Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಲೋಕಭವನ ಹಾಗೂ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಪ್ರಾರಂಭವಾಗಿದ್ದು, ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್‌ ಮೂಲಕ ನಡೆಸುವುದಕ್ಕಾಗಿ ರಾಜ್ಯ ಸರ್ಕಾರ ಕಳೆದ ಅಧಿವೇಶನದಲ್ಲಿ ಒಪ್ಪಿಗೆ ಪಡೆದಿದ್ದ ‘ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌’ ವಿಧೇಯಕವನ್ನು ರಾಜ್ಯಪಾಲರು ಪರಿಶೀಲನೆಗಾಗಿ ಬಾಕಿ ಉಳಿಸಿಕೊಂಡಿದ್ದಾರೆ. ಕಳೆದ ಅಧಿವೇಶನದಲ್ಲಿ ಅಂಗೀಕಾರಗೊಂಡ 11 ವಿಧೇಯಕಗಳ ಪೈಕಿ, ‘ಇವ ನಮ್ಮವ ಇವ ನಮ್ಮವ’ ವಿಧೇಯಕವೂ ಸೇರಿದಂತೆ 10 ವಿಧೇಯಕಕ್ಕೆ ಮಾತ್ರ ಅಂಕಿತ ಹಾಕಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್‌ ಮೂಲಕ ನಡೆಸುವುದಕ್ಕಾಗಿ ಪಂಚಾಯತ್‌ ರಾಜ್‌ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ. ಈ ವಿಧೇಯಕಕ್ಕೆ ಸಂಬಂಧಪಟ್ಟಂತೆ ವಿಧಾನಸಭೆಯಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ಮಧ್ಯೆ ಭಾರಿ ಸಂಘರ್ಷ ಏರ್ಪಟ್ಟಿತ್ತು. ಐಟಿಬಿಟಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಪ್ರತಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿದ್ದವು. ಕಾಂಗ್ರೆಸ್‌ ಸರ್ಕಾರ ರಾಜ್ಯವನ್ನು ಮತ್ತೆ ಶಿಲಾಯುಗದತ್ತ ಕರೆದೊಯ್ಯುತ್ತಿದೆ ಎಂದು ವಿಪಕ್ಷಗಳು ಆಕ್ಷೇಪ ಎತ್ತಿದ್ದವು. ಆದರೆ,…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಜಮ್ಮು: ಹಿಂದೂಗಳ ಪವಿತ್ರ ಯಾತ್ರಾಸ್ಥಳ ಅಮರನಾಥಕ್ಕೆ ಯಾತ್ರೆ ಹೋಗಲು ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಏಪ್ರಿಲ್ 15ರಿಂದ ಮುಂಗಡ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ ಎಂದು ಶ್ರೀ ಅಮರನಾಥ ದೇಗುಲ ಮಂಡಳಿ ತಿಳಿಸಿದೆ. ವಾರ್ಷಿಕ ಯಾತ್ರೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದರ ಕುರಿತು ಮಂಡಳಿ ಸದ್ಯಕ್ಕೆ ಯಾವುದೇ ಖಚಿತ ಮಾಹಿತಿ ನೀಡಿಲ್ಲ. ಆದರೆ, ಯಾತ್ರೆಗಳಿಗೆ ಮುಂಗಡ ನೋಂದಣಿಯಿಂದ ಹಿಡಿದು ಆರೋಗ್ಯ ತಪಾಸಣೆ ಹಾಗೂ ಅಲ್ಲಿಗೆ ಹೋಗಿ ಏನು ಮಾಡಬೇಕು, ಏನು ಮಾಡಬಾರದು ಎಂಬ ಸಂಪೂರ್ಣ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಯಾತ್ರಾರ್ಥಿಗಳು ಅಧಿಕೃತ ಶ್ರೀ ಅಮರನಾಥ ದೇಗುಲ ಮಂಡಳಿ (SASB) ವೆಬ್‌ಸೈಟ್ jksasb.nic.in ಅಥವಾ ಭಾರತದಾದ್ಯಂತ ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಯೆಸ್ ಬ್ಯಾಂಕ್‌ನ 554 ಶಾಖೆಗಳಲ್ಲಿ ಮುಂಗಡ ನೋಂದಣಿ ಮಾಡಿಕೊಳ್ಳಬಹುದು ಎಂದು ಮಂಡಳಿ ತಿಳಿಸಿದೆ. ಈ ಸಾಲಿನ ವಾರ್ಷಿಕ ಅಮರನಾಥ ಯಾತ್ರೆಗೆ ಏ.15ರಿಂದ ದೇಶಾದ್ಯಂತ 554 ಗೊತ್ತುಪಡಿಸಿದ ಬ್ಯಾಂಕ್ ಶಾಖೆಗಳಲ್ಲಿ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಪಂಚಾಂಗ ದಿನಾಂಕ : 11-04-2026 ವಾರ : ಶನಿವಾರ ಸಂವತ್ಸರ : ಶ್ರೀ ಪರಾಭವ ನಾಮ ಆಯನ : ಉತ್ತರಾಯಣ ಪಕ್ಷ : ಕೃಷ್ಣ ತಿಥಿ : ನವಮಿ ನಕ್ಷತ್ರ : ಉತ್ತರಾಷಾಢ ಸೂರ್ಯೋದಯ : ಮುಂಜಾನೆ 06:07 ಗಂಟೆಗೆ ಅಮೃತ ಕಾಲ : ಮುಂಜಾನೆ 06:07 ರಿಂದ 07:40ರ ವರೆಗೆ ದುರ್ಮುಹೂರ್ತ : ಬೆಳಗ್ಗೆ 7:43 ರಿಂದ 8:31ರ ತನಕ ರಾಹುಕಾಲ : ಬೆಳಗ್ಗೆ 09:13 ರಿಂದ 10:46ರ ವರೆಗೆ ಸೂರ್ಯಾಸ್ತ : ಸಂಜೆ 06:30 ಗಂಟೆಗೆ ರಾಶಿ ಭವಿಷ್ಯ ಮೇಷ : ಇಂದು, ಮತ್ತೊಂದು ಒತ್ತಡದ ದಿನ. ನೀವು ಯಾವುದೇ ಕಛೇರಿಯಲ್ಲಿ ಮತ್ತು ಮನೆಯಲ್ಲಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಜ್ಜಾಗಿದ್ದೀರಿ. ನಿಮ್ಮ ಮೇಲಧಿಕಾರಿಗಳು ನಿಮಗೆ ಕೆಲ ರಿಯಾಯಿತಿಗಳನ್ನು ನೀಡಬಹುದು, ಮತ್ತು ಇದು ವಿಷಯಗಳನ್ನು ಕೊಂಚ ಸುಲಭಗೊಳಿಸುತ್ತದೆ. ನೀವು ಹಿರಿಯರಿಂದ ಮೌಲ್ಯಯುತ ಮಾರ್ಗದರ್ಶನ ಪಡೆಯುತ್ತೀರಿ. ವೃಷಭ : ಇದು ನಿಮ್ಮ ಆಡಳಿತ ಮತ್ತು ಸಂಘಟನಾ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಅದ್ಭುತ ದಿನ. ಹೊರಗಡೆ ಹೋಗಿ ಮತ್ತು ನಿಮ್ಮಲ್ಲಿರುವ ಎಲ್ಲವನ್ನೂ ನಿಮ್ಮ ಕೆಲಸದ ಸ್ಥಳ ಅಥವಾ ವ್ಯಾಪಾರದಲ್ಲಿ ಹಾಕಿರಿ.…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಕಾಂತಾರ ಚಾಪ್ಟರ್-1 ಸಿನಿಮಾದ ದೈವಪಾತ್ರದ ಕುರಿತು ಅಪಮಾನಕಾರಿ ಸನ್ನೆ ಮಾಡಿ ಮಾತನಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ದೂರುದಾರರೊಂದಿಗೆ ಚರ್ಚಿಸಿ ಅವರಿಗೆ ತೃಪ್ತಿಯಾಗುವ ಭಾಷೆಯಲ್ಲಿ ಪರಿಷ್ಕೃತ ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವುದಾಗಿ ನಟ ರಣವೀರ್ ಸಿಂಗ್ ಹೈಕೋರ್ಟ್​ಗೆ ತಿಳಿಸಿದ್ದಾರೆ. ಗೋವಾದಲ್ಲಿ ಕೆಲ ತಿಂಗಳ ಹಿಂದೆ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್ಎಫ್ಐ) ಕಾಂತಾರ ಚಾಪ್ಟರ್-1 ಚಿತ್ರದ ಚಾಮುಂಡಿ ದೈವಕ್ಕೆ ಅಪಮಾನ ಮಾಡಿದ ಆರೋಪದಡಿ ದಾಖಲಾಗಿರುವ ಖಾಸಗಿ ದೂರು ಮತ್ತು ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ, ರಣವೀರ್ ಸಿಂಗ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ವಿಚಾರಣೆ ನಡೆಸಿದರು. ವಿಚಾರಣೆಯ ವೇಳೆ ದೂರುದಾರರ ಪರ ವಕೀಲರು, ಅರ್ಜಿದಾರ ರಣವೀರ್ ಸಿಂಗ್ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಪಶ್ಚಾತ್ತಾಪವಿಲ್ಲ. ದೂರು ನೀಡಿರುವುದೇ ತಪ್ಪು ಎಂಬಂತೆ ಬಿಂಬಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಅರ್ಜಿದಾರರ ಪರ ವಕೀಲರು, ದೂರುದಾರರೊಂದಿಗೆ ಚರ್ಚಿಸಿ ಅವರಿಗೆ ತೃಪ್ತಿಯಾಗುವ ಭಾಷೆಯಲ್ಲಿಯೇ ಪರಿಷ್ಕೃತ ಪ್ರಮಾಣ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಪ್ರಕಟವಾದ ಕೆಲವೇ ಗಂಟೆಗಳಲ್ಲೇ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ನಡೆದಿದೆ. ಮೃತಳನ್ನು ತನುಶ್ರೀ (17) ಎಂದು ಗುರುತಿಸಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಆಕೆ ಮೂರು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾಳೆ ಎಂಬುದು ತಿಳಿದುಬಂದಿದ್ದು, ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆ ಗುರುವಾರ ಮಧ್ಯಾಹ್ನ ಸುಮಾರು 3.30ರ ವೇಳೆಗೆ ನಡೆದಿದೆ. ಫಲಿತಾಂಶ ಪ್ರಕಟವಾದ ಬಳಿಕ ಮನೆಯಲ್ಲಿದ್ದ ವೇಳೆ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ. ಘಟನೆಯ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಹಾಲ್ ಟಿಕೆಟ್ ಮಾತ್ರ ಹಾಸಿಗೆಯ ಮೇಲಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ತನಿಖಾಧಿಕಾರಿಗಳ ಪ್ರಾಥಮಿಕ ವಿಚಾರಣೆಯ ಪ್ರಕಾರ ಇದು ಸ್ಪಷ್ಟವಾದ ಆತ್ಮಹತ್ಯೆ ಪ್ರಕರಣವಾಗಿದ್ದು, ಫಲಿತಾಂಶದ ಬಳಿಕ ಉಂಟಾದ ಮಾನಸಿಕ ಒತ್ತಡವೇ ಕಾರಣವಾಗಿರಬಹುದು ಎಂದು…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್​​ ದಂಡ ವಿಧಿಸಿದೆ. ಅರ್ಜಿದಾರರಿಗೆ 1 ಲಕ್ಷ ದಂಡ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಪಿಐಎಲ್​ ಸಲ್ಲಿಕೆ ಮಾಡಿರುವವರು, ಸರ್ಕಾರದ ಆದೇಶದ ವಿವರ ಒದಗಿಸದೇ ಕೇವಲ ಪತ್ರಿಕೆ ವರದಿ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಹಿನ್ನೆಲೆ ಅರ್ಜಿದಾರರಾದ ಹೆಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್​​ಗೆ 1 ಲಕ್ಷ ರೂಪಾಯಿ ದಂಡ ವಿಧಿಸಿರುವ ಹೈಕೋರ್ಟ್​​, ಪಿಐಎಲ್ ವಜಾಗೊಳಿಸಿ ಆದೇಶಿಸಿದೆ. SSLC ತೃತೀಯ ಭಾಷೆಗಳ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕನ್ನಡಪರ ಸಂಘಟನೆಗಳು ಸ್ವಾಗತಿಸಿದ್ದರೂ, ಬಿಜೆಪಿಯ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಸಂಕಷ್ಟದಲ್ಲಿರುವ ಆಟೋ ಚಾಲಕರ ರಕ್ಷಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ ಅವರು, ತಕ್ಷಣವೇ ಆಟೋ ಗ್ಯಾಸ್ ಪೂರೈಕೆ ಸಮಸ್ಯೆ ಪರಿಹರಿಸುವಂತೆ ಶುಕ್ರವಾರ ಆಗ್ರಹಿಸಿದರು. ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ನಂತರ ಆಟೋ ಗ್ಯಾಸ್ ಪೂರೈಕೆ ಸಮಸ್ಯೆಗೆ ಸಂಬಂಧಿಸಿದಂತೆ ಸಚಿವರು ಇಂದು ಹಿರಿಯ ಅಧಿಕಾರಿಗಳು ಮತ್ತು ಸರ್ಕಾರಿ ತೈಲ ಹಾಗೂ ಅನಿಲ ಕಂಪನಿಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಸುಧಾರಣೆ ಆಗಿದೆ. ಆದರೆ ಆಟೋ ಗ್ಯಾಸ್ ಪೂರೈಕೆಯಲ್ಲಿ ಯಾವುದೇ ಸುಧಾರಣೆ ಆಗಿಲ್ಲ ಎಂದರು. ಬೆಂಗಳೂರು ಮತ್ತು ರಾಜ್ಯದ ಇತರ ಹಲವಾರು ಸ್ಥಳಗಳಲ್ಲಿ ಆಟೋ ಎಲ್‌ಪಿಜಿ ಕೊರತೆಯಿಂದಾಗಿ ಆಟೋ ಸೇವೆಗಳಲ್ಲಿ ಅಡಚಣೆಗಳು ಕಂಡುಬರುತ್ತಿವೆ. ಅನೇಕ ಪ್ರದೇಶಗಳಲ್ಲಿ ಬಂಕ್ ಹೊರಗೆ ಆಟೋಗಳ ಕಿಲೋ ಮೀಟರ್ ಗಟ್ಟಲೇ ಕ್ಯೂ ನಿಂತಿರುವ ದೃಶ್ಯ ಕಂಡುಬಂದಿದ್ದು, ಚಾಲಕರು ಗ್ಯಾಸ್ ಗಾಗಿ ಗಂಟೆಗಟ್ಟಲೆ ಕಾಯುತ್ತಿದ್ದಾರೆ ಎಂದರು. “ರಾಜ್ಯದಲ್ಲಿರುವ ಸುಮಾರು…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷದ ನಡುವಿನ ವರ್ಷದ ಮೊದಲ ರಾಜಕೀಯ ಪರೀಕ್ಷೆ ಗುರುವಾರ ಮುಕ್ತಾಯಗೊಂಡಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆ ಶಾಂತವಾಗಿ ಮುಗಿದಿದೆ. ಇದರ ಬೆನ್ನಲ್ಲೆ ರಾಜ್ಯದಲ್ಲಿ ಚುನಾವಣೆ ಸೀಸನ್ ಆರಂಭವಾದಂತೆ ಕಾಣುತ್ತದೆ. ಪಂಚಾಯತ್‌ಗಳು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತು ಅನೇಕ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳು 2026 ರಲ್ಲಿ ನಡೆಯುವ ನಿರೀಕ್ಷೆಯಿದೆ. 2028 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಸ್ತಿತ್ವವನ್ನು ಬಲಪಡಿಸಲು ಎರಡೂ ಪಕ್ಷಗಳು ಈಗಾಗಲೇ ಸಭೆಗಳು ಮತ್ತು ಕಾರ್ಯತಂತ್ರಗಳೊಂದಿಗೆ ಸಜ್ಜಾಗಿವೆ. ಈ ವರ್ಷ, ಬೆಂಗಳೂರಿನಲ್ಲಿರುವ ಸುಮಾರು 6,000 ಗ್ರಾಮ ಪಂಚಾಯತ್‌ಗಳು, 239 ತಾಲ್ಲೂಕು ಮತ್ತು 31 ಜಿಲ್ಲಾ ಪಂಚಾಯತ್‌ಗಳಿಗೆ ಚುನಾವಣೆಗಳು ನಡೆಯಲಿವೆ. ಮೈಸೂರು, ದಾವಣಗೆರೆ, ಮಂಗಳೂರು, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಮಹಾನಗರ ಪಾಲಿಕೆಗೂ ಚುನಾವಣೆಗಳು ನಡೆಯಲಿವೆ. ಈ ವರ್ಷ 186 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳು ನಡೆಯುವ ನಿರೀಕ್ಷೆಯಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಈಗ GBA)…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಮಥುರಾ: ವೃಂದಾವನದ ಯಮುನಾ ನದಿಯಲ್ಲಿ ಶುಕ್ರವಾರ ಮಧ್ಯಾಹ್ನ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿದ್ದು, ಕನಿಷ್ಠ ಆರು ಜನ ಮೃತಪಟ್ಟಿದ್ದಾರೆ ಮತ್ತು ಹಲವಾರು ಜನ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ಅವರು, ಈ ಸಾವುನೋವುಗಳನ್ನು ದೃಢಪಡಿಸಿದ್ದು, ಹಡಗಿನಲ್ಲಿದ್ದ ಎಲ್ಲಾ ಪ್ರವಾಸಿಗರು ಪಂಜಾಬ್ ಮೂಲದವರು ಎಂದು ಹೇಳಿದ್ದಾರೆ. “ಆರು ಶವಗಳನ್ನು ಹೊರತೆಗೆಯಲಾಗಿದೆ. ಇಲ್ಲಿಯವರೆಗೆ ಹದಿನಾರರಿಂದ ಹದಿನೇಳು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಕಾಣೆಯಾದವರನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರೆದಿವೆ” ಎಂದು ಅವರು ತಿಳಿಸಿದ್ದಾರೆ. ದೋಣಿಯಲ್ಲಿ ಎರಡು ಡಜನ್‌ಗೂ ಹೆಚ್ಚು ಪ್ರವಾಸಿಗರಿದ್ದರು ಎಂದು ಹೇಳಲಾಗಿದ್ದು, ಇಲ್ಲಿಯವರೆಗೆ ಸುಮಾರು 15 ಜನರನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ(SDRF) ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ಹಾಗೂ ಸುಮಾರು 50 ಸ್ಥಳೀಯ ಡೈವರ್‌ಗಳ ತಂಡಗಳೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು, ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ, ಅವತ್ತು ಬಕೆಟ್ ಇಟ್ಟಿದ್ದರೇ ತುಂಬೋಗೋದು ಎಂದು ಕುಟುಕಿದ್ದಾರೆ. ಇಂದು ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಅವರು, ಚಾಮುಂಡಿ ತಾಯಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜೆಡಿಎಸ್​ನಲ್ಲಿದ್ದಾಗ 58 ಸೀಟು ಗೆದ್ದಿದ್ದೆವು ಅಂತಾರೆ. 1999ರಲ್ಲೂ ಅವರು ಅಧ್ಯಕ್ಷರಾಗಿದ್ದರು. ಆಗ ಎಷ್ಟು ಸೀಟು ಗೆದ್ದಿದ್ದರು? ಮಹದೇವಪ್ಪ, ಸಿದ್ದರಾಮಯ್ಯ ಇಬ್ಬರೂ ಮನೆಗೆ ಬಂದು ಕಣ್ಣೀರಿಟ್ಟಿದ್ದರು. ಅವರು ಕಣ್ಣೀರು ಹಾಕುವಾಗ ಅಲ್ಲಿ ಬಕೆಟ್ ಇದ್ದಿದ್ದರೆ ತುಂಬಿಹೋಗುತ್ತಿತ್ತು. ಸಿದ್ದರಾಮಯ್ಯನವರು ಒಮ್ಮೆ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು. ರಾಜಕೀಯವೇ ಸಾಕು ಎಂದು ಕಣ್ಣೀರಿಟ್ಟದ ಸಿದ್ದರಾಮಯ್ಯ ಅವರಿಗೆ ನಮ್ಮ ತಂದೆ, ದೇವೇಗೌಡರು ಸಮಾಧಾನಪಡಿಸಿದ್ದರು ಎಂದು ಹಿಂದಿನ ಘಟನೆಯನ್ನು ಕುಮಾರಸ್ವಾಮಿ ಹಂಚಿಕೊಂಡರು. ಹಿಂದೆ ಚುನಾವಣೆಯಲ್ಲಿ ದೇವೇಗೌಡರು, ನಾನು, ರೇವಣ್ಣ, ಮಹದೇವಪ್ಪ, ಸಿದ್ದರಾಮಯ್ಯ…

Read More