Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಮಂಡ್ಯ: ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಈಗಾಗಲೇ 1.3 ಲಕ್ಷ ಕೋಟಿ ರೂ.ಕ್ಕಿಂತ ಹೆಚ್ಚು ಹಣವನ್ನು ವಿತರಿಸಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದರು. ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬುಧವಾರ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು, ಸವಾಲುಗಳು ಜೀವನದ ಒಂದು ಭಾಗವಾಗಿದ್ದರೂ, ಸರ್ಕಾರವು ಒದಗಿಸುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಮುಂದೆ ಸಾಗಬೇಕು ಎಂದು ಹೇಳಿದರು. ಇದೇ ವೇಳೆ ಸಮಾಜದಲ್ಲಿ ಮಹಿಳೆಯರ ಪಾತ್ರದ ಮಹತ್ವವನ್ನು ಒತ್ತಿಹೇಳಿದ ಅವರು, ಸ್ವಾತಂತ್ರ್ಯಕ್ಕೂ ಮುನ್ನವೇ ಮಹಿಳೆಯರಿಗೆ ಪ್ರತಿನಿಧಿತ್ವ ಮತ್ತು ಮನ್ನಣೆ ದೊರಕಿತ್ತು.. “ಹೆಣ್ಣು ಮಗು ಶಿಕ್ಷಣ ಪಡೆದರೆ ಒಂದು ಶಾಲೆ ತೆರೆದಂತೆಯೇ” ಎಂಬ ಸಂದೇಶದಡಿ ಮಹಿಳಾ ಶಿಕ್ಷಣಕ್ಕೆ ಸರ್ಕಾರ ವಿಶೇಷ ಒತ್ತು ನೀಡುತ್ತಿದೆ.…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ದೇಶಾದ್ಯಂತ ಆಟೋ ಎಲ್ ಪಿಜಿ ಕೊರತೆ ಎದುರಾಗಿದೆ. ಬೆಂಗಳೂರಿನಲ್ಲಿ ಎಲ್‌ಪಿಜಿ ಗ್ಯಾಸ್ ಸಿಗದೆ ಆಟೋ ಚಾಲಕರು ಪರದಾಡುತ್ತಿದ್ದಾರೆ. ದಿನದ ದುಡಿಮೆ ನಂಬಿ ಜೀವನ ನಡೆಸುವ ಆಟೋ ಚಾಲಕರ ಕಷ್ಟಕ್ಕೆ ಮಿಡಿದ ಹಿರಿಯ ನಟ ವಿನೋದ್ ರಾಜ್ ಅವರು ಸಹಾಯ ಹಸ್ತ ಚಾಚಿದ್ದಾರೆ. ಬೆಂಗಳೂರಿನ ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ತಾಯಿ ಡಾ.ಲೀಲಾವತಿ ಅವರ ಸಮಾಧಿ ಬಳಿ ವಿನೋದ್ ರಾಜ್ ಅವರು ನೂರಾರು ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಣೆ ಮಾಡಿ, ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ. ತಾಯಿ ಹೆಸರಿನಲ್ಲಿ ಆಟೋ ಚಾಲಕರಿಗೆ ಊಟ ಹಾಕಿ, ದಿನಸಿ ಕಿಟ್ ವಿತರಣೆ ಮಾಡಿದ್ದಾರೆ. ಆಟೋ ಚಾಲಕರ ಸಂಕಷ್ಟಕ್ಕೆ ತಮ್ಮ ಕೈಲಾದ ನೆರವು ಮಾಡುವ ಮ‌ೂಲಕ ಮಾನವೀಯತೆ ಮೆರೆದಿದ್ದಾರೆ. ನಟ ವಿನೋದ್ ರಾಜ್ ಕಾರ್ಯಕ್ಕೆ ಆಟೋ ಚಾಲಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ಈ ಬಾರಿ ದಾಖಲೆಯ ಹೆಚ್ಚಳವಾಗಿದೆ. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದು, ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ವರ್ಷ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ ಕಂಡು ಬಂದಿದೆ. ದಿಶಾ ರಾಜ್ಯಕ್ಕೆ ಫಸ್ಟ್ ವಾಣಿಜ್ಯ‌ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600 ಅಂಕಗಳಿಗೆ 600 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶವನ್ನು ನೋಡಲು ಅಧಿಕೃತ ವೆಬ್‌ಸೈಟ್‌ https://karresults.nic.in…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಸಿದ್ದರಾಮಯ್ಯ ಬಣದ ನಾಯಕರು ಮತ್ತು ಶಾಸಕರು ಏ.12ರಿಂದ 2 ದಿನಗಳ ಕಾಲ ದೆಹಲಿಗೆ ಭೇಟಿ ನೀಡಲು ಸಜ್ಜಾಗುತ್ತಿದ್ದು, ಇದರ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ವಿಚಾರ ಕುರಿತ ಚರ್ಚೆ ಗರಿಗೆದರಿದೆ. ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ನೇತೃತ್ವದ ತಂಡದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ 30-35 ಶಾಸಕರು ದೆಹಲಿಗೆ ಭೇಟಿ ನೀಡುತ್ತಿದ್ದಾರೆಂದು ಮೂಲಗಳು ತಿಳಿಸಿವೆ. ಈ ತಂಡವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಮತ್ತು ಕರ್ನಾಟಕದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಲು ಚಿಂತನೆ ನಡೆಸಿದ್ದಾರೆಂದು ತಿಳಿದುಬಂದಿದೆ. ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಒಪ್ಪಿಗೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದು, ಇದರ ಬೆನ್ನಲ್ಲೇ ಸಚಿವರಾಗಲು ಶಾಸಕರು ಲಾಬಿ ನಡೆಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ. ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯಾಗಿ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ಆರಂಭವಾಗಿದ್ದು, ಸಿಎಂ ಬದಲಾವಣೆ ಮತ್ತು ಸಂಪುಟ ಪುನಾರಚನೆ ಸೇರಿದಂತೆ ಏನೇ ರಾಜಕೀಯ ಬದಲಾವಣೆಗಳಿದ್ದರೂ ಕಾಂಗ್ರೆಸ್‌ನಲ್ಲಿ ನಾಲ್ವರ ನಿರ್ಧಾರವೇ ಅಂತಿಮವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಹೇಳಿದ್ದಾರೆ. ಇಂದು ನಗರದಲ್ಲಿ ಸಿದ್ದರಾಮಯ್ಯನವರೇ ಮುಂದಿನ ಎರಡು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ ಅವರು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ನಾಯಕತ್ವ ಬದಲಾವಣೆ ವಿಚಾರವಾಗಿ ನಾನು ಅಥವಾ ಬೇರೆ ಯಾರೇ ಆಗಲಿ ಏನೇ ಹೇಳಿಕೆ ನೀಡಿದರೂ ಅದು ಅಪ್ರಸ್ತುತ. ಅದಕ್ಕೆ ಯಾವುದೇ ಮಹತ್ವ ಇರುವುದಿಲ್ಲ ಎಂದರು. ನಾಯಕತ್ವ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ನಿರ್ಧಾರ ಮಾಡುತ್ತಾರೆ. ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಅದುವೇ ಅಂತಿಮ ಎಂದರು. ಇದೇ ವೇಳೆ ಗ್ಯಾಸ್ ಸಮಸ್ಯೆ ಬಗ್ಗೆ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೇಕಾಗುವ ಪದಾರ್ಥಗಳು… ಮೊಸರು – 1 ಬಟ್ಟಲು ನೀರು – 2 ಬಟ್ಟಲು ಉಪ್ಪು – ರುಚಿಗೆ ತಕ್ಕಷ್ಟು ಜೀರಿಗೆ ಪುಡಿ – ½ ಚಮಚ ಶುಂಠಿ (ತುರಿದದ್ದು) – ½ ಚಮಚ ಕರಿಬೇವು – ಸ್ವಲ್ಪ ಕೊತ್ತಂಬರಿ ಸೊಪ್ಪು – ಸ್ವಲ್ಪ ಹಸಿಮೆಣಸಿನಕಾಯಿ – 1 ಮಾಡುವ ವಿಧಾನ… ಒಂದು ಬಟ್ಟಲಿನಲ್ಲಿ ಮೊಸರು ಹಾಗೂ ನೀರನ್ನು ಮಿಕ್ಸಿ ಜಾರ್‌ಗೆ ಹಾಕಿಕೊಳ್ಳಿ, ಚೆನ್ನಾಗಿ ಗ್ರೈಂಡ್ ಮಾಡಿ. ಮಜ್ಜಿಗೆ ಸಿದ್ಧಪಿಡಿಸಿಕೊಂಡು ಒಂದು ಪಾತ್ರೆಗೆ ಹಾಕಿಕೊಳ್ಳಿ. ನಂತರ ಅದಕ್ಕೆ ಉಪ್ಪು, ಜೀರಿಗೆ ಪುಡಿ, ಸಣ್ಣಗೆ ಕತ್ತರಿಸಿಕೊಂಡ ಶುಂಠಿ, ಹಸಿಮೆಣಸಿನಕಾಯಿ, ಕರಿಬೇವು, ಕೊತ್ತಂಬರಿ ಸೊಪ್ಪು ಹಾಕಿ ಮಿಶ್ರಣ ಮಾಡಿದರೆ, ರುಚಿಕರವಾದ ಮಾಸಾಲಾ ಮಜ್ಜಿಗೆ ಸವಿಯಲು ಸಿದ್ಧ.

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಇಂದಿನ ವೇಗದ ಜೀವನದಲ್ಲಿ “15 ನಿಮಿಷಗಳಲ್ಲಿ ಹೊಳೆಯುವ ಚರ್ಮ” ಎಂಬ ಭರವಸೆ ಮಾತುಗಳು ಎಲ್ಲೆಡೆ ಕೇಳಿ ಬರುತ್ತವೆ. ಆದರೆ, ಇಂತಹ ತಾತ್ಕಾಲಿಕ ಪರಿಹಾರಗಳ ನಡುವೆ ಶತಮಾನಗಳ ಹಿಂದಿನಿಂದಲೇ ಬಳಸಲಾಗುತ್ತಿರುವ ಮುಲ್ತಾನಿ ಮಿಟ್ಟಿಯ ಮಹತ್ವ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಪ್ರಕೃತಿಯ ಮಡಿಲಿನಿಂದ ಬಂದ ಈ ಸರಳ ಆದರೆ ಶಕ್ತಿಶಾಲಿ ವಿಧಾನ, ಕೇವಲ ಮೇಲ್ಮೈಯಲ್ಲಿ ಚರ್ಮವನ್ನು ಹೊಳೆಯುವಂತೆ ಮಾಡುವುದಲ್ಲ ಅದರ ಒಳಗಿನ ಸಮತೋಲನವನ್ನು ಪುನಃಸ್ಥಾಪಿಸುವ ಕಾರ್ಯ ಮಾಡುತ್ತದೆ. ಮುಲ್ತಾನಿ ಮಿಟ್ಟಿ ನಮ್ಮ ಪೂರ್ವಿಕರ ಸೌಂದರ್ಯ ರಹಸ್ಯಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಕಯೋಲಿನ್, ಬೆಂಟೋನೈಟ್ ಮುಂತಾದ ಮಿನರಲ್‌ಗಳೊಂದಿಗೆ ಗುಲಾಬಿ ಹೂವು, ಚಂದನ, ಬೇವು, ಅರಿಶಿನ, ಖಸ್ (ವೆಟಿವರ್), ದಾಸವಾಳ ಸೇರಿ ಮುಂತಾದ ಸಸ್ಯೌಷಧಿಗಳನ್ನು ಸೇರಿಸಿ ತಯಾರಿಸಲಾಗುವ ಈ ಮಿಶ್ರಣಗಳು ಚಿಕಿತ್ಸಾ ಗುಣಗಳಿಂದ ಕೂಡಿದ ನೈಸರ್ಗಿಕ ಸಂಪತ್ತಾಗಿದೆ. ಮುಲ್ತಾನಿ ಮಿಟ್ಟಿ ಸ್ವಭಾವತಃ ಡಿಟಾಕ್ಸಿಫೈ ಮಾಡುವ ಗುಣ ಹೊಂದಿದೆ. ಇದು ಚರ್ಮದ ರಂಧ್ರಗಳಲ್ಲಿ ಇರುವ ಮಲಿನತೆ, ಹೆಚ್ಚುವರಿ ಎಣ್ಣೆ, ಧೂಳು, ಮತ್ತು ಪರಿಸರದ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನಟಿ ತ್ರಿಶಾ ಅವರ ಬಗ್ಗೆ ಕಳೆದ ಕೆಲವು ವಾರಗಳಿಂದ ಹಲವಾರು ಸುದ್ದಿಗಳು ಕೇಳಿ ಬರುತ್ತಲೇ ಇವೆ. ಸ್ಟಾರ್ ನಟಿಯಾಗಿ ಸಿನಿಮಾ ಇಂಡಸ್ಟ್ರಿಯಲ್ಲಿ ಇಂದಿಗೂ ಬೇಡಿಕೆಯಲ್ಲಿರುವ ತಮಿಳು ಚೆಲುವೆ ಬಗ್ಗೆ ದಿನಕ್ಕೊಂದರಂತೆ ವದಂತಿಗಳು ಕೇಳಿ ಬರುತ್ತಲೇ ಇವೆ. ಚೆನ್ನೈನಲ್ಲಿ ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಅವರ ಜೊತೆ ವಿವಾಹ ಆರತಕ್ಷತೆಯಲ್ಲಿ ಕಾಣಿಸಿಕೊಂಡಾಗಿನಿಂದಲೂ ತ್ರಿಶಾ ಕೃಷ್ಣನ್ ಸುದ್ದಿಯಲ್ಲಿದ್ದಾರೆ. ವಿಜಯ್ ಪತ್ನಿ ಸಂಗೀತ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಕೆಲವು ದಿನಗಳ ನಂತರ ತ್ರಿಶಾ ಮತ್ತು ವಿಜಯ್ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಸಮಯ ಕೂಡ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿತು. ಈ ನಡುವೆ ನಟಿ ತ್ರಿಶಾ ನಟನೆಗೆ ನಿವೃತ್ತಿ ಘೋಷಿಸ್ತಾರೆ, ಮುಂದೆ ರಾಜಕೀಯಕ್ಕೆ ಬರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಅಷ್ಟೇ ಏಕೆ ತ್ರಿಶಾ ಅವರು ಶ್ರೀಮಂತ ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಾರೆ ಎನ್ನಲಾಗಿತ್ತು. ತಮ್ಮ ಕುರಿತಾಗಿ ಸಾಕಷ್ಟು ವದಂತಿಗಳು ಕೇಳಿ ಬರುತ್ತಿರುವುದರ ಹೊರತಾಗಿಯೂ ಕೂಡಾ ನಟಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಆಪ್ತರೊಂದಿಗೆ ಸುತ್ತಾಟ, ಸೆಲೆಬ್ರೇಷನ್, ಪಾರ್ಟಿ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಏಪ್ರಿಲ್ 9 ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಳಿಗ್ಗೆ ಬಾಗಲಕೋಟೆಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಸುವ ಮೂಲಕ ತಮ್ಮ ಪ್ರಚಾರವನ್ನು ಮುಕ್ತಾಯಗೊಳಿಸಲಿದ್ದಾರೆ. ಕಾಂಗ್ರೆಸ್ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್‌ವೈ ಮೇಟಿ ನಿಧನದ ನಂತರ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿದೆ ಉಪಚುನಾವಣೆ ನಡೆಯುತ್ತಿದ್ದು ಬಹಿರಂಗ ಪ್ರಚಾರ ಮಂಗಳವಾರ ಸಂಜೆ 5 ಗಂಟೆಗೆ ಕೊನೆಗೊಳ್ಳಲಿದೆ. ತಮ್ಮ ಹೈ-ವೋಲ್ಟೇಜ್ ಪ್ರಚಾರದ ಸಮಯದಲ್ಲಿ, ಸಿಎಂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದರು. ತೆರಿಗೆ ವಿಕೇಂದ್ರೀಕರಣದಲ್ಲಿ ಕೇಂದ್ರವು ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಮತ್ತು ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯದೊಂದಿಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿದರು. ಅವರು ತಮ್ಮ ಸರ್ಕಾರದ ಐದು ಭರವಸೆಗಳ ಅನುಷ್ಠಾನ ಮತ್ತು ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಅಹಿಂದ ನಾಯಕ ಎಂದೇ ಗುರುತಿಸಿಕೊಂಡಿರುವ 77 ವರ್ಷದ ಸಿದ್ದರಾಮಯ್ಯ ಎರಡೂಕ್ಷೇತ್ರಗಳಲ್ಲೂ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಟೆಹರಾನ್: ಸದ್ಯ ನಡೆಯತ್ತಿರುವ ಸಂಘರ್ಷದಲ್ಲಿ ನಾನು ಸೇರಿದಂತೆ 14 ಮಿಲಿಯನ್ ಇರಾನಿಯನ್ನರು ಸ್ವಯಂ ಪ್ರೇರಿತರಾಗಿ ತಮ್ಮ ಪ್ರಾಣ ತ್ಯಾಗ ಮಾಡಲು ಸಿದ್ಧರಿದ್ದೇವೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಹೇಳಿದ್ದಾರೆ. ಹಾರ್ಮುಜ್ ಜಲಸಂಧಿಯ ಮೇಲೆ ತನ್ನ ನಿರ್ಬಂಧವನ್ನು ತೆರವುಗೊಳಿಸದಿದ್ದರೆ ಇರಾನಿನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಗೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಸೌದ್ ಪೆಜೆಶ್ಕಿಯಾನ್ ಈ ರೀತಿಯ ಪೋಸ್ಟ್ ಮಾಡಿದ್ದಾರೆ. 14 ಮಿಲಿಯನ್ ಅಂಕಿಅಂಶ ರಾಜ್ಯ ಮಾಧ್ಯಮ ಈ ಹಿಂದೆ ವರದಿ ಮಾಡಿದ ಅಂದಾಜುಗಳಿಗಿಂತ ದುಪ್ಪಟ್ಟು ಆಗಿದೆ. ಇದು ಸಂಘರ್ಷವು ಮುಂದುವರೆದಂತೆ ಪ್ರಚಾರಗಳು ಮತ್ತು ಮಾಧ್ಯಮದ ಮೂಲಕ ಸಂಗ್ರಹಿಸಿದ ಸ್ವಯಂಸೇವಕರ ಸಂಖ್ಯೆಯನ್ನು ಉಲ್ಲೇಖಿಸಿದೆ.

Read More