Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತಂತೆ ರಾಜ್ಯ ರಾಜಕೀಯದಲ್ಲಿ ಆಗಾಗ ಕೇಳಿಬರುತ್ತಿರುವ ಊಹಾಪೋಹಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇನ್ನೂ ಎರಡು ವರ್ಷಗಳ ಕಾಲ ತಮ್ಮ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದ ಕುರಿತಾದ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು. “2013ರಲ್ಲಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ತಮ್ಮ ಐದು ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರು. ಅದೇ ರೀತಿ 2023ರ ಚುನಾವಣೆಯ ನಂತರವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಹೈಕಮಾಂಡ್ ಘೋಷಿಸಿದೆ. ಪ್ರಸ್ತುತ ಸರ್ಕಾರದ ಅಧಿಕಾರದ ಅವಧಿ 2028ರವರೆಗೆ ಇದ್ದು, ಅವರು ಅದನ್ನು ಪೂರ್ಣಗೊಳಿಸಲಿದ್ದಾರೆ. ನೀವೇ ಐದು ವರ್ಷ ಸಿಎಂ ಎಂದು ಹೈಕಮಾಂಡ್ ಪದೇ ಪದೇ ಪ್ರತ್ಯೇಕವಾಗಿ ಸ್ಪಷ್ಟೀಕರಣ ನೀಡುವ ಅಗತ್ಯವಿಲ್ಲ,” ಎಂದು ಪ್ರತಿಪಾದಿಸಿದರು. ನಾಯಕತ್ವ ಬದಲಾವಣೆ ಇಲ್ಲ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರ ಗಮನಕ್ಕೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಏಪ್ರಿಲ್ 10ರಿಂದ ದೇಶದಾದ್ಯಂತ ಇರುವ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಿದೆ. ವಾಹನ ದಟ್ಟಣೆಯನ್ನು ಕಡಿಮೆ ಮಾಡುವ ಮತ್ತು ಟೋಲ್ ವಹಿವಾಟಿನಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಈ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ. ಇನ್ನು ಮುಂದೆ ಟೋಲ್ ಶುಲ್ಕವನ್ನು ಕೇವಲ ಫಾಸ್ಟ್ಟ್ಯಾಗ್ (FASTag) ಅಥವಾ ಯುಪಿಐ (UPI) ಮೂಲಕ ಮಾತ್ರ ಪಾವತಿಸಲು ಅವಕಾಶವಿರುತ್ತದೆ. ಪ್ರಸ್ತುತ ದೇಶಾದ್ಯಂತ 1,550ಕ್ಕೂ ಹೆಚ್ಚು ಟೋಲ್ ಪ್ಲಾಜಾಗಳಲ್ಲಿ ಈ ಸಂಪೂರ್ಣ ಡಿಜಿಟಲ್ ವ್ಯವಸ್ಥೆ ಜಾರಿಯಾಗಲಿದೆ. ಐಡಿ ಕಾರ್ಡ್ಗಳನ್ನು ತೋರಿಸಿ ಉಚಿತವಾಗಿ ಟೋಲ್ ದಾಟುವ ಪದ್ಧತಿಗೂ ಪ್ರಾಧಿಕಾರ ಕಡಿವಾಣ ಹಾಕಲಿದೆ. ನಿಯಮ ಮೀರಿದರೆ ಭಾರೀ ದಂಡ! ಹೊಸ ನಿಯಮದ ಪ್ರಕಾರ, ವಾಹನ ಸವಾರರು ನಗದು ರೂಪದಲ್ಲಿ ಶುಲ್ಕ ಪಾವತಿಸಲು ಮುಂದಾದರೆ ದಂಡ ತೆರಬೇಕಾಗುತ್ತದೆ. ವಿಶೇಷವಾಗಿ, ಫಾಸ್ಟ್ಟ್ಯಾಗ್ ಇಲ್ಲದೆ ಕೇವಲ ಯುಪಿಐ ಮೂಲಕ ಶುಲ್ಕ ಪಾವತಿಸುವವರು…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 5ರಂದು (ಭಾನುವಾರ) ನಡೆಯಲಿರುವ ಐಪಿಎಲ್ 2026 (IPL 2026) ಟಿ20 ಕ್ರಿಕೆಟ್ ಪಂದ್ಯ ವೀಕ್ಷಿಸಲು ಆಗಮಿಸುವ ಕ್ರೀಡಾಭಿಮಾನಿಗಳ ಅನುಕೂಲಕ್ಕಾಗಿ ನಮ್ಮ ಮೆಟ್ರೋ (BMRCL) ರೈಲು ಸೇವೆಗಳ ಅವಧಿಯನ್ನು ವಿಸ್ತರಿಸಿದೆ. ಅಂದು ರಾತ್ರಿ 11 ಗಂಟೆಯ ಬದಲಾಗಿ, ಮರುದಿನ ಮುಂಜಾನೆ 2 ಗಂಟೆಯವರೆಗೆ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲುಗಳು ಸಂಚರಿಸಲಿವೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ (ಮೆಜೆಸ್ಟಿಕ್) ಎಲ್ಲಾ ನಾಲ್ಕು ದಿಕ್ಕುಗಳಿಗೂ ಕೊನೆಯ ರೈಲುಗಳು ರಾತ್ರಿ 1:30ಕ್ಕೆ ಹೊರಡಲಿವೆ. ಆರ್ವಿ ರಸ್ತೆ ನಿಲ್ದಾಣದಿಂದ ಮುಂಜಾನೆ 2 ಗಂಟೆಗೆ, ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದಾವರ ನಿಲ್ದಾಣಗಳಿಂದ ರಾತ್ರಿ 12:45ಕ್ಕೆ ಹಾಗೂ ವೈಟ್ಫೀಲ್ಡ್ನಿಂದ 12:30ಕ್ಕೆ ಕೊನೆಯ ರೈಲುಗಳು ನಿರ್ಗಮಿಸಲಿವೆ. ಪಂದ್ಯದ ಟಿಕೆಟ್ನಲ್ಲೇ ಮೆಟ್ರೋ ಪಾಸ್ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಬಿಎಂಆರ್ಸಿಎಲ್ ಈ ಬಾರಿ ವಿಶೇಷ ವ್ಯವಸ್ಥೆ ಕಲ್ಪಿಸಿದ್ದು, ಐಪಿಎಲ್ ಪಂದ್ಯದ ಟಿಕೆಟ್ಗಳೇ ಮೆಟ್ರೋ ಟ್ರಾವೆಲ್ ಪಾಸ್ಗಳಾಗಿ ಕಾರ್ಯನಿರ್ವಹಿಸಲಿವೆ. ಭೌತಿಕ ಟಿಕೆಟ್ಗಳ ಮೇಲೆ ಮುದ್ರಿಸಲಾದ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಪ್ರಸ್ತಾವಿತ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ (Delimitation) ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಕೊನೆಗೂ ಮೌನ ಮುರಿದಿರುವುದನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೇ ವೇಳೆ ದಕ್ಷಿಣದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ದಕ್ಷಿಣದ ರಾಜ್ಯಗಳಿಗೆ ‘ಭರವಸೆ’ ನೀಡುವ ಪ್ರಧಾನಿಯವರ ಈ ಹಠಾತ್ ಕಾಳಜಿಯು ರಾಜಕೀಯ ಮುತ್ಸದ್ದಿತನಕ್ಕಿಂತ ಹೆಚ್ಚಾಗಿ, ಮುಂಬರುವ ಕೇರಳ ಮತ್ತು ತಮಿಳುನಾಡು ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಹೆಣೆದ ಚುನಾವಣಾ ತಂತ್ರದಂತೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕೃತ ‘ಎಕ್ಸ್’ (X) ಖಾತೆಯಲ್ಲಿ ಟೀಕಿಸಿದ್ದಾರೆ. ಲಾಭ ಯಾರಿಗೆ? ದಕ್ಷಿಣಕ್ಕೆ ಹೇಗೆ ನಷ್ಟ? ಸಮಸ್ಯೆ ಇರುವುದು ದಕ್ಷಿಣದ ರಾಜ್ಯಗಳ ಲೋಕಸಭಾ ಸೀಟುಗಳು ಹೆಚ್ಚಾಗುತ್ತವೆಯೇ ಎಂಬುದರಲ್ಲಲ್ಲ. ಬದಲಾಗಿ, ಸೀಟುಗಳು ಹೇಗೆ ಹೆಚ್ಚಾಗುತ್ತವೆ ಮತ್ತು ಇದರಿಂದ ಅಸಮಾನವಾಗಿ ಯಾರಿಗೆ ಲಾಭವಾಗುತ್ತದೆ ಎಂಬುದರಲ್ಲಿದೆ. ಪ್ರಸ್ತಾವಿತ ವಿಸ್ತರಣೆಯಡಿ, ಪ್ರತಿಯೊಂದು ರಾಜ್ಯದಲ್ಲೂ ಸೀಟುಗಳು ಹೆಚ್ಚಾದರೂ, ಅದರ ದರ ಮತ್ತು ಪ್ರಮಾಣ ಸ್ಪಷ್ಟವಾಗಿ ಬಿಜೆಪಿ ಪ್ರಾಬಲ್ಯವಿರುವ ಉತ್ತರದ ರಾಜ್ಯಗಳಿಗೆ ಅತಿ ಹೆಚ್ಚು ಲಾಭ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಪಂಚಾಂಗ ದಿನಾಂಕ : 06-04-2026 ವಾರ : ಸೋಮವಾರ ಸಂವತ್ಸರ : ಶ್ರೀ ಪರಾಭವ ನಾಮ ಆಯನ : ಉತ್ತರಾಯಣ ಪಕ್ಷ : ಕೃಷ್ಣ ತಿಥಿ : ಚತುರ್ಥಿ ನಕ್ಷತ್ರ : ಅನುರಾಧ ಸೂರ್ಯೋದಯ : ಬೆಳಗ್ಗೆ 6:11 ಗಂಟೆಗೆ ಅಮೃತ ಕಾಲ : ಮಧ್ಯಾಹ್ನ 01:53 ರಿಂದ 03:25ರ ವರೆಗೆ ದುರ್ಮುಹೂರ್ತ : ಮಧ್ಯಾಹ್ನ 12:35 ರಿಂದ 01:23 & 02:59 ರಿಂದ 03:47ರ ವರೆಗೆ ರಾಹುಕಾಲ : ಬೆಳಗ್ಗೆ 07:43 ರಿಂದ 09:15ರ ವರೆಗೆ ಸೂರ್ಯಾಸ್ತ : ಸಂಜೆ 06:30 ಗಂಟೆಗೆ ಇಂದಿನ ರಾಶಿ ಭವಿಷ್ಯ ಮೇಷ: ಜೀವನದಲ್ಲಿ ಕೊಂಚ ಉತ್ಸಾಹ ಸೇರಿಸಿಕೊಳ್ಳಿರಿ – ನಿಮ್ಮ ರನ್ನಿಂಗ್ ಶೂಗಳನ್ನು ಧರಿಸಿ ಮತ್ತು ಗೋಪ್ಯ ಗುರಿಯನ್ನು ಅನ್ವೇಷಿಸಿ. ನಿಮ್ಮನ್ನು ನೀವು ವ್ಯಸ್ತರಾಗಿಸಿಕೊಳ್ಳಿ, ಆದರೆ ಯಾವುದನ್ನೂ ಅತಿಯಾಗಿ ಮಾಡಬೇಡಿ. ಇಂದು, ನೀವು ಗುಂಪು ಚಟುವಟಿಕೆಗಳಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗುತ್ತೀರಿ. ವೃಷಭ: ಇಂದು ನಿಮ್ಮ ಮನಸ್ಸು ನಿಮ್ಮ ಆತ್ಮೀಯ ಮಿತ್ರರು ಮತ್ತು ಕುಟುಂಬ ಸದಸ್ಯರತ್ತ ಸೆಳೆಯುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಮತ್ತು ಆತ್ಮೀಯ ಬಾಂಧವ್ಯಗಳು ನಿಮ್ಮ ಪಟ್ಟಿಯಲ್ಲಿ ಅತ್ಯಂತ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಹಳೆಯ ವಾಹನಗಳಿಗೆ ಹೆಚ್ಎಸ್ಆರ್ಪಿ (High Security Registration Plate) ಅಳವಡಿಕೆ ಕುರಿತು ಕರ್ನಾಟಕ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. 2019ರ ಎಪ್ರಿಲ್ 1ಕ್ಕಿಂತ ಮುಂಚೆ ನೋಂದಾಯಿಸಲ್ಪಟ್ಟ ವಾಹನಗಳಿಗೆ ಹೆಚ್ಎಸ್ಆರ್ಪಿ ಕಡ್ಡಾಯವಲ್ಲ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಎಂದು ಸಾರಿಗೆ ಇಲಾಖೆ ತಿಳಿಸಿದೆ. 2019ರ ಎಪ್ರಿಲ್ 1ಕ್ಕಿಂತಲೂ ಮೊದಲು ನೋಂದಾಯಿಸಲ್ಪಟ್ಟಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್ಪಿ ಅಳವಡಿಕೆ ಕಡ್ಡಾಯವಾಗಿದೆ ಎಂದು ಇಲಾಖೆ ದೃಢಪಡಿಸಿದೆ. 1989ರ ಮೋಟಾರು ವಾಹನ ನಿಯಮ 50ರಡಿ ಕೇಂದ್ರ ಸರ್ಕಾರವು 2018ರ ಡಿಸೆಂಬರ್ 4ರಂದು ಅಧಿಸೂಚನೆ ಹೊರಡಿಸಿ, 2019ರ ಎಪ್ರಿಲ್ 1ರ ಮುಂಚೆ ನೋಂದಾಯಿಸಲ್ಪಟ್ಟ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್ಪಿ ಅಳವಡಿಕೆ ಕಡ್ಡಾಯಗೊಳಿಸಿತ್ತು. ಅದರಂತೆ, ಕರ್ನಾಟಕ ಸರ್ಕಾರವು 2023ರ ಆಗಸ್ಟ್ 17ರಂದು ರಾಜ್ಯ ಅಧಿಸೂಚನೆ ಹೊರಡಿಸಿ, ಇದೇ ನಿಯಮವನ್ನು ಜಾರಿಗೆ ತಂದಿದೆ. ಕರ್ನಾಟಕ ಉಚ್ಚ ನ್ಯಾಯಾಲಯವು ಈ ಪ್ರಕರಣದಲ್ಲಿ ರಾಜ್ಯವು ತುರ್ತು ಕ್ರಮ ಕೈಗೊಳ್ಳಬಾರದು ಎಂದು ತಾತ್ಕಾಲಿಕ ಆದೇಶ ನೀಡಿದ್ದರೂ, ಹೆಚ್ಎಸ್ಆರ್ಪಿ ಅಳವಡಿಕೆಗೆ ಸಂಬಂಧಿಸಿದ ಅಧಿಸೂಚನೆಗೆ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ದಾವಣಗೆರೆ: ಕೇಂದ್ರದಿಂದ ಪಡಿತರ ಕೊಟ್ಟಿದ್ದು ನಾವು. ಸಿದ್ದರಾಮಯ್ಯ ಅನ್ನರಾಮಯ್ಯ ಎನ್ನುವುದಕ್ಕಿಂತ ಕನ್ನರಾಮಯ್ಯ ಎನ್ನಬಹುದು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾತನಾಡಿದ ಅವರು, 28 ಸಾವಿರ ಕೋಟಿ ಹಣ 15 ಲಕ್ಷ ಮನೆಗಳನ್ನು ಕಟ್ಟಲು ಬೇಕಾಗಿತ್ತು. ಆದರೆ ಈಗ ಅದೇ 15 ಲಕ್ಷ ಮನೆ ಕಟ್ಟಲು 2 ಸಾವಿರ ಕೋಟಿ ಇಟ್ಟಿದ್ದಾರೆ. ಗ್ಯಾಸ್ ಸಿಲಿಂಡರ್ಗಳ ಪೂರೈಕೆ ಕಷ್ಟ ಇದೆ. ಆದರೆ ಈ ಕಾಂಗ್ರೆಸ್ ಅವರು ಪ್ರಧಾನಿಗಳು ಪೂರೈಕೆ ಮಾಡುತ್ತಿಲ್ಲ ಎಂದು ಅರೋಪ ಮಾಡುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿನ ಪರಿಸ್ಥಿತಿ ಯಾವ ರೀತಿ ಇದೆ ಎನ್ನುವುದು ಗೊತ್ತಿದೆ. ಆದರೆ ಪ್ರಧಾನಿಗಳು ಬೇರೆ ದೇಶಗಳ ಜೊತೆ ಇಟ್ಟುಕೊಂಡ ಸ್ನೇಹದಿಂದ ಅಲ್ಲಿಂದ ನಮ್ಮ ದೇಶಕ್ಕೆ ಆಮದು ಮಾಡಿಕೊಳ್ಳುತ್ತಿದ್ದಾರೆ. ಹಾರ್ಮುಜ್ ಜಲಸಂಧಿಯ ಮೂಲಕ ದೇಶಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ಯಾಸ್ ಆಮದು ಮಾಡಿಕೊಳ್ಳುತ್ತಿದ್ದಾರೆ ಎಂದರು. ಇದರ ಬಗ್ಗೆ ಸಿಎಂ, ಡಿಸಿಎಂ, ಸುರ್ಜೇವಾಲ ಮಾತನಾಡಿದ್ದು ನೋಡಿದ್ದೆ. ಕೇಂದ್ರದಿಂದ ಬರುವ ಪಡಿತರವನ್ನು ಕೊಟ್ಟು…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ದಾವಣಗೆರೆ: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕರೆಸಿ ಅಭಿಮಾನಿಗಳ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯ ಈಡೇರಿಸಿದ್ದಾರೆ. ಮುಸ್ಲಿಂ ಮತಗಳ ಮೇಲೆ ಜಮೀರ್ ಕಣ್ಣಿಟ್ಟಿದ್ದು, ಪಕ್ಷೇತರ ಅಭ್ಯರ್ಥಿಗಳ ಮನವೊಲಿಸಲು ಕೆಪಿಸಿಸಿ ಬಳಿ ಪಟ್ಟಿ ಕೇಳಿದ್ದಾರೆ. ಅಲ್ಲದೇ, ನೇರವಾಗಿ ಎಸ್.ಎಸ್.ಮಲ್ಲಿಕಾರ್ಜುನ್ ನಿವಾಸಕ್ಕೆ ಭೇಟಿ ನೀಡಿ, ನಾನು-ಮಲ್ಲಣ್ಣ ಚಡ್ಡಿ ದೋಸ್ತ್ಗಳೆಂದು ಕೈ ಹಿಡಿದು ಮೇಲಕ್ಕೆತ್ತಿ ವಿಜಯದ ಸಂಕೇತ ಸೂಚಿಸಿದರು. ಇದಕ್ಕೂ ಮುನ್ನ ಹುಬ್ಬಳ್ಳಿಯಿಂದ ದಾವಣಗೆರೆಗೆ ಆಗಮಿಸಿದ ಜಮೀರ್ ಅವರನ್ನು ಅಭಿಮಾನಿಗಳು ಬೃಹತ್ ಮೆರವಣಿಗೆ ಮೂಲಕ ಎಸ್.ಎಸ್.ಮಲ್ಲಿಕಾರ್ಜುನ್ ಮನೆಗೆ ಕರೆತಂದರು. ಬಳಿಕ ಮಲ್ಲಿಕಾರ್ಜುನ್ ನಿವಾಸದಲ್ಲಿ ಊಟ ಮಾಡಿ, ಪತ್ರಿಕಾಗೋಷ್ಠಿ ನಡೆಸಿದರು. ನಾನು-ಮಲ್ಲಿಕಾರ್ಜುನ್ ದೋಸ್ತ್ಗಳು, ಮುನಿಸಿಕೊಂಡಿಲ್ಲ-ಜಮೀರ್: “ಕೇರಳಕ್ಕೆ ಸ್ಟಾರ್ ಕ್ಯಾಂಪೇನರ್ ಆಗಿ ಹೋಗಿದ್ದೆ. ಎಸ್.ಎಸ್.ಮಲ್ಲಿಕಾರ್ಜುನ್ ಅವರ ವಿರುದ್ಧ ನಾನು ಯಾವತ್ತೂ ಮುನಿಸಿಕೊಂಡಿಲ್ಲ. ನನಗೆ ಕೇರಳದಲ್ಲಿ 7ರ ತನಕ ಪ್ರಚಾರ ಮಾಡಲು ವೇಣುಗೋಪಾಲ್ ಹೇಳಿದ್ದರು. ಹಾಗಾಗಿ, ಇದೀಗ ಬಂದಿದ್ದೇನೆ. ನಮ್ಮ ಅಭ್ಯರ್ಥಿ ಸಮರ್ಥ್ ಅವರನ್ನು ಗೆಲ್ಲಿಸಿಕೊಂಡು ಬರ್ತೀನಿ. ನನ್ನನ್ನು ಅಭಿಮಾನಿಗಳು ಕರೆತಂದಿದ್ದು…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ಹೀಗಾಗಿ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಬಾಗಲಕೋಟೆಯ ಕುಮಾರೇಶ್ವರ ಕ್ಯಾಂಪಸ್ನಲ್ಲಿ ಕರಪತ್ರ ಹಿಡಿದು ಬಂದಿದ್ದ NSUI ಕಾರ್ಯಕರ್ತರು ಹಾಗೂ ಬಿಜೆಪಿಯ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಬಳಿಕ ಐವರು NSUI ಕಾರ್ಯಕರ್ತರನ್ನು ಪೊಲೀಸರು ಠಾಣೆಗೆ ಕರೆ ತಂದು ವಿಚಾರಣೆ ನಡೆಸಲಾಗಿತ್ತು. ಇದೀಗ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆ ಸಿಪಿಐ ವಿಜಯ ಮುರಗುಂಡಿ ಮತ್ತು ನವನಗರ ಪೊಲೀಸ್ ಠಾಣೆ ಪಿಎಸ್ಐ ಅಶೋಕ ಚೌಹಾಣ್ರನ್ನು ವರ್ಗಾವಣೆ ಮಾಡಿ ಡಿಜಿ & ಐಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ವಿಜಯಪುರ ಮಹಿಳಾ ಠಾಣೆಗೆ ಸಿಪಿಐ ವಿಜಯ ಮುರಗುಂಡಿ ಅವರನ್ನ ವರ್ಗಾವಣೆ ಮಾಡಲಾಗಿದ್ದರೆ ಬೆಳಗಾವಿ ಉತ್ತರ ವಲಯ ಐಜಿಪಿ ಕಚೇರಿಗೆ ಪಿಎಸ್ ಐ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಪಾಟ್ನಾ(ಬಿಹಾರ): ಹಾಲಿ ಸಿಎಂ ಹಾಗೂ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಏಪ್ರಿಲ್ 10ರಂದು ರಾಜ್ಯಸಭಾ ಸದಸ್ಯರಾಗಿ ಔಪಚಾರಿಕವಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಹಾರದ ಬಿಜೆಪಿ ನಾಯಕ ಸಂಜಯ್ ಸರೋಗಿ ಅವರು ಇಂದು (ಭಾನುವಾರ) ದೃಢಪಡಿಸಿದ್ದಾರೆ. ಹೊಸ ಸಚಿವ ಸಂಪುಟ ರಚನೆಯ ಬಗ್ಗೆ ಮಾತನಾಡಿ, ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿ ಕೇಂದ್ರ ನಾಯಕತ್ವ ಮತ್ತು ಎನ್ಡಿಎ ಒಟ್ಟಾಗಿ ಕುಳಿತು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು. ಮಾರ್ಚ್ 5ರಂದು ನಿತೀಶ್ ಕುಮಾರ್ ತಮ್ಮ ನಿರ್ಧಾರದ ಕುರಿತು ಹೃದಯಸ್ಪರ್ಶಿ ಸಂದೇಶ ಹಂಚಿಕೊಂಡಿದ್ದರು. ಬಿಹಾರ ವಿಧಾನಸಭೆಯ ಎರಡೂ ಸದನಗಳು ಹಾಗೂ ಸಂಸತ್ತಿನ ಸದಸ್ಯರಾಗಬೇಕೆಂಬ ಹಂಬಲ ವ್ಯಕ್ತಪಡಿಸಿದ್ದರು. ಅಭಿವೃದ್ಧಿ ಹೊಂದಿದ ಬಿಹಾರವನ್ನು ನಿರ್ಮಿಸುವ ಬದ್ಧತೆಯನ್ನು ಪ್ರತಿಪಾದಿಸಿದ್ದ ಅವರು, ಹೊಸ ಸರ್ಕಾರಕ್ಕೆ ತಮ್ಮ ಸಹಕಾರ ಮತ್ತು ಮಾರ್ಗದರ್ಶನ ನೀಡುವುದಾಗಿ ಹೇಳಿದ್ದರು. ಎನ್ಡಿಎ ನಿತೀಶ್ ಕುಮಾರ್ ಅವರ ನಿರ್ಧಾರವನ್ನು ಸ್ವಾಗತಿಸಿತು ಮತ್ತು ಸಂಸದೀಯ ಪ್ರಜಾಪ್ರಭುತ್ವಕ್ಕೆ ಅವರು ಮರಳಿದ್ದನ್ನು ಶ್ಲಾಘಿಸಿತ್ತು. ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ್ದ…
Subscribe to Updates
Get the latest creative news from FooBar about art, design and business.