Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ಪ್ರಕೃತಿ ಚಿಕಿತ್ಸಾ ವೈದ್ಯೆ ಡಾ.ರಶ್ಮಾ ಎಂ.ಶೆಟ್ಟಿ ಅವರು ಜೈಪುರದ ಜೈಬಾಗ್ ಪ್ಯಾಲೇಸ್ನಲ್ಲಿ ನಡೆದ ಮಿಸೆಸ್ ಇಂಡಿಯಾ–ಸೀಸನ್ 15ರ ಅಂತಿಮ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ–2025 ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾದ 40 ಅಂತಿಮ ಸ್ಪರ್ಧಿಗಳ ನಡುವೆ ನಡೆದ ಪ್ರತಿಷ್ಠಿತ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ, ಈ ಗೌರವವನ್ನು ತಮ್ಮದಾಗಿಸಿಕೊಂಡರು. ಡಿ.18ರಿಂದ ಡಿ.21ರ ವರೆಗೆ ನಡೆದ ನಾಲ್ಕು ದಿನಗಳ ಈ ಸ್ಪರ್ಧೆಯಲ್ಲಿ ಪ್ರತಿಭಾ ಸುತ್ತು, ಪ್ರೇರಣಾದಾಯಕ ಜೀವನ ಕಥೆ, ವೈಯಕ್ತಿಕ ಸಂದರ್ಶನ, ರ್ಯಾಂಪ್ ವಾಕ್, ರಾಷ್ಟ್ರೀಯ ವೇಷಭೂಷಣ, ಸಾಂಪ್ರದಾಯಿಕ ಸುತ್ತು ಹಾಗೂ ಈವಿನಿಂಗ್ ಗೌನ್ ಸುತ್ತುಗಳ ಮೂಲಕ ಸ್ಪರ್ಧಿಗಳನ್ನು ಮೌಲ್ಯಮಾಪನ ಮಾಡಲಾಯಿತು. ಈ ಎಲ್ಲ ಸುತ್ತುಗಳಲ್ಲಿ ಸಮರ್ಪಕ ಪ್ರದರ್ಶನ ನೀಡಿದ ಡಾ.ರಶ್ಮಾ ಶೆಟ್ಟಿ, ಅಂತಿಮವಾಗಿ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾದರು. ಪುತ್ತೂರಿನಿಂದ ಆರಂಭವಾದ ಪಯಣ: ಡಾ.ರಶ್ಮಾ ಎಂ.ಶೆಟ್ಟಿ ಅವರು ಪುತ್ತೂರಿನಲ್ಲಿ ಜನಿಸಿ ಬೆಳೆದವರು. ಪಾಪೆಮಜಲು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿ, ಪುತ್ತೂರು ಕೊಂಬೆಟ್ಟು ಸರ್ಕಾರಿ…
Updated By: Priyalachhi ವಾಷಿಂಗ್ಟನ್: ವೆನೆಜುವೆಲಾ, ಕ್ಯೂಬಾ, ಗ್ರೀನ್ ಲ್ಯಾಂಡ್ ವಿರುದ್ಧ ಕತ್ತಿ ಮಸೆಯುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಫ್ರಾನ್ಸ್ ಜೊತೆಗೂ ಗಲಾಟೆ ಮಾಡಿಕೊಂಡಿದ್ದಾರೆ. ತಾವು ಪ್ರಸ್ತಾವಿಸಿದ್ದ “ಶಾಂತಿ ಮಂಡಳಿ” (Borad of Peace)ಗೆ ಸೇರಲು ಫ್ರಾನ್ಸ್ ನಿರಾಕರಿಸಿದ ಹಿನ್ನಲೆಯಲ್ಲಿ ಆ ದೇಶದ ವಿರುದ್ಧ ಅಸಮಾಧಾನಗೊಂಡಿರುವ ಟ್ರಂಪ್, ಬರೊಬ್ಬರಿ ಶೇ.200ರಷ್ಟು ಸುಂಕ ಘೋಷಣೆ ಮಾಡಿದ್ದಾರೆ. ಫ್ರೆಂಚ್ ವೈನ್ ಮತ್ತು ಷಾಂಪೇನ್ ಮೇಲೆ ಶೇ.200 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಟ್ರಂಪ್ ಡೆನ್ಮಾರ್ಕ್ನ ಭಾಗವಾಗಿರುವ ಆರ್ಕ್ಟಿಕ್ ಪ್ರದೇಶದ ಮೇಲೆ ಏಕೆ ಕಣ್ಣಿಟ್ಟಿದ್ದಾರೆ ಎಂಬ ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಅವರ ಸಮರ್ಥನೆಯನ್ನು ಪ್ಯಾರಿಸ್ ಅಣಕಿಸಿದ ಬೆನ್ನಲ್ಲೇ ಫ್ರಾನ್ಸ್ ಮೇಲೆ ಟ್ರಂಪ್ ಅವರ ಸುಂಕ ದಾಳಿ ನಡೆದಿದೆ. ಔಷಧಿಗಳ ಮೇಲೆ ಸುಂಕ ವಿಧಿಸಿದ ಬಳಿಕ, ಇದೀಗ ಮದ್ಯ ಉದ್ಯಮವನ್ನೇ ಟ್ರಂಪ್ ಗುರಿಯಾಗಿಸಿಕೊಂಡಿದ್ದಾರೆ. ಟ್ರಂಪ್ ರ ಈ ನಿರ್ಧಾರದಿಂದ ಅಮೆರಿಕದಲ್ಲಿರುವ ಮದ್ಯಪ್ರಿಯರಿಗೆ ದೊಡ್ಡ ಶಾಕ್ ಎದುರಾಗಿದೆ.
Updated By: Priyalachhi ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರ ವಹಿಸಿಕೊಂಡ ನಂತರದ ಕಳೆದ ಒಂದು ದಶಕದಲ್ಲಿ, ಪಕ್ಷದ ಆದಾಯ ಮತ್ತು ವೆಚ್ಚದಲ್ಲಿ ನಾಲ್ಕು ಪಟ್ಟು ಏರಿಕೆ ಕಂಡುಬಂದಿದೆ. ಭಾರತೀಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾದ ಬಿಜೆಪಿಯ ವರ್ಷವಾರು ಆದಾಯ ಮತ್ತು ವೆಚ್ಚದ ವರದಿಗಳ ವಿಶ್ಲೇಷಣೆಯು 2014–15ರಲ್ಲಿ ಪಕ್ಷದ ಆದಾಯ 970 ಕೋಟಿ ರೂಪಾಯಿಗಳಿಗೂ ಹೆಚ್ಚು ಮತ್ತು ವೆಚ್ಚ 913 ಕೋಟಿ ರೂಪಾಯಿಗಳಿಗೂ ಹೆಚ್ಚಾಗಿತ್ತು ಎಂದು ಬಹಿರಂಗಪಡಿಸಿದೆ. 2023–24ರಲ್ಲಿ 4,340 ಕೋಟಿ ರೂಪಾಯಿಗಳಿಗೂ ಹೆಚ್ಚು ಏರಿಕೆಯಾಯಿತು. ಲೋಕಸಭಾ ಸಾರ್ವತ್ರಿಕ ಚುನಾವಣೆಗಳು ಮತ್ತು ನಂತರದ ಹರಿಯಾಣ ವಿಧಾನಸಭಾ ಚುನಾವಣೆಗಳ ಮುನ್ನಾದಿನ ಅವಧಿ ಮುಕ್ತಾಯವಾದಾಗ, ಇಡೀ ಮೊತ್ತ ವರ್ಷದಲ್ಲಿ ಖರ್ಚು ಮಾಡಲಾಗಿದೆ ಎಂದು ಪಕ್ಷ ವರದಿ ಮಾಡಿದೆ.
Updated By: Priyalachhi ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಇದರ ಬೆನ್ನಲ್ಲೇ ಚುನಾವಣೆ ರಾಜ್ಯ ಸರ್ಕಾರ ಸಿದ್ಧತೆಗಳನ್ನು ಆರಂಭಿಸಿದೆ. ಇದರಂತೆ ಹೊಸದಾಗಿ ರಚನೆಗೊಂಡಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ಕ್ಕೆ ಸಂಬಂಧಿಸಿದ ಅನುದಾನ ಹಂಚಿಕೆ ಕುರಿತು ಸಲಹೆಗಳು ಹಾಗೂ ಶಿಫಾರಸುಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ರಾಜ್ಯ ಹಣಕಾಸು ಆಯೋಗ ಸಿದ್ಧತೆ ನಡೆಸುತ್ತಿದೆ. ಈ ಕುರಿತು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಅವರು ಮಾತನಾಡಿ, ಸೋಮವಾರ ನಡೆದ ಪರಿಶೀಲನಾ ಸಭೆಯಲ್ಲಿ, ಜಿಬಿಎ, ಅದರ ಐದು ನಗರ ಪಾಲಿಕೆಗಳು ಮತ್ತು 369 ವಾರ್ಡ್ಗಳಿಗೆ ಅನುದಾನ ಹಂಚಿಕೆಯ ಎಲ್ಲಾ ಅಂಶಗಳನ್ನು ಒಳಗೊಂಡ ಸಲಹೆಗಳನ್ನು ಸಂಗ್ರಹಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಆಯೋಗವು ಈಗಾಗಲೇ ನಗರದ ಐದು ಪಾಲಿಕೆಗಳಿಂದ ವಿವರವಾದ ಚರ್ಚೆಗಳನ್ನು ನಡೆಸಿದ್ದು, ಅವುಗಳನ್ನು ಪರಿಶೀಲಿಸಲು ಕೆಲವು ವಾರ್ಡ್ಗಳಿಗೆ ಭೇಟಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
Updated By: Priyalachhi ಇಂದಿನ ಪಂಚಾಂಗ ದಿನಾಂಕ : 21-01-2026, ಬುಧವಾರ ಸಂವತ್ಸರ : ವಿಶ್ವವಸು ಆಯನ : ಉತ್ತರಾಯಣ ತಿಥಿ : ಶುಕ್ಲ ಮಾಸ : ತೃತೀಯಾ ನಕ್ಷತ್ರ : ಧನಿಷ್ಠ ಸೂರ್ಯೋದಯ : ಮುಂಜಾನೆ 6:45ಕ್ಕೆ ಅಮೃತ ಕಾಲ : ಮಧ್ಯಾಹ್ನ 01:55 ರಿಂದ 03:21ರವರೆಗೆ ದುರ್ಮೂಹೂರ್ತ : ಮುಂಜಾನೆ 12:21 ರಿಂದ 01:09 ರವರೆಗೆ ರಾಹುಕಾಲ : ಸಾಯಂಕಾಲ 12:29 ರಿಂದ 01:55 ರವರೆಗೆ ಸೂರ್ಯಾಸ್ತ : ಸಂಜೆ 06:12ಕ್ಕೆ ಮೇಷ : ಇಂದು ನೀವು ಅಗ್ರಾಹ್ಯ ಮತ್ತು ಅದ್ಭುತ ಕಾರ್ಯಕ್ರಮದಿಂದ ಗೊಂದಲಗೊಳ್ಳುತ್ತೀರಿ. ಅದು ಅಥವಾ ನೀವು ಅನಿರೀಕ್ಷಿತ. ಆದರೆ ಒಳ್ಳೆಯ ಘಟನೆ ಎದುರಿಸಬಹುದು. ಅದು ಭೂಮಿಯನ್ನು ಅಲುಗಾಡಿಸಬೇಕು. ಆದರೆ, ಅದು ನಿಮ್ಮನ್ನು ಕೆಲ ವಿಷಯಗಳ ಮೌಲ್ಯಮಾಪನಕ್ಕೆ ಪ್ರಭಾವಿಸುತ್ತದೆ. ಅಲ್ಲದೇ, ನೀವು ಡೆಡ್ ಲೈನ್ ಪೂರೈಸಬೇಕಾದ ಸಮಸ್ಯೆಗಳನ್ನು ಎದುರಿಸುತ್ತೀರಿ. ವೃಷಭ : ನಿಮ್ಮ ಮಿತ್ರರು ಮತ್ತು ಸಹ-ಕೆಲಸಗಾರರ ನಿರಾಸೆ ಮತ್ತು ಕಿರಿಕಿರಿಯಿಂದ ನೀವು ಜನರು ಮತ್ತು ವಸ್ತುಗಳ ಕುರಿತು ಅತ್ಯಂತ ಪೊಸೆಸಿವ್ ಹಾಗೂ ಅಹಂನ ಭಾವನೆ ಅನುಭವಿಸುತ್ತೀರಿ. ನಿಮ್ಮ ಅತಿಯಾದ ರಕ್ಷಣೆಯ ವರ್ತನೆ ಯಾರನ್ನಾದರೂ ಮನರಂಜಿಸುತ್ತದೆ.…
Updated By: Priyalachhi ಬೆಂಗಳೂರು: ಜನವರಿ 22 ರಿಂದ ಜನವರಿ 31ರ ವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ಅಧಿವೇಶನದ ವೇಳೆ ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರಿಷ್ಠರು ಕರೆ ನೀಡಿದರೆ ನವದೆಹಲಿಗೆ ತೆರಳುವುದಾಗಿ ಇದೇ ವೇಳೆ ತಿಳಿಸಿದರು. ಡಿಜಿಪಿ ರಾಮಚಂದ್ರರಾವ್ ಅವರ ವಿರುದ್ಧದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ, ಅಮಾನತು ಗೊಳಿಸಲಾಗಿದೆ ಎಂದರು. ಜಂಟಿ ಅಧಿವೇಶನದ ಕುರಿತು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ”ಜ.22 ರಿಂದ 31ರ ವರೆಗೆ ನಡೆಯಲಿರುವ ಜಂಟಿ ಅಧಿವೇಶನವನ್ನ ಉದ್ದೇಶಿಸಿ…
Updated By: Priyalachhi ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪವಿತ್ರಾಗೌಡಗೆ ಕರ್ನಾಟಕ ಹೈಕೋರ್ಟ್ ಶಾಕ್ ನೀಡಿದ್ದು, ಅವರಿಗೆ ನೀಡಿದ್ದ ಮನೆ ಊಟ ಸವಲತ್ತನ್ನು ದಿಢೀರ್ ರದ್ದು ಮಾಡಿದೆ. ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಪವಿತ್ರಾ ಗೌಡ ಪರವಾಗಿ ವಕೀಲರು ಇತ್ತೀಚೆಗೆ ಮನೆಯೂಟ ಬೇಕೆಂದು ಅರ್ಜಿ ಸಲ್ಲಿಸಿದ್ದರು. ಇದರ ಜತೆ ನಾಗರಾಜು ಮತ್ತು ಲಕ್ಷ್ಮಣ್ ಕೂಡ ಮನೆಯೂಟ ಬೇಕೆಂದು ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಪವಿತ್ರಾ ಗೌಡ ಹಾಗೂ ಇತರೆ ಇಬ್ಬರಿಗೆ ಮನೆಯೂಟ ನೀಡಬೇಕೆಂದು ಆದೇಶ ನೀಡಿತ್ತು. ಮೊದಲು ದಿನಕ್ಕೊಮ್ಮೆ ಮನೆಯೂಟ ನೀಡುವ ಆದೇಶ ನೀಡಲಾಗಿತ್ತು. ಆ ಬಳಿಕ ಆದೇಶವನ್ನು ಮಾರ್ಪಾಟು ಮಾಡಿ ವಾರಕೊಮ್ಮೆ ಮಾತ್ರ ಮನೆಯೂಟ ನೀಡಬೇಕೆಂದು 57ನೇ ಸಿಸಿಎಚ್ ನ್ಯಾಯಾಲಯ ಹೇಳಿತ್ತು. ಇದೇ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜೈಲಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಆರೋಪಿಗೆ ವಿಶೇಷ ಸವಲತ್ತು ನೀಡಬಾರದು ಎಂದು ಸೂಚಿಸಿದೆ, ವಿಶೇಷ ಸವಲತ್ತು ನೀಡಿದಲ್ಲಿ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದೆ. 57ನೇ ಸಿಸಿಎಚ್ ನ್ಯಾಯಾಲಯ ಆದೇಶವನ್ನು ಪ್ರಶ್ನಿಸಿ ಜೈಲಧಿಕಾರಿಗಳು ಹೈಕೋರ್ಟ್ ಮೊರೆ…
Updated By: Priyalachhi ನವದೆಹಲಿ: ಚೀನಿವಾರು ಮಾರುಕಟ್ಟೆಯಲ್ಲಿ ಮಂಗಳವಾರ ಚಿನ್ನದ ಬೆಲೆ ಹೊಸ ಜೀವಮಾನದ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದೆ. ಫೆಬ್ರವರಿಯಲ್ಲಿ ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ (MCX) ನಲ್ಲಿ ಮಧ್ಯಾಹ್ನ 2.30ರ ಸುಮಾರಿಗೆ 10 ಗ್ರಾಂ ಬಂಗಾರದ ಬೆಲೆ 1,52,260 ರೂ. ತಲುಪಿತು. ಮತ್ತೊಂದೆಡೆ, MCX ಬೆಳ್ಳಿ ಕೂಡ ಪ್ರತಿ ಕೆಜಿಗೆ 3,27,998 ರೂ. ತಲುಪಿ ದಾಖಲೆ ಬರೆಯಿತು. ಜಾಗತಿಕ ಮಾರುಕಟ್ಟೆಗಳಲ್ಲಿ ಎರಡೂ ಲೋಹಗಳ ಬೆಲೆ ಔನ್ಸ್ಗೆ ಹೊಸ ಗರಿಷ್ಠ ಮಟ್ಟಕ್ಕೆ ಏರಿತು. ಬೆಳ್ಳಿ ಔನ್ಸ್ಗೆ 95.49 ಅಮೆರಿಕನ್ ಡಾಲರ್ಗಳನ್ನು ತಲುಪಿತು. ಇದು ಈ ವರೆಗಿನ ಗರಿಷ್ಠ ಮಟ್ಟವನ್ನು ಸೂಚಿಸುತ್ತದೆ. ಚಿನ್ನ ಮತ್ತು ಬೆಳ್ಳಿ ಕಂಡು ಕೇಳರಿಯದ ಮಟ್ಟಕ್ಕೆ ಏರಿಕೆ ಕಂಡಿದೆ. ಹೆಚ್ಚಿದ ಜಾಗತಿಕ ಅನಿಶ್ಚಿತತೆ ಮತ್ತು ಸುರಕ್ಷಿತ ಹೂಡಿಕೆಗೆ ಹೆಚ್ಚಾಗಿರುವ ಬೇಡಿಕೆಗಳಿಂದಾಗಿ ಚಿನ್ನ ಹಾಗೂ ಬೆಳ್ಳಿ ಬೆಲೆ ಗಗನ ಮುಖಿಯಾಗಿದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ. ಜಾಗತಿಕ ರಾಜಕೀಯ ಉದ್ವಿಗ್ನತೆಗಳು, ಹೆಚ್ಚುತ್ತಿರುವ ವ್ಯಾಪಾರ – ಯುದ್ಧದ ಭೀತಿ ಮತ್ತು ತೀಕ್ಷ್ಣವಾದ ಕರೆನ್ಸಿ…
Updated By: Priyalachhi ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮಹಾಸಭಾದ ಕಚೇರಿಯಲ್ಲಿ ಇಂದು ನಡೆದ ಕಾರ್ಯಕಾರಣಿ ಸಭೆಯಲ್ಲಿ ತಗೆದುಕೊಂಡ ನಿರ್ಣಯದಂತೆ ಯಾವುದೇ ಚುನಾವಣೆ ಇಲ್ಲದೇ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಚಿವ ಈಶ್ವರ ಖಂಡ್ರೆಯವರನ್ನು ಆಯ್ಕೆ ಮಾಡಲು ಕಾರ್ಯಕಾರಣಿ ಸಭೆಯಲ್ಲಿ ಒಮ್ಮತದಿಂದ ನಿರ್ಣಯ ತಗೆದುಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷರಾದ ನಿವೃತ್ತ ಡಿಜಿಪಿ ಶಂಕರ ಬಿದರಿ ತಿಳಿಸಿದ್ದಾರೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಹಾಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ಎಲ್ಲ ಸದಸ್ಯರೂ ಒಮ್ಮತ ವ್ಯಕ್ತಪಡಿಸಿದ್ದರಿಂದ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು ಎಂದು ಬಿದರಿಯವರು ಹೇಳಿದ್ದಾರೆ. ಸಚಿವ ಈಶ್ವರ ಖಂಡ್ರೆಯವರು ಕಳೆದ 13 ವರ್ಷಗಳಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ…
Updated By: Priyalachhi ಉಡುಪಿ: ಹೊಯ್ಸಳ ಶೌರ್ಯ ಪ್ರಶಸ್ತಿ ವಿಜೇತ, ಉಡುಪಿಯ ಮಾಸ್ಟರ್ ದೀಪೇಶ್ ದೀಪಕ್ ಶೆಣೈ, ಎಸ್ಎಸ್ಎಲ್ಸಿ ಪರೀಕ್ಷೆ ಸಂದರ್ಭ ನಿರಂತರ ವಿದ್ಯುತ್ ಸರಬರಾಜು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ದೀಪೇಶ್ ದೀಪಕ್ ಶೆಣೈ, ಉಡುಪಿಯ ಟಿ.ಎ. ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ನಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯಾಗಿದ್ದಾನೆ. ಕಳೆದ ವರ್ಷ ಈತನ ಧೈರ್ಯ ಮತ್ತು ಸಮಯಪ್ರಜ್ಞೆಗೆ ಕರ್ನಾಟಕ ಸರ್ಕಾರದಿಂದ ಅತ್ಯುನ್ನತ ಹೊಯ್ಸಳ ಶೌರ್ಯ ಪ್ರಶಸ್ತಿ ದೊರೆತಿದೆ. ಸದ್ಯ ತಮ್ಮ ಪ್ರದೇಶದಲ್ಲಿ ನಡೆಯುತ್ತಿರುವ ಅನಿಯಮಿತ ಹಾಗೂ ಅಘೋಷಿತ ವಿದ್ಯುತ್ ಕಡಿತಗಳ ಕುರಿತು ಮಾಸ್ಟರ್ ದೀಪೇಶ್ ದೀಪಕ್ ಶೆಣೈ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನ ಸೆಳೆದಿರುವುದು ವಿಶೇಷ. “ಮಾರ್ಚ್–ಏಪ್ರಿಲ್ 2026ರಲ್ಲಿ ನಡೆಯಲಿರುವ SSLC ಪರೀಕ್ಷೆಗೆ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾನೆ ಮತ್ತು ರಾತ್ರಿ ಹಗಲಿನ ಸಮಯದಲ್ಲಿ ನಿರಂತರ ವಿದ್ಯುತ್ ಒದಗಿಸಬೇಕು. ಈ ನಿಟ್ಟಿನಲ್ಲಿ ತಕ್ಷಣ ತಾಂತ್ರಿಕ ಪರಿಶೀಲನೆ ಮತ್ತು ದುರಸ್ತಿ ಕ್ರಮಗಳನ್ನು ಕೈಗೊಳ್ಳುವಂತೆ” ವಿದ್ಯಾರ್ಥಿ ದೀಪೇಶ್…
Subscribe to Updates
Get the latest creative news from FooBar about art, design and business.