Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕೆಲ ಮುಸ್ಲಿಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಇದೀಗ ಬಾಗಲಕೋಟೆ ಉಪಚುನಾವಣೆಯಲ್ಲೂ ಕಾಂಗ್ರೆಸ್ ಮುಖಂಡರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮೂವರು ಮುಖಂಡರ ಉಚ್ಛಾಟನೆಗೆ ಶಿಫಾರಸ್ಸು ಮಾಡಲಾಗಿದೆ. ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಮತ ಯಾಚಿಸದೇ ಬಿಜೆಪಿಗೆ ಮತ ಹಾಕುವಂತೆ ಪ್ರಚಾರ ಮಾಡಿದ್ದಾರೆ. ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಮತಗಿ ಪಟ್ಟಣ ಪಂಚಾಯತ ಸದಸ್ಯರಾದ ರಮೇಶ ಜಮಖಂಡಿ, ಗುರುಲಿಂಗಪ್ಪ ಪಾಟೀಲ್ ಹಾಗೂ ಹಿರಿಯ ಮುಖಂಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ ಇವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎನ್ ರಾಂಪೂರ ಜಿಲ್ಲಾ ಕಾಂಗ್ರೆಸ್ ಕಮಿಟಿಗೆ ಶಿಫಾರಸ್ಸು ಮಾಡಿದ್ದಾರೆ.

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಸಚಿವ ಸಂಪುಟ ಪುನರ್‌ ರಚನೆ ಸಲುವಾಗಿ ಹೈಕಮಾಂಡ್‌ನಲ್ಲಿ ಒತ್ತಡ ಹೇರಲು ದೆಹಲಿಯಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್‌‍ನ ಹಿರಿಯ ಶಾಸಕರ ನಿಯೋಗ ಇಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರನ್ನು ಭೇಟಿ ಮಾಡಿದ್ದಾರೆ. ಕಳೆದ ಐದು ದಿನಗಳಿಂದ ನವದೆಹಲಿಯಲ್ಲಿ ಬೀಡುಬಿಟ್ಟಿರುವ ಹಿರಿಯ ಕಾಂಗ್ರೆಸ್ ಶಾಸಕರ ನಿಯೋಗ, ತಮ್ಮ ಗುರಿಯನ್ನು ಸಾಧಿಸಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಇದು ಸಿದ್ದರಾಮಯ್ಯ ಪಾಳಯಕ್ಕೆ ಒಂದು ಹೊಸ ಸವಾಲಾಗಿ ಪರಿಣಮಿಸಿದ್ದು, ತಮ್ಮ ನಾಯಕ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಪಾಳಯವು ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರುವ ಸಾಧ್ಯತೆಯಿದೆ, ಮೊದಲು ನಾಯಕತ್ವದ ಸಮಸ್ಯೆಯನ್ನು ಬಗೆಹರಿಸಿ ನಂತರ ಸಂಭಾವ್ಯ ಸಂಪುಟ ಪುನರ್ರಚನೆ ನಿರ್ಧರಿಸುವಂತೆ ಒತ್ತಾಯಿಸಲು ಮುಂದಾಗಿದೆ ಎಂದು ಹೇಳಲಾಗಿದೆ. ಮೂರಕ್ಕೂ ಹೆಚ್ಚು ಬಾರಿ ಗೆದ್ದಿರುವ ಶಾಸಕರು ಗುರುವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಚಿಕ್ಕಮಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಶುಕ್ರವಾರ ತೀರ್ಪು ನೀಡಿದೆ. ಇಂದು ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್​​. ಯಡಿಯೂರಪ್ಪ ಅವರು, ನಾನು ಅವತ್ತೇ ಹೇಳಿದ್ದೆ. ನಾನು ಆಡಿದ ಮಾತು ಈಗ ಸತ್ಯವಾಗಿದೆ ಎಂದಿದ್ದಾರೆ. ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ಹೇಳಿದ್ದಾರೆ. ಆರಂಭದಲ್ಲಿ ಸ್ಥಳೀಯ ಪೊಲೀಸರು, ಜಮೀನು ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಹೇಳಿದ್ದರು. ನಂತರ ಯೋಗೀಶ್ ಗೌಡ ಕುಟುಂಬದ ಒತ್ತಾಯದ ಮೇರೆಗೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಅಂದಿನ ಬಿಜೆಪಿ ಸರ್ಕಾರವು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಮತ್ತು ಇತರರಿಗೆ ಕ್ರಿಮಿನಲ್ ಪಿತೂರಿ ಹಾಗೂ ಕೊಲೆ ಸೇರಿದಂತೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಜೀವಾವಧಿ ಶಿಕ್ಷೆ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಕೆಲವು ‘ಒತ್ತಡ’ಗಳಿಂದಾಗಿ ಸಿದ್ದರಾಮಯ್ಯ ‘ಅಸಹಾಯಕ ಪರಿಸ್ಥಿತಿ’ಯಲ್ಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹಾದಿ ತಪ್ಪುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಈಗ ಬಹಿರಂಗ ಸತ್ಯವಾಗಿದ್ದು, ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ನಂತರ ಮಾಜಿ ಸಚಿವ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ತಟಸ್ಥ ಧೋರಣೆ’ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ‘ಶಿಸ್ತು’ ಉಲ್ಲಂಘನೆಯ ಬಗ್ಗೆ ರಾಜಣ್ಣ ಅತ್ಯಂತ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಪಕ್ಷದ ಕೆಲವು ನಾಯಕರ ವಿರುದ್ಧ ಕ್ರಮ ಕೈಗೊಂಡ ನಂತರ, ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದಲ್ಲಿ ಸಿದ್ದರಾಮಯ್ಯ ಅವರ ಆಪ್ತರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಹೇಳಿಕೆಗಳ ನಡುವೆಯೇ ಹಿರಿಯ ಶಾಸಕ ಕೆ.ಎನ್. ರಾಜಣ್ಣ ಶುಕ್ರವಾರ ಮುಖ್ಯಮಂತ್ರಿಗಳು “ಅಸಹಾಯಕ” ಮತ್ತು ಕೆಲವು ‘ಒತ್ತಡ’ದಿಂದ ತಮ್ಮ ಬೆಂಬಲಿಗ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ. ಮಸೂದೆಗಳ ಪರವಾಗಿ 298 ಸದಸ್ಯರು ಮತ ಚಲಾಯಿಸಿದ್ದರೆ, ಮಸೂದೆಗಳ ವಿರುದ್ಧವಾಗಿ 230 ಸದಸ್ಯರು ಮತ ಚಲಾಯಿಸಿದ್ದಾರೆ. ಒಟ್ಟಾರೆ 528 ಸದಸ್ಯರು ಮತ ಚಲಾಯಿಸಿದ್ದರು. ಮಸೂದೆಗಳು ಅಂಗೀಕಾರಗೊಳ್ಳಲು 352 ಸದಸ್ಯರ ಬೆಂಬಲ ಬೇಕಿತ್ತು. ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳು ಸೇರಿದಂತೆ ಸಂಸತ್ತಿನಲ್ಲಿ ಗುರುವಾರ ಪರಿಚಯಿಸಲಾದ 3 ಪ್ರಮುಖ ಮಸೂದೆಗಳ ಮೇಲೆ ಇಂದು ಲೋಕಸಭೆಯಲ್ಲಿ ಮತದಾನ ನಡೆಯಿತು. ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿಯ ವಿಧೇಯಕವನ್ನು ಇಂಡಿ ಕೂಟ ಸೋಲಿಸಿದೆ. 2026ರ ಸಂವಿಧಾನ (131 ನೇ ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಲು ಕೇಂದ್ರಕ್ಕೆ ಮೂರನೇ ಎರಡರಷ್ಟು ಬಹುಮತದ ಅಗತ್ಯವಿತ್ತು. ಆದರೆ 489 ಮತಗಳಲ್ಲಿ 278 ಮತಗಳು ಮಸೂದೆಯ ಪರವಾಗಿ ಚಲಾವಣೆಯಾಗಿದ್ದರೆ 211 ಮತಗಳು ವಿರುದ್ಧವಾಗಿ ಚಲಾವಣೆಯಾದವು. ಮಹಿಳಾ ಮೀಸಲಾತಿ ಮಸೂದೆಯು ಸಾಂವಿಧಾನಿಕ ತಿದ್ದುಪಡಿಗೆ ಅಗತ್ಯವಾದ 2/3 ಮೆಜಾರಿಟಿ ಪಡೆಯುವಲ್ಲಿ ಎನ್.ಡಿ. ಸರ್ಕಾರ ವಿಫಲವಾಗಿದೆ. ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದ್ದರಿಂದ ಕಲಾಪವನ್ನು ನಾಳೆ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಯಾದಗಿರಿ: ಕಾರು ಮತ್ತು ವಿಆರ್ ಎಲ್ ಬಸ್​​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ.ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ 7 ಜನ ಸಾವಿಗೀಡಾಗಿದ್ದಾರೆ. ಅಪಘಾತದ ತೀವ್ರತೆಗೆ ವಾಹನ ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಹೊಗೆ ಆಕಾಶದೆತ್ತರಕ್ಕೆ ಚಾಚಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಅಪಘಾತದಲ್ಲಿ ಮೃತಪಟ್ಟವರನ್ನು ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಂದು ಅಮವಾಸ್ಯೆ ಹಿನ್ನೆಲೆ ತಿಂತನಿಮೌನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಕಾರಲ್ಲಿದ್ದ ಸರ್ಕಾರಿ ನೌಕರ ಶರಣಪ್ಪ, ಪುರಸಭೆ ಸದಸ್ಯ ಮಲ್ಲಿಕಾರ್ಜುನ್, ಮೂವರು ಮಹಿಳೆಯರು ಸೇರಿ 7 ಮಂದಿ ಮೃತಪಟ್ಟಿದ್ದಾರೆ.

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ(SOP) ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿ 10 ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರಿರುತ್ತಾರೆ. ಎಲ್ಲ ಚಾರಣ ಪಥಗಳಲ್ಲಿ ಒಂದು ಬಸರಿಗೆ ಗರಿಷ್ಠ 150 ಜನರಿಗೆ ಮಾತ್ರ ಸೀಮಿತದೊಳಿಸಲಾಗುವುದು. ಚಾರಣಕ್ಕೆ ಬರುವವರು ಆನ್ ಲೈನ್ ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾ. ಒಂದೊಮ್ಮೆ ಯಾವುದೇ ದಿನ ಒಬ್ಬರೇ ಚಾರಣಿಗರು ನೋಂದಾಯಿಸಿದ್ದರೂ ಗೈಡ್ ಸೌಲಭ್ಯ ಕಲ್ಪಿಸಲಾಗುವುದು, ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದರು. ಇತ್ತೀಚೆಗೆ ಕೊಡಗಿನ ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳದಿಂದ ಚಾರಣಕ್ಕೆ ಬಂದಿದ್ದ ಮಹಿಳೆ ನಾಪತ್ತೆಯಾಗಿ ಕಾಡಿನಲ್ಲಿ 3 ದಿನ ಕಳೆಯುವಂತಾದ ಹಾಗೂ ಅರಣ್ಯ ವ್ಯಾಪ್ತಿಗೆ ಒಳಪಡದ ಚಿಕ್ಕಮಗಳೂರಿನ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಹೈಕೋರ್ಟ್ ನಿರ್ದೇಶನದ ನಂತರ, ಎಲ್ಲಾ ವಲಯಗಳಲ್ಲಿ ವೇತನ ಸಹಿತ ಮುಟ್ಟಿನ ರಜೆ ನೀತಿಯನ್ನು ಸಾಧ್ಯವಾದಷ್ಟು ಬೇಗ ಕಟ್ಟುನಿಟ್ಟಾಗಿ ಜಾರಿಗೆ ತರುವುದಾಗಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಔಪಚಾರಿಕವಾಗಿ ನಿಯಮ ಜಾರಿಗೆ ಬರುವವರೆಗೆ, ಮುಟ್ಟಿನ ರಜೆ ನೀತಿಯನ್ನು “ಕಟ್ಟುನಿಟ್ಟಾಗಿ ಮತ್ತು ನಿಷ್ಠೆಯಿಂದ” ಜಾರಿಗೆ ತರುವಂತೆ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ನಮ್ಮ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ನೀತಿಯಾದ ‘ಋತುಚಕ್ರ ರಜೆ ನೀತಿ’ಗೆ ಪೂರಕವಾಗಿ ಕರ್ನಾಟಕ ಉಚ್ಛ ನ್ಯಾಯಾಲಯ ನೀಡಿರುವ ನಿರ್ದೇಶನವನ್ನು ಸ್ವಾಗತಿಸುತ್ತೇನೆ. ಋತುಚಕ್ರ ರಜೆ‌ನೀತಿಯನ್ನು ಇಡೀ ದೇಶದಲ್ಲೇ ಸಮರ್ಪಕವಾಗಿ ಹಾಗೂ ಮಾದರಿಯಾಗಿ ಜಾರಿಗೆ ತರುವ ನಿಟ್ಟಿನಲ್ಲಿ ನಮ್ಮ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇರಿಸಿದೆ. ಘನ ನ್ಯಾಯಾಲಯದ ಅಭಿಪ್ರಾಯದಂತೆ “ಮುಟ್ಟಿನ ರಜೆಯು ಮಹಿಳೆಯರ ಘನತೆ, ನ್ಯಾಯಯುತ ಮತ್ತು ಅವರ ವಾಸ್ತವಿಕ ಬದುಕಿನ ಮಾನವೀಯ ಅರಿವು” ಎಂಬುದನ್ನು ಮೂಲ ಆಶಯವಾಗಿಟ್ಟುಕೊಂಡು ಅತಿ ಶೀಘ್ರದಲ್ಲಿ ಎಲ್ಲ ವಲಯಗಳಲ್ಲೂ ಸಹ ತಿಂಗಳಿಗೆ ಒಂದರಂತೆ ಒಟ್ಟು ವರ್ಷಕ್ಕೆ 12…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ದಾವಣಗೆರೆ: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಚಾಟನೆಗೊಂಡಿರುವ ವಚನಾನಂದ ಶ್ರೀಗಳಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಹಾಸ್ಟೇಲ್ ವಿದ್ಯಾರ್ಥಿಗಳೇ ಅವರ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದಾರೆ. ಇತ್ತೀಚಿಗೆ ವಚನಾನಂದ ಶ್ರೀಗಳನ್ನು ‘ಮಸಾಜ್ ಪ್ರಿಯ ಸ್ವಾಮೀಜಿ’ ಎಂದ ಟ್ರಸ್ಟಿ ಚಂದ್ರಶೇಖರ ಪೂಜಾರ್ ಅವರು ಗಂಭೀರ ಆರೋಪ ಮಾಡಿದ್ದು, ಇದರ ಬೆನ್ನಲ್ಲೇ ಹಾಸ್ಟೇಲ್‌ನ ಮೂವರು ಮಕ್ಕಳು ಶ್ರೀಗಳ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದಾರೆ. ವಚನಾನಂದ ಸ್ವಾಮೀಜಿ ತಮಗೆ ಹಿಂಸೆ ನೀಡಿದ್ದಾರೆ ಎಂದು ಮಕ್ಕಳು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಸಿಬ್ಬಂದಿ ಹಾಗೂ ಪೊಲೀಸರು ಮಠಕ್ಕೆ ಭೇಟಿ ನೀಡಿದ್ದಾರೆ. ಮಠದ ಆಪ್ತರು ಸೇರಿದಂತೆ ಇತರರನ್ನು ವಿಚಾರಣೆ ಮಾಡುತ್ತಿದ್ದಾರೆ. ನಾವು 8 ವರ್ಷದ ಹಿಂದೆ ವಚನಾನಂದ ಶ್ರೀ ಪೀಠಾಧಿಪತಿಯನ್ನಾಗಿ ಮಾಡಿದ್ದೆವು. ಆದರೆ ಇತ್ತೀಚೆಗೆ ಅವರ ನಡವಳಿಕೆಯಲ್ಲಿ ಸಾಕಷ್ಟು ಬದಲಾವಣೆ ಆಗಿತ್ತು, ಅವುಗಳನ್ನ ಹಿರಿಯರ ಸಮ್ಮುಖದಲ್ಲಿ ತಿದ್ದೋಕೆ ನೋಡಿದ್ವಿ, ಆದರೆ ಅದು ಆಗದೆ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಕಂದಾಯ ಸಚಿವ ಕೃಷ್ಣ ಬೈರೇಗೌಡ ಶುಕ್ರವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರ್ ಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಭೂ ಸುರಕ್ಷಾ ಯೋಜನೆ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿದರು. ಭೂ ದಾಖಲೆ ಸ್ಕ್ಯಾನಿಂಗ್ ಬಗ್ಗೆ ಅಸಡ್ಡೆ ತೋರುತ್ತಿರುವ ತಹಶೀಲ್ದಾರರುಗಳ ವಿರುದ್ಧ ಗರಂ ಆದ ಸಚಿವರು, ದಿನಕ್ಕೆ ಸರಾಸರಿ 12,000 ಪುಟ ಸ್ಕ್ಯಾನ್ ಮಾಡಬೇಕು ಎಂಬುದು ಗುರಿ. ಆದರೆ, ಕೆಲ ತಾಲೂಕುಗಳಲ್ಲಿ ಸ್ಕ್ಯಾನಿಂಗ್ 8,000 ಪುಟ ದಾಟುತ್ತಿಲ್ಲ. ಸ್ಕ್ಯಾನಿಂಗ್ ಕೆಲಸಕ್ಕೆ ಪ್ರತಿ ತಾಲೂಕಿಗೆ ತಲಾ 8 ಜನ ಡೇಟಾ ಆಪರೇಟರ್ ನೀಡಿದರೂ ಕೆಲ ತಾಲೂಕುಗಳಲ್ಲಿ ಪ್ರಗತಿ ಕುಂಠಿತವಾಗಿದೆ ಎಂದರು. ಅಸಮರ್ಪಕ ಉತ್ತರ ನೀಡಿದ ಗದಗ ಜಿಲ್ಲೆ ಶಿರಹಟ್ಟಿ ತಹಶೀಲ್ದಾರ್ ಗೆ ಕ್ಲಾಸ್ ತೆಗೆದುಕೊಂಡರು. ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಹಾಗೂ ಹಿಂದುಳಿದ ಜಿಲ್ಲೆಗಳಾದ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸ್ಕ್ಯಾನಿಂಗ್ ಕೆಲಸ ಸಂಪೂರ್ಣ ಮುಗಿದಿದೆ. ಆದರೆ, ಬೆಂಗಳೂರು…

Read More