Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಬೆಂಗಳೂರು: ನಮ್ಮ ಮೆಟ್ರೋ ರೈಲು ದರ ಏರಿಕೆಯಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ, ದರ ನಿಗದಿ ಸಮಿತಿ ಶಿಫಾರಸು ಮಾಡಿರುವ ದರಗಳನ್ನು ಮರುಪರಿಶೀಲಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು. ಇಂದು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ನಮ್ಮ ಮೆಟ್ರೋ ನಮ್ಮ ನಗರದ ಪ್ರಗತಿಯ ಸಂಕೇತ ಮತ್ತು ಲಕ್ಷಾಂತರ ದುಡಿಯುವ ಜನರು, ವಿದ್ಯಾರ್ಥಿಗಳು ಮತ್ತು ಕುಟುಂಬಗಳ ದೈನಂದಿನ ಜೀವನಾಡಿಯಾಗಿದೆ. ಮೆಟ್ರೋ ದರಗಳ ಪರಿಷ್ಕರಣೆಯ ಸಂಬಂಧ ಪ್ರಯಾಣಿಕರು ವ್ಯಕ್ತಪಡಿಸುತ್ತಿರುವ ಕಾಳಜಿ ಮತ್ತು ನೋವನ್ನು ನಾನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡಿದ್ದೇನೆ. ಜವಾಬ್ದಾರಿಯುತ ಸರ್ಕಾರ ಜನರ ಮಾತನ್ನು ಆಲಿಸುತ್ತದೆ ಮತ್ತು ನಿಮ್ಮ ಧ್ವನಿ ನಮಗೆ ಮುಖ್ಯ ಎಂಬ ಭರವಸೆ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ದರ ಪರಿಷ್ಕರಣೆಯಲ್ಲಿ ನಮ್ಮ ನಿಯಂತ್ರಣ ಇಲ್ಲ: ​​ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ, 2002ರ ಅಡಿಯಲ್ಲಿ ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧಾರ ಮಾಡುವುದಿಲ್ಲ. ​ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ರಚಿಸಿದ ಸ್ವತಂತ್ರ…

Read More

Updated By: Priyalachhi ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣ, ನಕಲಿ ಸುದ್ದಿ, ತಪ್ಪು ಮಾಹಿತಿಯ ಹರಡುವಿಕೆ ಹಾಗೂ ದುರುದ್ದೇಶಿತಪೂರಿತ ಪ್ರಚಾರಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ‘ಸೋಷಿಯಲ್ ಮೀಡಿಯಾ ಅನಾಲಿಟಿಕ್ಸ್ ಸೊಲ್ಯೂಷನ್’ ಅಭಿವೃದ್ಧಿಪಡಿಸಲು ನಿರ್ಧರಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟವು ಗುರುವಾರ ನಡೆದ ಸಭೆಯಲ್ಲಿ ರೂ. 67.26 ಕೋಟಿ ವೆಚ್ಚದಲ್ಲಿ AI ತಂತ್ರಜ್ಞಾನ ಆಧಾರಿತ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲು ಅನುಮೋದನೆ ನೀಡಿದೆ. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ) ಮಸೂದೆ–2025ಗೆ ಅನುಮೋದನೆ ನೀಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದು, ಇದೀಗ ಮಸೂದೆಯು ರಾಷ್ಟ್ರಪತಿ ಅಂಗಳ ತಲುಪಿದೆ. ಹೀಗಾಗಿ ಮಸೂದೆ ಜಾರಿ ವಿಳಂಬವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣದ ಕ್ರಮವಾಗಿ ನೀತಿಗತ ಮಾರ್ಗದ ಮೂಲಕ ದ್ವೇಷ ಭಾಷಣ ಮತ್ತು ನಕಲಿ ಸುದ್ದಿಗಳನ್ನು ನಿಯಂತ್ರಿಸಲು ಮುಂದಾಗಿದೆ. ಸಂಪುಟ ಸಭೆ ಬಳಿಕ…

Read More

Updated By: Priyalachhi ಪಂಚಾಂಗ : ದಿನಾಂಕ : 06-02-2026 ವಾರ : ಶುಕ್ರವಾರ ಸಂವತ್ಸರ : ವಿಶ್ವವಸು ಆಯನ : ಉತ್ತರಾಯಣ ಪಕ್ಷ : ಕೃಷ್ಣ ತಿಥಿ : ಪಂಚಮಿ ನಕ್ಷತ್ರ : ಹಸ್ತ ಸೂರ್ಯೋದಯ : ಮುಂಜಾನೆ 06:44 ಗಂಟೆಗೆ ಅಮೃತ ಕಾಲ : ಬೆಳಗ್ಗೆ 08:11 ರಿಂದ 09:38ರ ವರೆಗೆ ದುರ್ಮುಹೂರ್ತ : ಬೆಳಗ್ಗೆ 09:08 ರಿಂದ 09:56 & ಮಧ್ಯಾಹ್ನ 03:32 ರಿಂದ 04:20ರ ತನಕ ರಾಹುಕಾಲ : ಬೆಳಗ್ಗೆ 11:05 ರಿಂದ 12:32ರ ವರೆಗೆ ಸೂರ್ಯಾಸ್ತ : ಸಂಜೆ 06:20 ಗಂಟೆಗೆ ರಾಶಿ ಭವಿಷ್ಯ : ಮೇಷ : ನೀವು ಇಂದು ಪ್ರತ್ಯೇಕವಾಗಿ ಉಳಿಯಲು ಬಯಸುತ್ತೀರಿ. ನೀವು ಹಾಕುವ ಪ್ರಯತ್ನಗಳಿಗೆ ನೀವು ಇತರರಿಂದ ಪ್ರಶಂಸೆ ಪಡೆಯುತ್ತೀರಿ, ಆದರೆ ನೀವು ನಿಮ್ಮ ಪರಿಣಿತಿಯನ್ನು ನಿಮ್ಮ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಬೇಕು. ಇಂದು ಬಜೆಟ್ ಕುರಿತು ಕಠಿಣ ನಿಯಂತ್ರಣ ಅನುಕೂಲಕರವಾಗುತ್ತದೆ. ವೃಷಭ : ಇಂದು ನಿಮ್ಮ ಕಲ್ಪನಾಶಕ್ತಿ ನಿಮ್ಮನ್ನು ರೋಲರ್-ಕೋಸ್ಟರ್ ಗೆ ಕೊಂಡೊಯ್ಯುತ್ತದೆ.…

Read More

Updated By: Priyalachhi ಬೆಳಗಾವಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳು ಹೆಚ್ಚುತ್ತಿರುವ ನಡುವೆ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿಂದಂತೆ ತಿಮ್ಮಾಪುರ ರಾಜಿನಾಮೆಗೆ ಒತ್ತಾಯಿಸುತ್ತಿರುವ ವಿರೋಧ ಪಕ್ಷಗಳ ವಿರುದ್ಧ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ಭ್ರಷ್ಟಾಚಾರದ ಆರೋಪದ ಮೇಲೆ ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ವಿರೋಧ ಪಕ್ಷದ ಬೇಡಿಕೆಗೆ ಪ್ರತಿಕ್ರಿಯಿಸಿದ ಸತೀಶ್, ಯಾವುದೇ ಆರೋಪ ಸಾಬೀತಾಗುವ ಮೊದಲೇ ರಾಜೀನಾಮೆ ಕೋರುವುದು ಎಷ್ಟು ಸಮರ್ಥನೀಯ? ಎಂದು ಅವರು ದ್ವಿಮುಖ ನೀತಿ ಎಂದು ಕರೆದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ, ಮೂವರು ಸಚಿವರ ವಿರುದ್ಧ ಆರೋಪಗಳನ್ನು ಹೊರಿಸಲಾಗಿತ್ತು, ಆದರೆ ಯಾವುದೇ ರಾಜೀನಾಮೆ ನೀಡಿರಲಿಲ್ಲ ಎಂದು ಹೇಳಿದರು. ಯಾರದೋ ಆಪಾದಿತ ಆಡಿಯೋ ಅಥವಾ ವಿಡಿಯೋ ಕ್ಲಿಪ್‌ಗಳನ್ನು ಅವಲಂಬಿಸಿ ರಾಜೀನಾಮೆಗೆ ಬೇಡಿಕೆ ಇಡುವುದು ತರ್ಕಬದ್ಧವಲ್ಲದ ಮತ್ತು ರಾಜಕೀಯ ಪ್ರೇರಿತ ಎಂದು ಕರೆದರು. “ಪ್ರತಿಯೊಂದು ಇಲಾಖೆಯ ಬಗ್ಗೆಯೂ ಇಂತಹ ಚರ್ಚೆಗಳು ನಡೆಯುತ್ತವೆ. ಅದು ಸಾಬೀತಾಗದಿದ್ದರೇ ಮಂತ್ರಿಗಳನ್ನು ಹೊಣೆಗಾರರನ್ನಾಗಿ ಮಾಡುವುದಿಲ್ಲ ಎಂದು…

Read More

Updated By: Priyalachhi ಬೆಂಗಳೂರು: ಚುನಾವಣಾ ಆಯೋಗ ಕರ್ನಾಟಕದಲ್ಲೂ SIR ಮಾಡಲು ಮುಂದಾಗಿದ್ದು, ಗುರುವಾರ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಭಾರತ ಚುನಾವಣಾ ಆಯೋಗವು ಉದ್ದೇಶಿಸಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision) ಕುರಿತು ವಿವರವಾದ ಮಾಹಿತಿಯನ್ನು ಸಂಪುಟ ಸಚಿವರ ಮುಂದೆ ಮಂಡಿಸಲಾಯಿತು. ಮತದಾರರ ಪಟ್ಟಿಯಲ್ಲಿ ಎಲ್ಲಾ ಅರ್ಹ ನಾಗರಿಕರ ಸೇರ್ಪಡೆ, ಅನರ್ಹ ವ್ಯಕ್ತಿಗಳನ್ನು ತೆಗೆದುಹಾಕುವುದು ಮತ್ತು ಚುನಾವಣಾ ಪ್ರಕ್ರಿಯೆಯ ಒಟ್ಟಾರ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ನಡೆಸಲು ಭಾರತ ಚುನಾವಣಾ ಆಯೋಗವು ಉದ್ದೇಶಿಸಿದೆ. ಈ ಕುರಿತು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಒದಗಿಸಿರುವ ಮಾಹಿತಿಯನ್ನು ಸಚಿವ ಸಂಪುಟದ ಮುಂದೆ ಮಂಡಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವ ಭಾರತದ ಚುನಾವಣಾ ಆಯೋಗದ ಪ್ರಸ್ತಾವನೆಯ ಕುರಿತು ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಚರ್ಚಿಸಿದ್ದು, ವಿವರವಾದ ಮಾಹಿತಿಯನ್ನು ಮಂಡಿಸಲು ಸೂಚಿಸಲಾಗಿತ್ತು.‌ ಅದರಂತೆ…

Read More

Updated By: Priyalachhi ಬೆಂಗಳೂರು: ವಿಧಾನ ಮಂಡಲ ಅಧಿವೇಶನ ಮುಕ್ತಾಯವಾದ ಬೆನ್ನಲ್ಲೇ ಹಣಕಾಸು ಇಲಾಖೆಯ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಫೆಬ್ರವರಿ 5ರಂದು ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದಾರೆ. ವಿಧಾನಮಂಡಲ ಜಂಟಿ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಮಾರ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 17ನೇ ಬಾರಿಯ ರಾಜ್ಯ ಬಜೆಟ್ ಮಂಡಿಸಲಿದ್ದು, ಸರ್ಕಾರದ 10 ಇಲಾಖೆಗಳ ಜೊತೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಇಂದು ಅರಣ್ಯ, ಕಾನೂನು, ಪ್ರವಾಸೋದ್ಯಮ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ಕಾರ್ಮಿಕ, ಒಳಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳನ್ನು ಇಂದಿನ ಸಭೆಗೆ ಕರೆದಿದ್ದಾರೆ.  

Read More

Updated By: Priyalachhi ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ವಲಯಕ್ಕೆ ಹೆಚ್ಚಿನ ಹಣವನ್ನು ಮಂಜೂರು ಮಾಡಿ ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಕ್ಕಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಗುರುವಾರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಅಭಿನಂದಿಸಿದ್ದಾರೆ. ಬೆಂಗಳೂರು-ಹೈದರಾಬಾದ್ ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಬೀದರ್ ವರೆಗೆ ವಿಸ್ತರಿಸಬೇಕು ಎಂದು ದೇವೇಗೌಡರು ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ, 2026ರ ಬಜೆಟ್‌ನಲ್ಲಿ ಸುಮಾರು 4,000 ಕಿ.ಮೀ. ವ್ಯಾಪ್ತಿಯ ಏಳು ಹೊಸ ಹೈಸ್ಪೀಡ್ ರೈಲು ಕಾರಿಡಾರ್‌ ಘೋಷಣೆಯನ್ನು ಶ್ಲಾಘಿಸಿದ್ದಾರೆ. ಈ ರೈಲು ಕಾರಿಡಾರ್‌ಗಳು ಅಭಿವೃದ್ಧಿಯ ಕನೆಕ್ಟರ್‌ಗಳಾಗಿ ಕಾರ್ಯನಿರ್ವಹಿಸುತ್ತವೆ. ಸುಸ್ಥಿರ ಸಾರಿಗೆ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತವೆ ಎಂದು ಮಾಜಿ ಪ್ರಧಾನಿ ಹೇಳಿದ್ದಾರೆ. ಅವುಗಳಲ್ಲಿ, ಚೆನ್ನೈ-ಬೆಂಗಳೂರು-ಹೈದರಾಬಾದ್ ಕಾರಿಡಾರ್(ಹೈದರಾಬಾದ್-ಚೆನ್ನೈ ಮತ್ತು ಚೆನ್ನೈ-ಬೆಂಗಳೂರು) ದಕ್ಷಿಣ ಪ್ರದೇಶದಲ್ಲಿ ಅತಿ ವೇಗದ ತ್ರಿಕೋನವನ್ನು ಸೃಷ್ಟಿಸುತ್ತದೆ. ಈ ಕಾರಿಡಾರ್ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದ ಜನರ ಆಕಾಂಕ್ಷೆಗಳು ಮತ್ತು ಚಲನಶೀಲತೆಯ ಅಗತ್ಯಗಳನ್ನು…

Read More

Updated By: Priyalachhi ನವದೆಹಲಿ: ಯುರೋಪಿಯನ್ ಯೂನಿಯನ್ (ಇಯು) ಮತ್ತು ಅಮೆರಿಕದ ಜತೆ ಭಾರತದ ವ್ಯಾಪಾರ ಒಪ್ಪಂದಗಳ ನಂತರ ಜಗತ್ತು ಸ್ಥಿರತೆಯ ಬಗ್ಗೆ ಹೆಚ್ಚು ವಿಶ್ವಾಸ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು. ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯ ಮೇಲಿನ ಚರ್ಚೆಗೆ ಇಂದು ಸಂಜೆ ರಾಜ್ಯಸಭೆಯಲ್ಲಿ ಸುದೀರ್ಘವಾಗಿ ಉತ್ತರಿಸಿದ ಮೋದಿ, ಸರ್ಕಾರ ಸಾಧನೆಗಳನ್ನು ಬಿಡಿಬಿಡಿಯಾಗಿ ವಿವರಿಸುತ್ತಾ, ಕಾಂಗ್ರೆಸ್‌ ವಿರುದ್ಧ ಟೀಕಾಪ್ರಹಾರ ಮಾಡಿದರು. ಭಾರತದ ಒಪ್ಪಂದಗಳನ್ನು ಜಗ ಮೆಚ್ಚಿದೆ: ಭಾರತ ಹಲವಾರು ದೇಶಗಳೊಂದಿಗೆ ಭವಿಷ್ಯಕ್ಕೆ ಸಿದ್ಧವಾದ(Future ready) ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುತ್ತಿದೆ. ಕಳೆದ ಕೆಲವು ದಿನಗಳಲ್ಲಿ ಯುರೋಪಿಯನ್ ಒಕ್ಕೂಟ(ಇಯು)ದ 27 ರಾಷ್ಟ್ರಗಳ ಗುಂಪಿನೊಂದಿಗೆ ‘ಮದರ್ ಆಫ್ ಆಲ್ ಡೀಲ್ಸ್’ ಎಂದೇ ಬಣ್ಣಿಸಲಾದ ಮಹತ್ವದ ವ್ಯಾಪಾರ ಒಪ್ಪಂದವೂ ಸೇರಿ ಇತರೆ 9 ದೊಡ್ಡ ದೇಶಗಳೊಂದಿಗೆ ನಾವು ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕಿದ್ದೇವೆ. ಈ ಒಪ್ಪಂದಗಳನ್ನು ಜಗತ್ತು ಮೆಚ್ಚಿಕೊಂಡಿದೆ ಎಂದು ವಿವರಿಸಿದರು. ಇದೇ ವೇಳೆ, ಭಾರತ ಈಗ ಜಾಗತಿಕ ದಕ್ಷಿಣ(Global South)ದ ಬಲವಾದ ಧ್ವನಿಯಾಗಿದೆ ಎಂದೂ…

Read More

Updated By: Priyalachhi ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಪ್ರಕ್ರಿಯೆಯಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರೇ ಗೆಲುವು ಸಾಧಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ನಂಜೇಗೌಡ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದು, ಬಿಜೆಪಿಯ ಪ್ರತಿಸ್ಪರ್ಧಿ ಅಭ್ಯರ್ಥಿ ಕೆ.ಎಸ್. ಮಂಜುನಾಥ ಗೌಡ ಅವರಿಗಿಂತ 250 ಹೆಚ್ಚಿನ ಮತಗಳನ್ನು ಪಡೆದಿರುವುದಾಗಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದ್ದು, ಹೈಕೋರ್ಟ್ ಆದೇಶವನ್ನು ವಜಾಗೊಳಿಸಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ನಂಜೇಗೌಡ ಕೇವಲ 248 ಮತಗಳಿಂದ ಗೆಲುವು ಸಾಧಿಸಿದ್ದರು. ಅವರು 50, 955 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಮಂಜುನಾಥ ಗೌಡ 50, 707 ಮತ ಗಳಿಸಿದ್ದರು. ನಂತರ ಮಂಜುನಾಥ ಗೌಡ ನ್ಯಾಯಾಲಯದಲ್ಲಿ ತಕಾರರು ಅರ್ಜಿ ಸಲ್ಲಿಸಿದ್ದರು. ಮತಗಳ ಮರು ಎಣಿಕೆ ಮತ್ತು ಫಲಿತಾಂಶಗಳನ್ನು ಹೊಸದಾಗಿ ಘೋಷಿಸಲು ಹೈಕೋರ್ಟ್ ಆದೇಶಿಸಿತು.

Read More

Updated By: Priyalachhi ನವದೆಹಲಿ: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯನ್ನು ವಿರೋಧಿಸಿರುವ ಸಂಸದ ತೇಜಸ್ವಿ ಸೂರ್ಯ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಫೆಬ್ರವರಿ 9 ರಿಂದ ಕರ್ನಾಟಕದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಜಾರಿಗೆ ತಂದಿದ್ದು, ವ್ಯಾಪಕ ಸಾರ್ವಜನಿಕ ವಿರೋಧವನ್ನು ಕಡೆಗಣಿಸಿ ಪ್ರಯಾಣಿಕರ ಮೇಲೆ ಅನಗತ್ಯ ಹೊರೆಯನ್ನು ಹೇರಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಇಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ಈ ವಿಷಯದ ಬಗ್ಗೆ ಅವರಿಗೆ ತಿಳಿಸಲಾಯಿತು ಮತ್ತು ದರ ನಿಗದಿ ಸಮಿತಿಯನ್ನು ಪುನರ್ರಚಿಸುವಂತೆ ಕೋರಲಾಯಿತು ಎಂದು ತೇಜಸ್ವಿ ಸೂರ್ಯ ಎಕ್ಸ್ ಪೋಸ್ಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಸಮಿತಿಯ ಮುಂದೆ ಇರಿಸಲಾದ ದರ ಲೆಕ್ಕಾಚಾರಗಳಲ್ಲಿನ ಬಹು ವೈಪರೀತ್ಯಗಳನ್ನು ಎತ್ತಿ ತೋರಿಸಲಾಯಿತು, ತಪ್ಪಾದ base year ಬಳಕೆಯಿಂದ ಪ್ರಯಾಣಿಕರಿಂದ ಅಧಿಕ ಶುಲ್ಕ…

Read More