Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ವಿಜಯ್ ಅವರ ಜನ ನಾಯಗನ್ ನಂತರ ಕೆವಿಎನ್ ಪ್ರೊಡಕ್ಷನ್ಸ್ ಮತ್ತೊಂದು ಸೆನ್ಸಾರ್ ಸಮಸ್ಯೆಯನ್ನು ಎದುರಿಸಬೇಕಾಗಿದೆ ಎಂದು ತೋರುತ್ತಿದೆ. ಈ ಬಾರಿ ಧ್ರುವ ಸರ್ಜಾ ಅಭಿನಯದ ಕೆಡಿ ಚಿತ್ರಕ್ಕೆ ಅನಿರೀಕ್ಷಿತ ಅಡಚಣೆ ಎದುರಿಸಲಾಗುತ್ತಿದೆ ಎಂದು ಹೇಳಲಾಗಿದೆ. ಕೆವಿಎನ್ ಕೆಡಿ ಸಿನಿಮಾ ಮೇಲೆ ಸೆನ್ಸಾರ್ ಬೋರ್ಡ್ ಸೇಡು ತೀರಿಸಿಕೊಳ್ಳುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕನ್ನಡ ಸಿನಿಮಾಗಳಿಗೆ ಮುಂಬೈನ ಸೆಂಟರ್ ಸೆನ್ಸಾರ್ ಬೋರ್ಡ್‍ನಿಂದ ಅನ್ಯಾಯ ಆಗುತ್ತಿದೆ. ನಿಮಯ ಉಲ್ಲಂಘಿಸಿ, ನಿರ್ದೇಶಕ ನಿರ್ಮಾಣ ಸಂಸ್ಥೆ ಹಾಗೂ ಪ್ರಾದೇಶಿಕ ಸೆನ್ಸಾರ್ ಮಂಡಳಿ ಗಮನಕ್ಕೆ ತರದೇ ರಿವೈಸಿಂಗ್ ಕಮಿಟಿಗೆ ಕಳುಹಿಸಲಾಗಿದೆ. ಪ್ರಾದೇಶಿಕ ಸೆನ್ಸಾರ್ ಮಂಡಳಿ ಈಗಾಗಲೇ ಕೆಡಿ ಸಿನಿಮಾ ವೀಕ್ಷಿಸಿ ರಕ್ತಪಾತ ಇರೋದ್ರಿಂದ ಚಿತ್ರಕ್ಕೆ ‘ಎ’ ಸರ್ಫಿಟಿಕೇಟ್ ನೀಡುವುದಾಗಿ ಹೇಳಿತ್ತು. ಹಾಡಿನ ಸಾಹಿತ್ಯ ಎರಡು ಸಾಲು ಬದಲಿಸಲು ಸೂಚನೆ ನೀಡಿತ್ತು. ಇದನ್ನು ಪಾಸ್ ಮಾಡದ ಕೇಂದ್ರ ಸೆನ್ಸಾರ್ ಮಂಡಳಿ, ಮತ್ತೆ ರಿವೈಸಿಂಗ್ ಕಮಿಟಿಗೆ ಕಳುಹಿಸಿ ಈ ಧೋರಣೆ ತೋರಿದೆ. ನಾವು ಸರಿಯಾದ ಮಾರ್ಗದ ಮೂಲಕ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ತಿರುಪ್ಪೂರ್: ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ ಹೊಸ ಪಕ್ಷ TVK ಅಧ್ಯಕ್ಷ ವಿಜಯ್ ರೈತರಿಗೆ ಬೆಳೆ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳನ್ನು (MSME) ಮುಚ್ಚಲಾಗಿದೆ ಎಂಬ ಆರೋಪದ ಬಗ್ಗೆ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ TVK ಪಕ್ಷ ಅಧಿಕಾರಕ್ಕೆ ಬಂದರೆ 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಸಣ್ಣ ರೈತರ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು ಎಂದರು. 5 ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರಿಗೆ ಶೇ. 50 ರಷ್ಟು ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದಲ್ಲದೆ, ಭತ್ತಕ್ಕೆ ಪ್ರತಿ ಕ್ವಿಂಟಲ್‌ಗೆ 3,500 ರೂ. ಮತ್ತು ಕಬ್ಬಿಗೆ ಪ್ರತಿ ಟನ್‌ಗೆ 4,500 ರೂ. ನೀಡುವುದಾಗಿ ಅಶ್ವಾಸನೆ ನೀಡಿದ್ದಾರೆ. ಡಿಎಂಕೆ ಆಡಳಿತಾವಧಿಯಲ್ಲಿ ಅನೇಕ ಎಂಎಸ್‌ಎಂಇಗಳನ್ನು ಮುಚ್ಚಲ್ಪಟ್ಟಿವೆ ಎಂದು ಅವರು ಆರೋಪಿಸಿದ್ದಾರೆ.

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವು 2.5 ಮಿಲಿಯನ್ (25 ಲಕ್ಷ) ಭಾರತೀಯರನ್ನು ಬಡತನಕ್ಕೆ ತಳ್ಳಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (UNDP) ಹೊಸ ವರದಿಯು ಎಚ್ಚರಿಕೆ ನೀಡಿದೆ. ಜೊತೆಗೆ ದೇಶವು ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಹಿನ್ನಡೆಯನ್ನು ಕಾಣುವ ಸಾಧ್ಯತೆಯಿದೆ. ಸಂಘರ್ಷವು “ಏಷ್ಯಾ ಮತ್ತು ಪೆಸಿಫಿಕ್‌ನಾದ್ಯಂತ ಮಾನವ ಅಭಿವೃದ್ಧಿ ಒತ್ತಡಗಳನ್ನು ವಿಸ್ತರಿಸುತ್ತಿದೆ ಎಂದು ‘ಮಧ್ಯಪ್ರಾಚ್ಯದಲ್ಲಿ ಮಿಲಿಟರಿ ಸಂಘರ್ಷ’ ಏಷ್ಯಾ ಮತ್ತು ಪೆಸಿಫಿಕ್‌ನಲ್ಲಿ ಮಾನವ ಅಭಿವೃದ್ಧಿ ಪರಿಣಾಮಗಳು ಎಂಬ ತನ್ನ ವರದಿಯಲ್ಲಿ UNDP ಹೇಳಿದೆ. “ಹೆಚ್ಚಿನ ಇಂಧನ, ಸರಕು ಮತ್ತಿತರ ವೆಚ್ಚವೂ ಮನೆಯ ಖರೀದಿ ಶಕ್ತಿಯನ್ನು ಕಡಿಮೆ ಮಾಡುತ್ತಿದ್ದು, ಆಹಾರ ಅಭದ್ರತೆಯನ್ನು ಹೆಚ್ಚಿಸುತ್ತಿದೆ. ಸಾರ್ವಜನಿಕ ಬಜೆಟ್‌ಗಳನ್ನು ತಗ್ಗಿಸುತ್ತಿದೆ ಮತ್ತು ಜೀವನೋಪಾಯವನ್ನು ದುರ್ಬಲಗೊಳಿಸುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮಂಗಳವಾರ ಬಿಡುಗಡೆಯಾದ ಪ್ರಾಥಮಿಕ ಮೌಲ್ಯಮಾಪನದ ಪ್ರಕಾರ, ಜಾಗತಿಕವಾಗಿ 8.8 ಮಿಲಿಯನ್ ಜನರನ್ನು ಬಡತನಕ್ಕೆ ತಳ್ಳಬಹುದು ಎಂದು ಅಂದಾಜಿಸಿದೆ. ಈ ಸಂಘರ್ಷ ಏಷ್ಯಾ-ಪೆಸಿಫಿಕ್ ಪ್ರದೇಶಕ್ಕೆ $299 ಬಿಲಿಯನ್ ವರೆಗೆ ನಷ್ಟವನ್ನುಂಟುಮಾಡಬಹುದು ಎಂದು ಎಚ್ಚರಿಸಿದೆ.

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಳಗಾವಿ: ಜನರ ಸಮಸ್ಯೆಗಳಿದ್ದಲ್ಲಿ ಆ ಬಗ್ಗೆ ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹಾಕಲು ದೆಹಲಿಗೆ ಹೋಗುವುದು ಜನಪ್ರತಿನಿಧಿಗಳ ಕೆಲಸ. ಅದು ಬಿಟ್ಟು ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿ ಚಲೋ ಮಾಡುತ್ತಿರುವುದು ನಾಚಿಕೇಗೇಡಿನ ಸಂಗತಿ ಎಂದು ಸಂಸದ ಜಗದೀಶ ಶೆಟ್ಟರ್ ಲೇವಡಿ ಮಾಡಿದ್ದಾರೆ. ನಿನ್ನೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆಯದ್ದೇ ಚರ್ಚೆಯಾಗ್ತಿದೆ. ಇದಕ್ಕೊಂದು ತಾರ್ಕಿಕ ಅಂತ್ಯ ಕಾಣಿಸುತ್ತಿಲ್ಲ. ಅಧಿಕಾರ ಹಂಚಿಕೆ ಬಗ್ಗೆ ಏನು ಒಪ್ಪಂದವಾಗಿದೆ ಎನ್ನುವುದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರಗೆ ಬಿಟ್ಟರೇ ಬೇರೆ ಯಾರಿಗೂ ಗೊತ್ತಿಲ್ಲ. ಅದು ಏನಿದೆ ಎನ್ನುವುದನ್ನು ಇಬ್ಬರು ಒಮ್ಮೆ ಹೇಳಿ ಬಿಡಬೇಕಿದೆ. ಇತ್ತ ರಾಜ್ಯದ ಜನತೆಯ ಸಮಸ್ಯೆ ಕೇಳುವವರೇ ಇಲ್ಲವಾಗಿದೆ ಎಂದರು. ಯುದ್ಧದ ಪರಿಸ್ಥಿತಿಯಿಂದ ನಮ್ಮ ದೇಶಕ್ಕೆ ಅಂತಹ ದೊಡ್ಡ ಸಮಸ್ಯೆಯಾಗಿಲ್ಲ. ರಾಹುಲ್ ಗಾಂಧಿಯವರ ಸರ್ಕಾರ ಇದ್ದಿದ್ದರೆ ಸದ್ಯದ ಪರಿಸ್ಥಿತಿ ನಿಯಂತ್ರಿಸಲು ಆಗುತ್ತಿರಲಿಲ್ಲ. ನಮ್ಮಲ್ಲಿ ಪೆಟ್ರೊಲ್,…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಸಚಿವ ಹುದ್ದೆಗೆ ಬೇಡಿಕೆ ಇಡುವುದು ಎಂದರೆ ಗ್ಯಾಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ, ಎರಡು ಮೂರು ಬಾರಿ ಶಾಸಕರಾದವರು ಖಂಡಿತವಾಗಿಯೂ ಬಹಿರಂಗವಾಗಿಯೇ ತಮಗೆ ಸಚಿವ ಸ್ಥಾನ ಸಿಗಬೇಕೆಂದು ಕೇಳಬಹುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವಾಕಾಂಕ್ಷಿ ಶಾಸಕರ ದೆಹಲಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದರು. ಶಾಸಕರಾಗಿ ಎರಡು ಮೂರು ಬಾರಿ ಗೆದ್ದಿದ್ದಾರೆ. ಅವರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ಯಾವ ತಪ್ಪೂ ಇಲ್ಲ. ಆದರೆ ಅದರ ಬಗ್ಗೆ ಸಿಎಂ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳಬಹುದು, ಅದೇನು ಗ್ಯಾಂಬ್ಲಿಂಗ್ ಅಲ್ಲ. ಅವರಿಗೆ ಅರ್ಹತೆ ಇದೆ ಕೇಳ್ತಾರೆ. ನಾಯಕತ್ವ ವಿಚಾರ ಇರಲಿ, ಪುನಾರಚನೆ ಇರಲಿ ಹೈಕಮಾಂಡ್ ಮಾತ್ರವೇ ತೀರ್ಮಾನ ಮಾಡಬೇಕು. ಹೈಕಮಾಂಡ್ ಎಲ್ಲ ಗಮನಿಸಿದೆ, ಅವರಿಗೆ ಎಲ್ಲ ಗೊತ್ತಿದೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಅಂತ ಹೈಕಮಾಂಡ್‌ಗೆ ಗೊತ್ತಿದೆ, ಅವರು…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆಗಳು ಜೋರಾಗುತ್ತಿರುವ ನಡುವೆಯೇ, ರಾಜ್ಯದ 15ಕ್ಕೂ ಹೆಚ್ಚು ಶಾಸಕರ ನಿಯೋಗವು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟದಲ್ಲಿ ಬದಲಾವಣೆಗಳಾಗಲಿವೆ ಎಂಬ ಊಹಾಪೋಹಗಳು ಹರಿದಾಡುತ್ತಿರುವ ಸಮಯದಲ್ಲೇ ಈ ಭೇಟಿ ನಡೆದಿರುವುದು ಗಮನಾರ್ಹವಾಗಿದೆ. ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳಾಗಿರುವ ಶಾಸಕರು ತಮ್ಮ ಬೇಡಿಕೆಗಳನ್ನು ನೇರವಾಗಿ ಹೈಕಮಾಂಡ್ ಗಮನಕ್ಕೆ ತರಲು ದೆಹಲಿಗೆ ಭೇಟಿ ನೀಡಿದ್ದಾರೆಂದು ಭೇಟಿಯನ್ನು ತಿಳಿದುಬಂದಿದೆ. ಸೋಮವಾರ ಸಂಜೆ ದೆಹಲಿಯಲ್ಲಿರುವ ಖರ್ಗೆ ಅವರ ನಿವಾಸದಲ್ಲಿ ಈ ಸಭೆ ನಡೆದಿದ್ದು, ಬೆಳಿಗ್ಗೆ ಬೆಂಗಳೂರಿನಲ್ಲಿ ಇದ್ದ ಖರ್ಗೆ ಅವರು ನಂತರ ದೆಹಲಿಗೆ ತೆರಳಿ ಶಾಸಕರನ್ನು ಭೇಟಿಯಾದರು ಎಂದು ತಿಳಿದುಬಂದಿದೆ. ಸಭೆಯ ನಂತರ ಮಾತನಾಡಿದ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು, ಖರ್ಗೆ ಅವರು ನಮ್ಮ ಮನವಿಯನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ್ದು, ಪಕ್ಷದ ಹಿತದೃಷ್ಟಿಯಿಂದ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಬಿಡುಗಡೆ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವ ಬಗ್ಗೆ ಕೇಳಿದಾಗ, “ನಜೀರ್ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಹೋಗಿ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುವಂತೆ ಮಾಡಲು ಪಕ್ಷ ಸೂಚಿಸಿತ್ತು. ಅವರು ಈ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲಿ ಏನಾಗಿದೆ ಎಂದು ನನಗೆ ಇನ್ನು ವರದಿ ಬರಬೇಕಿದೆ” ಎಂದರು. ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ ಮುಖ್ಯಮಂತ್ರಿಗಳು…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಗೊಂದಲದ ನಡುವೆಯೇ ದಾವಣಗೆರೆ ಉಪ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಟಿಕೆಟ್​​ ವಿಚಾರಕ್ಕೆ ಆರಂಭವಾಗಿದ್ದ ಕಾಂಗ್ರೆಸ್ ಬಂಡಾಯದ ಬಿಸಿ ಅಬ್ದುಲ್ ಜಬ್ಬಾರ್ ಹಾಗೂ ನಸೀರ್​ ಅಹ್ಮದ್ ನಂತರ ಈಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ತಟ್ಟಿದೆ. ಇಂದು ಬೆಳಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ‘ಕಾವೇರಿ’ ನಿವಾಸದಲ್ಲಿ ಭೇಟಿ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಪಕ್ಷದ ಆಂತರಿಕ ವಿದ್ಯಮಾನಗಳ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಸಚಿವ ಜಮೀರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಹೈಕಮಾಂಡ್ ಕೆಂಗಣ್ಣಿನ ಕುರಿತು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷದೊಳಗೆ ಬಂಡಾಯಕ್ಕೆ ಪ್ರಚೋದನೆ ನೀಡುತ್ತಿರುವ ಆರೋಪ ಜಮೀರ್ ಅವರ ವಿರುದ್ಧ ಕೇಳಿಬರುತ್ತಿದ್ದು, ಈ ಬಗ್ಗೆ ಹೈಕಮಾಂಡ್ ಹಂತದಲ್ಲಿ ದೂರುಗಳು ಸಲ್ಲಿಕೆಯಾಗಿವೆ ಎಂದು ಸಿಎಂ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬಾಲಿವುಡ್ ಸೂಪರ್‌ಸ್ಟಾರ್ ರಣವೀರ್ ಸಿಂಗ್ ಪ್ರಸ್ತುತ ತಮ್ಮ ‘ಧುರಂಧರ್ 2: ದಿ ರಿವೆಂಜ್’ ಚಿತ್ರದ ಯಶಸ್ಸನ್ನು ಆನಂದಿಸುತ್ತಿದ್ದಾರೆ. ಈ ಚಿತ್ರವು ಎಲ್ಲಾ ಪ್ರಮುಖ ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. ಈ ಬೃಹತ್ ಯಶಸ್ಸಿನ ನಡುವೆ, ರಣವೀರ್ ಮಹಾರಾಷ್ಟ್ರದ ನಾಗ್ಪುರಕ್ಕೆ ಆಗಮಿಸಿದ್ದು ಅಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದರು. ರಣವೀರ್ ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ನಾಗ್ಪುರದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅಲ್ಲಿಂದ ಅವರು ನೇರವಾಗಿ ಮಹಲ್ ಪ್ರದೇಶದಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ತೆರಳಿದರು. ರಣವೀರ್ ಅಲ್ಲಿ ಸುಮಾರು ಒಂದೂವರೆ ಗಂಟೆ ಕಳೆದರು. ಈ ಸಮಯದಲ್ಲಿ, ಅವರು ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿ ತಮ್ಮ ‘ಧುರಂಧರ್ 2’ ಚಿತ್ರದ ಬಗ್ಗೆ ವಿವರವಾಗಿ ಚರ್ಚಿಸಿದರು. ಸಭೆಯ ಜೊತೆಗೆ, ರಣವೀರ್ ಆರ್‌ಎಸ್‌ಎಸ್‌ನ ಕೆಲಸ, ಅದರ ಸೇವಾ ಕಾರ್ಯಕ್ರಮಗಳು ಮತ್ತು ತಳಮಟ್ಟದಲ್ಲಿ ನಡೆಯುತ್ತಿರುವ ಕೆಲಸದ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಮುಂಬೈ: ಅಮೆರಿಕಾ–ಇರಾನ್ ನಡುವಿನ ಶಾಂತಿ ಮಾತುಕತೆ ವಿಫಲವಾದ ಪರಿಣಾಮ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಅದರ ನೇರ ಪರಿಣಾಮವಾಗಿ ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಆರಂಭಿಕ ವಹಿವಾಟಿನಲ್ಲಿ ಭಾರೀ ಕುಸಿತ ಕಂಡಿವೆ. ಪಾಕಿಸ್ತಾನದಲ್ಲಿ ನಡೆದ ಸುಮಾರು 21 ಗಂಟೆಗಳ ಮಹತ್ವದ ಮಾತುಕತೆ ಯಾವುದೇ ಸ್ಪಷ್ಟ ಒಪ್ಪಂದವಿಲ್ಲದೆ ಅಂತ್ಯಗೊಂಡಿದ್ದು, ಈಗಾಗಲೇ ಜಾರಿಗೆ ಬಂದಿದ್ದ ಎರಡು ವಾರಗಳ ತಾತ್ಕಾಲಿಕ ಯುದ್ಧ ವಿರಾಮವೂ ಕುಸಿಯುವ ಭೀತಿ ಎದುರಾಗಿದೆ. ಈ ಮಾತುಕತೆಗಳ ವಿಫಲತೆಗೆ ಅಮೆರಿಕಾ ಮತ್ತು ಇರಾನ್ ಪರಸ್ಪರ ಆರೋಪ ಮಾಡಿಕೊಳ್ಳುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ. ಇದೇ ಸಂದರ್ಭದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿಯಲ್ಲಿ ನೌಕಾ ತಡೆ (naval blockade) ಘೋಷಿಸಿರುವುದು ಜಾಗತಿಕ ತೈಲ ಸರಬರಾಜಿನ ಬಗ್ಗೆ ಗಂಭೀರ ಆತಂಕ ಮೂಡಿಸಿದೆ. ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾಗಿರುವ ಹಾರ್ಮುಜ್ ಪ್ರದೇಶದಲ್ಲಿ ಯಾವುದೇ ತಡೆ ಉಂಟಾದರೆ, ಜಗತ್ತಿನ ಬಹುತೇಕ ದೇಶಗಳಿಗೆ ತೈಲ ಪೂರೈಕೆ ವ್ಯತ್ಯಯಗೊಳ್ಳುವ ಸಾಧ್ಯತೆ ಇದೆ.…

Read More