Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಬೆಳಗಾವಿ: ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರು ಕಚೇರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ. ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿರುವ ವಿಡಿಯೋ ಈಗ ವೈರಲ್ ಆಗಿದ್ದು, ಇದು 1 ವರ್ಷದ ಹಿಂದೆ ಸೆರೆಯಾಗಿದ್ದ ವಿಡಿಯೋ ಎನ್ನಲಾಗಿದೆ. ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ವಿಡಿಯೋ ಬಗ್ಗೆ ನನಗೆ ಬೆಳಗ್ಗೆಯಷ್ಟೇ ಗೊತ್ತಾಗಿದೆ. ಎಷ್ಟೇ ದೊಡ್ಡವರಾದ್ರು ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದೇನೆ ಎಂದರು.
Updated By: Priyalachhi ಮೈಸೂರು: ರಾಜ್ಯ ಬಜೆಟ್ ಮಂಡಿಸುವ ಮೊದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ತವರು ಕ್ಷೇತ್ರ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಬಜೆಟ್ ಪೂರ್ವ ಉಡುಗೊರೆಯನ್ನು ನೀಡಿದ್ದು, ರಾಜ್ಯಾದ್ಯಂತ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ವರುಣಾ ಕ್ಷೇತ್ರಕ್ಕೆ ಮತ್ತೊಮ್ಮೆ 320 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಮಾಡುವ ಮೂಲಕ ಸಿದ್ದರಾಮಯ್ಯ ರಾಜ್ಯ ರಾಜಕೀಯದಲ್ಲಿ ಬಿಸಿಬಿಸಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದು ನಾಯಕತ್ವ ಬದಲಾವಣೆಯ ಊಹಾಪೋಹಗಳ ನಡುವೆ ಒಂದು ವಿದಾಯ ಉಡುಗೊರೆಯೇ ಅಥವಾ ಅವರ ವಂಶಪರಂಪರೆ ರಾಜಕೀಯ ಭದ್ರಪಡಿಸಿಕೊಳ್ಳುವ ಲೆಕ್ಕಾಚಾರದ ಕ್ರಮವೇ? ಎಂಬ ಪ್ರಶ್ನೆ ಮೂಡಿಸಿದೆ. ಶಂಕುಸ್ಥಾಪನಾ ಸಮಾರಂಭದ ಸಮಯವು ರಾಜಕೀಯವಾಗಿ ಮಹತ್ವದ್ದಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಸಂಭಾವ್ಯ ಬದಲಾವಣೆಯ ಬಗ್ಗೆ ಊಹಾಪೋಹಗಳು ಹರಡಿರುವಾಗ, ಸಿದ್ದರಾಮಯ್ಯ ಅವರು ದಶಕಗಳಿಂದ ಪ್ರತಿನಿಧಿಸುವ ಕ್ಷೇತ್ರದಿಂದ ಬಲವಾದ ಸಂದೇಶ ನೀಡಲು ಆಯ್ಕೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಕಾಂಗ್ರೆಸ್ ನಾಯಕರು ಈ ನಡೆಯನ್ನು ಸಾಂಕೇತಿಕ ಮತ್ತು ಕಾರ್ಯತಂತ್ರದ ಭಾಗ ಎನ್ನುತ್ತಿದ್ದಾರೆ. ಆದರೆ ಅವರ ಆಪ್ತರು ಇದನ್ನು ಬೇರೆಯದ್ದೇ ರೀತಿಯಲ್ಲಿ…
Updated By: Priyalachhi ಬಳ್ಳಾರಿ: ಪೋಕ್ಸೊ ಸಂತ್ರಸ್ತೆ ಹೆಸರು ಮತ್ತು ವಿಳಾಸ ಬಹಿರಂಗಪಡಿಸಿದ್ದ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಭಾಷಣದ ವೇಳೆ ಸಂವೇದನಾ ಶೀಲ ವಿವರ ಉಲ್ಲೇಖಿಸಿ, ಪೋಕ್ಸೋ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ದೂರಿನನ್ವಯ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪೋಕ್ಸೋ ಅಡಿಯಲ್ಲಿ ಕೇಸ್ ದಾಖಲಾಗಿದೆ. ಜ.17ರಂದು ನಡೆದ ಬಿಜೆಪಿಯ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡುವಾಗ ಶ್ರೀರಾಮುಲು ಅವರು ಸಂತ್ರಸ್ತೆಯ ಹೆಸರು ಹಾಗೂ ವಿಳಾಸವನ್ನು ಬಹಿರಂಗಪಡಿಸಿದ್ದರು. ಬಳ್ಳಾರಿ ಗಾಂಜಾ, ಡ್ರಗ್ಸ್ ಹಬ್ ಆಗಿದೆ. ಡ್ರಗ್ ಸೇವಿಸಿಯೇ ಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳುತ್ತಾ, ಪೋಕ್ಸೋ ಕೇಸ್ನ ಸಂತ್ರಸ್ತೆಯ ಹೆಸರು, ವಿಳಾಸ, ತರಗತಿ ಹಾಗೂ ಓದುವ ಶಾಲೆಯ ಹೆಸರನ್ನೂ ಬಗಿರಂಗಪಡಿಸಿದ್ದರು.
Updated By: Priyalachhi ಕಮಲಾಪುರ ಪಟ್ಟಣದಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದ ಕೆಲಸ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಪ್ರಥಮ ದರ್ಜೆ ಸಹಾಯಕ (FDA) ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಕಮಲಾಪುರ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಫ್ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಶಿಕಾಂತ್ ಜಂಜಿರ್ ಬಂಧಿತ ಆರೋಪಿ. ಜಮೀನು ವ್ಯಾಜ್ಯದ ವಿಚಾರವಾಗಿ ಕೆಲಸ ಮಾಡಿಕೊಡಲು ಇವರು ಕೇಶು ರಾಠೋಡ್ ಎಂಬುವವರ ಬಳಿ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಲಂಚ ನೀಡಲು ಇಚ್ಛಿಸದ ಕೇಶು ರಾಠೋಡ್ ಅವರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಇಂದು ಕಚೇರಿಯಲ್ಲೇ ಕೇಶು ಅವರಿಂದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಶಶಿಕಾಂತ್ ಅವರನ್ನು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಅರುಣ್ ಮುರುಗುಂಡಿ ಅವರ ನೇತೃತ್ವದಲ್ಲಿ ಈ ಯಶಸ್ವಿ ದಾಳಿ ನಡೆದಿದೆ. ಆರೋಪಿ ಶಶಿಕಾಂತ್ ಜಂಜಿರ್ ಅವರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಲಂಚದ ಹಣವನ್ನು ಜಪ್ತಿ…
Updated By: Priyalachhi ದೆಹಲಿ/ಬೆಂಗಳೂರು: ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ. ಒಂದೇ ವಾಕ್ಯದಲ್ಲಿ ಹೇಳುವುದಾದರೆ ಸಮಯವೇ ಪ್ರತಿಯೊಂದಕ್ಕೂ ಉತ್ತರಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ದೆಹಲಿಯ ಕರ್ನಾಟಕ ಭವನದ ಬಳಿ ಮಾತನಾಡಿದ ಅವರು, ಹೈಕಮಾಂಡ್ ನಾಯಕರನ್ನು ಭೇಟಿ ಬಗ್ಗೆ ಪ್ರತಿಕ್ರಿಯಿಸುತ್ತಾ, ನಾನು ಅದನ್ನು ಏಕೆ ಬಹಿರಂಗಗೊಳಿಸಬೇಕು. ನಾವು ಇಲ್ಲಿಗೆ ಬರುವುದೇ ಸರ್ಕಾರದ ಕೆಲಸಕ್ಕೆ ಪಕ್ಷದ ಕೆಲಸಕ್ಕೆ, ನಮ್ಮ ರಾಜಕೀಯಕ್ಕೆ ಎಂದು ಪ್ರತಿಕ್ರಿಯಿಸಿದರು. ನಾವು ರಾಜಕಾರಣಿಗಳು. ಏನು ರಾಜಕಾರಣ ಮಾಡಬೇಕೋ ಅದನ್ನು ಎಲ್ಲಾ ರಾಜಕಾರಣಿಗಳೂ ಮಾಡುತ್ತಾರೆ. ಇದರಲ್ಲಿ ಏನೂ ತಪ್ಪಿಲ್ಲ. ನಾವುಗಳು ನಮ್ಮ ಅನುಕೂಲಕ್ಕೆ ಯಾರನ್ನು ಭೇಟಿ ಮಾಡುಬೇಕೋ ಅವರನ್ನು ಕೇಳಿರುತ್ತೇವೆ, ಭೇಟಿ ಮಾಡುತ್ತೇವೆ. ನೀವು ಏಕೆ ಇದನ್ನು ದೊಡ್ಡದು ಮಾಡುತ್ತೀರಿ? ಎಂದು ಡಿಸಿಎಂ ಪ್ರಶ್ನಿಸಿದರು. ನರೇಗಾ ವಿಚಾರವಾಗಿ ನಡೆದ ಸಭೆಯ ಬಗ್ಗೆ ಕೇಳಿದಾಗ, ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಪ್ರತಿ ಕ್ಷೇತ್ರದಲ್ಲಿಯೂ ಐದು ಕಿ.ಮೀ. ಪಾದಯಾತ್ರೆ ನಡೆಸಲಾಗುವುದು. ಪಂಚಾಯತ್ ಮಟ್ಟದಲ್ಲಿ ರೆಸಲ್ಯೂಷನ್ ಹೊರಡಿಸಲಾಗುವುದು. ಸಭೆ ನಡೆಸಲಾಗುವುದು ಎಂದು ತಿಳಿಸಿದರು.
Updated By: Priyalachhi Bigg Boss Kannada Winner: ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12ರ ವಿಜೇತರಾಗಿ ಹಾಸ್ಯ ನಟ ಗಿಲ್ಲಿ ನಟರಾಜ ಹೊರಹೊಮ್ಮಿದ್ದಾರೆ. ರಕ್ಷಿತಾ ಶೆಟ್ಟಿ ಮೊದಲ ರನ್ನರ್ ಅಪ್ ಆದರು. ಭಾನುವಾರ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಕಾರ್ಯಕ್ರಮ ನಿರೂಪಕ ಕಿಚ್ಚ ಸುದೀಪ ಅವರು ವಿಜೇತರ ಹೆಸರು ಘೋಷಿಸಿದರು. 37 ಕೋಟಿಗೂ ಅಧಿಕ ವೋಟ್ ಪಡೆದ ಗಿಲ್ಲಿ ಅವರು ಬಿಗ್ ಬಾಸ್ ಟ್ರೋಫಿ ಜತೆಗೆ 50 ಲಕ್ಷ ರೂ ನಗದು ಬಹುಮಾನ ಹಾಗೂ ಮಾರುತಿ ಸುಜುಕಿ ಎಸ್ ಯುವಿ ವಿಕ್ಟೋರಿಯಸ್ ಕಾರನ್ನು ತಮ್ಮದಾಗಿಸಿಕೊಂಡರು. 111 ದಿನಗಳ ಆಟದಲ್ಲಿ ಬಿಗ್ ಬಾಸ್ ಮನೆಗೆ 24 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಆದರೆ ಕೊನೆಯದಾಗಿ 6 ಮಂದಿ ಫೈನಲ್ಗೆ ಬಂದಿದ್ದರು. ಗಿಲ್ಲಿ ನಟ, ಕಾವ್ಯ, ರಕ್ಷಿತಾ, ರಘು, ಅಶ್ವಿನಿ ಗೌಡ ಮತ್ತು ಧನುಶ್ ಅವರು ಟಾಪ್ 6 ಕಂಟೆಸ್ಟಂಟ್ಗಳಾಗಿದ್ದರು. ಇವರಲ್ಲಿ ಯಾರಿಗೆ ಬಿಗ್ ಬಾಸ್ ಕಿರೀಟ್ ಸಿಗಲಿಗೆ ಎಂಬ…
Updated By: Priyalachhi ಇಂದಿನ ಪಂಚಾಂಗ ದಿನಾಂಕ : 19-01-2026 ವಾರ : ಸೋಮವಾರ ಸಂವತ್ಸರ : ವಿಶ್ವವಸು ಆಯನ : ಉತ್ತರಾಯಣ ತಿಥಿ : ಪ್ರತಿಪದಾ ಮಾಸ : ಮಾಘಾ ನಕ್ಷತ್ರ : ಉತ್ತರಾಷಾಢ ಸೂರ್ಯೋದಯ : ಮುಂಜಾನೆ 6:45 ಅಮೃತ ಕಾಲ : ಮಧ್ಯಾಹ್ನ 01:54 ರಿಂದ 03:20ರ ವರೆಗೆ ದುರ್ಮೂಹೂರ್ತ : ಮಧ್ಯಾಹ್ನ 01:09 ರಿಂದ 01:57 ಮತ್ತು 03:33 ರಿಂದ 16:21ರ ವರೆಗೆ ರಾಹುಕಾಲ : ಮುಂಜಾನೆ 08:11 ರಿಂದ 09:37ರ ವರೆಗೆ ಸೂರ್ಯಾಸ್ತ : ಸಂಜೆ 06:11ಕ್ಕೆ ರಾಶಿ ಭವಿಷ್ಯ ಮೇಷ: ಕೆಲವೊಮ್ಮೆ ನೀವು ಒತ್ತಡದಲ್ಲಿರುವುದು ಒಳ್ಳೆಯದು ಏಕೆಂದರೆ ಇದು ನಿಮ್ಮ ಸಾಮರ್ಥ್ಯವನ್ನು ಪೂರ್ಣವಾಗಿ ಹೊರತರುತ್ತದೆ. ನಿಮ್ಮ ಕೆಲಸದಲ್ಲಿ ಎಲ್ಲ ನಿಮ್ಮ ಸಹೋದ್ಯೋಗಿಗಳನ್ನೂ ಮೀರುತ್ತೀರಿ. ಆದರೆ, ಫಲಿತಾಂಶಗಳು ನಿಮ್ಮ ನಿರೀಕ್ಷೆಗಳಿಗೆ ಹೊಂದಿಕೊಳ್ಳುವುದಿಲ್ಲ. ಫಲಿತಾಂಶಗಳು ತಡವಾಗುವುದರಿಂದ ನೀವು ತಾಳ್ಮೆಯಿಂದ ಇರಬೇಕು. ವೃಷಭ: ನಿಮ್ಮದೇ ಸಾಧನೆಗಳನ್ನು ಯೋಜಿಸುವುದು ಮತ್ತು ಮಿತ್ರರ ಯಶಸ್ಸಿಗೆ ಕೊಡುಗೆ ನೀಡುವುದು ಇಂದಿನ ಕಾರ್ಯಸೂಚಿ. ವ್ಯಾಪಾರ ಅಥವಾ ಕೆಲಸದಲ್ಲಿ ನಿಮ್ಮ ಆಲೋಚನೆಗಳು ಚಲನಶೀಲವಾಗಿರುತ್ತವೆ ಮತ್ತು ಯಾವುದೇ ಯೋಜನೆಗಳು ನಿಮ್ಮ ಭವಿಷ್ಯಕ್ಕೆ ಸದೃಢ ತಳಹದಿ…
Updated By: Priyalachhi ಮೈಸೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ಈಗ ನಮ್ಮನ್ನು ಪ್ರಶ್ನಿಸಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು, ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಸಿಬಿಐಗೆ ಕೊಟ್ಟಿದ್ದರೆ ನಮ್ಮನ್ನು ಕೇಳಬಹುದು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದರು. ಬಳ್ಳಾರಿ ಪ್ರಕರಣ ಸಂಬಂಧ ಬಿಜೆಪಿ ಜನಾಂದೋಲನ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ವಿರೋಧ ಪಕ್ಷದಲ್ಲಿರುವಾಗ ಯಾವ ಆಂದೋಲನ, ಪ್ರತಿಭಟನೆಗಳನ್ನು ಮಾಡುತ್ತಾರೆ ಎನ್ನುವುದು ಅವರ ಪಕ್ಷಕ್ಕೆ ಸೇರಿದ ವಿಚಾರ ಎಂದರು. ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ: ಲೋಕಸಭಾ ಚುನಾವಣೆ ಪ್ರಚಾರಕ್ಕೆ ಬಂದಾಗ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ ದೇವಸ್ಥಾನದ ಬಳಿ ಸಭೆ ನಡೆಸಿದೆವು. ಇವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ಸರ್ವಾಧಿಕಾರದಲ್ಲಿ ನಂಬಿಕೆ ಇದೆ ಎನ್ನಲು ಇದೊಂದು ಉದಾಹರಣೆ ಸಾಕು ಎಂದರು. ಸಂಸದೀಯ ವ್ಯವಸ್ಥೆಯಲ್ಲಿ…
Updated By: Priyalachhi ಬೆಂಗಳೂರು: ಸಿದ್ದರಾಮಯ್ಯನವರ ನಿದ್ದೆ ಸರ್ಕಾರ ಇದು. ಭ್ರಷ್ಟಾಚಾರದ ಹೊಳೆಯಲ್ಲಿ ಮಿಂದು ಮೇಯುತ್ತಿದೆ. ಅಬಕಾರಿ ಸಚಿವ ತಿಮ್ಮಾಪುರ ಅವರನ್ನು ವಜಾ ಮಾಡದಿದ್ದರೆ, ಸಿಎಂಗೆ 85% ಕಮಿಷನ್ ಹೋಗುತ್ತಿದೆ ಅಂತರ್ಥ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಛಲವಾದಿ ನಾರಾಯಣಸ್ವಾಮಿ ಜೊತೆ ಜಂಟಿ ಮಾಧ್ಯಮಗೋಷ್ಟಿ ನಡೆಸಿದ ಅವರು, ಅಬಕಾರಿ ಇಲಾಖೆಗೆ ವರ್ಷದಿಂದ ವರ್ಷಕ್ಕೆ ಕಲೆಕ್ಷನ್ ಟಾರ್ಗೆಟ್ ಕೊಡುತ್ತಿದ್ದರು. ಅದರ ಪರಿಣಾಮ ಸನ್ನದುಗಳು ಅಬಕಾರಿ ಇಲಾಖೆಯಲ್ಲಿ ಹರಾಜು ಆಗುತ್ತಿದೆ. ನಿನ್ನೆ ಲೋಕಾಯುಕ್ತ ಅಧಿಕಾರಿಗಳು ದೊಡ್ಡ ತಿಮಿಂಗಿಲ ಬಂಧಿಸಿದ್ದಾರೆ. ಒಂದೇ ಒಂದು ಸನ್ನದಿಗೆ 2.30 ಕೋಟಿ ರೂ. ಕೇಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅಬಕಾರಿ ಇಲಾಖೆಯು ಆರ್ಥಿಕ ಇಲಾಖೆಯಡಿ ಬರುತ್ತದೆ. ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸಿದ್ದರಾಮಯ್ಯ ನೇರ ಕಾರಣ ಎಂದು ಆರೋಪಿಸಿದರು. ”ನಕಲಿ ಗಾಂಧಿಗಳು ಇವರು, ಗಾಂಧಿ ಹೆಸರು ಹೇಳಲು ನೈತಿಕತೆ ಇಲ್ಲ. ಗಾಂಧಿಯವರ ಬಗ್ಗೆ ಮಾತಾಡ್ತಾರೆ? ಎಲ್ಲಿದೆ ಆದರ್ಶ? ಜನರನ್ನು ಕುಡಿಸಿ ಕುಡಿಸಿ ಹಾಳು ಮಾಡುತ್ತಿದ್ದಾರೆ.…
Updated By: Priyalachhi ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಇಂದು ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಅವರು ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಮಾಡಿದೆ. ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಬದಲಿಗೆ ಅರ್ಶ್ದೀಪ್ ಸಿಂಗ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ನ್ಯೂಜಿಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಟೀಮ್ ಇಂಡಿಯಾ ನಾಯಕ ಗಿಲ್ ಇಂದಿನ ಪಂದ್ಯ ಗೆದ್ದು ಚೊಚ್ಚಲ ಸರಣಿ ವಶಪಡಿಸಿಕೊಳ್ಳುವ ಗುರಿ ಹೊಂದಿದ್ದಾರೆ. ಮತ್ತೊಂದೆಡೆ ನ್ಯೂಜಿಲೆಂಡ್, ಭಾರತದಲ್ಲಿ ತಮ್ಮ ಮೊದಲ ಏಕದಿನ ಸರಣಿ ಗೆಲ್ಲುವ ಸುವರ್ಣಾವಕಾಶ ಹೊಂದಿದೆ. ನ್ಯೂಜಿಲೆಂಡ್ ಇಲ್ಲಿಯವರೆಗೆ ಭಾರತದಲ್ಲಿ ಏಳು ಏಕದಿನ ಸರಣಿಗಳನ್ನು ಆಡಿದ್ದು, ಏಳನ್ನೂ ಸೋತಿದೆ. ಪ್ರಸ್ತುತ ಸರಣಿ ಬಗ್ಗೆ ನೋಡುವುದಾದರೆ, ವಡೋದರಾದಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 300 ರನ್ಗಳ ಬೃಹತ್ ಗುರಿ ಬೆನ್ನಟ್ಟಿ 4 ವಿಕೆಟ್ಗಳಿಂದ ಗೆದ್ದಿತ್ತು. ರಾಜ್ಕೋಟ್ನಲ್ಲಿ ನಡೆದ…
Subscribe to Updates
Get the latest creative news from FooBar about art, design and business.