Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ನವದೆಹಲಿ/ಹುಬ್ಬಳ್ಳಿ: ರಾಜ್ಯದಿಂದ ಬೆಂಬಲ ಬೆಲೆಯಲ್ಲಿ 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಈ ಮೂಲಕ ಕೇಂದ್ರವು ಸಂಕಷ್ಟ ಸಮಯದಲ್ಲಿ ರಾಜ್ಯದ ಕಡಲೆ ಬೆಳೆಗಾರರ ಬೆಂಬಲಕ್ಕೆ ಬಂದಿದೆ. ಬೆಂಬಲ ಬೆಲೆ ಯೋಜನೆಯಡಿ ಕನಿಷ್ಠ ಬೆಂಬಲ ಬೆಲೆ(MSP) 5,875 ರೂ. ದರದಲ್ಲಿ ಒಟ್ಟು 1,01,340 ಮೆಟ್ರಿಕ್​ ಟನ್​ ಹಿಂಗಾರು ಹಂಗಾಮಿನ ಕಡಲೆ ಕಾಳು ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಸಚಿವ ಪ್ರಲ್ಹಾದ್​ ಜೋಶಿ ಅವರಿಗೆ ಪತ್ರದ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ಗಮನ ಸೆಳೆದಿದ್ದ ಪ್ರಲ್ಹಾದ ಜೋಶಿ: ಕರ್ನಾಟಕದ ಪ್ರಮುಖ ದ್ವಿದಳ ಧಾನ್ಯಗಳಲ್ಲಿ ಕಡಲೆಯೂ ಒಂದಾಗಿದ್ದು, ಸುಮಾರು 9.24 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಉತ್ಪಾದನೆ ಆಗುತ್ತದೆ. ಆದರೆ, ಪ್ರಸ್ತುತ ಮಾರುಕಟ್ಟೆ ಬೆಲೆಗಿಂತ ತೀರಾ ಕಡಿಮೆ ಬೆಲೆಯಿಂದಾಗಿ ಕಡಲೆ ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹಾಗಾಗಿ, ಬೆಂಬಲ ಬೆಲೆಯಲ್ಲಿ ಖರೀದಿಗೆ ಕ್ರಮ ಕೈಗೊಳ್ಳುವಂತೆ ಕೃಷಿ…

Read More

Updated By: Priyalachhi ಚಾಮರಾಜನಗರ: ಚಿರತೆ ದಾಳಿಯಿಂದ ಪಾದಯಾತ್ರಿ ಮೃತಪಟ್ಟ ಘಟನೆಯಿಂದ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ತಾಳುಬೆಟ್ಟದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರು ಪಾದಯಾತ್ರೆ ತೆರಳುವಾಗ ಡ್ರೋಣ್ ಕಣ್ಗಾವಲು ಇಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರಿನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಅವರು, ಪ್ರತಿವರ್ಷ ಶಿವರಾತ್ರಿ, ಯುಗಾದಿ ಮತ್ತು ದೀಪಾವಳಿಯ ಸಂದರ್ಭದಲ್ಲಿ ಮಾದಪ್ಪನ ಭಕ್ತರು ಅರಣ್ಯಮಾರ್ಗವಾಗಿ ಪಾದಯಾತ್ರೆಯಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ಬರುವುದು ಹಿಂದಿನಿಂದ ನಡೆದುಕೊಂಡು ಬಂದಿದೆ. ಭಕ್ತರು ಕಾಲುದಾರಿಯಲ್ಲಿ ಮೆಟ್ಟಿಲೇರಿ ಬರುವ ಮಾರ್ಗದಲ್ಲಿ ಡ್ರೋನ್ ಕ್ಯಾಮರಾ ಅಳವಡಿಸಿ, ಸತತ ನಿಗಾ ಇಡುವಂತೆ ಸೂಚನೆ ನೀಡಿದರು. ಕಾಲುದಾರಿ, ಮೆಟ್ಟಿಲು ಇರುವ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ, ಹೋಂ ಗಾರ್ಡ್ಸ್ ಮತ್ತು ಸ್ಥಳೀಯ ಸಿಬ್ಬಂದಿಯ ತಂಡ ರಚಿಸಿ ಭಕ್ತರಿಗೆ ನೆರವಾಗುವ ಅಗತ್ಯವಿದೆ. ಇದಕ್ಕೆ ತಗಲುವ ವೆಚ್ಚವನ್ನು ಭರಿಸುವಂತೆ ಮಲೆಮಹದೇಶ್ವರಸ್ವಾಮಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಮತ್ತು ಜಿಲ್ಲಾಡಳಿತಕ್ಕೆ ಪತ್ರ ಬರೆಯುವಂತೆಯೂ ಅಧಿಕಾರಿಗಳಿಗೆ ಸೂಚನೆ ಕೊಟ್ಟರು. ಮಂಡ್ಯ, ಮೈಸೂರು,…

Read More

Updated By: Priyalachhi ಬೆಂಗಳೂರು: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ವಿಬಿ ಜಿ ರಾಮ್ ಜಿ ಕಾಯ್ದೆಯ ಜಾರಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಇದು ರಾಜಕೀಯವಾಗಿ ಮಹತ್ವದ್ದಾಗಿದ್ದು, ಕೇಂದ್ರ- ರಾಜ್ಯ ಸಂಬಂಧದ ದೃಷ್ಟಿಯಿಂದ ಗಂಭೀರ ಪರಿಣಾಮಗಳ ಬಗ್ಗೆ ಯೋಚನೆ ಮಾಡುವಂತೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ವಿಶೇಷವಾಗಿ ಈ ಕಾಯ್ದೆಯಲ್ಲಿ ಅನುದಾನ ಹಂಚಿಕೆಯ ಹೊಸ ಮಾದರಿ ಹಾಗೂ ರಾಜ್ಯಗಳ ಮೇಲೆ ಬರುವ ಹೆಚ್ಚುವರಿ ಆರ್ಥಿಕ ಹೊರೆಯ ಕುರಿತು ಚಂದ್ರಬಾಬು ನಾಯ್ಡು ಅವರು ವ್ಯಕ್ತಪಡಿಸಿರುವ ಭೀತಿಯನ್ನು ಎಲ್ಲ ರಾಜ್ಯ ಸರ್ಕಾರಗಳು ಅರ್ಥಮಾಡಿಕೊಳ್ಳಬೇಕಾಗಿದೆ. ಈ ಆತಂಕಗಳು ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಅಸ್ತಿತ್ವಕ್ಕಾಗಿ ನೆಚ್ಚಿಕೊಂಡಿರುವ ಮೈತ್ರಿ ಪಕ್ಷದಿಂದಲೇ ಬಂದಿರುವುದು ವಿಶೇಷ ಎಂದಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕ ಸೇರಿದಂತೆ ಬಿಜೆಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳು ವಿಬಿ‌ ಜಿ‌ ರಾಮ್ ಜಿ ಕಾಯ್ದೆಯು ಒಕ್ಕೂಟ…

Read More

Updated By: Priyalachhi ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ ಬಳ್ಳಾರಿ ಬ್ಯಾನರ್ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಪ್ರಕರಣ ಮಾಸುವ ಮುನ್ನವೇ ಬಳ್ಳಾರಿಯಲ್ಲಿ ಮತ್ತೊಂದು ಕೃತ್ಯ ನಡೆದಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಸೇರಿದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮಾಡೆಲ್ ಹೌಸ್​ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕಾಂಗ್ರೆಸ್​​​ನವರೇ ಬೆಂಕಿ ಹಚ್ಚಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಈ ಪ್ರಕರಣ ಮತ್ತೆ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಗಳಿವೆ. ಕಂಟೋನೆಂಟ್ ಪ್ರದೇಶದ ತಮ್ಮ ಮಾಲೀಕತ್ವದ ಜಿ-ಸ್ಟ್ರಾರ್‌ಲೇಔಟ್‌ನಲ್ಲಿ ಜನಾರ್ದನ ರೆಡ್ಡಿ ಸುಮಾರು 73 ಕೋಟಿ ವೆಚ್ಚದಲ್ಲಿ ಮಾದರಿ ಮನೆ ನಿರ್ಮಿಸಿದ್ದರು. ಲೇಔಟ್‌ನಲ್ಲಿ ಮಾದರಿ ಮನೆಗಳನ್ನು ನಿರ್ಮಿಸುವ ಸಂಬಂಧ ಗ್ರಾಹಕರಿಗೆ ತೋರಿಸಲು ಈ ಮನೆ ನಿರ್ಮಿಸಲಾಗಿತ್ತು. ಶುಕ್ರವಾರ ಸಂಜೆ ದುಷ್ಕರ್ಮಿಗಳು ಸ್ಥಳಕ್ಕೆ ತೆರಳಿ, ರೆಡ್ಡಿಯ ಮಾಡೆಲ್ ಹೌಸ್‌ನ ಬಾಗಿಲು, ಕಿಟಕಿಗಳನ್ನು ಮುರಿದು ಹಾಕಿದ್ದು, ಕಿಟಕಿಯ ಗಾಜುಗಳನ್ನು ಒಡೆದು ಹಾಕಿದ್ದಾರೆ. ಬಳಿಕ, ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ವಿಷಯ…

Read More

Updated By: Priyalachhi ದಿನಾಂಕ : 24-01-2026 ವಾರ : ಶನಿವಾರ ಸಂವತ್ಸರ : ವಿಶ್ವವಸು ಆಯನ : ಉತ್ತರಾಯಣ ಪಕ್ಷ : ಶುಕ್ಲ ತಿಥಿ : ಷಷ್ಠಿ ನಕ್ಷತ್ರ : ಉತ್ತರಾಭಾದ್ರಪದ ಸೂರ್ಯೋದಯ : ಮುಂಜಾನೆ 06:45 ಗಂಟೆಗೆ ಅಮೃತ ಕಾಲ : ಬೆಳಗ್ಗೆ 06:45 ರಿಂದ 08:11 ರವರೆಗೆ ದುರ್ಮುಹೂರ್ತ : ಬೆಳಗ್ಗೆ 8:21 ರಿಂದ 09:09ರ ತನಕ ರಾಹುಕಾಲ : ಬೆಳಗ್ಗೆ 09:38 ರಿಂದ 11:04ರವರೆಗೆ ಸೂರ್ಯಾಸ್ತ : ಸಂಜೆ 06:14 ಗಂಟೆಗೆ ಮೇಷ : ಇಂದು ನೀವು ನಿಮ್ಮ ನೋಟಗಳನ್ನು ಉತ್ತಮಪಡಿಸಲು ಪ್ರಯತ್ನಿಸುತ್ತೀರಿ. ನೀವು ಹೊಸ ನೋಟಗಳನ್ನು ಪ್ರಯತ್ನಿಸುತ್ತೀರಿ. ಅತ್ಯಂತ ಬಯಸಿದ ಡೇಟ್ ನಿಮ್ಮಲ್ಲಿ ನಿರೀಕ್ಷೆಗಳನ್ನು ಹೆಚ್ಚಾಗಿಸುತ್ತದೆ ಮತ್ತು ಸೀಟಿನ ಅಂಚಿನಲ್ಲಿ ಕುಳಿತುಕೊಳ್ಳುವಂತೆ ಮಾಡುತ್ತದೆ. ಹೊರಗಿನ ಭಾವನೆಗಳು ನೈಜ ಬಾಂಧವ್ಯಗಳನ್ನು ಅಳೆಯಲು ಸಾಧ್ಯವಿಲ್ಲವಾದ್ದರಿಂದ ನೀವು ಅದನ್ನು ಸರಳವಾಗಿ ಸ್ವೀಕರಿಸಿ. ವೃಷಭ : ನೀವು ಇಂದು ಅತ್ಯಂತ ಪ್ರಣಯದ ಮೂಡ್​ನಲ್ಲಿದ್ದೀರಿ. ನಿಮ್ಮ ಆಲೋಚನೆಗಳು, ನವಿರು ಮತ್ತು ಕನಸಿನವಾಗಿದ್ದು, ನಿಮ್ಮ ವಿಶೇಷ ವ್ಯಕ್ತಿಯತ್ತ ಸೆಳೆಯುತ್ತಿರುತ್ತವೆ. ಸಂಜೆಗೆ ನೀವು ನಿಮ್ಮ ಸಂಗಾತಿ ಅಥವಾ ಪ್ರಿಯತಮೆಯ ಹತ್ತಿರದಲ್ಲಿ ತೋಳಿಗೆ ತೋಳು ಬಳಸಿ…

Read More

Updated By: Priyalachhi ನವದೆಹಲಿ; ಅಮೆರಿಕ ಡಾಲರ್ ದುರ್ಬಲಗೊಂಡಿರುವುದು ಮತ್ತು ಫೆಡರಲ್ ರಿಸರ್ವ್ ಬಡ್ಡಿದರ ಕಡಿತದ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ, ಚಿನ್ನ ಮತ್ತು ಬೆಳ್ಳಿಯ ಭವಿಷ್ಯದ ವ್ಯವಹಾರದಲ್ಲಿ( ಪ್ಯೂಚರ್​ ವಹಿವಾಟು) ಭಾರಿ ಏರಿಕೆ ಕಂಡು ಬಂದಿದೆ. ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ MCX ನಲ್ಲಿ ಮಾರ್ಚ್ ತಿಂಗಳ ಬೆಳ್ಳಿ ಒಪ್ಪಂದವು( ಪ್ಯೂಚರ್​​​ ವ್ಯವಹಾರ) 12,638 ರೂ ಏರಿಕೆಯಾಗಿ ಪ್ರತಿ ಕೆಜಿಗೆ 3,39,927 ರೂ.ಗಳ ಹೊಸ ಗರಿಷ್ಠ ಮಟ್ಟವನ್ನು ತಲುಪಿದೆ. ಬುಧವಾರದ ಹಿಂದಿನ ವಹಿವಾಟಿನಲ್ಲಿ ಬೆಳ್ಳಿ ಫ್ಯೂಚರ್‌ ದರಗಳು ಪ್ರತಿ ಕೆಜಿಗೆ 3,35,521 ರೂ.ಗಳ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ್ದವು. ಚಿನ್ನವು ಸಹ ಗರಿಷ್ಠ ಮಟ್ಟವನ್ನು ತಲುಪಿದ್ದು ಸತತ ಐದನೇ ದಿನವೂ ಏರಿಕೆ ಕಾಣುತ್ತಿದೆ. ಫೆಬ್ರವರಿ ವಿತರಣೆಗಾಗಿನ ವ್ಯವಹಾರದಲ್ಲಿ( ಪ್ಯೂಚರ್​ ವಹಿವಾಟು) ಹಳದಿ ಲೋಹವು ಎಂಸಿಎಕ್ಸ್‌ನಲ್ಲಿ 10 ಗ್ರಾಂಗೆ 2,885 ರೂ. ಏರಿಕೆಯಾಗಿ 1,59,226 ರೂ.ಗಳಿಗೆ ತಲುಪಿದೆ. ಗುರುವಾರ 24 ಕ್ಯಾರೆಟ್​​ ನ ಪರಿಶುದ್ಧ 10 ಗ್ರಾಂ ಬಂಗಾರದ ಬೆಲೆ 1,56,341 ರೂ.ಗೆ ಇಳಿಕೆ…

Read More

Updated By: Priyalachhi ಮೈಸೂರು: ಬಹುನಿರೀಕ್ಷಿತ ಮೈಸೂರು-ಬೆಳಗೊಳ-ಕುಶಾಲನಗರ ರೈಲ್ವೆ ಮಾರ್ಗ ನಿರ್ಮಾಣ ಯೋಜನೆಯನ್ನು ಕೇಂದ್ರ ರೈಲ್ವೆ ಸಚಿವಾಲಯ ತಡೆ ಹಿಡಿದಿದೆ. ಮೈಸೂರು-ಬೆಳಗೊಳ-ಕುಶಾಲನಗರ ನಡುವಿನ 87.2 ಕಿ.ಮೀ ಉದ್ದದ ಹೊಸ ರೈಲು ಮಾರ್ಗ ಯೋಜನೆಯು ಅನುಮೋದನೆಗೊಂಡ 7 ವರ್ಷಗಳ ಬಳಿಕ ತಡೆಹಿಡಿಯಲಾಗಿದೆ. ನಿರೀಕ್ಷಿತ ಪ್ರಯಾಣಿಕರು ಹಾಗೂ ಆದಾಯ ಕಡಿಮೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವಾಲಯವು 2019ರ ಫೆಬ್ರವರಿ 27ರಂದು ಈ ಯೋಜನೆಗೆ ಅನುಮೋದನೆ ನೀಡಿ, 1,854.62 ಕೋಟಿ ರೂ. ಅಂದಾಜು ಮೊತ್ತವನ್ನು ಬಿಡುಗಡೆ ಮಾಡಿತ್ತು. ಅಲ್ಲದೆ, 2022-23ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಈ ಯೋಜನೆಗಾಗಿ ಸಾವಿರ ಕೋಟಿ ಅನುದಾನ ಮೀಸಲಿಡಲಾಗಿತ್ತು. ಈ ನಡುವೆ 2020ರ ಅಕ್ಟೋಬರ್‌ನಲ್ಲಿ ನೈಋತ್ಯ ರೈಲ್ವೆ ನಿರ್ಮಾಣ ವಿಭಾಗದ ಮುಖ್ಯ ಆಡಳಿತಾಧಿಕಾರಿ, ಮೈಸೂರು-ಬೆಳಗೊಳ-ಕುಶಾಲನಗರ ನಡುವೆ ಹೊಸ ರೈಲ್ವೆ ಬ್ರಾಡ್ ಗೇಜ್ ಮಾರ್ಗಕ್ಕೆ ಅಂತಿಮ ಸ್ಥಳದ ಸಮೀಕ್ಷೆಗೆ ಆದೇಶ ನೀಡಿದ್ದರು. ಅನಂತರ 1.26 ಕೋಟಿ ರೂ. ವೆಚ್ಚದಲ್ಲಿ ಅಂತಿಮ ಸ್ಥಳ ಸಮೀಕ್ಷೆಯ ಗುತ್ತಿಗೆಯನ್ನು ಬೆಂಗಳೂರು…

Read More

Updated By: Priyalachhi ಬೆಂಗಳೂರು: ರಾಜ್ಯದಲ್ಲಿ ನಿಯಮಗಳನ್ನು ರೂಪಿಸದ ಹೊರತು, ಬೈಕ್ ಟ್ಯಾಕ್ಸಿಗಳನ್ನು ಬಳಕೆ ಮಾಡುವಂತಿಲ್ಲ ಎಂಬುದಾಗಿ ಆದೇಶಿಸಿದ್ದ ಏಕಸದಸ್ಯ ಪೀಠದ ಆದೇಶ ರದ್ದುಗೊಳಿಸಿರುವ ಹೈಕೋರ್ಟ್, ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನ(ಟ್ಯಾಕ್ಸಿ)ಗಳನ್ನಾಗಿ ಬಳಸುವುದಕ್ಕೆ ಷರತ್ತಿನ ಅನುಮತಿ ನೀಡಬಹುದು ಎಂದು ಆದೇಶಿಸಿದೆ. ಅಲ್ಲದೆ, ಬಗ್ಗೆ ಬೈಕ್ ಮಾಲೀಕರು ಅಥವಾ ಅಗ್ರಿಗೇಟರ್​​ಗಳು ಸಾರಿಗೆ ದ್ವಿಚಕ್ರ ವಾಹನಗಳನ್ನಾಗಿ ಬಳಸಲು ಅನುಮತಿ ಕೋರಿ ಸಾರಿಗೆ ಇಲಾಖೆಗೆ ಮನವಿ ಸಲ್ಲಿಸಬೇಕು. ಅದಕ್ಕೆ ಸರ್ಕಾರ ಕಾನೂನಿನಡಿ ಷರತ್ತುಗಳನ್ನು ವಿಧಿಸಿ, ಬೈಕ್ ಟ್ಯಾಕ್ಸಿ ಚಲಾಯಿಸಲು ಅವಕಾಶ ಕಲ್ಪಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ರದ್ದು ಮಾಡುವಂತೆ ಕೋರಿ ಓಲಾ, ಉಬರ್ ಸೇರಿದಂತೆ ವಿವಿಧ ಅಗ್ರಿಗ್ರೇಟರ್​​ಗಳು, ಬೈಕ್ ಟ್ಯಾಕ್ಸಿಗಳ ಮಾಲೀಕರು ಹೈಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಏಕಸದಸ್ಯ ಪೀಠದ ಆದೇಶವನ್ನು…

Read More

Updated By: Priyalachhi ಆಳಿದವರ ಕಥೆಯಲ್ಲ, ಅಳಿದು ಉಳಿದವರ ಕಥೆ ಎಂಬ ಟ್ಯಾಗ್ ಲೈನ್ ಹೊಂದಿರುವ ಲ್ಯಾಂಡ್​ಲಾರ್ಡ್ ಸಿನಿಮಾ ಇಂದು ಕರ್ನಾಕದ್ಯಾಂತ 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಗಿದೆ. ಜಡೇಶ್​ ಕೆ ಹಂಪಿ ನಿರ್ದೇಶನದ ಲ್ಯಾಂಡ್​ಲಾರ್ಡ್, ಸಿನಿಪ್ರೇಮಿಗಳಿಂದ ಭೇಷ್ ಎನಿಸಿಕೊಂಡಿದೆ. ಟ್ರೇಲರ್​ ನೋಡಿದಾಗ ಪಾಳೇಗಾರಿಕೆ ಹಾಗೂ ಬಡ ರೈತರ ನಡುವಿನ ಸಂಘರ್ಷದ ಕಥೆ ಅನ್ನೋ ಸುಳಿವು ಬಿಟ್ಟುಕೊಟ್ಟಿತ್ತು. ಅಂದುಕೊಂಡಂತೆ ಲ್ಯಾಂಡ್ ಲಾರ್ಡ್ ಸಿನಿಮಾ ಪಾಳೇಗಾರಿಕೆ, ಸಮಾನತೆ ಬಗ್ಗೆ ಧ್ವನಿ ಎತ್ತಿದೆ. ರಾಮದುರ್ಗ ಎಂಬ ಹಳ್ಳಿಯಲ್ಲಿ ನಡೆಯುವ ಕಥೆ ಲ್ಯಾಂಡ್ ಲಾರ್ಡ್. ಸುಮಾರು 80 – 90ರ ದಶಕದ ಕಥೆ ಇದು. ಕೋಲಾರ ಭಾಗದ ಭಾಷೆಯನ್ನು ಬಳಸಿಕೊಳ್ಳುವ ಜೊತೆಗೆ, ನೆಲದ ಕಥೆಯನ್ನು ಬಹಳ ಸೂಕ್ಷ್ಮವಾಗಿ ನಿರ್ದೇಶಕ ಜಡೇಡ್ ಕೆ ಹಂಪಿ ತೆರೆ ಮೇಲೆ ಹೇಳಿ ಯಶಸ್ವಿಯಾಗಿದ್ದಾರೆ. ಊರಿನ ಧಣಿ ಎನಿಸಿಕೊಂಡವರ ದಬ್ಬಾಳಿಕೆ, ಅವರ ಪರ ನಿಲ್ಲುವ ಕಾನೂನು, ಪೊಲೀಸ್ ಎಂಬ ವ್ಯವಸ್ಥೆ ಬಡವರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದು ಲ್ಯಾಂಡ್ ಲಾರ್ಡ್ ಸಿನಿಮಾದ ತಿರಳು. ರೈತನ…

Read More

Updated By: Priyalachhi ಬೆಂಗಳೂರು: ಚುಟುಕು ಭಾಷಣಕ್ಕೆ ಸೀಮಿತಗೊಳಿಸಿ ಜಂಟಿ ಅಧಿವೇಶನದಿಂದ ಹೊರನಡೆದಿದ್ದ ರಾಜ್ಯಪಾಲರಿಗೆ ತಡೆದು ಅಗೌರವ ಸೂಚಿಸಿರುವ ಕಾಂಗ್ರೆಸ್​ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ಜಂಟಿ ಅಧಿವೇಶನದ ಎರಡನೇ ದಿನವಾದ ಶುಕ್ರವಾರ (ಇಂದು) ಕಲಾಪ ಆರಂಭವಾಗುತ್ತಿದ್ದಂತೆ, ಛಲವಾದಿ ನಾರಾಯಣಸ್ವಾಮಿ ಅವರು ಈ ವಿಷಯ ಪ್ರಸ್ತಾಪಿಸಿದರು. ಉಭಯ ಸದನವನ್ನು ಉದ್ದೇಶಿಸಿ ಚುಟುಕು ಭಾಷಣ ಮುಗಿಸಿ ಹೊರ ಹೋಗುತ್ತಿದ್ದ ರಾಜ್ಯಪಾಲರ ಎದುರು ಗೂಂಡಾಗಳ ರೀತಿ ವರ್ತಿಸಿ, ಅವರನ್ನು ತಡೆಯಲು ಪ್ರಯತ್ನಿಸಿದ್ದಾರೆ. ಈ ಮೂಲಕ ಗವರ್ನರ್​​ಗೆ ಅಗೌರವ ಸೂಚಿಸಿದ್ದಾರೆ. ಹೀಗಾಗಿ, ಅವರನ್ನು ಸಸ್ಪೆಂಡ್ ಮಾಡಬೇಕು ಎಂದು ಆಗ್ರಹಿಸಿದರು. ಈ ವೇಳೆ, ದುಂಡಾವರ್ತನೆ ತೋರಿದ ಹರಿಪ್ರಸಾದ್ ವಿರುದ್ಧ ಕ್ರಮ ಆಗಬೇಕು ಎನ್ನುತ್ತ ಒಕ್ಕೋರಲಿನಿಂದ ವಿಪಕ್ಷ ಸದಸ್ಯರು ಎದ್ದು ನಿಂತು ಆಗ್ರಹಿಸಿದರು. ಛಲವಾದಿ ಮಾತಿಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು, ಶೇಮ್.. ಶೇಮ್ ಎಂದು ಘೋಷಣೆ ಕೂಗುವ ಮೂಲಕ ತಿರುಗೇಟು ನೀಡಿದರು. ಈ ವೇಳೆ ಕ್ರಿಯಾಲೋಪ…

Read More