Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ನಿಯಮ ಉಲ್ಲಂಘಿಸಿ ತಮ್ಮ ಸ್ನೇಹಿತನಾದ ಪೊಲೀಸ್‌ ಕಾನ್‌ಸ್ಟೇಬಲ್‌ಗೆ ನಟ ದರ್ಶನ್ ಅವರನ್ನು ಭೇಟಿ ಮಾಡಿಸಿದ ಹಿನ್ನೆಲೆಯಲ್ಲಿ ಕಾರಾಗೃಹದ ವಾರ್ಡನ್‌ವೊಬ್ಬರು ವರ್ಗಾವಣೆಗೊಂಡಿದ್ದಾರೆ. ವಾರ್ಡನ್ ಪ್ರಭು ಚೌವ್ಹಾಣ್ ಎತ್ತಂಗಡಿ ಆಗಿದ್ದು, ಇತ್ತೀಚೆಗೆ ಸ್ನೇಹಿತನ ಕೋರಿಕೆ ಮೇರೆಗೆ ಆತನಿಗೆ ದರ್ಶನ್‌ರನ್ನು ಭೇಟಿ ಮಾಡಿಸಿದ್ದರು. ಇದರ ಬೆನ್ನಲ್ಲೇ ಕಾರಾಗೃಹಗಳ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಕುಮಾರ್ ಅವರು, ಘಟನೆಯ ಕುರಿತು ಇಲಾಖಾ ತನಿಖೆಗೆ ಆದೇಶಿಸಿ, ವಾರ್ಡನ್ ಚೌವ್ಹಾಣ್ ಅವರನ್ನು ಚಾಮರಾಜನಗರ ಜೈಲಿಗೆ ವರ್ಗಾವಣೆ ಮಾಡಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಜನವರಿ 24ರಂದು ಯಲಹಂಕ ಪೊಲೀಸ್ ಠಾಣೆಯ ಕೆಲವು ಕಾನ್ಸ್‌ಟೇಬಲ್‌ಗಳು ಒಬ್ಬ ಆರೋಪಿಯನ್ನು ಜೈಲಿಗೆ ಹಸ್ತಾಂತರಿಸಲು ಬಂದಿದ್ದರು. ಜೈಲನ್ ವಾರ್ಡನ್ ಹಾಗೂ ಪೊಲೀಸ್ ಸಿಬ್ಬಂದಿ ಪರಸ್ಪರ ಪರಿಚಿತರಾಗಿದ್ದು, ಭೇಟಿ ವೇಳೆ ಜೈಲಿನೊಳಗೆ ಇದ್ದ ನಟ ಹಾಗೂ ಆರೋಪಿ ದರ್ಶನ್‌ನ್ನು ನೋಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಾರ್ಡನ್ ಸಿಸಿಟಿವಿ ನಿಗಾವನ್ನು ತಪ್ಪಿಸಿ ಪೊಲೀಸ್ ಸಿಬ್ಬಂದಿಯನ್ನು ನಟ ದರ್ಶನ್ ಇದ್ದ…

Read More

Updated By: Priyalachhi ಬೆಂಗಳೂರು: ವಿವಿಧ ನಿಗಮ, ಮಂಡಳಿಗಳಿಗೆ ನೇಮಕಗೊಂಡಿದ್ದ ಅಧ್ಯಕ್ಷರ ಪದಾವಧಿಯನ್ನು ಮುಂದುವರೆಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ನಿಗಮ, ಮಂಡಳಿಗಳ ಕನಸು ಕಂಡಿದ್ದ ಕೈ ನಾಯಕರಿಗೆ ನಿರಾಸೆಯಾಗಿದೆ. 26.01.2024ರ ಅನ್ವಯ ವಿಧಾನಸಭಾ ಸದಸ್ಯರುಗಳಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಮುಂದಿನ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ 36 ನಿಗಮ, ಮಂಡಳಿಗಳಿಗೆ ನೇಮಿಸಿ ಆದೇಶಿಸಲಾಗಿತ್ತು. ಈಗಾಗಲೇ ಎರಡು ವರ್ಷಗಳ ಅವಧಿ ಮುಗಿದಿದೆ. ಹೀಗಾಗಿ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 25 ನಿಗಮ, ಮಂಡಳಿಗಳಿಗೆ ನೇಮಕಗೊಂಡಿರುವ ಶಾಸಕರನ್ನು ಮತ್ತೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ 26.01.2026ರಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮುಂದುವರೆಸಲು ಆದೇಶಿಸಲಾಗಿದೆ.‌ ಇತ್ತ ಎರಡು ವರ್ಷದ ಬಳಿಕ ನಿಗಮ, ಮಂಡಳಿಗಳ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕರು ತಮ್ಮ ಸ್ಥಾನವನ್ನು ಬೇರೆಯವರಿಗೆ ಬಿಟ್ಟು ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳುತ್ತಿದ್ದರು. ಅತ್ತ ತಮಗೂ ನಿಗಮ, ಮಂಡಳಿ ಸ್ಥಾನ ಬೇಕೆಂದು ಪಟ್ಟು ಹಿಡಿದವರಿಗೆ ಇನ್ನುಳಿದ…

Read More

Updated By: Priyalachhi ಬೆಂಗಳೂರು: ಸದನದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿಯ ನರೇಗಾ ಮೇಲಿನ ಚರ್ಚೆ ವೇಳೆ ಪ್ರತಿಯೊಬ್ಬ ಶಾಸಕರೂ ಅರ್ಥಪೂರ್ಣವಾಗಿ ಪಾಲ್ಗೊಂಡು, ವಿಷಯ ಮಂಡನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ನಗರದ ಖಾಸಗಿ ಹೋಟೆಲ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಎರಡು ದಿನ ಸದನ ವಿಸ್ತರಣೆಗೆ ಸಿಎಂ ಒಲವು: ಸಭೆಯಲ್ಲಿ ನರೇಗಾ ಬಗ್ಗೆ ವಿವರಣೆ ನೀಡಿದ ಸಿಎಂ ಸಿದ್ದರಾಮಯ್ಯ, ಎರಡು ದಿನಗಳ ಕಾಲ ಸದನ ವಿಸ್ತರಣೆಗೆ ಒಲವು ತೋರಿದ್ದಾರೆ ಎಂದು ಹೇಳಲಾಗಿದೆ. ನರೇಗಾ ವಿಷಯಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ. ಆದರೆ ನರೇಗಾ ಚರ್ಚೆಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಸೋಮವಾರ, ಮಂಗಳವಾರ ನರೇಗಾ ಚರ್ಚೆಗಾಗಿಯೇ ಅಧಿವೇಶನ ವಿಸ್ತರಿಸೋಣ. ಬಿಎಸಿ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ನಿರ್ಣಯಿಸುತ್ತೇವೆ. ಅಧಿವೇಶನ ವಿಸ್ತರಣೆಯಾದರೆ ಕಡ್ಡಾಯವಾಗಿ ಭಾಗಿಯಾಗಬೇಕು ಎಂದು ಶಾಸಕರಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿರುವ ಬಗ್ಗೆ ಸಭೆಯಲ್ಲಿ ಚರ್ಚೆ…

Read More

Updated By: Priyalachhi ಪುಣೆ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪಾರ್ಥಿವ ಶರೀರವನ್ನು ನಿನ್ನೆ ಬುಧವಾರ ಸಂಜೆ ಪುಣೆ ಜಿಲ್ಲೆಯ ಬಾರಾಮತಿಯಲ್ಲಿರುವ ಶಿಕ್ಷಣ ಸಂಸ್ಥೆಗೆ ತರಲಾಯಿತು, ತೀವ್ರ ಭಾವೋದ್ವೇಗದ ನಡುವೆ, ದುಃಖಿತ ಎನ್‌ಸಿಪಿ ಕಾರ್ಯಕರ್ತರು ಮತ್ತು ಸ್ಥಳೀಯ ನಿವಾಸಿಗಳು ದಿವಂಗತ ನಾಯಕನನ್ನು ಹೊಗಳುತ್ತಾ ಘೋಷಣೆಗಳನ್ನು ಕೂಗಿದರು. ಜನರು ಅಂತಿಮ ನಮನ ಸಲ್ಲಿಸಲು ಅವರ ಸ್ವಗೃಹದಲ್ಲಿರುವ ವಿದ್ಯಾ ಪ್ರತಿಷ್ಠಾನದ ಆವರಣಕ್ಕೆ ಅವರ ಪಾರ್ಥಿವ ಶರೀರವನ್ನು ತರುವಾಗ “ಅಜಿತ್ ದಾದಾ ಅಮರ್ ರಹೇ”, “ಅಜಿತ್ ದಾದಾ ಪರತ್ ಯಾ” (ಅಜಿತ್ ದಾದಾ ದೀರ್ಘಕಾಲ ಬದುಕಲಿ; ಅಜಿತ್ ದಾದಾ, ಹಿಂತಿರುಗಿ) ಎಂಬ ಘೋಷಣೆಗಳು ಪ್ರತಿಧ್ವನಿಸಿದವು. ನಿನ್ನೆ ಬೆಳಗ್ಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಟೇಬಲ್‌ಟಾಪ್ ರನ್‌ವೇಯ ಅಂಚಿನಿಂದ ಕೇವಲ 200 ಮೀಟರ್ ದೂರದಲ್ಲಿ ಅಜಿತ್ ಪವಾರ್ (66ವ) ಮತ್ತು ಚಾರ್ಟರ್ಡ್ ವಿಮಾನದಲ್ಲಿದ್ದ ಇತರ ನಾಲ್ವರು ಮೃತಪಟ್ಟರು. ಅವರ ಸಾವು ಬಿಜೆಪಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ನಿರ್ವಾತವನ್ನು ಉಂಟುಮಾಡಿದೆ ಮಾತ್ರವಲ್ಲದೆ ಅವರು ನೇತೃತ್ವ ವಹಿಸಿದ್ದ ರಾಷ್ಟ್ರೀಯತಾವಾದಿ…

Read More

Updated By: Priyalachhi ಪಂಚಾಂಗ: ದಿನಾಂಕ : 29-01-2026 ವಾರ : ಗುರುವಾರ ಸಂವತ್ಸರ : ವಿಶ್ವವಸು ಆಯನ : ಉತ್ತರಾಯಣ ಮಾಸ : ಮಾಘ ಪಕ್ಷ : ಶುಕ್ಲ ತಿಥಿ : ಏಕಾದಶಿ ನಕ್ಷತ್ರ : ರೋಹಿಣಿ ಸೂರ್ಯೋದಯ : ಮುಂಜಾನೆ 06:45 ಗಂಟೆಗೆ ಅಮೃತ ಕಾಲ : ಬೆಳಗ್ಗೆ 09:38 ರಿಂದ 11:04ರ ವರೆಗೆ ದುರ್ಮುಹೂರ್ತ : ಬೆಳಗ್ಗೆ 10:45 ರಿಂದ 11:33 ಹಾಗೂ 3:33 ರಿಂದ 4:21ರ ತನಕ ರಾಹುಕಾಲ: ಮಧ್ಯಾಹ್ನ 01:57 ರಿಂದ 03:24ರ ವರೆಗೆ ಸೂರ್ಯಾಸ್ತ : ಸಂಜೆ 06:16 ಗಂಟೆಗೆ ರಾಶಿ ಭವಿಷ್ಯ: ಮೇಷ: ಇಂದು ನಿಮ್ಮ ಬಾಗಿಲನ್ನು ಸುವರ್ಣಾವಕಾಶವು ಬಡಿಯುತ್ತದೆ. ನೀವು ಉತ್ತಮ ಅದೃಷ್ಟವನ್ನು ಭವಿಷ್ಯಕ್ಕೆ ಉಳಿಸುವಲ್ಲಿ ಯಶಸ್ವಿಯಾಗಲೂಬಹುದು. ಸದ್ಯದಲ್ಲೇ, ನೀವು ನಿಮ್ಮ ದಾರಿಯಲ್ಲಿ ಬರುವ ಹೆಚ್ಚು ಒಪ್ಪಂದಗಳ ಮೂಲಕ ನಿಮ್ಮ ವ್ಯಾಪಾರದ ಮೈಲಿಗಲ್ಲುಗಳನ್ನು ರೂಪಿಸಿಕೊಳ್ಳಲು ಶಕ್ತರಾಗುತ್ತೀರಿ. ನೀವು ಹಾಕುವ ಪ್ರಯತ್ನಗಳಿಗೆ ಅನುಗುಣವಾಗಿ ನೀವು ಪ್ರತಿಫಲವನ್ನು ಪಡೆಯುತ್ತೀರಿ. ವೃಷಭ: ಇಂದು ನೀವು ಕೆಲ ಲೆಕ್ಕಾಚಾರದ…

Read More

Updated By: Priyalachhi ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 12 ಮತ್ತು ಅದರ ಟ್ರೋಫಿ ವಿನ್ನರ್ ಗಿಲ್ಲಿ ನಟ ಸಾಕಷ್ಟು ಸುದ್ದಿ ಮಾಡಿದ್ದು ಸುಳ್ಳಲ್ಲ. ಈ ವಿಷಯ ಈಗ ವಿಧಾನಸಭೆಯಲ್ಲಿ ಕೂಡ ಪ್ರಸ್ತಾಪವಾಗಿದೆ. ನಿನ್ನೆ ಸದನದಲ್ಲಿ ಮಾತನಾಡಿದ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ತೆರಿಗೆ ವಿಚಾರದಲ್ಲಿ ಟೀಕಿಸುವಾಗ ಬಿಗ್ ಬಾಸ್ ನಟ ಗಿಲ್ಲಿಯ ಹೆಸರು ಪ್ರಸ್ತಾಪ ಮಾಡಿದ್ದಾರೆ. ಈ ಬಾರಿಯ ಬಿಗ್ ಬಾಸ್ ವಿನ್ನರ್ ಗಿಲ್ಲಿ ಅಲ್ಲ ಅಸಲಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎಂದಿದ್ದಾರೆ. ಬಿಗ್‌ ಬಾಸ್‌‌ ವಿನ್ನರ್‌ ಗಿಲ್ಲಿ ಅಲ್ಲ ಎಂದ ಪ್ರದೀಪ್‌ ಈಶ್ವರ್‌! ಹೌದು, ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ಅಲ್ಲ, ನಿಜಕ್ಕೂ ವಿನ್ನರ್‌‌ ನಿರ್ಮಲಾ ಸೀತಾರಾಮನ್‌ ಎಂದಿದ್ದಾರೆ. 50 ಲಕ್ಷಕ್ಕೆ 18% ಜಿಎಸ್‌ಟಿ, 13% ಇನ್‌ಕಮ್ ಟ್ಯಾಕ್ಸ್, 4% ಸೆಸ್ ಸೇರಿ ಸುಮಾರು 52% ತೆರಿಗೆ ಹೋಗುತ್ತದೆ. ಗಿಲ್ಲಿಗೆ 35 ಲಕ್ಷ ಮಾತ್ರ ಸಿಗುತ್ತದೆ…

Read More

Updated By: Priyalachhi ಬೆಂಗಳೂರು: ವಿಧಾನಸಭೆಯಲ್ಲಿ ಫೋನ್ ಟ್ಯಾಪಿಂಗ್ ವಿಚಾರ ಸದ್ದು ಮಾಡಿತು.‌ ದೆಹಲಿಯಿಂದ, ಕೇಂದ್ರ ಗೃಹ ಸಚಿವರಿಂದ ರಾಜಭವನಕ್ಕೆ ಫೋನ್ ಬರುತ್ತದೆ ಎಂಬ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಆರೋಪ ವಿಪಕ್ಷಗಳನ್ನು ಕೆರಳಿಸಿತು.‌ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆ ವೇಳೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದಂತೆ‌ ರಾಜ್ಯಪಾಲರಿಗೆ ಕೇಂದ್ರ ಗೃಹ ಸಚಿವರಿಂದ, ದೆಹಲಿ ಬಿಜೆಪಿ ಕಚೇರಿಯಿಂದ ಫೋನ್‌ಗಳು ಬಂದಿದ್ದವು ಎಂದು ಆರೋಪಿಸಿದರು. ಈ ಆರೋಪ ಬಿಜೆಪಿ ಸದಸ್ಯರನ್ನು ಕೆರಳಿಸಿತು. ಆರ್.ಅಶೋಕ್, ಸುನೀಲ್ ಕುಮಾರ್, ಸುರೇಶ್ ಕುಮಾರ್ ಸೇರಿದಂತೆ ಹಲವರು ಕಾಂಗ್ರೆಸ್ ಮೇಲೆ ಮುಗಿಬಿದ್ದರು. ರಾಜ್ಯಪಾಲರಿಗೆ ಬಿಜೆಪಿ ಕಚೇರಿಯಿಂದ ಫೋನ್​ಗಳು ಬಂದಿರೋದು ಸರ್ಕಾರಕ್ಕೆ ಹೇಗೆ ಗೊತ್ತಾಯ್ತು?, ಸರ್ಕಾರ ಫೋನ್​ ಟ್ಯಾಪ್ ಮಾಡ್ತಿದೆಯಾ ಅಂತ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ರು. ಸುನಿಲ್‍ ಕುಮಾರ್ ಮಾತನಾಡಿ, ರಾಜ್ಯಭವನದ ಫೋನ್ ಟ್ಯಾಪಿಂಗ್ ನಡೆಯುತ್ತಿದೆಯೇ?. ರಾಜ್ಯ ಸರ್ಕಾರ ಕದ್ದಾಲಿಕೆ ಮಾಡುತ್ತಿದೆ. ಯಾರು ಕದ್ದಾಲಿಕೆ ಮಾಡುತ್ತಿದ್ದಾರೆ?. ಮೊನ್ನೆ ಕೂಡ ಕಾನೂನು ಸಚಿವರು ಇದೇ ಆರೋಪ…

Read More

Updated By: Priyalachhi ಮುಂಬೈ: ಬುಧವಾರ ಬೆಳಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ದುರಂತ ಮತ್ತು ಅಕಾಲಿಕ ಮರಣವು ರಾಜ್ಯದ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ನಿರ್ವಾತವನ್ನು ಉಂಟುಮಾಡಿರುವುದರ ಜೊತೆಗೆ ಎನ್‌ಸಿಪಿಯ ಭವಿಷ್ಯದ ಮೇಲೆಯೂ ಕರಿನೆರಳು ಬೀರಿದೆ. ಅಜಿತ್ ಪವಾರ್ ನಿಧನದ ನಂತರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ನಾಯಕತ್ವದ ಬಿಕ್ಕಟ್ಟನ್ನು ಎದುರಿಸುವ ಸಾಧ್ಯತೆಯಿದೆ. ಏಕೆಂದರೆ, ಪಕ್ಷಕ್ಕೆ ಎರಡನೇ ನಾಯಕ ಇಲ್ಲ ಎಂದು ರಾಜಕೀಯ ವೀಕ್ಷಕರು ಹೇಳುತ್ತಾರೆ. ‘ಗಡಿಯಾರ’ದ ಚಿಹ್ನೆಯನ್ನು ಹೊಂದಿರುವ ಪಕ್ಷವು ತನ್ನ ನಿರ್ವಿವಾದ ನಾಯಕನನ್ನು ಕಳೆದುಕೊಂಡಿರುವುದರಿಂದ, ಪಕ್ಷದ ಉಳಿವು ಮತ್ತು ಏಪ್ರಿಲ್‌ನಲ್ಲಿ ರಾಜ್ಯಸಭಾ ಸದಸ್ಯತ್ವ ಕೊನೆಗೊಳ್ಳಲಿರುವ ಅದರ ಸಂಸ್ಥಾಪಕ ಶರದ್ ಪವಾರ್ ಅವರೊಂದಿಗೆ ಭವಿಷ್ಯದ ಸಮೀಕರಣದ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ. ಇತ್ತೀಚಿನ ತಿಂಗಳುಗಳಲ್ಲಿ ಬಣಗಳ ನಡುವಿನ ಸಂಬಂಧ ಸುಧಾರಿಸಿದ್ದು, ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಜೊತೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತೆ ಒಂದಾಗಬಹುದು ಎಂಬ ಊಹಾಪೋಹಗಳು ಕೇಳಿಬರುತ್ತಿವೆ. ಇದೀಗ ಅಜಿತ್…

Read More

Updated By: Priyalachhi ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಕ್ಕೆ ಬಿಗ್ ರಿಲೀಫ್ ಸಿಕ್ಕಿದ್ದು ಲೋಕಾಯುಕ್ತ ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪುರಸ್ಕರಿಸಿದೆ. ಅದರಂತೆ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾಲೀಕ ದೇವರಾಜುಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ನಾಲ್ವರ ಕುರಿತಂತೆ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಕೋರ್ಟ್ ಪುರಸ್ಕರಿಸಿದೆ. ಇನ್ನು ಉಳಿದವರ ವಿರುದ್ಧ ತನಿಖೆ ನಡೆಸಲು ಕೋರ್ಟ್ ಆದೇಶಿಸಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಲೋಕಾಯುಕ್ತ ನೀಡಿದ್ದ ಕ್ಲೀನ್‌ಚಿಟ್ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಲೋಕಾಯುಕ್ತ ಪೊಲೀಸರ ಬಿ-ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಪ್ರಕರಣ ವಾದ ಪ್ರತಿವಾದ ಆಲಿಸಿದ ಕೋರ್ಟ್ ಅರ್ಜಿಯನ್ನು ವಜಾ ಮಾಡಿ, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದೆ. ಇದರಿಂದ ಸಿಎಂ…

Read More

Updated By: Priyalachhi ಬೆಂಗಳೂರು: ಇತ್ತೀಚಿಗೆ ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ‌ ಅವರ ಪುತ್ರಿ ಚೈತನ್ಯಾ ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ. ಚೈತನ್ಯಾ ಬೀಳಗಿ ಅವರಿಗೆ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಸಹಾಯಕ ಉದ್ಯೋಗ ನೀಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ‌ ಅವರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಪುತ್ರಿ ಚೈತನ್ಯಾ ಎಮ್.ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಇಂದು ಹಸ್ತಾಂತರಿಸಿ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಶುಭ ಕೋರಿದೆ ಎಂದು ತಿಳಿಸಿದ್ದಾರೆ.

Read More