Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಟಾಲಿವುಡ್ ನಟರ ಬಗ್ಗೆ ಕಾಮೆಂಟ್ ಮಾಡಿದ್ದಕ್ಕಾಗಿ ಎಫ್‌ಐಆರ್ ದಾಖಲಾದ ನಂತರ ಆಂಧ್ರಪ್ರದೇಶ ಪೊಲೀಸರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಸ್ಟ್ಯಾಂಡ್-ಅಪ್ ಹಾಸ್ಯನಟ ಅನುದೀಪ್ ಕಟ್ಟಿಕಲಾನನ್ನು ಬಂಧಿಸಿದ್ದಾರೆ. ಬಿಎನ್‌ಎಸ್ ಮತ್ತು ಐಟಿ ಕಾಯ್ದೆಗಳ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ ನಂತರ ಅನುದೀಪ್ ಆನ್‌ಲೈನ್ ಟ್ರೋಲಿಂಗ್ ಮತ್ತು ಬೆದರಿಕೆಗಳನ್ನು ಎದುರಿಸಿದ್ದಾರೆ. ಹೈದರಾಬಾದ್ ಮೂಲದ ಸ್ಟ್ಯಾಂಡ್-ಅಪ್ ಹಾಸ್ಯನಟ ಅನುದೀಪ್ ಕಟ್ಟಿಕಲಾನನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ತಮ್ಮ ಕುಟುಂಬವನ್ನು ಭೇಟಿ ಮಾಡಲು ಹೋಗಿದ್ದಾಗ ಆತನನ್ನು ಬಂಧಿಸಲಾಗಿದೆ. ಇತ್ತೀಚೆಗೆ ಪೋಸ್ಟ್ ಮಾಡಿದ ಅವರ ಸ್ಟ್ಯಾಂಡ್-ಅಪ್ ಆಕ್ಟ್‌ನ ವೀಡಿಯೊದಲ್ಲಿ ಟಾಲಿವುಡ್ ನಟರು ಮತ್ತು ಅಭಿಮಾನಿಗಳ ಸಂಸ್ಕೃತಿಯ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ ನಂತರ ಅವರು ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ನಿಂದನೆ ಮತ್ತು ದಾಳಿಯ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ವರದಿಗಳ ಪ್ರಕಾರ, ಏಪ್ರಿಲ್ 14ರಂದು ಸಂಜೆ 7 ಗಂಟೆ ಸುಮಾರಿಗೆ ಕಾಕಿನಾಡ ಜಿಲ್ಲೆಯ ಇಬ್ಬರು ಪೊಲೀಸ್ ಅಧಿಕಾರಿಗಳು…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಐಪಿಎಲ್ 2026ನೇ ಆವೃತ್ತಿಯಲ್ಲಿ ಸತತ ಮೂರು ಸೋಲುಗಳನ್ನು ಕಂಡಿರುವ ಮುಂಬೈ ಇಂಡಿಯನ್ಸ್ (MI) ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತಂಡದ ಸ್ಟಾರ್ ಓಪನರ್ ರೋಹಿತ್ ಶರ್ಮಾ ಗಾಯದ ಕಾರಣದಿಂದಾಗಿ ಮುಂದಿನ ಎರಡು ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಮೂಲಗಳು NDTVಗೆ ತಿಳಿಸಿವೆ. ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಗಾಯದಿಂದ ಬಳಲುತ್ತಿದ್ದರು ಮತ್ತು ರಿಟೈರ್ಡ್ ಹರ್ಟ್ ಆಗಿ ಮೈದಾನದಿಂದ ಹೊರನಡೆದರು. ಆರ್‌ಸಿಬಿ ವಿರುದ್ಧ ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡವು 18 ರನ್‌ಗಳಿಂದ ಸೋಲು ಕಾಣುವ ಮೂಲಕ ಸತತ ಮೂರನೇ ಸೋಲು ಅನುಭವಿಸಿತು. ಮುಂಬೈ ಇದೀಗ ಏಪ್ರಿಲ್ 16 ರಂದು ಪಂಜಾಬ್ ಕಿಂಗ್ಸ್ ಮತ್ತು ಏಪ್ರಿಲ್ 20 ರಂದು ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಸೆಣಸಲಿದೆ. ರೋಹಿತ್ ಶರ್ಮಾ ಸದ್ಯ ಆಡಿರುವ ನಾಲ್ಕು ಪಂದ್ಯಗಳಲ್ಲಿ 45.67 ಸರಾಸರಿ ಮತ್ತು 165.06 ಸ್ಟ್ರೈಕ್ ರೇಟ್‌ನಲ್ಲಿ 137…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಾದಿಸುತ್ತಿರುವ ಅನಧಿಕೃತ ವಿಡಿಯೋ ರೆಕಾರ್ಡಿಂಗ್‌ಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಬುಧವಾರ ದೆಹಲಿ ಪೊಲೀಸರಿಗೆ ಸೂಚಿಸಿದೆ. ಹೈಕೋರ್ಟ್‌ನ ಅಧಿಕಾರಿಯೊಬ್ಬರು ಈ ಬೆಳವಣಿಗೆಯನ್ನು ದೃಢಪಡಿಸಿದ್ದು, ನ್ಯಾಯಾಲಯದ ಪ್ರಕ್ರಿಯೆಗಳ ಅನಧಿಕೃತ ರೆಕಾರ್ಡಿಂಗ್‌ಗೆ ಅನುಮತಿ ಇಲ್ಲ ಎಂದು ಹೇಳಿದ್ದಾರೆ. ಆನ್‌ಲೈನ್ ವಿಚಾರಣೆಗಳ ಕುರಿತು ದೆಹಲಿ ಹೈಕೋರ್ಟ್‌ನ ನಿಯಮಗಳು, ನ್ಯಾಯಾಲಯದ ಪ್ರಕ್ರಿಯೆಗಳ ವಿಡಿಯೋಗಳನ್ನು ರೆಕಾರ್ಡ್ ಮಾಡುವುದು ಮತ್ತು ಪ್ರಕಟಿಸುವುದನ್ನು ನಿಷೇಧಿಸುತ್ತದೆ. ಅಂತಹ ವೀಡಿಯೊಗಳನ್ನು ರೆಕಾರ್ಡ್ ಮಾಡಿ ಆನ್‌ಲೈನ್‌ನಲ್ಲಿ ಹಾಕಿರುವ “ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರತಿಯೊಬ್ಬರ” ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಹೈಕೋರ್ಟ್ ಈ ಹಿಂದೆಯೂ ಇದೇ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಕೇಜ್ರಿವಾಲ್ ಅವರ ವಿಡಿಯೋ ಹೈಕೋರ್ಟ್ ಗಮನಕ್ಕೆ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. ಏಪ್ರಿಲ್ 13 ರಂದು ದೆಹಲಿ ಹೈಕೋರ್ಟ್…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಪಶ್ಚಿಮ ಏಷ್ಯಾ ಯುದ್ಧದಿಂದ ಉಂಟಾದ ಇಂಧನ ಅಡಚಣೆಗಳ ನಡುವೆಯೂ ದೇಶದ ಗ್ರಾಹಕರಿಗೆ ಪೈಪ್ಡ್ ನೈಸರ್ಗಿಕ ಅನಿಲ (PNG) ಮತ್ತು ದ್ರವೀಕೃತ ಪೆಟ್ರೋಲಿಯಂ ಅನಿಲ(LPG)ದ ಶೇ. 100 ರಷ್ಟು ಪೂರೈಕೆ ಮಾಡುವುದಾಗಿ ಬುಧವಾರ ಕೇಂದ್ರ ಸರ್ಕಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಇಂದು ಅಂತರ-ಸಚಿವಾಲಯದ ಬ್ರೀಫಿಂಗ್‌ನಲ್ಲಿ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ(ಮಾರುಕಟ್ಟೆ ಮತ್ತು ತೈಲ ಸಂಸ್ಕರಣಾಗಾರ) ಸುಜಾತಾ ಶರ್ಮಾ ಅವರು, ಇಂಧನ ಪೂರೈಕೆಯನ್ನು ಸ್ಥಿರಗೊಳಿಸಲು ಮತ್ತು ಅಗತ್ಯ ಸೇವೆಗಳನ್ನು ನಿರ್ವಹಿಸಲು ಸರ್ಕಾರವು ಹಲವಾರು ಪರಿಣಾಮಕಾರಿ ಕ್ರಮಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು. “ನಿಮಗೆ ತಿಳಿದಿರುವಂತೆ, ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ, ಭಾರತದ ಇಂಧನ ಸರಬರಾಜು ಮೇಲೆ ಸಹ ಪರಿಣಾಮ ಬೀರಿದೆ. ಆದರೆ ಭಾರತ ಸರ್ಕಾರವು ಅನೇಕ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಂಡಿದೆ, ಇದರಿಂದಾಗಿ PNG ಮತ್ತು LPG ಗ್ರಾಹಕರಿಗೆ ಆದ್ಯತೆ ನೀಡುವ ಮೂಲಕ ಶೇ. 100 ರಷ್ಟು ಪೂರೈಕೆಯನ್ನು ಖಚಿತಪಡಿಸಲಾಗಿದೆ. ಇದರ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(CBSE)ಯು ಬುಧವಾರ 2025 – 2026ನೇ ಸಾಲಿನ 10ನೇ ತರಗತಿಯ ಬೋರ್ಡ್ ಪರೀಕ್ಷೆಯ(ಸೆಷನ್ 1) ಫಲಿತಾಂಶ ಪ್ರಕಟಿಸಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ವರ್ಷ ಫೆಬ್ರವರಿ 17 ರಿಂದ ಮಾರ್ಚ್ 11 ರವರೆಗೆ ನಡೆದ CBSE 10ನೇ ತರಗತಿ ಪರೀಕ್ಷೆಗೆ ಸುಮಾರು 25 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ವರ್ಷ ಒಟ್ಟಾರೆ ಶೇ. 93.70 ವಿದ್ಯಾರ್ಥಿಗಳ ಪಾಸ್ ಆಗಿದ್ದಾರೆ. ಇದು ಕಳೆದ ವರ್ಷದ ಶೇ 93.66 ಕ್ಕಿಂತ ಸ್ವಲ್ಪ ಸುಧಾರಣೆಯಾಗಿದೆ. ಹುಡುಗಿಯರು, ಹುಡುಗರಿಗಿಂತ ಹೆಚ್ಚು ಅಂದರೆ ಶೇ 94.99 ರಷ್ಟು ಉತ್ತೀರ್ಣರಾಗಿದ್ದು, ಹುಡುಗರು ಶೇ 92.6 ರಷ್ಟು ಉತ್ತೀರ್ಣರಾಗಿದ್ದಾರೆ. “ಒಟ್ಟು 55,368 ವಿದ್ಯಾರ್ಥಿಗಳು ಶೇ. 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ ಮತ್ತು 22,157 ವಿದ್ಯಾರ್ಥಿಗಳು ಶೇ. 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ” ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ತಿರುವನಂತಪುರಂ ಮತ್ತು…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಕೊಯಮತ್ತೂರು: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಹಾಗೂ ಮಿತ್ರಪಕ್ಷಗಳು ಸುಲಭವಾಗಿ ಮೂರನೇ ಎರಡರಷ್ಟು ಸ್ಥಾನಗಳ ಬಹುಮತ ಗಳಿಸಲಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಡಿಎಂಕೆ ಮೈತ್ರಿಗೆ ದೊಡ್ಡ ಇತಿಹಾಸವೇ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಕೊಯಮತ್ತೂರಿಗೆ ತೆರಳಿರುವ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಡಿಎಂಕೆ ಸರ್ಕಾರ ಸಮಾಜದ ಪ್ರತಿಯೊಂದು ವರ್ಗ, ಸಮುದಾಯವನ್ನು ಜೊತೆಗೆ ತೆಗೆದುಕೊಂಡು ಹೋಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡಿದೆ. ಜನರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳ ಜೊತೆಗೆ ಅನೇಕ ಯೋಜನೆಗಳನ್ನು ನೀಡಲಾಗಿದೆ. ಕೇಂದ್ರ ಸರ್ಕಾರದ ಬೆಲೆಏರಿಕೆ ನೀತಿಯಿಂದ ತತ್ತರಿಸಿದ್ದ ಜನ ಇದರಿಂದ ಉಪಯೋಗ ಪಡೆದಿದ್ದಾರೆ ಎಂದರು. ಮಹಿಳಾ ಮೀಸಲಾತಿ ಜೊತೆಗೆ ಲೋಕಸಭಾ ಸ್ಥಾನಗಳ ಹೆಚ್ಚಳ ಕುರಿತಾದ ಬಿಲ್ ಅನ್ನು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸುವ ಬಗ್ಗೆ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಅಂಬೇಡ್ಕರ್ ಫೋಟೋ ಮತ್ತು ಸಂವಿಧಾನದ ಪ್ರತಿಯನ್ನು ಜೇಬಿನಲ್ಲಿಟ್ಟುಕೊಂಡು ಓಡಾಡಿದ್ರೆ ಉಪಯೋಗವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಪರೋಕ್ಷವಾಗಿ ರಾಹುಲ್ ಗಾಂಧಿಗೆ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಡೀ ಪ್ರಪಂಚದಲ್ಲಿ ನಮ್ಮ ದೇಶದಂತ ಸಂವಿಧಾನ ಎಲ್ಲೂ ಇಲ್ಲ, ಅಂತಹ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದ್ದಾರೆ. ಅವರಿಗೆ ಚಿರ ಋುಣಿಗಳಾಗಿ ನಾವಿರಬೇಕು. ಅಂಬೇಡ್ಕರ್ ಫೋಟೋ ಮತ್ತು ಸಂವಿಧಾನದ ಪ್ರತಿಯನ್ನು ಜೇಬಿನಲ್ಲಿಟ್ಟುಕೊಂಡು, ಕೆಂಪು ಬಣ್ಣದೊಂದು ಡೈರಿ ತೋರಿಸಿಕೊಂಡು ಪಾರ್ಲಿಮೆಂಟ್ ನಲ್ಲಿ ಓಡಾಡಿದ್ರೆ ಏನು ಉಪಯೋಗವಿಲ್ಲ. ಸಂವಿಧಾನವನ್ನು ರಕ್ಷಿಸುವ ಕೆಲಸ ಮಾಡಬೇಕು ಈ ಸರ್ಕಾರ ಹೋರಾಟ ಮಾಡು ಉದ್ದೇಶದಿಂದ ನಾನು ಕೂಡ ಸುಮ್ಮನೆ ಇರುವ ಹಾಗಿಲ್ಲ. ಜನರ ಪರವಾಗಿ ನಾನು ಸಹ ದನಿ ಎತ್ತಬೇಕಾಗಿದೆ. ಇನ್ನು ಮುಂದೆ ವಾರದಲ್ಲಿ ಎರಡು ದಿನ ಕರ್ನಾಟಕದಲ್ಲೇ ಇರುತ್ತೇನೆ. ಪಕ್ಷವನ್ನು ಸಂಘಟನೆ ಮಾಡುತ್ತೇನೆ ಹಾಗೂ ಜನರ ಪರವಾಗಿಯೂ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ಪ್ರಮಾಣದ ವ್ಯತ್ಯಾಸಗಳ ಬಗ್ಗೆ ಜಗಳವಾಡುವುದು ಅನಾವಶ್ಯಕ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಡಿಕೆ.ಶಿವಕುಮಾರ್ ಅವರು ಮಾತನಾಡಿದರು. ಕಾಂಗ್ರೆಸ್ ನೀಡಿದ್ದ 6-6-5 ಅನುಪಾತದ ಭರವಸೆಯನ್ನು ನ್ಯಾಯಾಲಯವು ಶೇ.15ಕ್ಕೆ ಮಿತಿಗೊಳಿಸಿದರೂ, ಅದರಲ್ಲಿ ಎಲ್ಲಾ ಹಿಂದುಳಿದ ವರ್ಗಗಳಿಗೂ ಲಾಭ ಸಿಗುತ್ತಿದೆ ಎಂದು ಹೇಳಿದರು. ಸಣ್ಣ ಪ್ರಮಾಣದ ವ್ಯತ್ಯಾಸಗಳಿಗಾಗಿ ಜಗಳವಾಡುವ ಅಗತ್ಯವಿಲ್ಲ. ಮೀಸಲಾತಿ ಅವಧಿಯನ್ನು 10 ವರ್ಷಗಳ ಮಿತಿಯಾಚೆಯೂ ಮುಂದುವರಿಸಿರುವುದು ಲಕ್ಷಾಂತರ ಜನರಿಗೆ ಪ್ರಯೋಜನ ತಂದಿದೆ ಎಂದು ತಿಳಿಸಿದರು. ಮೀಸಲಾತಿ ಕಾಂಗ್ರೆಸ್‌ನ ಮೂಲ ಕಾರ್ಯಕ್ರಮವಾಗಿದ್ದು, ಅದು ಸಮಾಜದಲ್ಲಿ ಗೌರವ ಮತ್ತು ಸ್ವಾಭಿಮಾನವನ್ನು ಒದಗಿಸಲು ರೂಪಿಸಲಾಗಿದೆ. ಕೇಂದ್ರ ಸರ್ಕಾರವು ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ರೂ.80,000 ಕೋಟಿ ನೀಡಿದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರವು ಮಾತ್ರ STP ಮತ್ತು TSP ಕಾಯ್ದೆಗಳಡಿ ರೂ.29,000 ಕೋಟಿ ಅನುದಾನ ನೀಡಿದೆ ಎಂದರು.
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕಟಿಸಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ. ನಾಳೆ ಶಿಕ್ಷೆ ಪ್ರಮಾಣ ಕುರಿತಂತೆ ವಾದ ಮಂಡನೆ ನಡೆಯಲಿದೆ. 2016ರ ಜೂನ್ 15ರಂದು ನಡೆದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ಕಳೆದ ಮಾರ್ಚ್ ಕೊನೆಯ ವಾರದಲ್ಲಿ ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಲಯ, ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಅದರಂತೆ ಏಪ್ರಿಲ್ 2 ರಂದು ಎಲ್ಲರೂ ಲಿಖಿತ ವಾದ ಸಲ್ಲಿಸಿದ ಬಳಿಕ ಏಪ್ರಿಲ್ 15ಕ್ಕೆ ತೀರ್ಪು ಪ್ರಕಟ ಮಾಡುವುದಾಗಿ ಕೋರ್ಟ್ ಹೇಳಿತ್ತು. ಇಂದು ಪ್ರಕರಣ ಎಲ್ಲಾ 21 ಆರೋಪಿಗಳು ನ್ಯಾಯಾಲಯದ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಡಯಾಬಿಟಿಸ್ (ಮಧುಮೇಹ) ದೇಹದ ಹಲವಾರು ಅಂಗಗಳ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಸಾಕಷ್ಟು ಮಂದಿಗೆ ತಿಳಿದೇ ಇರುತ್ತದೆ. ಆದರೆ, ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದರಿಂದ ಕಣ್ಣುಗಳಿಗೂ ಗಂಭೀರ ಹಾನಿ ಉಂಟಾಗಬಹುದು ಎಂಬುದನ್ನು ಅನೇಕರು ಗಮನಿಸುವುದಿಲ್ಲ. ದೀರ್ಘಕಾಲ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಿದ್ದರೆ ಕಣ್ಣಿನ ರೆಟಿನಾದ ಸೂಕ್ಷ್ಮ ರಕ್ತನಾಳಗಳು ಹಾನಿಗೊಳಗಾಗಿ ಡಯಾಬಿಟಿಕ್ ರೆಟಿನೋಪತಿ, ಕಾಟರಾಕ್ಟ್ ಮತ್ತು ಗ್ಲೂಕೋಮಾ ಸಮಸ್ಯೆಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಆದರೆ, ಸಮಸ್ಯೆಯನ್ನು ಸರಿಯಾದ ಜೀವನಶೈಲಿ ಮತ್ತು ಕೆಲವು ಸರಳ ಅಭ್ಯಾಸಗಳ ಮೂಲಕ ದೂರಾಗಿಸಿಕೊಳ್ಳಬಹುದು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಿ ಕಣ್ಣುಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು ಅತ್ಯಂತ ಮುಖ್ಯವಾದದ್ದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿ ಇರಿಸುವುದು. ಸಕ್ಕರೆ ಮಟ್ಟ ಹೆಚ್ಚು ಇದ್ದರೆ ರೆಟಿನಾದಲ್ಲಿರುವ ಸೂಕ್ಷ್ಮ ರಕ್ತನಾಳಗಳು ಹಾನಿಗೊಳಗಾಗುತ್ತವೆ. ಇದರಿಂದ ಮಸುಕಾದ ದೃಷ್ಟಿ, ರೆಟಿನಾದಲ್ಲಿ ದ್ರವ ಸೋರಿಕೆ, ರಕ್ತಪೂರೈಕೆ ಕಡಿಮೆಯಾಗುವುದು, ಕ್ರಮೇಣ ದೃಷ್ಟಿ ಹಾನಿಯಾಗುವ ಸಮಸ್ಯೆ ಎದುರಾಗುತ್ತದೆ. ರಕ್ತದೊತ್ತಡವನ್ನು ನಿಯಮಿತವಾಗಿ ಪರಿಶೀಲಿಸಿ ಮಧುಮೇಹ ಇರುವವರಲ್ಲಿ ಹೆಚ್ಚಿನ ರಕ್ತದೊತ್ತಡ ಕಣ್ಣಿನ…
Subscribe to Updates
Get the latest creative news from FooBar about art, design and business.