Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಹಾಸನ: “ನೀವು 135 ಸೀಟ್ ಗೆದ್ರಲ್ಲಾ? ಇವಿಎಂ ಬಳಸಿದ್ರಾ ಅಥವಾ ಬ್ಯಾಲೆಟ್ ಪೇಪರ್ ಬಳಸಿದ್ರಾ?” ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಹಾಸನದಲ್ಲಿ ಬುಧವಾರ ಮಾತನಾಡಿದ ಅವರು, “ನಮ್ಮ ಪಕ್ಷ ಇದುವರೆಗೂ ಇವಿಎಂ ಬಗ್ಗೆ ಚರ್ಚೆ ಮಾಡಿಲ್ಲ. ಬ್ಯಾಲೆಟ್ ಪೇಪರ್ ಬಗ್ಗೆನೂ ಚರ್ಚಿಸಿಲ್ಲ. ಚರ್ಚೆ ಮಾಡುತ್ತಿರುವವರು ಯೋಚನೆ ಮಾಡಬೇಕು. ಕಾಂಗ್ರೆಸ್ನವರು ಇವಿಎಂ ಬಗ್ಗೆ ಚರ್ಚೆ ಮಾಡ್ತಾರೆ” ಎಂದರು. “ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮೈತ್ರಿ ಹೊಂದಾಣಿಕೆಯಲ್ಲಿ ಎದುರಿಸಬೇಕು ಎಂಬುದು ನಮ್ಮ ನಿಲುವು. ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಈಗಾಗಲೇ ಹೇಳಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಒಡಂಬಡಿಕೆ ಮಾಡಿಕೊಳ್ಳಲು ಕುಳಿತು ಮಾತನಾಡಬೇಕು. ಹಾಸನದಲ್ಲಿ ಒಂದಿಬ್ಬರಿಗೆ ಅಸಮಾಧಾನವಿದೆ. ಅವರ ಕೇಂದ್ರ ನಾಯಕರು ನೋಡಿಕೊಳ್ಳುತ್ತಾರೆ. ನಾಡಿನ ಜನರ ಅಭಿಪ್ರಾಯವೂ ಮೈತ್ರಿಯೇ ಆಗಿದೆ” ಎಂದು ಹೇಳಿದರು. “ಮೊದಲು ಇಂತಹ ಕೆಟ್ಟ ಸರ್ಕಾರ ತೊಲಗಬೇಕು. ಇದು ನಾನು ಹೇಳುತ್ತಿರುವುದಲ್ಲ, ಕೆಟ್ಟ ಸರ್ಕಾರವನ್ನು ತೆಗೆಯಬೇಕೆಂಬ ಭಾವನೆ ಜನರಲ್ಲಿದೆ. 2006-2007ರಲ್ಲಿ ಮಾಡದೇ ಇರುವ ತಪ್ಪನ್ನು…
Updated By: Priyalachhi ಬೆಂಗಳೂರು: ರಾಜಧಾನಿ ಬೆಂಗಳೂರು ಹಲವು ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣಗಳನ್ನು ಹೊಂದಿದ್ದರೂ ಪ್ರವಾಸಿ ತಾಣವಾಗಿ ಪ್ರಚಾರ ಮಾಡಲಿಲ್ಲ. ಈಗ ಹೊಸದಾಗಿ ಪ್ರಾರಂಭಿಸಲಾದ ಅಂಬಾರಿ ಡಬಲ್ ಡೆಕ್ಕರ್ ಪ್ರವಾಸಿ ಬಸ್ ಮೂಲಕ, ಬೆಂಗಳೂರಿನ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ ಎಂದು ಪ್ರವಾಸೋದ್ಯಮ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ಅವರು ಬುಧವಾರ ಹೇಳಿದ್ದಾರೆ. ಇಂದು ರವೀಂದ್ರ ಕಲಾತಕ್ಷೇತ್ರದ ಎದುರು ಬೆಂಗಳೂರಿನ ಪ್ರವಾಸಿಗರಿಗಾಗಿ ಲಂಡನ್ ಮಾದರಿಯ ‘ಅಂಬಾರಿ ಡಬಲ್ ಡೆಕ್ಕರ್’ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಬೆಂಗಳೂರು ನಗರದಲ್ಲಿ ಲಂಡನ್ ಮಾದರಿಯ ಮೂರು ‘ಅಂಬಾರಿ ಡಬಲ್ ಡೆಕ್ಕರ್’ ಬಸ್ ಗಳ ಕಾರ್ಯಾಚರಣೆ ನಡೆಸಲು ಉದ್ದೇಶಿಸಲಾಗಿದೆ ಎಂದರು. ವಿಧಾನಸೌಧವು ವಿಶ್ವದಲ್ಲಿ ವಾಸ್ತುಶಿಲ್ಪದ ವಿಶಿಷ್ಟವಾಗಿದೆ. ಆದರೆ ಇಲ್ಲಿಯವರೆಗೆ ಇದನ್ನು ಸರ್ಕಾರಿ ಕಟ್ಟಡವಾಗಿ ಮಾತ್ರ ನೋಡಲಾಗಿದೆ. ಈ ಬಸ್ ಸೇವೆಯ ಮೂಲಕ, ವಿಧಾನಸೌಧಕ್ಕೆ ಪ್ರವಾಸೋದ್ಯಮ ಅವಕಾಶವೂ ಹೆಚ್ಚಾಗುತ್ತದೆ ಎಂದರು.
Updated By: Priyalachhi ಬೆಂಗಳೂರು: ಅಮಾನತುಗೊಂಡಿರುವ ಪೊಲೀಸ್ ಮಹಾನಿರ್ದೇಶಕ(ನಾಗರಿಕ ಹಕ್ಕುಗಳ ಜಾರಿರ್ದೇಶನಾಲಯ) ಕೆ. ರಾಮಚಂದ್ರ ರಾವ್ ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ತಮ್ಮ ಕಚೇರಿಯೊಳಗೆ ಸಮವಸ್ತ್ರದಲ್ಲಿದ್ದಾಗ ಅಶ್ಲೀಲ ಕೃತ್ಯಗಳಲ್ಲಿ ತೊಡಗಿರುವ ಆಡಿಯೋ ಮತ್ತು ವಿಡಿಯೋ ತುಣುಕುಗಳು ವೈರಲ್ ಆದ ನಂತರ ಡಿಜಿಪಿ ಕೆ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಲಾಗಿತ್ತು. ಪೊಲೀಸ್ ಮಹಾನಿರ್ದೇಶಕ(ನೇಮಕಾತಿ) ಉಮೇಶ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ” ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.
Updated By: Priyalachhi ದಾವೋಸ್(ಸ್ವಿಡ್ಜರ್ಲಾಂಡ್): ಜಾಗತಿಕ ಹೂಡಿಕೆದಾರರಲ್ಲಿ ದೇಶದ ಅಗ್ರ ಹೂಡಿಕೆ ತಾಣವಾಗಿ ಕರ್ನಾಟಕದ ಸಾಮರ್ಥ್ಯದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಾವೋಸ್ ನಲ್ಲಿ ಮಾತನಾಡಿದ್ದಾರೆ. ಜಗತ್ತು ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತದೆ ಎಂದು ಹೇಳಿದ್ದಾರೆ. ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯ ಸಂದರ್ಭದಲ್ಲಿ ಪಿಟಿಐ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಡಿ ಕೆ ಶಿವಕುಮಾರ್, ದಾವೋಸ್ ನಲ್ಲಿ ಕಲಿಯಲು ಬಹಳಷ್ಟು ವಿಷಯಗಳಿವೆ. ಪ್ರಪಂಚದಾದ್ಯಂತದ ವಿವಿಧ ನಾಯಕರನ್ನು ನಾನು ಈ ಸಭೆಯಲ್ಲಿ ಭೇಟಿ ಮಾಡಿದ್ದೇನೆ. ಬೆಂಗಳೂರಿನ ಮೂಲಕ ಭಾರತವನ್ನು ವಿಶ್ವದ ನಾಯಕರು ನೋಡುತ್ತಿದ್ದಾರೆ ಎಂದರು. ಈ ವಿಶ್ವ ಆರ್ಥಿಕ ವೇದಿಕೆಯಲ್ಲಿ ನಾನು ಅವರಿಗೆ ಕರ್ನಾಟಕದ ಮಹತ್ವವನ್ನು ಮತ್ತು ಅದು ಕೆಲಸ ಮಾಡಲು ಉತ್ತಮ ರಾಜ್ಯ ಎಂದು ಸಾರುತ್ತಿದ್ದೇನೆ ಎಂದರು.
Updated By: Priyalachhi ಪಂಚಾಂಗ: ದಿನಾಂಕ : 22-01-2026 ವಾರ : ಗುರುವಾರ ಸಂವತ್ಸರ : ವಿಶ್ವವಸು ಆಯನ : ಉತ್ತರಾಯಣ ಮಾಸ : ಮಾಘ ಪಕ್ಷ : ಶುಕ್ಲ ತಿಥಿ : ಚತುರ್ಥಿ ನಕ್ಷತ್ರ : ಸ್ತಭಿಷ ಸೂರ್ಯೋದಯ : ಮುಂಜಾನೆ 06:45 ಗಂಟೆಗೆ ಅಮೃತ ಕಾಲ : ಬೆಳಗ್ಗೆ 09:37 ರಿಂದ 11:03ರ ವರೆಗೆ ದುರ್ಮುಹೂರ್ತ : ಬೆಳಗ್ಗೆ 10:45 ರಿಂದ 11:33 ಹಾಗೂ ಮಧ್ಯಾಹ್ನ 03:33 ರಿಂದ 04:21ರ ತನಕ ರಾಹುಕಾಲ : ಮಧ್ಯಾಹ್ನ 01:55 ರಿಂದ 03:21ರ ವರೆಗೆ ಸೂರ್ಯಾಸ್ತ : ಸಂಜೆ 06:13 ಗಂಟೆಗೆ ರಾಶಿ ಭವಿಷ್ಯ: ಮೇಷ : ಇಂದು ನೀವು ಪರಿಸರ ಸ್ನೇಹಿ ಕೆಲಸಗಳನ್ನು ಮಾಡುತ್ತೀರಿ. ನೀವು ಗಿಡ ನೆಡಬಹುದು. ನೆರೆಹೊರೆಯನ್ನು ಸ್ವಚ್ಛವಾಗಿರಿಸಲು ಬೀದಿಯಲ್ಲಿನ ಕಸ ತೆಗೆಯಬಹುದು. ಪರಿಸರಕ್ಕೆ ಒಳ್ಳೆಯ ಹೆಚ್ಚು ಚಟುವಟಿಕೆಗಳನ್ನು ಮಾಡಲು ಬಯಸಿದ್ದೀರಿ, ಆದ್ದರಿಂದ ಒಂದು ಸಲಕ್ಕೆ ಒಂದು ಕೆಲಸ ಮಾಡಿ. ವೃಷಭ : ನಿಮ್ಮ ಸಿಹಿಮಾತುಗಳು ಸುಲಭವಾಗಿ ವ್ಯಾಪಾರ ವ್ಯವಹಾರಗಳನ್ನು…
Updated By: Priyalachhi ಇಂದಿನ ಒತ್ತಡ ಜೀವನದಲ್ಲಿ ಕೆಲಸ ಮುಗಿಸಲು ತಡವಾಗಿ ಎಚ್ಚರವಾಗಿರುವುದು ಹಾಗೂ ಬೆಳಿಗ್ಗೆ ಆಯಾಸವನ್ನು ನಿವಾರಿಸಲು ಕಾಫಿ ಕುಡಿಯುವುದು ನಮ್ಮಲ್ಲಿ ಅನೇಕರಿಗೆ ಒಗ್ಗಿಕೊಂಡಿರುವ ವಿಷಯವಾಗಿದೆ. ನಾವು ದಿನಕ್ಕೆ ಐದು ಇಲ್ಲವೇ ಆರು ಗಂಟೆಗಳ ಕಾಲ ನಿದ್ರಿಸಿದರೆ ಉಳಿದ ಸಮಯದಲ್ಲಿ ನಾವು ಕೆಲಸ ಮಾಡಬಹುದು ಎಂದು ಭಾವಿಸುತ್ತೇವೆ. ಆರು ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವುದರಿಂದ ನಾವು ದಣಿದಿದ್ದೇವೆ. ಕ್ರಮೇಣ ನಮ್ಮ ದೇಹದ ಚಯಾಪಚಯ, ರೋಗನಿರೋಧಕ ವ್ಯವಸ್ಥೆ, ಹೃದಯ ಹಾಗೂ ಮೆದುಳಿನ ಕಾರ್ಯಗಳ ಮೇಲೆ ಅಡ್ಡಿಪಡಿಸುತ್ತದೆ ಎಂದು ಅನೇಕ ಅಧ್ಯಯನಗಳು ಎಚ್ಚರಿಕೆ ನೀಡಿವೆ. ನಿದ್ರೆಯನ್ನು ಕಡಿಮೆ ಮಾಡುವುದರಿಂದ ಒಟ್ಟಾರೆ ದೇಹದ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತದೆ. ವಾಸ್ತವವಾಗಿ ನಮ್ಮ ಜೀವಿತಾವಧಿಯನ್ನು ಕಡಿಮೆ ಮಾಡುತ್ತಿದೆ. ನಿದ್ರಾಹೀನತೆಯು ನಮ್ಮ ದೇಹದ ಮೇಲೆ ಯಾವ ಪರಿಣಾಮಗಳನ್ನು ಬೀರುತ್ತದೆ. ವಯಸ್ಕರು ದಿನಕ್ಕೆ ಕನಿಷ್ಠ ಏಳು ಗಂಟೆಗಳು ಇಲ್ಲವೇ ಅದಕ್ಕಿಂತ ಹೆಚ್ಚು ಕಾಲ ನಿದ್ರಿಸಬೇಕೆಂದು ಅಧ್ಯಯನಗಳು ಶಿಫಾರಸು ಮಾಡುತ್ತವೆ. ಇದು ಕಡಿಮೆಯಾದಾಗ ದೇಹದಲ್ಲಿ ಯಾವೆಲ್ಲಾ ಬದಲಾವಣೆಗಳು ಆಗುತ್ತವೆ ಎಂಬುದನ್ನು…
Updated By: Priyalachhi ಬೆಂಗಳೂರು: ಯುಪಿಐ ಸ್ಕ್ಯಾನರ್-ಲಿಂಕ್ಡ್ ಟಿಕೆಟ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡ ಮೂವರು ನಿರ್ವಾಹಕರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಅಮಾನತುಗೊಳಿಸಿದೆ. ಕಳೆದ ಡಿಸೆಂಬರ್ ನಲ್ಲಿ ನಡೆದ ನಿಯಮಿತ ತಪಾಸಣೆಯಲ್ಲಿ, ಸುರೇಶ್, ಮಂಚೇಗೌಡ ಮತ್ತು ಅಶ್ವಕ್ ಖಾನ್ ಎಂಬ ಮೂವರು ಸಿಬ್ಬಂದಿ ಟಿಕೆಟ್ ನೀಡುವಾಗ ಬಿಎಂಟಿಸಿ ಒದಗಿಸಿದ ಅಧಿಕೃತ ಕೋಡ್ ಬದಲಿಗೆ ತಮ್ಮ ವೈಯಕ್ತಿಕ ಯುಪಿಐ ಕ್ಯೂಆರ್ ಕೋಡ್ಗಳನ್ನು ಬಳಸಿದ್ದರು ಎಂದು ತಿಳಿದುಬಂದಿದೆ. ಮೂವರು ನಿರ್ವಾಹಕರು 1,04,821 ರೂಪಾಯಿ ಮೌಲ್ಯದ ಟಿಕೆಟ್ ಹಣವನ್ನು ಬೇರೆಡೆಗೆ ವರ್ಗಾಯಿಸಿಕೊಂಡಿದ್ದಾರೆ. ದಕ್ಷಿಣ ವಲಯದಲ್ಲಿ ನಿಯೋಜನೆಗೊಂಡಿದ್ದ ಮಂಜೇಗೌಡ 54,358 ರೂಪಾಯಿಗಳನ್ನು ಬೇರೆಡೆಗೆ ವರ್ಗಾಯಿಸಿಕೊಂಡಿದ್ದಾರೆ. ಈಶಾನ್ಯದಲ್ಲಿ ನಿಯೋಜನೆಗೊಂಡಿದ್ದ ಸುರೇಶ್ 47,257 ರೂ.ಗಳನ್ನು ಮತ್ತು ಅಶ್ವಕ್ ಖಾನ್ 3,206 ರೂ.ಗಳನ್ನು ಬೇರೆಡೆಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Updated By: Priyalachhi ಬೆಂಗಳೂರು: ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನಿಸುತ್ತಿದೆ. ರಾಜ್ಯ ಸರ್ಕಾರಕ್ಕೆ ಅಧಿವೇಶನ ನಡೆಸುವ ಅಗತ್ಯವಿರಲಿಲ್ಲ. ನೇರವಾಗಿ ಸಚಿವರು ಅಥವಾ ಪ್ರಧಾನಿ ಅವರನ್ನು ಭೇಟಿ ಮಾಡಬಹುದಿತ್ತು. ಈ ನಿರ್ಣಯದಿಂದ ಮಾಧ್ಯಮಗಳಿಗೆ ಸಂದೇಶ ನೀಡಬಹುದೇ ಹೊರತು ಆಡಳಿತಾತ್ಮಕವಾಗಿ ಪ್ರಯೋಜನವಾಗುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರದ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನ ಮಾಡಿದೆ. ವಿಬಿ ಜಿ ರಾಮ್ ಜಿ ಯೋಜನೆಯ ವಿರುದ್ಧ ನಿರ್ಣಯ ಕೈಗೊಂಡು ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತದೆ. ಇದರಿಂದ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ ಎಂದರು. ಉದ್ಯೋಗ ಖಾತರಿ ಯೋಜನೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ. ಇದು ಸಿಎಜಿ ವರದಿಯಲ್ಲೂ ಸಾಬೀತಾಗಿದೆ. ಹೊಸ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿರುವುದರ ಜೊತೆಗೆ, ಕೇಂದ್ರ ಶೇ.60ರಷ್ಟು ಹಾಗೂ ರಾಜ್ಯ ಶೇ. 40ರಷ್ಟು ಅನುದಾನ ನೀಡುವ…
Updated By: Priyalachhi ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ಪ್ರಸಾದ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಪರಿಸರಕ್ಕೆ ಧಕ್ಕೆ ಆಗದಂತೆ ಅಭಿವೃದ್ಧಿಪಡಿಸಲಾಗುತ್ತಿದೆ. ಬೆಟ್ಟಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಚಾಮುಂಡಿ ಬೆಟ್ಟದಲ್ಲಿ ವಾಸಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಆದ್ದರಿಂದಲೇ ಇಂದು ಚಾಮುಂಡಿ ಬೆಟ್ಟದ ನಿವಾಸಿಗಳ ಅಹವಾಲುಗಳನ್ನು ಹಾಗೂ ಅನಿಸಿಕೆಗಳನ್ನು ಸ್ವೀಕರಿಸಲಾಗಿದೆ. ನಿವಾಸಿಗಳ ಸಲಹೆಯಂತೆ ಯೋಜನೆ ರೂಪಿಸಿ ಎಂದು ಅಧಿಕಾರಿಗಳಿಗೆ ಇದೇ ವೇಳೆ ಸೂಚನೆ ನೀಡಿದರು.
Updated By: Priyalachhi ಬೆಂಗಳೂರು: ತಮಿಳುನಾಡಿನಲ್ಲಿ ರಾಜ್ಯಪಾಲರು ಭಾಷಣ ಮಾಡಲು ನಿರಾಕರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ರಾಜ್ಯಪಾಲರು ಭಾಷಣ ಮಾಡಲು ನಿರಾಕರಿಸಿದ ಹಿನ್ನೆಲೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಇಂದು ಸಂಜೆ 5 :45ಕ್ಕೆ ಲೋಕಭವನಕ್ಕೆ ಭೇಟಿ ನೀಡಿ, ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಲಿದೆ. ನಾಳೆಯಿಂದ ಜ.31ರವರೆಗೆ ವಿಧಾನಸಭೆ ಜಂಟಿ ಅಧಿವೇಶನ ನಡೆಯಲಿದ್ದು ರಾಜ್ಯಪಾಲರ ನಡೆ ಬಹಳ ಕುತೂಹಲ ಮೂಡಿಸಿದೆ. ಕೇಂದ್ರವು MahatmaGandhi NREGA ಹೆಸರನ್ನು ‘ರದ್ದುಗೊಳಿಸುವುದು’ ಸೇರಿದಂತೆ ಹಲವಾರು ವಿಷಯಗಳ ಕುರಿತು ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ-ಜೆಡಿ (ಎಸ್) ಒಕ್ಕೂಟದ ನಡುವೆ ಘರ್ಷಣೆ ನಿರೀಕ್ಷಿಸಲಾಗಿದೆ. ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ…
Subscribe to Updates
Get the latest creative news from FooBar about art, design and business.