Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ದಾವಣಗೆರೆ: ಒಂದು ಚಹಾ ಕುಡಿದರೂ ಋಣ ಇಟ್ಟುಕೊಳ್ಳಬೇಕು. ಅಬ್ದುಲ್ ಜಬ್ಬಾರ್ನನ್ನು ಎಂಎಲ್ಸಿ ಮಾಡಿದ್ದು ನಾವು, ಕಾಂಗ್ರೆಸ್ ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹರಿಹಾಯ್ದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್ಸಿ ಅಬ್ದುಲ್ ಜಬ್ಬಾರ್ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾನು ಚುನಾವಣೆ ನಂತರ ರಿಲ್ಯಾಕ್ಸ್ ಮೂಡ್ನಲ್ಲಿದ್ದೆ. ನನಗೆ ಯಾರೂ ಕಾಲ್ ಮಾಡಿಲ್ಲ. ನನಗೆ ಅದರ ಬಗ್ಗೆ ಮಾಹಿತಿ ಇಲ್ಲ ಎಂದರು. ನಾನು 1994ರಿಂದ ಚುನಾವಣೆ ಮಾಡಿದ್ದೇನೆ. ನನಗೆ ಇದು ಹದಿನಾರನೇ ಚುನಾವಣೆ. ಹಿಂದಿನ ಚುನಾವಣೆಗಳಷ್ಟು ಟೈಟ್ ಆಗಿಲ್ಲ. 2013ರ ಚುನಾವಣೆ ರಿಪೀಟ್ ಆಗುತ್ತದೆ ಎಂಬ ವಿಶ್ವಾಸ ಇದೆ. ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಇದ್ದಾರೆ. ನಾಯಕರ ನಡುವಿನ ಸಣ್ಣಪುಟ್ಟ ವ್ಯತ್ಯಾಸ ಆಗಿದೆ. ಗೆದ್ದರೆ ಹೆಚ್ಚು ಅಂತರದಲ್ಲಿ ಗೆಲ್ಲುತ್ತೇವೆ, ಇಲ್ಲ ಕಡಿಮೆ ಅಂತರದಲ್ಲಿ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು. ಶಾಮನೂರು ಕುಟುಂಬ ಬುದ್ದಿವಂತರನ್ನು ಹತ್ತಿರ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಳಗಾವಿ: ಕಾಂಗ್ರೆಸ್ ಪಕ್ಷದ ಒಳಗಿನ ಸಮಸ್ಯೆಗಳನ್ನು ಪರಿಹರಿಸಬೇಕಿದ್ದು, ಸಚಿವ ಸಂಪುಟ ಪುನಾರಚನೆ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದ್ದಾರೆ. ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಸುಮಾರು 30 ತಿಂಗಳುಗಳ ಅವಧಿ ಪೂರ್ಣಗೊಂಡಿರುವುದರಿಂದ ಈಗ ಸಚಿವ ಸಂಪುಟ ಪುನಾರಚನೆಗೆ ಗಮನ ಹರಿಸುವ ಸಮಯ ಬಂದಿದೆ ಎಂದು ಹೇಳಿದರು. ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ತಾವು ಕೆಪಿಸಿಸಿ ಅಧ್ಯಕ್ಷರಾಗುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕೆಪಿಸಿಸಿ ನಾಯಕತ್ವದಲ್ಲಿ ಬದಲಾವಣೆ ಅಗತ್ಯ ಮತ್ತು ಅನಿವಾರ್ಯವಾಗಿದೆ ಎಂದು ಹೇಳಿದರು. ಆದರೆ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದರು. ಆಂತರಿಕ ಮೀಸಲಾತಿ ಜಾರಿಗೆ ಸಂಬಂಧಿಸಿದ ಪ್ರಶ್ನೆಗೆ, ಸರ್ಕಾರ ಬದ್ಧವಾಗಿದೆ ಆದರೆ ಜಾರಿಗೆ ಮುನ್ನ ಸುಪ್ರೀಂ ಕೋರ್ಟ್ ಸೂಚನೆಯಂತೆ ಸಂಬಂಧಿತ ಅಂಕಿಅಂಶಗಳನ್ನು ಸಂಗ್ರಹಿಸಬೇಕಿದೆ ಎಂದು ಹೇಳಿದರು. ಯಾವುದೇ ಸಮುದಾಯದ ವಿರುದ್ಧ ಸರ್ಕಾರ ಇಲ್ಲ, ಎಲ್ಲರ ಅಭಿವೃದ್ಧಿ ಮುಖ್ಯವಾಗಿದೆ ಎಂದರು. ಬಾಗಲಕೋಟೆ ಉಪಚುನಾವಣೆಯಲ್ಲಿ ಹಣ ಹಂಚಿಕೆಯ ಬಗ್ಗೆ ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಪಂಚಾಂಗ ದಿನಾಂಕ : 12-04-2026 ವಾರ : ಭಾನುವಾರ ಸಂವತ್ಸರ : ಶ್ರೀ ಪರಾಭವ ನಾಮ ಆಯನ : ಉತ್ತರಾಯಣ ಪಕ್ಷ : ಕೃಷ್ಣ ತಿಥಿ : ದಶಮಿ ನಕ್ಷತ್ರ : ಶ್ರಾವಣ ಸೂರ್ಯೋದಯ : ಮುಂಜಾನೆ 06:07 ಗಂಟೆಗೆ ಅಮೃತ ಕಾಲ : ಮಧ್ಯಾಹ್ನ 03:24 ರಿಂದ 04:57ರ ವರೆಗೆ ದುರ್ಮುಹೂರ್ತ : ಮಧ್ಯಾಹ್ನ 04:31 ರಿಂದ 05:19ರ ತನಕ ರಾಹುಕಾಲ : ಮಧ್ಯಾಹ್ನ 04:57 ರಿಂದ 06:30ರ ವರೆಗೆ ಸೂರ್ಯಾಸ್ತ : ಸಂಜೆ 06:30 ಗಂಟೆಗೆ ರಾಶಿ ಭವಿಷ್ಯ ಮೇಷ : ಕೆಲವೊಮ್ಮೆ ನೀವು ಒತ್ತಡದಲ್ಲಿರುವುದು ಒಳ್ಳೆಯದು ಏಕೆಂದರೆ ಇದು ನಿಮ್ಮ ಸಾಮರ್ಥ್ಯವನ್ನು ಪೂರ್ಣವಾಗಿ ಹೊರತರುತ್ತದೆ. ನೀವು ನಿಮ್ಮ ಕೆಲಸದಲ್ಲಿ ಎಲ್ಲ ನಿಮ್ಮ ಸಹೋದ್ಯೋಗಿಗಳನ್ನೂ ಮೀರುತ್ತೀರಿ. ಆದರೆ, ಫಲಿತಾಂಶಗಳು ನಿಮ್ಮ ನಿರೀಕ್ಷೆಗಳಿಗೆ ಹೊಂದಿಕೊಳ್ಳುವುದಿಲ್ಲ. ಫಲಿತಾಂಶಗಳು ತಡವಾಗುವುದರಿಂದ ನೀವು ತಾಳ್ಮೆಯಿಂದ ಇರಬೇಕು. ವೃಷಭ : ನಿಮ್ಮದೇ ಸಾಧನೆಗಳನ್ನು ಯೋಜಿಸುವುದು ಮತ್ತು ಮಿತ್ರರ ಯಶಸ್ಸಿಗೆ ಕೊಡುಗೆ ನೀಡುವುದು ಇಂದಿನ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಜೆಡಿಎಸ್ ಗೆ ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣವನ್ನು ಬಿಡಿಸುತ್ತೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಶನಿವಾರ ಹೇಳಿದ್ದಾರೆ. ಜೆಡಿಎಸ್ ಗೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಕೊಮ್ಮಘಟ್ಟದ ಬಳಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾವೇಶದಲ್ಲಿ 1 ಲಕ್ಷ ಹೆಚ್ಚು ಜನ ಭಾಗಿಯಾಗಿದ್ದರು. ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿ ಪಕ್ಷ ಹಾಲಿ, ಮಾಜಿ, ಶಾಸಕರು, ಸಂಸದರು ಭಾಗಿಯಾಗಿದ್ದರು. ಬೆಳ್ಳಿ ಹಬ್ಬದ ಸಮಾವೇಶ ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ಕರ್ನಾಟಕಕ್ಕೆ ಹಿಡಿದಿರೋ ಗ್ರಹಣ ಮುಕ್ತಿಗಾಗಿ ಜೆಡಿಎಸ್ ಗೆ ಒಂದು ಬಾರಿ ಅವಕಾಶ ಕೊಡಿ ಎಂದು ಮನವಿ ಮಾಡಿದರು. ಬೆಂಗಳೂರಿಗೆ ಮೆಟ್ರೋ ಯೋಜನೆ ಸೇರಿ ಅನೇಕ ಯೋಜನೆ ಕೊಟ್ಟವನು ನಾನು, ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಚದರ ಅಡಿಗೆ 100 ರೂ. ಫಿಕ್ಸ್ ಮಾಡಿದೆ ಎಂದು ಮಾಜಿ ಸಿಎಂ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ ನಡುವೆ ಮತದಾನ ಮುಗಿದಿದೆ. ಆದರೆ ಪಕ್ಷದಲ್ಲಿ ಈಗ ಮುಸ್ಲಿಂ ನಾಯಕರ ನಡುವಿನ ಮುಸುಕಿನ ಗುದ್ದಾಟ ಜೋರಾಗಿದೆ. ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಪ್ರಚಾರ ಮಾಡದ ಸಚಿವ ಜಮೀರ್ ಅಹ್ಮದ್ ವಿರುದ್ಧ ಮತ್ತೊಂದು ಮುಸ್ಲಿಂ ಬಣ ತಿರುಗಿ ಬಿದ್ದಿತ್ತು. ದಾವಣಗೆರೆ ಚುನಾವಣೆ ಪ್ರಚಾರದ ವೇಳೆ ನಡೆದ ಹಗ್ಗಜಗ್ಗಾಟ ಆಂತರಿಕ ವರದಿ ಕಾಂಗ್ರೆಸ್ ಹೈಕಮಾಂಡ್ ಕೈಸೇರಿದೆ. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ನೀಡಿದ ವರದಿಯಲ್ಲಿ ಉಪಚುನಾವಣಾ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಮತ್ತು ನಾಯಕರ ನಡುವಿನ ಮುನಿಸು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದೆ. ಜಮೀರ್ ಅಹ್ಮದ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿಲ್ಲ, ಪ್ರಚಾರಕ್ಕೆ ಅಂತ ಬಂದಿದ್ದರೂ ಅವರ ನಡೆ ಯಾರಿಗೂ ಸಮಾಧಾನ ತಂದಿಲ್ಲ. ಮುಸ್ಲಿಂ ನಾಯಕರ ಮನವೊಲಿಕೆ ಮಾಡದೇ ಜಮೀರ್ ನಿರ್ಲಕ್ಷ್ಯ ಮಾಡಿದ್ದಾರೆ ಎಂದು…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದ ಹಿನ್ನೆಲೆಯಲ್ಲಿ ಶುರುವಾದ ಬಂಡಾಯ ಗೊಂದಲ ನಡುವೆ ಮತದಾನ ಮುಗಿದಿದೆ. ಇದರ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಆಗಿರುವ ಅಬ್ದುಲ್ ಜಬ್ಬಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ಅವರು, ಉಪಚುನಾವಣಾ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಮತ್ತು ನಾಯಕರ ನಡುವಿನ ಮುನಿಸು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗಬಹುದು ಎಂದು ವರದಿ ನೀಡಿದ್ದರು. ಈ ವರದಿ ಬಂದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಕಠಿಣ ಕ್ರಮಕ್ಕೆ ಮುಂದಾಗಿದೆ. ತನ್ನನ್ನು ಸಸ್ಪೆಂಡ್ ಮಾಡುತ್ತಾರೆ ಎಂಬ ಸೂಚನೆ ಸಿಗುತ್ತಿದ್ದಂತೆಯೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್ಸಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಜೈಪುರ (ರಾಜಸ್ಥಾನ): ಹಲವು ಜಾಗೃತಿಗಳ ಹೊರತಾಗಿ ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ಅಮಾಯಕರು ಜನರು ಸಾಕಷ್ಟು ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಸಾಮಾನ್ಯ ಜನರಿಗೆ ತಿಳಿಯದಂತೆ ಅವರನ್ನು ಈ ವಂಚನೆಗೆ ವಂಚಕರು ಸಿಲುಕಿಸುತ್ತಿದ್ದು, ಈ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ರಾಜಸ್ಥಾನ ಪೊಲೀಸ್ ಡಿಜಿಪಿ ರಾಜೀವ್ ಕುಮಾರ್ ಶರ್ಮಾ ಅವರ ಸೂಚನೆ ಮೇಲೆರೆ ಸೈಬರ್ ಅಪರಾಧ ವಿಭಾಗವು ಸೈಬರ್ ವಂಚನೆ ಕುರಿತು ಜನರಿಗೆ ಮತ್ತೊಮ್ಮೆ ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಿದ್ದು, ಈ ಬಗ್ಗೆ ಎಚ್ಚರಿಕೆವಹಿಸುವಂತೆ ಸೂಚಿಸಿದೆ. ಸೈಬರ್ ಅಪರಾಧಿಗಳು ಜನರನ್ನು ಗುರಿಯಾಗಿಸಿಕೊಂಡು ಸೈಬರ್ ವಂಚನೆ ಮಾಡಲು ನವೀನ ವಿಧಾನಗಳನ್ನು ಬಳಸುತ್ತಿದ್ದಾರೆ ಎಂದು ಸೈಬರ್ ಅಪರಾಧ ವಿಭಾಗದ ಡಿಐಜಿ ಶಾಂತನು ಕುಮಾರ್ ಸಿಂಗ್ ತಿಳಿಸಿದ್ದಾರೆ. ಆ ಹೊಸ ತಂತ್ರಗಳು ಯಾವುದು, ಜನರು ಎಲ್ಲಿ ಮೋಸ ಹೋಗುವುದು. ಅದರಿಂದ ರಕ್ಷಿಸಿಕೊಳ್ಳುವುದು ಹೇಗೆ ಎಂಬ ಕುರಿತು ಮಾಹಿತಿ ನೀಡಿದರು. ಪೊಲೀಸ್ ಪ್ರಧಾನ ಕಚೇರಿಯ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಹಾಲಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಪರ ಇಲ್ಲ ಎಂದು ನೇರ ಆರೋಪ ಮಾಡಿದರು. ಬೆಂಗಳೂರು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕೇವಲ ರಾಜಕೀಯ ಸ್ವಾರ್ಥಕ್ಕಾಗಿ ಮಾತ್ರ ಅವರು ಸಾಮಾಜಿಕ ನ್ಯಾಯದ ಜಪ ಮಾಡುತ್ತಿದ್ದಾರೆ ಎಂದು ಕಟುವಾಗಿ ಟೀಕಿಸಿದರು. ಅಹಿಂದ ನಾಯಕರು ಕುಮಾರಸ್ವಾಮಿ ಅವರ ಸರ್ಕಾರ ತೆಗೆದರು. ಹಾಗೆಯೇ ನಮ್ಮ ಪಕ್ಷವನ್ನು ಮುಗಿಸುವ ವ್ಯವಸ್ಥಿತ ಹುನ್ನಾರವನ್ನೂ ನಡೆಸಿದರು. ಇಂತಹ ಶಕ್ತಿಗಳಿಗೆ ಪಾಠ ಕಲಿಸಲೇಬೇಕೆಂದು ನಿರ್ಧರಿಸಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಕುಮಾರಸ್ವಾಮಿ ಅವರಿಗೆ ಸ್ವತಃ ನಾನೇ ಅನುಮತಿ ಕೊಟ್ಟೆ. ಇವತ್ತು ಕೇಂದ್ರ ಮಂತ್ರಿಯಾಗಿ ಕುಮಾರಸ್ವಾಮಿ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ರಾಜ್ಯ ಸರ್ಕಾರ ಸಹಕಾರ ಕೊಡುತ್ತಿಲ್ಲ. ಕುದುರೆಮುಖ ಕಂಪನಿ ಮತ್ತು ಹೆಚ್ಎಂಟಿ ವಿಚಾರವಾಗಿ ಅನಗತ್ಯ ತೊಂದರೆ ಕೊಡುತ್ತಿದ್ದಾರೆ. ರಾಜ್ಯದ ಹಿತದ ಬಗ್ಗೆ ಇವರು ರಾಜಕೀಯ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಹೊಸ ದಾಖಲೆ ಬರೆದಿದೆ. ಶುಕ್ರವಾರ ನಡೆದ ಲಿಖಿತ ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯಲ್ಲೇ ಅಭ್ಯರ್ಥಿಗಳ ಎಲ್ಲಾ ಓಎಂಆರ್ (OMR) ಶೀಟ್ಗಳನ್ನು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸುವ ಮೂಲಕ ಪಾರದರ್ಶಕತೆಗೆ ಸಾಕ್ಷಿಯಾಗಿದೆ. ಬೆಂಗಳೂರಿನ 2 ಮತ್ತು ಧಾರವಾಡದ 3 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಗಳಲ್ಲಿ ಪರೀಕ್ಷೆಗಳು ನಡೆದವು. ಪರೀಕ್ಷೆ ಮುಗಿದ ತಕ್ಷಣವೇ ಆಯಾ ಕೇಂದ್ರಗಳಿಂದ ಓಎಂಆರ್ ಉತ್ತರ ಪತ್ರಿಕೆಗಳನ್ನು ತಂದು ಸ್ಕ್ಯಾನ್ ಮಾಡಲಾಯಿತು. ಬಳಿಕ ಅವುಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಪರೀಕ್ಷಾ ಕೇಂದ್ರವಾರು ವೆಬ್ಸೈಟ್ಗೆ ಅಪ್ಲೋಡ್ ಮಾಡಲಾಗಿದೆ. “ಪರೀಕ್ಷೆ ಮುಗಿದ ಕ್ಷಣದಿಂದಲೇ ಕಾರ್ಯಪ್ರವೃತ್ತರಾದ ತಂಡವು ದಾಖಲೆ ಸಮಯದಲ್ಲಿ ಸ್ಕ್ಯಾನಿಂಗ್ ಪ್ರಕ್ರಿಯೆ ಮುಗಿಸಿದೆ. ಯಾರು ಬೇಕಾದರೂ ಈಗ ವೆಬ್ಸೈಟ್ನಲ್ಲಿ ತಮ್ಮ ಉತ್ತರ ಪತ್ರಿಕೆಗಳನ್ನು ವೀಕ್ಷಿಸಬಹುದು. ಇದು ಕೆಇಎ ಅಳವಡಿಸಿಕೊಂಡಿರುವ ಅತ್ಯಂತ ಪಾರದರ್ಶಕ ಕ್ರಮವಾಗಿದೆ”…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸಾಕಷ್ಟು ಹೋರಾಟ ಮಾಡಿದರೂ ತಲೆ ಕೆಡಿಸಿಕೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳು ಮತ್ತೆ ಹೋರಾಟದ ಹಾದಿ ತುಳಿಯಲು ಸಜ್ಜಾಗಿದ್ದಾರೆ. ಒಳ ಮೀಸಲಾತಿ ಗೊಂದಲದಿಂದ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರಕ್ಕೆ ಸ್ಪರ್ಧಾರ್ಥಿಗಳ ಹೋರಾಟ ಹೊಸ ಸಂಕಷ್ಟ ತಂದೊಡ್ಡಿದೆ. ಧಾರವಾಡದಲ್ಲಿ ಬೃಹತ್ ಪ್ರತಿಭಟನೆಗೆ ಬೆದರಿದ ರಾಜ್ಯ ಸರ್ಕಾರ ದಿಢೀರ್ ಸಂಪುಟ ಸಭೆ ನಡೆಸಿ ಒಂದು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸುವ ಭರವಸೆ ನೀಡಿತ್ತು. ಈಗ ಸರ್ಕಾರದ ಗಡುವು ಮುಗಿದರೂ ಅಧಿಸೂಚನೆ ಹೊರಬೀಳದ ಕಾರಣ ಸ್ಪರ್ಧಾರ್ಥಿಗಳು ಮತ್ತೆ ಹೋರಾಟದ ಹಾದಿ ತುಳಿದಿದ್ದಾರೆ. ಏ.8 ರಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಸಜ್ಜಾಗಿದ್ದ ಉದ್ಯೋಗಾಕಾಂಕ್ಷಿಗಳಿಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿತ್ತು. ಇದರ ವಿರುದ್ಧ ಸ್ಪರ್ಧಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ (ಏ.10) ಹೈಕೋರ್ಟ್ ಧಾರವಾಡ ಪೀಠವು ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ನೀಡಿರುವುದು ಸರ್ಕಾರವನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ. ನ್ಯಾಯಾಲಯದ ಷರತ್ತುಗಳೇನು? ಹುಬ್ಬಳ್ಳಿಯ ನೆಹರು ಮೈದಾನದಲ್ಲಿ…
Subscribe to Updates
Get the latest creative news from FooBar about art, design and business.