Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್‌ ಇಂಟರನ್ಯಾಷನಲ್‌ ಲಿಮಿಟೆಡ್‌ (ಎಂಎಸ್‌ಐಎಲ್)‌ ಸಂಸ್ಥೆಯು ಸುಗಮ ಮತ್ತು ಪಾರದರ್ಶಕ ಚಿಟ್‌ ಫಂಡ್‌ ವ್ಯವಹಾರದ ಅನುಕೂಲಕ್ಕೆ ಅಭಿವೃದ್ಧಿಪಡಿಸಿರುವ ಸಾಫ್ಟ್​ವೇರ್‌ ಮತ್ತು ಮೊಬೈಲ್‌ ಆ್ಯಪ್​ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಶನಿವಾರ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಎಂಎಸ್‌ಐಎಲ್‌ ಸರ್ಕಾರಿ ಸಂಸ್ಥೆಯಾಗಿರುವುದರಿಂದ ಮೋಸದ ಪ್ರಶ್ನೆ ಬರುವುದಿಲ್ಲ. ಸಂಸ್ಥೆಯ ವಹಿವಾಟು ಈಗ ವರ್ಷಕ್ಕೆ 500 ಕೋಟಿ ರೂ.ಗಿಂತಲೂ ಕಡಿಮೆ ಇದೆ. ಇದನ್ನು ಐದು ವರ್ಷಗಳಲ್ಲಿ 5 ಸಾವಿರ ಕೋಟಿ ರೂ.ಗಳಿಗೆ ಏರಿಸುವ ಗುರಿ ಇದೆ. ಸಾರ್ವಜನಿಕರು ಖಾಸಗಿ ಚಿಟ್​​ಗಳನ್ನು ನಂಬಿ ಮೋಸ ಹೋಗುವುದಕ್ಕಿಂತ ಇಲ್ಲಿ ಹಣ ಹಾಕುವುದು ಒಳ್ಳೆಯದು ಎಂದರು. ಪಕ್ಕದ ಕೇರಳದಲ್ಲಿ ಅಲ್ಲಿನ ಸರ್ಕಾರಿ ಹಣಕಾಸು ಸಂಸ್ಥೆಯು ವರ್ಷಕ್ಕೆ ಚಿಟ್ ಸಹಿತ 1 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಆರ್ಥಿಕ ವ್ಯವಹಾರ ನಡೆಸುತ್ತಿದ್ದು, 45 ಲಕ್ಷ ಗ್ರಾಹಕರನ್ನು ಹೊಂದಿದೆ. ಅಲ್ಲಿನ ಚಿಟ್ ವ್ಯವಸ್ಥೆಯೊಂದರಲ್ಲೇ ವಾರ್ಷಿಕವಾಗಿ 47 ಸಾವಿರ ಕೋಟಿ ರೂ.…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ನಗರದ ಕ್ವಾಲ್ ಕ್ಯಾಮ್ ಕಂಪನಿ ತಯಾರಿಸಿದ ಅತ್ಯಾಧುನಿಕ 2- ನ್ಯಾನೋ ಮೀಟರ್ ಚಿಪ್ ಅನ್ನು ಕೇಂದ್ರದ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ ನಗರದಲ್ಲಿ ಅನಾವರಣಗೊಳಿಸಿದರು. ತಂತ್ರಜ್ಞಾನ ಕ್ಷೇತ್ರದಲ್ಲಿ ಸೆಮಿಕಂಡಕ್ಟರ್​ನ ಪಾತ್ರ ಗಣನೀಯವಾಗಿದ್ದು, ಈ ದಿಸೆಯಲ್ಲಿ ಕಂಪನಿ ತಯಾರಿಸಿದ ಸುಧಾರಿತ ಚಿಪ್ ಇದಾಗಿದೆ. ಇದು ಸಿಪಿಯು ಹಾಗೂ ಜಿಪಿಯು ಸಂಯೋಜಿತವಾಗಿದ್ದು, 20 ರಿಂದ 30 ಬಿಲಿಯನ್ ಟ್ರ್ಯಾನಿಸ್ಟರ್​ಗಳನ್ನು ಹೊಂದಿದೆ. ಕಂಪ್ಯೂಟರ್, ಕ್ಯಾಮರಾ, ವೈಫೈ ರೂಟರ್, ವಿಮಾನ ಹಾಗೂ ಕಾರುಗಳಲ್ಲಿ ಇದನ್ನು ಬಳಸಬಹುದಾಗಿದೆ‌. ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧಾರದ ಮೇರೆಗೆ ಇದು ಕಾರ್ಯನಿರ್ವಹಿಸಲಿದೆ. ಅತ್ಯಾಧುನಿಕ ಚಿಪ್ ಅನಾವರಣಗೊಳಿಸಿ ಮಾತನಾಡಿದ ಸಚಿವರು, ಸುಧಾರಿತ ಸೆಮಿಕಂಡಕ್ಟರ್ ತಂತ್ರಜ್ಞಾನದ ವಿನ್ಯಾಸದಲ್ಲಿ ಭಾರತವು ಈಗ ಜಾಗತಿಕ ಕೇಂದ್ರವಾಗುತ್ತಿದೆ. ಕ್ವಾಲ್​ ಕ್ಯಾಮ್‌ನ ಈ ಮೈಲಿಗಲ್ಲು ಭಾರತದ ವಿನ್ಯಾಸ ಪರಿಸರ ವ್ಯವಸ್ಥೆಯು ಎಷ್ಟು ಬೆಳೆದಿದೆ ಎಂಬುದಕ್ಕೆ ಸಾಕ್ಷಿ ಎಂದರು. 2nm ಚಿಪ್‌ಗಳು ಮುಂದಿನ ಪೀಳಿಗೆಯ ವೈರ್‌ಲೆಸ್ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ದಾವಣಗೆರೆ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು ಮತ್ತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಬೀಸಿದ್ದು, ಎರಡೂವರೆ ವರ್ಷ ಅಧಿಕಾರ ಹಂಚಿಕೆಗೆ ಒಪ್ಪಂದ ಆಗಿರೋದು ಸತ್ಯ. ಈ ಬಗ್ಗೆ ನನಗೆ ಮಾಹಿತಿ ಇದೆ ಎಂದು ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 139 ಶಾಸಕರ ಬೆಂಬಲ ಡಿಸಿಎಂ ಡಿ ಕೆ ಶಿವಕುಮಾರ್ ಇದೆ. 40 ರಿಂದ 50 ಜನ ನಮ್ಮಂತ ಯುವ ಶಾಸಕರು ಡಿಕೆಶಿ ಏನೇ ಹೇಳಿದರೂ ಮಾಡಲು ಸಿದ್ಧರಿದ್ದೇವೆ. ಅವರು ಪ್ರಾಣ ಕೇಳಿದರೂ ಕೊಡೋಕೆ ನಾವುಗಳು ಸಿದ್ಧರಿದ್ದೇವೆಂದು ಹೇಳಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ. ಸಿಎಂ ಸಿದ್ದರಾಮಯ್ಯ ಐದು ವರ್ಷದ ತನಕ ಸಿಎಂ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಪದೇ ಪದೆ ಹೇಳಿಕೆ ನೀಡುತ್ತಲೇ ಇದ್ದಾರೆ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಪಕ್ಷದ ಹೈಕಮಾಂಡ್​ ಗಮನಿಸಿದೆ.‌ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಪ್ರಿಯಾಂಕಾ ಗಾಂಧಿ ಇದ್ದಾರೆ.…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೀದರ್: ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ನಿನ್ನೆ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ, ಹಾಗಾಗಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಾನು ಹೇಳಿದ್ದು ಎಂದು ಡಾ ಯತೀಂದ್ರ ಸಿದ್ದರಾಮಯ್ಯ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ಮಾತನಾಡುವ ವೇಳೆ ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಿಲ್ಲ, ತಂದೆಯರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ನಾನು ಅಂದುಕೊಳ್ಳುತ್ತೇನೆ ಎಂದಿದ್ದರು. ಅದಕ್ಕೆ ಡಿ ಕೆ ಶಿವಕುಮಾರ್ ಯತೀಂದ್ರ ಅವರು ಹೇಳಿದ ಮೇಲೆ ಮುಗೀತು, ಅವರೇ ಹೈಕಮಾಂಡ್ ಎಂದು ಭಾವಿಸೋಣ ಎಂದಿದ್ದರು. ಈ ಬಗ್ಗೆ ಇಂದು ಬೀದರ್ ನಲ್ಲಿ ಸುದ್ದಿಗಾರರು ಕೇಳಿದಾಗ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ. ಎಲ್ಲಾ ಪಕ್ಷಗಳಲ್ಲಿಯೂ ಮುಖ್ಯಮಂತ್ರಿ ಆಕಾಂಕ್ಷಿಗಳು ಇರುತ್ತಾರೆ. ನಿಜವಾದ ಅರ್ಹತೆ ಇರುವವರು ಸಹ ಕೇಳುತ್ತಿರುತ್ತಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ, ನಮ್ಮ ಪಕ್ಷದಲ್ಲೇನೂ ಹೊಸ ವಿಚಾರವಲ್ಲ, ಹೈಕಮಾಂಡ್ ಸದ್ಯಕ್ಕೆ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಮೈಸೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಕ್ಷದ ಹೈಕಮಾಂಡ್ ಸುಮ್ಮನಿದೆ ಎಂದರೆ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದರ್ಥ ಎಂದು ಗೃಹ ಸಚಿವ ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ವರದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ನಮ್ಮ ತಂದೆಯೇ 5 ವರ್ಷ ಸಿಎಂ ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ವೈಯಕ್ತಿಕ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದೇ ಅಂತಿಮ ಎಂದರು. ಸದ್ಯಕ್ಕೆ ಹೈ ಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಸಿಎಂ ಬದಲಾವಣೆ ವಿಚಾರ ಕೇವಲ ಮಾಧ್ಯಮಗಳಲ್ಲಿನ ಗೊಂದಲ ಅಷ್ಟೇ. ಗೊಂದಲ ಇದ್ರೆ ಸಿಎಲ್​ಪಿ ಸಭೆಯಲ್ಲಿ ಗೊತ್ತಾಗುತ್ತಿತ್ತು. ಮೊನ್ನೆ ನಡೆದ ಸಭೆಯಲ್ಲೂ ಯಾರೂ ಏನೂ ಹೇಳಿಲ್ಲ. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ. ಸಿಎಂ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂದರು.

Read More

Updated By: Priyalachhi ನವದೆಹಲಿ: ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರು ಇತ್ತೀಚೆಗೆ ನಡೆದ ರಾಜ್ಯಸಭೆಯಲ್ಲಿ ಮಾಡಿದ ತಮ್ಮ ಚೊಚ್ಚಲ ಭಾಷಣದ ವೇಳೆ ತಮ್ಮ ನಟನೆಯ ‘ಕಲ್ಕಿ 2898 AD’ ಚಿತ್ರದ ಡೈಲಾಗ್ ಉಲ್ಲೇಖಿಸಿ ಗಮನ ಸೆಳೆದಿದ್ದಾರೆ. ಇದೀಗ ಆ ವಿಡಿಯೋ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸದನವನ್ನು ಉದ್ದೇಶಿಸಿ ಮಾತನಾಡುವಾಗ ಕಮಲ್, ‘ದೇಶವು ಮುಂದುವರಿಯಲು ಪ್ರಜಾಪ್ರಭುತ್ವವನ್ನು ಬೆಂಬಲಿಸಿ. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಹಾಯ ಮಾಡಲು ಅಥವಾ ಗೌರವಿಸಲು ಬಯಸದವರು ಅದರ ಪ್ರಗತಿಗೆ ಅಡ್ಡಿಯಾಗಬಾರದು’ ಎಂದು ಹೇಳಿದರು. ನಂತರ ಅವರು ತಮ್ಮ ಆನ್-ಸ್ಕ್ರೀನ್ ಪಾತ್ರವಾದ ಸುಪ್ರೀಮ್ ಯಾಸ್ಕಿನ್‌ಗೆ ಸಂಬಂಧಿಸಿದ, ‘ಜಗನ್ನಾಥ ರಥ ಚಕ್ರಾಲು ವಸ್ತುನ್ನಾಯಿ. ನೇನು ಏಮ್ ಚೆಪ್ತುನ್ನಾನೋ, ತೆಲುಗು ವಾಳಕಿ ಅರ್ಧಮಾವ್ತುಂದಿ (ಭಗವಾನ್ ಜಗನ್ನಾಥನ ರಥ ಬರುತ್ತಿವೆ. ನಾನು ಏನು ಹೇಳುತ್ತಿದ್ದೇನೆ ಎಂಬುದನ್ನು ತೆಲುಗು ಜನರು ಅರ್ಥಮಾಡಿಕೊಳ್ಳುತ್ತಾರೆ)’ ಎಂದಿದ್ದಾರೆ. ಬಳಿಕ ತಮ್ಮ ಹೇಳಿಕೆಗಳು ಯಾವುದೇ ವ್ಯಕ್ತಿ ಅಥವಾ ಆಡಳಿತವನ್ನು ಗುರಿಯಾಗಿಟ್ಟುಕೊಂಡು ಮಾಡಿಲ್ಲ. ಪ್ರಜಾಪ್ರಭುತ್ವವು ಭಿನ್ನಾಭಿಪ್ರಾಯಗಳನ್ನು ನಿವಾರಿಸುವಷ್ಟು ಶಕ್ತಿಶಾಲಿಯಾಗಿದೆ. ಆದರೆ, ಈ…

Read More

Updated By: Priyalachhi ಬೆಂಗಳೂರು: ಮನರೇಗಾ ಮತ್ತು ವಿಬಿ ಜಿರಾಮ್ ಜಿ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ನಡೆಯುತ್ತಿದೆ. ಕಾಂಗ್ರೆಸ್ ಸಂಘಪ್ಪ ಎಂದು ಉಲ್ಲೇಖಿಸಿ ಮಹಾತ್ಮಾ ಗಾಂಧಿ ಅವರ ಹೆಸರನ್ನು ಬಳಕೆ ಮಾಡಿ ಜಾಹೀರಾತು ನೀಡಿತ್ತು. ಇದೀಗ ಬಿಜೆಪಿ ನುಂಗಪ್ಪ ಎಂಬ ಜಾಹೀರಾತು ಮೂಲಕ ತಿರುಗೇಟು ನೀಡಿದೆ. ಬಿಜೆಪಿ ಜಾಹೀರಾತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರು, ಸತ್ಯ, ಅಹಿಂಸೆ, ಸಹಿಷ್ಣುತೆಯನ್ನೇ ಉಸಿರಾಡಿದ ಮಹಾತ್ಮಾ ಗಾಂಧಿ ಅವರನ್ನು ಕೊಂದ ಸಂಸ್ಕೃತಿಯವರ ಮಾನಸಿಕ ಕ್ರೌರ್ಯ ಮುಂದುವರೆಯುತ್ತಲೇ ಇದೆ. ಮಹಾತ್ಮ ಗಾಂಧಿಯನ್ನು ಅವಮಾನಿಸುವ, ಹೀಯಾಳಿಸುವ ಹೀನ ಮನಸ್ಥಿಯನ್ನೇ ಇಂದು ಪತ್ರಿಕೆಗಳ ಮೂಲಕ ಜಾಹೀರಾತುಗಳಲ್ಲಿ ಬಿಜೆಪಿ ಪ್ರಕಟಿಸಿದೆ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾರೆ. ಕ್ರೌರ್ಯ, ಕೊಲೆ, ಹಿಂಸೆ, ದೌರ್ಜನ್ಯ, ಗೂಂಡಾಗಿರಿಯನ್ನೇ ಬದುಕನ್ನಾಗಿಸಿಕೊಂಡಿರುವ ಸಂಘ ಪರಿವಾರ ಹಾಗೂ ಬಿಜೆಪಿ ಪಕ್ಷ ಗಾಂಧಿ ಅವರ ಊರುಗೋಲನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ…

Read More

Updated By: Priyalachhi ಮಂಗಳೂರು: ಯತೀಂದ್ರರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಅವರ ಮಾತನ್ನೇ ಗೌರವದಿಂದ ಸ್ವೀಕರಿಸೋಣ. ಈ ಬಗ್ಗೆ ನನಗೆ ಪ್ರತಿಕ್ರಿಯಿಸಲು ಇಷ್ಟವಿಲ್ಲ. ದೆಹಲಿಯವರು ಪ್ರತಿಕ್ರಿಯೆ ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಐದು ವರ್ಷವೂ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ, ನಾಯಕತ್ವ ಬದಲಾವಣೆ ಮಾಡಲ್ಲ ಎಂದು ಹೈಕಮಾಂಡ್ ಸಿಗ್ನಲ್ ಕೊಟ್ಟಿದೆ ಎಂಬ ಯತೀಂದ್ರ ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಪುತ್ತೂರು ಕಾಂಗ್ರೆಸ್ ಕಚೇರಿ ಶಿಲಾನ್ಯಾಸದಲ್ಲಿ ಮುಸ್ಲಿಂ ಮುಖಂಡರ ಹೆಸರು ಕೈಬಿಟ್ಟ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ, ಕಾಂಗ್ರೆಸ್ ಜಾತಿ ಮೇಲಲ್ಲ ನೀತಿ ಮೇಲೆ ರಾಜಕಾರಣ ಮಾಡುತ್ತದೆ. ನಮಗೆ ಎಲ್ಲಾ ಜಾತಿ, ಧರ್ಮಗಳೂ ಬೇಕು. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಅಸೂಯೆ ಇರುವವರು ಈ ರೀತಿ ಮಾತನಾಡುತ್ತಾರೆ ಎಂದು ಹೇಳಿದರು. ಮಾರ್ಚ್‌ನಲ್ಲಿ ಪಕ್ಷದ 100 ಕಚೇರಿಗಳಿಗೆ ಚಾಲನೆ: ಪುತ್ತೂರಿನಲ್ಲಿ ಪಕ್ಷದ ಒಂದು ಕಚೇರಿಯ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯುತ್ತಿದೆ. ಮಾರ್ಚ್‌ನಲ್ಲಿ ರಾಜ್ಯಾದ್ಯಂತ…

Read More

Updated By: Priyalachhi ಹುಬ್ಬಳ್ಳಿ: ಸರ್ಕಾರಿ ನೌಕರರು ತಿಂಗಳ ಮೊದಲ ಶನಿವಾರ ಖಾದಿ ಉಡುಪು ಧರಿಸಬೇಕೆಂಬ ಸರ್ಕಾರದ ನಿರ್ಣಯ ಖಾದಿ ಮಂಡಳಿ ಹಾಗೂ ಖಾದಿ ಉತ್ಪಾದಕರಲ್ಲಿ ಸಂತಸ ಮೂಡಿಸಿದ್ದು, ಸತತ ಉದ್ಯೋಗದ ಭರವಸೆ ಮೂಡಿಸಿದೆ. ಕರ್ನಾಟಕದಲ್ಲಿ ಕೆವಿಐಸಿ (ಖಾದಿ ಆ್ಯಂಡ್​​ ವಿಲೇಜ್​​ ಇಂಡಸ್ಟ್ರೀಸ್​ ಕಮಿಷನ್​)ಯಲ್ಲಿ ನೋಂದಣಿ ಮಾಡಿದ 176 ಖಾದಿ ಸಂಸ್ಥೆಗಳಿವೆ. ಖಾದಿ ಕ್ಷೇತ್ರದಲ್ಲಿ ಸುಮಾರು 55 ಸಾವಿರ ಉದ್ಯೋಗಿಗಳಿದ್ದಾರೆ. ಅವರಲ್ಲಿ ಶೇ.90ರಷ್ಟು ಮಹಿಳೆಯರು ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ವಿವಿಧ ಖಾದಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಈ‌ ನಿರ್ಧಾರದಿಂದ ಖಾದಿ ಬಟ್ಟೆಗಳಿಗೆ ಹೆಚ್ಚಿನ ಬೇಡಿಕೆ ಬರುವ ನಿರೀಕ್ಷೆಯನ್ನು ಖಾದಿ ಸಂಘ ಇಟ್ಟುಕೊಂಡಿದ್ದು, ಸರ್ಕಾರ ಶುದ್ದ ಹಾಗೂ ಮಾನ್ಯತೆ ಪಡೆದ ಖಾದಿ ಕೇಂದ್ರಗಳಲ್ಲೇ ಖಾದಿ ಬಟ್ಟೆ ಖರೀದಿಸಲು ನೌಕರರಿಗೆ ಆದೇಶಿಸಬೇಕಿದೆ. ಸರ್ಕಾರ ಹಾಗೂ ಇತರೆ ಪ್ರಾಧಿಕಾರಗಳಿಗೆ ವಾರದಲ್ಲಿ ಒಂದು ದಿನ ಖಾದಿ ಕಡ್ಡಾಯ ಮಾಡಬೇಕೆಂಬ ಬೇಡಿಕೆಯನ್ನು ಖಾದಿ ಗ್ರಾಮೋದ್ಯೋಗ ಮಂಡಳಿ ಸರ್ಕಾರ ಮುಂದಿಟ್ಟಿತ್ತು. ಆದ್ರೆ, ಈಗ ತಿಂಗಳಲ್ಲಿ ‌ಒಂದು ದಿನ ಖಾದಿ ಕಡ್ಡಾಯ…

Read More

Updated By: Priyalachhi ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ. ಈ ಬಗ್ಗೆ ಹೈಕಮಾಂಡ್ ಸ್ಪಷ್ಟವಾಗಿ ಸಿಗ್ನಲ್ ಕೊಟ್ಟಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಬಳಿಕ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಯತೀಂದ್ರ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು ಎಂದು ತಿರುಗೇಟು ನೀಡಿದರು. ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಯತೀಂದ್ರರ ಈ‌ ಹೇಳಿಕೆಯನ್ನು ಗೌರವದಿಂದ ಸ್ವೀಕರಿಸುತ್ತೇನೆ. ಅವರೇ ನಮ್ಮ ಹೈಕಮಾಂಡ್ ಅಂತ ಒಪ್ಪಿಕೊಳ್ಳೋಣ. ಯತೀಂದ್ರ ಅಥವಾ ಶಿವಗಂಗಾ ಹೇಳಿಕೆ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ಈ ಬಗ್ಗೆ ಏನು ಪ್ರತಿಕ್ರಿಯಿಸಬೇಕೋ ಅದನ್ನು ದೆಹಲಿಯಲ್ಲಿ ಪ್ರತಿಕ್ರಿಯಿಸುತ್ತೇನೆ ಎಂದರು.

Read More