Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಬೆಂಗಳೂರು : ಜಂಟಿ‌ ಅಧಿವೇಶನದಲ್ಲಿ ರಾಜ್ಯಪಾಲರು ಮಾಡಿದ ಒಂದು ನಿಮಿಷದ ಭಾಷಣ ವಿಧಾನಸಭೆಯಲ್ಲಿ ಸದ್ದು, ಗದ್ದಲ, ಕೋಲಾಹಲ ಸೃಷ್ಟಿಸಿತು. ಕಲಾಪ ಆರಂಭವಾಗುತ್ತಿದ್ದ ಹಾಗೆ ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರಿಗೆ ಕಾಂಗ್ರೆಸ್ ಸದಸ್ಯರು ಅಗೌರವ ತೋರಿದ್ದಾರೆ. ಅವರ ವಿರುದ್ಧ ಶಿಸ್ತುಕ್ರಮ ಆಗಬೇಕು. ನಮ್ಮ 18 ಶಾಸಕರು ಸ್ಪೀಕರ್ ಪೀಠಕ್ಕೆ ಅಗೌರವ ಮಾಡಿದ್ರು ಅಂತ ಸಸ್ಪೆಂಡ್ ಮಾಡಲಾಗಿತ್ತು. ಈಗ ರಾಜ್ಯಪಾಲರಿಗೆ ಅಗೌರವ ತೋರಿದವರ ವಿರುದ್ಧ ಏನು ಕ್ರಮ?. ಈ ಸಂಬಂಧ ಸ್ಪೀಕರ್ ರೂಲಿಂಗ್ ಕೊಡಬೇಕು ಎಂದು ಆಗ್ರಹಿಸಿದರು. ರಾಜ್ಯಪಾಲರು ವಿವೇಚನೆಯಿಂದಲೇ ಭಾಷಣ ಮಾಡಿದ್ದಾರೆ. ಆದರೆ ಹೆಚ್. ಕೆ. ಪಾಟೀಲರು ರಾಜ್ಯಪಾಲರಿಗೆ ಓಡಿ ಹೋದ್ರು ಅಂದಿದ್ದು ಸರಿಯಲ್ಲ. ರಾಜ್ಯಪಾಲರು ರಾಷ್ಟ್ರಗೀತೆ ಹಾಡು ಶುರುವಾಗಿದ್ದಿದ್ರೆ ಇರುತ್ತಿದ್ದರು ಅಂತ ಅಶೋಕ್ ಸಮರ್ಥಿಸಿಕೊಂಡರು. ಶಾಸಕ ಅಶ್ವತ್ಥ್ ನಾರಾಯಣ್, ಸುನೀಲ್ ಕುಮಾರ್ ಕೂಡಾ ರಾಜ್ಯಪಾಲರಿಗೆ ಅಗೌರವ ತೋರಿದ ಕಾಂಗ್ರೆಸ್ ಸದಸ್ಯರ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ರು. ಮಾತಿನ ಭರದಲ್ಲಿ ಸುನೀಲ್ ಕುಮಾರ್ ಅವರು,…

Read More

Updated By: Priyalachhi ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ರಾವುತ್ತನಹಳ್ಳಿ ಗ್ರಾಮದ ಕ್ರಮ ಸಂಖ್ಯೆ 57 ಮತ್ತು 58 ರಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳ 22 ಮಠಗಳಿಗೆ 40 ಎಕರೆ ಭೂಮಿ ಹಂಚಿಕೆ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಬಂಧಪಟ್ಟ ಧಾರ್ಮಿಕ ಸಂಸ್ಥೆಗಳು ಕೃಷಿ ಭೂಮಿಯ ಸಬ್-ರಿಜಿಸ್ಟ್ರಾರ್ ಮೌಲ್ಯದ ಶೇಕಡಾ 5ರಿಂದ 10ರಷ್ಟು ನಾಮಮಾತ್ರವನ್ನು ಸರ್ಕಾರಕ್ಕೆ ಪಾವತಿಸಬೇಕಾಗುತ್ತದೆ. ಡಿಸೆಂಬರ್ 31, 2027 ರವರೆಗೆ ಹೊರಡಿಸಲಾದ ಎಲ್ಲಾ ಸಂಬಂಧಿತ ಅಧಿಸೂಚನೆಗಳಲ್ಲಿ ರಾಜ್ಯ ನಾಗರಿಕ ಸೇವೆಗಳಲ್ಲಿನ ಖಾಲಿ ಹುದ್ದೆಗಳಿಗೆ ಎಲ್ಲಾ ವರ್ಗಗಳಿಗೆ 5 ವರ್ಷಗಳ ವಯೋಮಿತಿಯನ್ನು ಸಡಿಲಿಸಲು ಸಂಪುಟವು ಅನುಮೋದನೆ ನೀಡಿದೆ. ಸಂಪುಟದಲ್ಲಿ ತೆಗೆದುಕೊಂಡ ಇತರ ಪ್ರಮುಖ ನಿರ್ಧಾರಗಳು ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಕ್ಕಾಗಿ 600 ಚದರ ಅಡಿ ಅಳತೆಯ ಮನೆಗಳ ನಿರ್ಮಾಣಕ್ಕೆ 100 ಕೋಟಿ ರೂ. ನಾಸ್ಕಾಮ್ ಸಹಯೋಗದೊಂದಿಗೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಕಿಯೋನಿಕ್ಸ್ ಸೌಲಭ್ಯದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಎಐ ಸೆಂಟರ್ ಆಫ್…

Read More

Updated By: Priyalachhi ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ), ಬೆಂಗಳೂರು ವಲಯ ಕಚೇರಿ ಅಧಿಕಾರಿಗಳ ತಂಡ 20.85 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿದೆ. ತಾತ್ಕಾಲಿಕ ಜಪ್ತಿಗೊಂಡ ಆಸ್ತಿಗಳಲ್ಲಿ ಕಾನೂನುಬಾಹಿರವಾಗಿ ಹಂಚಿಕೆಗೊಂಡ 6 ಮುಡಾ ನಿವೇಶನಗಳು, 3 ಇತರೆ ಮಾದರಿ ಆಸ್ತಿಗಳು ಹಾಗೂ ಒಂದು ವಾಣಿಜ್ಯ ಕಟ್ಟಡ ಸೇರಿವೆ. ಜನವರಿ 21ರಂದು ಇ.ಡಿ ದಾಳಿ ನಡೆಸಿದೆ. ಮೈಸೂರಿನಲ್ಲಿ ದಾಖಲಾಗಿದ್ದ ಮುಡಾ ಪ್ರಕರಣದ ಎಫ್‌ಐಆರ್ ತನಿಖೆಯನ್ನು ಜಾರಿ ನಿರ್ದೇಶನಾಲಯ ಆರಂಭಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ (ಭೂಸ್ವಾಧೀನಕ್ಕೆ ಪರಿಹಾರವಾಗಿ ನಿವೇಶನ ಹಂಚಿಕೆ) ನಿಯಮಗಳು2009 (2015ರ ತಿದ್ದುಪಡಿ ಸಹಿತ) ಹಾಗೂ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ (ಸ್ವಯಂ ಭೂಸರಣಿ ಪ್ರೋತ್ಸಾಹ ಯೋಜನೆ) ನಿಯಮಗಳು 1991ರ ಘೋರ ಉಲ್ಲಂಘನೆಯೊಂದಿಗೆ ನಿವೇಶನಗಳನ್ನು ಹಂಚಿಕೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಇ.ಡಿ ಹೇಳಿದೆ. ಇದೇ ವೇಳೆ, ಮುಡಾ ಅಧಿಕಾರಿಗಳು ಹಾಗೂ…

Read More

Updated By: Priyalachhi ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿ ಕೋರಿದಾಗ ಇದು ವೈಯಕ್ತಿಕ ಮಾಹಿತಿ ಎಂದು ಹೇಳಿ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದ ಅಧಿಕಾರಿಗಳಿಗೆ ಮದ್ರಾಸ್ ಉಚ್ಚ ನ್ಯಾಯಾಲಯವು ಬಿಸಿ ಮುಟ್ಟಿಸಿದೆ.​W.P.No.33854/2024 ಪ್ರಕರಣದಲ್ಲಿ ನ್ಯಾಯಮೂರ್ತಿ ಸಿ.ವಿ. ಕಾರ್ತಿಕೇಯನ್ ನೀಡಿದ ಈ ತೀರ್ಪು ಮಾಹಿತಿ ಬಳಕೆದಾರರಿಗೆ ಹೊಸ ಆಯುಧ ನೀಡಿದೆ. ​ಒಬ್ಬ ವ್ಯಕ್ತಿ ಸಾರ್ವಜನಿಕ ಸೇವೆಗೆ ಸೇರಿದ ಕ್ಷಣದಿಂದಲೇ ಅವನು ಸಾರ್ವಜನಿಕರ ಪರಿಶೀಲನೆಗೆ ಒಳಪಡುತ್ತಾನೆ. ಅವನು ಸಾರ್ವಜನಿಕ ಗಮನದಲ್ಲೇ ಬದುಕಬೇಕು ಎಂಬುದನ್ನು ಒಪ್ಪಿಕೊಳ್ಳಬೇಕು. ಅಧಿಕಾರಿಯ ಸೇವೆಗೆ ಸೇರಿದ ದಿನಾಂಕ, ವರ್ಗಾವಣೆಗಳು, ಬಡ್ತಿ ಮತ್ತು ನಿವೃತ್ತಿಯ ವಿವರಗಳು ಯಾವುದೇ ಕಾರಣಕ್ಕೂ ಖಾಸಗಿ ಮಾಹಿತಿಯಾಗಲು ಸಾಧ್ಯವಿಲ್ಲ. ಸಾರ್ವಜನಿಕ ಸೇವಕನ ಆಸ್ತಿ ಮತ್ತು ಬಾಧ್ಯತೆಗಳ ವಿವರಗಳು ಸಾರ್ವಜನಿಕ ಹಿತಾಸಕ್ತಿಗೆ ಒಳಪಟ್ಟಿರುತ್ತವೆ. ಅವನ್ನು ಸಂಪೂರ್ಣವಾಗಿ ಮರೆಮಾಚುವಂತಿಲ್ಲ. ​ಸೆಕ್ಷನ್ 8(1)(j) ನೆಪವೊಡ್ಡಿ ವೈಯಕ್ತಿಕ ಮಾಹಿತಿ ಎಂಬ ಯಾಂತ್ರಿಕವಾಗಿ ನಿರಾಕರಿಸುವುದು ಕಾನೂನುಬಾಹಿರ. ​ ​ಭ್ರಷ್ಟ ಅಧಿಕಾರಿಗಳ ಅಕ್ರಮ ಸಂಪಾದನೆ ಮತ್ತು ಅಧಿಕಾರ ದುರ್ಬಳಕೆಯನ್ನು ಪ್ರಶ್ನಿಸಲು ಈಗ ಹೆಚ್ಚಿನ ಬಲ ಸಿಕ್ಕಿದೆ. ​ಅಧಿಕಾರಿಗಳ ಸೇವಾ ದಾಖಲೆಗಳನ್ನು…

Read More

Updated By: Priyalachhi ಪಂಚಾಂಗ: ದಿನಾಂಕ : 23-01-2026 ವಾರ : ಶುಕ್ರವಾರ ಸಂವತ್ಸರ : ವಿಶ್ವವಸು ಆಯನ : ಉತ್ತರಾಯಣ ಪಕ್ಷ : ಶುಕ್ಲ ತಿಥಿ : ಪಂಚಮಿ ನಕ್ಷತ್ರ : ಪೂರ್ವಾಭಾದ್ರಪದ ಸೂರ್ಯೋದಯ : ಮುಂಜಾನೆ 06:45 ಗಂಟೆಗೆ ಅಮೃತ ಕಾಲ : ಬೆಳಗ್ಗೆ 08:11 ರಿಂದ 09:37ರ ವರೆಗೆ ದುರ್ಮುಹೂರ್ತ : ಬೆಳಗ್ಗೆ 09:09 ರಿಂದ 09:57 ಹಾಗೂ ಮಧ್ಯಾಹ್ನ 03:33 ರಿಂದ 04:21ರ ತನಕ ರಾಹುಕಾಲ : ಮಧ್ಯಾಹ್ನ 11:03 ರಿಂದ 12:29ರ ವರೆಗೆ ಸೂರ್ಯಾಸ್ತ : ಸಂಜೆ 06:13 ಗಂಟೆಗೆ ರಾಶಿ ಭವಿಷ್ಯ: ಮೇಷ : ಇಂದು ನೀವು ಯಶಸ್ಸು ಪಡೆಯುತ್ತೀರಿ, ಮತ್ತು ಅದನ್ನು ಯಾರ ಬೆಂಬಲವಿಲ್ಲದೆ ನಿಮ್ಮದೇ ಪರಿಶ್ರಮದಿಂದ ಮಾಡುತ್ತೀರಿ. ನೀವು ವಿಜ್ಞಾನ ಅಥವಾ ಕಲಾ ವಿದ್ಯಾರ್ಥಿಯಾಗಿರಬಹುದು, ಆದರೆ ವಿಷಯದ ಆಳ ಜ್ಞಾನದಿಂದ ಮಾತ್ರ ಶ್ರೇಷ್ಠರಾಗುತ್ತೀರಿ. ವೃಷಭ : ನೀವು ಇತರರನ್ನು ಮೆಚ್ಚಿಸಲು ಅಥವಾ ಪ್ರಭಾವ ಬೀರಲು ಕಷ್ಟ ಎಂದು ಕಾಣುತ್ತೀರಿ. ನೀವು ಒಳ್ಳೆಯದನ್ನು ಮಾಡಲು…

Read More

Updated By: Priyalachhi ಭೋಪಾಲ್ (ಮಧ್ಯಪ್ರದೇಶ): ಸಾವಿರ ಚದರ ಅಡಿ ಭೂಮಿ ಹೊಂದಿರುವ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಳೆಗಳನ್ನು ಬೆಳೆಸಲಾಗುತ್ತಿದೆ. ಇದು ವಿಚಿತ್ರವೆನಿಸಬಹುದು. ಆದರೆ, ಭೋಪಾಲ್‌ನ ಯುವತಿಯೊಬ್ಬರು ತನ್ನ ಮನೆಯಲ್ಲಿನ ಕೋಣೆಯಲ್ಲಿಯೇ ಈ ರೀತಿಯ ಕೃಷಿಯನ್ನು ಮಾಡುತ್ತಿದ್ದಾರೆ. ಇದಕ್ಕಾಗಿ, ಅವರು ತನ್ನ ಮನೆಯ ಒಂದು ಭಾಗವನ್ನು ಆಧುನಿಕ ತೋಟವನ್ನಾಗಿ ಪರಿವರ್ತಿಸಿದ್ದಾರೆ. ಹಿಮಾಲಯದಂತಹ ಶೀತ ಪ್ರದೇಶಗಳಲ್ಲಿ ಕಂಡುಬರುವ ‘ಕಿಡಜಾಡಿ’ (ಕಾರ್ಡಿಸೆಪ್ಸ್) ಎಂಬ ಅಪರೂಪದ ಅಣಬೆ ಬೆಳೆಸುವ ಮೂಲಕ ಅವರು ಲಕ್ಷಾಂತರ ರೂಪಾಯಿಯನ್ನು ಗಳಿಸುತ್ತಿದ್ದಾರೆ. ಭೋಪಾಲ್​ನ ಭಾವಡಿಯಾ ಕಲಾ ಪ್ರದೇಶದ ನಿವಾಸಿ ದೇವಿಕಾ ಸಿಂಗ್ ಈ ಅಣಬೆಗಳನ್ನು ಬೆಳೆಸುತ್ತಿದ್ದಾರೆ. ಅವರು ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ. ನಂತರ, ಅವರು ಬಯೋಟೆಕ್ ವಲಯದಲ್ಲಿ ಕೆಲಸ ಮಾಡಿದ್ದಾರೆ. ಆ ಅನುಭವದೊಂದಿಗೆ ಅವರು ಈ ಪ್ರಯೋಗವನ್ನು ಕೈಗೆತ್ತಿಕೊಂಡಿದ್ದಾರೆ. ಕಾರ್ಡಿಸೆಪ್ಸ್ ಅಣಬೆಗಳನ್ನು ಸಾಮಾನ್ಯವಾಗಿ ಹಿಮಾಲಯ ಮತ್ತು ಟಿಬೆಟ್‌ನಂತಹ ಶೀತ ಪ್ರದೇಶಗಳಲ್ಲಿ ಮಾತ್ರ ಬೆಳೆಯಲಾಗುತ್ತದೆ. ಆದರೆ, ದೇವಿಕಾ ಸಿಂಗ್ ಅವುಗಳನ್ನು ತಮ್ಮ ಮನೆಯಲ್ಲಿಯೇ ಬೆಳೆಸುತ್ತಿದ್ದಾರೆ. ಈ ಬೆಳೆಗೆ…

Read More

Updated By: Priyalachhi ಐಟಿ ಮೂಲಕ ವಿಶ್ವದ ಗಮನ ಸೆಳೆದಿದ್ದ ಬೆಂಗಳೂರು ನಗರ ಇತ್ತೀಚಿಗೆ ಟ್ರಾಫಿಕ್​ ಸಮಸ್ಯೆಯಿಂದಲೂ ಜಾಗತಿಕ ಸ್ಥಾನ ಪಡೆಯುತ್ತಿದೆ. ಜಗತ್ತಿನ ಅತಿ ದಟ್ಟಣೆಯ ಟ್ರಾಫಿಕ್​ನಲ್ಲಿ ಬೆಂಗಳೂರು ಎರಡನೇ ಸ್ಥಾನವನ್ನು ಪಡೆದಿದೆ ಎಂದು ಟಾಮ್ ಟಾಮ್ ಟ್ರಾಫಿಕ್ ಇಂಡೆಕ್ಸ್ 2025ರಲ್ಲಿ ತೋರಿಸಿದೆ. ಈ ಸೂಚ್ಯಂಕದಲ್ಲಿ 2023 ರಲ್ಲಿ 6ನೇ ಸ್ಥಾನದಲ್ಲಿದ್ದ ಬೆಂಗಳೂರು 2024ರಲ್ಲಿ 3ನೇ ಸ್ಥಾನ ಮತ್ತು 2025ರಲ್ಲಿ ಎರಡನೇ ಸ್ಥಾನ ಪಡೆದಿದ್ದು, ಜನದಟ್ಟಣೆಯ ಸಮಯದಲ್ಲಿ ಪ್ರಯಾಣದ ವೇಗ ಕಡಿಮೆಯಾಗಿದ್ದು, ಹೆಚ್ಚಿನ ಸಮಯವನ್ನು ಬೇಡುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಟಾಮ್‌ಟಾಮ್ ನೆದರ್‌ಲ್ಯಾಂಡ್ಸ್ ಮೂಲದ ಸಂಸ್ಥೆಯಾಗಿದ್ದು ಜಗತ್ತಿನಾದ್ಯಂತ ನಗರಗಳಲ್ಲಿ ದಟ್ಟಣೆಯ ಮಟ್ಟಗಳು ಮತ್ತು ಪ್ರಯಾಣದ ಸಮಯವನ್ನು ಹೋಲಿಕೆ ಮಾಡಿ ಪ್ರತಿವರ್ಷ ಟ್ರಾಫಿಕ್​ ಸೂಚ್ಯಂಕವನ್ನು ಪ್ರಕಟಿಸುತ್ತದೆ ಹೆಚ್ಚಿನ ದಟ್ಟಣೆ ಸಮಯ: ಸಿಲಿಕಾನ್​ ಸಿಟಿಯಲ್ಲಿ ಪೀಕ್​ ಸಮಯದಲ್ಲಿದಲ್ಲಿ ನಿಧಾನಗತಿಯ ಟ್ರಾಫಿಕ್​ ಇದ್ದು, ಸರಾಸರಿ ಶೇ 74.4ರಷ್ಟಿದೆ. 2024ಕ್ಕೆ ಹೋಲಿಕೆ ಮಾಡಿದರೆ ಇದು ಶೇ 1.7ರಷ್ಟು ಹೆಚ್ಚಾಗಿದೆ. ಅಂದರೆ, ನಗರದಲ್ಲಿ 10 ಕಿ.ಮೀ ದೂರು ಕ್ರಮಿಸಲು ಪಡೆಯುವ…

Read More

Updated By: Priyalachhi ಬೆಂಗಳೂರು: ಇಂದು ಗುರುವಾರ ಆರಂಭವಾದ ವಿಧಾನಸಭೆಯ ವಿಶೇಷ ಅಧಿವೇಶನದ ವೇಳೆ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರ ಕೊಟ್ಟ ಭಾಷಣ ಓದುವ ಬದಲು ತಾವೇ ಬರೆದು ತಂದ ಭಾಷಣ ಆರಂಭಿಸಿ ಕೇವಲ ಒಂದೇ ವಾಕ್ಯ ಓದಿ ಮುಗಿಸಿ ಹೊರಟ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಸದಸ್ಯರು ತೀವ್ರವಾಗಿ ಖಂಡಿಸಿ ಟೀಕಿಸುತ್ತಿದ್ದಾರೆ. ಅವರು ಹೊರಹೋಗುತ್ತಿದ್ದ ವೇಳೆ ಕಾಂಗ್ರೆಸ್ ನಾಯಕರಾದ ಬಿ ಕೆ ಹರಿಪ್ರಸಾದ್ ಮತ್ತು ಇತರ ಶಾಸಕರು ಅಡ್ಡಿಗಟ್ಟಿರುವುದನ್ನು ಖಂಡಿಸಿರುವ ವಿಪಕ್ಷ ನಾಯಕ ಆರ್ ಅಶೋಕ್, ಇದೊಂದು ‘ಕರಾಳ ದಿನ’ ಎಂದು ಕರೆದಿದ್ದಾರೆ. ವಿಧಾನಸೌಧ ಮುಂದೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನ ಪ್ರಕಾರ ರಾಜ್ಯಪಾಲರು ತಮ್ಮ ಕರ್ತವ್ಯ ನಿರ್ವಹಿಸಿ ಧನ್ಯವಾದ ಹೇಳಿ ಹೊರಟಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ರಾಜ್ಯಪಾಲರು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸಿದ್ದು, ಅವರ ಭಾಷಣವನ್ನು ಓದದೇ ಹೊರಡುವುದಕ್ಕೂ ಅವರಿಗೆ ಅಧಿಕಾರವಿದೆ. ಆದರೆ ಕಾಂಗ್ರೆಸ್ ಪಕ್ಷದವರು ರಾಜ್ಯಪಾಲರನ್ನು ಅಡ್ಡಗಟ್ಟಿ ಅಗೌರವ ತೋರಿಸಿದ್ದು ಗೂಂಡಾಗಿರಿ ಎಂದು ಕಿಡಿಕಾರಿದರು. ಅಧಿವೇಶನವನ್ನು…

Read More

Updated By: Priyalachhi ಬೆಂಗಳೂರು: ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ ಗುರುವಾರ ಆರಂಭವಾಗಿದ್ದು, ಜನವರಿ 31ರ ಶವಿವಾರದವರೆಗೆ ನಡೆಯಲಿದೆ. ಈ ನಡುವೆ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಮಾಡಿದ ಭಾಷಣ ಮತ್ತು ವಿರೋಧ ಪಕ್ಷಗಳು ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಜನವರಿ 28ರ ಬುಧವಾರ ಸಂಜೆ 6.30 ಗಂಟೆಗೆ ಅರಮನೆ ರಸ್ತೆಯ ಸಿ.ಐ.ಡಿ. ಕಛೇರಿ ಮುಂಭಾಗದಲ್ಲಿರುವ ಹೋಟೆಲ್ ಯಾಡಿಸನ್ ಬ್ಲೂ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ತಿನ ಸಭಾ ನಾಯಕ ಎನ್.ಎಸ್. ಭೋಸರಾಜು ಉಪಸ್ಥಿತರಿರಲಿದ್ದಾರೆ. ಏತನ್ಮಧ್ಯೆ ಉಭಯ ಸದನಗಳನ್ನು ಉದ್ದೇಶಿಸಿ ಇಂಜು ಮಾತನಾಡಿದ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್‌ ಅವರು ಸಾಂಪ್ರದಾಯಿಕವಾಗಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದುವ ಬದಲಾಗಿ ತಾವೇ ಸಿದ್ಧಪಡಿಸಿದ ಭಾಷಣ ಓದಿರುವುದು ತೀವ್ರ ಗದ್ದಲಕ್ಕೆ ಕಾರಣವಾಗಿದೆ. ಅದೂ…

Read More

Updated By: Priyalachhi ಬೆಂಗಳೂರು: ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು, ಗೌರವ, ಸನ್ಮಾನಗಳಲ್ಲಿ ಮಿಂದೆದಿದ್ದಾರೆ. ಈ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಕಾವೇರಿ ನಿವಾಸದಲ್ಲಿ ಇಂದು ಭೇಟಿಯಾದ ಗಿಲ್ಲಿನಟನಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಗಂಧದ ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಗಿಲ್ಲಿ ನಟನ ಭುಜದ ಮೇಲೆ ಕೈ ಹಾಕಿ ಪೋತ್ಸಾಹಿಸಿದ್ದಾರೆ. ಗಿಲ್ಲಿ ನಟ ತಮ್ಮ ಎಂದಿನ ಶೈಲಿಯಲ್ಲೇ ಸರಳವಾಗಿ ಶರ್ಟ್ ಧರಿಸಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಈ ವೇಳೆ ನಗರಾಭಿವೃದ್ದಿ ಖಾತೆ ಸಚಿವ ಭೈರತಿ ಸುರೇಶ್, ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್ ಕೂಡ ಉಪಸ್ಥಿತರಿದ್ದರು. ಈ ಕುರಿತ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ, 12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ಗಿಲ್ಲಿ ನಟರಾಜ್ ಅವರನ್ನು ಅಭಿನಂದಿಸಿ, ಮುಂದಿನ ಜೀವನ ಇನ್ನಷ್ಟು ಯಶಸ್ಸು, ಸಂತಸದಿಂದ ಕೂಡಿರಲಿ ಎಂದು ಶುಭ ಹಾರೈಸಿದೆ ಎಂದು ಬರೆದುಕೊಂಡಿದ್ದಾರೆ.

Read More