Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ನವದೆಹಲಿ: 2020ರಲ್ಲಿ ನಡೆದ ಭಾರತ-ಚೀನಾ ಸಂಘರ್ಷದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜವಾಬ್ದಾರಿಯನ್ನು ಕೈಬಿಟ್ಟು ನರವಾಣೆ ಅವರಿಗೆ ವಹಿಸಿದರು ಎಂದು ಬುಧವಾರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ‘ಬಿಡುಗಡೆಯಾಗದ ಆತ್ಮಚರಿತ್ರೆ’ಯನ್ನು ಉಲ್ಲೇಖಿಸಿ ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ‘ಕೇಂದ್ರ ಸರ್ಕಾರ ಬೇರೆ ರೀತಿಯಲ್ಲಿ ಹೇಳಿಕೊಂಡರೂ ಈ ‘ಪುಸ್ತಕ’ ಅಸ್ತಿತ್ವದಲ್ಲಿದೆ ಎಂದು ಭಾರತದ ಯುವಕರು ತಿಳಿದುಕೊಳ್ಳಬೇಕೆಂದು ಅವರು ಬಯಸುತ್ತಾರೆ ಎಂದು ಹೇಳಿದರು. “ಈ ಪುಸ್ತಕ ಅಸ್ತಿತ್ವದಲ್ಲಿಲ್ಲ ಎಂದು ಸ್ಪೀಕರ್ ಹೇಳಿದ್ದಾರೆ, ಸರ್ಕಾರ ಅದು ಅಸ್ತಿತ್ವದಲ್ಲಿಲ್ಲ ಎಂದು ಹೇಳಿದೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಪುಸ್ತಕ ಅಸ್ತಿತ್ವದಲ್ಲಿಲ್ಲ ಎಂದು ಹೇಳಿದ್ದಾರೆ. ಭಾರತದ ಪ್ರತಿಯೊಬ್ಬ ಯುವಕರು ಈ ಪುಸ್ತಕ ಅಸ್ತಿತ್ವದಲ್ಲಿದೆ ಎಂದು ನೋಡಬೇಕು. ಲಡಾಖ್‌ನಲ್ಲಿ ಏನಾಯಿತು ಎಂಬುದರ ಸಂಪೂರ್ಣ ವಿವರವನ್ನು ನರವಾಣೆ ಬರೆದಿದ್ದಾರೆ ಎಂದು ರಾಹುಲ್ ಗಾಂಧಿ ಅವರು ಹೇಳಿದರು.

Read More

Updated By: Priyalachhi ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಂಗಳವಾರ ಹೇಳಿದ್ದಾರೆ. ಬಿಜೆಪಿ ಆರೋಪ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು. ಯಾವುದಾದರೂ ಅಧಿಕಾರಿ ಸಚಿವ ಅಥವಾ ಮುಖ್ಯಮಂತ್ರಿಯ ಹೆಸರನ್ನು ದುರುಪಯೋಗ ಮಾಡಿಕೊಂಡು ಲಂಚ ಪಡೆದಿದ್ದರೆ, ಆ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ನಾನು ಯಾವ ತಪ್ಪು ಮಾಡಿದ್ದೇನೆ? ರಾಜೀನಾಮೆ ನೀಡುವ ಅಗತ್ಯವೇನಿದೆ?” ಎಂದು ಪ್ರಶ್ನಿಸಿದರು. ತಮ್ಮ ಹಾಗೂ ತಮ್ಮ ಪುತ್ರರ ಹೆಸರಿರುವ ಆಡಿಯೋ ಕುರಿತು ಪ್ರತಿಕ್ರಿಯಿಸಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಖರೀದಿಸುವ ಕುರಿತು ಹರಿದಾಡಿದ್ದ ಆಡಿಯೋ ನಂತರ ನಕಲಿ ಎಂದು ಸಾಬೀತಾಗಿದ್ದುದನ್ನು ಉದಾಹರಣೆಯಾಗಿ ನೀಡಿದರು. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪಗಳು ಹೊಸದೇನಲ್ಲ. ಜೆ.ಹೆಚ್. ಪಟೇಲ್, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲೂ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ಇಂತಹ ಆರೋಪಗಳು ಬಂದಿವೆ. ಆದರೆ, ಯಾರೂ ರಾಜೀನಾಮೆ ನೀಡಿಲ್ಲ ಎಂದು ಹೇಳಿದರು. ಲೋಕಾಯುಕ್ತರಿಗೆ…

Read More

Updated By: Priyalachhi ನವದೆಹಲಿ/ಬೆಂಗಳೂರು: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ, ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್‌ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು. ಸಂಸತ್‌ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿ ವೇಳೆ ಕುಮಾರಸ್ವಾಮಿ ಅವರು, ಮುಖ್ಯವಾಗಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ ಹಾಗೂ ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಆನೆಗಳ ದಾಳಿ ಬಗ್ಗೆ ಚರ್ಚಿಸಿದರು. ಶಾಶ್ವತ ಪರಿಹಾರಕ್ಕೆ ಆಗ್ರಹ: ವನ್ಯಜೀವಿಗಳ ಉಪಟಳ ನಿರಂತರವಾಗಿ ನಡೆಯುತ್ತಿದೆ. ಇದರಿಂದ ಅನೇಕರು, ಅದರಲ್ಲಿಯೂ ಅರಣ್ಯದ ಅಂಚಿನಲ್ಲಿ ಬೇಸಾಯ ಮಾಡುವ, ದನಕರುಗಳನ್ನು ಮೇಯಿಸುವ ರೈತರು ಬಲಿಯಾಗಿದ್ದಾರೆ. ಇನ್ನೂ ಅನೇಕರು ಗಾಯಗೊಂಡು ಶಾಶ್ವತವಾಗಿ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ. ಕರ್ನಾಟಕದಲ್ಲಿ ಈ ಸಮಸ್ಯೆ ಬಿಗಡಾಯಿಸಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು…

Read More

Updated By: Priyalachhi ಬೆಂಗಳೂರು: ಹಿಂದೂ ಧರ್ಮ, ಹಿಂದೂಗಳು, ಹಿಂದೂಗಳ ಆಚರಣೆಗಳು ಅಂದರೆ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ಅಸಡ್ಡೆ? ಯಾಕಿಷ್ಟು ದ್ವೇಷ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಪ್ರಶ್ನೆ ಮಾಡಿದೆ. ಬೆಂಗಳೂರು ಕರದ ಉತ್ಸವದ ಅನುದಾನ ಬಿಡುಗಡೆಗೆ ಶೇ.20ರಷ್ಟು ಕಮಿಷನ್ ಕೇಳಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಕರಗದ ದುಡ್ಡು ಬಿಡುಗಡೆಗೂ ಕಮಿಷನ್, ಸಿಎಂ ಸಿದ್ದರಾಮಯ್ಯ ಅವರೇ,ಹಿಂದೂ ಧರ್ಮ, ಹಿಂದೂಗಳು, ಹಿಂದೂಗಳ ಆಚರಣೆಗಳು ಅಂದರೆ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ಅಸಡ್ಡೆ? ಯಾಕಿಷ್ಟು ದ್ವೇಷ? ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಸರ್ಕಾರ ಬಿಡುಗಡೆ ಮಾಡಬೇಕಾದ ಅನುದಾನದಲ್ಲೂ ಕಮಿಷನ್ ಕೇಳುತ್ತಿದ್ದೀರಲ್ಲ ಸ್ವಾಮಿ, ನಿಮ್ಮ ಸರ್ಕಾರದ ಲಜ್ಜೆಗೇಡಿತನಕ್ಕೆ ಏನನ್ನಬೇಕು? ಎಂದು ಕಿಡಿಕಾರಿದ್ದಾರೆ. ಧರ್ಮರಾಯ ದೇವಸ್ಥಾನದ ಕರಗ ಮತ್ತು ದೈನಂದಿನ ನಿರ್ವಹಣೆಗೆ ರಾಜ್ಯ ಸರ್ಕಾರ…

Read More

Updated By: Priyalachhi ಬೆಂಗಳೂರು: ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಮತ್ತು ಯುಪಿಎ ಯುಗದ ಮನರೇಗಾವನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರ ಬುಧವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸಭೆಯಲ್ಲಿ ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ನಿರ್ಣಯ ಮಂಡಿಸಿದ್ದರು. “ಕರ್ನಾಟಕದ ಗ್ರಾಮೀಣ ಜನರ ಬದುಕುವ ಹಕ್ಕನ್ನು ರಕ್ಷಿಸುವ ದೃಷ್ಟಿಯಿಂದ, ಈ ಸದನವು ಕೇಂದ್ರ ಸರ್ಕಾರವನ್ನು ತಕ್ಷಣವೇ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್(ಗ್ರಾಮೀಣ) (ವಿಬಿ-ಗ್ರಾಮ್-ಜಿ) ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತದೆ ಎಂದು ಸಿಎಂ ಹೇಳಿದ್ದರು. ವಿಬಿ-ಜಿ ರಾಮ್‌ ಜಿ ಕಾಯ್ದೆ ಫೆಡರಲ್ ತತ್ವಕ್ಕೆ ವಿರುದ್ಧವಾಗಿದೆ. ರಾಜ್ಯ ಖಜಾನೆಗೆ ತೀವ್ರ ಹೊರೆಯಾಗಿದೆ ಮತ್ತು ವಿಕೇಂದ್ರೀಕರಣದ ತತ್ವಕ್ಕೆ ವಿರುದ್ಧವಾಗಿದೆ. ಗ್ರಾಮ ಪಂಚಾಯತ್‌ಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿದೆ. ಹೀಗಾಗಿ ಈ ಕಾಯ್ದೆಯನ್ನು…

Read More

Updated By: Priyalachhi ಬೆಂಗಳೂರು: ಮುಖ್ಯಮಂತ್ರಿ ಕುರ್ಚಿ ಗುದ್ದಾಟ ವಿಚಾರ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಮುಖ್ಯಮಂತ್ರಿ ಉತ್ತರ ನೀಡುವಾಗ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪಿಸಿದರು. ಕಳೆದ ಒಂದು ತಿಂಗಳಿಂದ ಡಿ.ಕೆ. ಶಿವಕುಮಾರ್ ಅವರ ಮಾತು, ಟ್ವೀಟ್ ಗಳು ನೂರು ಅರ್ಥ ಬರುವಂತಿದ್ದು, ಎಲ್ಲರೂ ಗೊಂದಲಕ್ಕೆ ಒಳಗಾಗಿದ್ದಾರೆ. ಆ ಸಂದರ್ಭ ಯಾವಾಗ ಬರುತ್ತದೆ ಎಂಬುದನ್ನು ಸ್ಪಷ್ಪಪಡಿಸಬೇಕು ಎಂದರು. ಈ ಮಾತನಿಗೆ ಉತ್ತರಿಸಿದ ಡಿಕೆ ಶಿವಕುಮಾರ್, ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ಇಲ್ಲಿ ಎಲ್ಲವೂ ಸಾಧ್ಯ. One man with Courage makes a majority ಎಂಬುದನ್ನು ನಾನು ನಂಬಿದ್ದೇನೆ. ದೃಢವಾದ ನಿಲುವು, ಸಂಕಲ್ಪ ಹೊಂದಿದ್ದರೆ, ಒಬ್ಬನೇ ಸಾಕು. ಆತನ ಜೊತೆ 140 ಜನರೂ ಇರುತ್ತಾರೆ, ಇನ್ನೂ ಜಾಸ್ತಿನೂ ಆಗುತ್ತಾರೆ. ನೋಡೋಣ 2028ರಲ್ಲಿ ಏನಾಗುತ್ತದೆ ಎಂದರು. “ಅಶೋಕ್ ಅವರೇ, ನೀವು ಹಿರಿಯ ರಾಜಕಾರಣಿ. ಯಾರು ಏನಾದರೂ ಮಾತನಾಡಲಿ,…

Read More

Updated By: Priyalachhi ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಭಾರತೀಯ ಜನತಾ ಪಕ್ಷ ಮಂಗಳವಾರ ಆರೋಪಿಸಿದ್ದು, ಈ ಸಂಬಂಧ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸಿದೆ. ಇಂದು ವಿಧಾನಸಭೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, “ಅಬಕಾರಿ ಇಲಾಖೆಯಲ್ಲಿ, ಪರವಾನಗಿ ನೀಡಲು ಮತ್ತು ವರ್ಗಾವಣೆಯನ್ನು ಸುಗಮಗೊಳಿಸಲು ಲಂಚ ಪಡೆಯಲಾಗುತ್ತಿದೆ. ಇದಕ್ಕೆ ಸಂಬಂಧಿಸಿದ ಆಡಿಯೋ ರೆಕಾರ್ಡಿಂಗ್‌ಗಳನ್ನು ಬಿಡುಗಡೆ ಮಾಡಲಾಗಿದೆ ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಆದ್ದರಿಂದ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಕ್ಷಣವೇ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು. ರಾಜ್ಯ ಅಬಕಾರಿ ಇಲಾಖೆ ಭ್ರಷ್ಟಾಚಾರದಲ್ಲಿ ಮುಂಚೂಣಿಯಲ್ಲಿದ್ದು, ತಿಮ್ಮಾಪುರ ಅವರಿಗೆ ಪಾಲು ಕೊಡಬೇಕೆಂಬ ಆಡಿಯೋ ವೈರಲ್ ಆಗಿದೆ. ಆ ಆಡಿಯೋ ದಾಖಲೆ ಈ ಪೆನ್‌ಡ್ರೈವ್‌ನಲ್ಲಿದೆ ಎಂದು ಆರ್ ಅಶೋಕ್​, ಸದನಕ್ಕೆ ಪೆನ್​ಡ್ರೈವ್ ತೋರಿಸಿದರು.

Read More

Updated By: Priyalachhi ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಸದ್ದು ಇಂದು ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದು, ವಿಪಕ್ಷಗಳು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದರು. ತನಿಖಾ ವರದಿ ಬರುವವರೆಗೂ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆ ಕೊಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು. ನಿಯಮ 69 ಅಡಿಯಲ್ಲಿ ಚರ್ಚೆ ವೇಳೆ ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಅಬಕಾರಿ ಇಲಾಖೆಯಲ್ಲಿ ಹೊಸ ರೀತಿಯ ಭ್ರಷ್ಟಾಚಾರ ನಡೆಯುತ್ತಿದೆ. ಸಿದ್ದರಾಮಯ್ಯ ಈ ಬಗ್ಗೆ ಚಕಾರ ಎತ್ತದೆ, ಮೌನ ಮೂರ್ತಿ ಆಗಿದ್ದಾರೆ. ಬೇರೆ ರಾಜ್ಯಗಳ ಚುನಾವಣೆಗೆ ಇಲಾಖೆಯಲ್ಲಿ ಹಣ ಸಂಗ್ರಹ ಮಾಡಲಾಗುತ್ತಿದೆ ಆರೋಪ ಇದೆ. ಗಾಂಧೀಜಿಯ ಬಗ್ಗೆ ಮಾತನಾಡಿದರೆ ಸಾಲದು. ಗಾಂಧೀಜಿ ಆದರ್ಶ ಪಾಲನೆ ಮಾಡಬೇಕಲ್ವಾ? ಅಬಕಾರಿ ಇಲಾಖೆಯಲ್ಲಿ ತಿಂಗಳ ಹಣ ಫಿಕ್ಸ್ ಆಗಿದೆ. ಕಾಸಿಗಾಗಿ ಪೋಸ್ಟಿಂಗ್, ಟ್ರ್ಯಾಪ್ ಆದವರಿಗೆ ಆಯಕಟ್ಟಿನ ಹುದ್ದೆ ನೀಡಲಾಗುತ್ತಿದೆ. ಮದ್ಯ ಮಾರಾಟ ಸಂಘದ ಅಧ್ಯಕ್ಷ ಗುರುಸ್ವಾಮಿ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ. ಗುರುಸ್ವಾಮಿ ಸಿದ್ದರಾಮಯ್ಯ ಅವರ ಕ್ಷೇತ್ರದವರು ಎಂದು…

Read More

Updated By: Priyalachhi ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದಕ್ಕೆ ತಡರಾತ್ರಿ ಹಸಿರು ನಿಶಾನೆ ಸಿಕ್ಕಿದೆ. ಅಮೆರಿಕ ಅಧ್ಯಕ್ಷರು ಇದನ್ನು ಘೋಷಿಸಿದರು. ಟ್ರಂಪ್ ಭಾರತದ ಮೇಲಿನ ಸುಂಕವನ್ನು ಶೇಕಡಾ 18ಕ್ಕೆ ಇಳಿಸಿದರು. ಇದಕ್ಕೆ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾರತದ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಂಡಿದ್ದಾರೆ ಎಂದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಒತ್ತಡದಿಂದಾಗಿ ಅಮೆರಿಕ ಜೊತೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ಈ ಒಪ್ಪಂದದ ಮೂಲಕ ರೈತರ ಕಠಿಣ ಪರಿಶ್ರಮವನ್ನು ಮಾರಾಟ ಮಾಡಲಾಗಿದೆ. ರಾಷ್ಟ್ರಪತಿಗಳ ಭಾಷಣದ ಸಮಯದಲ್ಲಿ ಮಾತನಾಡದಂತೆ ತಮ್ಮನ್ನು ತಡೆಯಲಾಗಿದೆ ಎಂದು ರಾಹುಲ್ ಆರೋಪಿಸಿದರು. ಸಂಸತ್ತಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ನಾನು ಮೂರು ವಿಷಯಗಳನ್ನು ಹೇಳಲು ಬಯಸುತ್ತೇನೆ ಎಂದು ಹೇಳಿದರು. ತನಗೆ ಮಾತನಾಡಲು…

Read More

Updated By: Priyalachhi ಬೆಂಗಳೂರು: ವಿರೋಧ ಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಮತ್ತು ಯುಪಿಎ ಯುಗದ ಮನರೇಗಾವನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ. ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ನಿರ್ಣಯ ಮಂಡಿಸಿದರು. “ಕರ್ನಾಟಕದ ಗ್ರಾಮೀಣ ಜನರ ಬದುಕುವ ಹಕ್ಕನ್ನು ರಕ್ಷಿಸುವ ದೃಷ್ಟಿಯಿಂದ, ಈ ಸದನವು ಕೇಂದ್ರ ಸರ್ಕಾರವನ್ನು ತಕ್ಷಣವೇ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್(ಗ್ರಾಮೀಣ) (ವಿಬಿ-ಗ್ರಾಮ್-ಜಿ) ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತದೆ ಎಂದು ಸಿಎಂ ಹೇಳಿದರು. ವಿಬಿ-ಜಿ ರಾಮ್‌ ಜಿ ಕಾಯ್ದೆ ಫೆಡರಲ್ ತತ್ವಕ್ಕೆ ವಿರುದ್ಧವಾಗಿದೆ. ರಾಜ್ಯ ಖಜಾನೆಗೆ ತೀವ್ರ ಹೊರೆಯಾಗಿದೆ ಮತ್ತು ವಿಕೇಂದ್ರೀಕರಣದ ತತ್ವಕ್ಕೆ ವಿರುದ್ಧವಾಗಿದೆ. ಗ್ರಾಮ ಪಂಚಾಯತ್‌ಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿದೆ. ಹೀಗಾಗಿ ಈ ಕಾಯ್ದೆಯನ್ನು ತಕ್ಷಣವೇ…

Read More