Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಇಸ್ಲಾಮಾಬಾದ್: ಪ್ರಸ್ತುತ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಟಿ20 ಲೀಗ್‌ನಲ್ಲಿ ಆಡುತ್ತಿರುವ ಪಾಕ್ ಕ್ರಿಕೆಟ್ ತಂಡದ ಮಾಜಿ ನಾಯಕ ಬಾಬರ್ ಆಜಮ್ ಅವರು ಟಿ20 ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪಾಕಿಸ್ತಾನ ಸೂಪರ್ ಲೀಗ್ ಪಂದ್ಯದಲ್ಲಿ ಬಾಬರ್ ಅಜಮ್ ನೇತೃತ್ವದ ಪೇಶಾವರ್ ಝಲ್ಮಿ ತಂಡ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಇದುವರೆಗಿನ ಏಳು ಪಂದ್ಯಗಳಲ್ಲಿ ಆರರಲ್ಲಿ ಜಯಗಳಿಸಿ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಅಲ್ಲದೆ ಪಾಯಿಂಟ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪೇಶಾವರ್ ಝಲ್ಮಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಬಾಬರ್ ಅಜಮ್, ಕ್ವೆಟ್ಟಾ ಗ್ಲಾಡಿಯೇಟರ್ಸ್ ವಿರುದ್ಧದ ಪಂದ್ಯದಲ್ಲಿ 51 ಎಸೆತಗಳಲ್ಲಿ 71 ರನ್ ಗಳಿಸಿದರು. ಇದರೊಂದಿಗೆ ಬಾಬರ್ ಆಜಮ್ ಟಿ20ಯಲ್ಲಿ ಅತ್ಯಂತ ವೇಗದ 100 ನೇ ಅರ್ಧಶತಕ ದಾಖಲಿಸಿದರು. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಪಾಕಿಸ್ತಾನಿ ಆಟಗಾರ ಎಂಬ ದಾಖಲೆ ಬರೆದರು. ಅಲ್ಲದೆ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದರು. ಬಾಬರ್ ಅವರು ಒಟ್ಟು 354 ಟಿ20 ಪಂದ್ಯಗಳ 341 ಇನ್ನಿಂಗ್ಸ್‌ಗಳಲ್ಲಿ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ದೆಹಲಿ ವಿಮಾನ ನಿಲ್ದಾಣದ ಟ್ಯಾಕ್ಸಿವೇಯಲ್ಲಿ ಅಕಾಸಾ ಏರ್ ಮತ್ತು ಸ್ಪೈಸ್‌ಜೆಟ್ ವಿಮಾನಗಳ ರೆಕ್ಕೆಗಳು ಪರಸ್ಪರ ತಾಕಿಕೊಂಡಿದ್ದು, ಈ ಘಟನೆದಲ್ಲಿ ಹಾನಿ ಸಂಭವಿಸಿದ ಕಾರಣ ಎರಡೂ ವಿಮಾನಗಳ ಟೇಕ್ ಆಫ್ ನ್ನು ರದ್ದುಗೊಳಿಸಿ ನಿಲ್ಲಿಸಲಾಗಿದೆ. ಅಕಾಸಾ ಏರ್ ವಿಮಾನ ಟೇಕ್‌ಆಫ್‌ಗೆ ಟ್ಯಾಕ್ಸಿಂಗ್ ಮಾಡುತ್ತಿದ್ದಾಗ ಮತ್ತು ಸ್ಪೈಸ್‌ಜೆಟ್ ವಿಮಾನ ಪಾರ್ಕಿಂಗ್ ಸ್ಟ್ಯಾಂಡ್ ಕಡೆಗೆ ಟ್ಯಾಕ್ಸಿಂಗ್ ಮಾಡುತ್ತಿದ್ದಾಗ, ಮಧ್ಯಾಹ್ನ ಸುಮಾರು 2.15ರ ಸುಮಾರಿಗೆ ಟರ್ಮಿನಲ್ 1 ಬಳಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕಾಸಾ ಏರ್ ವಿಮಾನ ದೆಹಲಿಯಿಂದ ಹೈದರಾಬಾದ್‌ಗೆ ತೆರಳುವ QP-1406 ವಿಮಾನಯಾನವನ್ನು ನಡೆಸಬೇಕಾಗಿದ್ದು, ಸ್ಪೈಸ್‌ಜೆಟ್ ವಿಮಾನ ಲೇಹ್‌ನಿಂದ ಆಗಮಿಸಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. “ದೆಹಲಿಯಿಂದ ಹೈದರಾಬಾದ್‌ಗೆ ತೆರಳಬೇಕಿದ್ದ QP 1406 ವಿಮಾನಯಾನವನ್ನು ನಡೆಸುತ್ತಿದ್ದ ಅಕಾಸಾ ಏರ್ ವಿಮಾನ 2026ರ ಏಪ್ರಿಲ್ 16ರಂದು Bay ಗೆ ಹಿಂದಿರುಗಬೇಕಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ಅಕಾಸಾ ವಿಮಾನ ಸ್ಥಿರವಾಗಿ ನಿಂತಿದ್ದಾಗ ಮತ್ತೊಂದು ಏರ್‌ಲೈನ್‌ನ ವಿಮಾನವು ಅದನ್ನು ತಾಕಿದೆ” ಎಂದು…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ವಿರುದ್ಧ ಮತ ಚಲಾಯಿಸಿದ್ದಕ್ಕಾಗಿ ಕಾಂಗ್ರೆಸ್ ಗುರುವಾರ ಹರಿಯಾಣದ ಐದು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಪಕ್ಷದ ಶಿಸ್ತು ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಐವರು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಾವ್ ನರೇಂದರ್ ಸಿಂಗ್ ಅವರು ಹೇಳಿದ್ದಾರೆ. ರಾಜ್ಯ ಶಿಸ್ತು ಸಮಿತಿಯ ಶಿಫಾರಸು ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯ ನಂತರ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷವು ಈ ಹಿಂದೆ ಅಧಿಕೃತ ವಿಪ್ ಅನ್ನು ಧಿಕ್ಕರಿಸಿದ್ದಕ್ಕಾಗಿ ಐದು ಶಾಸಕರನ್ನು ಹೆಸರಿಸಿತ್ತು. ನರೈಂಗರ್ ಶಾಸಕಿ ಶಲ್ಲಿ ಚೌಧರಿ, ಸಧೌರಾ ಶಾಸಕಿ ರೇಣು ಬಾಲಾ, ಪುನ್ಹಾನಾ ಶಾಸಕ ಮೊಹಮ್ಮದ್ ಇಲ್ಯಾಸ್, ಹಾಥಿನ್ ಶಾಸಕ ಮೊಹಮ್ಮದ್ ಇಸ್ರೇಲ್ ಮತ್ತು ರತಿಯಾ ಶಾಸಕ ಜರ್ನೈಲ್ ಸಿಂಗ್ ಅವರನ್ನು ಈಗ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇಂದು ತಮ್ಮ ಸಂಸತ್ ಭಾಷಣದಲ್ಲಿ ಕಾಂಗ್ರೆಸ್ ನ್ನು ತರಾಟೆಗೆ ತೆಗೆದುಕೊಂಡಿದ್ದು, ಕಾಂಗ್ರೆಸ್ ಪಕ್ಷ ಒಂದು ರಾಜ್ಯವನ್ನು ವಿಭಜನೆ ಮಾಡಿದ ರೀತಿಯನ್ನು ಟೀಕಿಸಿದ್ದಾರೆ. 2014 ರಲ್ಲಿ ಕಾಂಗ್ರೆಸ್ ಪಕ್ಷ ಆಂಧ್ರ- ತೆಲಂಗಾಣ ವಿಭಜನೆ ಮಾಡಿದ ರೀತಿ ಹಿಂದೊಮ್ಮೆ ಬ್ರಿಟೀಷರು ಭಾರತ-ಪಾಕಿಸ್ತಾನ ವಿಭಜನೆ ಮಾಡಿದ್ದಕ್ಕಿಂತ ಕೆಟ್ಟ ರೀತಿಯಲ್ಲಿತ್ತು ಎಂದು ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದರು. ಆದರೆ ತೆಲಂಗಾಣ ರಾಜಕಾರಣಿಗಳು ತೇಜಸ್ವಿ ಸೂರ್ಯ ಅವರ ಈ ಹೇಳಿಕೆಯನ್ನು ಖಂಡಿಸಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಅವರು, ಪುಣ್ಯಕ್ಕೆ ಡೀಲಿಮಿಟೇಷನ್ ಪ್ರಕ್ರಿಯೆಯನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾಡುತ್ತಿದೆ. ಏಕೆಂದರೆ ಕಾಂಗ್ರೆಸ್ ನವರ ಟ್ರ್ಯಾಕ್ ರೆಕಾರ್ಡ್ ಹೇಗಿದೆ ಅಂದರೆ, 2014 ರಲ್ಲಿ ಅವರು ಆಂಧ್ರ-ತೆಲಂಗಾಣ ರಾಜ್ಯಗಳನ್ನು 1947 ರಲ್ಲಿ ಬ್ರಿಟೀಷರು ಭಾರತ- ಪಾಕ್ ವಿಭಜಮೆ ಮಾಡಿದ ರೀತಿಗಿಂತ ಕೆಟ್ಟದಾಗಿ ವಿಭಜನೆ ಮಾಡಿದ್ದರು ಎಂದು ಹೇಳಿದ್ದಾರೆ. ತೇಜಸ್ವಿ ಸೂರ್ಯ ಹೇಳಿಕೆಗೆ ತೆಲಂಗಾಣ ರಾಜಕಾರಣಿಗಳಿಂದ ಆಕ್ಷೇಪ ತೆಲಂಗಾಣ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಲೋಕಸಭೆಯಲ್ಲಿ ಗುರುವಾರ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮಹಿಳಾ ಮೀಸಲಾತಿಯನ್ನು ವಿರೋಧಿಸುವವರನ್ನು ದೇಶಾದ್ಯಂತ ಮಹಿಳೆಯರು ಕ್ಷಮಿಸುವುದಿಲ್ಲ ಅವರು ದೀರ್ಘಕಾಲದವರೆಗೆ ಬೆಲೆ ತೆರಬೇಕಾಗುತ್ತದೆ ಎಂದು ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿದರು. ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಮಹತ್ವದ ಮಸೂದೆಗಳ ಕುರಿತು ಬೆಳಗ್ಗೆಯಿಂದ ಚರ್ಚೆ ನಡೆದಿದೆ. ಹಲವು ಸದಸ್ಯರು ಬೇರೆ ಬೇರೆ ವಿಷಯ ಎತ್ತಿದ್ದಾರೆ. ಸದನಕ್ಕೆ ನಿಖರವಾದ ಮಾಹಿತಿ ಒದಗಿಸುತ್ತೇವೆ ಎಂದು ತಿಳಿಸಿದರು. 25-30 ವರ್ಷಗಳ ಹಿಂದೆಯೇ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಬೇಕಾಗಿತ್ತು. ಈಗ ಅದನ್ನು ಹೆಚ್ಚು ಪ್ರಬುದ್ಧ ಹಂತಕ್ಕೆ ತರಲಾಗಿದೆ. ಅಗತ್ಯಗಳಿಗೆ ಅನುಗುಣವಾಗಿ ಕಾಲಾನಂತರದಲ್ಲಿ ಇದನ್ನು ಪರಿಷ್ಕರಿಸಲಾಗುವುದು ಎಂದು ಹೇಳಿದರು. ಅಗತ್ಯಕ್ಕೆ ಅನುಗುಣವಾಗಿ ಕಾಲಕಾಲಕ್ಕೆ ಇದನ್ನು ಪರಿಷ್ಕರಿಸಲಾಗುತ್ತದೆ. ಇದು ಪ್ರಜಾಪ್ರಭುತ್ವದ ಸೌಂದರ್ಯ. ನಮ್ಮದು ಪ್ರಜಾಪ್ರಭುತ್ವದ ತಾಯಿ. ನಮ್ಮ ಪ್ರಜಾಪ್ರಭುತ್ವ ಸಾವಿರಾರು ವರ್ಷಗಳಿಂದ ಅಭಿವೃದ್ಧಿ ಪ್ರಯಾಣವಾಗಿದೆ. ಈ ಸದನದಲ್ಲಿರುವ ನಾವೆಲ್ಲರೂ ಈ ಅಭಿವೃದ್ಧಿ ಪ್ರಯಾಣಕ್ಕೆ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಕುರ್ಚಿ ಆಸೆಗಾಗಿ ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚುಹಾಕಿ, ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಮುಸ್ಲಿಂ ನಾಯಕರನ್ನು ಅಮಾನತುಗೊಳಿಸಿರುವ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪೋಸ್ಟ್ ಮಾಡಿದ್ದು, ತೀವ್ರವಾಗಿ ಕಿಡಿಕಾರಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಅನ್ಯಾಯ ನಡೆಯುತ್ತಿದೆ. ಅಂದು ಪರಿಶಿಷ್ಟ ಸಮುದಾಯದ ವಾಲ್ಮೀಕಿ ಜನಾಂಗದ ನಾಯಕ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಏಕಾಏಕಿ ಕಿತ್ತು ಹಾಕಲಾಯಿತು. ಇಂದು ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಬ್ದುಲ್ ಜಬ್ಬರ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರದಲ್ಲಿ ಎಲ್ಲವೂ ಸರಿಯಲ್ಲ. ಕುರ್ಚಿ ಆಸೆಗಾಗಿ ಡಿಕೆ.ಶಿವಕುಮಾರ್ ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚುಹಾಕಿ, ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆಂದು ಆರೋಪಿಸಿದೆ.
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ ಸಂಬಂಧ ಗುರುವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಉಲಮಾ ಎ ಕರ್ನಾಟಕ ಸಂಘಟನೆಯ ಮುಖಂಡರು, ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ಮತ್ತು ಅಲ್ಪಸಂಖ್ಯಾತ ಸಮುದಾಯದ ಪ್ರಾತಿನಿಧ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಎಂಎಲ್ಸಿ ನಸೀರ್ ಅಹ್ಮದ್ ಅವರನ್ನು ತೆಗೆದುಹಾಕಿದ ನಂತರ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಪಕ್ಷದ ಅಲ್ಪಸಂಖ್ಯಾತ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಅಂಗೀಕರಿಸಿದ್ದಾರೆ. ಅಲ್ಲದೆ ಮತ್ತೊಬ್ಬ ಎಂಎಲ್ಸಿ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಹೊರಹಾಕಿದ ನಂತರ ಮುಸ್ಲಿಂ ಮುಖಂಡರು ಇಂದು ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯದಲ್ಲಿ ಕೇವಲ ಒಂದು ಕುಟುಂಬಕ್ಕಾಗಿ ಇಡೀ ಅಹಿಂದ ಸಮುದಾಯದ ವಿರೋಧ ಕಟ್ಟಿಕೊಳ್ಳುತ್ತಿರುವ ಕಾಂಗ್ರೆಸ್ ನಡೆ ಸ್ವೀಕಾರಾರ್ಹವಲ್ಲ ಎಂದು ಜಮೀಯತ್…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಚನ್ನಪಟ್ಟಣ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆಂದು ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು, ಮುಖಂಡರಿಂದ ಒತ್ತಾಯ ಮಾಡುತ್ತಿದ್ದು ಈ ಬಗ್ಗೆ ಕಾಲವೇ ತೀರ್ಮಾನ ಮಾಡಲಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಚನ್ನಪಟ್ಟಣದ ಜನರು ಕುಮಾರಣ್ಣನನ್ನು ಆಶೀರ್ವದಿಸಿ ಆಯ್ಕೆ ಮಾಡಿದ್ದರು. ಆದರೆ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳಿಂದಾಗಿ ಅವರು ಸಂಸತ್ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಬೇಕಾಯಿತು. ಈಗ ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರು ಕುಮಾರಣ್ಣ ಮತ್ತೆ ಚನ್ನಪಟ್ಟಣದಿಂದಲೇ ಸ್ಪರ್ಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದು ಜನರ ಹಂಬಲ ಕೂಡ ಹೌದು. ಅವರು ಮತ್ತೆ ರಾಜ್ಯ ರಾಜಕಾರಣಕ್ಕೆ ಬಂದೇ ಬರುತ್ತಾರೆ, ಈ ಬಗ್ಗೆ ಕಾಲವೇ ನಿರ್ಧಾರ ಮಾಡಲಿದೆ’ ಎಂದು ತಿಳಿಸಿದರು. 2028ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಡಿಯಲ್ಲಿ ಯಾವ ಕ್ಷೇತ್ರ ಯಾರಿಗೆ ಎಂಬುದು ಅಂತಿಮವಾಗಲಿದೆ ಎಂದರು. ರಾಜ್ಯದ ಜನತೆ ಮತ್ತು ಪಕ್ಷದ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆಗಾಗಿ ಸಂಸತ್ತಿನ ವಿಶೇಷ ಅಧಿವೇಶನ ನಡೆಯುತ್ತಿದ್ದು, ಮಹಿಳೆಯರಿಗೂ ಕಾನೂನು ರಚನೆಗೆ ಸಮಾನ ಅವಕಾಶ ಸಿಗಲಿದೆ. ಇದಕ್ಕೆ ವಿರೋಧಪಕ್ಷ ಕಾಂಗ್ರೆಸ್ ಅಪಸ್ವರ ಎತ್ತಿದರೆ ಪಕ್ಷದ ಭವಿಷ್ಯ ಗಂಭೀರವಾಗಲಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರು ದೇಶದಲ್ಲಿ ಸರ್ವರಿಗೂ ಸಮಾನ ಹಕ್ಕು ಇರಬೇಕು, ಸಮಾನ ಅವಕಾಶ ಸಿಗಬೇಕು ಎಂದು ಬಯಸಿದ್ದರು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂದೂ ಹೇಳಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಬಾಬಾ ಸಾಹೇಬರ ಚಿಂತನೆಗೆ ಶಕ್ತಿ ಕೊಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಹಿಂದೆ ಮಹಿಳೆಯರಿಗೆ ಅವಕಾಶ, ಅಧಿಕಾರ ಮತ್ತು ಸಮಾನ ಹಕ್ಕು ಕೊಡುವಲ್ಲಿ ಬಾಯಿ ಮಾತಿನ ಭಾಷಣ ಇತ್ತೇ ಹೊರತು ಹೃದಯವಂತಿಕೆ ಇರಲಿಲ್ಲ. ಆದರೆ ಇಂದು ನಾರಿ ಶಕ್ತಿ ಹೆಸರಿನಲ್ಲಿ ಪ್ರಧಾನಿಯವರು…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಆರೋಗ್ಯ ಕಾಳಜಿ ಹೆಚ್ಚುತ್ತಿದೆ, ಏಕೆಂದರೆ ಹಿಂದಿನ ದಶಕಗಳಿಗಿಂತ ಬಹಳ ಮುಂಚೆಯೇ ಹೆಚ್ಚಿನ ಮಹಿಳೆಯರಿಗೆ ಮೂಳೆ ಮತ್ತು ಕೀಲು ಅಸ್ವಸ್ಥತೆಗಳು ಪತ್ತೆಯಾಗುತ್ತಿದೆ. 30 ಮತ್ತು 40 ರ ದಶಕದ ಮಧ್ಯಭಾಗದಲ್ಲಿರುವ ಮಹಿಳೆಯರು ಈಗ ನಿರಂತರ ಕೀಲು ನೋವು, ಸ್ನಾಯು ಸೆಳೆತ ಅನುಭವಿಸುತ್ತಿದ್ದಾರೆ ಎಂದು ವೈದ್ಯರು ಹೇಳುತ್ತಾರೆ, ಈ ಮೊದಲು 50 ವರ್ಷ ವಯಸ್ಸಿನ ನಂತರ ಈ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿತ್ತು ಆದರೆ ಆಧುನಿಕ ಜೀವನ ಶೈಲಿಯಿಂದಾಗಿ 35 ವರ್ಷಕ್ಕೆ ಸಮಸ್ಯೆಗಳು ಕಾಣಿಸುತ್ತಿವೆ. ನಗರದ ಐಟಿ-ಚಾಲಿತ ಕೆಲಸದ ಪ್ರಮುಖ ಕೊಡುಗೆ ಇದಾಗಿದೆ. ದೀರ್ಘಾವಧಿ ಕುಳಿತೇ ಕೆಲಸಮಾಡುವುದು, ಸುದೀರ್ಘ ಪ್ರಯಾಣ ಮತ್ತು ದೀರ್ಘ ಸಮಯದವರೆಗೆ ಮನೆಯೊಳಗೆ ಕುಳಿತು ಕೆಲಸ ಮಾಡುವ ಮಹಿಳೆಯರಲ್ಲಿ ದೈಹಿಕ ಚಟುವಟಿಕೆ ಕಡಿಮೆಯಾಗಿದೆ, ಸೂರ್ಯನ ಬೆಳಕಿಗೆ ಬರುವುದನ್ನು ತೀವ್ರವಾಗಿ ಕಡಿಮೆ ಮಾಡಿದೆ. ಇದರಿಂದ ವ್ಯಾಪಕವಾದ ವಿಟಮಿನ್ ಡಿ ಕೊರತೆ ಮತ್ತು ಕಳಪೆ ಮೂಳೆ ಖನಿಜ ಸಾಂದ್ರತೆಗೆ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದು ಕೋವಿಡ್ -19…
Subscribe to Updates
Get the latest creative news from FooBar about art, design and business.