿರ್ಧಾರ ಮಾಡಬೇಕು ಎಂದರು. ಪ್ರಸ್ತುತ ವೃತ್ತಕ್ಕೆ 1 ಕೋಟಿ ರೂ. ಹಣ ಬಿಡುಗಡೆಯಾಗಿದ್ದು, ಬಾಕಿ ಇರುವ ಎಲ್ಲ ಬೆಳೆ ಹಾನಿ ಪರಿಹಾರ ನೀಡುವಂತೆ ಸೂಚಿಸಿದ ಅವರು, ಆನೆ ನಿಗ್ರಹ ಕಂದಕ, ಸೌರ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಹಾವೇರಿ: ಕಾಂಗ್ರೆಸ್​ ಪಕ್ಷ ಯಾವತ್ತೂ ಮಹಿಳಾ ಮೀಸಲಾತಿ ವಿರೋಧಿ ಅಲ್ಲ. ಈಗ ಡಿಲಿಮಿಟೇಷನ್ ಸೇರಿಸಿ ತಂದಿದ್ದಾರೆ. ಇದರಿಂದ ಉತ್ತರ ಭಾರತದ ಸಂಸದ ಸ್ಥಾನಗಳು ಹೆಚ್ಚಾಗುತ್ತವೆ, ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ಅದಕ್ಕೆ ನಾವು ವಿರೋಧಿದ್ದೇವೆ ಎಂದು ಸಿ‌ಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಣೇಬೆನ್ನೂರಿನಲ್ಲಿಂದು ಮಾತನಾಡಿದ ಅವರು, ಸಂವಿಧಾನಕ್ಕೆ 73, 74ನೇ ತಿದ್ದುಪಡಿ ಮಾಡಿದವರು ಯಾರು?. ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿಗಳಲ್ಲಿ ಮೀಸಲಾತಿ ಕೊಡಬೇಕು ಅಂತಾ ಬಿಜೆಪಿಯವರು ಯಾವತ್ತಾದರೂ ಒತ್ತಾಯ ಮಾಡಿದ್ದಾರಾ?. ತಮಿಳುನಾಡು, ಪಶ್ಚಿಮ ಬಂಗಾಳ ಚುನಾವಣೆ ಇರುವುದರಿಂದ ರಾಜಕೀಯ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ತಂದವರು ರಾಜೀವ್​ ಗಾಂಧಿ. ಮೋದಿಯವರು ರಾಜಕೀಯವಾಗಿ ಭಾಷಣ ಮಾಡುತ್ತಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧ ಮಾಡಿಲ್ಲ, ಮಾಡಲ್ಲ. 2023ರಲ್ಲಿ ಮೋದಿಯವರು ಮಹಿಳಾ ಮೀಸಲಾತಿ ಜಾರಿ ಮಾಡಬಹುದಿತ್ತಲ್ವಾ ಎಂದು ಪ್ರಶ್ನಿಸಿದರು. ಶಾಸಕ ವಿನಯ್​ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಚಾರವಾಗಿ ಮಾತನಾಡಿ, ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತಾರೆ. ಅದರ ಬಗ್ಗೆ ನಾನು ಮಾತನಾಡಲ್ಲ ಎಂದರು. ಇದಕ್ಕೂ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಮೈಸೂರು ಜಿಲ್ಲೆಯ ಕೆ.ಆರ್. ನಗರದ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಆರು ಮಂದಿ ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ, ಮೈಸೂರಿನ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲಾದ ವಿಚಾರ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ ಆರ್ಥಿಕ ಸವಾಲುಗಳು ಮತ್ತಷ್ಟು ಬಾಧಿಸದಿರಲಿ ಎಂಬ ಮಾನವೀಯ ಕಾಳಜಿಯೊಂದಿಗೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ದುರ್ಘಟನೆಯಲ್ಲಿ ರಕ್ಷಿಸಲ್ಪಟ್ಟು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಿ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಹಿಂದೂ ಪಂಚಾಂಗದ ಪ್ರಕಾರ, ಏಪ್ರಿಲ್‌ 19, 2026ರಂದು ಅಕ್ಷಯ ತೃತೀಯವನ್ನು ಆಚರಿಸಲಾಗುತ್ತಿದೆ. ಅಕ್ಷಯ ತೃತೀಯವನ್ನು ಸಂಪತ್ತು, ಸಮೃದ್ಧಿ ಮತ್ತು ಶ್ರೀಮಂತಿಕೆಯ ಸಂಕೇತವೆಂದು ಪರಿಗಣಿಸಲಾಗಿದೆ. ಜ್ಯೋತಿಷ್ಯದ ಪ್ರಕಾರ, ಈ ಅಕ್ಷಯ ತೃತೀಯದಲ್ಲಿ ಗ್ರಹಗಳ ಅಪರೂಪದ ಸಂಯೋಗದಿಂದಾಗಿ ಅಕ್ಷಯ ಯೋಗ, ಮಾಲವ್ಯ ರಾಜಯೋಗ, ಗಜಕೇಸರಿ ರಾಜಯೋಗಗಳಂತಹ ಹಲವು ಶುಭ ಯೋಗಗಳು ಬರಲಿವೆ. ಸಂಸ್ಕೃತದಲ್ಲಿ ‘ಅಕ್ಷಯ’ ಎಂದರೆ ‘ಎಂದಿಗೂ ಕ್ಷಯಿಸದ ಅಂದರೆ ಕಡಿಮೆಯಾಗದ ಅಥವಾ ‘ಶಾಶ್ವತ’ ಎಂಬ ಅರ್ಥವಿದ್ದು, ಈ ದಿನದಂದು ಕೈಗೊಳ್ಳುವ ಯಾವುದೇ ಶುಭ ಕಾರ್ಯ ಅಥವಾ ಹೂಡಿಕೆಯು ಕಾಲಕ್ರಮೇಣ ವೃದ್ಧಿಸುತ್ತಲೇ ಇರುತ್ತದೆ ಎಂಬುದು ಅಚಲ ನಂಬಿಕೆ. ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯ ಈ ದಿನ ಯಾವುದೇ ವಸ್ತು ಖರೀದಿಸಿದರೂ ಅದು ಮನೆಯಲ್ಲಿ ಸಮೃದ್ಧಿಯಾಗಿ ಉಳಿಯುತ್ತದೆ ಎಂಬ ನಂಬಿಕೆ ಇದೆ. ಈ ದಿನ ಚಿನ್ನ ಖರೀದಿಸಿದರೆ ಸಾಕ್ಷಾತ್ ಮಹಾಲಕ್ಷ್ಮಿಯೇ ಮನೆಗೆ ಪ್ರವೇಶಿಸುತ್ತಾಳೆ ಎನ್ನಲಾಗುತ್ತದೆ. ಐಶ್ವರ್ಯ ಮತ್ತು ಸಂಪತ್ತು ಶಾಶ್ವತವಾಗಿ ನೆಲೆಸಲಿ ಎಂಬ ಆಶಯದಿಂದ ಜನ ಚಿನ್ನದ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಪಂಚಾಂಗ ದಿನಾಂಕ : 20-04-2026 ವಾರ : ಸೋಮವಾರ ಸಂವತ್ಸರ : ಶ್ರೀ ಪರಾಭವ ನಾಮ ಆಯನ : ಉತ್ತರಾಯಣ ಪಕ್ಷ : ಶುಕ್ಲ ತಿಥಿ : ತೃತೀಯಾ ನಕ್ಷತ್ರ : ರೋಹಿಣಿ ಸೂರ್ಯೋದಯ : ಮುಂಜಾನೆ 06:03 ಗಂಟೆಗೆ ಅಮೃತ ಕಾಲ : ಮಧ್ಯಾಹ್ನ 01:50 ರಿಂದ 03:24ರ ವರೆಗೆ ದುರ್ಮುಹೂರ್ತ : ಮಧ್ಯಾಹ್ನ 12:26 ರಿಂದ 01:14 & 02:50 ರಿಂದ 03:38ರ ತನಕ ರಾಹುಕಾಲ : ಬೆಳಗ್ಗೆ 07:36 ರಿಂದ 09:09ರ ವರೆಗೆ ಸೂರ್ಯಾಸ್ತ : ಸಂಜೆ 06:31 ಗಂಟೆಗೆ ರಾಶಿ ಭವಿಷ್ಯ ಮೇಷ : ಇಂದು ನಿಮ್ಮ ಸ್ವತ್ತುಗಳ ಕುರಿತು ಅತ್ಯಂತ ಆತಂಕ ಹೊಂದಿರುತ್ತೀರಿ, ಮತ್ತು ಅವುಗಳನ್ನು ಹಂಚಿಕೊಳ್ಳಲು ಬಯಸುವುದಿಲ್ಲ. ಈ ಮನಸ್ಥಿತಿ ಯಾರೋ ಒಬ್ಬರಿಂದ ಉಂಟಾಗಿರಬಹುದು. ಪ್ರೀತಿಗೆ ಸಂಬಂಧಿಸಿದ ವ್ಯವಹಾರಗಳು ಉತ್ತಮ ಪ್ರಗತಿ ಕಾಣುತ್ತವೆ, ಮತ್ತು ನಿಮ್ಮ ವೈವಾಹಿಕ ಜೀವನ ಅರಳುತ್ತದೆ. ವೃಷಭ : ಒಂದು ಕಿರುಪ್ರವಾಸದ ಸಾಧ್ಯತೆ ಇಂದು ನಿಮಗಿದೆ.…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿಯನ್ನು ಬಲಿಕೊಟ್ಟ ಕಾಂಗ್ರೆಸ್ ನಾಯಕರಿಗೆ ಮುಂಬರುವ ದಿನಗಳಲ್ಲಿ ದೇಶದಾದ್ಯಂತ ನಾರಿಯರು ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಬಿಜೆಪಿ ಶನಿವಾರ ಹೇಳಿದೆ. ಶೇ. 33 ಮಹಿಳಾ ಮೀಸಲಾತಿ ಮಸೂದೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯವ್ಯಾಪಿ ಪ್ರತಿಭಟನೆ ಆರಂಭಿಸಿದೆ. ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕರು, ಮಹಿಳೆಯರ ಹಕ್ಕುಗಳನ್ನು ಕಾಂಗ್ರೆಸ್ ಕಡೆಗಣಿಸಿದೆ ಎಂದು ಆರೋಪಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಶೇ.33ರಷ್ಟು ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಅಡ್ಡಿಪಡಿಸುವ ಮೂಲಕ ಕೋಟ್ಯಾಂತರ ಮಹಿಳೆಯರಿಗೆ ದ್ರೋಹ ಮಾಡಿದೆ ಎಂದು ಹೇಳಿದರು. ಮಹಿಳೆಯರ ಶಕ್ತಿಯನ್ನು ಲೆಕ್ಕಿಸದ ಕಾಂಗ್ರೆಸ್‌ಗೆ ಜನರು ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಸರ್ಕಾರ ಮಹಿಳೆಯರನ್ನು ಕೇವಲ ಮನೆ ಕೆಲಸಗಳಿಗೆ ಸೀಮಿತಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಮಹಿಳೆಯರಿಗೆ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ತಮಿಳುನಾಡಿನ ಪೊನ್ನೇರಿ ಪ್ರದೇಶದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಇಬ್ಬರೂ ನಾಯಕರು ಒಟ್ಟಿಗೆ ಕಾಣಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಡಿಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರನ್ನು ಸನ್ಮಾನಿಸಿದರು. ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು, ನೆರೆ ರಾಜ್ಯಗಳ ಚುನಾವಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಕ್ಷದ ಹೈಕಮಾಂಡ್ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದು ಹೇಳಲಾಗುತ್ತಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಕಷ್ಟವಾಗುತ್ತಿರುವ ನಡುವಲ್ಲೇ ಈ ರೀತಿಯ ಸಾರ್ವಜನಿಕ ವೇದಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ರಾಜಕೀಯ ಪ್ರಭಾವವನ್ನು ತೋರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ, ಶಿವಕುಮಾರ್ ಅವರ ಸಹೋದರ ಡಿಕೆ.ಸುರೇಶ್ ಅವರು ಕೂಡ ಒಂದು ವಾರ ಮೊದಲು ತಮಿಳುನಾಡಿಗೆ ತೆರಳಿ, ಡಿಎಂಕೆ–ಕಾಂಗ್ರೆಸ್ ಮೈತ್ರಿ ಪಕ್ಷದ ಸಭೆಗಳನ್ನು ಯಶಸ್ವಿಯಾಗಿ ಆಯೋಜಿಸಲು ನೆರವಾದರು…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಕರ್ನಾಟಕದಲ್ಲಿ ಒಕ್ಕಲಿಗ, ಲಿಂಗಾಯತರಿಗೆ ಹೇಗೆ ವೋಟ್​ ಬ್ಯಾಂಕ್​ ಇದೆಯೋ, ಅದೇ ರೀತಿ ಅಹಿಂದಗೂ ತನ್ನ ಮತಬ್ಯಾಂಕ್​ ಇದೆ. ಚೂರು ಚೂರಾಗಿದ್ದ ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳಿಗೆ ಸಮಾಜವಾದದ ಬೆಸುಗೆ ಹಾಕಿದ್ದೇ ಸಿದ್ದರಾಮಯ್ಯ. ಇದೇ ಅಹಿಂದ ಬಲದಿಂದ ಸಿದ್ದರಾಮಯ್ಯ ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯೂ ಆಗಿದ್ದಾರೆ. ಈಗ ಅವರ ಬಳಿಕ ಯಾರು ಈ ಅಹಿಂದ ಅಧಿಪತಿ ಎನ್ನುವ ಚರ್ಚೆ ಶುರುವಾಗಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿರುವ ಸಂದರ್ಭವೊಂದು ಸತೀಶ್ ಜಾರಕಿಹೊಳಿಯವರಿಗೆ ವರವಾಗಿ ಪರಿಣಮಿಸಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಳಿಕ, ರಾಜ್ಯ ಕಾಂಗ್ರೆಸ್‌ ಮುಸ್ಲಿಂ ನಾಯಕರ ಬಂಡಾಯ ಎದುರಿಸುತ್ತಿದೆ. ಅಲ್ಪಸಂಖ್ಯಾತರ ಮೆಚ್ಚಿನ ಪಕ್ಷ ಇದೀಗ ಅದೇ ಅಲ್ಪಸಂಖ್ಯಾತರ ಆಕ್ರೋಶಕ್ಕೆ ಗುರಿಯಾಗಿದೆ. ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ ನಾಸೀರ್ ಅಹ್ಮದ್ ಅವರನ್ನು ವಜಾಗೊಳಿಸಲಾಗಿದ್ದು, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಮುಖ್ಯಸ್ಥರಾಗಿದ್ದ ಕೆ.ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಈ ಕ್ರಮಗಳು ವಿಶೇಷವಾಗಿ ಅಲ್ಪಸಂಖ್ಯಾತ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ತೀವ್ರಗೊಂಡಿದೆ, ಅಮೆರಿಕಾ ಸೇನೆ ಇರಾನ್ ಧ್ವಜದ ಸರಕು ಹಡಗನ್ನು ವಶಪಡಿಸಿಕೊಂಡ ಬೆನ್ನಲ್ಲೇ ಇರಾನ್ ಡ್ರೋನ್ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಓಮನ್ ಸಮುದ್ರ ಹಾಗೂ ಹಾರ್ಮುಜ್ ಜಲಸಂಧಿ ಸುತ್ತಲಿನ ಪ್ರದೇಶದಲ್ಲಿ ಅಮೆರಿಕಾ ನೌಕಾಪಡೆಯ ಯುದ್ಧ ಹಡಗುಗಳನ್ನು ಗುರಿಯಾಗಿಸಿಕೊಂಡು ಇರಾನ್ ಡ್ರೋನ್‌ ದಾಳಿ ನಡೆಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ವರದಿಗಳ ಪ್ರಕಾರ, ಅಮೆರಿಕಾ ನೌಕಾಪಡೆ ಇತ್ತೀಚೆಗೆ ಇರಾನ್ ಹಡಗನ್ನು ತಡೆದು ಅದರ ಎಂಜಿನ್ ಭಾಗಕ್ಕೆ ದಾಳಿ ನಡೆಸಿ ವಶಪಡಿಸಿಕೊಂಡಿತ್ತು. ಈ ಕ್ರಮವನ್ನು ಇರಾನ್ “ಸಮುದ್ರ ದರೋಡೆ” ಎಂದು ಕರೆದಿದ್ದು, ತೀವ್ರ ಪ್ರತಿಕ್ರಿಯೆ ನೀಡುವುದಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ ಇರಾನ್ ಸೇನೆ ಡ್ರೋನ್ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಇರಾನ್ ರೆವಲ್ಯೂಷನರಿ ಗಾರ್ಡ್ (IRGC) ಈ ದಾಳಿಯನ್ನು ಅಮೆರಿಕದ “ಪ್ರಚೋದನಾತ್ಮಕ ಕ್ರಮಕ್ಕೆ ಪ್ರತಿಕ್ರಿಯೆ” ಎಂದು ಹೇಳಿದೆ. ನಮ್ಮ ಹಡಗನ್ನು ವಶಪಡಿಸಿಕೊಂಡಿರುವುದು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆ ಎಂದು ಆರೋಪಿಸಿರುವ ಇರಾನ್, ಈ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಕಾಫಿ ಕುಡಿಯುವ ಅಭ್ಯಾಸ ಯಾರಿಗೆ ತಾನೇ ಇಲ್ಲ ಹೇಳಿ. ಆದರೆ, ಅತಿಯಾದರೆ ಅಮೃತವೂ ವಿಷವಾಗುತ್ತದೆ ಎಂಬ ಮಾತಿದೆ. ಕಾಫಿ ಕೂಡ ದೀರ್ಘಕಾಲಿಕ ರೋಗಗಳನ್ನು ತಂದೊಡ್ಡುವ ಸಾಧ್ಯತೆಗಳಿದ್ದು. ಎಚ್ಚರವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಅತಿಯಾದ ಕಾಫಿ ಸೇವನೆಯು ಅಧಿಕ ರಕ್ತದೊತ್ತಡ ಹಾಗೂ ಆತಂಕ (Anxiety) ಸಮಸ್ಯೆಯನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನವೊಂದು ಹೇಳಿದೆ. ಆತಂಕ (Anxiety) ಸಮಸ್ಯೆಯೊಂದಿಗೆ ಆಸ್ಪತ್ರೆಗೆ ಬರುವ ಸಾಕಷ್ಟು ರೋಗಿಗಳು ಸಾಮಾನ್ಯವಾಗಿ ಅತಿಯಾದ ಕಾಫಿ ಸೇವನೆ ಮಾಡುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಏಕೆಂದರೆ ಕೆಲಸ ಸಮಯದಲ್ಲಿ ಕಾಫಿ ಸುಲಭವಾಗಿ ಲಭ್ಯವಿರುವ ಕಾರಣ ಅಭ್ಯಾಸವನ್ನು ಬೆಳೆಸಿಕೊಂಡಿರುತ್ತಾರೆ. ಆದರೆ, ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿದ್ದರೂ ಗಮನ ಹರಿಸುವುದಿಲ್ಲ. ನಮ್ಮಲ್ಲಿ ಅನೇಕರು ಕೆಲಸ ಒತ್ತಡ ದೂರಾಗಿಸಲು ಅತಿಯಾಗಿ ಕಾಫಿ ಸೇವನೆ ಮಾಡುವುದುಂಟು. ಆದರೆ, ಇದು ಸಮಸ್ಯೆಯನ್ನು ಉಲ್ಭಣಿಸುತ್ತದೆ ಎಂಬ ಅರಿವು ಅವರಿಗಿರುವುದಿಲ್ಲ. ಅತಿಯಾದ ಕಾಫಿ ಸೇವನೆ ರಕ್ತದೊತ್ತಡವನ್ನು ಹಾಗೂ ಆತಂಕದ ಸಮಸ್ಯೆಗಳನ್ನು ಹೆಚ್ಚು ಮಾಡುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.…

Read More