Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವ ಇರುವವರೆಗೂ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಂಶವಾಹಿ (ಡಿಎನ್ಎ) ಮತ್ತು ಡಿಜಿಟಲ್ ಸಾಕ್ಷಿಗಳ ರೆಕಾರ್ಡಿಂಗ್ ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ತನಿಖಾ ದಳಕ್ಕೆ (ಎಸ್ಐಟಿ) ಹೈಕೋರ್ಟ್ ಸೋಮವಾರ ಸೂಚಿಸಿದೆ. ತಮಗೆ ವಿಧಿಸಲಾಗಿರುವ ಶಿಕ್ಷೆ ರದ್ದುಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಹೆಚ್.ಪಿ.ಸಂದೇಶ್ ಮತ್ತು ಟಿ.ವೆಂಕಟೇಶ್ ನಾಯಕ್ ಅವರಿದ್ದ ವಿಭಾಗೀಯ ಪೀಠ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕೆಲವು ಸಾಕ್ಷಿಗಳ ರೆಕಾರ್ಡಿಂಗ್ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ ಎಂದು ಪೀಠಕ್ಕೆ ವಿವರಿಸಿದರು. ಇದಕ್ಕೆ ಸರ್ಕಾರದ ಪರ ವಕೀಲರು, ಮಧ್ಯಂತರ ಅರ್ಜಿಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ಸಿಆರ್ಪಿಸಿ ಸೆಕ್ಷನ್ 391ರ ಅಡಿ ಕೆಲವು ಸಾಕ್ಷಿಗಳ ರೆಕಾರ್ಡಿಂಗ್ ಕೋರಿ ಪ್ರಜ್ವಲ್ ರೇವಣ್ಣ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.…
Updated By: Priyalachhi ಬಾದಾಮಿ : ಚಾಮುಂಡೇಶ್ವರಿ ಕ್ಷೇತ್ರದವರು ನನ್ನನ್ನು ಸೋಲಿಸಿದ್ದರು. ಆದರೆ, ಬಾದಾಮಿ ಕ್ಷೇತ್ರದ ಜನ ಗೆಲ್ಲಿಸಿದ್ದರು. ಅದರಿಂದಲೇ ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಾದಾಮಿಯಲ್ಲಿ ಚಾಲುಕ್ಯ ಉತ್ಸವ ಉದ್ಘಾಟಿಸಿದ ಅವರು, ನಿಮ್ಮ ಉಪಕಾರವನ್ನು ಎಂದಿಗೂ ಮರೆಯುವುದಿಲ್ಲ. ಚಾಲುಕ್ಯ ಉತ್ಸವ ನಡೆಯಲಿಲ್ಲ, ಇಮ್ಮಡಿ ಪುಲಿಕೇಶಿ ಮೂರ್ತಿ ಪ್ರತಿಷ್ಠಾಪನೆಯಾಗಲಿಲ್ಲ ಎಂಬ ಕೊರಗಿತ್ತು. ಈಗ ಅವೆರಡೂ ಈಡೇರಿವೆ ಎಂದರು. ಎರಡೂವರೆ ವರ್ಷಗಳಲ್ಲಿ ಬಾದಾಮಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ₹2 ಸಾವಿರ ಕೋಟಿ ಅನುದಾನ ನೀಡಲಾಗಿದೆ. ವೇದಿಕೆ ಮೇಲೆ ಪ್ರತಿಪಕ್ಷದ ನಾಯಕರೂ ಇದ್ದಾರೆ. ಆದರೆ, ಇಲ್ಲಿ ರಾಜಕೀಯ ಮಾಡುವುದಿಲ್ಲ. ನಿಮ್ಮ ಕ್ಷೇತ್ರದ ಅಭಿವೃದ್ಧಿಗೂ ಅನುದಾನ ಕೊಡುವೆ. ನೀವೂ ಕೇಂದ್ರದಿಂದ ಅನುದಾನ ತರಲು ಕೈಜೋಡಿಸಿ ಎಂದು ಸಿದ್ದರಾಮಯ್ಯ ಹೇಳಿದರು. ಐದು ಬಾರಿ ಗೆದ್ದಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿದರು. ಮೊದಲ ಬಾರಿಗೆ ಸ್ಪರ್ಧಿಸಿದ್ದರೂ ಬಾದಾಮಿಯಲ್ಲಿ ಗೆಲ್ಲಿಸಿದರು. ಇದು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಾನು ಎರಡ್ಮೂರು ಬಾರಿ ಮಾತ್ರ ಇಲ್ಲಿಗೆ ಬಂದು ಗೆಲ್ಲಿಸಲು ಮನವಿ ಮಾಡಿದ್ದೆ.…
Updated By: Priyalachhi ಬೆಂಗಳೂರು: ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೊ ವೈರಲ್ ಆದ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ (Ramachandra rao) ಅವರನ್ನು ತಕ್ಷಣವೇ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ನಿನ್ನೆ ಸೋಮವಾರ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಮಚಂದ್ರ ರಾವ್ ಅವರನ್ನು ರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸಿರುವುದಾಗಿ ಸರ್ಕಾರದ ಆದೇಶದಲ್ಲಿ ತಿಳಿಸಿದೆ. ಪ್ರಕರಣ ಹಿನ್ನೆಲೆಯೇನು? ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್ ಮಹಿಳೆಯನ್ನು ಅಪ್ಪಿಕೊಂಡು ಮುದ್ದಾಡುತ್ತಿರುವ ಹಸಿಬಿಸಿ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಚೇರ್ ಮೇಲೆ ಕುಳಿತು ಮಹಿಳೆಯನ್ನು ಅಪ್ಪಿಕೊಂಡು IPS ಅಧಿಕಾರಿ ರಾಮಚಂದ್ರ ರಾವ್ ಸರಸ ನಡೆಸಿರುವುದು ವಿಡಿಯೊದಲ್ಲಿ ಕಂಡುಬರುತ್ತದೆ. ಇದು ಅವರ ಪುತ್ರಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುವ ಮೊದಲು…
Updated By: Priyalachhi ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ (IEC)ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಿಜವಾದ ಮತದಾರರ ಬಗ್ಗೆ ಕಾಳಜಿ ಹೊಂದಿದ್ದು, ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದರು. ಎಸ್ಐಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಬಿಎಲ್ ಓ ಗಳಿಗೆ ಸೂಚಿಸಲಾಗಿದೆ.ಮಹಾನಗರ ಪಾಲಿಕೆ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕವೇ ನಡೆಯಬೇಕೆಂಬುದು ನಮ್ಮ ಬೇಡಿಕೆಯೂ ಆಗಿದೆ. ಜನರು ಕೂಡ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಯಲಿ ಎಂಬ ಆಗ್ರಹ ಮಾಡುತ್ತಿದ್ದಾರೆ ಎಂದರು. ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಶಾಸಕ ಜನಾರ್ದನರೆಡ್ಡಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ರೆಡ್ಡಿ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ ಜೈಲು ಸೇರಿದ್ದರು. “ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ಬಾಕಿ ಇದೆ. ಅಲ್ಲಿ ಅವರಿಗೆ ನಮ್ಮ ವಿರುದ್ಧ ಆರೋಪ ಮಾಡುವ…
Updated By: Priyalachhi ಇಂದಿನ ಪಂಚಾಂಗ ದಿನಾಂಕ : 20-01-2026 ವಾರ : ಮಂಗಳವಾರ ಸಂವತ್ಸರ : ವಿಶ್ವವಸು ಆಯನ : ಉತ್ತರಾಯಣ ತಿಥಿ : ಶುಕ್ಲ ದ್ವಿತೀಯಾ ಮಾಸ : ಮಾಘ ನಕ್ಷತ್ರ : ಶ್ರವಣ ಸೂರ್ಯೋದಯ : ಮುಂಜಾನೆ 6:45ಕ್ಕೆ ಅಮೃತ ಕಾಲ : ಮಧ್ಯಾಹ್ನ 12:29 ರಿಂದ 01:54ರ ವರೆಗೆ ದುರ್ಮೂಹೂರ್ತ : ಮುಂಜಾನೆ 09:09 ರಿಂದ 09:57 ಮತ್ತು 12:21 ರಿಂದ 01:09ರ ವರೆಗೆ ರಾಹುಕಾಲ : ಸಾಯಂಕಾಲ 03:20 ರಿಂದ 04:46ರ ವರೆಗೆ ಸೂರ್ಯಾಸ್ತ : ಸಂಜೆ 06:12ಕ್ಕೆ ರಾಶಿ ಭವಿಷ್ಯ: ಮೇಷ: ನೀವು ನಿಮ್ಮ ಕೆಲಸದಲ್ಲಿ ಮತ್ತು ಸಾಮಾಜಿಕ ಬದ್ಧತೆಗಳಲ್ಲಿ ಅತಿಯಾದ ಒತ್ತಡದಲ್ಲಿದ್ದೀರಿ. ನೀವು ಬಿಡುವು ತೆಗೆದುಕೊಂಡು ಸಂತೋಷಪಡುವ ಮತ್ತು ನಿಮಗಾಗಿ ಕೊಂಚ ಏನಾದರೂ ಮಾಡುವ ಸಮಯ. ವೃಷಭ: ಇಂದು ನಿಮ್ಮ ಸಮಸ್ಯೆಯಿಂದ ಹೊರಬರಲು ಪ್ರಯತ್ನಿಸುತ್ತೀರಿ. ನೀವು ಇತರರ ಕೆಲಸಕ್ಕೆ ನಿಮ್ಮ ತಪ್ಪು ಎಂದು ಭಾವಿಸುತ್ತೀರಿ. ಸಂಜೆಯ ವೇಳೆಗೆ ವಿಷಯಗಳು ಆಶಾಭಂಗ ಉಂಟುಮಾಡಬಹುದು. ಮತ್ತು ನಿಮ್ಮ ವಿಶ್ವಾಸದ ಮಟ್ಟ ಕುಸಿಯಬಹುದು. ನೀವು ಶಾಂತರಾಗಿ ಉಳಿಯುವುದು ಸೂಕ್ತ. ಮಿಥುನ: ನೀವು ನಿಮ್ಮ ಹಣಕಾಸು, ಜಂಟಿಯಾಗಿ ಹೊಂದಿರುವ…
Updated By: Priyalachhi 2025ರ ಕ್ರಿಸ್ಮಸ್ಗೆ ಕನ್ನಡ ಚಿತ್ರರಂಗದ ಐವರು ಘಟಾನುಘಟಿಗಳ 3 ಬಹುನಿರೀಕ್ಷಿತ, ಬಿಗ್ ಬಜೆಟ್ ಪ್ರಾಜೆಕ್ಟ್ಗಳು ಅದ್ಧೂರಿಯಾಗಿ ಚಿತ್ರಮಂದಿರ ಪ್ರವೇಶಿಸಿ, ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಉಣಬಡಿಸಿದವು. ಆ ಪೈಕಿ ಅಭಿನಯ ಚಕ್ರವರ್ತಿ ಸುದೀಪ್ ಮುಖ್ಯಭೂಮಿಕೆಯ ‘ಮಾರ್ಕ್’ ಚಿತ್ರ ಕೂಡಾ ಒಂದು. ಇದೀಗ ಈ ಯಶಸ್ವಿ ಸಿನಿಮಾ ಚಿತ್ರಮಂದಿರಗಳಲ್ಲಿ 25 ದಿನಗಳನ್ನು ಪೂರ್ಣಗೊಳಿಸಿ, ಇದೇ ವಾರ ಒಟಿಟಿಗೆ ಬರಲು ಸಜ್ಜಾಗಿದೆ. ಹೌದು, ಕಳೆದ ವರ್ಷಾಂತ್ಯದಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಡುಗಡೆಯಾದ ಕಿಚ್ಚನ ”ಮಾರ್ಕ್” ಥಿಯೇಟರ್ ಅಂಗಳದಲ್ಲಿ ಭರ್ಜರಿ ಸೌಂಡ್ ಮಾಡಿತ್ತು. ಪ್ರೀ-ಬ್ಯುಸಿನೆಸ್ ಸೇರಿ ಬಾಕ್ಸ್ ಆಫೀಸ್ನಲ್ಲಿ ಒಳ್ಳೆ ಕಲೆಕ್ಷನ್ ಮಾಡಿದ್ದ ಈ ಚಿತ್ರ ಜನವರಿ 18 ಅಂದರೆ ನಿನ್ನೆಗೆ 25 ದಿನ ಪೂರೈಸಿದೆ. 26ನೇ ದಿನದ ಪ್ರದರ್ಶನ ಕಾಣುತ್ತಿದ್ದು, ಈ ಸಂಭ್ರಮದ ನಡುವೆ ಮಾರ್ಕ್ ಒಟಿಟಿ ಎಂಟ್ರಿಗೂ ಸಜ್ಜಾಗಿದೆ. ಕಳೆದ ಸಂಜೆ ಪೋಸ್ಟ್ ಶೇರ್ ಮಾಡಿದ್ದ ಚಿತ್ರತಂಡ, ”ಇಂದು ಚಿತ್ರಮಂದಿರಗಳಲ್ಲಿ 25 ದಿನಗಳ ಸಂಭ್ರಮ. ನಿಮ್ಮ ನಿರಂತರ ಪ್ರೀತಿ ಮತ್ತು…
Updated By: Priyalachhi ಬೆಳಗಾವಿ: ಜನಾರ್ದನ ರೆಡ್ಡಿ ಲೂಟಿ ಮಾಡಿಯೇ ಜೈಲಿಗೆ ಹೋಗಿದ್ದರಲ್ಲ. ಅವರಿಗೆ ಏನು ನೈತಿಕತೆ ಇದೆ. ಮತ್ತೆ ಬಳ್ಳಾರಿಗೆ ಬರಬೇಡಿ ಅಂತಾ ಅವರಿಗೆ ಯಾಕೆ ನಿರ್ಬಂಧ ವಿಧಿಸಲಾಗಿತ್ತು. ಈಗಲೂ ಕೂಡ ಸುಪ್ರೀಂಕೋರ್ಟ್ನಲ್ಲಿ ಪ್ರಕರಣ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ನಗರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಿಎಂ, 12 ಸಚಿವರು ಮತ್ತು ತಾವು ರಾಜ್ಯವನ್ನು ಲೂಟಿ ಮಾಡುತ್ತಿದ್ದೀರಿ ಎಂಬ ಶಾಸಕ ಜನಾರ್ದನ ರೆಡ್ಡಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ವಿರೋಧ ಪಕ್ಷಗಳಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ. ಸುಳ್ಳು ಆರೋಪದ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ. ಈಗ ಅಧಿವೇಶನ ಶುರು ಆಗುತ್ತದೆ. ಆಗ ಮಾತನಾಡಲಿ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು. ಸುಪ್ರೀಂಕೋರ್ಟ್ನಲ್ಲಿ ಗಡಿ ವಿಚಾರ: ಜನವರಿ 21ರಂದು ಗಡಿ ವಿಚಾರಣೆ ಆರಂಭವಾಗುತ್ತಿದೆ. ಹಾಗಾಗಿ, ಒಳ್ಳೆಯ ವಕೀಲರನ್ನು ನಾವು ನೇಮಿಸುತ್ತೇವೆ. ಗಡಿ ವಿಚಾರದಲ್ಲಿ ಕರ್ನಾಟಕ ವಿರುದ್ಧ ಪ್ರಕರಣ ಹಾಕಲು ಮಹಾರಾಷ್ಟ್ರದವರಿಗೆ ಅವಕಾಶವೇ ಇಲ್ಲ. ವ್ಯಾಪ್ತಿ ಮೇಲೆ…
Updated By: Priyalachhi ಬೆಂಗಳೂರು: ”ಸಿಎಂ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಿಮ್ಮ ಬೆಂಬಲಿಗರು ಹೈಕಮಾಂಡ್ ತೀರ್ಮಾನದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ”ಯಾರು ಹೇಳಿದರು? 140 ಶಾಸಕರು ಕೂಡ ನನ್ನ ಬೆಂಬಲಿಗರೇ. ಸಿಎಂ ಸಿದ್ದರಾಮಯ್ಯ ಅವರು ಕೂಡ ನನಗೆ ಬೆಂಬಲವಾಗಿದ್ದಾರೆ. ನಾನು ಹಾಗೂ ಸಿಎಂ ಅವರು ಏನು ಮಾತನಾಡಿದ್ದೇವೆ ಎಂದು ನಿಮಗೆ ಗೊತ್ತಿದೆಯಾ? ರಾಹುಲ್ ಗಾಂಧಿ ಸಮ್ಮುಖದಲ್ಲಿ ನಾವು ಏನು ಮಾತನಾಡಿಕೊಂಡಿದ್ದೇವೆ, ಹೈಕಮಾಂಡ್ ಸಮ್ಮುಖದಲ್ಲಿ ಏನು ಮಾತನಾಡಿದ್ದೇವೆ, ಎಲ್ಲ ಕೂತು ಏನು ತೀರ್ಮಾನ ಮಾಡಿದ್ದೇವೆ ಎಂದು ನಮಗೆ ಗೊತ್ತಿದೆ. ಈ ವಿಚಾರವನ್ನು ನಿಮ್ಮ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವೇ? ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ” ಎಂದರು. ದೆಹಲಿ ಭೇಟಿ ಬಗ್ಗೆ ಮಾತನಾಡಿ…
Updated By: Priyalachhi ಬೆಳಗಾವಿ: ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರು ಕಚೇರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ. ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿರುವ ವಿಡಿಯೋ ಈಗ ವೈರಲ್ ಆಗಿದ್ದು, ಇದು 1 ವರ್ಷದ ಹಿಂದೆ ಸೆರೆಯಾಗಿದ್ದ ವಿಡಿಯೋ ಎನ್ನಲಾಗಿದೆ. ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ವಿಡಿಯೋ ಬಗ್ಗೆ ನನಗೆ ಬೆಳಗ್ಗೆಯಷ್ಟೇ ಗೊತ್ತಾಗಿದೆ. ಎಷ್ಟೇ ದೊಡ್ಡವರಾದ್ರು ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದೇನೆ ಎಂದರು.
Updated By: Priyalachhi ಮೈಸೂರು: ರಾಜ್ಯ ಬಜೆಟ್ ಮಂಡಿಸುವ ಮೊದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ತವರು ಕ್ಷೇತ್ರ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಬಜೆಟ್ ಪೂರ್ವ ಉಡುಗೊರೆಯನ್ನು ನೀಡಿದ್ದು, ರಾಜ್ಯಾದ್ಯಂತ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ವರುಣಾ ಕ್ಷೇತ್ರಕ್ಕೆ ಮತ್ತೊಮ್ಮೆ 320 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಮಾಡುವ ಮೂಲಕ ಸಿದ್ದರಾಮಯ್ಯ ರಾಜ್ಯ ರಾಜಕೀಯದಲ್ಲಿ ಬಿಸಿಬಿಸಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದು ನಾಯಕತ್ವ ಬದಲಾವಣೆಯ ಊಹಾಪೋಹಗಳ ನಡುವೆ ಒಂದು ವಿದಾಯ ಉಡುಗೊರೆಯೇ ಅಥವಾ ಅವರ ವಂಶಪರಂಪರೆ ರಾಜಕೀಯ ಭದ್ರಪಡಿಸಿಕೊಳ್ಳುವ ಲೆಕ್ಕಾಚಾರದ ಕ್ರಮವೇ? ಎಂಬ ಪ್ರಶ್ನೆ ಮೂಡಿಸಿದೆ. ಶಂಕುಸ್ಥಾಪನಾ ಸಮಾರಂಭದ ಸಮಯವು ರಾಜಕೀಯವಾಗಿ ಮಹತ್ವದ್ದಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಸಂಭಾವ್ಯ ಬದಲಾವಣೆಯ ಬಗ್ಗೆ ಊಹಾಪೋಹಗಳು ಹರಡಿರುವಾಗ, ಸಿದ್ದರಾಮಯ್ಯ ಅವರು ದಶಕಗಳಿಂದ ಪ್ರತಿನಿಧಿಸುವ ಕ್ಷೇತ್ರದಿಂದ ಬಲವಾದ ಸಂದೇಶ ನೀಡಲು ಆಯ್ಕೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಕಾಂಗ್ರೆಸ್ ನಾಯಕರು ಈ ನಡೆಯನ್ನು ಸಾಂಕೇತಿಕ ಮತ್ತು ಕಾರ್ಯತಂತ್ರದ ಭಾಗ ಎನ್ನುತ್ತಿದ್ದಾರೆ. ಆದರೆ ಅವರ ಆಪ್ತರು ಇದನ್ನು ಬೇರೆಯದ್ದೇ ರೀತಿಯಲ್ಲಿ…
Subscribe to Updates
Get the latest creative news from FooBar about art, design and business.