Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಮುಂಬೈ: ಇತ್ತೀಚಿಗೆ ವಿಮಾನ ಪತನದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಶನಿವಾರ ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಸುನೇತ್ರಾ ಪವಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇದಕ್ಕು ಮುನ್ನ ಸುನೇತ್ರಾ ಪವಾರ್ ಅವರನ್ನು ಎನ್‌ಸಿಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು. ಇಂದು ಮುಂಬೈನಲ್ಲಿ ನಡೆದ ಎನ್ ಸಿಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ, ಎನ್‌ಸಿಪಿ ನಾಯಕ ಛಗನ್ ಭುಜಬಲ್ ಅವರು ರಾಜ್ಯಸಭಾ ಸದಸ್ಯೆಯಾಗಿರುವ ಸುನೇತ್ರಾ ಪವಾರ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕಿ ಸ್ಥಾನಕ್ಕೆ ಪ್ರಸ್ತಾಪಿಸಿದರು ಮತ್ತು ಇತರ ಹಿರಿಯ ನಾಯಕರು ಅದನ್ನು ಅನುಮೋದಿಸಿದರು. 2024ರಲ್ಲಿ ಎನ್ ಸಿಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಸುನೇತ್ರಾ ಪವಾರ್ ಅವರನ್ನು ಜೂನ್ 18, 2024…

Read More

Updated By: Priyalachhi ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಿಂದ ಅಕ್ರಮವಾಗಿ ರಾಜ್ಯದಲ್ಲಿ ನೆಲೆಯೂರಿದ್ದ 432 ಮಂದಿ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 255 ಮಂದಿಯನ್ನು ಪೊಲೀಸ್ ಇಲಾಖೆ ಗಡಿಪಾರು ಮಾಡಿದೆ. ನಗರದ ಹೊರವಲಯದಲ್ಲಿ ಅಕ್ರಮವಾಗಿ ನೆಲೆಸಿದ್ದ 53 ಮಂದಿ ಬಾಂಗ್ಲಾದೇಶಿಯರನ್ನು ಇತ್ತೀಚೆಗೆ ಪೊಲೀಸರು ಪತ್ತೆ ಹಚ್ಚಿದ್ದರು. ಅನಧಿಕೃವಾಗಿ ರಾಜಧಾನಿಯಲ್ಲಿ ಬಾಂಗ್ಲಾ ನುಸುಳುಕೋರರ ವಿರುದ್ಧ ವಿಳಂಬವಾಗಿ ಕ್ರಮ ಕೈಗೊಂಡಿರುವ ಬಗ್ಗೆ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿತ್ತು. ಈ ಬೆನ್ನಲ್ಲೇ, ಬಾಂಗ್ಲಾದೇಶ ಸೇರಿ ವಿವಿಧ ದೇಶಗಳಿಂದ ಬಂದು ರಾಜ್ಯದಲ್ಲಿ ಬೀಡುಬಿಟ್ಟಿದ್ದ ಅಕ್ರಮ ವಲಸಿಗರ ಪತ್ತೆ, ಗಡಿಪಾರು ಹಾಗೂ ಈ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಲುಕ್ ಔಟ್ ನೋಟಿಸ್: ಕಳೆದ ಮೂರು ವರ್ಷಗಳಲ್ಲಿ 432 ಅಕ್ರಮ ವಲಸಿಗರನ್ನು ಪತ್ತೆ ಮಾಡಲಾಗಿದೆ. ಇದರ ಪೈಕಿ 370 ಮಂದಿ ಬಾಂಗ್ಲಾದೇಶದವರಾಗಿದ್ದಾರೆ. ಅಲ್ಲದೆ, ಪಾಕಿಸ್ತಾನದ 16 ಹಾಗೂ ಶ್ರೀಲಂಕಾದ 42 ಮಂದಿ ಇದ್ದಾರೆ. ಮೂರು…

Read More

Updated By: Priyalachhi ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಅಧ್ಯಕ್ಷೆ ಮತ್ತು ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ ಅವರು ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ಬಹಿರಂಗಪಡಿಸಿವೆ ಅವರಿಗೆ 67 ವರ್ಷ ವಯಸ್ಸಾಗಿತ್ತು. ಇಂದು ಬೆಳಗಿನ ಜಾವ ಶ್ರೀನಿವಾಸನ್ ಅವರ ತಮ್ಮ ನಿವಾಸದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. ಘಟನೆ ವೇಳೆ ಪತ್ನಿ ಉಷಾ ಮನೆಯಲ್ಲಿ ಇರಲಿಲ್ಲ. ಪ್ರಸ್ತುತ ನಡೆಯುತ್ತಿರುವ ಸಂಸತ್ ಅಧಿವೇಶನದಿಂದಾಗಿ ಅವರು ದೆಹಲಿಗೆ ತೆರಳಿದ್ದರು. ಸದ್ಯ ವಿಷಯ ತಿಳಿದ ಕೂಡಲೇ ಉಷಾ ಮನೆಗೆ ಮರಳಿದ್ದಾರೆ. ಅಂತ್ಯಕ್ರಿಯೆಯ ಸಮಯ ನಿಗದಿಯಾಗಿಲ್ಲ. ಶ್ರೀನಿವಾಸನ್ ಪೊನ್ನಾನಿಯ ಕುಟ್ಟಿಕ್ಕಾಡ್‌ನ ವೆಂಗಲಿ ತರವಟ್ಟಿಯ ನಾರಾಯಣ ಮತ್ತು ಸರೋಜಿನಿ ದಂಪತಿಯ ಪುತ್ರರಾಗಿದ್ದರು. ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ನಿವೃತ್ತ ಡಿವೈಎಸ್ಪಿ ಆಗಿಯೂ ಸೇವೆ ಸಲ್ಲಿಸಿದ್ದಾರೆ. 1991ರಲ್ಲಿ ತಮ್ಮ ದೂರದ ಸಂಬಂಧಿಯಾದ ಪಿಟಿ ಉಷಾ ಅವರನ್ನು ವಿವಾಹವಾದರು. ದಂಪತಿಗೆ ಡಾ.…

Read More

Updated By: Priyalachhi ಬೆಂಗಳೂರು: 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ. 2020-25ನೇ ಅವಧಿಯ ಗ್ರಾಮ ಪಂಚಾಯಿತಿಗಳ ಅವಧಿಯು 2026ರ ಜನವರಿ ಮಾಹೆಯಿಂದ ಪೂರ್ಣಗೊಳ್ಳಲಿದೆ. ಸದರಿ ಅವಧಿಯು ಮುಕ್ತಾಯಗೊಳ್ಳುವ ಗ್ರಾಮ ಪಂಚಾಯ್ತಿಗಳಿಗೆ 2025ರ ಡಿಸೆಂಬರ್ ನಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಬೇಕಾಗಿತ್ತು. ಸಾರ್ವತ್ರಿಕ ಚುನಾವಣೆ ನಡೆಸುವ ಆರು ತಿಂಗಳು ಮುಂಚಿತವಾಗಿ ಮತದಾರರ ಪಟ್ಟಿ ಮುದ್ರಣ ಒಳಗೊಂಡಂತೆ, ಇತರ ಎಲ್ಲಾ ಪೂರ್ವಭಾವಿ ಸಿದ್ಧತೆಗಳನ್ನು ಆಯೋಗವು ಮಾಡಿಕೊಳ್ಳಬೇಕಾಗಿರುತ್ತದೆ.‌ ಆದುದರಿಂದ ನಿಗದಿತ ಕಾಲಮಿತಿಯಲ್ಲಿ ಮೀಸಲಾತಿಯ ಅಧಿಸೂಚನೆಯನ್ನು ಹೊರಡಿಸಿ, ಅದರ ಪ್ರತಿಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಒದಗಿಸುವಂತೆ ರಾಜ್ಯ ಚುನಾವಣಾ ಆಯೋಗ ಕೋರಿದೆ ಎಂದು ತಿಳಿಸಿದೆ. ಪ್ರಸ್ತುತ ಬಹುತೇಕ ಗ್ರಾಮ ಪಂಚಾಯ್ತಿಗಳ ಅವಧಿಯು ಜನವರಿ-2026 ತಿಂಗಳನಿಂದ ಮಾರ್ಚ್‌-2026 ತಿಂಗಳವರೆಗೆ ಮುಕ್ತಾಯಗೊಳ್ಳಲಿದೆ. ಆದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಅಡಿ ಗ್ರಾಮ ಪಂಚಾಯಿತಿಗಳಿಗೆ 2026-31ನೇ ಸಾಲಿನ…

Read More

Updated By: Priyalachhi ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಹಭಾಗಿತ್ವದಲ್ಲಿ ವಿಕಲಚೇತನರಿಗಾಗಿ ವಿಶೇಷವಾಗಿ ಉದ್ಯೋಗ ಮೇಳ ಆಯೋಜಿಸಲಾಗುತ್ತಿದ್ದು, ಇದು ರಾಜ್ಯ ಸರ್ಕಾರದ ವಿನೂತನ ಮತ್ತು ಮಹತ್ವದ ಕಾರ್ಯಕ್ರಮವಾಗಿದೆ ಎಂದು ಹೇಳಿದರು. ವಿಕಲಚೇತನರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ಹಾಗೂ ಅವರಿಗೆ ಉದ್ಯೋಗಾವಕಾಶ ಕಲ್ಪಿಸುವುದೇ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಪ್ರಸಕ್ತ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ಮೂಲಕ, ಮಾರುಕಟ್ಟೆ ಬೇಡಿಕೆಗೆ ಅನುಗುಣವಾದ ವೃತ್ತಿಪರ ತರಬೇತಿಯನ್ನು ರಾಜ್ಯದ ವಿಕಲಚೇತನರಿಗೆ ನೀಡಲಾಗುತ್ತಿದ್ದು, ಒಟ್ಟು 1,000 ಅಭ್ಯರ್ಥಿಗಳಿಗೆ 3 ಕೋಟಿ ರೂ. ವೆಚ್ಚದಲ್ಲಿ ಕೌಶಲ್ಯ…

Read More

Updated By: Priyalachhi ಬೆಂಗಳೂರು: ಸಿನಿಮಾಗಳು ಮನರಂಜನೆಗೆ ಮಾತ್ರ ಸೀಮಿತವಾಗದೆ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ, ವಾಸ್ತವ ಸ್ಥಿತಿಯನ್ನು ತೋರಿಸುವ ಕೆಲಸ ಮಾಡಬೇಕು. ಕನ್ನಡದ ಮಟ್ಟಿಗೆ ಡಾ.ರಾಜಕುಮಾರ್ ಸಿನಿಮಾಗಳಲ್ಲಿ ಇವೆಲ್ಲವನ್ನೂ ನೋಡುವುದಕ್ಕೆ ಸಾಧ್ಯವಿತ್ತು. ಅಸಮಾನತೆ, ಬಡತನ, ಸಿರಿತನ, ದಲಿತರು, ಹಿಂದುಳಿದವರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾಾತರು, ಮಹಿಳೆಯರು ಕುರಿತಾಗಿ ಚಿತ್ರಗಳನ್ನು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ನಗರದ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಗುರುವಾರ ಹಮ್ಮಿಕೊಳ್ಳಲಾದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚಿತ್ರೋತ್ಸವಗಳಿಂದ ಬೇರೆ ದೇಶಗಳ ಜನರ ಜೀವನ, ರಾಜಕೀಯ ಮತ್ತು ಸಮಾಜದ ಬಗ್ಗೆ ಅರ್ಥವಾಗುತ್ತದೆ. ಅಸಮಾನತೆ, ಸಮಾನತೆ ಅರ್ಥ ಮಾಡಿಕೊಳ್ಳುವುದು ಅವಶ್ಯಕ. ಅದಕ್ಕೆ ಚಿತ್ರೋತ್ಸವ ಸುವರ್ಣಾವಕಾಶ ಒದಗಿಸುತ್ತದೆ. ಅದನ್ನು ಉಪಯುಕ್ತವಾಗಿ ಬಳಸಿಕೊಂಡು, ಸಮಾಜದಲ್ಲಿ ಬದಲಾವಣೆ ತರಬೇಕು. ಅದು ಆಗದಿದ್ದರೆ, ಸಿನಿಮಾ ಬರೀ ಮನರಂಜನೆಗೆ ಸೀಮಿತವಾಗುತ್ತದೆ ಎಂದರು. ನಾವು ಮನುಷ್ಯರು, ಮಾನವರಾಗಿ ಬಾಳುವುದು ಅವಶ್ಯಕ. ಪ್ರತಿ ವ್ಯಕ್ತಿಯನ್ನು ಪ್ರೀತಿ, ಸ್ನೇಹದಿಂದ ಕಾಣಬೇಕು. ಆಗ ಮಾತ್ರ ಸಮಸಮಾಜ ಕಟ್ಟುವುದಕ್ಕೆ ಸಾಧ್ಯ.…

Read More

Updated By: Priyalachhi ಬೆಂಗಳೂರು: ರಾಜ್ಯಪಾಲರ ಭಾಷಣಕ್ಕೆ ಖಂಡನೆ ವ್ಯಕ್ತಪಡಿಸಿದ್ದ ಸಭಾನಾಯಕ ಎನ್.ಎಸ್. ಬೋಸರಾಜ್ ಅವರು ವಿಷಾದ ವ್ಯಕ್ತಪಡಿಸಬೇಕೆಂದು ಒತ್ತಾಯಿಸಿ ವಿಧಾನ ಪರಿಷತ್​ನಲ್ಲಿ ಇಂದೂ ಪ್ರತಿಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಧರಣಿ ಮುಂದುವರೆಸಿದರು. ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷದ ಸದಸ್ಯರು ಸದನ ಬಾವಿಗಳಿದು ಧರಣಿ ಮುಂದುವರೆಸುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ, ಧರಣಿ ಹಿಂಪಡೆಯುವಂತೆ ಮನವಿ ಮಾಡಿದರು.‌ ಈ ವೇಳೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, “ಸಭಾನಾಯಕರು ರಾಜ್ಯಪಾಲರ ಭಾಷಣದ ಮೇಲೆ ಖಂಡನೆ ವ್ಯಕ್ತಪಡಿಸಿದ್ದರು. ಆದರೆ ಸರ್ಕಾರ ವಂದನಾ ನಿರ್ಣಯ ಮಂಡಿಸುತ್ತಿದೆ. ಅವರ ಖಂಡನೆ ವಿಚಾರ ಸದನಕ್ಕೆ ತಪ್ಪು ಸಂದೇಶ ನೀಡುತ್ತಿದೆ. ಈ ಬಗ್ಗೆ ಸರ್ಕಾರ ದ್ವಂದ್ವ ನಿಲುವು ತಳೆದಿತ್ತು. ಇದಾದ ಬಳಿಕ ವಂದನಾ ನಿರ್ಣಯ ಎಂದು ಹೇಳಿತ್ತು. ಹಾಗಾದರೆ ಖಂಡನೆ ಮಾಡಿದ್ದಕ್ಕೆ ಸಭಾನಾಯಕರು ವಿಷಾದ ವ್ಯಕ್ತಪಡಿಸಿದರೆ ಧರಣಿ ಹಿಂಪಡೆಯುತ್ತೇವೆ” ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಎನ್.ಎಸ್​.ಭೋಸರಾಜ್, “ರಾಜ್ಯಪಾಲರ ಭಾಷಣದ ವಂದನಾ ನಿರ್ಣಯವನ್ನು ಸ್ವಾಗತಿಸಲಾಗಿದೆ” ಎಂದರು. ಇದರಿಂದ ತೃಪ್ತರಾಗದ ಪ್ರತಿಪಕ್ಷ ಸದಸ್ಯರು ಧರಣಿ ಮುಂದುವರೆಸಿದಾಗ ಮಧ್ಯಪ್ರವೇಶಿಸಿದ…

Read More

Updated By: Priyalachhi ಬೆಂಗಳೂರು: ಇನ್ಮುಂದೆ ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ (ಐಪಿಡಿ) ಚಿಕಿತ್ಸೆ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸಭೆಯಲ್ಲಿ ಶಾಸಕ ಶಿವಲಿಂಗೇಗೌಡ ಅವರು ಸರ್ಕಾರಿ ವೈದ್ಯರಿಂದ ಖಾಸಗಿ ಪ್ರಾಕ್ಟೀಸ್ ಮಾಡ್ತಿರುವ ಆರೋಪ ವಿಚಾರವಾಗಿ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಸಚಿವರು, ಸರ್ಕಾರಿ ವೈದ್ಯರ ಖಾಸಗಿ ಸೇವೆ ಕುರಿತು ಸರ್ಕಾರದ ಹೊಸ ಆದೇಶದ ಬಗ್ಗೆ ಓದುತ್ತಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯಲ್ಲಿ ಕೆಲಸ ಮಾಡುವ ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟೀಸ್ ಬಗ್ಗೆ ಆದೇಶ ಹೊರಡಿಸಲಾಗಿದೆ. ಪ್ರಸ್ತುತ ಸರ್ಕಾರಿ ಆದೇಶಗಳ ಪ್ರಕಾರ, ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿ ನಂತರ (ಸರ್ಕಾರಿ ಕರ್ತವ್ಯಗಳಿಗೆ ಅಡ್ಡಿಯಾಗದಂತೆ) ಖಾಸಗಿಯಾಗಿಯೂ ಸೇವೆ ನೀಡಲು ಅನುಮತಿ ಇದೆ. ಈಗ, ಸರ್ಕಾರಿ ವೈದ್ಯರು ಖಾಸಗಿ ಸೇವೆಯನ್ನು ಹೊರರೋಗಿಗಳಿಗೆ (ಒಪಿಡಿ) ಮಾತ್ರ ನೀಡಬಹುದು ಎಂದು ಆದೇಶ ಮಾಡಲಾಗಿದೆ ಎಂದರು. ಇನ್ನು ಮುಂದೆ ಖಾಸಗಿ ಸೇವೆಯಲ್ಲಿ ಒಳರೋಗಿಗಳಿಗೆ (ಐಪಿಡಿ)ಸೇವೆ…

Read More

Updated By: Priyalachhi ಬೆಂಗಳೂರು: ಮನ್ರೇಗಾ ಯೋಜನೆ ಬಗ್ಗೆ ಚರ್ಚೆ ಮಾಡಲು ಹಾಗೂ ನಿರ್ಣಯ ಅಂಗೀಕರಿಸುವ ಸಲುವಾಗಿ ವಿಧಾನಮಂಡಲ ಅಧಿವೇಶನವನ್ನ 2 ದಿನ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆಯಲ್ಲಿ ತಿಳಿಸಿದ್ದಾರೆ. ಬುಧವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸರಕಾರ ಮನರೇಗಾ ಕಾಯ್ದೆ ಬದಲಾಗಿ ಜಾರಿಗೆ ತಂದಿರುವ ವಿಬಿ: ಜಿ‌ ರಾಮ್ ಜಿ ಕಾಯ್ದೆಯ ಕುರಿತು ವಿವರಣೆ ನೀಡಿದ ಸಿದ್ದರಾಮಯ್ಯ, ಈ ಕಾಯ್ದೆ ಕುರಿತು ಸಮಗ್ರ ಚರ್ಚೆ ನಡೆಸಲು ಅಧಿವೇಶನವನ್ನು ಎರಡು ದಿನ ವಿಸ್ತರಣೆ ಮಾಡಲು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಶಾಸಕರು ಈ ಕಾಯ್ದೆ ಕುರಿತಾದ ಚರ್ಚೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ನರೇಗಾ ವಿಷಯಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ. ಆದರೆ, ಚರ್ಚೆಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಸೋಮವಾರ ಮಂಗಳವಾರ ನರೇಗಾ ಚರ್ಚೆಗಾಗಿಯೇ ಅಧಿವೇಶನ ವಿಸ್ತರಿಸೋಣ. ಸದನ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ…

Read More

Updated By: Priyalachhi ಬೆಂಗಳೂರು: ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ರಾಜ್ಯ ಸರ್ಕಾರ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದನ್ನು ವಿರೋಧಿಸಿ ಗುರುವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ಬಿಜೆಪಿ ಸಭಾತ್ಯಾಗ ಮಾಡಿತು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರಿಗೆದಾರರ ಹಣವನ್ನು “ಸುಳ್ಳು ಪ್ರಚಾರ”ಕ್ಕಾಗಿ ದುರುಪಯೋಗಪಡಿಸಿಕೊಂಡಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಇಂದು ವಿಧಾನಸಭೆಯಲ್ಲಿ ಜಾಹೀರಾತು ವಿಷಯವನ್ನು ಪ್ರಸ್ತಾಪಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್, “ಎಲ್ಲಾ ಪತ್ರಿಕೆಗಳಲ್ಲಿ ಮುಖಪುಟ ಜಾಹೀರಾತು ಇದೆ. ಸರ್ಕಾರವು ತೆರಿಗೆದಾರರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತಿದೆ” ಎಂದು ಹೇಳಿದರು. ಕೇಂದ್ರ ಸರ್ಕಾರ ಹೇಳುವ ಎಲ್ಲವನ್ನೂ ರಾಜ್ಯ ಸರ್ಕಾರ “ಕೈಜೋಡಿಸಿ” ಒಪ್ಪಿಕೊಳ್ಳಬೇಕು ಎಂದು ಬಿಜೆಪಿ ಸೂಚಿಸುತ್ತಿರುವಂತೆ ಕಾಣುತ್ತಿದೆ. ಆದರೆ ಈ ಜಾಹೀರಾತು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಎಂದು ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡರು. “ಯಾವ ಕಾನೂನನ್ನು ಉಲ್ಲಂಘಿಸಲಾಗಿದೆ ಎಂಬುದನ್ನು ಬಿಜೆಪಿ ಎತ್ತಿ ತೋರಿಸಲಿ” ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.

Read More