Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
ಸಂಭ್ರಮಪ್ರಭ ನ್ಯೂಸ್, ಬೆಂಗಳೂರು: ರಾಜ್ಯ ಸಹಕಾರ ಕ್ಷೇತ್ರದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಡಿಸಿಸಿ ಅಪೆಕ್ಸ್ ಬ್ಯಾಂಕ್ ಚುನಾವಣೆಯಲ್ಲಿ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಅಧ್ಯಕ್ಷ ಸ್ಥಾನ ಕೈತಪ್ಪಿದೆ. ರವಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಈ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಬಾಲಕೃಷ್ಣ, ಹಿರಿಯ ನಾಯಕರಾಗಿರುವ ರಾಜಣ್ಣ ಅವರಿಗೆ ಪಕ್ಷದಲ್ಲಿ ಸೂಕ್ತ ಗೌರವ ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ನಾವೆಲ್ಲರೂ ಕುಳಿತು ಚರ್ಚೆ ಮಾಡಿಯೇ ತೀರ್ಮಾನ ಕೈಗೊಂಡಿದ್ದೇವೆ. ಕೆ.ಎನ್. ರಾಜಣ್ಣ ಅವರು ಈ ಹಿಂದೆ ಐದು ವರ್ಷಗಳ ಕಾಲ ಇದೇ ಬ್ಯಾಂಕ್‌ಗೆ ಅಧ್ಯಕ್ಷರಾಗಿ ಯಶಸ್ವಿಯಾಗಿ ಕೆಲಸ ಮಾಡಿದ್ದರು. ಅವರು ಪಕ್ಷದ ಹಿರಿಯ ಮುಖಂಡರು ಹಾಗೂ ಮಂತ್ರಿಯಾಗಿದ್ದವರು. ಈ ಬಾರಿ ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂಬ ಕಾರಣಕ್ಕೆ ರವಿ ಅವರಿಗೆ ಮಣೆ ಹಾಕಲಾಗಿದೆ. ರಾಜಣ್ಣ ಅವರಿಗೆ ತಕ್ಕುದಾದ ಸ್ಥಾನಮಾನ ಮತ್ತು ಗೌರವವನ್ನು ಪಕ್ಷ ಖಂಡಿತ ನೀಡಲಿದೆ” ಎಂದರು. ನಮ್ಮ ಮನೆ ಮೇಲೆ…
ಬೆಂಗಳೂರು (ಸಂಭ್ರಮಪ್ರಭ ನ್ಯೂಸ್): ರಾಜ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಶತದಿನೋತ್ಸವ ಸಂಭ್ರಮದಲ್ಲಿ ನಾಡಿನ ಜನತೆಗೆ ಹಲವು ಬಂಪರ್ ಕೊಡುಗೆಗಳನ್ನು ಘೋಷಿಸಲಾಗಿದೆ. ‘ದೃಢ ಕರ್ನಾಟಕದ ಸಂಕಲ್ಪ, ಶತಕದ ಪಥ, ಪ್ರಗತಿ ರಥ’ ಎಂಬ ಧ್ಯೇಯವಾಕ್ಯದಡಿ ನಡೆದ ಈ ವಿಶೇಷ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಜಿ. ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಈ ವೇಳೆ ರಾಜ್ಯದ ಬಡವರು, ರೈತರು, ಮಹಿಳೆಯರು ಹಾಗೂ ಯುವಜನತೆಯನ್ನು ಗುರಿಯಾಗಿಸಿಕೊಂಡು ಹಲವು ಮಹತ್ವದ ಯೋಜನೆಗಳಿಗೆ ಸರ್ಕಾರ ಚಾಲನೆ ನೀಡಿದೆ. ಬಡವರಿಗೆ 15 ಲಕ್ಷ ಉಚಿತ ಸೈಟ್ ವಿತರಣೆ (ಸೈಟ್ ಗ್ಯಾರಂಟಿ) ಸ್ವಂತ ಮನೆ ಇಲ್ಲದ ಬಡವರಿಗೆ ನೆರವಾಗಲು ಸರ್ಕಾರ ‘ಸೈಟ್ ಗ್ಯಾರಂಟಿ’ ಯೋಜನೆಯನ್ನು ಘೋಷಿಸಿದೆ. ಇದರ ಅನ್ವಯ ರಾಜ್ಯಾದ್ಯಂತ ಒಟ್ಟು 15 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST),…
ಬೆಂಗಳೂರು (ಸಂಭ್ರಮಪ್ರಭ ನ್ಯೂಸ್): ಕಾಂಗ್ರೆಸ್‌ನ ಎಸ್‌ಟಿ ವರ್ಗದ ಪ್ರಬಲ ನಾಯಕ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಸೇರಿ ಸುಮಾರು 15ಕ್ಕೂ ಹೆಚ್ಚು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದೆ. ಈ ದಾಳಿಯನ್ನು ಕೇವಲ ತಾಂತ್ರಿಕವಾಗಿ ನೋಡುವುದಕ್ಕಿಂತ, ರಾಜಕೀಯವಾಗಿ ಬಹಳ ಮಹತ್ವ ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ಸತೀಶ್ ಜಾರಕಿಹೊಳಿ ಅವರು ಬಿಜೆಪಿ ಪಾಲಿಗೆ ದೊಡ್ಡ ಆತಂಕವಾಗಲಿದ್ದಾರೆಯೇ ಎಂಬ ಪ್ರಶ್ನೆಗಳು ಇದೀಗ ಮೂಡುತ್ತಿವೆ. ಬಿಜೆಪಿಗೆ 14 ಎಸ್‌ಟಿ ಕ್ಷೇತ್ರಗಳ ಸೋಲಿನ ಭೀತಿ ಸತೀಶ್ ಜಾರಕಿಹೊಳಿ ಅವರು ಎಸ್‌ಟಿ ವರ್ಗದ ಪ್ರಬಲ ನಾಯಕರಾಗಿದ್ದು, ಕಾಂಗ್ರೆಸ್‌ನ ಎಸ್‌ಟಿ ಶಾಸಕರ ಮೇಲೆ ಸಾಕಷ್ಟು ಹಿಡಿತ ಹೊಂದಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಟಿ ವರ್ಗದ 14 ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿರಲಿಲ್ಲ; 14ಕ್ಕೆ 14 ಅಭ್ಯರ್ಥಿಗಳು ಸೋಲು ಕಂಡಿದ್ದರು. ಈ ಎಸ್‌ಟಿ ಕ್ಷೇತ್ರಗಳ ಮೇಲೆ ಕಾಂಗ್ರೆಸ್ ಹಿಡಿತ ಸಾಧಿಸಲು ಮತ್ತು ಹೆಚ್ಚು ಸ್ಥಾನ ಗೆಲ್ಲಲು ಸತೀಶ್ ಜಾರಕಿಹೊಳಿ ಅವರೇ ಪ್ರಮುಖ ಕಾರಣ.…
ಬೆಂಗಳೂರು (ಸಂಭ್ರಮಪ್ರಭ ನ್ಯೂಸ್): ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತರು ಹಾಗೂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸಿರುವ ದಾಳಿ ಸಂಪೂರ್ಣ ರಾಜಕೀಯ ಪ್ರೇರಿತವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ಸತೀಶ್ ಜಾರಕಿಹೊಳಿ ಅವರು ಕಾನೂನು ಚೌಕಟ್ಟಿನಲ್ಲಿಯೇ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಇದರಲ್ಲಿ ಮುಚ್ಚಿಡುವಂತಹದ್ದು ಯಾವುದೂ ಇಲ್ಲ. ಇ.ಡಿ ಅಧಿಕಾರಿಗಳು ಮಾಡುವ ತನಿಖೆಗೆ ಮತ್ತು ಅವರು ಕೇಳುವ ಎಲ್ಲಾ ಪ್ರಶ್ನೆಗಳಿಗೂ ಸತೀಶ್ ಅವರು ಖಂಡಿತ ಸೂಕ್ತ ಉತ್ತರ ನೀಡಲಿದ್ದಾರೆ. ಇದರಿಂದ ಯಾರು ಗಾಬರಿಯಾಗುವ ಅಗತ್ಯವಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ. ದಲಿತ ನಾಯಕನ ಬೆಳವಣಿಗೆ ಸಹಿಸುತ್ತಿಲ್ಲ “ಸತೀಶ್ ಜಾರಕಿಹೊಳಿ ಒಬ್ಬ ದಲಿತ ನಾಯಕರಾಗಿ ಎತ್ತರಕ್ಕೆ ಬೆಳೆಯುತ್ತಿರುವುದನ್ನು ಸಹಿಸಲು ಅವರಿಂದ (ಬಿಜೆಪಿ) ಆಗುತ್ತಿಲ್ಲ. ದಲಿತರನ್ನು ತುಳಿಯುವ ಉದ್ದೇಶದಿಂದಲೇ ಈ ರೀತಿ ಮಾಡಲಾಗುತ್ತಿದೆ. ಆದರೆ ಇದು ಅವರಿಗೇ ತಿರುಗೇಟು ನೀಡಲಿದೆ. ನಾಳೆ ನಮ್ಮ ಸರ್ಕಾರಕ್ಕೆ 100 ದಿನ ತುಂಬುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ಸರ್ಕಾರದ…
ಬೆಂಗಳೂರು: 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 319 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಕೆಪಿಎಸ್‌ಸಿ ಇದೇ 7ರವರೆಗೆ ವಿಸ್ತರಿಸಿದೆ. ಈ ಹುದ್ದೆಗಳಿಗೆ ನೇಮಕಾತಿಗೆ ಕೆಪಿಎಸ್‌ಸಿ ಜುಲೈ 31ರಂದು ಅಧಿಸೂಚನೆ ಹೊರಡಿಸಿ, ಆ. 1ರಿಂದ 31ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಆದರೆ, ಜಾತಿ, ಆದಾಯ ಮತ್ತು ಒಳ ಮೀಸಲಾತಿ ಪ್ರಮಾಣ ಪತ್ರಗಳ ವಿತರಣೆಗೆ ಸಂಬಂಧಿಸಿದಂತೆ ನಾಡಕಚೇರಿ ಮತ್ತು ಸೇವಾ ಸಿಂಧು ಪೋರ್ಟಲ್ ಸರ್ವರ್ ಸಮಸ್ಯೆಯಿಂದ ನಿಗದಿತ ಸಮಯಕ್ಕೆ ಪ್ರಮಾಣಪತ್ರಗಳು ಸಿಗದೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಇಂಟರ್‌ನೆಟ್ ಸಂಪರ್ಕ ಸಿಗದೆ ಶುಲ್ಕ ಪಾವತಿ ವೈಫಲ್ಯದ ಕಾರಣಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ, ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನವನ್ನು ವಿಸ್ತರಿಸುವಂತೆ ಅಭ್ಯರ್ಥಿಗಳು ಕೆಪಿಎಸ್‌ಸಿಗೆ ಮನವಿ ಸಲ್ಲಿಸಿದ್ದರು.
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಮದ್ಯ ಕುಡಿದು ಗಲಾಟೆ ಮಾಡಿದ ವ್ಯಕ್ತಿಗೆ ಇಲ್ಲಿನ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಜಹೀರ ಅತನೂರ ಅವರು, ನ್ಯಾಯಾಲಯ ಹಾಗೂ ಸಂಬಂಧಿಸಿದ ಪೊಲೀಸ್ ಠಾಣೆ ಆವರಣದಲ್ಲಿ ತಲಾ 25 ಸಸಿಗಳನ್ನು ನೆಡುವ ಶಿಕ್ಷೆ ನೀಡಿದ್ದಾರೆ. ತಾಲ್ಲೂಕಿನ ಯಕ್ಸಂಬಾ ಪಟ್ಟಣದ ನಿವಾಸಿ ಅನಿಲ ಪೂಜಾರಿ, ಮಾರ್ಚ್ 23ರಂದು ರಾತ್ರಿ ಮದ್ಯ ಕುಡಿದು ಗಲಾಟೆ ಮಾಡಿದ ಕುರಿತು ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ, ತಪ್ಪನ್ನು ನ್ಯಾಯಾಲಯದಲ್ಲಿ ಒಪ್ಪಿಕೊಂಡಿದ್ದರಿಂದ ₹1 ಸಾವಿರ ದಂಡ ಹಾಗೂ 30 ದಿನಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕು. ಇಲ್ಲದಿದ್ದರೆ, ದಂಡದೊಂದಿಗೆ ನ್ಯಾಯಾಲ ಯದ ಆವರಣ ಹಾಗೂ ಸದಲಗಾ ಪೊಲೀಸ್ ಠಾಣೆ ಆವರಣದಲ್ಲಿ ತಲಾ 25 ಸಸಿಗಳನ್ನು ನೆಡಬೇಕು ಎಂದು ಆ.25ರಂದು ತೀರ್ಪು ನೀಡಲಾಗಿತ್ತು. ಆರೋಪಿ ತನ್ನ ಪತ್ನಿಯೊಂದಿಗೆ ಆಗಸ್ಟ್ 31ರಂದು ಬೆಳಿಗ್ಗೆ ಚಿಕ್ಕೋಡಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಹಾಗೂ ಮಧ್ಯಾಹ್ನದ ನಂತರ ಸದಲಗಾ ಪೊಲೀಸ್ ಠಾಣೆ ಆವರಣದಲ್ಲಿ ಸಸಿ ನೆಡುವ ಮೂಲಕ…
ಹನೂರು (ಚಾಮರಾಜನಗರ): ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯ ಚಿಕ್ಕಲ್ಲೂರು ಮೀಸಲು ಅರಣ್ಯದಲ್ಲಿ ಇತ್ತೀಚೆಗೆ ಅರಣ್ಯ ಇಲಾಖೆ ಸಿಬ್ಬಂದಿಯಿಂದ (ಎನ್‌ಕೌಂಟರ್) ಹತರಾದ ಮೂವರು ಶಂಕಿತ ಬೇಟೆಗಾರರ ಪ್ರಕರಣ ಇದೀಗ ಭಾರಿ ಸ್ವರೂಪ ಪಡೆದುಕೊಂಡಿದೆ. ಸಿಬ್ಬಂದಿ ‘ಸ್ವರಕ್ಷಣೆ’ಗಾಗಿ ಗುಂಡು ಹಾರಿಸಿದ್ದಾರೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡಿದ್ದರು. ಆದರೆ, ಇದೀಗ ಹೊರಬಿದ್ದಿರುವ ಮರಣೋತ್ತರ ಪರೀಕ್ಷೆಯ (Autopsy) ಪ್ರಾಥಮಿಕ ವರದಿಗಳು ಅರಣ್ಯ ಇಲಾಖೆಯ ವಾದವನ್ನು ಬುಡಮೇಲು ಮಾಡಿವೆ. ಮೃತರ ದೇಹದ ಮೇಲಿದ್ದ ಗುಂಡಿನ ಗಾಯಗಳನ್ನು ಪರಿಶೀಲಿಸಿದಾಗ, ಇದು ದೂರದಿಂದ ಸ್ವರಕ್ಷಣೆಗಾಗಿ ಹಾರಿಸಿದ ಗುಂಡೇಟುಗಳಲ್ಲ, ಬದಲಾಗಿ ಕೇವಲ ಒಂದು ಅಥವಾ ಎರಡು ಅಡಿಗಳಷ್ಟು ಅತೀ ಸಮೀಪದಿಂದ (Point-blank range) ಶೂಟ್ ಮಾಡಲಾಗಿದೆ ಎಂಬ ಆಘಾತಕಾರಿ ಅಂಶ ಫೋರೆನ್ಸಿಕ್ ತಜ್ಞರ ವಿಶ್ಲೇಷಣೆಯಿಂದ ಬಹಿರಂಗವಾಗಿದೆ. ಏನಿದು ಘಟನೆ?: ಆಗಸ್ಟ್ 15 ರ ಮುಂಜಾನೆ ಹನೂರು ತಾಲೂಕಿನ ಚಿಕ್ಕಲ್ಲೂರು ಅರಣ್ಯದ ಕರಡಿಕಲ್ ಪ್ರದೇಶದಲ್ಲಿ ಆಂಥೋನಿ ಸ್ವಾಮಿ, ಜಾನ್ ರೋಸ್ ಪೀಟರ್ ಮತ್ತು ಸೆಬಾಸ್ಟಿಯನ್ ಡೇವಿಡ್ ಕುಮಾರ್ ಎಂಬುವವರನ್ನು ಅರಣ್ಯಾಧಿಕಾರಿಗಳು…
ಕಲಿಯುಗದ ಕಾಮಧೇನು, ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಮಂತ್ರಾಲಯದಲ್ಲಿ ಅದ್ಧೂರಿ ಚಾಲನೆ ಸಿಕ್ಕಿದೆ. ಪೂರ್ವಾರಾಧನೆ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದ್ದು, ದೇಶದ ಮೂಲೆ ಮೂಲೆಗಳಿಂದ ಭಕ್ತ ಸಾಗರವೇ ಹರಿದುಬರುತ್ತಿದೆ. ಸೆಪ್ಟೆಂಬರ್ 2ರವರೆಗೆ ಒಟ್ಟು ಏಳು ದಿನಗಳ ಕಾಲ ಮಂತ್ರಾಲಯದಲ್ಲಿ ‘ಸಪ್ತರಾತ್ರೋತ್ಸವ’ ನಡೆಯಲಿದೆ. ರಾಯರ ದರ್ಶನ ಪಡೆಯಲು ಆಗಮಿಸುತ್ತಿರುವ ಲಕ್ಷಾಂತರ ಭಕ್ತರಿಗೆ ಶ್ರೀಮಠದಿಂದ ಸಕಲ ಸೌಕರ್ಯಗಳನ್ನು ಒದಗಿಸಲಾಗಿದೆ. ರಾಯರಿಗೆ ತಿರುಪತಿಯ ಶೇಷ ವಸ್ತ್ರ ಸಮರ್ಪಣೆ ಈ ಬಾರಿಯ ಆರಾಧನಾ ಮಹೋತ್ಸವದ ವಿಶೇಷತೆಯೆಂದರೆ, ತಿರುಪತಿ ತಿರುಮಲ ದೇವಾಲಯದಿಂದ ಶ್ರೀನಿವಾಸ ದೇವರಿಗೆ ಉಡಿಸಿದ್ದ ‘ಶೇಷ ವಸ್ತ್ರ’ವನ್ನು ಮಂತ್ರಾಲಯಕ್ಕೆ ತರಿಸಿ, ರಾಯರ ಮೂಲ ಬೃಂದಾವನಕ್ಕೆ ಭಕ್ತಿ-ಶ್ರದ್ಧೆಗಳಿಂದ ಸಮರ್ಪಣೆ ಮಾಡಲಾಗಿದೆ. ಇದರ ಜೊತೆಗೆ ತಮಿಳುನಾಡಿನ ಪ್ರಸಿದ್ಧ ಶ್ರೀರಂಗ ಕ್ಷೇತ್ರದ ರಂಗನಾಥ ದೇವಸ್ಥಾನದಿಂದಲೂ ಪ್ರತಿವರ್ಷದಂತೆ ಈ ವರ್ಷವೂ ವಸ್ತ್ರ ಪ್ರಸಾದ ಆಗಮಿಸಿದ್ದು, ದೇವಸ್ಥಾನದ ಪ್ರಧಾನ ಅರ್ಚಕರು ಸ್ವತಃ ತಂದು ಸಮರ್ಪಿಸಿದ್ದಾರೆ. ಯಾವಾಗ, ಯಾವ ಆರಾಧನೆ? ಇಂದು (ಆ. 29):…
ಬೆಂಗಳೂರು: ಪ್ರಸಕ್ತ ವರ್ಷ ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯದ 101 ತಾಲೂಕುಗಳನ್ನು (89 ತೀವ್ರ, 12 ಸಾಧಾರಣ) ಕರ್ನಾಟಕ ಸರ್ಕಾರ ಅಧಿಕೃತವಾಗಿ ‘ಬರಪೀಡಿತ’ ಎಂದು ಘೋಷಿಸಿದೆ. ರಾಜ್ಯದಲ್ಲಿ ಶೇ.30ರಷ್ಟು ಮಳೆ ಕೊರತೆಯಿಂದ 1976ರ ಬಳಿಕ ಅತಿ ಭೀಕರ ಬರಗಾಲ ಎದುರಾಗಿದ್ದು, ಅಂತರ್ಜಲ ಕುಸಿತ ಹಾಗೂ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಉಲ್ಬಣಿಸಿದೆ. ರೈತರ ಹಿತದೃಷ್ಟಿಯಿಂದ ಬೆಳೆವಿಮೆ ಗಡುವನ್ನು ವಿಸ್ತರಿಸಲಾಗಿದ್ದು, ಪರಿಹಾರಕ್ಕಾಗಿ ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ೧. ತೀವ್ರ ಬರಪೀಡಿತ ತಾಲೂಕುಗಳು (Severe Drought) ಜಿಲ್ಲೆ ತಾಲೂಕುಗಳು ಬೆಂಗಳೂರು ನಗರ ಆನೇಕಲ್, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಯಲಹಂಕ ಬೆಂಗಳೂರು ಗ್ರಾಮಾಂತರ ಹೊಸಕೋಟೆ, ನೆಲಮಂಗಲ ಬೆಂಗಳೂರು ದಕ್ಷಿಣ ಮಾಗಡಿ, ರಾಮನಗರ ಕೋಲಾರ ಬಂಗಾರಪೇಟೆ, ಕೋಲಾರ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ, ಕೆ.ಜಿ.ಎಫ್ ಚಿಕ್ಕಬಳ್ಳಾಪುರ ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು, ಗುಡಿಬಂಡೆ, ಶಿಡ್ಲಘಟ್ಟ, ಚೇಳೂರು, ಮಂಚೇನಹಳ್ಳಿ ತುಮಕೂರು ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ,…
ಖಾಟ್ಮಂಡು (ಸಂಭ್ರಮಪ್ರಭ ನ್ಯೂಸ್): ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ರಸುವಾ ಜಿಲ್ಲೆಯಲ್ಲಿ ಬುಧವಾರ ಬೆಳ್ಳಂಬೆಳಿಗ್ಗೆ ದಿಢೀರ್ ಸಂಭವಿಸಿದ ಭೀಕರ ಪ್ರವಾಹ ಅಪಾರ ಹಾನಿ ಸೃಷ್ಟಿಸಿದೆ. ನೋಡನೋಡುತ್ತಿದ್ದಂತೆಯೇ ಕಟ್ಟಡಗಳು, ನೂರಾರು ಮನೆಗಳು, ರಸ್ತೆಗಳು ನೀರಿನ ರಭಸಕ್ಕೆ ಕೊಚ್ಚಿಹೋಗಿವೆ. ಈ ದಿಢೀರ್ ಪ್ರವಾಹಕ್ಕೆ ಭೂಕಂಪ ಹಾಗೂ ಹಿಮಪಾತವೇ ಪ್ರಮುಖ ಕಾರಣ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಭಾರತೀಯರು ಸೇರಿದಂತೆ 400ರ ಸಮೀಪ ಯಾತ್ರಾರ್ಥಿಗಳು ನಾಪತ್ತೆಯಾಗಿದ್ದು, ತೀವ್ರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಪ್ರವಾಹಕ್ಕೆ ಅಸಲಿ ಕಾರಣವೇನು? ಹಿಮದ ಕಟ್ಟೆ ಒಡೆದಿದ್ದೇಗೆ? ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖಾನಾಲ್ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ವರದಿಗಳ ಪ್ರಕಾರ, ಟಿಬೆಟ್ ಭಾಗದಲ್ಲಿ ಸಂಭವಿಸಿದ ಭೂಕಂಪನವು ದೊಡ್ಡ ಮಟ್ಟದ ಹಿಮಪಾತಕ್ಕೆ (Avalanche) ಕಾರಣವಾಯಿತು. ಇದೇ ಭೀಕರ ಪ್ರವಾಹವನ್ನು ಸೃಷ್ಟಿಸಿದೆ. ಅಮೆರಿಕದ ಜಿಯೋಲಾಜಿಕಲ್ ಸರ್ವೆ (USGS) ಮಾಹಿತಿ ಪ್ರಕಾರ, ಟಿಬೆಟ್ ಗಡಿಯ ಗೋಸಾಯ್‌ಕುಂಡದಿಂದ 47 ಕಿ.ಮೀ ಉತ್ತರಕ್ಕೆ ಬೆಳಿಗ್ಗೆ 8:37ರ ಸುಮಾರಿಗೆ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ಬೆನ್ನಲ್ಲೇ…
Subscribe to Updates
Get the latest creative news from FooBar about art, design and business.