Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ನ್ಯಾಯಾಂಗದಲ್ಲಿ ತಂತ್ರಜ್ಞಾನದ ಅಳವಡಿಕೆಯು ಅದರ ಮಿತಿಗಳ ಸ್ಪಷ್ಟ ಮತ್ತು ಪ್ರಜ್ಞಾಪೂರ್ವಕ ತಿಳುವಳಿಕೆಯೊಂದಿಗೆ ಇರಬೇಕು ಎಂದು ಶನಿವಾರ ಎಚ್ಚರಿಕೆ ನೀಡಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ , AI ಬಗ್ಗೆ “ಭಯಪಡಬಾರದು” ಎಂದು ನ್ಯಾಯಾಂಗ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತಂತ್ರಜ್ಞಾನವು ಪರ್ಯಾಯವಾಗಿರದೆ, ನೆರವಾಗಿ ಉಳಿಯಬೇಕು ಎಂದು ಪ್ರತಿಪಾದಿಸಿದ ಅವರು, ನ್ಯಾಯಾಂಗ ಪ್ರಕ್ರಿಯೆಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಸಮತೋಲನ ತತ್ವದಿಂದ ಮಾರ್ಗದರ್ಶಿಸಲ್ಪಡಬೇಕು. ನ್ಯಾಯಾಂಗದಲ್ಲಿ ಮಾನವ ಬುದ್ಧಿಶಕ್ತಿ, ಅನುಭವ ಮತ್ತು ಸಾಂವಿಧಾನಿಕ ಆತ್ಮಸಾಕ್ಷಿಯನ್ನು ಸ್ಥಿರವಾಗಿ ಸಂರಕ್ಷಿಸುವಾಗ ದಕ್ಷತೆಯನ್ನು ಹೆಚ್ಚಿಸಲು ಅದರ ಪ್ರಯೋಜನಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು. ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘ ಆಯೋಜಿಸಿದ್ದ ‘ಕೃತಕ ಬುದ್ಧಿಮತ್ತೆಯ ಯುಗದಲ್ಲಿ ನ್ಯಾಯಾಂಗವನ್ನು ಮರುರೂಪಿಸುವುದು’ ಎಂಬ ವಿಷಯದ ಕುರಿತು 22 ನೇ ದ್ವೈವಾರ್ಷಿಕ ರಾಜ್ಯ ಮಟ್ಟದ ನ್ಯಾಯಾಂಗ ಅಧಿಕಾರಿಗಳ ಸಮ್ಮೇಳನದಲ್ಲಿ ಮಾತನಾಡಿದ ಮುಖ್ಯ ನ್ಯಾಯಮೂರ್ತಿ, AI ಬಗ್ಗೆ ಭಯಪಡಬಾರದು ಎಂದು ಹೇಳಲು ಬಯಸುತ್ತೇನೆ ಎಂದರು.
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವಿಚಾರವಾಗಿ ಭುಗಿಲೆದ್ದಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ರಾಜೀನಾಮೆ ನೀಡುವ ವಿಚಾರ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ, ‘ಮುಸ್ಲಿಂ ನಾಯಕರಿಗೆ ಕಾಂಗ್ರೆಸ್ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ. ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಜಮೀರ್ ರಾಜೀನಾಮೆ ಬಗ್ಗೆ ಗೊತ್ತಿಲ್ಲ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ವಿಚಾರವಾಗಿ ಹಬ್ಬಿರುವ ವದಂತಿಗಳ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನಾನು ಈ ವಿಚಾರವನ್ನು ಪತ್ರಿಕೆಗಳಲ್ಲಿ ಮಾತ್ರ ನೋಡಿದ್ದೇನೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ವೈಯಕ್ತಿಕ ಕೆಲಸಗಳ ನಿಮಿತ್ತ ಸಭೆಯ ನಂತರ ನಾನು ಅಲ್ಲಿಂದ ಹೊರಟಿದ್ದೆ, ಹೀಗಾಗಿ ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಏನೇ ಇದ್ದರೂ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಮುಸ್ಲಿಮರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ್ಯ ಮಾಡಿಲ್ಲ ಮತ್ತು ಅವರನ್ನು ಗುರಿಯಾಗಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ನಾವು, ಮುಸ್ಲಿಮರು ಯಾವತ್ತೂ ಸಹೋದರರಿದ್ದಂತೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ ಮಾಡಿಲ್ಲ ಎಂದರು. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರನ್ನ ರಕ್ಷಿಸುವಲ್ಲಿ ಅಸಹಾಯಕರಾಗಿದ್ದಾರೆ ಎಂಬ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ರಾಜಣ್ಣ ಅವರ ಹೇಳಿಕೆ ವೈಯಕ್ತಿಕ. ಆ ಬಗ್ಗೆ ನಾನು ಮಾತನಾಡಲ್ಲ ಎಂದರು. ಒಂದು ಕ್ಷೇತ್ರದಿಂದ ಎಲ್ಲಾ ಬದಲಾವಣೆ ಆಗಲಿದೆ ಎಂದು ತಿಳಿದುಕೊಳ್ಳುವುದು ಬೇಡ. ನಾವು ಮುಸ್ಲಿಮರು ಸಹೋದರರು ಇದ್ದಂತೆ. ಇಂದು ಸಹ ಮುಂದೆಯೂ. ಒಂದು ಕ್ಷೇತ್ರದಲ್ಲಿ ಟಿಕೆಟ್ ಸಿಕ್ಕಿಲ್ಲ ಅಂತಾ ಬೇಸರ ಮಾಡಿಕೊಳ್ಳೋದು ಬೇಡ. ಆ ರೀತಿ ಆಗಿದ್ದರೆ ಸಿಎಂ, ಡಿಸಿಎಂ ನಾವೆಲ್ಲರೂ ಸೇರಿ ಸರಿಪಡಿಸುತ್ತೇವೆ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಮಹಿಳಾ ಮೀಸಲಾತಿಯನ್ನು ಶೀಘ್ರವಾಗಿ ಜಾರಿಗೆ ತರುವ ಮಸೂದೆಯನ್ನು ಬೆಂಬಲಿಸದ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಬೆಲೆ ತೆರಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಅಲ್ಲದೆ ಕೇಂದ್ರ ಸಚಿವರು ವಿರೋಧ ಪಕ್ಷಗಳ ‘ಮಹಿಳಾ ವಿರೋಧಿ’ ಮನಸ್ಥಿತಿಯನ್ನು ಜನರ ಮುಂದೆ ಬಹಿರಂಗಪಡಿಸಬೇಕೆಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 2029ರ ಲೋಕಸಭಾ ಚುನಾವಣೆಯಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ತಮ್ಮ ಸರ್ಕಾರದ ಬೆಂಬಲ ಮತ್ತು ಬದ್ಧತೆಯನ್ನು ಪ್ರಧಾನಿ ಮೋದಿ ಅವರು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪುನರುಚ್ಚರಿಸಿದರು. ವಿರೋಧ ಪಕ್ಷಗಳು ಮಹಿಳಾ ಮೀಸಲಾತಿಗೆ ವಿರುದ್ಧವಾಗಿ ಮತ ಚಲಾಯಿಸುವ ಮೂಲಕ ಅತಿ ದೊಡ್ಡ ತಪ್ಪು ಮಾಡಿವೆ ಮತ್ತು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಪ್ರಧಾನಿ ಮೋದಿ, ಸಂಪುಟ ಸಭೆಯಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವಿಷಯವನ್ನು ತಳಮಟ್ಟಕ್ಕೆ ಅಂದರೆ ದೇಶದ ಪ್ರತಿ ಹಳ್ಳಿಗೂ ಕೊಂಡೊಯ್ಯುವಂತೆ ಮತ್ತು ವಿರೋಧ ಪಕ್ಷಗಳ ‘ಮಹಿಳಾ ವಿರೋಧಿ’…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಮೈಸೂರು: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಂಶಪಾರಂಪರ್ಯ ರಾಜಕೀಯ ಆರೋಪ ಮಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಡಾ. ಯತೀಂದ್ರ ಅವರನ್ನು ವರುಣಾ ಕ್ಷೇತ್ರದಿಂದ ಬೆಂಗಳೂರಿನ ಮತದಾರರ ಪಟ್ಟಿಗೆ ವರ್ಗಾಯಿಸಿರುವುದನ್ನು ಟೀಕಿಸಿದ್ದಾರೆ. ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯಲ್ಲಿ ಯತೀಂದ್ರ ಅವರಿಗೆ ಪ್ರಮುಖ ಸ್ಥಾನ ನೀಡುವ ಉದ್ದೇಶದಿಂದ ಮಾಡಲಾಗಿರುವ “ವಂಶಪಾರಂಪರ್ಯ ರಾಜಕಾರಣ” ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಅವರೇ ನೀವು ಮತ್ತು ನಿಮ್ಮ ಮಗ ಯತೀಂದ್ರ ಮಾತ್ರ ಅಧಿಕಾರದಲ್ಲಿ ಇರಬೇಕಾ? ದಯಮಾಡಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಮಹಾನಗರ ಪಾಲಿಕೆ ಚುನಾವಣೆ ಮಾಡಿ ಸ್ವಾಮಿ ಎಂದು ಆಗ್ರಹಿಸಿದರು. ಐದು ವರ್ಷವೂ ನಮ್ಮ ತಂದೆಯೇ ಸಿಎಂ ಎಂದು ಯತೀಂದ್ರ ಹೇಳಿದ್ದಾರೆ. ಅದು ಅವರ ಪಕ್ಷದ ವಿಚಾರ. ನೀವು ಎಷ್ಟು ವರ್ಷವಾದರೂ ಅಧಿಕಾರದಲ್ಲಿರಿ. ನಿಮ್ಮ ಅಧಿಕಾರದ ಅವಧಿಯಲ್ಲೇ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಲೋಕಸಭೆಯಲ್ಲಿ ನಿನ್ನೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗೆ ಸೋಲಾಗಿದೆ. ಲೋಕಸಭೆಯ ಸ್ಥಾನಗಳನ್ನು 543ರಿಂದ 850ಕ್ಕೆ ಏರಿಸುವ ಸಂವಿಧಾನ ತಿದ್ದುಪಡಿ ಮಸೂದೆ ಇದಾಗಿತ್ತು. ಈ ಮಸೂದೆ ಪಾಸಾಗಲು ಮೂರನೇ ಎರಡರಷ್ಟು ಮತಗಳು ಸಿಗಬೇಕಿತ್ತು. ಆದರೆ ವಿಪಕ್ಷಗಳ ವಿಶ್ವಾಸ ಗಳಿಸುವಲ್ಲಿ ಮೋದಿ ಸರ್ಕಾರ ಎಡವಿತು. ಎನ್ ಡಿಎ ಸರ್ಕಾರದ ಮಹತ್ವಾಕಾಂಕ್ಷಿಯ ಮಸೂದೆಗಳನ್ನು ಇಂಡಿಯಾ ಕೂಟ ಸೋಲಿಸಿದೆ. ಚಲಾವಣೆಯಾದ 489 ಮತಗಳ ಪೈಕಿ ಪರವಾಗಿ 278 ಮತಗಳು, ವಿರುದ್ಧವಾಗಿ 211 ಚಲಾವಣೆಯಾಗಿದ್ದು 71 ಮತಗಳ ಕೊರತೆಯಿಂದ ಮಸೂದೆಗೆ ಸೋಲಾಯಿತು. ಇದನ್ನು ದಕ್ಷಿಣ ರಾಜ್ಯದ ಪ್ರಾದೇಶಿಕ ಪಕ್ಷಗಳು ಸಂಭ್ರಮಿಸಿದ್ದವು. ಇದಕ್ಕೆ ಕಾರಣ ಈ ಮಸೂದೆ ಅಂಗೀಕಾರವಾದರೆ ದಕ್ಷಿಣ ರಾಜ್ಯಗಳು ಕೇಂದ್ರ ಸರ್ಕಾರ ರಚನೆಯಲ್ಲಿ ಬಲ ಕಳೆದುಕೊಳ್ಳುತ್ತವೆ ಅಂತ. ಆದರೆ ಕೇಂದ್ರದಲ್ಲಿ ಎನ್‌ಡಿಎಗೆ ಬೆಂಬಲ ಕೊಟ್ಟಿರುವ ಜೆಡಿಎಸ್ ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಾರ್ಟಿ ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಜನಸೇನಾ ಪಾರ್ಟಿ ಈ ಮಸೂದೆ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ದಾವಣಗೆರೆ ಉಪಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಆರೋಪದ ಮೇರೆಗೆ ಕರ್ನಾಟಕದಲ್ಲಿ ಅಲ್ಪಸಂಖ್ಯಾತ ಸಮುದಾಯದ ನಾಯಕರ ವಿರುದ್ಧ ತೆಗೆದುಕೊಳ್ಳಲಾದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್, ಯಾರ ಮೇಲಾದರೂ ಕ್ರಮ ಕೈಗೊಳ್ಳುವ ಮೊದಲು ರಾಜ್ಯ ಘಟಕವು ಸರಿಯಾದ ವಿಧಾನವನ್ನು ಅನುಸರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಉಪಚುನಾವಣೆಯ ನಂತರ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪಕ್ಷಕ್ಕೆ ಒಳ್ಳೆಯದಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಹರಿಪ್ರಸಾದ್ ದೆಹಲಿಯಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತಾ ಹೇಳಿದರು. ರಾಜ್ಯ ಕಾಂಗ್ರೆಸ್‌ನಲ್ಲಿ ಮಾಜಿ ರಾಜ್ಯಸಭಾ ಉಪಾಧ್ಯಕ್ಷ ಎ.ಆರ್. ರೆಹಮಾನ್ ಖಾನ್ ಅವರ ನೇತೃತ್ವದಲ್ಲಿ ಶಿಸ್ತು ಸಮಿತಿ ಇದೆ. ಯಾರಾದರೂ ಸದಸ್ಯರು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದರೆ, ಆ ವಿಷಯವನ್ನು ಸಮಿತಿಗೆ ಒಪ್ಪಿಸಬೇಕು. ಸಮಿತಿ ಸಂಬಂಧಿತ ಸದಸ್ಯರಿಂದ ಸ್ಪಷ್ಟೀಕರಣ ಕೇಳಿ, ನಂತರ ಸೂಕ್ತ ಕ್ರಮಕ್ಕೆ ಶಿಫಾರಸು ಮಾಡುತ್ತದೆ. ಕರ್ನಾಟಕ ಘಟಕವು ಈ ಪ್ರಕ್ರಿಯೆಯನ್ನು ಅನುಸರಿಸಬೇಕಿತ್ತು…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯದ ಪಾಲಿಗೆ ಕುತಂತ್ರಿಯಾಗಿದ್ದು, ಸದ್ದಿಲ್ಲದೆ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಬಿಎ ಚುನಾವಣೆ ಬರುವುದರೊಳಗೆ ಇನ್ನಷ್ಟು ತೆರಿಗೆ ಏರಿಕೆಗೆ ಸಿದ್ಧತೆ ನಡೆದಿದೆ, ಮಾರಿಹಬ್ಬ ಕಾದಿದೆ ಎಂದಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಕ್ಷ ಒಳಜಗಳದಿಂದ ಬಡವಾಗಿದೆ. ನಾಯಕತ್ವವೇ ಇಲ್ಲದೆ ಸೊರಗಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಆಂತರಿಕ ಸಂಘರ್ಷ ತೀವ್ರಗೊಂಡಿದೆ. ಸಿದ್ದರಾಮಯ್ಯ ಸಣ್ಣ ಸಣ್ಣ ಇಲಿಗಳನ್ನು ಹೊಡೆಯುತ್ತಿದ್ದರೆ, ಡಿಕೆ ಶಿವಕುಮಾರ್ ದೊಡ್ಡ ದೊಡ್ಡ ಹುಲಿಗಳನ್ನು ಹೊಡೆಯುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಕ್ಯಾಬಿನೆಟ್‌ನಿಂದ ತೆಗೆದುಹಾಕಲ್ಪಟ್ಟ ರಾಜಣ್ಣ, ನಾಗೇಂದ್ರ, ಮತ್ತು ಜಮೀರ್‌ರಂತಹ ಸಿದ್ದರಾಮಯ್ಯ ಬೆಂಬಲಿಗರನ್ನು ವ್ಯವಸ್ಥಿತವಾಗಿ ಪಕ್ಷದಿಂದ ದೂರ ಮಾಡಲಾಗುತ್ತಿದೆ. ದಾವಣಗೆರೆಯ ಜಬ್ಬಾರ್ ಮತ್ತು ಸಿಎಂ ಕಾರ್ಯದರ್ಶಿಯಾಗಿದ್ದ ನಜೀರ್‌ರನ್ನು ಸಹ ಗೇಟ್ ಪಾಸ್ ನೀಡಿ ಹೊರಹಾಕಲಾಗಿದೆ. ಸಿದ್ದರಾಮಯ್ಯ ಬೆಂಬಲಿಗರಿಗೆ ಕಾಂಗ್ರೆಸ್‌ನಲ್ಲಿ ಉಳಿಗಾಲವಿಲ್ಲ. ಒಟ್ಟಾರೆ ಕಾಂಗ್ರೆಸ್ ಪಕ್ಷವು…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಟೆಹರಾನ್: ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷ ಸದ್ಯಕ್ಕೆ ಅಂತ್ಯಗೊಳ್ಳುವ ಯಾವುದೇ ಲಕ್ಷಣಗಳು ತೋರುತ್ತಿಲ್ಲ. ದಿನದಿಂದ ದಿನಕ್ಕೆ ಅದು ಹೆಚ್ಚಾಗುತ್ತಲೇ ಹೋಗಿದೆ. ಇರಾನಿನ ಹಡಗು ಸಾಗಣೆ ಮತ್ತು ಬಂದರುಗಳ ಮೇಲಿನ ಅಮೆರಿಕದ ದಿಗ್ಬಂಧನಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಇದೀಗ, ಓಪನ್ ಆಗಿದ್ದ ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ ಹೇರಿದೆ. ಇದಾದ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಟ್ಯಾಂಕರ್ ವೊಂದರ ಮೇಲೆ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ಎರಡು ಗನ್‌ಬೋಟ್‌ಗಳು ಗುಂಡಿನ ದಾಳಿ ನಡೆಸಿವೆ ಎಂದು ಬ್ರಿಟಿಷ್ ಮಿಲಿಟರಿ ಶನಿವಾರ ತಿಳಿಸಿದೆ. ಹಡಗು ಹಾಗೂ ಅದರ ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ಹಡಗು ಭದ್ರತೆಯನ್ನು ಮೇಲ್ವಿಚಾರಣೆ ಮಾಡುವ ಯುನೈಟೆಡ್ ಕಿಂಗ್‌ಡಮ್ ಮ್ಯಾರಿಟೈಮ್ ಟ್ರೇಡ್ ಆಪರೇಷನ್ಸ್ (UKMTO) ಹೇಳಿದೆ. ಆದರೆ ಅದು ಯಾವ ರಾಷ್ಟ್ರದ ಹಡಗು, ಎಲ್ಲಿಗೆ ಹೋಗುತಿತ್ತು ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಇರಾನಿನ ಹಡಗು ಸಂಚಾರ ಮತ್ತು ಬಂದರುಗಳ ಮೇಲಿನ ಅಮೆರಿಕದ ದಿಗ್ಬಂಧನಕ್ಕೆ ಪ್ರತಿಕ್ರಿಯೆಯಾಗಿ,…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಒಬ್ಬ ವ್ಯಕ್ತಿಗೆ ಒಮ್ಮೆ ಮಧುಮೇಹ ಕಾಣಿಸಿಕೊಂಡರೆ ಅದು ಜೀವನ ಪರ್ಯಂತ ಅವರನ್ನು ಕಾಡುತ್ತಲೇ ಇರುತ್ತದೆ. ಈ ಕಾಯಿಲೆಯಿಂದಾಗಿ ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚು ಕಡಿಮೆ ಆಗುತ್ತಲೇ ಇರುತ್ತದೆ, ಆದರೆ, ಸಮಸ್ಯೆಯಂತೂ ದೂರಾಗುವುದಿಲ್ಲ. ಹೀಗಾಗಿ ಇದನ್ನು ನಿರ್ವಹಣೆ ಮಾಡಿ ಕೊಳ್ಳಬೇಕಾದ ಅನಿವಾರ್ಯತೆ ಇರುತ್ತದೆ, ನವೆಂಬರ್ 14 ಸ್ಮರಣೀಯ ದಿನವಾಗಿದ್ದು, ಈ ದಿನವನ್ನು ವಿಶ್ವ ಮಧುಮೇಹ ದಿನವನ್ನಾಗಿ ವಿಶ್ವದಾದ್ಯಂತ ಆಚರಿಸಲಾಗುತ್ತದೆ. ನವೆಂಬರ್ 14 ಇನ್ಸುಲಿನ್ ಅನ್ನು ಕಂಡುಹಿಡಿದ ಡಾ. ಫ್ರೆಡರಿಕ್ ಬ್ಯಾಂಟಿಂಗ್ ಅವರ ಜನ್ಮದಿನವಾಗಿದ್ದು, ಹೀಗಾಗಿಸ, ಈ ದಿನವನ್ನು ವಿಶ್ವ ಮಧುಮೇಹ ದಿನವಾಗಿ ಆಚರಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ಹಾಗೂ ಯುವ ವಯಸ್ಕರಲ್ಲಿ ಟೈಪ್-2 ಮಧುಮೇಹ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದಕ್ಕೆ ಬದಲಾದ ಜೀವನಶೈಲಿಯಿಂದಾಗಿ, ಆಹಾರವೇ ಕಾರಣ ಎಂದು ವೈದ್ಯರು ಹೇಳಿದ್ದಾರೆ. ಸಕ್ರಾ ವರ್ಲ್ಡ್ ಆಸ್ಪತ್ರೆಯ ಅಂತಃಸ್ರಾವಶಾಸ್ತ್ರ, ಮಧುಮೇಹ, ಬೊಜ್ಜು ಮತ್ತು ತೂಕ ನಿರ್ವಹಣೆಯ ನಿರ್ದೇಶಕ ಡಾ. ಮಂಜುನಾಥ್ ಮಾಳಿಗೆ ಅವರು ಮಾತನಾಡಿ, ಕೊಬ್ಬಿನ ಶೇಖರಣೆಗೆ ಅನುಕೂಲಕರವಾದ “ತ್ರಿಫ್ಟಿ ಫಿನೋಟೈಪ್” ಕಾರಣದಿಂದಾಗಿ…
Subscribe to Updates
Get the latest creative news from FooBar about art, design and business.